Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಮಾಜಿ ಸಹಾಯಕ ಬಿಭವ್ ಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯವು ತಿರಸ್ಕೃತಗೊಳಿಸಿದೆ. ವಾದಗಳು ಮುಗಿದ ನಂತರ, ಬಿಭವ್ ಕುಮಾರ್ ಅವರನ್ನು ಸಂಜೆ 4.15ಕ್ಕೆ ಬಂಧಿಸಲಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು. ಈ ಮೊದಲು ಆದೇಶವನ್ನು ಕಾಯ್ದಿರಿಸಲಾಗಿತ್ತು. ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ವೈಯಕ್ತಿಕ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮಲಿವಾಲ್ ನೀಡಿದ ದೂರಿನ ನಂತರ ದೆಹಲಿ ಪೊಲೀಸರು ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಮೇ 13 ರಂದು ಮುಖ್ಯಮಂತ್ರಿ ನಿವಾಸಕ್ಕೆ ಹೋದಾಗ ಬಿಭವ್ ಕುಮಾರ್ ತನ್ನನ್ನು 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ ಮತ್ತು ಎದೆ ಮತ್ತು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರದ ವಿವಿಧ ನಿಗಮ-ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಿ ಆದೇಶಿಸಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಸಂಬಂಧ ಸಿಎಂ ಅಪರ ಮುಖ್ಯಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಸಿಎಸ್ ಬರೆದಿರುವಂತ ಪತ್ರದಲ್ಲಿ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಸರ್ಕಾರದ ವಿವಿಧ ನಿಗಮಗಳು, ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸುವ ಬಗ್ಗೆ ಸಕ್ಷಮ ಪ್ರಾಧಿಕಾರಗಳು ಚುನಾವಣಾ ಆಯೋಗದ ನಿರ್ಣಯದಲ್ಲಿನ ಷರತ್ತುಗಳಿಗೆ ಒಳಪಟ್ಟು, ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. https://kannadanewsnow.com/kannada/karnataka-sslc-exam-2-revised-schedule-released/ https://kannadanewsnow.com/kannada/state-government-exempts-development-works-from-model-code-of-conduct/
