Author: kannadanewsnow09

ನವದೆಹಲಿ: ವಿಚ್ಛೇದನದ ವದಂತಿಗಳ ಮಧ್ಯೆ, ಇಶಾ ಡಿಯೋಲ್ ಮತ್ತು ಭರತ್ ತಖ್ತಾನಿ ಅವರು ಬೇರ್ಪಡುವುದನ್ನು ಖಚಿತಪಡಿಸಿದ್ದಾರೆ ಎಂದು ವರದಿಯಾಗಿದೆ. ಮದುವೆಯಾಗಿ 12 ವರ್ಷಗಳಾಗಿದ್ದ ಈ ಜೋಡಿ ಇದೀಗ ವಿಚ್ಛೇದನ ಘೋಷಿಸಿದೆ. ಅವರ ವಿಚ್ಛೇದನವು “ಸೌಹಾರ್ದಯುತವಾಗಿದೆ” ಎಂದು ಅವರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದೆಹಲಿ ಟೈಮ್ಸ್ ವರದಿ ಮಾಡಿದಂತೆ, ಅವರು ಹೇಳಿಕೆ ನೀಡಿದ್ದಾರೆ. “ನಾವು ಪರಸ್ಪರ ಮತ್ತು ಸೌಹಾರ್ದಯುತವಾಗಿ ಬೇರ್ಪಡಲು ನಿರ್ಧರಿಸಿದ್ದೇವೆ. ನಮ್ಮ ಜೀವನದಲ್ಲಿನ ಈ ಬದಲಾವಣೆಯ ಮೂಲಕ, ನಮ್ಮ ಇಬ್ಬರು ಮಕ್ಕಳ ಉತ್ತಮ ಹಿತಾಸಕ್ತಿಗಳು ಮತ್ತು ಕಲ್ಯಾಣವು ನಮಗೆ ಅತ್ಯಂತ ಮಹತ್ವದ್ದಾಗಿದೆ. ನಮ್ಮ ಗೌಪ್ಯತೆಯನ್ನು ಗೌರವಿಸುವುದನ್ನು ನಾವು ಪ್ರಶಂಸಿಸುತ್ತೇವೆ” ಎಂದು ಹೇಳಿದ್ದಾರೆ. ಇಶಾ ಮತ್ತು ಭರತ್ ಹೆಚ್ಚಾಗಿ ಬೇರ್ಪಟ್ಟಿದ್ದಾರೆ ಎಂದು ಪ್ರತಿಪಾದಿಸಿದ ರೆಡ್ಡಿಟ್ ಪೋಸ್ಟ್ ಈ ಹಿಂದೆ ವೈರಲ್ ಆಗಿತ್ತು. ಆಕೆಯ ಇತ್ತೀಚಿನ ಸಾರ್ವಜನಿಕ ಪ್ರದರ್ಶನಗಳ ಆಧಾರದ ಮೇಲೆ, ಅವಳು ತನ್ನ ಸಂಗಾತಿಯೊಂದಿಗೆ ಬಂದಿಲ್ಲ ಎಂದು ಗಮನಿಸಲಾಗಿದೆ. ಅಲ್ಲದೆ, ಈ ಪೋಸ್ಟ್ನಲ್ಲಿ ಭರತ್ ತನ್ನ ಜೀವನದಲ್ಲಿ ಮುಂದೆ ಸಾಗಿದ್ದಾರೆ ಎಂದು ಬಳಕೆದಾರರು…

