Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಅವಧಿಗೆ ಗಳಿಕ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024 ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗತಿಗಳಿಗೊಳಪಟ್ಟು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i) ರನ್ವಯ ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31/12/2024 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2025 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ಸರ್ಕಾರಿ ಅವಕಾಶವನ್ನು ನಗದೀಕರಣ ಪಡೆಯುವ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ…
ಹಮಾಸ್: ಈಗಾಗಲೇ ಇಸ್ರೇಲ್ ಹಾಗೂ ಹಮಾಸ್ ಕದನ ವಿರಾಮ ಘೋಷಣೆ ಮಾಡಿದ್ದವು. ಈ ಬೆನ್ನಲ್ಲೇ ಹಮಾಸ್ ಜೊತೆ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಭದ್ರತಾ ಸಂಪುಟದ ಅನುಮೋದನೆಯನ್ನು ನೀಡಲಾಗಿದೆ. ಈ ಮೂಲಕ ಇಸ್ರೇಲ್-ಹಮಾಸ್ ಯುದ್ದಕ್ಕೆ ಬ್ರೇಕ್ ಬಿದ್ದಂತೆ ಆಗಿದೆ. ಇಸ್ರೇಲಿ ಜೈಲುಗಳಲ್ಲಿ ಫೆಲೆಸ್ತೀನ್ ಕೈದಿಗಳಿಗೆ ಹಮಾಸ್ ವಶದಲ್ಲಿರುವ ಡಜನ್ಗಟ್ಟಲೆ ಒತ್ತೆಯಾಳುಗಳ ವಿನಿಮಯ ಮತ್ತು 15 ತಿಂಗಳ ಸುದೀರ್ಘ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮವನ್ನು ಒಳಗೊಂಡಿರುವ ಗಾಝಾ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ನ ಭದ್ರತಾ ಕ್ಯಾಬಿನೆಟ್ ಅನುಮೋದನೆ ನೀಡಿದೆ. https://kannadanewsnow.com/kannada/good-news-for-farmers-applications-invited-for-distribution-of-farm-machinery-at-50-discount/ https://kannadanewsnow.com/kannada/supreme-court-pauses-order-directing-rollout-of-ayushman-bharat-scheme-in-delhi/
ಮಡಿಕೇರಿ : ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ ರೂ.100ರ ಛಾಫಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗ ಪಡೆದುಕೊಳ್ಳಲು ಕೋರಿದೆ. ಕೃಷಿ ಉಪ ಕರಣಗಳಾದ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ, ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ…
ಬೆಂಗಳೂರು: ಕೈಗಾರಿಕಾ ತರಬೇತಿ ಉದ್ಯೋಗ ಇಲಾಖೆ ವತಿಯಿಂದ ಯುವನಿಧಿ ಯೋಜನೆಯಡಿ ನೋಂದಣಿ ಆಗುವ ಪದವೀಧರರಿಗೆ / ಸ್ನಾತಕೋತ್ತರ ಪದವೀಧರರಿಗೆ ಮಾಹೆಯಾನ ರೂ.3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಮಾಹೆಯಾನ ರೂ.1500/- ನಿರುದ್ಯೋಗ ಭತ್ಯೆಯವನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. ಯುವನಿಧಿ ಯೋಜನೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ನೋದಾಯಿಸಲು “ಯುವನಿಧಿ ವಿಶೇಷ ನೋಂದಣಿ ಅಭಿಯಾನ”ವನ್ನು ಜನವರಿ 6 ರಿಂದ 20 ರವರಗೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಂಗಳೂರು. ಬೆಂಗಳೂರು ನಗರ ವಿಶ್ವವಿದ್ಯಾಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು. ಸಿಓಇ ಕಟ್ಟಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ತುಮಕೂರು ರಸ್ತೆ, ಪೀಣ್ಯ, ಬೆಂಗಳೂರು ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗ ವಿನಿಮಯ ಕಛೇರಿಗಳು ಮತ್ತು ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಯುವನಿಧಿ ಸಹಾಯವಾಣಿ ಹಾಗೂ ನೋಂದಣಿ ಕೇಂದ್ರಗಳನ್ನು ತರೆಯಲಾಗಿದ್ದು, ಈ ಕೇಂದ್ರಗಳಲ್ಲಿ ಅಥವಾ ವೆಬ್ ಸೈಟ್ www.sevasindhugs.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಕರ್ನಾಟದಲ್ಲಿ ವಾಸವಿರುವವರು (ಕರ್ನಾಟಕದಲ್ಲಿ…
