Author: kannadanewsnow09

ಚಿಕ್ಕಮಗಳೂರು: ನಾನು ಶಿಕ್ಷಕರ ಸಮಸ್ಯೆ ನಿವಾರಣೆಗೆ ಶಿಕ್ಷಕನಾಗಿ ಸದಾ ನಿಮ್ಮೊಂದಿಗೆ ಇರುತ್ತೇನೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ತಮ್ಮನ್ನು ಗೆಲ್ಲಿಸುವಂತೆ ಅಭ್ಯರ್ಥಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಮನವಿ ಮಾಡಿದರು. ಇಂದು ಚಿಕ್ಕಮಗಳೂರಿಗೆ ಭೇಟಿ ನೀಡಿ, ಮತಬೇಟೆಯಲ್ಲಿ ತೊಡಗಿ ಟಿಎಂಎಸ್ ಕಾಲೇಜಿನಲ್ಲಿ ಮಾತನಾಡಿದಂತ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಅವರು, ಶಿಕ್ಷಕನಾಗಿ ನಾನು ಎಂದಿಗೂ ಇರುತ್ತೇನೆ. ನಿಮ್ಮ ಬೆಂಬಲದಿಂದ ನನಗೆ ಇಂದು ಮನತುಂಬಿ ಬಂದಿದೆ ಜೂನ್.3ರಂದು ನಡೆಯುವ ಚುನಾವಣೆಯಲ್ಲಿ ಮತ ನೀಡುವ ಮೂಲಕ ನನ್ನನ್ನು ಜಯಶಾಲೆಯನ್ನಾಗಿ ಮಾಡಬೇಕೆಂದು ಕೇಳಿಕೊಂಡರು. ಈ ಬಳಿಕ ಮಾತನಾಡಿದಂತ  ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು, ನಮ್ಮ ಕಾಂಗ್ರೆಸ್ ಸರ್ಕಾರವು ಶಿಕ್ಷಕರ ಒಳಿತಿಗಾಗಿ ಸದಾ ಚಿಂತಿಸತ್ತದೆ. ನೀವು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಕಣಕ್ಕೆ ಇಳಿದಿರುವಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ಕೆ ಮಂಜುನಾಥ್ ಕುಮಾರ್ ಅವರಿಗೆ ಮತನೀಡಿ ಗೆಲ್ಲಿಸಿ ಕೊಡಬೇಕೆಂದು ಹೇಳಿದರು. ನಿಮ್ಮ ಬೆಂಬಲದಿಂದ  ಈಗಾಗಲೇ  ಇವರು…

Read More

ಬೆಂಗಳೂರು: ಕರ್ನಾಟಕ ರಾಜ್ಯ ಈ ವರ್ಷ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು ಕುಡಿಯುವ ನೀರಿನ ಪರಿಸ್ಥಿತಿಯ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಗ್ರಾಮೀಣ ನೀರು ಸರಬರಾಜು ಇಲಾಖೆಯು ಪ್ರತಿನಿತ್ಯ ಸಮಸ್ಯೆಯ ಬಗ್ಗೆ ನಿಗಾ ವಹಿಸುತ್ತಿದ್ದು, ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆದ್ಯತೆ ಮೇಲೆ ಕ್ರಮ ಕೈಗೊಂಡಿದ್ದು, ಅವಶ್ಯವಿರುವ ಕಡೆ ಕುಡಿಯುವ ನೀರಿನ ಕಾಮಗಾರಿ ನಡೆಸಲು ಕ್ರಮಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳಿಗೆ ಸಂಬಂಧಿಸಿದ 26106 ಗ್ರಾಮಗಳ ಪೈಕಿ 2207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದ್ದು, ಅದರಲ್ಲಿ 548 ಗ್ರಾಮಗಳಿಗೆ 846 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ ಮತ್ತು 1659 ಗ್ರಾಮಗಳಿಗೆ ನೀರು ಸರಬರಾಜು ಕಲ್ಪಿಸಲು 2098 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆಯಲಾಗಿದೆ…

