Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ ನಿರೀಕ್ಷೆ ಇದೆ. ಇದರಿಂದಾಗಿ ಸಹಜವಾಗಿ ಸಂತಸ ಮೂಡಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸಾಗರ ತಾಲೂಕಿನ ಸಿಗಂದೂರಿನ ಶ್ರೀ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಅಂಗವಾಗಿ ಏರ್ಪಡಿಸಲಾಗಿದ್ದ ಸಿಗಂದೂರು ದಸರಾ ಸಂಭ್ರಮ 25 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶ್ರೀಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ನೆರವು ಮತ್ತು ಸಹಕಾರವನ್ನು ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿವೆ. ಎಂದಿನಂತೆ ಮುಂದೆಯೂ ಶ್ರೀ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ನೆರವು ನೀಡಲಾಗುವುದು ಎಂದರು. ಹಲವು ದಶಕಗಳಿಂದ ಇತ್ಯರ್ಥವಾಗದೇ ಉಳಿದಿರುವ ಶರಾವತಿ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಹಿತ ಕಾಯಲು ಸರ್ಕಾರ ಹಿಂದೆ ಹೇಳಿದ…
ಮಂಡ್ಯ: ಇಂದು ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಉತ್ಸವ ಹಾಗೂ ಶ್ರೀರಂಗಪಟ್ಟಣ ದಸರಾ ಉತ್ಸವದ ಅಂಗವಾಗಿ ವಿಶ್ವಪ್ರಸಿದ್ದ ಕೃಷ್ಣರಾಜ ಸಾಗರ ಜಲಾಶಯ ಹಾಗೂ ಬೃಂದಾವನದ ದೀಪಾಲಂಕಾರವನ್ನು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಉದ್ಘಾಟಿಸಿದರು. ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಿದರು. ಈ ಬಳಿಕ ರಾಜ್ಯದ ವಿವಿಧೆಡೆ ದಸರಾ ಉತ್ಸವಕ್ಕೆ ಚಾಲನೆ ದೊರೆತಿದೆ. ಇತ್ತ ಶ್ರೀ ರಂಗಪಟ್ಟಣ ಉತ್ಸವದ ಅಂಗವಾಗಿ ವಿಶ್ವ ಪ್ರಸಿದ್ಧ ಕೆ ಆರ್ ಎಸ್ ಜಲಾಶಯ ಹಾಗೂ ಬೃಂದಾವನದ ದೀಪಾಲಾಂಕರವನ್ನು ಎಂಎಲ್ಸಿ ದಿನೇಶ್ ಗೂಳಿಗೌಡ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಡಾ.ರಾಮ್ ಪ್ರಸಾದ್ ಮನೋಹರ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸೂಪರಿಂಟೆಂಡೆಂಟ್ ಇಂಜಿನಿಯರ್ ರಘುರಾಮ್, ಎಕ್ಸಿಕ್ಯುಟಿವ್ ಇಂಜಿನಿಯರ್ ಜಯಂತ್ ಸೇರಿದಂತೆ ನಾನಾ ಗಣ್ಯರು ಉಪಸ್ಥಿತರಿದ್ದರು. https://kannadanewsnow.com/kannada/nava-durga-has-the-spirit-of-navagraha-worship-her-like-this-to-receive-the-grace-of-mother-earth/…
