Subscribe to Updates
Get the latest creative news from FooBar about art, design and business.
Author: kannadanewsnow09
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿವಿಯ ಕೊಡುಗೆ ಅಪಾರವಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥಾ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು. ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ.…
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಅಬಕಾರಿ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು. ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ನ್ನು ಅಂತಿಮಗೊಳಿಸಲು ಸಚಿವ…
ಮಂಗಳೂರು: ಬೀದರ್ ನಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂಗೆ ತುಂಬಲು ತಂದಿದ್ದಂತ ಹಣವನ್ನು ದೋಚಿ ದರೋಡೆಕೋರರು ಪರಾರಿಯಾಗಿದ್ದ ಘಟನೆ ಹಸಿರಾಗಿರೋ ಮುನ್ನವೇ, ಮಂಗಳೂರಲ್ಲಿ ಇಂತದ್ದೇ ಘಟನೆ ನಡೆದಿದೆ. ಮಂಗಳೂರಿನ ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ನುಗ್ಗಿರುವಂತ ಐವರು ದರೋಡೆಕೋರರ ತಂಡವು, ಬಂದೂಕು ತೋರಿಸಿ ಹಾಡಹಗಲೇ ಚಿನ್ನ, ಒಡವೆ ನಗದು ದೋಚಿ ಪರಾರಿಯಾಗಿದೆ. ಫಿಯೇಟ್ ಕಾರಿನಲ್ಲಿ ಬಂದಂತ ಐವರ ತಂಡ ಈ ಕೃತ್ಯವೆಸಗಿ ಪರಾರಿಯಾಗಿದೆ. ಈ ಸಂಬಂಧ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.
ಬೆಂಗಳೂರು: ದಿನಾಂಕ 18.01.2025 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ “66/11ಕೆ.ವಿ ವಿಕ್ಟೋರಿಯಾ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂಬುದಾಗಿ ಬೆಸ್ಕಾಂ ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಎಸ್ಜೆಪಿ ರಸ್ತೆ, ಒಟಿಸಿ ರಸ್ತೆ, ಎಸ್ಪಿ ರಸ್ತೆ, ಅವೆನ್ಯೂ ರಸ್ತೆ, ಗೌಡೌನ್ ರಸ್ತೆ, ಟ್ಯಾಕ್ಸಿ ಸ್ಟ್ಯಾಂಡ್, ವಿಕ್ಟೋರಿಯಾ ಆಸ್ಪತ್ರೆ ಕಾಂಪೌಂಡ್, ನೆಫ್ರೋರಾಲಜಿ, ಮಿಂಟೊ, ಗ್ಯಾಸ್ಟ್ರೋಎಂಟರಾಲಜಿ ಆಸ್ಪತ್ರೆ ಮತ್ತು ಅಲೈಡ್ ಆಸ್ಪತ್ರೆಗಳು, ಜೆಸಿ ರಸ್ತೆ, ಜೆಸಿ ರಸ್ತೆ 1ನೇ ಕ್ರಾಸ್, ಎ.ಎಂ. ಲೇನ್, ಕಲಾಸಿಪಾಳ್ಯ ಮುಖ್ಯ ರಸ್ತೆ, ಎಂಟಿಬಿ ರಸ್ತೆ, ಕುಂಬಾರ ಗುಂಡಿ ರಸ್ತೆ, ಶಿವಾಜಿ ರಸ್ತೆ, ಸಿಟಿ ಮರ್ಕೆಟ್ ಕಾಂಪ್ಲೆಕ್ಸ್, ಬಿ.ವಿ.ಕೆ. ಅಯ್ಯಂಗಾರ್ ರಸ್ತೆ, ಗ್ರೇನ್ ಬಜಾರ್ ರಸ್ತೆ, ನಗರತ್ ಪೇಟೆ, ತಿಗಳರಪೇಟೆ, ಎನ್, ಆರ್ ರಸ್ತೆ, ಒಟಿಸಿ ರಸ್ತೆಯ ಭಾಗ, ಪಿಸಿ ಲೇನ್, ಪಿಪಿ ಲೇನ್, ಊಸ್ಮಾನ್ ಖಾನ್ ರಸ್ತೆಯಲ್ಲಿ ಕರೆಂಟ್ ಇರೋದಿಲ್ಲ. ಎಸ್ಜೆಪಿ ಪರ್ಕ್, ಬಸಪ್ಪ ವೃತ್ತ,…
