Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ತನ್ನ ತೀರ್ಪನ್ನು ಕಾಯ್ದಿರಿಸಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನಲೆಯಲ್ಲಿ ಪೋಕ್ಸೋ ಕೇಸ್ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿತ್ತು. ಈ ಕೇಸ್ ರದ್ದು ಕೋರಿ ಸಲ್ಲಿಸಲಾಗಿದ್ದಂತ ವಿಚಾರಣೆ ನಡೆಸಿದ್ದಂತ ಹೈಕೋರ್ಟ್, ಅವರಿಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯ್ತಿ ನೀಡಿತ್ತು. ಇದೀಗ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಸಂತ್ರಸ್ತೆಯ ಸಹೋದರ ಪ್ರಶ್ನಿಸಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಂಧಿಸುವಂತೆ, ಹೆಚ್ಚಿನ ತನಿಖೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿರುವಂತ ಹೈಕೋರ್ಟ್, ವಿಚಾರಣೆ ಪೂರ್ಣಗೊಳಿಸಿ ತನ್ನ ಆದೇಶವನ್ನು ಕಾಯ್ದಿರಿಸಿದೆ. https://kannadanewsnow.com/kannada/congress-looted-on-one-side-thieves-on-the-other-narayanasamy/ https://kannadanewsnow.com/kannada/supreme-court-pauses-order-directing-rollout-of-ayushman-bharat-scheme-in-delhi/
ಬೀದರ್: ನಗರದಲ್ಲಿ ನಿನ್ನೆ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ದರೋಡೆ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಅವರು ಸಚಿವ ರಹೀಂಖಾನ್ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಹರಿಶೇಖರನ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಘಟನೆಯ ಮಾಹಿತಿ ಪಡೆದ ಸಚಿವರು, ತನಿಖೆಯನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದರು. ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಬಂಧಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ಮೃತ ಗಿರಿ ವೆಂಕಟೇಶ್ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ಅವರ ಕುಟುಂಬದ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ. ಮೃತರ ಕುಟುಂಬಕ್ಕೆ ವಿಶೇಷ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿರುವುದಾಗಿ ತಿಳಿಸಿದರು. ನಿನ್ನೆ ರಾತ್ರಿ ತಾವು ಹೈದ್ರಾಬಾದ್ ನ ಕೇರ್ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಧೈರ್ಯ ಹೇಳಿದ್ದು, ವೈದ್ಯರಿಗೆ ಉತ್ತಮ…
