Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: 2024 ರ ಟಿ 20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರನ್ನು ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಆಯ್ಕೆ ಮಾಡುವ ಸ್ಪರ್ಧೆಯು ಆಸಕ್ತಿದಾಯಕ ತಿರುವು ಪಡೆದುಕೊಂಡಿದೆ. ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರನ್ನು ಉನ್ನತ ಹುದ್ದೆಗೇರಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಂಪರ್ಕಿಸಿದೆ ಎಂದು ವರದಿಯಾಗಿದೆ. ಇಎಸ್ಪಿಎನ್ ಕ್ರಿಕ್ಇನ್ಫೋ ವರದಿಯ ಪ್ರಕಾರ ರಾಷ್ಟ್ರೀಯ ತಂಡದ ತರಬೇತುದಾರನಾಗಬೇಕೆಂಬ ಬಿಸಿಸಿಐನ ಆಯ್ಕೆ ಪಟ್ಟಿಯಲ್ಲಿ ಗಂಭೀರ್ ಅಗ್ರಸ್ಥಾನದಲ್ಲಿದ್ದಾರೆ. ಮತ್ತು ಮೇ 26 ರಂದು ನಡೆಯಲಿರುವ 2024 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫೈನಲ್ ನಂತರ ಆಡಳಿತ ಮಂಡಳಿ 2011 ರ ವಿಶ್ವಕಪ್ ವಿಜೇತರೊಂದಿಗೆ ಹೆಚ್ಚಿನ ಚರ್ಚೆ ನಡೆಸುವ ನಿರೀಕ್ಷೆಯಿದೆ. ಗಂಭೀರ್ ಪ್ರಸ್ತುತ 2024 ರ ಐಪಿಎಲ್ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ನ ಮಾರ್ಗದರ್ಶಕರಾಗಿದ್ದಾರೆ. ಈ ಋತುವಿಗೆ ಮುಂಚಿತವಾಗಿ ಫ್ರಾಂಚೈಸಿಗೆ ಗಂಭೀರ್ ಅವರ ಆಗಮನವು ಫ್ರಾಂಚೈಸಿಯ ನಂಬಲಾಗದ ಪುನರುಜ್ಜೀವನದ ಹಿಂದಿನ ಪ್ರಮುಖ ಕಾರಣವಾಗಿದೆ. ಶ್ರೇಯಸ್ ಅಯ್ಯರ್ ನೇತೃತ್ವದ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆರ್ಟಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಮಳೆ ಮುಂಜಾಗ್ರತಾ ಕ್ರಮ, ರಸ್ತೆ ಗುಂಡಿ ಮುಚ್ಚುವುದು ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ವೀಡಿಯೋ ಸಂವಾದದ ಮೂಲಕ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ಮಳೆ ಪ್ರಾರಂಭವಾಗಿದ್ದು, ರಸ್ತೆ ಗುಂಡಿಗಳನ್ನು ಗುರುತಿಸಿ ತ್ವರಿತಗತಿಯಲ್ಲಿ ಮುಚ್ಚಬೇಕೆಂದು ಸೂಚಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಬರುವ 8 ವಲಯಗಳ ವಲಯ ಆಯುಕ್ತರು ರಸ್ತೆ ಗುಂಡಿಗಳು ಬಿದ್ದಿರುವದನ್ನು ಪರಿಶೀಲಿಸಿ ಕೂಡಲೆ ರಸ್ತೆಗುಂಡಿಗಳನ್ನು ಮುಚ್ಚಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ಸರಿಯಾಗಿ ಡಾಂಬರು ಮಿಶ್ರಣ ವ್ಯವಸ್ಥೆ ಮಾಡುವ ಏಜೆನ್ಸಿಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಎಷ್ಟು ಡಾಂಬರು ಅವಶ್ಯಕತೆಯಿದೆ ಎಂಬುದನ್ನು ಏಜೆನ್ಸಿಗಳಿಗೆ ತಿಳಿಸಿ ಅವಶ್ಯಕ ಡಾಂಬರು ಪಡೆದು ಕೂಡಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಬೇಕೆಂದು…
ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ನಡೆಸಲು ನಿಗದಿ ಪಡಿಸಿದ್ದಂತ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶಿಸಿದೆ. ಇಂದು ಶಾಲಾ ಶಿಕ್ಷಣ ಇಲಾಖೆಯ ಪ್ರೌಢ ಶಿಕ್ಷಣ ವಿಭಾಗದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ಅದರಲ್ಲಿ 2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು (+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು DO:15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು ಎಂದಿದ್ದಾರೆ. ಸದರಿ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ವಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ -02ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು. ಸದರಿ ಪರೀಕ್ಷೆಯ…
ಬೆಂಗಳೂರು: ಹಾಸನದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ವೈರಲ್ ಕೇಸ್ ಗೆ ಬಿಗ್ ಟ್ವಿಸ್ಟನ್ನು ಎಸ್ಐಟಿ ಅಧಿಕಾರಿಗಳ ವಶದಲ್ಲಿರುವಂತ ವಕೀಲ ದೇವರಾಜೇಗೌಡ ನೀಡಿದ್ದಾರೆ. ಅದೇ ಅಶ್ಲೀಲ ವೀಡಿಯೋ ವೈರಲ್ ಕೇಸ್ ಹಿಂದೆ ಇರೋದೇ ಡಿಕೆ ಶಿವಕುಮಾರ್. ಈ ವೀಡಿಯೋ ವೈರಲ್ ಮಾಡೋದಕ್ಕಾಗಿ ನನಗೆ 100 ಕೋಟಿ ಆಫರ್ ನೀಡಿದ್ರು. 5 ಕೋಟಿ ಅಡ್ವಾನ್ ಕೂಡ ಕೊಡೋದಕ್ಕೆ ಬಂದಿದ್ರು ಅಂತ ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ಇಂದು ಕೋರ್ಟ್ ಗೆ ಹಾಜರಾದಂತ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ವೈರಲ್ ಹಿಂದೆ ಡಿಕೆ ಶಿವಕುಮಾರ್ ಕೈವಾಡವಿದೆ. ಮೋದಿ, ಬಿಜೆಪಿ, ಹೆಚ್ ಡಿ ಕುಮಾರಸ್ವಾಮಿಗೆ ಕೆಟ್ಟ ಹೆಸರು ತರೋದಕ್ಕೆ ನನಗೆ 100 ಕೋಟಿ ಆಫರ್ ನೀಡಿದ್ರು ಅಂತ ಗಂಭೀರ ಆರೋಪ ಮಾಡಿದ್ದಾರೆ. ಡಿಕೆಶಿ ನನಗೆ ಕರೆದು ದೊಡ್ಡ ಮಟ್ಟದ ಆಫರ್ ನೀಡಿದ್ರು. ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಹಂಚಿದ್ದಾರೆ ಅಂತ ಹೇಳೋದಕ್ಕೆ ನನಗೆ ಡಿ.ಕೆ ಶಿವಕುಮಾರ್…
ಶಿವಮಗ್ಗ : ಖಾಸಗಿ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಕೆರೆಯ ಹೋಳು ಹಾಗೂ ಮಣ್ಣನ್ನು ಸೂಕ್ತ ಪ್ರಾಧಿಕಾರದ ಅನುಮತಿ ಇಲ್ಲದೆ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕೆರೆ ಹೂಳು ಹಾಗೂ ಮಣ್ಣಿನ ಅನಧಿಕೃತ ಸಾಗಾಣಿಕೆ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸುವುದಾಗಿ ಸೂಚಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ-ಖಾಸಗಿ ಕಾಮಗಾರಿಗಳಿಗೆ, ಕೆರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ ಇತರೆ ಕೆರೆಯ ಹೂಳು ಎತ್ತುವಳಿ ಕಾಮಗಾರಿಗಳಿಗೆ ಕೆರೆಯ ಮಣ್ಣನ್ನು ಉಪಯೋಗಿಸಲು ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳಾದ ಸಣ್ಣ ಮತ್ತು ಭಾರಿ ನೀರಾವರಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಗ್ರಾಮ ಪಂಚಾಯತ್‌ಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು. ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳು ಅರ್ಜಿಯನ್ನು ಪರಿಶೀಲಿಸಿ, ಕೆರೆ ಪ್ರದೇಶದಲ್ಲಿ ಎತ್ತುವಳಿ ಮಾಡಬಹುದಾದ ಹೂಳು/ಮಣ್ಣಿನ ಅಂದಾಜು…
ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಯ ಅಭಾವ ಇರುವುದರಿಂದ ಒಣಗಿರುವ ಮರಗಳು ಬುಡ ಸಮೇತ ಬೀಳುತ್ತಿದ್ದು, ಮರಗಳ ಹಸಿ ರೆಂಬೆಗಳು ಸಹ ಆಕಸ್ಮಿಕವಾಗಿ ಮುರಿದು ಬೀಳುತ್ತಿರುವುದು ವರದಿಯಾಗುತ್ತಿರುತ್ತವೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿರುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೆ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಬೆಂಗಳೂರು ನಗರದ ಸಾರ್ವಜನಿಕರುಗಳು ತಮ್ಮ ಪ್ರದೇಶಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಬಿಬಿಎಂಪಿ ಅರಣ್ಯ ಇಲಾಖೆಯ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ(ವಾಟ್ಸ್ ಅಪ್ ಫೋಟೋ ಲಗತ್ತಿಸಿ) ಮಾಹಿತಿ ನೀಡಲು ಕೋರಿದೆ. ಉಚಿತವಾಗಿ ಸಸಿಗಳ ವಿತರಣೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ಘಟಕ ವತಿಯಿಂದ ಪರಿಸರ ಕಾಳಜಿ ಉತ್ತೇಜಿಸಲು ಉಚಿತವಾಗಿ ಸಸಿಗಳನ್ನು ಸಾರ್ವಜನಿಕರಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ವಿತರಿಸುತ್ತಿದ್ದು, ಈ ಕೆಳಕಂಡ ಸಸಸ್ಯಕ್ಷೇತ್ರಗಳನ್ನು ಸಂಪರ್ಕಿಸಿ, ಅರ್ಜಿ ನೀಡಿ ಗಿಡಗಳನ್ನು ಪಡೆಯಬಹುದಾಗಿರುತ್ತದೆ…
ಬೆಂಗಳೂರು : “ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ಬಗ್ಗೆ ಮಾಧ್ಯಮಗಳು ಕೇಳಿದಾಗ ಪ್ರತಿಕ್ರಿಯಿಸಿದ ಅವರು, “ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಜನರಿಗೆ ವಿವರಿಸಿದ್ದೇವೆ. ಜನರು ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ” ಎಂದರು. ಇಂದು ಅಧಿಕಾರಿಗಳ ಜತೆ ನಡೆದ ಸಭೆ ಬಗ್ಗೆ ಕೇಳಿದಾಗ, “ಬರಗಾಲ, ಕುಡಿಯುವ ನೀರು, ಮೇವಿನ ಸಮಸ್ಯೆ ಮತ್ತಿತರ ವಿಚಾರಗಳ ಬಗ್ಗೆ ಅಧಿಕಾರಿಗಳ ಜತೆ ಪರಿಶೀಲನಾ…
ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಾಗಿ ನಡೆಸುವಂತ ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಭ್ಯರ್ಥಿಗಳ ಮನವಿಯ ಮೇರೆಗೆ 2024ನೇ ಸಾಲಿನ ಎರಡನೇ ವರ್ಷದ, ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕಾಗಿ ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತಿದೆ ಎಂದಿದೆ. ಇಲ್ಲಿಯವರೆಗೆ ನೋಂದಣಿ ಮಾಡದೇ ಇರುವ ಅರ್ಹ ಡಿಪ್ಲೋಮಾ ಅಭ್ಯರ್ಥಿಗಳು 20-05-2024ರ ಬೆಳಿಗ್ಗೆ 11 ಗಂಟೆಯಿಂದ 23-05-2024ರ ರಾತ್ರಿ 11.59ರವರೆಗೆ ನೋಂದಣಿ ಮಾಡಿ, ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಿ, 24-05-2024ರೊಳೆಗೆ ಶುಲ್ಕವನ್ನು ಪಾವತಿಸುವಂತೆ ತಿಳಿಸಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ಗೆ ಭೇಟಿ ನೀಡಿ, ಪಡೆಯುವಂತೆ ತಿಳಿಸಿದೆ. https://kannadanewsnow.com/kannada/making-student-life-blurred-is-also-a-guarantee-suresh-kumar-on-govts-one-year-achievements/ https://kannadanewsnow.com/kannada/three-children-who-had-gone-for-a-swim-in-ramanagara-drowned/
ಬೆಂಗಳೂರು: 5, 8, 9ನೇ ತರಗತಿಗಳ ಮೌಲ್ಯಮಾಪನ, ಬೋರ್ಡ್ ಎಕ್ಸಾಮ್ ಮಾಡುವುದಾಗಿ ಸರಕಾರ ಹೊರಟಿದೆ. ಮಕ್ಕಳು, ಪೋಷಕರು, ಶಾಲಾ ಮುಖ್ಯಸ್ಥರ ಜೊತೆ ಸಂವಾದ ಮಾಡಿ ಉದ್ದೇಶ ಸ್ಪಷ್ಟಗೊಳಿಸದೇ ನ್ಯಾಯಾಲಯದ ವರೆಗೆ ಪ್ರಕರಣ ಹೋಗಿತ್ತು. ವಿದ್ಯಾರ್ಥಿ ಜೀವನ ಮಸಕು ಮಾಡುವುದೂ ಒಂದು ಗ್ಯಾರಂಟಿ ಎಂದು ಈ ಸರಕಾರ ಭಾವಿಸಿದೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ಟೀಕಿಸಿದರು. ಈ ಕುರಿತು ಮಾತನಾಡಿದ ಅವರು, ನ್ಯಾಯಾಲಯದ ತಡೆಯಾಜ್ಞೆ, ಅದರ ತೆರವು, ಪರೀಕ್ಷೆ ದಿನ ಪ್ರಕಟಿಸುವುದು- ಹೀಗೆ ನಡೆದು ಈಗ ಫಲಿತಾಂಶ ಪ್ರಕಟಿಸಿಲ್ಲ. ಎಳೆ ಮಕ್ಕಳ ಮನಸ್ಥಿತಿ, ಪೋಷಕರ ಆತಂಕವನ್ನು ಗಣನೆಗೇ ತೆಗೆದುಕೊಂಡಿಲ್ಲ. ಈ ಮಕ್ಕಳಿಗೆ ಮತ ಇಲ್ಲದ ಕಾರಣ ಹೀಗೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಜೊತೆ ಚೆಲ್ಲಾಟ, ಅವರ ಜೀವನವನ್ನು ಅಂಧಕಾರಕ್ಕೆ ಒಯ್ಯುತ್ತಿದ್ದಾರೆ. ಮಕ್ಕಳ ಆತಂಕ ನಿವಾರಣೆ, ವಿಷಾದ ವ್ಯಕ್ತಪಡಿಸುವುದು, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಈ ಸರಕಾರದ ಶಿಕ್ಷಣ ಸಚಿವರಿಂದ ಆಗಿಲ್ಲ ಎಂದ ಅವರು, ನಮ್ಮ ರಾಜ್ಯದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಅತ್ಯಂತ…
ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕೊಟ್ಟಿರುವಂತ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೇ ಬದಲಾವಣೆಯಿಲ್ಲ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡುವುದನ್ನು ರದ್ದು ಪಡಿಸಲಾಗುತ್ತಿದೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು. ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಯಾವ ಕಾರಣ ಮತ್ತು ಉದ್ದೇಶದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ? ಗ್ರೇಸ್ ಮಾರ್ಕ್ಸ್ ನೀಡಲು ಯಾರು ಹೇಳಿದ್ದು ಎಂಬುದಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಡಿಸಿಎಂ ಮಾತಿಗೆ ಸಿಎಂ ಸಿದ್ಧರಾಮಯ್ಯ ಕೂಡ ಸಹಮತ ವ್ಯಕ್ತ ಪಡಿಸಿದರು. ವಿದ್ಯಾರ್ಥಿಗಳು ಅವರ ಅರ್ಹತೆ…