Author: kannadanewsnow09

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ( Board of Control for Cricket in India -BCCI) ಕಾರ್ಯದರ್ಶಿ ಜಯ್ ಶಾ ( Jay Shah ) ಅವರನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (Asian Cricket Council – ACC) ಅಧ್ಯಕ್ಷರಾಗಿ ಮರು ನೇಮಕ ಮಾಡಲಾಗಿದೆ. ಶಾ ಅವರು ಸತತ ಮೂರನೇ ಅವಧಿಗೆ ಎಸಿಸಿಯನ್ನು ಮುನ್ನಡೆಸಲಿದ್ದಾರೆ. ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿ ಅವರ ಮರುನೇಮಕವು ಜನವರಿ 31ರ ಇಂದು ಬಾಲಿಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಲ್ಪಟ್ಟ ನಿರ್ಧಾರವಾಗಿದೆ ಎಂದು ತಿಳಿದುಬಂದಿದೆ. ಒಟ್ಟಾರೆಯಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷರಾಗಿ ಮರು ನೇಮಕಗೊಂಡಿದ್ದಾರೆ. ಈ ಮೂಲಕ ಸತತ ಮೂರನೇ ಅವಧಿಗೆ ಎಸಿಸಿ ಅಧ್ಯಕ್ಷರಾಗಿ ಜಯ್ ಶಾ ಅವರು ನೇಮಕಗೊಂಡಂತೆ ಆಗಿದೆ. https://kannadanewsnow.com/kannada/congress-workers-to-hold-rally-in-mangaluru-on-feb-17-deputy-cm-dk-shivakumar/ https://kannadanewsnow.com/kannada/breaking-hanuman-flag-row-mandya-bandh-called-on-february-7/

Read More

ಇಂದು ಪ್ರತಿಯೊಬ್ಬ ಮನುಷ್ಯನೂ ಪ್ರತಿದಿನ ಕೊರಗುವ ಒಂದು ಮಾತು ಏನೆಂದರೆ ನಾನೇನು ಪಾಪ ಮಾಡಿದ್ದೇನೆ ಎಂದರೆ ಈ ಜನ್ಮದಲ್ಲಿ ತುಂಬಾ ಕಷ್ಟ ಪಡುತ್ತಿದ್ದೇನೆ. ಸುಸ್ಥಿತಿಯಲ್ಲಿರುವವರಿಂದ ಹಿಡಿದು ದೀನದಲಿತರ ತನಕ ಎಲ್ಲರೂ ಇದನ್ನೇ ಹೇಳುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ…

Read More

ಮೆಕ್ಸಿಕೊ: ಉತ್ತರ ಮೆಕ್ಸಿಕೊದ ಹೆದ್ದಾರಿಯಲ್ಲಿ ಮಂಗಳವಾರ ಪ್ರಯಾಣಿಕರ ಬಸ್ ಮತ್ತು ಸರಕು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಮತ್ತು 18 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಪೆಸಿಫಿಕ್ ಕರಾವಳಿ ರಾಜ್ಯ ಸಿನಾಲೊವಾದ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಬಂದರು ನಗರ ಮಜಟ್ಲಾನ್ ಬಳಿಯ ಎಲೋಟಾ ಪಟ್ಟಣದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ರಾಜ್ಯ ನಾಗರಿಕ ರಕ್ಷಣಾ ಕಚೇರಿಯ ನಿರ್ದೇಶಕ ರಾಯ್ ನವಾರೆಟ್ ಹೇಳಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ. ಬಸ್ಸಿನಲ್ಲಿ 37 ಪ್ರಯಾಣಿಕರಿದ್ದರು. ದೃಶ್ಯದ ಫೋಟೋಗಳು ಎರಡೂ ವಾಹನಗಳನ್ನು ಸುಟ್ಟ ಲೋಹದ ಚೌಕಟ್ಟುಗಳಾಗಿ ಇಳಿಸಲಾಗಿದೆ ಎಂದು ತೋರಿಸಿದೆ. ಮೆಕ್ಸಿಕೊದ ವಾಯುವ್ಯ ಸಿನಾಲೊವಾ ರಾಜ್ಯದಲ್ಲಿ ಮಂಗಳವಾರ ಮುಂಜಾನೆ ಟ್ರಕ್ ಮತ್ತು ಪ್ರಯಾಣಿಕರಿಂದ ತುಂಬಿದ ಬಸ್ ನಡುವೆ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆ ಎನ್ +…

Read More

ನವದೆಹಲಿ: ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸುವಾಗ ಮತ್ತು ವಿಚಾರಣೆ ನಡೆಸುವಾಗ ಅರ್ಜಿದಾರರ ಜಾತಿ, ಧರ್ಮ ಪ್ರಸ್ತಾಪ ಮಾಡಬಾರದು ಎಂಬುದಾಗಿ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಈ ಕುರಿತಂತೆ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ಅಹ್ಸುದ್ದೀನ್ ಅಮಾನುಲ್ಲಾ ಅವರಿದ್ದ ನ್ಯಾಯಪೀಠವು ಸುಪ್ರೀಂ ಕೋರ್ಟ್ ರಿಜಿಸ್ಟಾರ್ ಗೆ ನಿರ್ದೇಶನ ನೀಡಿದೆ. ಜಾತಿ, ಧರ್ಮ ನಮೂದಿಸೋದು ಅಪ್ರಸ್ತುತವಾಗಿದೆ. ಎಲ್ಲಾ ಹೈಕೋರ್ಟ್ ಗಳು ಮತ್ತು ಕೆಳ ನ್ಯಾಯಾಲಯಗಳೂ ಆ ಪದ್ದತಿಯನ್ನು ಕೂಡಲೇ ನಿಲ್ಲಿಸಬೇಕು ಎಂಬುದಾಗಿ ಪೀಠ ಖಡಕ್ ಸೂಚನೆ ನೀಡಿದೆ. ವೈವಾಹಿಕ ವಿವಾದದ ಪ್ರಕರಣದಲ್ಲಿ ಜಾತಿ ನಮೂದಿಸಿದ್ದಕ್ಕೆ ಸಂಬಂಧಿಸಿದಂತೆ ಈ ನಿರ್ದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ.

Read More

ಬೆಂಗಳೂರು: ಫೆ.30ರ ನಿನ್ನೆಯಿಂದ ಆರಂಭವಾಗಬೇಕಿದ್ದಂತ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಮುಂದೂಡಿಕೆ ಮಾಡಲಾಗಿದೆ. ಫೆಬ್ರವರಿ.3ರಿಂದ ನಡೆಯಲಿದೆ. ಶಾಲಾ ಶಿಕ್ಷಣ ಇಲಾಖೆಯು 2023-24ನೇ ಸಾಲಿನ ಮುಖ್ಯ ಶಿಕ್ಷಕ ಮತ್ತು ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಜನವರಿ.30ರಂದು ವಲಯ ವರ್ಗಾವಣೆ ಕೌನ್ಸೆಲಿಂಗ್ ನಡೆಸಲು ನಿರ್ಧರಿಸಲಾಗಿತ್ತು. ಆದ್ರೇ ಈ ವರ್ಗಾವಣೆಯನ್ನು ಫೆಬ್ರವರಿ.3ಕ್ಕೆ ಮುಂದೂಡಿದೆ. ಫೆಬ್ರವರಿ.3ರಂದು ಬಿ ವಲಯದಿಂದ ಎ ವಲಯಕ್ಕೆ ಹಾಗೂ ಸಿ ವಲಯದಿಂದ ಬಿ ವಲಯಕ್ಕೆ ಮುಖ್ಯ ಶಿಕ್ಷಕರು, ಹಿರಿಯ ಮುಖ್ಯ ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ವೃಂದಕ್ಕೆ ಹಾಗೂ ಮುಖ್ಯ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ ವೃಂದಕ್ಕೆ ಸ್ಥಾನವನ್ನು ಬಡ್ತಿ ನೀಡಲು ಅಧಿಸೂಚನೆ ಹೊರಡಿಸಲಾಗಿತ್ತು. ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಜಿಲ್ಲಾ ಉಪ ನಿರ್ದೇಶಕರ ಕೋರಿಕೆ ಮೇರೆಗೆ ನಿರ್ಧರಿಸಬೇಕಿರುವ ಕಾರಣ ಫೆಬ್ರವರಿ.3ರಂದು ನಡೆಸೋದಕ್ಕೆ ನಿರ್ಧರಿಸಲಾಗಿದೆ.

