Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ವಿದ್ಯುತ್ ಮತ್ತು ಅಡುಗೆ ಅನಿಲದಂತಹ ಬಿಲ್ ಪಾವತಿಗಳಿಗೆ ಗೂಗಲ್ ಪೇ ( Google Pay ) ಸೇವಾ ಶುಲ್ಕವನ್ನು ಪರಿಚಯಿಸಿದೆ. ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಮೂಲಕ ಪಾವತಿಸುವ ಬಳಕೆದಾರರಿಗೆ ಶುಲ್ಕಗಳು ಅನ್ವಯವಾಗುತ್ತವೆ. ಜಿಎಸ್ಟಿ ಜೊತೆಗೆ ವಹಿವಾಟಿನ ಮೌಲ್ಯದ 0.5% ರಿಂದ 1% ವರೆಗೆ ಶುಲ್ಕವಿದೆ. ಈ ಮೂಲಕ ಗೂಗಲ್ ಪೇ ಬಳಕೆದಾರರಿಗೆ ಬಿಗ್ ಶಾಕ್ ನೀಡಲಾಗಿದೆ. ಗೂಗಲ್ ಪೇ ಶುಲ್ಕ ವಿಧಿಸುವುದಾಗಿ ಘೋಷಿಸಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಮೊಬೈಲ್ ರೀಚಾರ್ಜ್ಗಳಿಗೆ 3 ರೂ.ಗಳ ಅನುಕೂಲಕರ ಶುಲ್ಕವನ್ನು ವಿಧಿಸಿತು. ಇತ್ತೀಚಿನ ಕ್ರಮವು ಯುಪಿ ಆಧಾರಿತ ವಹಿವಾಟುಗಳನ್ನು ಹಣಗಳಿಸುವತ್ತ ವಿಶಾಲ ಬದಲಾವಣೆಯನ್ನು ಸೂಚಿಸುತ್ತದೆ. ಏಕೆಂದರೆ ಫಿನ್ಟೆಕ್ ಕಂಪನಿಗಳು ಸುಸ್ಥಿರ ಆದಾಯ ಉತ್ಪಾದನೆಯೊಂದಿಗೆ ಬೆಳವಣಿಗೆಯನ್ನು ಸಮತೋಲನಗೊಳಿಸುವ ಗುರಿಯನ್ನು ಹೊಂದಿರುವುದರಿಂದ ಸಂಸ್ಕರಣಾ ವೆಚ್ಚಗಳನ್ನು ಸರಿದೂಗಿಸುವ ಮಾರ್ಗಗಳನ್ನು ಅನ್ವೇಷಿಸುತ್ತಿವೆ. ಅಂತೆಯೇ, ನೀರು, ವಿದ್ಯುತ್ ಮತ್ತು ಕೊಳವೆ ಅನಿಲ ಸೇರಿದಂತೆ ಬಿಲ್ಗಳಿಗೆ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ಗಳ ಮೂಲಕ ಮಾಡಿದ ಪಾವತಿಗಳಿಗೆ ಫೋನ್ಪೇ ಅನುಕೂಲಕರ ಶುಲ್ಕವನ್ನು…
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ಡ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವಂತ ಸರ್ಕಾರಿ ನೌಕರರ ಎನ್ ಪಿ ಎಸ್ ಪ್ರಾನ್ ಖಾತೆಯಲ್ಲಿನ ಮೊತ್ತವನ್ನು ಹಿಂಪಡೆಯುವ ಕೂರಿತಂತೆ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ದಿನಾಂಕ: 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದೆ. ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ ಎಂದಿದೆ. ಓದಲಾದ ಕ್ರಮ ಸಂಖ್ಯೆ (3)ರ ಸರ್ಕಾರಿ ಆದೇಶದನ್ವಯ ದಿನಾಂಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಒಂದು ಬಾರಿಯ ಕ್ರಮವಾಗಿ ಡಿಫೈನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು…
GOOD NEWS: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ‘NHM ನೌಕರ’ರಿಗೆ ‘ಸಾಮಾಜಿಕ ಭದ್ರತಾ ವಿಮಾ ಯೋಜನೆ’ ಜಾರಿಗೊಳಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವಂತ ಎನ್ ಹೆಚ್ ಎಂ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಎನ್ ಹೆಚ್ ಎಂ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಾಮಾಜಿಕ ಭದ್ರತಾ ವಿಮಾ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ತನ್ನ ನೇರ ಗುತ್ತಿಗೆ ಮೂಲಕ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ಕ್ಷೇಮಾಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ವೈಯಕ್ತಿಕ ಅಪಘಾತ ವಿಮೆ ಮತ್ತು ಟರ್ಮ್ ಇನ್ನೂರೆನ್ಸ್ ಸೇವೆಗಳನ್ನು ಪರಿಚಯಿಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. ಈ ಪರಿಕಲ್ಪನೆ ಎನ್ಎಚ್ಎಮ್ ಮತ್ತು ಆಕ್ಸಿಸ್ ಬ್ಯಾಂಕ್ ನಡುವೆ ಕೈಗೊಳ್ಳಲಾದ ಒಡಂಬಡಿಕೆ ಪತ್ರದ (MoU) ಮೂಲಕ ಸಾಧ್ಯವಾಗಿದೆ ಎಂದಿದೆ. 2005 ರಿಂದ, ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಸಾರ್ವಜನಿಕ ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲು ಮತ್ತು ಕರ್ನಾಟಕದಾದ್ಯಂತ ಅನಿವಾರ್ಯ ಆರೋಗ್ಯ ಸೇವೆಗಳನ್ನು ಒದಗಿಸಲು ಪ್ರಮುಖ…
