Author: kannadanewsnow09

ಬೆಂಗಳೂರು : ಬೀದರ್ ನ ಭಾರತೀಯ ಸ್ಟೇಟ್ ಬ್ಯಾಂಕ್ ಬಳಿ ಇಂದು ಹಾಡು ಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಇಬ್ಬರು ಸಿಬ್ಬಂದಿಯನ್ನು ಕೊಂದು ಹಣ ದರೋಡೆ ಮಾಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಆರೋಪಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿರುವುದು ತೀವ್ರ ನೋವಿನ ಸಂಗತಿ. ಮೃತರ ಕುಟುಂಬದವರಿಗೆ ಈ ದುಃಖ ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ ಅವರು, ಈ ನೋವಿನ ಸಂದರ್ಭದಲ್ಲಿ ಸರ್ಕಾರ ಕುಟುಂಬದ ಜೊತೆ ನಿಲ್ಲುತ್ತದೆ ಎಂದು ತಿಳಿಸಿದರು. ವಿಷಯ ತಿಳಿದ ಕೂಡಲೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರೊಂದಿಗೆ ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ತಾವು ಮಾತನಾಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಮತ್ತು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ ಕ್ರಮ ವಹಿಸಲು…

Read More

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ಮತ್ತೊಂದು ಬಾರಿ ಡಿಸೆಂಬರ್ 29 ರಂದು ನಡೆದಿದೆ. ಇದರಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಮರುಪರೀಕ್ಷೆಯಲ್ಲಿ ಕಂಡು ಬಂದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳು ಪದೇ ಪದೆ ಅಳಲು ತೋಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೂ ಸಹ ಈ ಕುರಿತು ವರದಿ ಮಾಡಿವೆ. ಆದರೆ ಮರುಪರೀಕ್ಷೆ ನಡೆದು ಹದಿನೈದು ದಿನ ಕಳೆದರೂ ಈವರೆಗೆ ಸರ್ಕಾರವಾಗಲೀ, ಆಯೋಗವಾಗಲೀ, ಅಭ್ಯರ್ಥಿಗಳ ಆಕ್ಷೇಪಣೆಗಳಿಗೆ ಉತ್ತರ ನೀಡಿಲ್ಲ. ಲಕ್ಷಾಂತರ ಯುವ ಅಭ್ಯರ್ಥಿಗಳ ಭವಿಷ್ಯ ಡೋಲಾಯಮಾನವಾಗಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು…

Read More

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು 8 ನೇ ವೇತನ ಆಯೋಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಪ್ರಕಟಿಸಿದ್ದಾರೆ. 8 ನೇ ವೇತನ ಆಯೋಗದ ಅನುಷ್ಠಾನವು ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಕಾರಣವಾಗುವ ನಿರೀಕ್ಷೆಯಿದೆ. ಆ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಕ್ಕಂತೆ ಆಗಿದೆ. 2025 ರ ಬಜೆಟ್ ಘೋಷಣೆಗಳಿಗೆ ಕೆಲವು ದಿನಗಳ ಮೊದಲು ಕೇಂದ್ರ ಸಚಿವ ಸಂಪುಟವು 8 ನೇ ವೇತನ ಆಯೋಗದ ಅನುಮೋದನೆಯನ್ನು ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ 8 ನೇ ವೇತನ ಆಯೋಗವನ್ನು ಕ್ಯಾಬಿನೆಟ್ ಅನುಮೋದಿಸಿದೆ ಎಂದು ಅಶ್ವಿನಿ ವೈಷ್ಣವ್ ದೃಢಪಡಿಸಿದ್ದರೂ, ಅದರ ಅನುಷ್ಠಾನದ ನಿಖರವಾದ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ. https://TWITTER.com/ANI/status/1879827137609539976 https://kannadanewsnow.com/kannada/good-news-for-central-government-employees-govt-approves-8th-pay-commission/ https://kannadanewsnow.com/kannada/gdp-growth-rate-rises-to-6-4-in-2024-25-ficci-economic-outlook-survey/