ಬೆಂಗಳೂರು: ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ವಿಧಾನಸೌಧ ಬಳಿ ಹಮ್ಮಿಕೊಂಡಿರುವ ಎರಡು ದಿನಗಳ ವಿಶೇಷ ಇವಿ ಮೇಳ -2025ಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದರು. ಪರಿಸರ ಸ್ನೇಹಿ ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಸ್ಕಾಂ ಹಾಗೂ ಸಚಿವಾಲಯ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮೇಳವನ್ನು ಉದ್ಘಾಟಿಸಿ ಮತನಾಡಿದ ಸಚಿವರು, ಏರುತ್ತಿರುವ ಪೆಟ್ರೋಲ್ ಬೆಲೆ ಮತ್ತು ವಾಯು ಮಾಲಿನ್ಯ ನಿಯಂತ್ರಣಕ್ಕೆ ಇಲೆಕ್ಟ್ರಿಕ್ ವಾಹನಗಳು ಪರಿಹಾರವಾಗಿದೆ”, ಎಂದರು. ಇವಿ ಬಳಕೆ ಉತ್ತೇಜಿಸಲು ಚಾರ್ಜಿಂಗ್ ಕೇಂದ್ರಗಳು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ಕರ್ನಾಟಕ ಮಾದರಿಯಾಗಿದೆ. ದೇಶದಲ್ಲಿ 2017ರಲ್ಲೇ ಇವಿ ನೀತಿ ಘೋಷಿಸುವ ಮೂಲಕ ಕರ್ನಾಟಕವು ದೇಶದಲ್ಲೇ ಮೊದಲ ರಾಜ್ಯವಾಗಿದೆ. 2017ರಲ್ಲಿ ವಾರ್ಷಿಕ 11 ಸಾವಿರದಷ್ಟಿದ್ದ ಇಲೆಕ್ಟ್ರಿಕ್ ವಾಹನಗಳ ನೋಂದಣಿ ಪ್ರಸ್ತುತ ಅಂದಾಜು ವಾರ್ಷಿಕ 1,50,000ಕ್ಕೇರಿದೆ. ಇದು ನಮ್ಮ ಇವಿ ನೀತಿಗೆ ಸ್ಪಷ್ಟ ಪುರಾವೆಯಾಗಿದೆ ಎಂದು ಅಭಿಪ್ರಾಯಪಟ್ಟರು. “ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಇಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರ…
ಶಿವಮೊಗ್ಗ : ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.18 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ಯ ವ್ಯತ್ಯಯ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ, ಎಫ್-4 ಸಂತೇಕಡೂರು, ಎಫ್-8 ಗಣಿದಾಳು ಮತ್ತು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ. https://kannadanewsnow.com/kannada/important-order-on-encashment-by-granting-earned-leave-from-state-government/ https://kannadanewsnow.com/kannada/complaint-lodged-with-dysp-seeking-action-against-sagar-nagar-police-inspector-staff/
ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಅವಧಿಗೆ ಗಳಿಕ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024 ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗತಿಗಳಿಗೊಳಪಟ್ಟು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i) ರನ್ವಯ ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31/12/2024 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2025 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ಸರ್ಕಾರಿ ಅವಕಾಶವನ್ನು ನಗದೀಕರಣ ಪಡೆಯುವ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ…
