Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದೆ. ಈ ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ಮೈಕ್ರೋ ಫೈನಾನ್ಸ್ ಕುರಿತು ಸಿಎಂ ಸಿದ್ಧರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ನಡೆಸಿದರು. ಈ ಸಭೆಯಲ್ಲಿ ಈ ಕೆಳಕಂಡ ಮಹತ್ವದ ಸೂಚನೆ ನೀಡಿದ್ದಾರೆ. • ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. • ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.…
ಹಾಸನ: ನಾನು ಸಿನಿಮಾ ಹಂಚಿಕೆದಾರರು 1985ರಲ್ಲಿ ಕಷ್ಟಪಟ್ಟು ಬಿಡದಿಯ ಬಳಿ ಖರೀದಿಸಿದ 45 ಎಕರೆ ಜಮೀನನ್ನು ಲಪಟಾಯಿಸಲು ರಾಜ್ಯ ಕಾಂಗ್ರೆಸ್ ಸರಕಾರ ಹೊಂಚು ಹಾಕುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಹಾಸನದಲ್ಲಿ ಅರೆಸೇನಾ ಪಡೆಯ ನಿವೃತ್ತ ಯೋಧರ ಭವನದ ಉದ್ಘಾಟನೆ ಮಾಡಿದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಆ ಭೂಮಿಯನ್ನು ನಾನು ಕಷ್ಟಪಟ್ಟು ಸಂಪಾದಿಸಿದ್ದೇನೆ. ಅದರಲ್ಲಿ ಒತ್ತುವರಿ ಆಗಿದೆ ಎಂದು ಸಿದ್ದರಾಮಯ್ಯ ಸರಕಾರ ಐದು ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ನನ್ನ ಮೇಲೆ ದಾಳಿಗೆ ಬಿಟ್ಟಿದೆ ಎಂದು ಅವರು ನೇರ ಆರೋಪ ಮಾಡಿದರು. ನಿನ್ನೆಯ ದಿನ (ಶುಕ್ರವಾರ) ನನಗೆ ನೋಟಿಸ್ ಅನ್ನೇ ನೀಡದೆ ದಾಳಿ ನಡೆಸಲು ಹೊರಟಿದ್ದರು. ಸಂಬಂಧಪಟ್ಟ ಪ್ರಧಾನ ಕಾರ್ಯದರ್ಶಿಗೆ ನಾನು ಹೇಳಿದೆ. “ನೋಡಿ, ಇದು ಸರ್ಕಾರಿ ಜಾಮೀನು ಅಲ್ಲ. ನನ್ನ ಸ್ವಂತ ಜಮೀನು. ನನಗೆ ನೋಟಿಸನ್ನೇ ನೀಡದೇ ಹೇಗೆ ಬರುತ್ತೀರಿ? ನಲವತ್ತು ವರ್ಷಗಳ ಹಿಂದೆ ಭೂಮಿಯನ್ನು ಖರೀದಿ…
ಉತ್ತರ ಪ್ರದೇಶ: ಈ ಹಿಂದೆ ಎರಡು ಬಾರಿ ಪ್ರಯಾಗ್ ರಾಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಹಲವು ಕುಠೀರಗಳು ಬೆಂಕಿಗೆ ಆಹುತಿಯಾಗಿದ್ದವು. ಈಗ ಮತ್ತೆ ಪ್ರಯಾಗ್ ರಾಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕುಠೀರಗಳು ಧಗ ಧಗಿಸಿ ಹೊತ್ತಿ ಉರಿಯುತ್ತಿವೆ. ಇಲ್ಲಿನ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಕೋಟ್ಯಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಲು ತೆರಳುತ್ತಿದ್ದಾರೆ. ಕೆಲವರು ಅಲ್ಲಿಯೇ ಬೀಡು ಬಿಟ್ಟಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕುಠೀರದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಗ್ ರಾಜ್ ನ ಸೆಕ್ಟರ್ 18, 19ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಡೇರೆಗಳು ಹೊತ್ತಿ ಉರಿಯುತ್ತಿರುವುದಾಗಿ ತಿಳಿದು ಬಂದಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾವೆ. ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. https://twitter.com/sujitnewslive/status/1890752824260382805 https://kannadanewsnow.com/kannada/alert-state-workers-beware-if-you-receive-fraudulent-calls-bring-them-to-the-notice-of-the-authorities-immediately/ https://kannadanewsnow.com/kannada/former-goa-mla-attacked-by-auto-driver-in-belagavi-collapses-dies/ https://kannadanewsnow.com/kannada/hdk-objects-to-renaming-bengaluru-south-district-dk-shivakumar/
ಬೆಂಗಳೂರು: ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಿಇಟಿ-2025ಕ್ಕೆ ನೋಂದಣಿ ಮಾಡಿಕೊಳ್ಳರು ಹಾಗೂ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಿ ಕೆಇಎ ಆದೇಶಿಸಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 16-04-2025 ಮತ್ತು 17-04-2025ರಂದು ನಡೆಸಲಾಗುವ ಸಿಇಟಿ-2025ಕ್ಕೆ ಇಲ್ಲಿಯವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸದೇ ಇರುವ ಹಾಗೂ ಶುಲ್ಕವನ್ನು ಪಾವತಿಸದೇ ಇರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಮತ್ತೆ ದಿನಾಂಕ ವಿಸ್ತರಿಸಿರುವುದಾಗಿ ತಿಳಿಸಿದೆ. ಆನ್ ಲೈನ್ ಮೂಲಕ ನೋಂದಣಿ ಮಾಡಿ ಅರ್ಜಿ ಸಲ್ಲಿಸಲು ದಿನಾಂಕ 24-02-2025ರ ರಾತ್ರಿ 11.59ರವರೆಗೆ ಹಾಗೂ 25-02-2025ರ ಸಂಜೆ 5.30ರವರೆಗೆ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಿರುವುದಾಗಿ ಹೇಳಿದೆ. ಇನ್ನೂ ವಿಶೇಷ ಸೂಚನೆಯಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವವರು ಎಲ್ಲಾ ಮಾಹಿತಿ ಸರಿಯಾಗಿ ತುಂಬಿರುವ ಬಗ್ಗೆ ಪರಿಶೀಲಿಸಿಕೊಳ್ಳಿ. ತಪ್ಪಿದ್ದರೇ ಮತ್ತೊಮ್ಮೆ ಲಾಗಿನ್ ಆಗಿ ಸರಿಪಡಿಸಿಕೊಳ್ಳಲು ಅವಕಾಶವಿದೆ. ಅಂತಿಮವಾಗಿ ಸಬ್ ಮಿಟ್ ಮಾಡುವ ಅರ್ಜಿ ಸರ್ವರ್ ನಲ್ಲಿ ಸೇವ್ ಆಗುತ್ತದೆ ಎಂದು ಹೇಳಿದೆ. https://kannadanewsnow.com/kannada/alert-state-workers-beware-if-you-receive-fraudulent-calls-bring-them-to-the-notice-of-the-authorities-immediately/…