ಬೆಂಗಳೂರು: ನಗರದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು ಪರೀಕ್ಷಾ ಕೇಂದ್ರಕ್ಕೆ, ತಮ್ಮ ವಾಸಸ್ಥಳದಿಂದ ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ. 2024-25ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ದಿನಾಂಕ 01.03.2025 ರಿಂದ 20.03.2025 ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ-1 ದಿನಾಂಕ 21.03.2025 ರಿಂದ 04.04.2025 ರವರೆಗೆ ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡಂತೆ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ ಎಂದು ತಿಳಿಸಿದೆ. ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 01.03.2025 ರಿಂದ 20.03.2025 ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 21.03.2025…
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಫಲಾನುಭವಿಗಳಿಗೆ ನೀಡುತ್ತಿರುವ ನೇರ ನಗಗದು ವರ್ಗಾವಣೆ ಯೋಜನೆಯಡಿ ನೀಡುತ್ತಿರುವ ಹಣದ ಬದಲಾಗಿ 5 ಕೆಜಿ ಅಕ್ಕಿಯನ್ನು ಇನ್ಮುಂದೆ ವಿತರಿಸುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಬಗ್ಗೆ ಆಹಾರ, ನಾಗರರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ, ಆಹಾರ ಧಾನದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05 ಕೆ.ಜಿ, ಆಹಾರ ಧಾನ್ಯವನ್ನು ಸೇರಿಸಿ, ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ, ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿರುತ್ತದೆ ಎಂದಿದ್ದಾರೆ. ಅಕ್ಕಿಯ ಅಲಭ್ಯತೆಯಿಂದಾಗಿ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 05 ಕೆ.ಜಿ, ಆಹಾರ ಧಾನ್ಯದ ಬದಲಾಗಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದಂತ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಒಂದು ಬಾರಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಶೀಘ್ರವೇ ಮಾರ್ಗಸೂಚಿ ಪ್ರಕಟಿಸುವುದಾಗಿ ಸರ್ಕಾರ ತಿಳಿಸಿದೆ. ಈ ಸಂಬಂಧ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೀಡಲಾಗಿದೆ. ಎನ್ಎಚ್ಎಂ ನೇರ ಗುತ್ತಿಗೆ ಸಿಬ್ಬಂದಿಗಳು ಸಾಮಾನ್ಯವಾಗಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗುತ್ತಿದ್ದು, ಅವರು ತಮ್ಮ ಸಂಪೂರ್ಣ ಕರ್ತವ್ಯದ ಅವಧಿಯುದ್ದಕ್ಕೂ ಆಯಾ ಜಿಲ್ಲೆಯಲ್ಲಿಯೇ ಕೆಲಸ ಮಾಡಬೇಕಾಗಿರುತ್ತದೆ. ಸದರಿ ಸಿಬ್ಬಂದಿಗಳ ಬಹುದಿನದ ಬೇಡಿಕೆಗೆ ಸ್ಪಂದಿಸಿ, ರಾಜ್ಯ ಸರ್ಕಾರವು ಸೇವಾ ಅವಧಿಯಲ್ಲಿ ಒಂದು ಬಾರಿ ಅಂತರ್ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸುವ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ಅತಿ ಶೀಘ್ರದಲ್ಲಿ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಅಂತ ತಿಳಿಸಿದೆ. https://kannadanewsnow.com/kannada/good-news-for-nhm-employees-of-state-health-department-social-security-insurance-scheme-launched/