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪ್ರಾರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಎನ್ ಮಂಜುಶ್ರೀ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅದರಲ್ಲಿ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ದಿನಾಂಕ:07-06-2024 ರಿಂದ 14-06-2024 ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು, ಸದರಿ ಪರೀಕ್ಷೆ-2ನ್ನು ಮುಂದೂಡಿ ದಿನಾಂಕ14-06-2024 ರಿಂದ 22-06-2024ರವರೆಗೆ ನಡೆಸಲು ತೀರ್ಮಾನಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ ಎಂದಿದ್ದಾರೆ. ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಕ್ರಮವಹಿಸಲು ತಿಳಿಸಿದ್ದಾರೆ. ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರಿಷ್ಕೃತ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಮೂಲತಭೂತ ಸೌಲಭ್ಯ ಕಾಮಗಾರಿಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಸರಕು-ಸೇವೆಗಳ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಗಳನ್ನು ಆಹ್ವಾನಿಸುವುದು, ಟೆಂಡರ್ ಗಳನ್ನು ಅಂತಿಮಗೊಳಿಸುವುದು ಹಾಗೂ ಕಾರ್ಯಾದೇಶಗಳನ್ನು ನೀಡುವ ಕುರಿತ ಪ್ರಸ್ತಾವನೆಗಳಿಗೆ ಮಾದರಿ ನೀತಿ ಸಂಹಿತೆಯಿಂದ ಸಾಮಾನ್ಯ ವಿನಾಯಿತಿ ನೀಡಿ ಆದೇಶಿಸಿದೆ. ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಅವರು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಭಾರತ ಚುನಾವಣಾ ಆಯೋಗದ ಷರತ್ತುಗಳಿಗೆ ಒಳಪಟ್ಟು ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಮೂಲಭೂತ ಸೌಲಭ್ಯ ಕಾಮಗಾರಿಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಸರಕು ಮತ್ತು ಸೇವೆಗಳ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಗಳನ್ನು ಆಹ್ವಾನಿಸೋದಕ್ಕೆ, ಟೆಂಡರ್ ಗಳನ್ನು ಅಂತಿಮಗೊಳಿಸೋದಕ್ಕೆ ಹಾಗೂ ಕಾರ್ಯಾದೇಶಗಳನ್ನು ನೀಡುವ ಕುರಿತ ಪ್ರಸ್ತಾವನೆಗಳಿಗೆ ಸಕ್ಷಮ ಪ್ರಾಧಿಕಾರಗಳು ಆಯೋಗದ ನಿರ್ಣಯದಲ್ಲಿನ ಷರತ್ತುಗಳಿಗೆ ಒಳಪಟ್ಟು ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ…
ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಿರ್ದೇಶನದಡಿ ಕೆಲಸ ಮಾಡುತ್ತಿದೆ ಎಂಬ ಭಾವನೆ ಸಾಮಾನ್ಯ ಜನರಲ್ಲಿ ಬಂದಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ನಗರದ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಂದು ಭೇಟಿ ನೀಡಿ ದೂರು