ನವರಾತ್ರಿಯ ಆಯಾ ದಿನಗಳಲ್ಲಿ ಆಯಾ ಬಣ್ಣದ ವಸ್ತ್ರವನ್ನು ಧರಿಸಿ ಆಯಾ ಗ್ರಹಕ್ಕೆ ಹಾಗೂ ಆಯಾದೇವಿಗೆ ತಕ್ಕಂತೆ ಆರಾಧನೆ ಮಾಡಿ ನೈವೇದ್ಯವನ್ನು ಇಡುವುದರಿಂದ ಜಗನ್ಮಾತೆಯ ಕೃಪೆ ಉಂಟಾಗುತ್ತದೆ. ಶೈಲಪುತ್ರೀ: ಶೈಲರಾಜ ಹಿಮವಂತನ ಪುತ್ರಿಯೇ ಶೈಲಪುತ್ರಿ. ವೃಷಭವಾಹನೆಯಾದ ಇವಳ ಬಲಗೈಯಲ್ಲಿ ತ್ರಿಶೂಲ ಮತ್ತು ಎಡಗೈಯಲ್ಲಿ ಕಮಲಪುಷ್ಪ ಸುಶೋಭಿತವಾಗಿದೆ. ನವರಾತ್ರಿಯ ಮೊದಲನೇ ದಿನ ಇವಳ ಉಪಾಸನೆಯನ್ನು ಮಾಡಲಾಗುತ್ತದೆ. ಈ ದಿನದ ಉಪಾಸನೆಯಲ್ಲಿ ಯೋಗಿಗಳು ತಮ್ಮ ಮನವನ್ನು ಮೂಲಾಧಾರ ಚಕ್ರದಲ್ಲಿ ನೆಲೆಗೊಳಿಸಿರುತ್ತಾರೆ. ಇಲ್ಲಿಂದಲೇ ಅವರ ಯೋಗಸಾಧನೆಯು ಪ್ರಾರಂಭವಾಗುತ್ತದೆ. ಅಂದಿನ ಗ್ರಹ – ಚಂದ್ರ, ನೈವೇದ್ಯ – ಮುದ್ಗಾನ್ನ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ…
ಮಂಡ್ಯ : ಮದ್ದೂರು ಪಟ್ಟಣದಲ್ಲಿ ಇತ್ತಿಚೆಗೆ ನಡೆದ ಗಲಭೆ ಖಂಡಿಸಿ ಸೌಹಾರ್ದ ಸಾಮರಸ್ಯ ನಡಿಗೆ ನಡೆಸಲು ಮುಂದಾಗಿದ್ದ ವಿವಿಧ ಸಂಘಟನೆಗಳ ಜಾಥಾ ಕಾರ್ಯಕ್ರಮಕ್ಕೆ ಪೋಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಜನಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸೋಮವಾರ ಜರುಗಿತು. ಮಳವಳ್ಳಿ ರಸ್ತೆಯಲ್ಲಿರುವ ಪ್ರೊ.ನಂಜುಂಡಸ್ವಾಮಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮೂಲಕ ಸಾಮರಸ್ಯ ನಡಿಗೆಗೆ ಚಾಲನೆ ನೀಡಲಾಯಿತು. ಶಿವಪುರದ ಧ್ವಜ ಸತ್ಯಾಗ್ರಹ ಸೌಧದವರೆಗೆ ಕಾಲ್ನಡಿಗೆ ಜಾಥಾ ಮಾಡಲು ಪೊಲೀಸ್ ಇಲಾಖೆ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಪ್ರತಿಮೆಯ ಬಳಿಯೇ ಸೌಹಾರ್ದ ಸಾಮರಸ್ಯದ ಸಭೆ ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ, ಪುರಸಭಾ ಮಾಜಿ ಅಧ್ಯಕ್ಷ ಎಂ.ಸಿ.ಬಸವರಾಜು, ಜಿಲ್ಲೆಯು ಶಾಂತಿ, ಸಾಮರಸ್ಯ ಹಾಗೂ ಸಹಬಾಳ್ವೆಗೆ ಹೆಸರಾಗಿದೆ. ಇಂತಹ ಜಿಲ್ಲೆಯಲ್ಲಿ ಕೆಲವರು ಕೋಮು ಗಲಭೆ ಉಂಟು ಮಾಡುವ ಮೂಲಕ ಮುಂದೆ ಅಧಿಕಾರ ಹಿಡಿಯಲು ಹುನ್ನಾರ ನಡೆಸಿದ್ದಾರೆ. ಆ ಪಿತೂರಿ ವಿರುದ್ಧ ವಿವಿಧ ಜನಪರ ಸಂಘಟನೆಗಳ ನಾವೆಲ್ಲರೂ ಸೌಹಾರ್ದ ಸಾಮರಸ್ಯ ನಡಿಗೆಯನ್ನು ಸೋಮವಾರ ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆ…
ಮುಂಬೈ : ಭಾರತವು ಹಬ್ಬದ ಋತುವಿಗೆ ಕಾಲಿಡುತ್ತಿದ್ದಂತೆ – ಸಂತೋಷ, ಒಗ್ಗಟ್ಟು ಮತ್ತು ಆಚರಣೆಯ ಸಮಯ. ಜಿಯೋಮಾರ್ಟ್ ಸೆಪ್ಟೆಂಬರ್ 22 ರಿಂದ ಆರಂಭವಾಗಿರುವ ಜಿಯೋ ಉತ್ಸವ್ 2025 ಅನ್ನು ಇನ್ನಷ್ಟು ವಿಶೇಷವಾಗಿಸಲು ಸಜ್ಜಾಗಿದೆ. ದೇಶಾದ್ಯಂತ ಹಬ್ಬದ ಉತ್ಸಾಹವನ್ನು ಆಚರಿಸುತ್ತಾ, ಜಿಯೋಮಾರ್ಟ್ ಗ್ರಾಹಕರಿಗೆ ಸಾಟಿಯಿಲ್ಲದ ಉಳಿತಾಯ, ವ್ಯಾಪಕ ಉತ್ಪನ್ನ ಆಯ್ಕೆ ಮತ್ತು ಯಾವುದೇ ಗುಪ್ತ ಶುಲ್ಕಗಳಿಲ್ಲದೆ (ಹಿಡನ್ ಚಾರ್ಜಸ್) ಮನೆ ಬಾಗಿಲಿಗೆ ಅಗತ್ಯ ವಸ್ತುಗಳನ್ನು ವಿತರಣೆ ಮಾಡುತ್ತದೆ. ಜಿಯೋ ಉತ್ಸವ್‌ದಲ್ಲಿ ಐಫೋನ್ 16 ಇ ಅತ್ಯಂತ ಕಡಿಮೆ ಬೆಲೆಗೆ 44,870 ರೂಗೆ ಸಿಗಲಿದೆ. ಈ ಸೇಲ್‌ನಲ್ಲಿ ಐಫೋನ್ 16 ಪ್ಲಸ್ 61,700 ರೂ. ನಿಂದ ಪ್ರಾರಂಭವಾಗಲಿದೆ. ಜೊತೆಗೆ, ಶಾಪರ್‌ಗಳು ಬ್ಲಾಕ್ ಬಸ್ಟರ್ ಎಲೆಕ್ಟ್ರಾನಿಕ್ಸ್ ಡೀಲ್‌ಗಳನ್ನು ಆನಂದಿಸಬಹುದು. ಪ್ರಮುಖ ಡೀಲ್‌ಗಳೆಂದರೆ: * ಇನ್ಫಿನಿಕ್ಸ್ ಜಿಟಿ 30 ರೂ.17,499 ರಿಂದ ಪ್ರಾರಂಭವಾಗುತ್ತದೆ * ₹ 49,590 ರಿಂದ ಪ್ರಾರಂಭವಾಗುವ ಮ್ಯಾಕ್ ಬುಕ್‌ಗೆ ಅಪ್ ಗ್ರೇಡ್ ಮಾಡಿ * ಸ್ಯಾಮ್ ಸಂಗ್ 32 ಇಂಚಿನ ಟಿವಿ 10,490…