ಬೆಂಗಳೂರು: ಬೆಂಗಳೂರು ವಿಭಾಗದ ಹೆಬ್ಬಾಳ ಮತ್ತು ಲೊಟ್ಟೆಗೊಲ್ಲಹಳ್ಳಿ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 148 ಮತ್ತು 152ರ ಬದಲಿಗೆ ರಸ್ತೆ ಕೆಳ ಸೇತುವೆಯ ಅಗತ್ಯ ನಿರ್ಮಾಣ ಕಾಮಗಾರಿಗಳಿಂದಾಗಿ, ಈ ಕೆಳಗಿನ ರೈಲು ಸೇವೆಗಳನ್ನು ಈ ಕೆಳಗಿನಂತೆ ಮಾರ್ಗ ಬದಲಾವಣೆ ಮತ್ತು ಮರು ವೇಳಾಪಟ್ಟಿನಿಗದಿಪಡಿಸಲಾಗುತ್ತಿದೆ: ಅವುಗಳ ಮಾಹಿತಿ ಈ ಕೆಳಗಿನಂತಿವೆ: ರೈಲು ಮಾರ್ಗ ಬದಲಾವಣೆ: ಜನವರಿ 26 ರಂದು ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16565 ಯಶವಂತಪುರ-ಮಂಗಳೂರು ಸೆಂಟ್ರಲ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಬಾನಸವಾಡಿಯಲ್ಲಿ ನಿಯಮಿತ ನಿಲುಗಡೆಯನ್ನು ಬಿಟ್ಟು ಯಲಹಂಕ, ಚನ್ನಸಂದ್ರ ಮತ್ತು ಕೃಷ್ಣರಾಜಪುರ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ರೈಲುಗಳ ಮರು ವೇಳಾಪಟ್ಟಿ: 1. ಫೆಬ್ರವರಿ 22 ಮತ್ತು ಮಾರ್ಚ್ 01, 2025 ರಂದು ರೈಲು ಸಂಖ್ಯೆ 00630 ತುಘಲಕಾಬಾದ್-ಯಶವಂತಪುರ ಪಾರ್ಸೆಲ್ ಕಾರ್ಗೋ ಎಕ್ಸ್ ಪ್ರೆಸ್ ರೈಲು ತುಘಲಕಾಬಾದ್ ನಿಲ್ದಾಣದಿಂದ 300 ನಿಮಿಷ ತಡವಾಗಿ ಹೊರಡಲಿದೆ. 2. ಫೆಬ್ರವರಿ 25 ಮತ್ತು ಮಾರ್ಚ್ 04, 2025 ರಂದು ರೈಲು ಸಂಖ್ಯೆ…
ತುಮಕೂರು: ಆನ್ ಲೈನ್ ಗೇಮ್ ಆಡಬೇಡ ಎಂಬುದಾಗಿ ಬುದ್ಧಿ ಹೇಳಿದ್ದಕ್ಕೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ನಗರದ ಹೊರಪೇಟೆಯ ಯುವಕ ಟಿ.ಎಸ್ ಭರತ್(24) ಎಂಬಾತನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಭರತ್ ಕೆಲ ದಿನಗಳಿಂದ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದಿದ್ದನು. ಈ ಗೇಮ್ ನಲ್ಲಿ 20 ಸಾವಿರ ಹಣ ಹಾಕಿ ಕಳೆದುಕೊಂಡಿದ್ದನು. ಈ ವಿಚಾರ ಗೊತ್ತಾದಂತ ತಾಯಿಯು, ಇನ್ಮುಂದೆ ಆನ್ ಲೈನ್ ಗೇಮ್ ಆಡೋದು ಬೇಡ ಎಂಬುದಾಗಿ ಬುದ್ಧಿ ಹೇಳಿದ್ದಾರೆ. ಈ ವಿಚಾರಕ್ಕಾಗಿ ಭರತ್ ಸಿಟ್ಟು ಮಾಡಿಕೊಂಡು ತಮ್ಮ ಹಳೆಯ ಹೆಂಚಿನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/congress-looted-on-one-side-thieves-on-the-other-narayanasamy/ https://kannadanewsnow.com/kannada/supreme-court-pauses-order-directing-rollout-of-ayushman-bharat-scheme-in-delhi/
ಶಿವಮೊಗ್ಗ: ಸಾಗರದ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಗರದ ಡಿವೈಎಸ್ಪಿ ಅವರಿಗೆ ಪ್ರದೀಪ್ ಎಂಬುವರು ದೂರು ನೀಡಿದ್ದಾರೆ. ಇಂದು ಸಾಗರ ನಗರದ ಡಿವೈಎಸ್ಪಿ ಕಚೇರಿಗೆ ತೆರಳಿದಂತ ಅವರು, ಸಾಗರ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ದೂರು ನೀಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಪ್ರದೀಪ್ ಎಂಬುವರು, ಜನವರಿ.15, 2025ರಂದು ನನ್ನ ಮೇಲೆ ದರೋಡೆಗೆ ಮಾದಕ ದ್ರವ್ಯದ ಅಮಲಿನಲ್ಲಿದ್ದಂತ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದಾನೆ. ಕೊಲೆ ಬೆದರಿಕೆ ಕೂಡ ಹಾಕಿದ್ದಾನೆ. ಕಾರಿನ ಗ್ಲಾಸ್ ಹೊಡೆದು ನಷ್ಟ ಉಂಟು ಮಾಡಿದ್ದಾನೆ. ಈ ಆರೋಪಿಯ ವಿರುದ್ಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಆದರೇ ಪೊಲೀಸರು ಮಾದಕ ದ್ರವ್ಯ ಪತ್ತೆ ಪರೀಕ್ಷೆಯನ್ನು ಮಾಡದೇ, ಕೇವಲ ಮೂತ್ರ ಪರೀಕ್ಷೆ ಮಾಡಿಸಿ, ಅದರಲ್ಲಿ ವರದಿ ನೆಗೆಟಿವ್ ಬಂದಿದ್ದಕ್ಕೆ ಆತನನ್ನು ಬಿಟ್ಟು ಕಳಿಸಿದ್ದಾಗಿ ಆರೋಪಿಸಿದರು. ನಾವು ಕೇಸ್ ದಾಖಲಾದ ಬಳಿಕ…