Read More

ನವದೆಹಲಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಬಂಧಿಸಿದರೆ ಅವರ ಪತ್ನಿ ಕಲ್ಪನಾ ಸೊರೆನ್ ಅವರು ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಅವರ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ಮೂಲಗಳು ತಿಳಿಸಿವೆ. ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ ನಾಳೆ ಪ್ರಶ್ನಿಸಲಿದೆ. ಅವರ ಹೇಳಿಕೆಯನ್ನು ದಾಖಲಿಸಿದ ನಂತರ ಅವರನ್ನು ಏಜೆನ್ಸಿ ಬಂಧಿಸುವ ಸಾಧ್ಯತೆಗಳಿವೆ. ಸೋಮವಾರ ಸಂಜೆ ನಡೆದ ಆಡಳಿತ ಮೈತ್ರಿಕೂಟದ ಶಾಸಕರ ಸಭೆಯಲ್ಲಿ ಸೊರೆನ್ ಈ ಘೋಷಣೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಂತದಲ್ಲಿ ಸರ್ಕಾರದ ಸಂರಕ್ಷಣೆ ನಿರ್ಣಾಯಕವಾಗಿರುವುದರಿಂದ ಶಾಸಕರು ಒಪ್ಪಿದ್ದಾರೆ. “ನಾವು, ಮೈತ್ರಿಕೂಟದ, ಕಾಂಗ್ರೆಸ್ನ ಎಲ್ಲಾ ಶಾಸಕರು ಮುಖ್ಯಮಂತ್ರಿಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದೇವೆ” ಎಂದು ಕಾಂಗ್ರೆಸ್ಗೆ ಸೇರಿದ ರಾಜ್ಯದ ಆರೋಗ್ಯ ಸಚಿವ ಬನ್ನಾ ಗುಪ್ತಾ ಸುದ್ದಿಗಾರರಿಗೆ ತಿಳಿಸಿದರು. ಆದಾಗ್ಯೂ,  ಸೊರೆನ್ ಅಧಿಕಾರ ವಹಿಸಿಕೊಳ್ಳಲು ಕಾನೂನು ತೊಡಕು ಎದುರಾಗಬಹುದು. ವಿಧಾನಸಭೆಯ ಅವಧಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಕೊನೆಗೊಂಡರೆ, ಉಪಚುನಾವಣೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಸಾಂವಿಧಾನಿಕ ನಿಬಂಧನೆಗಳು ಹೇಳುತ್ತವೆ.…

Read More

ಬೆಂಗಳೂರು: ಫೆಬ್ರವರಿ.1ರ ನಾಳೆಯಿಂದ ಆನೇಕಲ್ ನಲ್ಲಿರುವಂತ ನೈರುತ್ಯ ರೈಲ್ವೆಯ ಪ್ರಯಾಣಿಕರ ಕಾಯ್ದಿರಿಸುವಿಕೆಯ ಟಿಕೆಟ್ ಕೌಂಟರ್ ಸಾರ್ವಜನಿಕರ ಸೇವೆಗೆ ಪುನರಾರಂಭಗೊಳ್ಳಲಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಆನೇಕಲ್‌ನಲ್ಲಿರುವ ಗಣಕೀಕೃತ ಪ್ರಯಾಣಿಕರ ಕಾಯ್ದಿರಿಸುವಿಕೆ ಕೇಂದ್ರವು 01.02.2024 ರಿಂದ ಕಾಯ್ದಿರಿಸುವಿಕೆ ಪುನರಾರಂಭಿಸಲಾಗುತ್ತಿದೆ ಎಂದು ತಿಳಿಸಿದೆ. ಕೇಂದ್ರವು ಸೋಮವಾರದಿಂದ ಶನಿವಾರದವರೆಗೆ ಎಲ್ಲಾ ಕೆಲಸದ ದಿನಗಳಲ್ಲಿ ಬೆಳಿಗ್ಗೆ 08.00 ರಿಂದ ಮಧ್ಯಾಹ್ನ 2.00 ರವರೆಗೆ ಕಾರ್ಯನಿರ್ವಹಿಸುತ್ತದೆ. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಕೇಂದ್ರವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು ಎಂದು ಹೇಳಿದೆ. ಇಂತಹ ರೈಲ್ವೆ ಟಿಕೆಟ್ ಕಾಯ್ದಿರಿಸುವಿಕೆಯ ಕೌಂಟರ್ ಫೆಬ್ರವರಿ.1, 2024ರ ನಾಳೆಯಿಂದ ಪುನರಾರಂಭಗೊಳ್ಳಲಿದೆ. ರೈಲ್ವೆ ಪ್ರಯಾಣಿಕರು ಈ ಟಿಕೆಟ್ ಕೌಂಟರ್ ಮೂಲಕವೂ ಟಿಕೆಟ್ ಖರೀದಿಸಬಹುದಾಗಿ ಎಂದು ತಿಳಿಸಿದೆ.

