Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಟ ಮೋಹನ್ ಲಾಲ್ ಅವರಿಗೆ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. https://twitter.com/ANI/status/1970459004347523424
ಶುಕ್ರವಾರದ ಅಮಾವಾಸ್ಯೆಯಂದು 11 ಅಥವಾ 16 ಲವಂಗವನ್ನು ಇದರ ಜೊತೆ ಸುಟ್ಟಾಕಿ ಬರಬೇಕಾಗಿರುವ ದುಡ್ಡು ಐಶ್ವರ್ಯ ಬಂಗಾರ ಹಣ ನದಿಯಂತೆ ಹರಿದು ಬರುತ್ತದೆ.! ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು…
ದಕ್ಷಿಣ ಕನ್ನಡ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ನಂದೇನು ತಪ್ಪಿಲ್ಲ ಎಂಬುದಾಗಿ ನ್ಯಾಯಾಧೀಶರ ಎದುರು ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ. ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರ ಎದುರು ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿದ್ದಾರೆ. ಪ್ರಕರಣದಲ್ಲಿ ನಂದೇನು ತಪ್ಪಿಲ್ಲ ಎಂದು ಚಿನ್ನಯ್ಯ ಕಣ್ಣೀರಿಟ್ಟಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/rs-175-crore-proposed-for-100-feet-road-in-maddur-town-mla-k-m-uday/ https://kannadanewsnow.com/kannada/these-trains-will-be-temporarily-halted-at-nagalavi-station-in-dharwad/
ಧಾರವಾಡ: ಜಿಲ್ಲೆಯ ನಾಗಲಾವಿಯ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಅಕ್ಟೋಬರ್ 3 ರಿಂದ 5, 2025ರವರೆಗೆ ನಡೆಯಲಿದೆ, ಭಕ್ತಾದಿಗಳ ಅನುಕೂಲಕ್ಕಾಗಿ ನಾಗಲಾವಿ ಹಾಲ್ಟ್ ನಿಲ್ದಾಣದಲ್ಲಿ ಈ ಕೆಳಗಿನ ರೈಲುಗಳಿಗೆ ಎರಡು ನಿಮಿಷಗಳ ತಾತ್ಕಾಲಿಕ ನಿಲುಗಡೆಗಳನ್ನು ಒದಗಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. 1. ರೈಲು ಸಂಖ್ಯೆ 17332 ಎಸ್ಎಸ್ಎಸ್ ಹುಬ್ಬಳ್ಳಿ-ಮಿರಜ್ ಎಕ್ಸ್ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಿಗ್ಗೆ 11:33ಕ್ಕೆ ಆಗಮಿಸಿ, 11:35ಕ್ಕೆ ಹೊರಡಲಿದೆ. 2. ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ಎಕ್ಸ್ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಬೆಳಗ್ಗೆ 7:58ಕ್ಕೆ ಬಂದು, 08:00ಕ್ಕೆ ಹೊರಡಲಿದೆ. 