Read More

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಕಾಯುತ್ತಿರುವ 8 ನೇ ವೇತನ ಆಯೋಗ ರಚನೆಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಪ್ರಕಟಿಸಿದ್ದಾರೆ. https://twitter.com/ANI/status/1879827137609539976 ನೌಕರರ ವೇತನ ಮತ್ತು ನಿವೃತ್ತರಿಗೆ ಪಾವತಿಸುವ ಪಿಂಚಣಿಗಳ ಪರಿಷ್ಕರಣೆಗೆ ಫಿಟ್ಮೆಂಟ್ ಅಂಶ ಮತ್ತು ಇತರ ವಿಧಾನಗಳನ್ನು ಶಿಫಾರಸು ಮಾಡಲು ಪ್ರತಿ 10 ವರ್ಷಗಳಿಗೊಮ್ಮೆ ವೇತನ ಆಯೋಗಗಳನ್ನು ರಚಿಸಲಾಗುತ್ತದೆ. 2014ರ ಫೆಬ್ರವರಿಯಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ 7ನೇ ವೇತನ ಆಯೋಗವನ್ನು ರಚಿಸಿತ್ತು. ಇದರ ಶಿಫಾರಸುಗಳನ್ನು ಸರ್ಕಾರವು ಜನವರಿ ೨೦೧೬ ರಿಂದ ಜಾರಿಗೆ ತಂದಿತು. ಜನವರಿ 2026 ರಿಂದ ವೇತನವನ್ನು ಪರಿಷ್ಕರಿಸಲು 8 ನೇ ವೇತನ ಆಯೋಗವನ್ನು ಶೀಘ್ರವಾಗಿ ರಚಿಸಬೇಕೆಂದು ಒತ್ತಾಯಿಸುತ್ತಿರುವ ನೌಕರರ ಸಂಘಗಳು ಮತ್ತು ಸಿಬ್ಬಂದಿ ಸಂಘಗಳ ನಿರಂತರ ಬೇಡಿಕೆಗಳ ಮಧ್ಯೆ ವೈಷ್ಣವ್ ಅವರ ಪ್ರಕಟಣೆ ಬಂದಿದೆ. https://kannadanewsnow.com/kannada/dont-play-pranks-on-kpsc-exams-by-vijayendra/ https://kannadanewsnow.com/kannada/gdp-growth-rate-rises-to-6-4-in-2024-25-ficci-economic-outlook-survey/

Read More

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ರಾಜ್ಯ ಸರಕಾರಕ್ಕೆ ಬುದ್ಧಿ ಹೇಳುವ ದೃಷ್ಟಿಯಿಂದ ಹೋರಾಟಕ್ಕೆ ಬೆಂಬಲ ನೀಡಿದ್ದಾಗಿ ತಿಳಿಸಿದರು. ರಾಜ್ಯ ವಿದ್ಯಾರ್ಥಿಗಳ ಒಕ್ಕೂಟದಿಂದ ಕೆಪಿಎಸ್ಸಿಯಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಹೋರಾಟ ನಿರತರಾಗಿದ್ದಾರೆ. ಪದೇಪದೇ ಪರೀಕ್ಷೆ ಮುಂದೂಡುವುದು, ಪ್ರಶ್ನೆಪತ್ರಿಕೆಗಳ ಸೋರಿಕೆ, ಪ್ರಶ್ನೆಪತ್ರಿಕೆಗಳನ್ನು ಇಂಗ್ಲಿಷ್‍ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಸಮಸ್ರಾರು ವಿದ್ಯಾರ್ಥಿಗಳು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ವಿವರಿಸಿದರು. ನಾನು, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ ಮೊದಲಾದ ಮುಖಂಡರು ಇಲ್ಲಿಗೆ ಬಂದಿದ್ದು, ಹೋರಾಟಕ್ಕೆ ಬೆಂಬಲ ನೀಡಿದ್ದೇವೆ ಎಂದು…

Read More

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ” ಎಂದರು. “ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ” ಎಂದು…

Read More

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್‌-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ. ಎರಡೂವರೆ ವರ್ಷಕ್ಕೆ ಅಧಿಕಾರ ಹಸ್ತಾಂತರವಾಗಬೇಕೆಂದು ಒಪ್ಪಂದವಾದರೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಲು ಮನಸ್ಸಿಲ್ಲ. ಅದಕ್ಕಾಗಿ ಸಚಿವರನ್ನು ಛೂ ಬಿಟ್ಟಿದ್ದು, ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿದ್ದಾರೆ. ಅದಕ್ಕಾಗಿ ಅವರೀಗ ಹೈಕಮಾಂಡ್‌ ಪಾದದ ಬಳಿ ಕೂತಿದ್ದಾರೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಸಿದ್ಧವಿಲ್ಲ. ಇವೆಲ್ಲದರಿಂದಾಗಿ ಯಾರೂ ಜನರ ಪರವಾಗಿ ಮಾತಾಡುತ್ತಿಲ್ಲ. ಗುತ್ತಿಗೆದಾರರು ದಯಾಮರಣಕ್ಕೆ ಕೋರಿದ್ದರೆ, ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಎಲ್ಲರೂ ಕುರ್ಚಿಗಾಗಿ ಕಾದಾಡುತ್ತಿದ್ದಾರೆ. ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಇಂತಹ ಬಣ ಬಡಿದಾಟ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹೀನಾಯವಾಗಲಿದೆ ಎಂದರು. ಮತ್ತೊಂದು…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ನೀವು ಮನೆಯಲ್ಲಿ ಬದಲಾದ ಜೀವನ ಶೈಲಿಗೆ ಅನುಗುಣವಾಗಿ ವಿವಿಧ ವಸ್ತುಗಳನ್ನು ಬಳಕೆ ಮಾಡುತ್ತಿರುತ್ತೀರಿ. ಅದಲ್ಲೂ ನೀವು ಬಳಸುವ ಕೆಲವು ವಸ್ತುಗಳ ಬಳಕೆ ಇಂದೇ ನಿಲ್ಲಿಸುವುದು ಒಳ್ಳೆಯದು. ಕಾರಣ ಅವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಿ ಕ್ಯಾನ್ಸರ್ ಕಾರಕವಾಗಬಹುದಂತೆ. ಆ ಬಗ್ಗೆ ಮುಂದೆ ಮಾಹಿತಿ ಓದಿ. ವೇಗವಾಗಿ ಬದಲಾಗುತ್ತಿರುವ ಈ ಆಧುನಿಕ ಯುಗದಲ್ಲಿ, ನಿಮ್ಮ ಆರಾಮದ ವಿಷಯವನ್ನು ಹೆಚ್ಚಿಸಲು ಮತ್ತು ಪ್ರತಿದಿನ ಬಳಸುವ ವಸ್ತುಗಳನ್ನು ಬಳಸಲು ಹೊಸ ವಸ್ತುಗಳನ್ನು ನಿರಂತರವಾಗಿ ಆವಿಷ್ಕರಿಸಲಾಗುತ್ತಿದೆ. ತಯಾರಿಸುವಾಗ ಅನೇಕ ಹಾನಿಕಾರಕ ರಾಸಾಯನಿಕ ಸಂಸ್ಕರಣೆಗಳನ್ನು ಬಳಸುವ ಅನೇಕ ವಿಷಯಗಳಿವೆ ಮತ್ತು ಅಂತಹ ವಸ್ತುಗಳಲ್ಲಿ ರಾಸಾಯನಿಕಗಳ ಅತಿಯಾದ ಬಳಕೆಯಿಂದಾಗಿ, ಈ ವಸ್ತುಗಳು ನಮ್ಮ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗುತ್ತವೆ. ಸಮಸ್ಯೆಯೆಂದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಿಗೆ ಈ ವಸ್ತುಗಳ ಕೆಟ್ಟ ಪರಿಣಾಮಗಳ ಬಗ್ಗೆ ತಿಳಿದಿಲ್ಲ ಮತ್ತು ಈ ವಸ್ತುಗಳನ್ನು ಬಳಸುವುದನ್ನು ಮುಂದುವರಿಸುತ್ತಾರೆ. ನೈಸರ್ಗಿಕವಲ್ಲದ ಅಥವಾ ರಾಸಾಯನಿಕಗಳನ್ನು ಬಳಸಿ ಮಾನವರು ತಯಾರಿಸಿದ ಯಾವುದೇ ವಸ್ತುವು ಒಂದು ರೀತಿಯಲ್ಲಿ…

Read More

ಬೆಂಗಳೂರು: ದಿನಾಂಕ 16.01.2025 (ಗುರುವಾರ) ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 5:00 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿರ‍್ಡ್ಸ್ ಪರ‍್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗರ‍್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವರ‍್ಟರ‍್ಸ್, ಹಚಿನ್ಸ್ ರಸ್ತೆ ಪರ‍್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ,…

Read More

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಪತ್ರ ಸಂಖ್ಯೆ ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024 ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ 31.12.2020ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಿ ಆದೇಶಿಸಿದೆ ಎಂದಿದ್ದಾರೆ. ಸದರಿ ಆದೇಶದಲ್ಲಿ ಅನುದಾನಿತ ಶಾಲೆಗಳು ಆನ್‌ಲೈನ್ ಮೂಲಕ ವಿವರಗಳು/ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿವಡಿಸುವುದು ಹಾಗೂ ಈ ತಂತ್ರಾಂಶದ ಮೂಲಕ ವ್ಯವಹರಿಸುವುದು ಎಂದು ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ. ಸರ್ಕಾರದ ಆದೇಶ ದಿನಾಂಕ:07-08-2024 ಹಾಗೂ ಸರ್ಕಾರದ ಪ್ರದಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಟಿಪ್ಪಣಿ ದಿನಾಂಕ:24-10-2024ರಂತೆ ಅನುದಾನಿತ ಶಿಕ್ಷಕರ ಖಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ತಂತ್ರಾಂಶ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. ತಂತ್ರಾಂಶವು…

Read More