Read More

ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತ ಡಾ.ಕೆ ಕೆ ಮಂಜುನಾಥ್ ಕುಮಾರ್ ಅವರು ನಾಳೆ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿದ್ದಾರೆ. ನಾಳೆ ಕಾಫಿನಾಡಿನಲ್ಲಿ ಮತಬೇಟೆಯಲ್ಲಿ ತೊಡಗಲಿದ್ದಾರೆ. ನಾಳೆ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಕೆ ಮಂಜುನಾಥ್ ಕುಮಾರ್ ರವರ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿರುವಂತ ಅವರು, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾ ಘೋಷ್ಠಿಯನ್ನು ನೆಡೆಸಲಿದ್ದಾರೆ. ನಾಳೆ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಚಿಕ್ಕಮಗಳೂರಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಮತಯಾಚನೆಯ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ಚಿಕ್ಕಮಗಳೂರಿನ ನಾಳೆಯ ಪ್ರಚಾರ ಸಭೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದಂತ ಕೆ.ಜೆ ಜಾರ್ಜ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರು, ಶಾಸಕರು, ಜಿಲ್ಲಾ ಪದಾಧಿಕಾರಿಗಳು ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿ ನಡೆದಿರೋ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡಬೇಡಿ. ನಾವು ಈ ಕೇಸಲ್ಲಿ ಕಠಿಣ ನಿಲುವು ತೆಗೆದುಕೊಂಡಿದ್ದೇವೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಗರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವಂತ ಅವರು,ವಿಪಕ್ಷ ನಾಯಕರಾದ ಆರ್.ಅಶೋಕ್ ಅವರೇ.. ಹೆಣ್ಣು ಭ್ರೂಣ ಹತ್ಯೆ ವಿಚಾರದಲ್ಲಿ ರಾಜಕೀಯ ಬೇಡ ಎಂದು ನಾನು ಲೇಖನದ ರೂಪದಲ್ಲಿ ನಿಮ್ಮ ಅಂಕಣಕ್ಕೆ ಉತ್ತರಿಸಿದ್ದೇನೆ. ಆದರೂ, ನೀವು ಮತ್ತೆ ಇದರಲ್ಲಿ ರಾಜಕಾರಣದ ಮಾತನ್ನಾಡಿದ್ದೀರಿ. ಸರ್ಕಾರವಾಗಿ ನಾವು ಭ್ರೂಣ ಹತ್ಯೆ ವಿಚಾರದಲ್ಲಿ ಎಷ್ಟು ಕಠಿಣ ನಿಲುವನ್ನು ತೆಗೆದುಕೊಳ್ಳುತ್ತಿದ್ದೇವೆ ಎಂಬುದು ನಮ್ಮ ಕಾರ್ಯಾಚರಣೆಗಳೇ ಸ್ಪಷ್ಟಪಡಿಸುತ್ತವೆ. ನಾವು ಹೆಚ್ಚು ಕಾರ್ಯಚರಣೆ ಮಾಡುತ್ತಿರುವುದರಿಂದಲೇ ಇಂದು ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂಬ ವಾಸ್ತವ ಸಂಗತಿ ತಮಗೆ ಅರಿವಿರಲಿ ಎಂಬುದಾಗಿ ತಿಳಿಸಿದ್ದಾರೆ. ಈ ಜಾಲವನ್ನ ಗೃಹ ಸಚಿವರಾಗಿದ್ದ ತಾವು ಎಷ್ಟರ ಮಟ್ಟಿಗೆ ಭೇಧಿಸಿದ್ದಿರಿ ಎಂಬುದಕ್ಕೆ ನಿಮ್ಮ ಬಳಿ ಉತ್ತರವಿಲ್ಲ. ನಿಮ್ಮ ಕಾಲದಲ್ಲಿ…