ಬೆಂಗಳೂರು: ರಾಜ್ಯ ಸರ್ಕಾರದಿದಂ ಅನುಕಂಪದ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತಪಟ್ಟಲ್ಲಿ ಆತನ ಅವಲಂಬಿತರಲ್ಲಿ ಒಬ್ಬರಿಗೆ ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರನ್ವಯ ಅರ್ಹತೆಯ ಆಧಾರದ ಮೇಲೆ ಅನುಕಂಪದ ಆಧಾರದ ನೇಮಕಾತಿಯನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸದರಿ ಅನುಕಂಪದ ಆಧಾರದ ನೌಕರಿಯನ್ನು ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತನಾದಲ್ಲಿ ಆತನ ಕುಟುಂಬಕ್ಕೆ ಉಂಟಾಗುವ ಆರ್ಥಿಕ ಸ್ತೋಭೆಯನ್ನು ತಡೆಯಲು ನೀಡುವಂತಹ ವ್ಯವಸ್ಥೆಯಾಗಿದ್ದರೂ ಇದನ್ನು ಹಕ್ಕೊತ್ತಾಯ ಮಾಡಲು ಅವಕಾಶವಿರುವುದಿಲ್ಲ. ಈ ನಿಯಮಗಳಲ್ಲಿ ಅನುಕಂಪದ ನೇಮಕಾತಿಗಾಗಿ ನಿಗಧಿಪಡಿಸಿರುವ ಎಲ್ಲಾ ಷರತ್ತು ಮತ್ತು ನಿಬಂಧನೆಗಳನ್ನು ಅರ್ಜಿದಾರರು ಪೂರೈಸಿದಲ್ಲಿ ಮಾತ್ರ ಅನುಕಂಪದ ನೇಮಕಾತಿಗಾಗಿ ಪರಿಗಣಿಸಬಹುದಾಗಿದೆ ಎಂದಿದೆ. ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರ ನಿಯಮ…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿತ್ತು. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಅದೇನು ಅಂತ ಮುಂದಿದೆ ಓದಿ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಯೋಜನೆ) ಅವರು ರಾಜ್ಯದ ಎಲ್ಲಾ ಉಪನಿರ್ದೇಶಕರು(ಆಡಳಿತ) ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಆದೇಶ ಹೊರಡಿಸಲಾಗಿರುತ್ತದೆ. ಯೋಜನೆಯ ಅನುಷ್ಠಾನವು ಈಗಾಗಲೇ ಪ್ರಾರಂಭವಾಗಿದೆ. ಸದರಿ ಯೋಜನೆಯನ್ನು ಇನ್ನೂ ನಿಖರವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ(EDCS) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್-ಲೈನ್ನಲ್ಲಿ ದಾಖಲಿಸಬೇಕಾಗಿದೆ ಎಂದಿದ್ದಾರೆ. ಈ ಕುರಿತು ಈಗಾಗಲೇ ಉಲ್ಲೇಖ(5)ರಲ್ಲಿ ಸುತ್ತೋಲೆ ಹೊರಡಿಸಲಾಗಿರುತ್ತದೆ. ಮುಂದುವರೆದು ಈ ಮೊದಲು ಆನ್-ಲೈನ್ ಪೋರ್ಟ್ಲ್ನಲ್ಲಿ 01 ಯು-ಡೈಸ್…
ಹೈದರಾಬಾದ್: ಬೀದರ್ ನಲ್ಲಿ ಇಂದು ಬೆಳಿಗ್ಗೆ ಹಾಡಹಗಲೇ ಎಟಿಎಂಗೆ ಹಣ ತುಂಬುತ್ತಿದ್ದಂತ ವ್ಯಾನ್ ಮೇಲೆ ಗುಂಡಿನ ದಾಳಿ ನಡೆಸಿ, ಇಬ್ಬರನ್ನು ಕೊಂದು, 83 ಲಕ್ಷ ಹಣದೊಂದಿಗೆ ದರೋಡೆಕೋರರು ಪರಾರಿಯಾಗಿದ್ದರು. ಹೈದರಾಬಾದ್ ನಲ್ಲಿ ಖಾಸಗಿ ಬಸ್ ಮ್ಯಾನೇಜರ್ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಕೋರರು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಬೀದರ್ ನಲ್ಲಿ 83 ಲಕ್ಷ ಹಣ ದರೋಡೆ ಮಾಡಿಕೊಂಡು ಹೈದರಾಬಾದ್ ಗೆ ತೆರಳಿದ್ದಂತ ದರೋಡೆಕೋರರು, ಖಾಸಗಿ ಬಸ್ ಟಿಕೆಟ್ ಖರೀದಿಸಿ ಹಣ ಸಹಿತ ಅದರಲ್ಲಿ ಕುಳಿತಿದ್ದರು. ಈ ವೇಳೆಯಲ್ಲಿ ಖಾಸಗಿ ಬಸ್ ಮ್ಯಾನೇಜರ್ ಪ್ರಯಾಣಿಕರ ಬ್ಯಾಗ್ ಚೆಕ್ ಮಾಡುವಾಗ ಬೀದರ್ ಶೂಟೌಟ್ ದರೋಡೆಕೋರರು ಅವರ ಮೇಲೆ ಫೈರಿಂಗ್ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಟ್ರಾವೆಲ್ಸ್ ಮ್ಯಾನೇಜರ್ ಜಹಾನ್ ಮೇಲೆ ಗುಂಡಿನ ದಾಳಿ ನಡೆಸಿ ಹಣ ಸಮೇತ ಸ್ಥಳದಿಂದ ಪರಾರಿಗಾಯಿಗಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಬೀದರ್ ನಿಂದ ಹಣ ದೋಚಿ ಪರಾರಿಯಾಗಿದ್ದಂತ ದರೋಡೆಕೋರರು ಹೈದರಾಬಾದ್ ಗೆ ತೆರಳಿದ್ದರು. ಈ ಮಾಹಿತಿ ಸಿಕ್ಕ ಕೂಡಲೇ ಕರ್ನಾಟಕದ ಪೊಲೀಸರು…
