Author: kannadanewsnow09

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಿಜೆಪಿ ಅವಧಿಯ ಕೋವಿಡ್ ಹಗರಣ ಸಂಬಂಧ ಎಸ್ಐಟಿ ತನಿಖಾ ತಂಡ ರಚನೆ ಬಗ್ಗೆ ನಿರ್ಧರಿಸಲಾಗಿತ್ತು. ಅಲ್ಲದೇ ಸಂಪುಟ ಉಪ ಸಮಿತಿಯನ್ನು ರಚಿಸುವಂತ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅದರಂತೆ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಿ ಆದೇಶಿಸಿದ್ದಾರೆ. ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸಿದ್ಧರಾಮಯ್ಯ ಅವರು ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ನಡೆದಿರುವ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ರವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿಯನ್ನು ನೀಡಿದೆ. ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಲಾಗಿದ್ದು, ಅದರ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮಾನ್ಯ ಉಪ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಈ ಕೆಳಗಿನಂತೆ…

Read More

ನವದೆಹಲಿ: ನರೇಂದ್ರ ಮೋದಿ ಸರ್ಕಾರ ಗುರುವಾರ ‘ಹಿಜ್ಬ್-ಉತ್-ತಹ್ರಿರ್’ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. “ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿ ಜಿ ಅವರ ನೀತಿಯನ್ನು ಅನುಸರಿಸಿ, ಗೃಹ ಸಚಿವಾಲಯವು ಇಂದು ‘ಹಿಜ್ಬ್-ಉತ್-ತಹ್ರಿರ್’ ಅನ್ನು ‘ಭಯೋತ್ಪಾದಕ ಸಂಘಟನೆ’ ಎಂದು ಘೋಷಿಸಿದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಮಾಜಿಕ ವೇದಿಕೆ ಎಕ್ಸ್ನಲ್ಲಿ ಪ್ರಕಟಿಸಿದ್ದಾರೆ. “ಈ ಸಂಘಟನೆಯು ವಂಚಕ ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ತೀವ್ರಗಾಮಿಗಳನ್ನಾಗಿ ಮಾಡುವುದು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಹಣವನ್ನು ಸಂಗ್ರಹಿಸುವುದು. ರಾಷ್ಟ್ರೀಯ ಭದ್ರತೆ ಮತ್ತು ಭಾರತದ ಸಾರ್ವಭೌಮತ್ವಕ್ಕೆ ಗಂಭೀರ ಬೆದರಿಕೆಯನ್ನುಂಟು ಮಾಡುವುದು ಸೇರಿದಂತೆ ವಿವಿಧ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದೆ. ಭಯೋತ್ಪಾದನೆಯ ಶಕ್ತಿಗಳನ್ನು ಉಕ್ಕಿನ ಮುಷ್ಟಿಯಿಂದ ಎದುರಿಸುವ ಮೂಲಕ ಭಾರತವನ್ನು ಭದ್ರಪಡಿಸಲು ಮೋದಿ ಸರ್ಕಾರ ಬದ್ಧವಾಗಿದೆ” ಎಂದು ಸಚಿವರು ಹೇಳಿದರು. ಗೆಜೆಟ್ ಅಧಿಸೂಚನೆಯಲ್ಲಿ, ಗೃಹ ಸಚಿವಾಲಯ (ಎಂಎಚ್ಎ) ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳು, ಸುರಕ್ಷಿತ ಅಪ್ಲಿಕೇಶನ್ಗಳನ್ನು ಬಳಸುವ ಮೂಲಕ ಮತ್ತು ಮೋಸಗಾರ ಯುವಕರನ್ನು ಭಯೋತ್ಪಾದಕ ಕೃತ್ಯಗಳಲ್ಲಿ…

