Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೈಮಗ್ಗ ನೇಕಾರರ ಆತ್ಮಹತ್ಯೆ ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ರೂ 5 ಲಕ್ಷ ಪರಿಹಾರ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ಭರವಸೆ ನೀಡಿದ್ದಾರೆ. ಮಂಗಳವಾರ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕರಾದ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಭಿಮಾ ಯೋಜನೆಯಲ್ಲಿ ರೂ 2 ಲಕ್ಷ ಪರಿಹಾರ ವಿತರಣೆ ಯೋಜನೆ ಜಾರಿಯಲ್ಲಿದ್ದು, ಈ ಯೋಜನೆಯ ವಿಮಾ ಕಂತನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಈ ರೂ 2 ಲಕ್ಷ ಗಳೊಂದಿಗೆ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ ರೂ 3 ಲಕ್ಷ ಪರಿಹಾರ ವಿತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು. ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ವಿತರಣೆ ಮಾಡುವ ಯೋಜನೆ ಜಾರಿಯಲ್ಲಿ ಇರಲಿಲ್ಲ. ಆದರೆ ಕೋವಿಡ್ ಅವಧಿಯಲ್ಲಿ 25 ಮೃತ ನೇಕಾರರ ಕುಟುಂಬಗಳಿಗೆ ತಲಾ ರೂ 5 ಲಕ್ಷಗಳಂತೆ ರೂ 1.25 ಕೋಟಿ ಪರಿಹಾರ…
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಮಾ.22ರ ಅಖಂಡ ಕರ್ನಾಟಕ ಬಂದ್ ವೇಳೆ ಏನಿರುತ್ತೆ.? ಏನಿರಲ್ಲ ಅಂತ ಮುಂದೆ ಓದಿ. ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ದಿನಾಂಕ 22-03-2025ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಇದಕ್ಕೂ ಪೂರ್ವದಲ್ಲಿ ಈ ಅಖಂಡ ಕರ್ನಾಟಕ ಬಂದ್ ಬಗ್ಗೆ ಇಂದು ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ಕನ್ನಡಪರ ಸಂಘಟನೆಗಳ ನಾಯಕರೊಂದಿಗೆ ಸಭೆಯನ್ನು…
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದಂತ ಆರೋಪದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ ರೇವಣ್ಣಗೆ ಕಾನೂನು ಸಂಕಷ್ಟ ಎದುರಾಗಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನಿನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ನಡೆದಂತ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವರು ಭಾಗಿಯಾಗಿದ್ದರು. ಈ ಸಭೆಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ ನಡೆಸುತ್ತಿದ್ದರು. ಈ ವೇಳೆಯಲ್ಲಿ ಸಮಸ್ಯೆ ಹೇಳೋದಕ್ಕೆ ಮುಂದಾದಂತ ನಂದಿನಿ ನಾಗರಾಜ್ ಅವರ ಮಾತನ್ನು ಆಲಿಸಲಿಲ್ಲ. ಸಾರ್ ನೋಡಿ ಸಾರ್ ಒಮ್ಮೆ ಅಂತ ಪದೇ ಪದೇ ಕೇಳಿದ್ದಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ ಅವರು ಸಿಟ್ಟಾಗಿ, ಮಹಿಳೆ ಎನ್ನದೇ ನಂದಿನಿ ನಾಗರಾಜ ಮೇಲೆ ಹಲ್ಲೆ ಮಾಡಿರೋ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ಆಧರಿಸಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಅವರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಯನ್ನು ಭೇಟಿಯಾಗಿ ಹೆಚ್ ಎಂ ರೇವಣ್ಣ…
ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಇಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಸತ್ತಿನಲ್ಲಿ ರೈಲ್ವೆ ಬಜೆಟ್ ಕುರಿತಂತೆ ಮತದಾನ ಪ್ರಕ್ರಿಯೆಗೆ ಸಂಬಂಧಿಸಿದ ವಿಚಾರಗಳನ್ನು ಮಂಡಿಸಿದರು. ಅವರ ಮಾತಿನ ಸಂಪೂರ್ಣ ಹೈಲೈಟ್ಸ್ ಮುಂದಿದೆ ಓದಿ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ಭಾರತೀಯ ರೈಲ್ವೆ ಕಳೆದ ಹತ್ತು ವರ್ಷಗಳಲ್ಲಿ ಅಪಾರ ಬಂಡವಾಳ ಹೂಡಿಕೆಯನ್ನು ಕಂಡಿದೆ. ಹಿಂದಿನ ದಿನಗಳಲ್ಲಿ ರೈಲ್ವೆಗೆ ಸರಾಸರಿ ₹25,000 ಕೋಟಿ ಬಂಡವಾಳ ನೆರವು ಲಭ್ಯವಾಗುತ್ತಿತ್ತು, ಆದರೆ ಇಂದು ₹2.50 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಪ್ರಯಾಣಿಕರ ಭಾರ ಕಡಿಮೆ ಮಾಡಲು, ರೈಲ್ವೆ ಹಲವಾರು ತಂತ್ರಗಳನ್ನು ಅನುಸರಿಸುತ್ತಿದೆ. ನಮ್ಮ ದೇಶದಲ್ಲಿ ರೈಲು ಪ್ರಯಾಣ ದರಗಳು ಹಿತಕರವಾಗಿದ್ದು, ಪಾಶ್ಚಿಮಾತ್ಯ ದೇಶಗಳಿಗಿಂತ 10-20 ಪಟ್ಟು ಕಡಿಮೆ ದರದಲ್ಲಿ ಉತ್ತಮ ಮತ್ತು ಸುರಕ್ಷಿತ ಸೇವೆಯನ್ನು ಒದಗಿಸಲಾಗುತ್ತಿದೆ. ಮಾರ್ಚ್ 31ಕ್ಕೆ ಕೊನೆಗೊಳ್ಳುವ 2023-24ನೇ ಹಣಕಾಸು ವರ್ಷದಲ್ಲಿ, ಭಾರತೀಯ ರೈಲ್ವೆ 1.6 ಬಿಲಿಯನ್ ಟನ್ ಸರಕು ಸಾಗಣೆಯನ್ನು ಸಾಧಿಸಿ, ಚೀನಾ ಮತ್ತು ಅಮೆರಿಕದೊಂದಿಗೆ ಜಾಗತಿಕವಾಗಿ ಅಗ್ರ ಮೂರನೇ ಸ್ಥಾನವನ್ನು…
