Author: ವಸಂತ್‌ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಅವರು ಪ್ರಮುಖವಾಗಿ Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾಹಿತ್ಯ, ಸಾಮಾಜಿಕ ವರದಿಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸುವುದರಲ್ಲಿ ಪ್ರಮುಖ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ತಾಜಾ ಸುದ್ದಿಗಳು, ಶಿಕ್ಷಕರ ಪ್ರಶಸ್ತಿಗಳ ಪಟ್ಟಿ, ಮತ್ತು ನ್ಯಾಯಾಂಗ ಸಂಬಂಧಿತ ವರದಿಗಳನ್ನು ನೀಡುತ್ತಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆ ಹಂಚಿಕೆಯ ಅಂತಿಮ ಫಲಿತಾಂಶ ಸೆ.23ರಂದು ಪ್ರಕಟವಾಗಲಿದ್ದು, ಆ ಬಳಿಕ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅಂತಿಮ ಸುತ್ತಿನ‌ ಫಲಿತಾಂಶ ಪ್ರಕಟಣೆ ನಂತರ ಸೆ.26ರೊಳಗೆ ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.28ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಖಿಲ ಭಾರತ ಕೋಟಾ (ಎಂಸಿಸಿ) ಹಾಗೂ ಕೆಇಎ ಎರಡೂ ಕಡೆ ವೈದ್ಯಕೀಯ ಸೀಟು ಹಂಚಿಕೆಯಾದ 774 ಅಭ್ಯರ್ಥಿಗಳ ಪೈಕಿ, ಎಂಸಿಸಿ ಸೀಟು ಉಳಿಸಿಕೊಳ್ಳಲು ಇಚ್ಚಿಸುವ ಅಭ್ಯರ್ಥಿಗಳಿಗೆ ಕೆಇಎ ಸೀಟು ಬಿಟ್ಟು ಹೊರ ಹೋಗಲು ಇಂದು ಇಡೀ ದಿನ ಅವಕಾಶ ನೀಡಲಾಗಿತ್ತು. ಈ ಪ್ರಕ್ರಿಯೆ ನಂತರ ರದ್ಧಾದ ಸೀಟುಗಳನ್ನು ಇದೇ ಸುತ್ತಿಗೆ ತೆಗೆದುಕೊಂಡು ಪುನಃ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕೆಇಎ…

Read More

ಶಿವಮೊಗ್ಗ : ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ತಿಳಿಸಿದರು. ಸೋಮವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸಾಮಾಜಿ, ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯ ಸಮೀಕ್ಷೆ ನಡೆಸುವ ಶಿಕ್ಷಕರಿಗೆ ಗಣತಿ ಕಾರ್ಯ ಕಿಟ್ ಅನ್ನು ವಿತರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ನಮ್ಮ ಪ್ರಣಾಳಿಕೆ ನೀಡಿದ ಭರವಸೆಯಂತೆ ಒಳಮೀಸಲಾತಿ ಜಾರಿಗೆ ತಂದೆವು. ಈಗ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಮಾಡಲು ಮುಂದಾಗಿದ್ದೇವೆ. ಈ ಮೂಲಕ ಮತದಾರರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದೆ ಎಂದರು. ಈಗಾಗಲೇ ಸರ್ಕಾರದ ಆದೇಶದಂತೆ ಸಮೀಕ್ಷೆಗೆ ನನ್ನ ಇಲಾಖೆಯಿಂದ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ 1…