3. ರೈಲು ಸಂಖ್ಯೆ 17326 ಮೈಸೂರು-ಬೆಳಗಾವಿ ವಿಶ್ವಮಾನವ ಎಕ್ಸ್ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಸಾಯಂಕಾಲ 6:33ಕ್ಕೆ ಆಗಮಿಸಿ, 06:35ಕ್ಕೆ ಹೊರಡಲಿದೆ. 4. ರೈಲು ಸಂಖ್ಯೆ 17331 ಮಿರಜ್-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು ನಾಗಲಾವಿ ಹಾಲ್ಟ್ ನಿಲ್ದಾಣಕ್ಕೆ ಮಧ್ಯಾಹ್ನ 12:25ಕ್ಕೆ ಆಗಮಿಸಿ, 12:27ಕ್ಕೆ ಹೊರಡಲಿದೆ. ಈ ರೈಲುಗಳು ತಮ್ಮ ಮೂಲ ನಿಲ್ದಾಣದಿಂದ ಪ್ರಾರಂಭಿಸುವ ಪ್ರಯಾಣದಿಂದ…
ಮಂಡ್ಯ : ಮದ್ದೂರು ಪಟ್ಟಣದ 100 ಅಡಿ ರಸ್ತೆಗೆ 175 ಕೋಟಿ ರೂಗಳನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಮದ್ದೂರು ಪಟ್ಟಣದ ನಗರಸಭಾ ಕಛೇರಿಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷೆ ಕೋಕಿಲಾ ಅರುಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಮದ್ದೂರು ಪಟ್ಟಣದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ 2.5 ಕಿ.ಮೀ ರಸ್ತೆಯನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿ ಮಾಡಲು ಸರ್ಕಾರಕ್ಕೆ 175 ಕೋಟಿ ರೂ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಒಂದು ತಿಂಗಳಲ್ಲಿ ತಾಂತ್ರಿಕ ಅನುಮೋದನೆ ದೊರಕಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದರು. ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ರಾಜ್ಯ ಸರ್ಕಾರ ಮೆಲ್ದರ್ಜೆಗೆರಿಸಿದೆ. ಹೀಗಾಗಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಸರ್ಕಾರಕ್ಕೆ ವಿಶೇಷ ಅನುದಾನಕ್ಕೆ ಮನವಿ ಮಾಡಲಾಗಿದ್ದು, ಇನ್ನು ಎರಡು ಮೂರು ತಿಂಗಳಲ್ಲಿ 50 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ…
ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಯಿತು. ಸರ್ಕಾರವು ಇದು ಸಾಮಾಜಿಕ, ಆರ್ಥಿ, ಶೈಕ್ಷಣಿಕ ಸರ್ವೆಯಾಗಿದೆ ಎಂಬುದಾಗಿ ವಾದಿಸಿತು. ಈ ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ನಾಳೆಗೆ ವಿಚಾರಣೆಯನ್ನು ಮುಂದೂಡಿದೆ. ರಾಜ್ಯ ಸರ್ಕಾರ ನಡೆಸುತ್ತಿರುವಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿ, ಅಂಕಿ ಅಂಶ ಸಂಗ್ರಹಕ್ಕೂ ಪ್ರತ್ಯೇಕ ಕಾಯ್ದೆ ಇದೆ. ಆ ಕಾಯ್ದೆಯಲ್ಲಿ ರಾಜ್ಯಕ್ಕೆ ಅಂಕಿ ಅಂಶ ಸಂಗ್ರಹದ ಅಧಿಕಾರ ನೀಡಲಾಗಿಲ್ಲ. ಹಿಂದೆಂದೂ ಇತರೆ ಧರ್ಮದೊಂದಿಗೆ ಜಾತಿಯನ್ನು ಸೇರಿಸಲಾಗಿರಲಿಲ್ಲ ಎಂದು ವಾದಿಸಿದರು. ಬಣಜಿಗ ಕ್ರಿಶ್ಚಿಯನ್, ಬೆಸ್ತರು ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಚೆರೋಡಿ ಕ್ರಿಶ್ಚಿಯನ್, ದೇವಾಂಗ ಕ್ರಿಶ್ಚಿಯನ್, ಗೊಲ್ಲ ಕ್ರಿಶ್ಚಿಯನ್ ಹೀಗೆ 35 ರಿಂದ 40 ಧರ್ಮ ಮಿಶ್ರಿತ ಜಾತಿಗಳನ್ನು ಗುರುತಿಸಿದ್ದಾರೆ. 