ನೀಡುವ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಇವತ್ತು ಮಹಿಳೆಯರು ವಾಕಿಂಗ್ ಹೋಗಲೂ ಭಯಪಡುವ ಪರಿಸ್ಥಿತಿ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಕ್ರಿಮಿನಲ್ಗಳು ಹತ್ಯೆ ಮಾಡಿ ಬೇರೆಡೆ ಓಡಿ ಹೋಗಿ ಇನ್ನೊಬ್ಬರ ಮೇಲೆ ಹಲ್ಲೆ ನಡೆಸಿ ಸಾರ್ವಜನಿಕರು ಹಿಡಿದು ಕೊಡುವಂಥ ಪರಿಸ್ಥಿತಿ ಬಂದಿದೆ. ಕಾನೂನು- ಸುವ್ಯವಸ್ಥೆ ಹದಗೆಟ್ಟ ಕುರಿತು ಪೊಲೀಸ್ ವರಿಷ್ಠರಿಗೆ ತಿಳಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಭಯಾನಕ ಅಪರಾಧಗಳ ಹೆಚ್ಚಳದ ಕುರಿತು ಗಮನ ಸೆಳೆಯಲಾಗಿದೆ. ಪೊಲೀಸ್ ಇಲಾಖೆಯು ಆಡಳಿತ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿರುವ ಆರೋಪಗಳಿದ್ದು, ಇದನ್ನು ತಪ್ಪಿಸಿ ಸ್ವತಂತ್ರವಾಗಿ ಕೆಲಸ ಮಾಡಲು ಕೋರಲಾಗಿದೆ ಎಂದು ವಿವರಿಸಿದರು. ಡಿ.ವಿ. ಸದಾನಂದಗೌಡ, ಬಿಜೆಪಿ ರಾಜ್ಯ…
ಮೈಸೂರು: ಮನೆಯೊಂದರಲ್ಲಿ ಅನುಮಾನಸ್ಪದವಾಗಿ ದಂಪತಿಗಳಿಬ್ಬರು ಶವವಾಗಿ ಪತ್ತೆಯಾಗಿರುವಂತ ಘಟನೆ ಮೈಸೂರಿನ ಗೊಲ್ಲರ ಬೀದಿಯಲ್ಲಿ ನಡೆದಿದೆ. ಮೈಸೂರಿನ ಗೊಲ್ಲರ ಬೀದಿಯಲ್ಲಿನ ಪ್ರಕಾಶ್ ಹಾಗೂ ಯಶೋಧ ಎನ್ನುವಂತ ಇಬ್ಬರು ದಂಪತಿಗಳು ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಕಾಶ್, ಯಶೋಧ ಸಾವಿಗೆ ನಿಖರವಾದಂತ ಕಾರಣ ತಿಳಿದು ಬಂದಿಲ್ಲ. ಅಲ್ಲದೇ ಅವರ ಮೃತ ದೇಹದ ಮೇಲೆ ಯಾವುದೇ ಗಾಯದ ಗುರುತು ಕೂಡ ಪತ್ತೆಯಾಗಿಲ್ಲ. ಮೈಸೂರಲ್ಲಿ ರಸ್ತೆ ಬದಿಯಲ್ಲಿ ಕ್ಯಾಂಟೀನ್ ಅನ್ನು ಪ್ರಕಾಶ್ ನಡೆಸುತ್ತಿದ್ದರು. ಇತ್ತ ಪತ್ನಿ ಯಶೋಧ ಪ್ಲೋರ್ ಮಿಲ್ ನಡೆಸುತ್ತಿದ್ದರು. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/sinful-brother-kills-brother-by-hitting-him-with-hammer-for-not-giving-him-mobile-phone/ https://kannadanewsnow.com/kannada/one-in-four-people-in-india-attacked-by-cyber-attacks-report/
ಬೆಂಗಳೂರು: ಆನ್ ಲೈನ್ ಗೇಮ್ ಆಡಲು ಮೊಬೈಲ್ ಕೊಡದ ಕಾರಣಕ್ಕೆ ಅಣ್ಣನೇ ತಮ್ಮನನ್ನು ಹತ್ಯೆಗೈದಿರುವಂತ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ. ಬೆಂಗಳೂರಿನ ಹೊರ ವಲಯದ ಸರ್ಜಾಪುರದ ನೆರಿಗಾ ಗ್ರಾಮದ ಶಿವಕುಮಾರ್ (18) ಆನ್ ಲೈನ್ ಗೇಮಿನ ಹುಚ್ಚಿಗೆ ಬಿದ್ದಿದ್ದನು. ಈ ಗೇಮ್ ಆಡೋದಕ್ಕೆ ತಮ್ಮನಾದಂತ ಪ್ರಾಣೇಶ್(15) ಮೊಬೈಲ್ ಕೇಳಿದ್ದಾನೆ. ಆದ್ರೇ ತಮ್ಮ ಪ್ರಾಣೇಶ್ ಮೊಬೈಲ್ ಕೊಟ್ಟಿಲ್ಲ. ಈ ವಿಚಾರವಾಗಿ ತಮ್ಮನ ಮೇಲೆ ಶಿವಕುಮಾರ್ ಸಿಟ್ಟುಗೊಂಡಿದ್ದನು. ತಮ್ಮ ಪ್ರಾಣೇಶ್ ಕೊಲೆ ಮಾಡೋ ಪ್ಲಾನ್ ಮಾಡಿದಂತ ಶಿವಕುಮಾರ್, ನಿರ್ಮಾಣ ಹಂತದ ಕಟ್ಟಡದಿಂದ ಸುತ್ತಿಗೆ ತೆಗೆದುಕೊಂಡು ಹೋಗಿದ್ದಾನೆ. ಪ್ರಾಣೇಶ್ ಬಹಿರ್ದೆಸೆಗೆ ಹೋಗಿದ್ದಾಗ ಆತನ ಮೇಲೆ ದಾಳಿ ಮಾಡಿ ಶಿವಕುಮಾರ್ ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿದ್ದಾನೆ. ಪ್ರಾಣೇಶ್ ಕಾಣದೇ ಇದ್ದ ಬಗ್ಗೆ ಪೋಷಕರು ಹುಡುಕಾಡಿದ್ದಾರೆ. ಆ ಬಗ್ಗೆ ಶಿವಕುಮಾರ್ ನನ್ನು ಕೇಳಿದ್ದಾರೆ. ಆದ್ರೇ ನನಗೇನು ಗೊತ್ತೇ ಇಲ್ಲ ಅನ್ನೋ ಹಾಗೆ ನಟನೆ ಮಾಡಿದ್ದಾನೆ. ಸರ್ಜಾಪುರ ಠಾಣೆಗೆ ದೂರು ನೀಡಿದಾಗ, ನರಿಗಾ ಗ್ರಾಮದ ಹೊರ ವಲಯದಲ್ಲಿ ಪ್ರಾಣೇಶ್ ಶವ ಪತ್ತೆಯಾಗಿದೆ.…
ಶಿವಮೊಗ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25 ನೇ ಸಾಲಿಗೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರಥಮ ಸೆಮಿಷ್ಟರ್ ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಪ್ರಾಂಶುಪಾಲರ ಹಂತದಲ್ಲಿಯೇ ಮೇರಿಟ್ ಹಾಗೂ ರೋಸ್ಟರ್ಗನುಗುಣವಾಗಿ ಮೇ 17 ರಿಂದ 30ರವರೆಗೆ ಅರ್ಜಿ ಸಲ್ಲಿಸುವುದು. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾದವರಿಗೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್-60 ಸೀಟುಗಳು, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್-63 ಸೀಟುಗಳು, ಕಮರ್ಷಿಯಲ್ ಪ್ರಾಕ್ಟಿಸ್ ಕನ್ನಡ (31ಸೀಟುಗಳು) ಮತ್ತು ಇಂಗ್ಲೀಷ್ (32 ಸೀಟುಗಳು), ಅಪರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ (63 ಸೀಟುಗಳು) ಕೋರ್ಸ್ಗಳಿಗೆ ಸೀಟು ಹಂಚಿಕೆ ಮಾಡಲಾಗುವುದು. ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ/ಎನ್ಓಸಿ, 05 ವರ್ಷದ ವ್ಯಾಸಂಗ ಪ್ರಮಾಣ ಪತ್ರ ಕ್ಷೇತ್ರ ಶಿಕ್ಷಣಾಧಿಕಾರಿಗಳವರ ದೃಢೀಕರಿಸಿದ ಸಹಿಯೊಂದಿಗೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 04 ಭಾವಚಿತ್ರವನ್ನು ಸಲ್ಲಿಸಬೇಕು. ದಿನಾಂಕ: 30-05-2024 ರೊಳಗಾಗಿ…