Read More

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಗರದಲ್ಲಿ ಭಾರತ್ ಬ್ರ್ಯಾಂಡ್ ಯೋಜನೆಯಡಿ ಭಾರತ್ ರೈಸ್ ಬಿಡುಗಡೆ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿದ್ದಾರೆ. ಹೀಗಾಗಿ ಇನ್ಮುಂದೆ ಭಾರತ್ ಬ್ರಾಂಡ್ ಅಕ್ಕಿ ಕೆಜಿಗೆ ರೂ.29, ತೊಗರಿಬೇಳೆ 60 ರೂ.ಗೆ ಮಾರಾಟವಾಗಲಿದೆ. ಈ ಕಾರ್ಯಕ್ರಮದ ಬಳಿಕ ಮಾತನಾಡಿದಂತ ಅವರು, ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ಮಹತ್ವಾಕಾಂಶೆಯ ಯೋಜನೆಯಡಿ ಸಮಗ್ರ ಭಾರತದಲ್ಲಿ ಒಂದೇ ಬ್ರ್ಯಾಂಡಿನಡಿಯಲ್ಲಿ ದಿನನಿತ್ಯ ಬೇಕಾಗುವ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡಲಾಗುತ್ತಿದೆ ಎಂದರು. ಈ ವರೆಗೆ ಭಾರತ್ ಬ್ರ್ಯಾಂಡ್ ಅಡಿಯಲ್ಲಿ ಕಡ್ಲೆ ಬೇಳೆ ರೂ. 60 ಪ್ರತಿ ಕೆಜಿ, ಗೋದಿ ಹಿಟ್ಟು ರೂ. 27.50 ಪ್ರತಿ ಕೆ.ಜಿ ಹಾಗೂ ಮೂಂಗ್ ದಾಲ್ ಅನ್ನು ಪ್ರತಿ ಕೆಜಿ ಗೆ ರೂ. 93ರಂತೆ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಈ ಯೋಜನೆಯ ಮುಂದುವರೆದ ಭಾಗವಾಗಿ ಈ ದಿನ ಭಾರತ ಬ್ರ್ಯಾಂಡ್ ಯೋಜನೆಯಡಿ ಅಕ್ಕಿಯನ್ನು ಪ್ರತಿ ಕೆ.ಜಿಗೆ ರೂ. 29ರಂತೆ ಸರಬರಾಜು ಮಾಡಲು ಹಸಿರು ನಿಶಾನೆ ತೋರಿಸಲಾಗುತ್ತಿದೆ.…

Read More

ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತದೆ. ಕೆಟ್ಟ ಸಮಯ ಒಳ್ಳೆಯ ಸಮಯವಾಗಿ ಬದಲಾಗುತ್ತದೆ‌‌.. ಮಧುರೈ ಕಲಾದೇವಿ ಅಮ್ಮನ ದೇವಸ್ಥಾನದ ಮಹತ್ವ ಮುಖ್ಯಾಂಶಗಳು ಏನು ಹೋಗುತ್ತದೆ ಮತ್ತು ಹಿಂತಿರುಗುವುದಿಲ್ಲ. ಇದು ನಮ್ಮ ಜೀವನ ಎಂದು ಹೇಳೋಣ. ಆದರೆ ಸಮಯ ಮತ್ತು ಸಮಯ ಕೂಡ ಹಿಂತಿರುಗುವುದಿಲ್ಲ. ಇಂದು ನಾವು ಆ ಕಾಲದ ಒಡೆಯ, 27 ನಕ್ಷತ್ರಗಳು ಮತ್ತು 12 ರಾಶಿಚಕ್ರದ ಚಿಹ್ನೆಗಳ ಒಡೆಯ ಮತ್ತು ಈ ಸಮಯದ ಒಡೆಯ ಕಾಳಿಕಾದೇವಿ ಅಮ್ಮನ ದೇವಾಲಯದ ಬಗ್ಗೆ ನೋಡಲಿದ್ದೇವೆ. ದೇವಿ ಕಲಾದೇವಿ ವಿಶೇಷ ಯಾವುದೇ ಸಮಯದಲ್ಲಿ ಮನುಷ್ಯರಿಗೆ ಏನಾಗುತ್ತದೆ ಎಂದು ಯಾರೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ವಿಜ್ಞಾನಿಗಳು ಸಹ ಸಮಯದ ರಹಸ್ಯವನ್ನು ಊಹಿಸಲು ಸಾಧ್ಯವಿಲ್ಲ ಮತ್ತು ಈ ಭೂಮಿಯ ಮೇಲೆ ಮುಂದೆ ಏನಾಗುತ್ತದೆ ಎಂಬ ಅಭಿಪ್ರಾಯವಿದೆ. ಆದರೆ ನಮ್ಮ ಕಾಲ ಮತ್ತು ನಮ್ಮ ಭವಿಷ್ಯದ ಕಾಲದ ಬಗ್ಗೆ ತಿಳಿದಿರುವ ದೇವತೆಯಿದ್ದರೆ ಅದು ಈ ಶ್ರೀ ಕಲಾದೇವಿ ದೇವಿಯೇ. ಶ್ರೀ ಸಿಗಂದೂರು…