Read More

ರಾಮನಗರ/ಚನ್ನಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಗುರುವಾರ ಕಾರ್ಯಕರ್ತರ ಸಭೆಗೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯೋಗೇಶ್ವರ್ ಅವರಿಗೆ ಅಥವಾ ಇನ್ನಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜತೆ ಒಪ್ಪಂದವಾಗಿರಲಿಲ್ಲ ಎಂಬ ಅಂಶವನ್ನು ಇಟ್ಟಿ ಹೇಳಿದರು. ಚುನಾವಣೆ ಸಮೀಪಿಸುತ್ತಿದೆ. ಆವತ್ತು ಏನೇನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ ಎಂದು ಸಚಿವರು ಹೇಳಿದರು. ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ ಸಿಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು. ಅದಕ್ಕೂ ಮೊದಲು ನಾನು ಸಿ.ಪಿ.ಯೋಗೇಶ್ವರ್ ಅವರೇ ಗ್ರಾಮಾಂತರ ಕ್ಷೇತ್ರಕ್ಕೆ ಅಭ್ಯರ್ಥಿ ಆಗಬೇಕು…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಹಗರಣಗಳಲ್ಲಿ ಕ್ಲೀನ್ ಚಿಟ್ ಪಡೆಯಲು ಎಸ್‍ಐಟಿ, ಸಿಐಡಿಯನ್ನು ನೇಮಿಸುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇ.ಡಿ. ಬರದೆ ಇದ್ದಲ್ಲಿ ವಾಲ್ಮೀಕಿ ನಿಗಮದ ಹಗರಣ ಮುಚ್ಚಿ ಹೋಗುತ್ತಿತ್ತು. ಸಿಬಿಐಗೆ ಹೋದಾಗ, ಅದರಲ್ಲಿ ಹಣಕಾಸು ಅವ್ಯವಹಾರ (ಮನಿ ಲಾಂಡರಿಂಗ್) ಇದೆ ಎಂದು ಗೊತ್ತಾದಾಗ ಇ.ಡಿ. ತನಿಖೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು. 187 ಕೋಟಿ ಅವ್ಯವಹಾರ ನಡೆದುದು ನಿಜ. ಆದರೆ, ಕೇವಲ 87 ಕೋಟಿ ಅವ್ಯವಹಾರ ಆಗಿದೆ ಎಂದು ಮುಖ್ಯಮಂತ್ರಿಯವರು ಅವತ್ತೇ ಹೇಳಿದ್ದರು. ಸತ್ಯ ಒಪ್ಪಿಕೊಂಡ ಮೇಲೆ ಕ್ರಮ ಆಗಿರಲಿಲ್ಲ. ಕದ್ದ ಮಾಲು ವಾಪಸ್ ಕೊಟ್ಟರೆ ಕೇಸ್ ಖುಲಾಸೆ ಆಗುತ್ತದೆಯೇ ಎಂದು ಪ್ರಶ್ನಿಸಿದರು. ಇದರಲ್ಲಿ 20 ಕೋಟಿ ಹಣವನ್ನು ತುಕಾರಾಂ ಅವರ ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ನಾಗೇಂದ್ರರ ವೈಯಕ್ತಿಕ ವೆಚ್ಚವಾಗಿ ಹಣ ಖರ್ಚಾದುದರ ಕುರಿತು ಇ.ಡಿ. ವರದಿಯಲ್ಲಿ ಉಲ್ಲೇಖವಿದೆ…

Read More

ಬೆಂಗಳೂರು: ಬರುವ ಕೆಲವು ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನ ನಡೆಯುವ ಒಳಗೆ ನೂತನ ಮುಖ್ಯಮಂತ್ರಿ ಬರಲಿದ್ದಾರೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಸಿಸಿ ಮಾತನಾಡಿದ ಅವರು, ಮೊನ್ನೆ ನಡೆದ ಹರಿಯಾಣ ರಾಜ್ಯದ ಚುನಾವಣೆ ಬಿಜೆಪಿ ಜಯದಿಂದ ಹೊಸ ಹುರುಪು ಬಂದಿದೆ. ಜಮ್ಮು ಕಾಶ್ಮೀರ ರಾಜ್ಯದಲ್ಲಿ 29 ಸ್ಥಾನಗಳನ್ನು ಗೆಲುವು ಸಾಧಿಸುವ ಮೂಲಕ ಮುಂಬರುವ ಮಹಾರಾಷ್ಟ್ರ ರಾಜ್ಯ ವಿಧಾನಸಭೆ ಚುನಾವಣೆಯ ಗೆಲುವಿನ ಮುನ್ಸೂಚನೆ ಇದು ಎಂದು ವಿಶ್ಲೇಷಿಸಿದರು. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರ ಕೋಮಾದಲ್ಲಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಗುದ್ದಲಿ ಪೂಜೆ ನೆರವೇರುತ್ತಿಲ್ಲ. ಭ್ರಷ್ಟಾಚಾರ ಸಾಬೀತಾಗಿ ನಿವೇಶನ ಮರಳಿ ಕೊಟ್ಟು ತಪ್ಪು ಒಪ್ಪಿಕೊಂಡು ಹಾಗೇ ಮುಖ್ಯಮಂತ್ರಿಯವರು ರಾಜೀನಾಮೆ ಕೊಡುತ್ತಾರೆ ಎಂದು ತಿಳಿಸಿದರು. ಸರ್ಕಾರದ ಜಿಲ್ಲಾ ಸಚಿವರು ಬೆಂಗಳೂರು, ಸ್ವಗೃಹ ಎಂದು ಆರಾಮವಾಗಿ ಅಡ್ಡಾಡುತ್ತಿದ್ದಾರೆ, ಜಿಲ್ಲಾವಾರು…