Read More

ಶಿವಮೊಗ್ಗ: ರಾಜ್ಯದ 2ನೇ ಅತಿದೊಡ್ಡ ದಸರಾ ಎಂದೇ ಖ್ಯಾತಿಯಾಗಿರುವಂತ ಶಿವಮೊಗ್ಗ ದಸರಾಕ್ಕೆ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿಎಸ್ ರಾಜು ಅವರು ಚಾಲನೆ ನೀಡಿದರು. ಇಂದು ಶಿವಮೊಗ್ಗ ದಸರಾಕ್ಕೆ ಬೆಳ್ಳಿ ಮಂಟಪದಲ್ಲಿರುವ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಇಂದಿನಿಂದ ಅಕ್ಟೋಬರ್.4ರವರೆಗೆ ಶಿವಮೊಗ್ಗದಲ್ಲಿ ನವರಾತ್ರಿ ಉತ್ಸವ ದೇವಾಲಯದಲ್ಲಿ ಸಂಭ್ರಮದಿಂದ ನಡೆಯಲಿದೆ. ಶಿವಮೊಗ್ಗ ಪಾಲಿಕೆಯಿಂದ 650 ಕೆಜಿ ತೂಕದ ಬೆಳ್ಳಿ ಅಂಬಾರಿಯನ್ನು ಲಾರಿಯ ಮೇಲೆ ಮೆರವಣಿಗೆ ಮಾಡಿ ಕೋಟೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಅಂದಹಾಗೇ ಶಿವಮೊಗ್ಗ ದಸರಾ ಉದ್ಘಾಟಿಸಿದಂತ ಬಿಎಸ್ ರಾಜು ಅವರು, ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ, ರಾಷ್ಟ್ರಪತಿಗಳಿಂದ ಪ್ರಶಸ್ತಿಯನ್ನು ಪಡೆದಿದ್ದಂತ ನಿವೃತ್ತ ಯೋಧರಾಗಿದ್ದಾರೆ. https://kannadanewsnow.com/kannada/cyber-fraud-attempt-against-infosys-chief-sudha-murthy-complaint-filed/ https://kannadanewsnow.com/kannada/watch-video-congress-releases-ai-against-pm-modi-another-video/

Read More

ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೂ ಸೈಬರ್ ವಂಚಕರು ಕಾಟಕೊಟ್ಟಿದ್ದಾರೆ. ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ವಂಚನೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಸೆಪ್ಟೆಂಬರ್.5ರಂದು ಕರೆ ಮಾಡಿದಂತ ಸೈಬರ್ ವಂಚಕನೊಬ್ಬ ತಾನು ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂಬುದಾಗಿ ಪರಿಚಯಿಸಿಕೊಂಡಿದ್ದಾನೆ. ಆ ಬಳಿಕ ನಿಮ್ಮ ನಂಬರ್ ಆಧಾರ್ ಗೆ ಲಿಂಕ್ ಮಾಡದೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾನೆ. ಇನ್ನೂ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರ ವೈಯಕ್ತಿಕ ಮಾಹಿತಿ ಪಡೆಯಲು ಸೈಬರ್ ವಂಚಕ ಯತ್ನಿಸಿದ್ದಾನೆ. ಅಲ್ಲದೇ ನಿಮ್ಮ ನಂಬರ್ ಗೆ ಅಶ್ಲೀಲ ವೀಡಿಯೋ ಕಳಿಸಲಾಗ್ತಿದೆ. ಅದನ್ನು ನಿಲ್ಲಿಸಲಾಗಿದೆ ಎಂದು ಬೆದರಿಕೆ ಹಾಕಿದ್ದಾನೆ. ಹೀಗಾಗಿ ಸೈಬರ್ ವಂಚಕನ ವಿರುದ್ಧ ದೂರು ನೀಡಲಾಗಿದೆ. https://kannadanewsnow.com/kannada/power-outage-in-these-areas-of-bellary-district-from-tomorrow-to-september-30/ https://kannadanewsnow.com/kannada/watch-video-congress-releases-ai-against-pm-modi-another-video/