2002ರ ಜಾತಿಗಳ ಅಧಿಸೂಚನೆಗೂ ಈಗಿನ ಜಾತಿಗಳ ಸಮೀಕ್ಷೆಗೂ…
ಬೆಂಗಳೂರು: ಬುದ್ದಿಮಾಂದ್ಯತೆ ಹೊಂದಿರುವ ಶೇ. 60ರಷ್ಟು ಜನರು ತಮ್ಮ ಇಳಿವಯಸ್ಸಿನಲ್ಲಿ ಅಲ್ಜೈಮರ್ ಕಾಯಿಲೆಗೆ ಒಳಗಾಗುತ್ತಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ನರವಿಜ್ಞಾನ ಎಪಿಲೆಪ್ಟಾಲಜಿ ಮತ್ತು ಸ್ಲೀಪ್ ಮೆಡಿಸಿನ್ನ ಮುಖ್ಯಸ್ಥ ಮತ್ತು ಸಲಹೆಗಾರ ಡಾ. ಪ್ರಮೋದ್ ಕೃಷ್ಣನ್ ಹೇಳಿದ್ದಾರೆ. “ವಿಶ್ವ ಅಲ್ಜೈಮರ್ ದಿನ”ದ ಪ್ರಯುಕ್ತ ಮಣಿಪಾಲ್ ಆಸ್ಪತ್ರೆ ಹಾಗೂ ರೋಚೆ ಡಯಾಗ್ನೋಸ್ಟಿಕ್ಸ್ ಇಂಡಿಯಾ ಸಹಯೋಗದೊಂದಿಗೆ ಆಯೋಜಿಸಿದ್ದ #MemoryVault ಅಭಿಯಾನದ ಭಾಗವಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು. ನಾವು ನೋಡಿದ ಎಲ್ಲಾ ಬುದ್ಧಿಮಾಂದ್ಯತೆಯ ರೋಗಿಗಳಲ್ಲಿ ಶೇ.60 ರಷ್ಟು ಜನರು ಆಲ್ಝೈಮರ್ ಕಾಯಿಲೆಗೆ ತುತ್ತಾಗಿದ್ದಾರೆ, ಇದರಲ್ಲಿ ಶೇ.70 ಕ್ಕಿಂತ ಹೆಚ್ಚು ಜನರು 2-3 ವರ್ಷಗಳ ರೋಗಲಕ್ಷಣದ ಕಂಡು ಬಂದ ಬಳಿಕ ಆಸ್ಪತ್ರೆಗೆ ಬರುತ್ತಿದ್ದಾರೆ ಎಂದು ಹೇಳಿದರು. “ಅಲ್ಜೈಮರ್ ರೋಗಲಕ್ಷಣಗಳನ್ನು ಮೊದಲೇ ಗುರುತಿಸುವುದರಿಂದ ಅದನ್ನು ಚಿಕಿತ್ಸೆಮಾಡಲು ಅವಕಾಶ ದೊರೆಯಲಿದೆ. CSF ಬಯೋಮಾರ್ಕರ್ಗಳಂತಹ ನಿಖರ ಪರೀಕ್ಷೆ ನಡೆಸಿ, ಸೂಕ್ತ ಚಿಕಿತ್ಸೆ ನೀಡುವ ಮೂಲಕ ರೋಗವನ್ನು ನಿಧಾನಗೊಳಿಸುವ ಜೊತೆಗೆ ರೋಗಿಯ ಜೀವನದ ಗುಣಮಟ್ಟವನ್ನು ಸುಧಾರಿಸಬಹುದು. ARDSI ಅಧ್ಯಕ್ಷೆ ರೇಣು ವೋಹ್ರಾ ಮಾತನಾಡಿ, ಅಲ್ಜೈಮರ್…
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ; ಈ ಆಯೋಗವನ್ನು ಆಯೋಗದಲ್ಲಿ ಇರುವವರೇ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ ಟ್ಯಾಗ್ ನೀಡಿರುವುದನ್ನು ರದ್ದು ಮಾಡಬೇಕೆಂದು ಬಿಜೆಪಿ ನಿಯೋಗ ಒತ್ತಾಯಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಿನ್ನೆ ಪ್ರಾರಂಭವಾಗಿದೆ. ಈ ಸಮೀಕ್ಷೆ ಒಂದು ಗೊಂದಲದ ಗೂಡು ಎಂದು ಟೀಕಿಸಿದರು. ಇದು ಹಿಂದುತ್ವ ವಿರೋಧ ನೀತಿ ಎಂದು ಆರೋಪಿಸಿದರು. ಗೊಂದಲ ಪರಿಹರಿಸಲು ಕೋರಿ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಬ್ರಾಹ್ಮಣ ಕ್ರೈಸ್ತರು, ಲಿಂಗಾಯತ ಕ್ರೈಸ್ತರು, ಒಕ್ಕಲಿಗ, ವೀರಶೈವ ಮೊದಲಾದ ಎಲ್ಲರನ್ನೂ ಕ್ರೈಸ್ತ ಎಂದು ಹೆಸರಿಸಿದ್ದಾರೆ. ಹೊಲೆಯ, ಮಾದಿಗ, ಬಂಜಾರ ಕ್ರೈಸ್ತ, ಬೋವಿ ಕ್ರೈಸ್ತ ಎಲ್ಲವನ್ನೂ ಸೇರಿಸಿದ್ದರು ಎಂದು ಆಕ್ಷೇಪಿಸಿದರು. ಹೋರಾಟಗಳು ನಡೆದು ಪ್ರಭಾವಿ…
