Author: kannadanewsnow09

ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ 6 ತಿಂಗಳಲ್ಲಿ ಮಾದಕ ದ್ರವ್ಯ ಮುಕ್ತ ಮಾಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು ಕಳೆದ ಏಳು ತಿಂಗಳಲ್ಲಿ 9,645 ಕೆಜಿ ಗಾಂಜಾ ಮತ್ತು 233 ಕೆಜಿ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಇದರ ಒಟ್ಟು ಮೌಲ್ಯ 142 ಕೋಟಿಯಾಗಿದೆ ಎಂದಿದ್ದಾರೆ. ಮಾದಕ ದ್ರವ್ಯ ಮುಕ್ತ ರಾಜ್ಯವಾಗಿಸುವ ದಿಸೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನೂ ಆರು ತಿಂಗಳಲ್ಲಿ ಕರ್ನಾಟಕವು ಮಾದಕ ದ್ರವ್ಯ ಮುಕ್ತ ರಾಜ್ಯವಾಗಲಿದೆ ಎಂದು ಹೇಳಿದ್ದಾರೆ. ಒಟ್ಟಾರೆಯಾಗಿ ಕಳೆದ ಏಳು ತಿಂಗಳಲ್ಲಿ 9,645 ಕೆ.ಜಿ ಗಾಂಜಾ ಮತ್ತು 233 ಕೆ.ಜಿ ಸಿಂಥೆಟಿಕ್‌ ಡ್ರಗ್ಸ್‌ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಇದರ ಒಟ್ಟು ಮೌಲ್ಯ ₹142 ಕೋಟಿ. ಮಾದಕ ದ್ರವ್ಯ ಮುಕ್ತ ರಾಜ್ಯವಾಗಿಸುವ ದಿಸೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನು ಆರು ತಿಂಗಳಲ್ಲಿ ಕರ್ನಾಟಕವು ಮಾದಕ ದ್ರವ್ಯ ಮುಕ್ತ ರಾಜ್ಯವಾಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಭರವಸೆ ನೀಡಿದ್ದಾರೆ. https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/

Read More

ಮಂಡ್ಯ: ಜಿಲ್ಲೆಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದಂತ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ, ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಸ್ವಿಪ್ಟ್ ಕಾರಿಗೆ ವರ್ಣಾ ಕಾರು ಡಿಕ್ಕಿಯಾಗಿದೆ. ಕಾರು ಕಾರುಗಳ ನಡುವಿನ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/list-of-candidates-for-rajya-sabha-elections-from-karnataka-announced/ https://kannadanewsnow.com/kannada/upsc-recruitment-2019-heres-the-direct-link-to-apply-for-1056-vacancies/

Read More

ಬೆಂಗಳೂರು : “ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಚುನಾವಣೆ ಸಮಿತಿ ಸಭೆ ನಂತರ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು “ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶೆ ಮಾಡಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆ ಮೂಲಕ ಅಭಿಪ್ರಾಯ ಸಂಗ್ರಹಕ್ಕೆ ಸೂಚಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ, ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲೇ ಸಭೆ ಮಾಡಲಾಗಿದೆ ಎಂದರು. ಈ ತಿಂಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆಯೇ ಎಂದು ಕೇಳಿದಾಗ, “ಆದಷ್ಟು ಬೇಗ ಅಂತಿಮಗೊಳಿಸಬೇಕು. ಶೇ. 50 ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ನಾವು ಸೂಚನೆ ನೀಡಬೇಕಿದೆ” ಎಂದರು. ಎಷ್ಟು ಕ್ಷೇತ್ರಗಳಲ್ಲಿ ಓರ್ವ ಆಕಾಂಕ್ಷಿಗಳಿದ್ದಾರೆ ಎಂದು ಕೇಳಿದಾಗ, “ನಾವು ಇನ್ನು…

Read More

ಬೆಂಗಳೂರು : “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಕುಡಿಯುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಈ ಬಜೆಟ್ ಅಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳಿಗೆ ನೀರನ್ನು ಒದಗಿಸಲು ರೂ.900 ಕೋಟಿ ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ ಎಂದರು. ಲೋಕಸಭಾ ಚುನಾವಣೆ ವಿಚಾರವಾಗಿ ಕೇಳಿದಾಗ “ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗುತ್ತೇವೆ. ಈ ವಿಚಾರವಾಗಿ ನಾನು ಮತ್ತು ಮುಖ್ಯಮಂತ್ರಿಗಳು ಒಂದು ಸುತ್ತಿನ ಮಾತುಕಥೆ ನಡೆಸಿದ್ದೇವೆ. ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಸಭೆ ಮಾಡುತ್ತೇವೆ, ನಂತರ ಸ್ಕ್ರೀನಿಂಗ್ ಸಮಿತಿ ಸದಸ್ಯರು…

Read More

ನವದೆಹಲಿ: ಕರ್ನಾಟಕದ ಮೂರು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಜಿಸಿ ಚಂದ್ರಶೇಖರ್ ಸೇರಿದಂತೆ ಮೂವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪಟ್ಟಿಯನ್ನು ಪ್ರಕಟಿಸಿದ್ದು, ಎಐಸಿಸಿ ಅಧ್ಯಕ್ಷರಾದಂತ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ಮುಂಬರುವಂತ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ ಕರ್ನಾಟಕದ ಕೈ ಅಭ್ಯರ್ಥಿಗಳ ರಾಜ್ಯಸಭಾ ಚುನಾವಣೆಯ ಪಟ್ಟಿ ಅಜಯ್ ಮಕೇನ್ ಡಾ.ಸೈಯದ್ ನಾಸೀರ್ ಜಿ.ಸಿ ಚಂದ್ರಶೇಖರ್ ಇನ್ನೂ ಮದ್ಯಪ್ರದೇಶದಿಂದ ಅಶೋಕ್ ಸಿಂಗ್, ತೆಲಂಗಾಣದಿಂದ ರೇಣುಕ ಚೌದರಿ ಹಾಗೂ ಎಂ ಅನಿಲ್ ಕುಮಾರ್ ಯಾದವ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

Read More

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ಜನರಲ್ ಸೆಕ್ರೇಟರಿ ಮಾಹಿತಿ ನೀಡಿದ್ದು, 2024ರ ರಾಜ್ಯ ಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷರು ಈ ಕೆಳಕಂಡ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ ಎಂದಿದ್ದಾರೆ. ಕರ್ನಾಟಕದಿಂದ ಅಜಯ್ ಮಕೇನ್, ಡಾ.ಸೈಯದ್ ನಾಸೀರ್ ಹುಸೇನ್ ಹಾಗೂ ಜಿಸಿ ಚಂದ್ರಶೇಖರ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇನ್ನೂ ಮದ್ಯಪ್ರದೇಶದಿಂದ ಅಶೋಕ್ ಸಿಂಗ್, ತೆಲಂಗಾಣದಿಂದ ರೇಣುಕ ಚೌದರಿ ಹಾಗೂ ಎಂ ಅನಿಲ್ ಕುಮಾರ್ ಯಾದವ್ ಅವರಿಗೆ ಟಿಕೆಟ್ ನೀಡಲಾಗಿದೆ.