Read More

ಮುಂಬೈ : ದೇಶದಾದ್ಯಂತ ಇರುವ ಕ್ರೀಡಾ ಉತ್ಸಾಹಿಗಳಿಗೆ ಜಿಯೋದಿಂದ ಹೊಸ ಹಾಗೂ ರೋಮಾಂಚಕ ಡಿಜಿಟಲ್ ಅನುಭವವನ್ನು ಪರಿಚಯಿಸಲಾಗಿದೆ. ಜಿಯೋಏರ್ ಫೈಬರ್, ಜಿಯೋಫೈಬರ್ ಹಾಗೂ ಜಿಯೋ ಮೊಬಿಲಿಟಿ ಪ್ರೀಪ್ರೇಯ್ಡ್ ಗ್ರಾಹಕರು ಇದೀಗ ‘ಫ್ಯಾನ್ ಕೋಡ್’ ಎಂಬ ಪ್ರೀಮಿಯಂ ಕ್ರೀಡಾ ಒಟಿಟಿ ಅಪ್ಲಿಕೇಷನ್ ಗೆ ಕಾಂಪ್ಲಿಮೆಂಟರಿ ಸಬ್ ಸ್ಕ್ರಿಪ್ಷನ್ ಪಡೆಯಬಹುದು. ಈಗಿನ ಆಫರ್ ಮೂಲಕವಾಗಿ ಜಿಯೋ ಗ್ರಾಹಕರು ರೋಮಾಂಚಕವಾದ ಮತ್ತು ಕ್ರೀಡೆಯಲ್ಲಿಯೇ ಅತ್ಯುತ್ತಮವಾದ ನೇರಪ್ರಸಾರದ ಅನುಭವವನ್ನು ಪಡೆಯಲಿದ್ದೀರಿ. ಇದರಲ್ಲಿ ಫ್ಯಾನ್ ಕೋಡ್ ನ ಎಕ್ಸ್ ಕ್ಲೂಸಿಬ್ ಫಾರ್ಮುಲಾ ಒನ್ ಪ್ರಸಾರದ ಕಂಟೆಂಟ್ ಸಂಪರ್ಕ ಸಹ ಪಡೆಯಬಹುದು. ಆದರೆ ಇಲ್ಲಿ ನೆನಪಿಟ್ಟುಕೊಳ್ಳಬೇಕಾದ ಸಂಗತಿ ಏನೆಂದರೆ, ಜಿಯೋಏರ್ ಫೈಬರ್, ಜಿಯೋಫೈಬರ್ ಮತ್ತು ಜಿಯೋ ಮೊಬಿಲಿಟಿಯ ಆಯ್ದ ಅರ್ಹ ಗ್ರಾಹಕರಿಗೆ ಮಾತ್ರ ಈ ಕಾಂಪ್ಲಿಮೆಂಟರಿ ಪ್ಲಾನ್ ಅನ್ವಯಿಸುತ್ತವೆ. ಜಿಯೋಏರ್ ಫೈಬರ್ ಮತ್ತು ಜಿಯೋಫೈಬರ್ ಗ್ರಾಹಕರು 1199 ರೂಪಾಯಿ ಮತ್ತು ಮೇಲ್ಪಟ್ಟ ಪ್ಲಾನ್ ಗೆ ಸಬ್ ಸ್ಕ್ರಿಪ್ಷನ್ ಪಡೆದಾಗ ಕಾಂಪ್ಲಿಮೆಂಟರಿ ಆಗಿ ಫ್ಯಾನ್ ಕೋಡ್ ಪಡೆಯುವುದಕ್ಕೆ ಅರ್ಹರು. ಅದೇ ರೀತಿ…