Read More

ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗಿದ್ದಂತ ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಅವರನ್ನು ಆರ್ ಆರ್ ನಗರದಲ್ಲಿ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ವಿವಿಧ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಇದು ಬ್ರೇಕಿಂಗ್ ಸುದ್ದಿಯಾಗಿದ್ದು, ಅಪ್ ಡೇಟ್ ಸುದ್ದಿಗಾಗಿ ಇದೇ ಪುಟಕ್ಕೆ ಭೇಟಿ ನೀಡಿ. https://kannadanewsnow.com/kannada/former-icici-bank-ceo-chanda-kochhars-arrest-illegal-bombay-hc/ https://kannadanewsnow.com/kannada/breaking-good-tuesday-for-the-stock-market-nifty-sensex-soar-higher-investors-gain-over-rs-4-lakh-crore/

Read More

ನವದೆಹಲಿ: ಭಾರತೀಯರ ಪ್ರವಾಸಿಗರಿಗೆ ಈಗಾಗಲೇ ವಿವಿಧ ದೇಶಗಳಿಗೆ ವೀಸಾ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇದೀಗ ಮುಂದುವರೆದು ಇರಾನ್ ದೇಶವು ಭಾರತೀಯ ಪ್ರವಾಸಿಗರಿಗೆ ವಿಸಾ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಸರ್ಕಾರವು ಫೆಬ್ರವರಿ 4, 2024 ರಿಂದ ಜಾರಿಗೆ ಬರುವಂತೆ ಭಾರತದ ನಾಗರಿಕರಿಗೆ ವೀಸಾ ನಿಯಮಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದೆ. ಈ ಹೊಸ ನಿರ್ದೇಶನದ ಅಡಿಯಲ್ಲಿ, ಸಾಮಾನ್ಯ ಪಾಸ್ಪೋರ್ಟ್ ಹೊಂದಿರುವ ಭಾರತೀಯ ಪ್ರಜೆಗಳಿಗೆ ಪ್ರವಾಸೋದ್ಯಮ ಉದ್ದೇಶಗಳಿಗಾಗಿ ಇರಾನ್ಗೆ ಪ್ರವೇಶಿಸಲು ವೀಸಾ ಅಗತ್ಯವಿಲ್ಲ. ಆದಾಗ್ಯೂ, ಇರಾನಿನ ಅಧಿಕಾರಿಗಳು ವಿವರಿಸಿದ ನಿರ್ದಿಷ್ಟ ಷರತ್ತುಗಳು ಮತ್ತು ಮಿತಿಗಳಿವೆ. https://twitter.com/Iran_in_India/status/1754836158536712364 ಮೊದಲನೆಯದಾಗಿ, ಸಾಮಾನ್ಯ ಭಾರತೀಯ ಪಾಸ್ಪೋರ್ಟ್ ಹೊಂದಿರುವ ವ್ಯಕ್ತಿಗಳಿಗೆ ಪ್ರತಿ ಆರು ತಿಂಗಳಿಗೊಮ್ಮೆ ವೀಸಾ ಇಲ್ಲದೆ ಇರಾನ್ ಪ್ರವೇಶಿಸಲು ಅನುಮತಿ ನೀಡಲಾಗುವುದು. ಆದಾಗ್ಯೂ, ಅವರ ವಾಸ್ತವ್ಯವು ಪ್ರತಿ ಭೇಟಿಗೆ ಗರಿಷ್ಠ 15 ದಿನಗಳಿಗೆ ಸೀಮಿತವಾಗಿದೆ. ಈ ಅವಧಿಯನ್ನು ಯಾವುದೇ ಸಂದರ್ಭದಲ್ಲೂ ವಿಸ್ತರಿಸಲಾಗುವುದಿಲ್ಲ ಎಂಬುದಾಗಿ ತಿಳಿಸಿದೆ. ವೀಸಾ ರದ್ದತಿ ಇರಾನ್ ಪ್ರವೇಶಿಸುವ…

Read More

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಇತರೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸುಳ್ಳು ಮತ್ತು ಪ್ರಚೋದನಕಾರಿ ಪೋಸ್ಟ್ ಮಾಡಿದಂತ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ. ಇಂದು ಕೋರ್ಟ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಆದೇಶಿಸಿದೆ. ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪರವಾಗಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತ ನ್ಯಾಯಪೀಠವು, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆಗೆ ಆದೇಶಿಸಿದೆ. ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯ ಪೊಲೀಸರಿಗೆ ಬಿವೈ ವಿಜಯೇಂದ್ರ, ಬಿಜೆಪಿ ಪಕ್ಷದ ಹಿರಿಯ ನಾಯಕರ ಬಗ್ಗೆ ಸುಳ್ಳು ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ತನ್ನ ಆದೇಶದಲ್ಲಿ ನ್ಯಾಯಾಲಯ ಸೂಚಿಸಿದೆ. ಹೀಗಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಬಿಗ್ ಶಾಕ್, ಸಂಕಷ್ಟ ಎದುರಾದಂತೆ ಆಗಿದೆ. ಅಂದಹಾಗೇ ಫೇಸ್ ಬುಕ್…