ವಾಸ್ತು ತತ್ವಗಳ ಪ್ರಕಾರ, ಪೂಜಾ ಕೊಠಡಿಯನ್ನು ಸ್ಥಾಪಿಸಲು ಉತ್ತಮ ದಿಕ್ಕು ಈಶಾನ್ಯ ಮೂಲೆಯಾಗಿದ್ದು, ಪೂಜಾ ಕೊಠಡಿಗಳನ್ನು ಉತ್ತರ ಮತ್ತು ಪೂರ್ವ ದಿಕ್ಕುಗಳಲ್ಲಿಯೂ ಸ್ಥಾಪಿಸಬಹುದು. ಒಂದು ದೊಡ್ಡ ಮನೆಯಲ್ಲಿ ಎರಡು ಮಹಡಿಗಳಿದ್ದು, ಎಲ್ಲರೂ ಒಂದೇ ಕುಟುಂಬವಾಗಿ ಮನೆಯಲ್ಲಿ ವಾಸಿಸುತ್ತಿದ್ದರೆ, ನೆಲ ಮಹಡಿಯಲ್ಲಿ ಪೂಜಾ ಕೋಣೆ ಇರಬೇಕು. ಕೆಲವು ಮನೆಗಳಲ್ಲಿ, ಸ್ಥಳಾವಕಾಶದ ಕೊರತೆಯಿಂದಾಗಿ, ಮಲಗುವ ಕೋಣೆ ಅಥವಾ ಅಡುಗೆಮನೆಯ ಗೋಡೆಗಳ ಮೇಲಿನ ಕಪಾಟುಗಳನ್ನು ಪೂಜಾ ಕೊಠಡಿಯಾಗಿ ಬಳಸಲಾಗುತ್ತದೆ. ಹಾಗಿದ್ದಲ್ಲಿ, ಪೂಜೆಯ ಸಮಯದಲ್ಲಿ ಹೊರತುಪಡಿಸಿ, ನೀವು ಆ ಕಪಾಟನ್ನು ಮುಚ್ಚಿಡಬೇಕು. ವಾಸ್ತು ತತ್ವಗಳ ಪ್ರಕಾರ, ಪೂಜಾ ಕೋಣೆಗೆ ಎರಡು ಬಾಗಿಲುಗಳು ಇರಬೇಕು. ಅವು ಹೊರಕ್ಕೆ ತೆರೆಯಬೇಕು. ಬಾಗಿಲುಗಳಲ್ಲಿ ಸಣ್ಣ ರಂಧ್ರಗಳನ್ನು ಮಾಡಿ ಅವುಗಳಲ್ಲಿ ಮಣಿಗಳನ್ನು ನೇತುಹಾಕುವುದರಿಂದ ತುರಿಕೆಯ ಲಕ್ಷಣಗಳಿವೆ. ಗಂಟೆಯ ಶಬ್ದವು ಮನೆಗೆ ಎಲ್ಲಾ ರೀತಿಯ ಸಂಪತ್ತನ್ನು ತರುತ್ತದೆ. ವಾಸ್ತು ತತ್ವಗಳ ಪ್ರಕಾರ, ಪೂಜಾ ಕೋಣೆಯ ಈಶಾನ್ಯ ಭಾಗದಲ್ಲಿ ಹೆಚ್ಚು ಭಾರವನ್ನು ಇಡಬಾರದು ಮತ್ತು ಈಶಾನ್ಯ ಮೂಲೆಯಲ್ಲಿ ಮೇಲಂತಸ್ತು ನಿರ್ಮಿಸುವುದು ಸಹ ಸೂಕ್ತವಲ್ಲ. ವಾಸ್ತು ತತ್ವಗಳ…
ಬೆಂಗಳೂರು: ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಅನುದಾನ ಬಳಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ಕೇಂದ್ರ ಜಲಶಕ್ತಿ ರಾಜ್ಯ ಸಚಿವರು ಮಾಡಿರುವ ಆರೋಪ ನಿರಾಧಾರ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಿಧಿ ಬಳಕೆಯಲ್ಲಿ ವಿಫಲ ಎಂಬ ಆರೋಪ ಸಂಪೂರ್ಣವಾಗಿ ತಪ್ಪು ಎಂದಿರುವ ಸಚಿವರು 2019-20ರಿಂದ 2024-25ರ ಅವಧಿಗೆ 28,623.89 ಕೋಟಿ ರೂ. ಸೂಚಕ ಹಂಚಿಕೆಯಾಗಿದ್ದು ವಾಸ್ತವವಾಗಿ ಅಷ್ಟು ಗಾತ್ರದ ಅನುದಾನ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವುದಿಲ್ಲ, ಈ ಅವಧಿಯಲ್ಲಿ 2025ರ ಫೆಬ್ರವರಿ 10ರವರೆಗೆ ಕೇಂದ್ರ ಸರ್ಕಾರ 11,760.00 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ, ಈ ಅನುದಾನವನ್ನು ಕರ್ನಾಟಕ ರಾಜ್ಯ ಸರ್ಕಾರವು ಸಂಪೂರ್ಣವಾಗಿ (99.95%) ಬಳಸಿಕೊಂಡಿದೆ. ಆದ್ದರಿಂದ, ಕರ್ನಾಟಕ ರಾಜ್ಯವು ಜೆಜೆಎಂ ನಿಧಿಗಳನ್ನು ಬಳಸಿಕೊಳ್ಳುವಲ್ಲಿ ವಿಫಲವಾಗಿದೆ ಎಂಬ ಆರೋಪವು ಸತ್ಯಕ್ಕೆ ದೂರವಾಗಿದೆ ಮತ್ತು ದಾರಿತಪ್ಪಿಸುವಂತಿದೆ ಎಂದಿರುವ ಸಚಿವರು ಕೇಂದ್ರ ಸಚಿವರು ಪೂರ್ವಗ್ರಹದಿಂದ ಮಾಡಿರುವ ಆರೋಪವನ್ನು ತೀವ್ರವಾಗಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ-ಕಾಲೇಜುಗಳ ಬಳಿಯಲ್ಲಿ ತೆರೆದಿರುವಂತ ಮಧ್ಯದಂಗಡಿಗಳಿಗೆ ಬ್ರೇಕ್ ಹಾಕಲಾಗಿದೆ. ಒಂದು ವೇಳೆ ತೆರೆದಿದ್ರೆ ಶೈಕ್ಷಣಿಕ ಸಂಸ್ಥೆಗಳಿಂದ ಅಬಕಾರಿ ಇಲಾಖೆಗೆ ದೂರು ನೀಡಲು ಸೂಚಿಸಿದೆ. ಈ ಕುರಿತಂತೆ ಪ್ರೌಢ ಶಿಕ್ಷಣದ ನಿರ್ದೇಶಕರು ರಾಜ್ಯದ ಎಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. ಅದರಲ್ಲಿ ಮಾನ್ಯ ಆಯುಕ್ತರು ಅಬಕಾರಿ ಇಲಾಖೆಯವರು ಸರ್ಕಾರಕ್ಕೆ ಬರೆದಿರುವ ತಮ್ಮ ಪತ್ರದಲ್ಲಿ ಉಪ ಕಾರ್ಯದರ್ಶಿಗಳು, ಜುವಿನೈಲ್ ಜಹೀ ಕಮಿಟಿ, ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ರವರು ದಿನಾಂಕ: 12.10.2023 ರಂದು ನಡೆಸಿರುವ ಸಭೆಯಲ್ಲಿ, ವುಸ್ತಾಪಿಸಿರುವ ಅಂಶಗಳಂತೆ ಎಂದಿದ್ದಾರೆ. ಶಾಲಾ/ಕಾಲೇಜುಗಳ ಸಮೀಪ ಮದ್ಯದಂಗಡಿಗಳಿದ್ದು ಇದರಿಂದಾಗಿ ವಿಧ್ಯಾಭ್ಯಾಸಕ್ಕೆ ಹಾಗೂ ನಿರ್ವಹಣೆಗೆ, ತೊಂದರೆಯಾಗುತ್ತಿದ್ದಲ್ಲಿ ಸಂಬಂದಪಟ್ಟ ಶೈಕ್ಷಣಿಕ ಸಂಸ್ಥೆಗಳವರು ಅಬಕಾರಿ ಇಲಾಖೆಗೆ ದೂರು ಸಲ್ಲಿಸಲು ತಿಳಿಸುತ್ತಾ ಈ ಕುರಿತು ಅಬಕಾರಿ ಇಲಾಖೆಯಿಂದ ಕಮಕೈಗೊಳ್ಳಲಾಗುವುದೆಂದು ತಿಳಿಸಿರುತ್ತಾರೆ ಎಂದು ಹೇಳಿದ್ದಾರೆ. ವ್ಯಸನ ಮುಕ್ತಗೊಳಿಸುವ ಬಗ್ಗೆ ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ…
ಮುಂಬೈ : ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ ಅಂಬಾನಿ ಅವರ ನೇತೃತ್ವದಲ್ಲಿ ರಿಲಯನ್ಸ್ ಫೌಂಡೇಶನ್ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ ಮಾಡಿರುವ ಕ್ರೀಡಾಭಿವೃದ್ಧಿಯ ಸಾಧನೆಗಳಿಗಾಗಿ, ಇಂದು (ಫೆಬ್ರವರಿ 14) ಮುಂಬೈನಲ್ಲಿ ನಡೆದ 2025ರ ‘ಸ್ಪೋರ್ಟ್‌ಸ್ಟಾರ್ ಏಸಸ್ ಅವಾರ್ಡ್ಸ್’ ಸಮಾರಂಭದಲ್ಲಿ ಪ್ರತಿಷ್ಠಿತ ‘ಅತ್ಯುತ್ತಮ ಕಾರ್ಪೊರೇಟ್’ (ಕ್ರೀಡಾ ಪ್ರೋತ್ಸಾಹಕ್ಕಾಗಿ) ಪ್ರಶಸ್ತಿಯ ಗೌರವವನ್ನು ಪಡೆದುಕೊಂಡಿದೆ. ರಿಲಯನ್ಸ್ ಫೌಂಡೇಶನ್ ನಿಂದ ಪ್ರೋತ್ಸಾಹ ಪಡೆಯುತ್ತಿರುವ ಕ್ರೀಡಾಪಟು ಜ್ಯೋತಿ ಯರ್ರಾಜಿ ಟ್ರ್ಯಾಕ್‌ನಲ್ಲಿ ಮಾಡಿರುವ ಅದ್ಭುತ ಸಾಧನೆಗಳನ್ನು ಗುರುತಿಸಿ ವರ್ಷದ ಕ್ರೀಡಾಪಟು (ಟ್ರ್ಯಾಕ್ ಮತ್ತು ಫೀಲ್ಡ್) ಪ್ರಶಸ್ತಿಯನ್ನು ನೀಡಲಾಯಿತು. ಇದು ಕೂಡ ರಿಲಯನ್ಸ್ ಫೌಂಡೇಶನ್ ನ ಕ್ರೀಡಾ ಪ್ರೋತ್ಸಾಹದ ಕೆಲಸಕ್ಕೆ ಸಿಕ್ಕ ಮನ್ನಣೆಯಂತಿದೆ. ರಿಲಯನ್ಸ್ ಫೌಂಡೇಶನ್ ತನ್ನ ವಿವಿಧ ಕ್ರೀಡಾ ಯೋಜನೆಗಳ ಮೂಲಕ ದೇಶದ ಕ್ರೀಡಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತ ಬಂದಿದೆ. ಕಳೆದ ವರ್ಷ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಭಾರತದ ಮೊದಲ ‘ಕಂಟ್ರಿ ಹೌಸ್’ ಆದ ‘ಇಂಡಿಯಾ ಹೌಸ್’ನಂತಹ ಉಪಕ್ರಮದೊಂದಿಗೆ ರಿಲಯನ್ಸ್ ಪ್ರತಿಷ್ಠಾನವು ಭಾರತದ ಕ್ರೀಡಾ ಅಭಿಯಾನದ ಯಶಸ್ಸಿನಲ್ಲಿ ಮಹತ್ವದ…
ಕನಕಪುರ: “ಈ ಪ್ರದೇಶ ಬೆಂಗಳೂರಿನ ಭಾಗ. ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ತಕರಾರು ಸಲ್ಲಿಸಿದ್ದಾರೆ. ಯಾರು ಏನೇ ಮಾಡಿದರೂ ಇದನ್ನು ಬೆಂಗಳೂರು ದಕ್ಷಿಣ ಎಂದು ಮಾಡುವುದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಪಾಪ ಕುಮಾರಸ್ವಾಮಿ ಅವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ನಾನು ಹಾಗೂ ಇಲ್ಲಿರುವ ಕೆಲವರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದೆವು. ಇದು ಕನಕಪುರ ಲೋಕಸಭಾ ಕ್ಷೇತ್ರ ಇತ್ತು. ನಮ್ಮ ಅಸ್ಥಿತ್ವವನ್ನು ಉಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಇದನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಎಂದು ಮಾಡಿದೆವು. ಈಗ ಈ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಲು ಮುಂದಾಗಿದ್ದು, ಇದನ್ನು ಮಾಡಬಾರದು ಎಂದು ಕೇಂದ್ರ ಸರ್ಕಾರದ ಬಳಿ ಕುಮಾರಸ್ವಾಮಿ ಅರ್ಜಿ ಹಾಕಿದ್ದಾರೆ. ಅವರು ಏನಾದರೂ ಮಾಡಲಿ, ಈ ಜಿಲ್ಲೆಯನ್ನು…
ಬೆಂಗಳೂರು: ವೈಯಕ್ತಿಕ ಆದಾಯ ತೆರಿಗೆ ದರದ ಬದಲಾವಣೆ ಕುರಿತು ಮಧ್ಯಮ ವರ್ಗವು ಬೇಡಿಕೆ ಇಡುತ್ತ ಬಂದಿತ್ತು. 12 ಲಕ್ಷ ವಾರ್ಷಿಕ ಆದಾಯಕ್ಕೆ ತೆರಿಗೆ ಇಲ್ಲ ಎಂಬ ಪ್ರಮುಖ ನಿರ್ಧಾರವನ್ನು ಈ ಬಾರಿಯ ಕೇಂದ್ರ ಬಜೆಟ್‍ನಲ್ಲಿ ಕೈಗೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ, ವಾರ್ತಾ ಮತ್ತು ಪ್ರಸಾರ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 60 ವರ್ಷಗಳ ಬಳಿಕ ಎನ್‍ಡಿಎ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರ ಪಡೆದಿದೆ. ಮೊದಲ ಮತ್ತು ಎರಡನೇ ಅಧಿಕಾರದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಮಾಡಿದ ಉತ್ತಮ ಕಾರ್ಯಗಳೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಿದರು. ದೇಶದ ಉತ್ತರ- ದಕ್ಷಿಣ, ಪೂರ್ವ ಪಶ್ಚಿಮದಲ್ಲಿ ಈ ಬದಲಾವಣೆಗಳನ್ನು ಜನತೆ ನೋಡಿದ್ದಾರೆ. 60-70 ವರ್ಷಗಳಲ್ಲಿ ನೋಡದಷ್ಟು ಉತ್ತಮ ಅಭಿವೃದ್ಧಿ ಕಾರ್ಯಗಳು ಕಳೆದ 10 ವರ್ಷದಲ್ಲಿ ಕಾಣುತ್ತಿವೆ ಎಂದು ಜನರು ಹೇಳುತ್ತಿದ್ದಾರೆ ಎಂದು ವಿವರಿಸಿದರು.…