Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮಗ್ಗ : ಖಾಸಗಿ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಕೆರೆಯ ಹೋಳು ಹಾಗೂ ಮಣ್ಣನ್ನು ಸೂಕ್ತ ಪ್ರಾಧಿಕಾರದ ಅನುಮತಿ ಇಲ್ಲದೆ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕೆರೆ ಹೂಳು ಹಾಗೂ ಮಣ್ಣಿನ ಅನಧಿಕೃತ ಸಾಗಾಣಿಕೆ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸುವುದಾಗಿ ಸೂಚಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ-ಖಾಸಗಿ ಕಾಮಗಾರಿಗಳಿಗೆ, ಕೆರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ ಇತರೆ ಕೆರೆಯ ಹೂಳು ಎತ್ತುವಳಿ ಕಾಮಗಾರಿಗಳಿಗೆ ಕೆರೆಯ ಮಣ್ಣನ್ನು ಉಪಯೋಗಿಸಲು ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳಾದ ಸಣ್ಣ ಮತ್ತು ಭಾರಿ ನೀರಾವರಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಗ್ರಾಮ ಪಂಚಾಯತ್‌ಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು. ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳು ಅರ್ಜಿಯನ್ನು ಪರಿಶೀಲಿಸಿ, ಕೆರೆ ಪ್ರದೇಶದಲ್ಲಿ ಎತ್ತುವಳಿ ಮಾಡಬಹುದಾದ ಹೂಳು/ಮಣ್ಣಿನ ಅಂದಾಜು…
ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಳೆಯ ಅಭಾವ ಇರುವುದರಿಂದ ಒಣಗಿರುವ ಮರಗಳು ಬುಡ ಸಮೇತ ಬೀಳುತ್ತಿದ್ದು, ಮರಗಳ ಹಸಿ ರೆಂಬೆಗಳು ಸಹ ಆಕಸ್ಮಿಕವಾಗಿ ಮುರಿದು ಬೀಳುತ್ತಿರುವುದು ವರದಿಯಾಗುತ್ತಿರುತ್ತವೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿರುತ್ತದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೆ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ. ಬೆಂಗಳೂರು ನಗರದ ಸಾರ್ವಜನಿಕರುಗಳು ತಮ್ಮ ಪ್ರದೇಶಗಳಲ್ಲಿ ಒಣಗಿರುವ/ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಬಿಬಿಎಂಪಿ ಅರಣ್ಯ ಇಲಾಖೆಯ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ(ವಾಟ್ಸ್ ಅಪ್ ಫೋಟೋ ಲಗತ್ತಿಸಿ) ಮಾಹಿತಿ ನೀಡಲು ಕೋರಿದೆ. ಉಚಿತವಾಗಿ ಸಸಿಗಳ ವಿತರಣೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅರಣ್ಯ ಘಟಕ ವತಿಯಿಂದ ಪರಿಸರ ಕಾಳಜಿ ಉತ್ತೇಜಿಸಲು ಉಚಿತವಾಗಿ ಸಸಿಗಳನ್ನು ಸಾರ್ವಜನಿಕರಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ವಿತರಿಸುತ್ತಿದ್ದು, ಈ ಕೆಳಕಂಡ ಸಸಸ್ಯಕ್ಷೇತ್ರಗಳನ್ನು ಸಂಪರ್ಕಿಸಿ, ಅರ್ಜಿ ನೀಡಿ ಗಿಡಗಳನ್ನು ಪಡೆಯಬಹುದಾಗಿರುತ್ತದೆ…