Read More

ಬೆಂಗಳೂರು: ಕೆ.ಆರ್.ಡಿ.ಎಲ್ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ಆಗಿದ್ದು, ತೆಲಂಗಾಣ ಚುನಾವಣೆಗೆ ಆ ಹಣವನ್ನು ಬಳಸಿಕೊಂಡ ಆರೋಪವಿದೆ. ಇದನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಮತ್ತು ಅಜಯ್ ಸಿಂಗ್ ಇದನ್ನು ಮಾಡುತ್ತಿದ್ದು, ನನಗೆ ಬಂದ ಮಾಹಿತಿ ಪ್ರಕಾರ ಇವರಿಬ್ಬರು ಸೇರಿ ಬಿಡುಗಡೆಯಾದ ಹಣದಲ್ಲಿ ಶೇ 40 ಕಮಿಷನ್ ತೆಗೆದುಕೊಂಡಿದ್ದಾರೆ. ತೆಲಂಗಾಣ ಚುನಾವಣೆಗೆ ಸುಮಾರು 500 ಕೋಟಿ ಕೊಟ್ಟ ಆಪಾದನೆ ಕೇಳಿಬಂದಿದೆ ಎಂದು ಆರೋಪಿಸಿದರು. ಅಲ್ಲಿರುವ ಎಸ್‍ಇಪಿ, ಟಿಎಸ್‍ಪಿ ಹಣ ಕೂಡ ಇದೇರೀತಿ ನುಂಗಲಾಗಿದೆ. ರಸ್ತೆ, ಅಭಿವೃದ್ಧಿ ಆಗದೆ ಇದ್ದರೂ ಹಣ ಖರ್ಚಾಗಿದೆ ಎಂದು ಟೀಕಿಸಿದರು. ಒತ್ತಡ ಹಾಕಿ ಕೆಲಸ ಆಗಿದೆ ಎಂದು ತಿಳಿಸಿ ಹಣ ಪಡೆದಿದ್ದಾರೆ. ಕೆ.ಆರ್.ಡಿ.ಎಲ್‍ಗೆ ಕೇಳಿದರೆ ಅವರ ಬಳಿ ಹಣ ಇಲ್ಲ; ಎಂಎಲ್‍ಎಗಳು ಕ್ರಿಯಾ ಯೋಜನೆ ಇಲ್ಲದೆ ಬಿಲ್ ಮಾಡಿಕೊಂಡು ಹೋದುದಾಗಿ ತಿಳಿಸುತ್ತಾರೆ…

Read More

ಓಂ ಶ್ರೀ ಗುರುಭ್ಯೋ ನಮಃ ‌ ‌ ‌ ‌ ‌ ‌ ‌ ಶ್ರೀ ಗೌರೀ ಅಷ್ಟೋತ್ತರ ಶತನಾಮಾವಲಿಃ ಓಂ ಮಹಾಮನೋನ್ಮಣೀಶಕ್ತ್ಯೈ ನಮಃ । ಓಂ ಶಿವಶಕ್ತ್ಯೈ ನಮಃ । ಓಂ ಶಿವಂಕರ್ಯೈ ನಮಃ । ಓಂ ಇಚ್ಛಾಶಕ್ತಿ ಕ್ರಿಯಾಶಕ್ತಿ ಜ್ಞಾನಶಕ್ತಿ ಸ್ವರೂಪಿಣ್ಯೈ ನಮಃ । ಓಂ ಶಾನ್ತ್ಯತೀತ ಕಲಾನನ್ದಾಯೈ ನಮಃ । ಓಂ ಶಿವಮಾಯಾಯೈ ನಮಃ । ಓಂ ಶಿವಪ್ರಿಯಾಯೈ ನಮಃ । ಓಂ ಸರ್ವಜ್ಞಾಯೈ ನಮಃ । ಓಂ ಸುನ್ದರ್ಯೈ ನಮಃ । ಓಂ ಸೌಮ್ಯಾಯೈ ನಮಃ । 10 । ಓಂ ಸಚ್ಚಿದಾನನ್ದರೂಪಿಣ್ಯೈ ನಮಃ । ಓಂ ಪರಾಪರಾಮಯ್ಯೈ ನಮಃ । ಓಂ ಬಾಲಾಯೈ ನಮಃ । ಓಂ ತ್ರಿಪುರಾಯೈ ನಮಃ । ಓಂ ಕುಂಡಲ್ಯೈ ನಮಃ । ಓಂ ಶಿವಾಯೈ ನಮಃ । ಓಂ ರುದ್ರಾಣ್ಯೈ ನಮಃ । ಓಂ ವಿಜಯಾಯೈ ನಮಃ । ಓಂ ಸರ್ವಾಯೈ ನಮಃ । ಓಂ ಶರ್ವಾಣ್ಯೈ ನಮಃ…