Read More

ನವದೆಹಲಿ: 2024 ರ ಟಿ 20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರನ್ನು ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಆಯ್ಕೆ ಮಾಡುವ ಸ್ಪರ್ಧೆಯು ಆಸಕ್ತಿದಾಯಕ ತಿರುವು ಪಡೆದುಕೊಂಡಿದೆ. ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರನ್ನು ಉನ್ನತ ಹುದ್ದೆಗೇರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಂಪರ್ಕಿಸಿದೆ ಎಂದು ವರದಿಯಾಗಿದೆ. ಇಎಸ್ಪಿಎನ್ ಕ್ರಿಕ್ಇನ್ಫೋ ವರದಿಯ ಪ್ರಕಾರ ರಾಷ್ಟ್ರೀಯ ತಂಡದ ತರಬೇತುದಾರನಾಗಬೇಕೆಂಬ ಬಿಸಿಸಿಐನ ಆಯ್ಕೆ ಪಟ್ಟಿಯಲ್ಲಿ ಗಂಭೀರ್ ಅಗ್ರಸ್ಥಾನದಲ್ಲಿದ್ದಾರೆ. ಮತ್ತು ಮೇ 26 ರಂದು ನಡೆಯಲಿರುವ 2024 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ನಂತರ ಆಡಳಿತ ಮಂಡಳಿ 2011 ರ ವಿಶ್ವಕಪ್ ವಿಜೇತರೊಂದಿಗೆ ಹೆಚ್ಚಿನ ಚರ್ಚೆ ನಡೆಸುವ ನಿರೀಕ್ಷೆಯಿದೆ. ಗಂಭೀರ್ ಪ್ರಸ್ತುತ 2024 ರ ಐಪಿಎಲ್ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ನ ಮಾರ್ಗದರ್ಶಕರಾಗಿದ್ದಾರೆ. ಈ ಋತುವಿಗೆ ಮುಂಚಿತವಾಗಿ ಫ್ರಾಂಚೈಸಿಗೆ ಗಂಭೀರ್ ಅವರ ಆಗಮನವು ಫ್ರಾಂಚೈಸಿಯ ನಂಬಲಾಗದ ಪುನರುಜ್ಜೀವನದ ಹಿಂದಿನ ಪ್ರಮುಖ ಕಾರಣವಾಗಿದೆ. ಶ್ರೇಯಸ್ ಅಯ್ಯರ್ ನೇತೃತ್ವದ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಮಳೆ ಮುಂಜಾಗ್ರತಾ ಕ್ರಮ, ರಸ್ತೆ ಗುಂಡಿ ಮುಚ್ಚುವುದು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ವೀಡಿಯೋ ಸಂವಾದದ ಮೂಲಕ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ರಸ್ತೆ ಗುಂಡಿಗಳನ್ನು ಗುರುತಿಸಿ ತ್ವರಿತಗತಿಯಲ್ಲಿ ಮುಚ್ಚಬೇಕೆಂದು ಸೂಚಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಬರುವ 8 ವಲಯಗಳ ವಲಯ ಆಯುಕ್ತರು ರಸ್ತೆ ಗುಂಡಿಗಳು ಬಿದ್ದಿರುವದನ್ನು ಪರಿಶೀಲಿಸಿ ಕೂಡಲೆ ರಸ್ತೆಗುಂಡಿಗಳನ್ನು ಮುಚ್ಚಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಸರಿಯಾಗಿ ಡಾಂಬರು ಮಿಶ್ರಣ ವ್ಯವಸ್ಥೆ ಮಾಡುವ ಏಜೆನ್ಸಿಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಎಷ್ಟು ಡಾಂಬರು ಅವಶ್ಯಕತೆಯಿದೆ ಎಂಬುದನ್ನು ಏಜೆನ್ಸಿಗಳಿಗೆ ತಿಳಿಸಿ ಅವಶ್ಯಕ ಡಾಂಬರು ಪಡೆದು ಕೂಡಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಬೇಕೆಂದು…

Read More

ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ನಡೆಸಲು ನಿಗದಿ ಪಡಿಸಿದ್ದಂತ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. ಇಂದು ಶಾಲಾ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ವಿಭಾಗದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಅದರಲ್ಲಿ 2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು (+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು DO:15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು ಎಂದಿದ್ದಾರೆ. ಸದರಿ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ವಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ -02ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು. ಸದರಿ ಪರೀಕ್ಷೆಯ…