Read More

ಬಳ್ಳಾರಿ : ಸಿರುಗುಪ್ಪ ಪಟ್ಟಣದ ವೈಷ್ಣವಿ ಹೋಟೆಲ್ ನಿಂದ ರಿಲಾಯನ್ಸ್ ಟ್ರೆಂಡ್‌ವರೆಗೆ ಎನ್‌ಹೆಚ್ 150ಎ ದ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆ ಬದಿಯ ವಿದ್ಯುತ್ ಮಾರ್ಗಗಳನ್ನು ಸ್ಥಳಾಂತರಿಸುವ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಸೆ.23 ರಿಂದ 30 ರ ವರೆಗೆ 110/33/11ಕೆವಿ ಸಿರುಗುಪ್ಪ ವಿದ್ಯುತ್ ವಿತರಣಾ ಕೇಂದ್ರದಿಂದ ಹಾದು ಹೋಗುವ ಎಫ್‌ಐಬಿ ಎಪಿಎಂಸಿ ಫೀಡರ್ ನಿಂದ ವಿದ್ಯುತ್ ಪೂರೈಕೆಯಾಗುವ ಸಿರುಗುಪ್ಪ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಸಿರುಗುಪ್ಪ ಪಟ್ಟನದ ವಿಶ್ವಜ್ಯೋತಿ ಶಾಲೆ ಹತ್ತಿರ, ಮುರಾರಿ ಬಡಾವಣೆ, ಮಹಾವೀರ ಬಡಾವಣೆ, ಸಿರಿ ನಗರ, ದೇವಲಾಪುರ ಕ್ರಾಸ್, ಮಹಾವೀರ ಎನ್‌ಕ್ಲೇವ್, ವಿವೈ ಸಿಟಿ, ಹೈದರ್ ಅಲಿ ಕಾಲೋನಿ, ಎವಿಎಸ್ ಫಂಕ್ಷನ್ ಹಾಲ್, ಸಿದ್ದಪ್ಪ ನಗರ, ಸಾಯಿಬಾಬಾ ದೇವಸ್ಥಾನ, ದೇವಲಾಪುರ ಗ್ರಾಮ, ಲಕ್ಷ್ಮಿ ವೆಂಕಟೇಶ್ವರ ನಗರ, ರಾಘವಯ್ಯ ಕಾಲೋನಿ, ಎಪಿಎಂಸಿ ಆವರಣ, ಕುವೆಂಪು ನಗರ, ತ್ಯಾಗರಾಜ ನಗರ, ನೀಲಾಂಜನೇಯ ಬಡಾವಣೆ, ವಿನಾಯಕ ನಗರ, ಕೃಷ್ಣ ನಗರ, ಸೌಭಾಗ್ಯ ನಗರ, ಹನುಮಂತ ನಗರ, ಆಶ್ರಯ…

Read More

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ. ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ ಸಮೀಕ್ಷೆಯಲ್ಲಿ ಮತಾಂತರಕ್ಕೆ ಪ್ರೋತ್ಸಾಹ ನೀಡಲಾಗಿದೆ. ಮತಾಂತರ ಮಾಡಲು ಸಿಎಂ ಸಿದ್ದರಾಮಯ್ಯ ವೇದಿಕೆ ಸೃಷ್ಟಿಸಿದ್ದಾರೆ. ಒಕ್ಕಲಿಗ, ದಲಿತ, ವಿಶ್ವಕರ್ಮರನ್ನು ಕ್ರೈಸ್ತ ಧರ್ಮಕ್ಕೆ ಸೇರಿಸಲು 52 ಹೊಸ ಜಾತಿಗಳನ್ನು ಸೃಷ್ಟಿ ಮಾಡಲಾಗಿದೆ. ತಮಗೆ ಬೇಕಾದ ಜಾತಿಗಳ ಸಂಖ್ಯೆಯನ್ನು ಕಡಿಮೆ ಅಥವಾ ಹೆಚ್ಚು ಎಂದು ತೋರಿಸಬಹುದು. ಮುಸ್ಲಿಮರು ಹಾಗೂ ಕ್ರೈಸ್ತರಲ್ಲಿ ಅನೇಕ ಜಾತಿಗಳಿದ್ದು, ಅದನ್ನು ಬಹಿರಂಗ ಮಾಡುತ್ತಿಲ್ಲ. ಆದರೆ ಹಿಂದೂಗಳಲ್ಲಿ ತಾರತಮ್ಯ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಮಸೀದಿಗಳಿಗೆ ಮಹಿಳೆಯರಿಗೆ ಪ್ರವೇಶವಿಲ್ಲ, ಮಹಿಳೆಯರಿಗೆ ಬುರ್ಕಾ ಧರಿಸಬೇಕು. ಹೀಗೆ ಎಲ್ಲ ಧರ್ಮಗಳಲ್ಲಿ ತಾರತಮ್ಯ ಇದೆ ಎಂದರು. ರಾಜ್ಯದಲ್ಲಿ ಲಿಂಗಾಯತರ ಸಂಖ್ಯೆ ಅತ್ಯಧಿಕ, ನಂತರ ಒಕ್ಕಲಿಗರ ಸಂಖ್ಯೆ ಇದೆ. ಸಿಎಂ ಸಿದ್ದರಾಮಯ್ಯ ಈ ಪ್ರಮಾಣವನ್ನೇ ಬದಲಿಸಲು ಮುಂದಾಗಿದ್ದಾರೆ. ಒಕ್ಕಲಿಗ ಸಮುದಾಯವನ್ನೇ ಒಡೆಯುತ್ತಿದ್ದಾರೆ. ಹೊಸ ಜಾತಿಗಳನ್ನು ಹುಟ್ಟುಹಾಕಿದ್ದಾರೆ ಎಂದರು. ಹದಿನೈದು…