Read More

ಬೆಂಗಳೂರು: ರಾಜ್ಯದಲ್ಲಿ ಚಲನಚಿತ್ರಗಳು, ಸೀರಿಯಲ್ ಗಳಲ್ಲಿ ಮಕ್ಕಳು ನಟಿಸುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಇದರೊಟ್ಟಿಗೆ ಅವರ ವಿದ್ಯಾಭ್ಯಾಸವು ಕುಂಠಿತಗೊಳ್ಳುತ್ತಿದೆ. ಈ ಕಾರಣದಿಂದಾಗಿ ಇನ್ಮುಂದೆ ಮಕ್ಕಳು ಸೀರಿಯಲ್, ಸಿನಿಮಾಗಳಲ್ಲಿ ನಟಿಸೋದಕ್ಕೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಮಕ್ಕಳನ್ನು ಧಾರವಾಹಿ, ಚಲನಚಿತ್ರಗಳಲ್ಲಿ ನಟಿಸಲು ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕು. ಮಕ್ಕಳು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದ ನಂತ್ರವೇ ಸಿನಿಮಾ, ಸೀರಿಯಲ್ ಗಳಲ್ಲಿ ನಟಿಸಲು ಅವಕಾಶ ಎಂಬುದಾಗಿ ತಿಳಿಸಿದೆ. ಒಂದು ದಿನದಲ್ಲಿ 5 ಗಂಟೆಗೂ ಹೆಚ್ಚು ಕಾಲ ಮಕ್ಕಳನ್ನು ನಟಿಸೋದಕ್ಕೆ ಬಳಸಿಕೊಳ್ಳಬಾರದು. ತಿಂಗಳಲ್ಲಿ ಕೇವಲ 27 ದಿನಗಳು ಮಾತ್ರವೇ ಮಕ್ಕಳನ್ನು ಶೂಟಿಂಗ್ ನಲ್ಲಿ ಬಳಿಸಿಕೊಳ್ಳಬೇಕು ಎಂಬುದಾಗಿಯೂ ಷರತ್ತು ವಿಧಿಸಿದೆ. ಮಕ್ಕಳ ಶಿಕ್ಷಣದ ದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಬಾಲ ನಟ, ನಟಿಯಾಗಿ ಸೀರಿಯಲ್ ನಲ್ಲಿ ಮಕ್ಕಳು ನಡಿಸೋದಕ್ಕೆ ನಿರ್ಮಾಪಕರು, ಆಯೋಜಕರು, ಆಯಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯಬೇಕು ಎಂಬುದಾಗಿ ತಿಳಿಸಲಾಗಿದೆ. ಒಂದು ವೇಳೆ ಕಾರ್ಮಿಕ…

Read More

ಬೆಂಗಳೂರು: ಕೆಎಸ್ಆರ್ ಟಿಸಿಯಿಂದ ವಿವಿಧ ಕಾರಣಗಳಿಂದ ಮೃತಪಟ್ಟಂತ  16 ನೌಕರರ ಕುಟುಂಬದಲವರಿಗೆ ಮೊದಲ ಬಾರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರವಾಗಿ ತಲಾ 10 ಲಕ್ಷವನ್ನು ನೀಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ತನ್ನ ನೌಕರರ ಅವಲಂಭಿತರಿಗೆ ಅಪಘಾತ ಪರಿಹಾರ ವಿಮೆ ರೂ.1 ಕೋಟಿ ಹಾಗೂ ಇತರೆ ಕಾರಣಗಳಿಂದ‌ ಮೃತಪಟ್ಟ (ಹೃದಯಾಘಾತ/ ಕ್ಯಾನ್ಸರ್ , ಸ್ಟ್ರೋಕ್) 16 ನೌಕರರ ಕುಟುಂಬದವರಿಗೆ ಮೊದಲ ಬಾರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ ರೂ.10 ಲಕ್ಷ ನೀಡಲಾಗಿದೆ ಎಂದಿದೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಸಿಬ್ಬಂದಿಗಳ ಅವಲಂಬಿತರನ್ನು ಭೇಟಿ ಮಾಡಿ, ನಿಗಮವು ಕಳೆದ ಎರಡು ತಿಂಗಳ‌ ಹಿಂದಷ್ಟೇ ಪರಿಹಾರ ಮೊತ್ತವನ್ನು ರೂ.3 ಲಕ್ಷದಿಂದ ರೂ.10 ಲಕ್ಷಗಳಿಗೆ ಏರಿಕೆ ಮಾಡಿದ್ದು, ಇದರಿಂದ‌ ಇಂದು 16 ಕುಟುಂಬಗಳಿಗೆ ಆರ್ಥಿಕವಾಗಿ ಸ್ವಲ್ಪ ಹೆಚ್ಚು ಹಣ ದೊರೆಯುವಂತಾಗಿದ್ದು, ಜೀವಕ್ಕೆ ಬೆಲೆ ಕಟ್ಟುವುದು ಸಾಧ್ಯವಿಲ್ಲ, ಆದರೂ ಪರಿಹಾರ ಮೊತ್ತವನ್ನು ಸದುಪಯೋಗ ಪಡಿಸಿಕೊಂಡು ಸುಸೂತ್ರ ಜೀವನ…