Read More

ಬೆಂಗಳೂರು: ಹಾಸನದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ವೈರಲ್ ಕೇಸ್ ಗೆ ಬಿಗ್ ಟ್ವಿಸ್ಟನ್ನು ಎಸ್ಐಟಿ ಅಧಿಕಾರಿಗಳ ವಶದಲ್ಲಿರುವಂತ ವಕೀಲ ದೇವರಾಜೇಗೌಡ ನೀಡಿದ್ದಾರೆ. ಅದೇ ಅಶ್ಲೀಲ ವೀಡಿಯೋ ವೈರಲ್ ಕೇಸ್ ಹಿಂದೆ ಇರೋದೇ ಡಿಕೆ ಶಿವಕುಮಾರ್. ಈ ವೀಡಿಯೋ ವೈರಲ್ ಮಾಡೋದಕ್ಕಾಗಿ ನನಗೆ 100 ಕೋಟಿ ಆಫರ್ ನೀಡಿದ್ರು. 5 ಕೋಟಿ ಅಡ್ವಾನ್ ಕೂಡ ಕೊಡೋದಕ್ಕೆ ಬಂದಿದ್ರು ಅಂತ ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೋರ್ಟ್ ಗೆ ಹಾಜರಾದಂತ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ವೈರಲ್ ಹಿಂದೆ ಡಿಕೆ ಶಿವಕುಮಾರ್ ಕೈವಾಡವಿದೆ. ಮೋದಿ, ಬಿಜೆಪಿ, ಹೆಚ್ ಡಿ ಕುಮಾರಸ್ವಾಮಿಗೆ ಕೆಟ್ಟ ಹೆಸರು ತರೋದಕ್ಕೆ ನನಗೆ 100 ಕೋಟಿ ಆಫರ್ ನೀಡಿದ್ರು ಅಂತ ಗಂಭೀರ ಆರೋಪ ಮಾಡಿದ್ದಾರೆ. ಡಿಕೆಶಿ ನನಗೆ ಕರೆದು ದೊಡ್ಡ ಮಟ್ಟದ ಆಫರ್ ನೀಡಿದ್ರು. ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಹಂಚಿದ್ದಾರೆ ಅಂತ ಹೇಳೋದಕ್ಕೆ ನನಗೆ ಡಿ.ಕೆ ಶಿವಕುಮಾರ್…

Read More

ಶಿವಮಗ್ಗ : ಖಾಸಗಿ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಕೆರೆಯ ಹೋಳು ಹಾಗೂ ಮಣ್ಣನ್ನು ಸೂಕ್ತ ಪ್ರಾಧಿಕಾರದ ಅನುಮತಿ ಇಲ್ಲದೆ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕೆರೆ ಹೂಳು ಹಾಗೂ ಮಣ್ಣಿನ ಅನಧಿಕೃತ ಸಾಗಾಣಿಕೆ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸುವುದಾಗಿ ಸೂಚಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ-ಖಾಸಗಿ ಕಾಮಗಾರಿಗಳಿಗೆ, ಕೆರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ ಇತರೆ ಕೆರೆಯ ಹೂಳು ಎತ್ತುವಳಿ ಕಾಮಗಾರಿಗಳಿಗೆ  ಕೆರೆಯ ಮಣ್ಣನ್ನು ಉಪಯೋಗಿಸಲು ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳಾದ ಸಣ್ಣ ಮತ್ತು ಭಾರಿ ನೀರಾವರಿ ಇಲಾಖೆ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆ,  ಗ್ರಾಮ ಪಂಚಾಯತ್‌ಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು. ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳು ಅರ್ಜಿಯನ್ನು ಪರಿಶೀಲಿಸಿ, ಕೆರೆ ಪ್ರದೇಶದಲ್ಲಿ ಎತ್ತುವಳಿ ಮಾಡಬಹುದಾದ ಹೂಳು/ಮಣ್ಣಿನ ಅಂದಾಜು…

Read More