ಬೆಂಗಳೂರು: ರಾಜ್ಯ ಸರಕಾರವು ಗೃಹ ಸಚಿವರಿಗೆ ಮಾಹಿತಿಗಳನ್ನೇ ಕೊಡದೆ ಕತ್ತಲಲ್ಲಿ ಇಟ್ಟಿರುವುದು ಸರಿಯಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಗೃಹ ಮಂತ್ರಿಗಳನ್ನೇ ಮೂಲೆಗುಂಪು ಮಾಡಿದೆ ಎಂದು ಅವರ ಮಾತಿನಿಂದ ಗೊತ್ತಾಗುವುದಾಗಿ ತಿಳಿಸಿದರು. ಮಾನ್ಯ ಗೃಹ ಸಚಿವರು ಏನೇ ಕೇಳಿದರೂ ಮಾಹಿತಿ ತರಿಸಿಕೊಳ್ಳುವೆ ಎನ್ನುತ್ತಾರೆ. ಸಿ.ಟಿ.ರವಿ ಕೇಸಿನಲ್ಲೂ ಅಲ್ಲಿ ನಡೆದ ಘಟನೆಗಳ ಮಾಹಿತಿ ಇಲ್ಲ; ಏನಾಗಿದೆ ಎಂದು ಗೊತ್ತಿಲ್ಲ ಎಂದಿದ್ದರು ಎಂದು ಟೀಕಿಸಿದರು. ಬಳಿಕ ಪೊಲೀಸರ ಕ್ರಮ ಸರಿ ಇಲ್ಲ; ಸಿ.ಟಿ.ರವಿ ಅವರನ್ನು ಕಬ್ಬಿನಗದ್ದೆಯಲ್ಲಿ ಸುತ್ತಾಡಿಸಿದರು ಮತ್ತು ಇಡೀ ರಾತ್ರಿ ಬೇರೆ ಬೇರೆ ಕಡೆ ಸುತ್ತಾಡಿಸಿದ್ದಾಗಿ ಪತ್ರಕರ್ತರು ಕೇಳಿದಾಗ, ಅದು ನನಗೆ ಗೊತ್ತಾಗಲಿಲ್ಲ; ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೇಸು ಹಾಕಿದ್ದರಿಂದ ಅದನ್ನು ನಿಭಾಯಿಸಲು ಹಾಗೆ ಮಾಡಿದ್ದಾರೆ ಎಂದಿದ್ದರು ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅವರಿಗೆ ಬೇಕಾದ ವಿಚಾರ ಬಂದರೆ…
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನನ್ನ ಅನುಭವ, ಸೇವೆ ಹಾಗೂ ಹಿರಿತನದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲಾ ರೀತಿಯ ಅರ್ಹತೆ ನನಗಿದೆ. ಆದರೆ ಆ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಪ್ರಬಲವಾಗಿದೆ. ಯಾವುದೇ ಸಮಸ್ಯೆಗಳನ್ನೂ ಸಮರ್ಥವಾಗಿ ನಿಭಾಯಿಸಲಿದೆ. ಪ್ರತಿಯೊಬ್ಬ ರಾಜಕಾರಣಿಗೂ ರಾಜಕೀಯದಲ್ಲಿ ಮೇಲ್ಮಟ್ಟದ ಹುದ್ದೆಗಳನ್ನು ಅಲಂಕರಿಸಬೇಕೆಂಬ ಆಕಾಂಕ್ಷೆ ಇರುತ್ತದೆ ಅದು ಸಹಜ. ಆದರೆ ಅದಕ್ಕೆ ಸಮಯ ಕೂಡಿಬರಬೇಕಿದೆ ಎಂದಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನವೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಖಾಲಿ ಇಲ್ಲ. ಹಾಗಾಗಿ ಆ ಸ್ಥಾನಗಳ ಬಗ್ಗೆ ಅಪೇಕ್ಷೆ ವ್ಯಕ್ತಪಡಿಸುವುದು ಸರಿಯಲ್ಲ. ನಮ್ಮ ಹೈಕಮಾಂಡ್ ಈ ವಿಷಯಗಳಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು. ನಾನಂತೂ ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ ಪಕ್ಷದ ವಿಚಾರದಲ್ಲಿ ಏನೇ ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಹೇಳಬೇಕು. ಏನಾದರೂ ಇದ್ದರೆ ಸುರ್ಜೆವಾಲಾ ಅವರಿಗೆ ಹೇಳಲಿ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.…
ಮಂಗಳೂರು : ಕೋಟೆಕಾರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು. ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು…