ದಕ್ಷಿಣ ಕನ್ನಡ: ಮಹೇಶ್ ಶೆಟ್ಟಿ ತಿಮರೋಡಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಮಾಡಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿಗೆ ಗಡಿಪಾರು ಮಾಡಿ ಎಸಿ ಆದೇಶಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ 32ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿದ್ದಾರೆ. ಈ ಹಿನ್ನಲೆಯಲ್ಲಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಎಸಿ ಸ್ಟೆಲ್ಲಾ ವರ್ಗೀಸ್ ಆದೇಶಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಎಸಿ ಸ್ಟೆಲ್ಲಾ ವರ್ಗೀಸ್ ಅವರು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಿದ್ದಾರೆ.
ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಲ್ಲ ರಾಜ್ಯಗಳ ಗಮನಕ್ಕೆ ತಂದೇ ಜಿಎಸ್ಟಿ ಸುಧಾರಣೆ ತಂದಿದೆ. ರಾಜ್ಯದಲ್ಲಿ ತೆರಿಗೆ ಏರಿಕೆಯಾಗಿದ್ದರೆ, ಕೇಂದ್ರ ಸರ್ಕಾರ ತೆರಿಗೆ ಕಡಿಮೆ ಮಾಡಿ ಜನರಿಗೆ ಆರ್ಥಿಕ ಚೈತನ್ಯ ನೀಡಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯದಶಮಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಜಿಎಸ್ಟಿಯನ್ನು ಸರಳೀಕರಣ ಮಾಡಿ ಜನರಿಗೆ ಕೊಡುಗೆ ನೀಡಿದ್ದಾರೆ. ಶೇ.18 ರ ತೆರಿಗೆಯನ್ನು ಶೇ.5 ಕ್ಕೆ ತಂದಿದ್ದಾರೆ. ಕೆಲವು ಸರಕು, ಸೇವೆಗಳಲ್ಲಿ ತೆರಿಗೆ ವಿನಾಯಿತಿ ನೀಡಿದ್ದಾರೆ. ನಾನು ಆರ್ಥಿಕ ಸ್ಥಾಯಿ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದು, ಇಷ್ಟು ದೊಡ್ಡ ಮಟ್ಟದಲ್ಲಿ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿದಿರಲಿಲ್ಲ. ಮಧ್ಯಮವರ್ಗ ಹಾಗೂ ಬಡಜನರ ಪರವಾಗಿ ನಾನು ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ರೈತರು ಬಳಕೆ ಮಾಡುವ ಟ್ರ್ಯಾಕ್ಟರ್, ರಸಗೊಬ್ಬರ, ಹನಿ ನೀರಾವರಿ ಉಪಕರಣಗಳ ತೆರಿಗೆಯನ್ನು ಶೇ.5 ರ ವ್ಯಾಪ್ತಿಗೆ ತರಲಾಗಿದೆ. ಯುಪಿಎ ಅವಧಿಯಲ್ಲಿ ಎಲ್ಲ ಸರಕು, ಸೇವೆಗಳ ಮೇಲೆ ಶೇ.30 ರಷ್ಟು ತೆರಿಗೆ ಇತ್ತು.…