ಬೆಂಗಳೂರು: ಇಂದು ಮೆ ಅಶೋಕ್ ಲೇಲ್ಯಾಂಡ್ ರವರು ನಿರ್ಮಾಣ ಮಾಡಿರುವ 13.5 ಮೀ ಹವಾ ನಿಯಂತ್ರಿತ ಸ್ಲೀಪರ್ ಬಸ್ಸುಗಳನ್ನು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ವೀಕ್ಷಣ ಮಾಡಿದರು. ಈ ವಾಹನದ ಬಗ್ಗೆ ಸಾರಿಗೆ ಸಚಿವರು ಬಸ್ಸಿನ ಒಳಾಂಗಣ ಹಾಗೂ ಹೊರಾಂಗಣವನ್ನು ವೀಕ್ಷಿಸಿ, ಪರಿಶೀಲಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಬಳಿಕ ಮಾತನಾಡಿದಂತ ಅವರು ಈಗಾಗಲೇ ಕೆ ಎಸ್ ಆರ್ ಟಿ ಸಿ ಯಲ್ಲಿ ಇದೇ ಮಾದರಿಯ ನಾನ್ ಎಸಿ ಸ್ಲೀಪರ್ ಬಸ್ಸುಗಳನ್ನು ಪಲ್ಲಕ್ಕಿ ಎಂಬ ಹೆಸರಿನೊಂದಿಗೆ ಪ್ರಾರಂಭಿಸಲಾಗಿದೆ. ಇನ್ನೂ 40 ಬಸ್ಸುಗಳ ಖರೀದಿಗೆ ಈಗಾಗಲೇ ಆದೇಶ ನೀಡಲಾಗಿದೆ. ಈ ಮಾದರಿಯ ಬಸ್ಸುಗಳು ಖಾಸಗಿಯವರೊಂದಿಗೆ ಪೈಪೋಟಿ ನೀಡಲು ಸಾರಿಗೆ ಸಂಸ್ಥೆಗೆ ಅವಶ್ಯಕತೆಯಿದೆ ಎಂದು ಮಾನ್ಯ ಸಚಿವರು ಅಭಿಪ್ರಾಯಿಸಿದರು. ಇತ್ತಿಚಿನ ದಿನಗಳಲ್ಲಿ ಪ್ರಯಾಣಿಕರು ಉತ್ತಮ ದರ್ಜೆಯ ಸೇವೆಯನ್ನು ನಿರೀಕ್ಷಿಸುತ್ತಾರೆ ಎಂದು ತಿಳಿಸಿದರು. ಹೀಗಿದೆ 13.5 ಮೀಟರ್ ಹವಾ ನಿಯಂತ್ರಿತ ಸ್ಲೀಪರ್ ಬಸ್ಸುಗಳ ವಿಶೇಷತೆ ಅಶೋಕ್ ಲೇಲ್ಯಾಂಡ್ ಕಂಪನಿಯು 13.5 ಮೀ ಉದ್ದದ 36 ಬರ್ತ್ ಸಾರ್ಮಥ್ಯವುಳ್ಳ ಹವಾ ನಿಯಂತ್ರಿತ…
ಚಿಕ್ಕಮಗಳೂರು: ನಾನು ಶಿಕ್ಷಕರ ಸಮಸ್ಯೆ ನಿವಾರಣೆಗೆ ಶಿಕ್ಷಕನಾಗಿ ಸದಾ ನಿಮ್ಮೊಂದಿಗೆ ಇರುತ್ತೇನೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ತಮ್ಮನ್ನು ಗೆಲ್ಲಿಸುವಂತೆ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಮನವಿ ಮಾಡಿದರು. ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿ, ಮತಬೇಟೆಯಲ್ಲಿ ತೊಡಗಿ ಟಿಎಂಎಸ್ ಕಾಲೇಜಿನಲ್ಲಿ ಮಾತನಾಡಿದಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ಶಿಕ್ಷಕನಾಗಿ ನಾನು ಎಂದಿಗೂ ಇರುತ್ತೇನೆ. ನಿಮ್ಮ ಬೆಂಬಲದಿಂದ ನನಗೆ ಇಂದು ಮನತುಂಬಿ ಬಂದಿದೆ ಜೂನ್.3ರಂದು ನಡೆಯುವ ಚುನಾವಣೆಯಲ್ಲಿ ಮತ ನೀಡುವ ಮೂಲಕ ನನ್ನನ್ನು ಜಯಶಾಲೆಯನ್ನಾಗಿ ಮಾಡಬೇಕೆಂದು ಕೇಳಿಕೊಂಡರು. ಈ ಬಳಿಕ ಮಾತನಾಡಿದಂತ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು, ನಮ್ಮ ಕಾಂಗ್ರೆಸ್ ಸರ್ಕಾರವು ಶಿಕ್ಷಕರ ಒಳಿತಿಗಾಗಿ ಸದಾ ಚಿಂತಿಸತ್ತದೆ. ನೀವು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಣಕ್ಕೆ ಇಳಿದಿರುವಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಕೆ ಮಂಜುನಾಥ್ ಕುಮಾರ್ ಅವರಿಗೆ ಮತನೀಡಿ ಗೆಲ್ಲಿಸಿ ಕೊಡಬೇಕೆಂದು ಹೇಳಿದರು. ನಿಮ್ಮ ಬೆಂಬಲದಿಂದ ಈಗಾಗಲೇ ಇವರು…