ಬೆಂಗಳೂರು: ನಮ್ಮ ಗ್ಯಾರಂಟಿಗಳನ್ನು ಟೀಕಿಸಿ, ನಮ್ಮ ಗ್ಯಾರಂಟಿಗಳನ್ನೇ ಕದ್ದು “ಮೋದಿ ಗ್ಯಾರಂಟಿ” ಎಂದು ಹೆಸರು ಬದಲಾಯಿಸಿ ಬಿಜೆಪಿ ಘೋಷಿಸಿದ್ದನ್ನು ವಿವರಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಮೋದಿ ಗ್ಯಾರಂಟಿ” ಜಾಹಿರಾತು ಪ್ರದರ್ಶಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಉತ್ತರಿಸಿ ಮಾತನಾಡಿದಂತ ಅವರು, NDA-BJP ಸರ್ಕಾರದ ಸಚಿವರುಗಳು, ಅಧಿಕಾರಿಗಳು ನನ್ನಲ್ಲಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಏಕೆ: ಬಿಜೆಪಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಹಾಕಿದರು. ಕೇಂದ್ರ ಸರ್ಕಾರದ Indian institute of Public Administration ಸಂಸ್ಥೆಯ ಅಧ್ಯಕ್ಷರಾದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಸಚಿವ ಜಿತೇಂದ್ರ ಸಿಂಗ್ ಪ್ರಶಂಸೆಯ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕೊಟ್ಟಿದ್ದಾರೆ: ಇಲ್ಲಿ ನೀವು ವಿರೋಧಿಸುತ್ತಿದ್ದೀರಿ, ಏನಿದು ಎಂದರು. ಗ್ಯಾರಂಟಿ ಯೋಜನೆಗಳನ್ನು ನೀವು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಕಲು ಮಾಡಿದ್ದೀರಿ. ವಿರೋಧ ಮಾಡುವುದಾದರೆ ನಕಲು ಏಕೆ ಮಾಡಬೇಕಿತ್ತು. ಸತ್ಯ ಯಾವಾಗಲೂ ಕಹಿಯಾಗಿರುತ್ತದೆ. ನಾವು ವಾಸ್ತವವನ್ನು ಹೇಳುತ್ತಿದ್ದೇವೆ. ದಿನಾಂಕ 3-1-2025 ರಂದು ಚಂದ್ರ ಬಾಬು ನಾಯ್ದು ಅವರ ಸರ್ಕಾರದ ಮಂತ್ರಿಗಳು ಹಾಗೂ ಅಧಿಕಾರಿಗಳು ಗ್ಯಾರಂಟಿ…
ಬೆಂಗಳೂರು: ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರ ನೀಡಿದರು. ಅವರ ಭಾಷಣದ ಸಂಪೂರ್ಣ ಹೈಲೈಟ್ಸ್ ಮುಂದಿದೆ ಓದಿ. ರಾಜ್ಯಪಾಲರ ಭಾಷಣದಲ್ಲಿ ಸಾಂಪ್ರದಾಯಿಕವಾಗಿ ಸರ್ಕಾರದ ಸಾಧನೆಗಳನ್ನು ಸದನದ ಮುಂದಿಡುವ ಭಾಷಣವಿರುತ್ತದೆ. ಕೆಲವರು ಟೀಕಿಸಿದ್ದಾರೆ, ಹಲವರು ವಾಸ್ತವಿಕವಾಗಿ ಮಾತನಾಡಿದ್ದಾರೆ, ಕೆಲವರು ಸಮರ್ಥಿಸಿದ್ದಾರೆ, ಕೇಲವರು ವಿರೋಧಿಸಲೆಂದೇ ವಿರೋಧಿಸಿ ಮಾತನಾಡಿದ್ದಾರೆ. ಅವರೆಲ್ಲರ ಸಲಹೆ ಸೂಚನೆಗಳನ್ನು ಸರ್ಕಾರ ಸ್ವಾಗತಿಸಿ, ಸರ್ಕಾರದ ನಿಲುವನ್ನು ಸದನಕ್ಕೆ ತಿಳಿಸಿ ವಂದನಾ ನಿರ್ಣಯವನ್ನು ಅಂಗೀಕಾರ ಮಾಡಬೇಕೆಂದು ವಿನಂತಿಸಿದರು. ವಿರೋಧ ಪಕ್ಷದ ನಾಯಕರಾದಿಯಾಗಿ 14 ಜನ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸದಸ್ಯರು ಮಾತನಾಡಿದ್ದಾರೆ. ರಾಜ್ಯಪಾಲರು ಒಂದು ಗಂಟೆಗೂ ಮೀರಿ ಸುದೀರ್ಘವಾಗಿ ಮಾತನಾಡಿ ಸರ್ಕಾರದ ಸಾಧನೆಗಳನ್ನು ಓದಿ ಹೇಳಿದ್ದಾರೆ. ವಾಸ್ತವವನ್ನು ಸದನಕ್ಕೆ ತಿಳಿಸಬೇಕಾಗಿರುವುದು ಸರ್ಕಾರದ ಕರ್ತವ್ಯ. ವಾಸ್ತವಾಂಶಗಳನ್ನು ಸದನದ ಸದಸ್ಯರಿಗೆ ತಿಳಿಸುತ್ತೇನೆ. ನಮ್ಮ ಸರ್ಕಾರ ಜನರ ಆಶೀರ್ವಾದದಿಂದ 2023 ಮೇ 22 ರಂದು ಅಧಿಕಾರಕ್ಕೆ ಬಂದಿತು. ನಮ್ಮ ಪಕ್ಷ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು 2 ವರ್ಷಗಾಳಾಗುತ್ತಿದೆ. ಇದು…
ಬೆಂಗಳೂರು: ಹಾಸನದ ಬೇಲೂರಿನಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇಂತಹ ಮೃತ ಮಹಿಳೆಯ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಸೂರಜ್ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಆನೆ ಮತ್ತು ಮಾನವ ಸಂಘರ್ಷ ಇಂದು, ನಿನ್ನೆಯದಲ್ಲ. ಇದು ಹಲವು ವರ್ಷಗಳಿಂದ ನಡೆಯುತ್ತಿರುವಂತ ಸಂಘರ್ಷವಾಗಿದೆ ಎಂದರು. ಕೊರೋನಾ ಬಳಿಕ ಹಾಸನದಲ್ಲಿ 4 ರಿಂದ 5 ಜನರು ಆನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ನಾವು ಪರಿಹಾರ ಕೊಡಬಹುದೇ ಹೊರತು, ಜೀವ ವಾಪಾಸ್ ತರಲು ಸಾಧ್ಯವಿಲ್ಲ ಎಂಬುದಾಗಿ ವಿಷಾದ ವ್ಯಕ್ತ ಪಡಿಸಿದರು. ಕಾಡಾನೆ ಹಾವಳಿ ಸಂಬಂಧ ನಿಯಂತ್ರಣ ಕೊಠಡಿ ಮಾಡಿದ್ದೇವೆ. ಎಲಿಫ್ಯಾಂಟ್ ಟಾಸ್ಕ್ ಪೋರ್ಸ್ ರಚನೆ ಮಾಡಿದ್ದೇವೆ. ಆನೆಗೆ ಬೇಕಾದ ಬಿದಿರು ಮತ್ತು ಇತರೆ ಬೆಳೆ ಬೆಳೆಯಲು ಸೂಚನೆ ನೀಡಲಾಗಿದೆ. ರೈತರ ಬೆಳೆ ಹಾಳಾಗಿದ್ದಕ್ಕೆ ಬೆಲೆ ನಿಗದಿ ಪಡಿಸಲಾಗಿದೆ ಎಂದರು. ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಳ್ಳುತ್ತೇವೆ. ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ.…