ಬೆಂಗಳೂರು : “ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ಬಗ್ಗೆ ಮಾಧ್ಯಮಗಳು ಕೇಳಿದಾಗ ಪ್ರತಿಕ್ರಿಯಿಸಿದ ಅವರು, “ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ಜಾರಿ ಮಾಡಲಿದೆ ಎಂದು ಜನರಿಗೆ ವಿವರಿಸಿದ್ದೇವೆ. ಜನರು ನಮ್ಮ ಯೋಜನೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ” ಎಂದರು. ಇಂದು ಅಧಿಕಾರಿಗಳ ಜತೆ ನಡೆದ ಸಭೆ ಬಗ್ಗೆ ಕೇಳಿದಾಗ, “ಬರಗಾಲ, ಕುಡಿಯುವ ನೀರು, ಮೇವಿನ ಸಮಸ್ಯೆ ಮತ್ತಿತರ ವಿಚಾರಗಳ ಬಗ್ಗೆ ಅಧಿಕಾರಿಗಳ ಜತೆ ಪರಿಶೀಲನಾ…
ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಾಗಿ ನಡೆಸುವಂತ ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಭ್ಯರ್ಥಿಗಳ ಮನವಿಯ ಮೇರೆಗೆ 2024ನೇ ಸಾಲಿನ ಎರಡನೇ ವರ್ಷದ, ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕಾಗಿ ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶವನ್ನು ನೀಡಲಾಗುತ್ತಿದೆ ಎಂದಿದೆ. ಇಲ್ಲಿಯವರೆಗೆ ನೋಂದಣಿ ಮಾಡದೇ ಇರುವ ಅರ್ಹ ಡಿಪ್ಲೋಮಾ ಅಭ್ಯರ್ಥಿಗಳು 20-05-2024ರ ಬೆಳಿಗ್ಗೆ 11 ಗಂಟೆಯಿಂದ 23-05-2024ರ ರಾತ್ರಿ 11.59ರವರೆಗೆ ನೋಂದಣಿ ಮಾಡಿ, ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಿ, 24-05-2024ರೊಳೆಗೆ ಶುಲ್ಕವನ್ನು ಪಾವತಿಸುವಂತೆ ತಿಳಿಸಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ https://kea.kar.nic.in ಗೆ ಭೇಟಿ ನೀಡಿ, ಪಡೆಯುವಂತೆ ತಿಳಿಸಿದೆ. https://kannadanewsnow.com/kannada/making-student-life-blurred-is-also-a-guarantee-suresh-kumar-on-govts-one-year-achievements/ https://kannadanewsnow.com/kannada/three-children-who-had-gone-for-a-swim-in-ramanagara-drowned/
ಬೆಂಗಳೂರು: 5, 8, 9ನೇ ತರಗತಿಗಳ ಮೌಲ್ಯಮಾಪನ, ಬೋರ್ಡ್ ಎಕ್ಸಾಮ್ ಮಾಡುವುದಾಗಿ ಸರಕಾರ ಹೊರಟಿದೆ. ಮಕ್ಕಳು, ಪೋಷಕರು, ಶಾಲಾ ಮುಖ್ಯಸ್ಥರ ಜೊತೆ ಸಂವಾದ ಮಾಡಿ ಉದ್ದೇಶ ಸ್ಪಷ್ಟಗೊಳಿಸದೇ ನ್ಯಾಯಾಲಯದ ವರೆಗೆ ಪ್ರಕರಣ ಹೋಗಿತ್ತು. ವಿದ್ಯಾರ್ಥಿ ಜೀವನ ಮಸಕು ಮಾಡುವುದೂ ಒಂದು ಗ್ಯಾರಂಟಿ ಎಂದು ಈ ಸರಕಾರ ಭಾವಿಸಿದೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ಟೀಕಿಸಿದರು. ಈ ಕುರಿತು ಮಾತನಾಡಿದ ಅವರು, ನ್ಯಾಯಾಲಯದ ತಡೆಯಾಜ್ಞೆ, ಅದರ ತೆರವು, ಪರೀಕ್ಷೆ ದಿನ ಪ್ರಕಟಿಸುವುದು- ಹೀಗೆ ನಡೆದು ಈಗ ಫಲಿತಾಂಶ ಪ್ರಕಟಿಸಿಲ್ಲ. ಎಳೆ ಮಕ್ಕಳ ಮನಸ್ಥಿತಿ, ಪೋಷಕರ ಆತಂಕವನ್ನು ಗಣನೆಗೇ ತೆಗೆದುಕೊಂಡಿಲ್ಲ. ಈ ಮಕ್ಕಳಿಗೆ ಮತ ಇಲ್ಲದ ಕಾರಣ ಹೀಗೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಜೊತೆ ಚೆಲ್ಲಾಟ, ಅವರ ಜೀವನವನ್ನು ಅಂಧಕಾರಕ್ಕೆ ಒಯ್ಯುತ್ತಿದ್ದಾರೆ. ಮಕ್ಕಳ ಆತಂಕ ನಿವಾರಣೆ, ವಿಷಾದ ವ್ಯಕ್ತಪಡಿಸುವುದು, ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಈ ಸರಕಾರದ ಶಿಕ್ಷಣ ಸಚಿವರಿಂದ ಆಗಿಲ್ಲ ಎಂದ ಅವರು, ನಮ್ಮ ರಾಜ್ಯದ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಅತ್ಯಂತ…
ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕೊಟ್ಟಿರುವಂತ ಗ್ರೇಸ್ ಮಾರ್ಕ್ಸ್ ನಲ್ಲಿ ಯಾವುದೇ ಬದಲಾವಣೆಯಿಲ್ಲ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಕೊಡುವುದನ್ನು ರದ್ದು ಪಡಿಸಲಾಗುತ್ತಿದೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಚರ್ಚೆ ನಡೆಯಿತು. ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಯಾವ ಕಾರಣ ಮತ್ತು ಉದ್ದೇಶದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದೀರಿ? ಗ್ರೇಸ್ ಮಾರ್ಕ್ಸ್ ನೀಡಲು ಯಾರು ಹೇಳಿದ್ದು ಎಂಬುದಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಡಿಸಿಎಂ ಮಾತಿಗೆ ಸಿಎಂ ಸಿದ್ಧರಾಮಯ್ಯ ಕೂಡ ಸಹಮತ ವ್ಯಕ್ತ ಪಡಿಸಿದರು. ವಿದ್ಯಾರ್ಥಿಗಳು ಅವರ ಅರ್ಹತೆ…
ಧನ, ಹೆಸರು, ಕೀರ್ತಿ, ಅಂತಸ್ತು ಮುಂತಾದ ಸಕಲ ಭಾಗ್ಯಗಳನ್ನು ಪಡೆಯಲು ಬ್ರಾಹ್ಮೀ ಮುಹೂರ್ತದ ಸಮಯದಲ್ಲಿ ಮಾತ್ರ ಈ ಲಕ್ಷ್ಮೀ ಮಂತ್ರವನ್ನು 21 ದಿನಗಳ ಕಾಲ ಪಠಿಸಿ. ನೀವು ಎಂದಿಗೂ ನಿರೀಕ್ಷಿಸದ ಸಂಪತ್ತು ಮತ್ತು ಸಮೃದ್ಧಿಯ ಜೀವನವನ್ನು ನೀವು ಬದುಕಬಹುದು. ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಹಣ, ಹೆಸರು, ಕೀರ್ತಿ, ಅಂತಸ್ತು ಹೀಗೆ ಎಲ್ಲರ ಮುಂದೆ ಗೌರವದಿಂದ ಬಾಳಲು ಬಯಸುತ್ತಾರೆ ಮತ್ತು ಅದಕ್ಕಾಗಿ ನಾವು ಪ್ರತಿದಿನ ಮಾಡಬಹುದಾದ ಎಲ್ಲಾ ಕೆಲಸಗಳು ಪ್ರಯತ್ನ ಮತ್ತು ಹೋರಾಟವಾಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ಎಲ್ಲರೂ ಈ ರೀತಿ ಬದುಕಲು ಸಾಧ್ಯವಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ…
ದಕ್ಷಿಣ ಕನ್ನಡ: ಜಿಲ್ಲೆಯ ಹೆಸರಾಂತ ಸ್ವ-ಉದ್ಯೋಗ ಸಂಸ್ಥೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ವಿವಿಧ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ಸ್ವ ಉದ್ಯೋಗ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದಿದೆ. ಈ ಉಚಿತ ತರಬೇತಿಗೆ ಅರ್ಜಿ ಆಹ್ವಾನ ಕಂಪ್ಯೂಟರ್ ಡಿಟಿಪಿ- ದಿನಾಂಕ 27-05-2024 ರಿಂದ 10-07-2024ರವರೆಗೆ 45 ದಿನಗಳು ಮಹಿಳೆಯರಿಗೆ ವಸ್ತ್ರ ವಿನ್ಯಾಸ ( ಟೈಲರಿಂಗ್)- ದಿನಾಂಕ 30-05-2024ರಿಂದ 28-06-2024ರವರೆಗೆ 30 ದಿನಗಳು. ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ – ದಿನಾಂಕ 11-06-2024ರಿಂದ 10-07-2024ರವರೆಗೆ 30 ದಿನಗಳು. ಕಂಪ್ಯೂಟರ್ ಟ್ಯಾಲಿ ( ಅಕೌಂಟಿಂಗ್) – ದಿನಾಂಕ 11-07-2024ರಿಂದ 09-08-2024ರವರೆಗೆ 30 ದಿನಗಳು. ಊಟ ಮತ್ತು ವಸತಿ ಸಂಪೂರ್ಣ ಉಚಿತ ಈ ಮೇಲ್ಕಂಡ ತರಬೇತಿಗಳು ಉಚಿತವಾಗಿವೆ. ಈ ತರಬೇತಿಗೆ ಆಯ್ಕೆಯಾದಂತ ಅರ್ಹರಿಗೆ, ತರಬೇತಿಯ ಸಂದರ್ಭದಲ್ಲಿ ಊಟ ಮತ್ತು ವಸತಿ ಉಚಿತವಾಗಿರುತ್ತದೆ. ವಯೋಮಿತಿ ಈ ಸ್ವ ಉದ್ಯೋಗ…
ಬೆಂಗಳೂರು: ಬಿಬಿಎಂಪಿ ತೆರಿಗೆ ಬಾಕಿ ಉಳಿಸಿಕೊಂಡ ಮಲ್ಲೇಶ್ವರಂನಲ್ಲಿರುವಂತ ಮಂತ್ರಿಮಾಲ್ ಗೆ ಬೀಗ ಜಡಿಯಲಾಗಿದೆ. ಈ ಬಗ್ಗೆ ಕಿಡಿಕಾರಿರುವಂತ ಬಿಜೆಪಿ ವಕ್ತಾರ ಪ್ರಕಾಶ್ ಅವರು, BBMP ಕಂದಾಯ ಇಲಾಖೆಯ ಅಧಿಕಾರಿಗಳು ಉಪಮುಖ್ಯಮಂತ್ರಿಗಳ ಮನದಾಸೆಯನ್ನು ನೆರವೇರಿಸಿ ಲೂಲು ಮಾಲ್ ಸೇಲ್ಸ್ ಮನ್ ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಡಿ.ಕೆ.ಶಿವಕುಮಾರ್ ಗ್ಲೋಬಲ್ ಮಾಲ್ ವರ್ಸಸ್ ಮಂತ್ರಿ ಮಾಲ್ ಲುಲು ಮಾಲ್ ಎಂದೂ ಕರೆಯುವ ಡಿಕೆಶಿ ಮಾಲ್ ಓಕಳೀಪುರದ ಬಳಿ ಉದ್ಘಾಟನೆಯಾದ ತರುವಾಯ ಕಿಮೀ ದೂರದಲ್ಲಿರುವ ಮಂತ್ರಿ ಮಾಲ್ ಗೆ ಗ್ರಹಚಾರ ಕೆಟ್ಟಿತು. ಮಂತ್ರಿ ಮಾಲ್ ಕಂಪನಿಯು ನಾನಾ ಆರ್ಥಿಕ ಸಂಕಟಕ್ಕೆ ಸಿಲುಕಿಕೊಂಡು ಆಸ್ತಿ ತೆರಿಗೆ ಪಾವತಿ ಮಾಡುವುದಕ್ಕೆ ಪರದಾಡ ತೊಡಗಿತು ಎಂದಿದ್ದಾರೆ. ಲೂಲು ಮಾಲ್ ಬರುವ ಮೊದಲು ಕೂಡಾ ಆಸ್ತಿ ತೆರಿಗೆ ನೀಡಲು ಮಂತ್ರಿ ಮಾಲ್ ಬಾಕಿ ಉಳಿಸಿಕೊಂಡಿತ್ತು. ಆದರೆ ಆಗ ಡಿಕೆಶಿ ಒಡತನದ ಮಾಲ್ ತೆರದಿರಲಿಲ್ಲ ಹೀಗಾಗಿ ಬಿಬಿಎಂಪಿಗೆ ಅದೊಂದು ಬಾಗಿಲು ಮುಚ್ಚಿಸುವಷ್ಟು ಅಪರಾಧವೆನಿಸಲಿಲ್ಲ. ಕಳೆದ…
ಬೆಂಗಳೂರು: ನಿನ್ನೆ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇಂದು ಮಧ್ಯಂತರ ಜಾಮೀನು ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದ ನಂತ್ರ, ಮೇ.20ಕ್ಕೆ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿದೆ. ಅಲ್ಲದೇ ಮೇ.20ರ ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರಿಸಿದೆ. ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಒಂದು ದಿನದ ಮಟ್ಟಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಇಂದು ಜಾಮೀನು ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ನ್ಯಾಯಪೀಠವು, ಅರ್ಜಿಯ ವಿಚಾರಣೆ ನಡೆಸಿತು. ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಪೀಠದ ಮುಂದೆ ಎಸ್ಐಟಿ ಪರ ಎಸ್ ಪಿಪಿ ಜಾಯ್ನಾ ಕೊಥಾರಿ ಅವರು ಆರಂಭದಲ್ಲಿ ವಾದ ಮಂಡಿಸಿದರು. ಅವರು ಐಪಿಸಿ ಸೆಕ್ಷನ್ 436ರಡಿ…