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ…
ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಫಾರ್ಮ್ನಲ್ಲಿ ನೂತನವಾಗಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು (Integrated University) ಸ್ಥಾಪಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಒಟ್ಟು ಯೋಜನಾ ವೆಚ್ಚ 285.89 ಕೋಟಿ. ಆಂತರಿಕ ಸಂಪನ್ಮೂಲಗಳ ವೆಚ್ಚ 8.00 ಕೋಟಿ, ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಫಾರ್ಮ ಇಲ್ಲಿ ನೂತನವಾಗಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು. ಕರ್ನಾಟಕವು ಒಟ್ಟು 4 ಕಂದಾಯ ವಿಭಾಗಗಳನ್ನು ಹೊಂದಿದ್ದು ಮೈಸೂರು ಕಂದಾಯ ವಿಭಾಗ ಹೊರತುಪಡಿಸಿ ಉಳಿದ ಎಲ್ಲಾ ಕಂದಾಯ ವಿಭಾಗಗಳನ್ನು ಒಂದಕ್ಕಿAತ ಹೆಚ್ಚು ಕೃಷಿ ಮತ್ತು ತೋಟಗಾರಿಕೆ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯಗಳಿವೆ. ಮೈಸೂರು ವಿಭಾಗದ ವ್ಯಾಪ್ತಿಯಲ್ಲಿ ಯಾವುದೇ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆಯಾಗಿರುವುದಿಲ್ಲ. ಕರ್ನಾಟಕ…
ಶಿವಮೊಗ್ಗ: ಕೆಲಸದ ವಿಚಾರವಾಗಿ ಜಗಳ ಮಾಡಿಕೊಂಡ ವೈದ್ಯೆ ಹಾಗೂ ನರ್ಸ್ ಇಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಶಿವಮೊಗ್ಗದ ಬಿಆರ್ ಪಿಯಲ್ಲಿ ನಡೆದಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಬಿಆರ್ ಪಿಯ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಡಾ.ಹಂಸವೇಣಿ ಹಾಗೂ ನರ್ಸ್ ಸುಕನ್ಯಾ ಎಂಬುವರು ಕೆಲಸದ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಕೆಲಸದ ವಿಚಾರದಲ್ಲಿ ವೈದ್ಯೆ ಕಿರುಕುಳ ನೀಡುತ್ತಿದ್ದಾರೆ ಎಂಬುದಾಗಿ ಆರೋಪಿಸಿ ನಿದ್ರೆ ಮಾತ್ರೆ ಸೇವಿಸಿ ನರ್ಸ್ ಸುಕನ್ಯಾ ಎಂಬುವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಈ ವಿಷಯ ತಿಳಿದಂತ ವೈದ್ಯೆ ಡಾ.ಹಂಸವೇಣಿ ಕೂಡ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಂದು ಗಂಟೆಯ ಸಮಯದಲ್ಲೇ ವೈದ್ಯೆ ಹಾಗೂ ನರ್ಸ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವೈದ್ಯೆ ಡಾ.ಹಂಸವೇಣಿಯನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಮೆಗ್ಗಾನ್ ಆಸ್ಪತ್ರೆಗೆ ಡಿಹೆಚ್ಓ ನಟರಾಜ್ ಭೇಟಿ…