ನವದೆಹಲಿ: ಸಗಟು ಬೆಲೆ ಹಣದುಬ್ಬರವು ಫೆಬ್ರವರಿಯಲ್ಲಿ ಶೇಕಡಾ 2.38 ಕ್ಕೆ ಏರಿದೆ. ಮುಖ್ಯವಾಗಿ ಆಹಾರ ಉತ್ಪನ್ನಗಳು, ಆಹಾರ ವಸ್ತುಗಳು, ಇತರ ಉತ್ಪಾದನೆ, ಆಹಾರೇತರ ವಸ್ತುಗಳು ಮತ್ತು ಜವಳಿ ತಯಾರಿಕೆಯ ಬೆಲೆಗಳಲ್ಲಿನ ಹೆಚ್ಚಳದಿಂದಾಗಿ ಆಗಿದೆ. ಜನವರಿಗೆ ಹೋಲಿಸಿದರೆ ಫೆಬ್ರವರಿಯಲ್ಲಿ ಸಗಟು ಬೆಲೆ ಹಣದುಬ್ಬರದಲ್ಲಿ ಮಾಸಿಕ ಬದಲಾವಣೆಯು ಶೇಕಡಾ 0.06 ರಷ್ಟಿದೆ. ಈ ಹಿಂದೆ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವರದಿಯು ಫೆಬ್ರವರಿ 2025 ರಲ್ಲಿ ಡಬ್ಲ್ಯುಪಿಐನಲ್ಲಿ ಕುಸಿತವನ್ನು ಊಹಿಸಿತ್ತು. ಮುಖ್ಯವಾಗಿ ತೈಲ ಬೆಲೆಗಳ ಕುಸಿತ ಮತ್ತು ಆಹಾರ ಬೆಲೆಗಳಲ್ಲಿ ಕಾಲೋಚಿತ ಕುಸಿತದಿಂದಾಗಿ ಡಬ್ಲ್ಯುಪಿಐ ಶೇಕಡಾ 2 ಕ್ಕೆ ಇಳಿಯಬಹುದು ಎಂದು ವರದಿ ಹೇಳಿದೆ. ಸಗಟು ಆಹಾರ ಹಣದುಬ್ಬರವು ಜನವರಿಯಲ್ಲಿ ಶೇ.7.47ರಿಂದ ಕಳೆದ ತಿಂಗಳು ಶೇ.5.94ಕ್ಕೆ ಇಳಿದಿದ್ದರೆ, ಫೆಬ್ರವರಿಯಲ್ಲಿ ಪ್ರಾಥಮಿಕ ವಸ್ತುಗಳ ಹಣದುಬ್ಬರವು ಜನವರಿಯಲ್ಲಿ ಶೇ.4.69ರಿಂದ ಶೇ.2.81ಕ್ಕೆ ಇಳಿದಿದೆ. ಇಂಧನ ಮತ್ತು ವಿದ್ಯುತ್ ಸಗಟು ಬೆಲೆಗಳು ಕಳೆದ ತಿಂಗಳು ಶೇ. 0.71 ರಷ್ಟು ಕುಸಿದಿದ್ದು, ಜನವರಿಯಲ್ಲಿ ಶೇ. 2.78 ರಷ್ಟು ಕುಸಿತ ಕಂಡಿತ್ತು. ವಾಣಿಜ್ಯ…
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇನೆಂದ್ರೇ ಶೀಘ್ರವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಸದಸ್ಯ ಎಸ್ ವಿ ಸಂಕನೂರು ಅವರು ರಾಜ್ಯದ ವಿಶ್ವವಿದ್ಯಾಲಯಗಳಲ್ಲನ ಬೋಧಕ, ಬೋಧಕೇತರ ಸಿಬ್ಬಂದಿಗಳನ್ನು ಯಾವಾಗ ನೇಮಕ ಮಾಡಿಕೊಳ್ಳುತ್ತೀರಿ. ಶೇ.60ರಷ್ಟು ಬೋಧ ಸಿಬ್ಬಂದಿ ಹುದ್ದೆ ಖಾಲಿ ಇದ್ದಾವೆ. ಬೋಧಕೇತರ ಸಿಬ್ಬಂದಿ ಹುದ್ದೆಗಳು ಶೇ.80ರಷ್ಟು ಖಾಲಿ ಇದ್ದಾವೆ. ಯಾವ ಕಾಲಮಿತಿಯಲ್ಲಿ ಭರ್ತಿ ಮಾಡುತ್ತೀರಿ ಅಂತ ಕೇಳಿದರು. ಈ ಪ್ರಶ್ನೆಗೆ ಉತ್ತರಿಸಿದಂತ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರು, ಹಿಂದಿನಿಂದಲೂ ಬೋಧಕ, ಬೋಧಕೇತರ ಹುದ್ದೆಗಳು ವಿವಿಯಲ್ಲಿ ಖಾಲಿ ಇದ್ದಾವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ವಿವಿಗಳಲ್ಲಿನ ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲಾಗಿದೆ ಎಂದರು. ಜಾನಪದ ವಿವಿಯಲ್ಲಿ ಹಗರಣ ಆಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೆಇಎ ಮೂಲಕ ಪರೀಕ್ಷೆ ನಡೆಸಿ, ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಸಚಿವ ಸಂಪುಟದ ಉಪ ಸಮಿತಿಯನ್ನು…