Read More

ಬೆಂಗಳೂರು: ಕಳೆದ ಆರು ದಿನಗಳಿಂದ ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ನೌಕಕರು ಹೂಡಿದ್ದ ಮುಷ್ಕರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ತೆಗೆದುಕೊಂಡ ನಿರ್ಧಾರಗಳಿಂದ ಸುಖಾಂತ್ಯವಾಗಿದೆ. ಹೀಗಾಗಿ ನಾಳೆಯಿಂದ ಎಂದಿನಂತೆ ಕಚೇರಿ ಕಾರ್ಯಗಳಲ್ಲಿ ನಿರತರಾಗುವುದಾಗಿ ನೌಕರ ಸಂಘದ ಪ್ರತಿನಿಧಿಗಳು ಘೋಷಿಸಿದರು. ನೌಕರರ ಮಹಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳ ಸುಮಾರು 300ಕ್ಕೂ ಹೆಚ್ಚು ಪ್ರತಿನಿಧಿಗಳು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ತಮ್ಮ ಬೇಢೀಕೆಗಳನ್ನು ಸಚಿವರ ಮುಂದಿರಿಸಿದರು, ಸುಮಾರು 75ಕ್ಕೂ ಹೆಚ್ಚು ಬೇಡಿಕೆಗಳನ್ನು ಮೂರು ಗಂಟೆಗಳ ಕಾಲ ಆಲಿಸಿದ ಸಚಿವರು ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಾಗಬುದಾದ ಎಲ್ಲ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಆದ್ಯತೆಯ ಮೇಲೆ ಈಡೇರಿಸುವುದಾಗಿ ತಿಳಿಸಿದರು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಬಡ್ತಿ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ನೌಕರರ ಸಂಘದ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವುದಾಗಿ ಪ್ರಕಟಿಸಿದ ಸಚಿವರು ಮೂರು ತಿಂಗಳ ಕಾಲಮಿತಿಯೊಳಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು. ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ…

Read More

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯವಾದಂತ ಸಿಗಂದೂರು ಚೌಡೇಶ್ವರಿ ತಾಯಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ತಾಯಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ಅಕ್ಟೋಬರ್.8ರಿಂದ ಆರಂಭಗೊಂಡಿದ್ದು, ಅಕ್ಟೋಬರ್.12ರವರೆಗೆ ನಡೆಯಲಿದೆ. ಇಂದು ಸಾಗರ ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವಂತ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ಸ್ಯಾಂಡಲ್ ವುಡ್ ನಟ ಪ್ರೇಮ್ ಕುಟುಂಬ ಸಮೇತ ದೇವಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ವಿಶೇಷ ಪೂಜೆಯನ್ನು ಚೌಡೇಶ್ವರಿ ದೇವಿಗೆ ಸಲ್ಲಿಸಿದರು. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/good-news-for-state-government-employees-special-permission-to-vote-on-association-elections/ https://kannadanewsnow.com/kannada/good-news-for-property-owners-in-bengaluru-e-khata-to-be-available-at-bengaluru-one-centre-soon/

Read More

ಬೆಂಗಳೂರು: ಕರ್ನಾಟಕದ ಭಾರತೀಯ ಜನತಾ ಪಕ್ಷದ ನಾಯಕರು ಛಲವಾದಿ ನಾರಾಯಣಸ್ವಾಮಿ ರವರಿಗೆ ಹೊಸಕೋಟೆ CA ನಿವೇಶನದ ಬಿರಿಯಾನಿ ಹೋಟೆಲ್ ಹಗರಣ ಕುರಿತು ಸ್ಪಷ್ಟಕಾರಣ ನೀಡಿಲ್ಲ. ವಿರೋಧ ಪಕ್ಷದ ನಾಯಕ ಸ್ಥಾನವನ್ನು ಕಲ್ಪಿಸಿ, ಇದುವರಿಗೆ ಅವರ ಮೇಲೆ ಬಂದಿರುವ ಆರೋಪಗಳಿಗೆ ಸಾರ್ವಜನಿಕವಾಗಿ ಭಾರತೀಯ ಜನತಾ ಪಕ್ಷ ಉತ್ತರ ನೀಡಲು ಸಾಧ್ಯವಾಗಿಲ್ಲ. ಚಲವಾದಿ ನಾರಾಯಣಸ್ವಾಮಿ ರವರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುವ ಬದಲು ಇವರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಸಹಕರಿಸಿ ಅವರ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾರಾದರ್ಶಕವಾದ ತನಿಖೆಗೆ ಅವಕಾಶ ಕಲ್ಪಿಸಿ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಆಗ್ರಹಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಭಾರತೀಯ ಜನತಾ ಪಕ್ಷದ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ರವರು ಈ ದಿನ ಪತ್ರಿಕಾಗೋಷ್ಠಿ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಗಳಾದ…

Read More