Read More

ಹುಬ್ಬಳ್ಳಿ: ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಕೊಲ್ಲಂ ನಡುವೆ 14 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ – ಕೊಲ್ಲಂ ವಿಶೇಷ ಎಕ್ಸ್ ಪ್ರೆಸ್ ರೈಲು ಸೆಪ್ಟೆಂಬರ್ 28, 2025 ರಿಂದ ಡಿಸೆಂಬರ್ 28, 2025 ರವರೆಗೆ ಪ್ರತಿ ಭಾನುವಾರ ಸಂಜೆ 3:15ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:55 ಕ್ಕೆ ಕೊಲ್ಲಂ ತಲುಪಲಿದೆ. ವಾಪಸು, ರೈಲು ಸಂಖ್ಯೆ 07314 ಕೊಲ್ಲಂ – ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಸೆಪ್ಟೆಂಬರ್ 29, 2025 ರಿಂದ ಡಿಸೆಂಬರ್ 29, 2025 ರವರೆಗೆ ಪ್ರತಿ ಸೋಮವಾರ ಸಂಜೆ 5:00ಕ್ಕೆ ಕೊಲ್ಲಂನಿಂದ ಹೊರಟು, ಮರುದಿನ ಸಂಜೆ 6:30ಕ್ಕೆ ಹುಬ್ಬಳ್ಳಿ ಆಗಮಿಸಲಿದೆ. ಈ ವಿಶೇಷ ರೈಲು ಒಟ್ಟು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ 01 ಎಸಿ 2-ಟೈರ್, 02 ಎಸಿ 3-ಟೈರ್, 12…

Read More

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡುವಾಗ ನವರಾತ್ರಿ ಹಬ್ಬಕ್ಕೆ ಜನಸಾಮಾನ್ಯರಿಗೆ ಶುಭ ಸುದ್ದಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಅದರಂತೆ ಸರುಕು ಹಾಗೂ ಸೇವಾ ತೆರಿಗೆಯನ್ನು ಕಡಿತಗೊಳಿಸುವ ಮೂಲಕ ಕೊಟ್ಟ ಮಾತು ಈಡೇರಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ತಾಲ್ಲೂಕಿನ ಆನವಟ್ಟಿ ಗ್ರಾಮದ ವಾಸವಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವರ್ತಕರ ಸಭೆಯಲ್ಲಿ ಮಾತನಾಡಿದಂತ ಅವರು, ಸೋರುತ್ತಿರುವ ಆದಾಯವನ್ನು ‌ತಡೆಗಟ್ಟಲು ದೇಶಕ್ಕೆ ಒಂದೇ ತೆರಿಗೆ 2016ರಲ್ಲಿ ಜಾರಿಗೆ ತರಲಾಗಿತ್ತು. ಆಟೋಮೊಬೈಲ್ ಉತ್ಪನ್ನಗಳನ್ನು 375 ವಸ್ತುಗಳಿಗೆ ಅನ್ವಯವಾಗುವಂತೆ ಹೊರೆ ಇಳಿಸಲಾಗಿದೆ. ಇದರಿಂದ 2.50 ಲಕ್ಷ ಕೋಟೆ ಸರ್ಕಾರಕ್ಕೆ ಹೊರೆಯಾಗಿದೆ. ಇದು ನವರಾತ್ರಿ ಹಬ್ಬಕ್ಕೆ ಸಾರ್ವಜನಿಕರಿಗೆ ಉಡುಗೊರೆ ಕೊಡಲಾಗಿದೆ ಎಂದು ತಿಳಿಸಿದರು. ದೇಶದಲ್ಲಿ ಒಟ್ಟು 25 ಕೋಟಿ ಜನರು ಬಡತನದ ಪಟ್ಟಿಯಿಂದ ಮುಕ್ತಗೊಂಡಿದ್ದಾರೆ. ಮಧ್ಯಮವರ್ಗ ಮತ್ತು ಸಾಮಾನ್ಯ ಜನರು ಗುಣಮಟ್ಟದ ಜೀವನ ಅನುಕೂಲವಾಗಿದೆ. ದುಶ್ಚಟಗಳಿಗೆ…

Read More

ಶಿವಮೊಗ್ಗ: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಿಎಸ್ ಟಿಯನ್ನು ತೆರಿಗೆಯನ್ನು ಕಡಿತಗೊಳಿಸುವ ಮೂಲಕ ಸಾರ್ವಜನಿಕರಿಗೆ ದಸರಾ ಹಬ್ಬಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದು ಸೊರಬ ಬಿಜೆಪಿ ಮುಖಂಡ ಡಾ‌‌.ಜ್ಞಾನೇಶ್ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬದ ಶ್ರೀ ಬಯಲು ಬಸವೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯ ನಡೆಸಿ,ನಂತರ ಪಟ್ಟಣದ ಆಂಜನೇಯ ಸ್ವಾಮಿ ವೃತ್ತದ ಬಳಿ ಸರಕು,ಸೇವಾ ತೆರಿಗೆ ಕಡಿತಗೊಳಿಸದ ಕೇಂದ್ರ ಸರ್ಕಾರದ ನಿಲುವನ್ನು ಸ್ವಾಗತಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜಿಎಸ್ ಟಿ ಕಡಿತದಿಂದ ಸಾರ್ವಜನಿಕವಾಗಿ ದಿನಬಳಕೆ ವಸ್ತುಗಳ ಬೆಲೆ ಗಣನೀಯ ಇಳಿಕೆಯಾಗಿದೆ. ಇದರಿಂದ ಕೆಳವರ್ಗದ ಜನರ ಜೀವನ ಕ್ರಮ ಸುಧಾರಿಸುವ ಜೊತೆಗೆ ವ್ಯಾಪಾರ, ವಹಿವಾಟು ನಡೆಸುವ ವರ್ತಕರಿಗೆ ಆರ್ಥಿಕತೆಯಲ್ಲಿ ಅನುಕೂಲವಾಗಲಿದೆ ಎಂದು ತಿಳಿಸಿದರು. ಜಾಗತಿಕ ಮಟ್ಟದಲ್ಲಿ ದೇಶವನ್ನು ಆರ್ಥಿಕತೆಯಲ್ಲಿ ಉನ್ನತಿಗೆ ಕೊಂಡೊಯ್ದ ನರೇಂದ್ರ ಮೋದಿ ಅವರು ವಿಶ್ವ ನಾಯಕರಾಗಿದ್ದಾರೆ. ದಿನಬಳಕೆ…

Read More

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ. GST ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ. ಈಗ ಬೆನ್ನು ತಟ್ಟಿಕೊಳ್ತಾ ಇರೋದೂ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಮಹಾರಾಜ ಕಾಲೇಜು ಮೈದಾನದಲ್ಲಿ ದಸರಾ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಎಂಟು ವರ್ಷ ವಿಪರೀತ GST ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ ಎಂದು ಪ್ರಶ್ನಿಸಿದರು. GST 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತಗೊತಾ ಇದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದರು. ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ ಎಂದು ನುಡಿದರು. ಮಾಜಿ ಸಂಸದರಿಗಿಂತ ನಾನು ಉತ್ತಮ ಹಿಂದು: ಸಿ.ಎಂ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್…

Read More