Read More

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಮೂಲಕ ಬಿಗ್ ಶಾಕ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಇರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಪೆಕ್ಸ್ ಬ್ಯಾಂಕ್ ನ ಮ್ಯಾನೇಜರ್ ರಾಜಣ್ಣ ಮತ್ತಶೆಟ್ಟಿ ಎಂಬುವರು ಬ್ಯಾಂಕ್ ನಿಂದ 439 ಕೋಟಿ ಸಾಲ ಪಡೆದು ಮರು ಪಾವತಿ ಮಾಡದ ಹಿನ್ನಲೆಯಲ್ಲಿ ಜನವರಿ.5ರಂದು ಸಿಐಡಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಬಿಜೆಪಿಯ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮಾಲೀಕತ್ವದ ಗೋಕಾಕ್ ನ ಚಿಕ್ಕನಂದಿ ಗ್ರಾಮದಲ್ಲಿರುವಂತ ಸಕ್ಕರೆ ಕಾರ್ಖಾನೆಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. https://kannadanewsnow.com/kannada/former-icici-bank-ceo-chanda-kochhars-arrest-illegal-bombay-hc/ https://kannadanewsnow.com/kannada/breaking-good-tuesday-for-the-stock-market-nifty-sensex-soar-higher-investors-gain-over-rs-4-lakh-crore/

Read More

ಬೆಂಗಳೂರು : ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್ಡಿ)ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳಲ್ಲೂ ಈ ಕುರಿತು ಸುದ್ದಿ ಪ್ರಕಟವಾದರೂ ಸರಕಾರ ಎಚ್ಚೆತ್ತುಕೊಳ್ಳಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗ ಹರಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಮತ್ತು ಎರಡು ಸಾವು ಸಂಭವಿಸಿದ ಬಳಿಕ ಸುದೀರ್ಘ ನಿದ್ದೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿತು. ಆ ಬಳಿಕವಷ್ಟೇ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಧಾವಿಸಿ ಸಭೆ ನಡೆಸುವ ಶಾಸ್ತ್ರ ಮಾಡಿದ್ದಾರೆ ಎರಡು ತಿಂಗಳ ಮೊದಲೇ ಎಚ್ಚೆತ್ತುಕೊಂಡಿದ್ದಿದ್ದರೆ ಅಮಾಯಕ ಜೀವಗಳನ್ನು ಉಳಿಸಿಕೊಳ್ಳಬಹುದಿತ್ತು ಎಂದು ಪತ್ರಿಕಾ ಹೇಳಿಕೆಯಲ್ಲಿ ಇಲಾಖೆ ಕಾರ್ಯವೈಖರಿಗೆ ಕಿಡಿಕಾರಿದ್ದಾರೆ. ಶಿವಮೊಗ್ಗ, ಉತ್ತರಕನ್ನಡ,…