ಮೈಸೂರು : ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು. ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲುಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು. ವಿನೇಶ್ ಫೋಗಟ್ ಅವರು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ಶ್ರೀಮತಿ ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ…
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆ ಹಂಚಿಕೆಯ ಅಂತಿಮ ಫಲಿತಾಂಶ ಸೆ.23ರಂದು ಪ್ರಕಟವಾಗಲಿದ್ದು, ಆ ಬಳಿಕ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅಂತಿಮ ಸುತ್ತಿನ ಫಲಿತಾಂಶ ಪ್ರಕಟಣೆ ನಂತರ ಸೆ.26ರೊಳಗೆ ಶುಲ್ಕ ಪಾವತಿಸಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.28ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಖಿಲ ಭಾರತ ಕೋಟಾ (ಎಂಸಿಸಿ) ಹಾಗೂ ಕೆಇಎ ಎರಡೂ ಕಡೆ ವೈದ್ಯಕೀಯ ಸೀಟು ಹಂಚಿಕೆಯಾದ 774 ಅಭ್ಯರ್ಥಿಗಳ ಪೈಕಿ, ಎಂಸಿಸಿ ಸೀಟು ಉಳಿಸಿಕೊಳ್ಳಲು ಇಚ್ಚಿಸುವ ಅಭ್ಯರ್ಥಿಗಳಿಗೆ ಕೆಇಎ ಸೀಟು ಬಿಟ್ಟು ಹೊರ ಹೋಗಲು ಇಂದು ಇಡೀ ದಿನ ಅವಕಾಶ ನೀಡಲಾಗಿತ್ತು. ಈ ಪ್ರಕ್ರಿಯೆ ನಂತರ ರದ್ಧಾದ ಸೀಟುಗಳನ್ನು ಇದೇ ಸುತ್ತಿಗೆ ತೆಗೆದುಕೊಂಡು ಪುನಃ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕೆಇಎ…
ಶಿವಮೊಗ್ಗ : ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ತಿಳಿಸಿದರು. ಸೋಮವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಸಾಮಾಜಿ, ಆರ್ಥಿಕ ಹಾಗೂ ಶೈಕ್ಷಣಿಕ ಗಣತಿಯ ಸಮೀಕ್ಷೆ ನಡೆಸುವ ಶಿಕ್ಷಕರಿಗೆ ಗಣತಿ ಕಾರ್ಯ ಕಿಟ್ ಅನ್ನು ವಿತರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ನಮ್ಮ ಪ್ರಣಾಳಿಕೆ ನೀಡಿದ ಭರವಸೆಯಂತೆ ಒಳಮೀಸಲಾತಿ ಜಾರಿಗೆ ತಂದೆವು. ಈಗ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ಮಾಡಲು ಮುಂದಾಗಿದ್ದೇವೆ. ಈ ಮೂಲಕ ಮತದಾರರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಿದೆ ಎಂದರು. ಈಗಾಗಲೇ ಸರ್ಕಾರದ ಆದೇಶದಂತೆ ಸಮೀಕ್ಷೆಗೆ ನನ್ನ ಇಲಾಖೆಯಿಂದ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ 1…