ಬೆಂಗಳೂರು: ತಾನು ದಪ್ಪಗಿದ್ದು, ತನ್ನದೇ ದೇಹವನ್ನು ಹೋಲುವಂತ ದಪ್ಪಗಿನ ಹುಡುಗಿ ಮದುವೆಯಾಗಲು ಸಿಗುತ್ತಿಲ್ಲ ಎಂಬುದಾಗಿ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರಿನ ಉತ್ತರ ತಾಲ್ಲೂಕಿನ ನಾರಯಣಪ್ಪನಪಾಳ್ಯದಲ್ಲಿ ಆಟೋ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ವೆಂಕಟೇಶ್(29) ಎಂಬಾತನೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಯುವಕನಾಗಿದ್ದಾನೆ. ಗೋವಿಂದರಾಜು ಹಾಗೂ ಮಂಗಳಮ್ಮ ಎಂಬುವರ ಪುತ್ರ ವೆಂಕಟೇಶ್ ಆಗಿದ್ದಾರೆ. ಮದುವೆಯಾಗೋದಕ್ಕಾಗಿ ಹುಡುಗಿಯನ್ನು ಹುಡುಕುತ್ತಿದ್ದನು. ಸುಮಾರು 15 ಹುಡುಗಿಯರನ್ನು ನೋಡಿದ್ದರೂ ವೆಂಕಟೇಶ್ ದಪ್ಪ ಇದ್ದಾನೆ ಅಂತ ಹುಡುಗಿ ಹಾಗೂ ಪೋಷಕರು ಮದುವೆ ನಿರಾಕರಿಸಿದ್ದರು. ತನ್ನಷ್ಟೇ ದಪ್ಪಗಿರುವಂತ ಹುಡುಗಿ ಸಿಗುತ್ತಿಲ್ಲ ಎಂಬುದಾಗಿ ಮನನೊಂದಂತ ಆಟೋ ಚಾಲಕ ವೆಂಕಟೇಶ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ವೆಂಕಟೇಶ್ ಚಿಕ್ಕಮ್ಮ ಪೋನ್ ಮಾಡಿದರೂ ಪೋನ್ ಪಿಕ್ ಮಾಡದೇ ಇದ್ದಾಗ ಮನೆಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/pme-drive-plis-contribution-to-eco-friendly-automobile-sector-crucial-hdk/ https://kannadanewsnow.com/kannada/supreme-court-pauses-order-directing-rollout-of-ayushman-bharat-scheme-in-delhi/
ಬೆಂಗಳೂರು: ಕಳೆದ ಹತ್ತು ವರ್ಷಗಳಲ್ಲಿ ಭಾರತದ ಅಟೋಮೊಬೈಲ್ ಕ್ಷೇತ್ರದಲ್ಲಿ ಅಭೂತಪೂರ್ವ ಕ್ರಾಂತಿ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿಗೆ ಬಂದಿರುವ ಪಿಎಂ ಇ-ಡ್ರೈವ್ ಯೋಜನೆಯಿಂದ ಮಾಲಿನ್ಯರಹಿತ ಸಾರಿಗೆ ವ್ಯವಸ್ಥೆಯ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ಭಾರತ್ ಮಂಟಪದಲ್ಲಿ ಐದು ದಿನಗಳ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸಚಿವರು ಭಾಷಣ ಮಾಡಿದರು. ವಾಯುಮಾಲಿನ್ಯ ನಿವಾರಣೆ ನಿಟ್ಟಿನಲ್ಲಿ ಅನುಷ್ಠಾನಕ್ಕೆ ತರಲಾಗಿರುವ ಹಸಿರುಪೂರಕ ಉಪ ಕ್ರಮಗಳಿಂದ ದೇಶೀಯ ಎಕೋ ಅಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚು ಅನುಕೂಲ ಆಗಿದೆ. ಎಲೆಕ್ಟ್ರಿಕ್ ವಾಹನಗಳು (ಇವಿಗಳು), ಶುದ್ಧ ಇಂಧನ ಪರಿಹಾರಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಿರುವ ಪರಿಸರ ಸ್ನೇಹಿ ಸಾರಿಗೆಯಲ್ಲಿ ಭಾರತವು ನಾಗಾಲೋಟದಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು. ಸ್ವಚ್ಛ ಭಾರತ್ ಅಭಿಯಾನವೂ ಸೇರಿದಂತೆ ಪ್ರಧಾನಮಂತ್ರಿಗಳ ಪರಿಸರ…
ಮುಂಬೈ: ಮನೆಗೆ ನುಗ್ಗಿ ದುಷ್ಕರ್ಮಿಯೊಬ್ಬನಿಂದ ಚಾಕು ಇರಿತಕ್ಕೆ ಒಳಗಾಗಿದ್ದಂತ ನಟ ಸೈಫ್ ಆಲಿಖಾನ್ ಗೆ ಶಸ್ತ್ರ ಚಿಕಿತ್ಸೆ ಮೂಲಕ ಬೆನ್ನಿನಲ್ಲಿ ಹೊಕ್ಕಿದ್ದಂತ ಚಾಕುವನ್ನು ಹೊರ ತೆಗೆಯಲಾಗಿತ್ತು. ಈಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಈ ಕುರಿತಂತೆ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ಸೈಫ್ ಆಲಿಖಾನ್ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡಗಡೆ ಮಾಡಲಾಗಿದೆ. ಅದರಲ್ಲಿ ಬೆನ್ನುಹುರಿಯಲ್ಲಿ ಇನ್ನೂ ಗಾಯ ಹಸಿಯಾಗಿದೆ. ಹೀಗಾಗಿ ಅವರು ಕೆಲ ದಿನಗಳವರೆಗೆ ರೆಸ್ಟ್ ತೆಗೆದುಕೊಳ್ಳುವ ಅವಶ್ಯಕತೆ ಇರುವುದಾಗಿ ತಿಳಿಸಿದೆ. ಸದ್ಯ ನಟ ಸೈಫ್ ಆಲಿಖಾನ್ ಚೇತರಿಸಿಕೊಳ್ಳುತ್ತಿದ್ದಾರೆ. ನಡೆದಾಡಲು ಯಾವುದೇ ತೊಂದರೆ ಇಲ್ಲ. ಆದ್ರೆ ಸೋಂಕಿನ ಭೀತಿ ಹಿನ್ನಲೆಯಲ್ಲಿ ನಡೆದಾದಂತೆ ಸಲಹೆ ನೀಡಿದ್ದೇವೆ ಎಂಬುದಾಗಿ ಹೇಳಿದೆ. ಇದೀಗ ನಟ ಸೈಫ್ ಆಲಿಖಾನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡ ಕಾರಣ ಐಸಿಯುನಿಂದ ಸಾಮಾನ್ಯ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಹಣ್ಣಿನ ಜ್ಯೂಸ್ ಸೇವಿಸುವುದಕ್ಕೆ ತಿಳಿಸಲಾಗಿದೆ. ವಿಶ್ರಾಂತಿ ಅಗತ್ಯವಿದೆ ಎಂಬುದಾಗಿ ಮುಂಬೈನ…
ಮಂಗಳೂರು: ಬೀದರ್ ನಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂಗೆ ತುಂಬಲು ತಂದಿದ್ದಂತ ಹಣವನ್ನು ದೋಚಿ ದರೋಡೆಕೋರರು ಪರಾರಿಯಾಗಿದ್ದ ಘಟನೆ ಹಸಿರಾಗಿರೋ ಮುನ್ನವೇ, ಮಂಗಳೂರಲ್ಲಿ ಇಂತದ್ದೇ ಘಟನೆ ನಡೆದಿದೆ. ಈ ದರೋಡೆ ಪ್ರಕರಣದಲ್ಲಿ ಬರೋಬ್ಬರಿ 10 ರಿಂದ 12 ಕೋಟಿಯಷ್ಟು ಚಿನ್ನ, ಹಣ ದೋಚಿ ಪರಾರಿಯಾಗಿರೋದಾಗಿ ಪೊಲೀಸರ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಮಂಗಳೂರಿನ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ನುಗ್ಗಿರುವಂತ ಐವರು ದರೋಡೆಕೋರರ ತಂಡವು, ಬಂದೂಕು ತೋರಿಸಿ ಹಾಡಹಗಲೇ ಚಿನ್ನ, ಒಡವೆ ನಗದು ದೋಚಿ ಪರಾರಿಯಾಗಿದೆ. ಫಿಯೇಟ್ ಕಾರಿನಲ್ಲಿ ಬಂದಂತ ಐವರ ತಂಡ ಈ ಕೃತ್ಯವೆಸಗಿ ಪರಾರಿಯಾಗಿದೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ. ಇನ್ನೂ ಬ್ಯಾಂಕ್ ನಲ್ಲಿ ಪೊಲೀಸರಿಂದ ಪರಿಶೀಲನೆ ನಡೆಸಲಾಗುತ್ತಿದ್ದು, ಪ್ರಾಥಮಿಕ ಮಾಹಿತಿಯಂತೆ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿಂದ ಬರೋಬ್ಬರಿ 10 ರಿಂದ 12 ಕೋಟಿ ಮೌಲ್ಯದ ಚಿನ್ನ, ನಗದನ್ನು ದರೋಡೆಕೋರರು…
ಮಂಗಳೂರು: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಹಾಗೂ ರಿಪೇರಿ ತರಬೇತಿಗೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್(ಸೆಕ್ಯುರಿಟಿ ಆಲಾರಾಂ, ಸ್ಮೋಕ್ ಡಿಟೆಕ್ಟರ್ ) ತರಬೇತಿಯನ್ನು ಆಯೋಜಿಸಲಾಗಿದೆ ಎಂದಿದೆ. ದಿನಾಂಕ: 29.01.25 ರಿಂದ 10.02.25ರ ವರೆಗೆ (13ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂಬುದಾಗಿ ತಿಳಿಸಿದೆ. ಅರ್ಜಿಯನ್ನು ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು https://forms.gle/9LUE1UvHMAv21vRS7 ಲಿಂಕ್ ಕ್ಲಿಕ್ ಮಾಡುವ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಗೆ ಕರೆ ಮಾಡಿ ಪಡೆಯಬಹುದು. ಇಲ್ಲವೇ ಉಜಿರೆಯ ರುಡ್ ಸೆಟ್ ಸಂಸ್ಥೆಯ…