Read More

ಬೆಂಗಳೂರು: ಇಡ್ಲಿಗುರು ಹೆಸರಿನಲ್ಲಿ ಹೋಟೆಲ್ ಶುರು ಮಾಡಿದ್ದಂತ ದಂಪತಿಗಳಿಬ್ಬರು, ಪ್ರಾಂಚೈಲಿಸಿ ಕೊಡುವುದಾಗಿ ಜನರಿಂದ ಹಣ ಪಡೆದು ವಂಚಿಸಿದ್ದರು. ಈ ಹಿನ್ನಲೆಯಲ್ಲಿ ಇಡ್ಲಿಗುರು ಹೋಟೆಲ್ ಮಾಲೀಕರು, ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಬೆಂಗಳೂರಿನ ಹೆಸರಾಂತ ಇಡ್ಲಿಗುರು ಮಾಲೀಕರಾದಂತ ಕಾರ್ತಿಕ್ ಶೆಟ್ಟಿ, ಪತ್ನಿ ಮಂಜುಳಾ, ಕಾರ್ತಿಕ್ ತಂದೆ ಬಾಬು ಹಾಗೂ ಮತ್ತೋರ್ವ ಸಿಬ್ಬಂದಿ ವಿರುದ್ಧ ದೂರು ದಾಖಲಾಗಿತ್ತು. ಕಾಮಾಕ್ಷಿಪಾಳ್ಯದ ನಿವಾಸಿ ಚೇತನ್ ಎಂಬುವರಿಂದ ಹಣಪಡೆದು, ಇಡ್ಲಿಗುರು ಹೋಟೆಲ್ ಪ್ರಾಂಚೈಸಿ ಕೊಡುವುದಾಗಿ ನಂಬಿಸಿ, ಕೊಟ್ಟಿರಲಿಲ್ಲ. ಹೀಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರಿಗೆ ದೂರು ನೀಡಿದ ಬಳಿಕ, ಕಾರ್ತಿಕ್ ಶೆಟ್ಟಿ ಹಾಗೂ ಪತ್ನಿ ಮಂಜುಳಾ ತಲೆಮರೆಸಿಕೊಂಡಿದ್ದರು. ಅವರು ಮುಂಬೈನಲ್ಲಿ ಇರುವ ವಿಷಯ ತಿಳಿದು ಅಲ್ಲಿಗೆ ತೆರಳಿದಂತ ಪೊಲೀಸರು ಅವರನ್ನು ವಶಕ್ಕೆ ಪಡೆದು, ಬೆಂಗಳೂರಿಗೆ ಕರೆತರುತ್ತಿದ್ದಾರೆ. https://kannadanewsnow.com/kannada/breaking-rajya-sabha-elections-jp-nadda-to-contest-from-gujarat-ashok-chavan-to-contest-from-nadda-maharashtra/ https://kannadanewsnow.com/kannada/bjp-releases-list-of-rajya-sabha-candidates-heres-the-list/

Read More

ನವದೆಹಲಿ: ರಾಜ್ಯಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಕ್ರೀಯ ರಾಜಕಾರಣದಿಂದ ದೂರವೇ ಉಳಿದಿದ್ದಂತ ಸೋನಿಯಾ ಗಾಂಧಿ, ಇದೀಗ ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಕಣಕ್ಕೆ ಇಳಿಯಲಿದ್ದಾರೆ. ಈ ಕುರಿತಂತೆ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮುಂಬರುವಂತ ರಾಜ್ಯಸಭಾ ಚುನಾವಣೆ 2024ಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರೋದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಪ್ರಕಟಿಸಿರುವಂತ ಪಟ್ಟಿಯಲ್ಲಿ ರಾಜಸ್ಥಾನದಿಂದ ಸೋನಿಯಾ ಗಾಂಧಿ, ಬಿಹಾರದಿಂದ ಡಾ.ಅಖಿಲೇಶ್ ಪ್ರಸಾದ್ ಸಿಂಗ್, ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನು ಸಿಂಘ್ವಿ ಹಾಗೂ ಮಹಾರಾಷ್ಟ್ರದಿಂದ ಚಂದ್ರಕಾಂತ್ ಹಂದೊರೆ ಕಣಕ್ಕೆ ಇಳಿಯೋದಾಗಿ ತಿಳಿಸಿದೆ. https://twitter.com/INCIndia/status/1757649263822352547

Read More