ಶಿವಮೊಗ್ಗ: ರಾಜ್ಯದ 2ನೇ ಅತಿದೊಡ್ಡ ದಸರಾ ಎಂದೇ ಖ್ಯಾತಿಯಾಗಿರುವಂತ ಶಿವಮೊಗ್ಗ ದಸರಾಕ್ಕೆ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿಎಸ್ ರಾಜು ಅವರು ಚಾಲನೆ ನೀಡಿದರು. ಇಂದು ಶಿವಮೊಗ್ಗ ದಸರಾಕ್ಕೆ ಬೆಳ್ಳಿ ಮಂಟಪದಲ್ಲಿರುವ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಇಂದಿನಿಂದ ಅಕ್ಟೋಬರ್.4ರವರೆಗೆ ಶಿವಮೊಗ್ಗದಲ್ಲಿ ನವರಾತ್ರಿ ಉತ್ಸವ ದೇವಾಲಯದಲ್ಲಿ ಸಂಭ್ರಮದಿಂದ ನಡೆಯಲಿದೆ. ಶಿವಮೊಗ್ಗ ಪಾಲಿಕೆಯಿಂದ 650 ಕೆಜಿ ತೂಕದ ಬೆಳ್ಳಿ ಅಂಬಾರಿಯನ್ನು ಲಾರಿಯ ಮೇಲೆ ಮೆರವಣಿಗೆ ಮಾಡಿ ಕೋಟೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಕೊಂಡೊಯ್ಯಲಾಯಿತು. ಅಂದಹಾಗೇ ಶಿವಮೊಗ್ಗ ದಸರಾ ಉದ್ಘಾಟಿಸಿದಂತ ಬಿಎಸ್ ರಾಜು ಅವರು, ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ, ರಾಷ್ಟ್ರಪತಿಗಳಿಂದ ಪ್ರಶಸ್ತಿಯನ್ನು ಪಡೆದಿದ್ದಂತ ನಿವೃತ್ತ ಯೋಧರಾಗಿದ್ದಾರೆ. https://kannadanewsnow.com/kannada/cyber-fraud-attempt-against-infosys-chief-sudha-murthy-complaint-filed/ https://kannadanewsnow.com/kannada/watch-video-congress-releases-ai-against-pm-modi-another-video/
ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೂ ಸೈಬರ್ ವಂಚಕರು ಕಾಟಕೊಟ್ಟಿದ್ದಾರೆ. ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂದು ವಂಚನೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಸೆಪ್ಟೆಂಬರ್.5ರಂದು ಕರೆ ಮಾಡಿದಂತ ಸೈಬರ್ ವಂಚಕನೊಬ್ಬ ತಾನು ದೂರ ಸಂಪರ್ಕ ಸಚಿವಾಲಯದ ಉದ್ಯೋಗಿ ಎಂಬುದಾಗಿ ಪರಿಚಯಿಸಿಕೊಂಡಿದ್ದಾನೆ. ಆ ಬಳಿಕ ನಿಮ್ಮ ನಂಬರ್ ಆಧಾರ್ ಗೆ ಲಿಂಕ್ ಮಾಡದೇ ನೋಂದಾಯಿಸಲಾಗಿದೆ ಎಂದು ಹೇಳಿದ್ದಾನೆ. ಇನ್ನೂ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರ ವೈಯಕ್ತಿಕ ಮಾಹಿತಿ ಪಡೆಯಲು ಸೈಬರ್ ವಂಚಕ ಯತ್ನಿಸಿದ್ದಾನೆ. ಅಲ್ಲದೇ ನಿಮ್ಮ ನಂಬರ್ ಗೆ ಅಶ್ಲೀಲ ವೀಡಿಯೋ ಕಳಿಸಲಾಗ್ತಿದೆ. ಅದನ್ನು ನಿಲ್ಲಿಸಲಾಗಿದೆ ಎಂದು ಬೆದರಿಕೆ ಹಾಕಿದ್ದಾನೆ. ಹೀಗಾಗಿ ಸೈಬರ್ ವಂಚಕನ ವಿರುದ್ಧ ದೂರು ನೀಡಲಾಗಿದೆ. https://kannadanewsnow.com/kannada/power-outage-in-these-areas-of-bellary-district-from-tomorrow-to-september-30/ https://kannadanewsnow.com/kannada/watch-video-congress-releases-ai-against-pm-modi-another-video/