Read More

ಬೆಂಗಳೂರು: ಶಿಕ್ಷಕರಾಗೋ ಕನಸು ಹೊಂದಿ ಬಿಎಡ್ ವ್ಯಾಸಂಗ ಮಾಡೋದಕ್ಕಾಗಿ ಕೋರ್ಸಿಗೆ ಅರ್ಜಿ ಸಲ್ಲಿಸಿದ್ದರೇ, ನಿಮಗೆ ಮಹತ್ವದ ಮಾಹಿತಿ ಎನ್ನುವಂತೆ 4ನೇ ಸುತ್ತಿನ ಸರ್ಕಾರಿ ಕೋಟಾ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದ ವಿಶೇಷಾಧಿಕಾರಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಬಿಇಡಿ ಕೋರ್ಸಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ 4ನೇ ಸುತ್ತಿನ ಸೀಟು ಹಂಚಿಕೆ ಪಟ್ಟಿಯನ್ನು ದಿನಾಂಕ 07-02-2024ರಂದು ಪ್ರಕಟಿಸಲಾಗುತ್ತಿದೆ ಎಂದು ತಿಳಿಸಿದೆ. ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಚಲನ್ ಡೌನ್ ಲೋಡ್ ಮಾಡಿಕೊಂಡು, ದಾಖಲಾತಿ ಶುಲ್ಕವನ್ನು ಎಸ್ ಬಿಐ ಬ್ಯಾಂಕಿನಲ್ಲಿ ಪಾವತಿಸಿ ದಿನಾಂಕ 09-02-2024ರ ಒಳಗಾಗಿ ಚಲನ್ ಪ್ರತಿಯನ್ನು ಸಂಬಂಧಿಸಿದ ನೋಡಲ್ ಸೆಂಟರ್ ನಲ್ಲಿ ಸಲ್ಲಿಸಿ ಪ್ರವೇಶ ಪತ್ರವನ್ನು ಪಡೆಯುವಂತೆ ತಿಳಿಸಿದೆ. ಕಾಲೇಜಿನಲ್ಲಿ ದಾಖಲಾತಿ ಪಡೆಯಲು ಕೊನೆಯ ದಿನಾಂಕ 12-02-2024 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.schooleducation.karnataka.gov.in ಗೆ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ಹೇಳಿದೆ. https://kannadanewsnow.com/kannada/digitisation-of-medical-records-of-state-health-department-now-your-report-will-be-available-everywhere/ https://kannadanewsnow.com/kannada/former-icici-bank-ceo-chanda-kochhars-arrest-illegal-bombay-hc/

Read More

ಮೈಸೂರು: ಸರ್ಕಾರಿ ಆಸ್ಪತ್ರೆಗೆ ಹೋದ್ರೆ ಓಪಿಡಿ ಚೀಟಿ ಪಡೆದು, ವೈದ್ಯರು ನೀಡೋ ಚಿಕಿತ್ಸೆ ಪಡೆದು, ಮನೆಗೆ ರೋಗಿಗಳು ವಾಪಾಸ್ ಆಗ್ತಾ ಇದ್ರು. ಇನ್ಮುಂದೆ ಇದರ ಜೊತೆಗೆ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದ್ದು, ರೋಗಿಗಳ ರೆಕಾರ್ಡ್ ಎಲ್ಲಾ ಕಡೆ ಸಿಗೋ ಹಾಗೆ ಆಗಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಈಗಾಗಲೇ ದಾಖಲೆಗಳ ಡಿಜಿಟಲ್ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆಸ್ಪತ್ರೆಗೆ ಹೋಗೋ ರೋಗಿಗಳ ಪ್ರತಿಯೊಂದು ರಿಪೋರ್ಟ್ ಅದರಲ್ಲಿ ಲಭ್ಯವಾಗಲಿದೆ. ಹೀಗಾಗಿ ರೋಗಿಗಳಿಗೆ ಚಿಕಿತ್ಸೆ ನೀಡೋದಕ್ಕೂ ಸುಲಭವಾಗುತ್ತಿತ್ತು. ಇದೀಗ ರಾಜ್ಯದಲ್ಲೂ ಇದೇ ಮಾದರಿಯಲ್ಲಿ ವೈದ್ಯಕೀಯ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಿಗೆ ತೆರಳೋ ರೋಗಿಗಳಿಗೆ ಚಿಕಿತ್ಸೆ ನೀಡೋ ಪ್ರತಿಯೊಂದು ರಿಪೋರ್ಟ್ ಎಲ್ಲಾ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯವಾಗೋ ತರ ಆಗಲಿದೆ. ಆರಂಭದಲ್ಲಿ ಪ್ರಾಯೋಗಿಕವಾಗಿ ಮೈಸೂರು, ಬೆಳಗಾವಿ ಮತ್ತು ಉಡುಪಿ ಜಿಲ್ಲೆಯಲ್ಲಿ ಮಕ್ರೋಸೈಟ್ ಮೂಲಕ ಜಾರಿಗೊಳಿಸಲಾಗುತ್ತಿದೆ. ಈ ಬಳಿಕ ಇತರೆ ಜಿಲ್ಲೆಗಳಿಗೂ ವಿಸ್ತರಣೆ ಆಗಲಿದೆ. ರಾಜ್ಯ ಆರೋಗ್ಯ ಮತ್ತು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಸಹಯೋಗದೊಂದಿಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

Read More