ಬೆಂಗಳೂರು: ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಠಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಹುಲಿಗೆವ್ವ ಹೆಚ್ ಕುಕನೂರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಮುತ್ತಣ್ಣ ಸಿ.ಎ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಯೋಜನಾ ವ್ಯಾಪ್ತಿಯ ಹಳೇ ಹುಬ್ಬಳಿ ವಲಯದ ಸಮೀಪವಿರುವ ಗಬ್ಬೂರು ಕ್ರಾಸ್ ಬಳಿ ಇರುವ ಆಹಾರ ಗೋದಾಮಿನಲ್ಲಿ ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಠಿಕ ಸಾಮಗ್ರಿಗಳಾದ ತೊಗರಿ ಬೇಳೆ, ಹೆಸರು ಕಾಳು, ಬೆಲ್ಲ, ಸಕ್ಕರೆ, ಗೋಧಿಹಿಟ್ಟನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಧಾರವಾಡ ಜಿಲ್ಲೆಯ ಉಪ ನಿರ್ದೇಶಕರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಪೌಷ್ಠಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ…
ಶಿವಮೊಗ್ಗ: ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್ ಅವರನ್ನು ಸಾಗರ ವಿಧಾನಸಭಾ ಕ್ಷೇತ್ರದ ಎನ್ ಎಸ್ ಯು ಐ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿರುವುದಜಾಗಿ ತಿಳಿಸಿದ್ದಾರೆ. ಈ ಜವಾಬ್ದಾರಿಯನ್ನು ತಾವು ವಹಿಸಿಕೊಂಡು, ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಸ್ಥಳೀಯ ನಾಯಕರೊಡನೆ ಸೇರಿಕೊಂಡು, ಪಕ್ಷ ಸಂಘಟನೆಯನ್ನು ಮಾಡುತ್ತಾ, ಪಕ್ಷವನ್ನು ಬಲ ಪಡಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಶ್ರಮಿಸುವಂತೆ ಕೋರಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/shivamogga-power-outages-in-these-areas-of-sagar-taluk-tomorrow-2/ https://kannadanewsnow.com/kannada/breaking-news-state-govt-decides-to-give-rice-instead-of-annabhagya-rice/
ಶಿವಮೊಗ್ಗ: ದಿನಾಂಕ: 20.02.2025 ರ ಗುರುವಾರದ ನಾಳೆ 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸನಗರ ಮಾರ್ಗಕ್ಕೆ 20 ಎಂ.ವಿ.ಎ ಶಕ್ತಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ನಾಳೆ ಬೆಳಿಗ್ಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ ಸಾಗರ ತಾಲ್ಲೂಕು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ದಿನಾಂಕ 20.02.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-17 ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು, ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ. ಮಾಲ್ವೆ, ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು,…
ನವದೆಹಲಿ: ದೆಹಲಿ ಬಿಜೆಪಿ ಶಾಸಕರು ರೇಖಾ ಗುಪ್ತಾ ಅವರನ್ನು ಶಾಸಕಾಂಗ ಪಕ್ಷದ ನಾಯಕಿ ಮತ್ತು ಕೇಂದ್ರಾಡಳಿತ ಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ. ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಈ ಇಬ್ಬರು ನಾಳೆ ಬೆಳಿಗ್ಗೆ 11 ಗಂಟೆಗೆ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿ ಬಿಜೆಪಿ ಶಾಸಕರಾದ ವಿಜೇಂದರ್ ಗುಪ್ತಾ ಮತ್ತು ಸತೀಶ್ ಉಪಾಧ್ಯಾಯ ಅವರು ಗುಪ್ತಾ ಅವರ ಹೆಸರನ್ನು ಪ್ರಸ್ತಾಪಿಸಿದರು. ರೇಖಾ ಗುಪ್ತಾ ಮಾಜಿ ಕೌನ್ಸಿಲರ್ ಮತ್ತು ಉಪ ಮೇಯರ್ ಆಗಿದ್ದು, ಶಾಲಿಮಾರ್ ಬಾಗ್ ವಿಧಾನಸಭಾ ಸ್ಥಾನದಿಂದ ಎಎಪಿಯ ಬಂದನಾ ಕುಮಾರಿ ಅವರನ್ನು ಸೋಲಿಸಿ ವಿಜಯಶಾಲಿಯಾಗಿ ಹೊರಹೊಮ್ಮಿದರು. ಪರ್ವೇಶ್ ವರ್ಮಾ ಅವರು ನವದೆಹಲಿ ಕ್ಷೇತ್ರದಿಂದ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದಾರೆ. ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಮತ್ತು ಅತಿಶಿ ನಂತರ ರೇಖಾ ಗುಪ್ತಾ ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಮತ್ತು ಆರು…