Read More

ಬೆಂಗಳೂರು: ರಾಜ್ಯದ 5, 8 ಮತ್ತು 9ನೇ ತರಗತಿಗೆ ಈ ಬಾರಿ ಪಬ್ಲಿಕ್ ಪರೀಕ್ಷೆ ( Public Exam ) ನಿಗದಿಪಡಿಸಲಾಗಿದೆ. ಈ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆಯಿಂದ ( School Education Department ) ಮಾದರಿ ಪ್ರಶ್ನೆ ಪತ್ರಿಕೆ ಕೂಡ ಬಿಡುಗಡೆ ಮಾಡಲಾಗಿತ್ತು. ಆ ಬಳಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ, ಅಂಕಗಳ ವಿವರವನ್ನು ಹಂಚಿಕೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಈ ಮಾಹಿತಿ ಹಂಚಿಕೊಂಡಿದ್ದು, 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ-2 ( SA-2)ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶ್ನೋತ್ತರ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ 5, 8 ಮತ್ತು 9ನೇ ತರಗತಿಯ ಮಾದರಿ ಪ್ರಶ್ನೋತ್ತರ ಪತ್ರಿಕೆಗಳನ್ನು ದಿನಾಂಕ 26-01-2024ರಂದು ಮಂಡಳಿಯ ವೆಬ್ ಸೈಟ್ https://kseab.karnataka.gov.in ನಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 10 ಎಕರೆವರೆಗಿನ ಜಮೀನು ಮಂಜೂರು ಹಾಗೂ 15 ರಿಂದ 500 ಕೋಟಿ ರೂ ಬಂಡವಾಳ ಬೂಡಿಕೆ ಪ್ರಸ್ತಾವನೆಗಳನ್ನು ಸಲ್ಲಿಸೋ ಕ್ರಮದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಇನ್ಮುಂದೆ ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯ ಮುಂದೆ ಪ್ರಸ್ತಾವನೆಯನ್ನು ಮಂಡಿಸೋದಕ್ಕೆ ಸೂಚನೆ ನೀಡಿದೆ. ಹೌದು ಈ ಹಿಂದೆ 10 ಎಕರೆ ವರೆಗಿನ ಜಮೀನು ಮಂಜೂರಾತಿಗೆ, 15 ರಿಂದ 500 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳನ್ನು ಭೂ ಪರಿಶೀಲನಾ ಸಮಿತಿಯ ಮುಂದೆ ಮಂಡಿಸಲಾಗುತ್ತಿತ್ತು. ಇದೀಗ ಈ ಕ್ರಮವನ್ನು ಬದಲಾವಣೆ ಮಾಡಿದ್ದು, ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿ ಮುಂದೆ ಮಂಡಿಸಲು ಸರ್ಕಾರ ಸೂಚನೆ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಎಲ್ಲಾ ಇಲಾಖೆಯ ಮುಖ್ಯಸ್ಥರಿಗೆ ಸುತ್ತೋಲೆಯನ್ನು ಕೂಡ ಹೊರಡಿಸಲಾಗಿದ್ದು, ಎರಡು ಎಕರೆವರೆಗಿನ ವಿಸ್ತೀರ್ಣದ ಹಾಗೂ 15 ಕೋಟಿ ರೂ ವರೆಗಿನ ಬಂಡವಾಳ ಪ್ರಸ್ತಾವನೆಗಳನ್ನು ಆಯಾ ಜಿಲ್ಲಾ ಮಟ್ಟದ ಏಕ ಗವಾಕ್ಷಿ ಅನುಮೋದನಾ ಸಮಿತಿ ಮುಂದೆ ಮಂಡಿಸಿ, ಅನುಮೋದನೆ ಪಡೆಯುವಂತೆ…

Read More

ಬೆಂಗಳೂರು : ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಜ.26ರಂದು ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ಕೊಟ್ಟ ಹಿನ್ನೆಲೆಯಲ್ಲಿ ಅರಣ್ಯದೊಳಗೆ ಜನಜಂಗುಳಿ ತಪ್ಪಿಸಲು ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳಿಗೆ ಸರ್ಕಾರ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಈ ಸಂಬಂಧ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಸ್ಪಷ್ಟ ಸೂಚನೆ ನೀಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು, ಸಾವಿರಾರು ಸಂಖ್ಯೆಯಲ್ಲಿ ಚಾರಣಿಗರು ದಟ್ಟ ಅರಣ್ಯದ ಗಿರಿ ಪ್ರದೇಶಗಳಿಗೆ ಅದರಲ್ಲೂ ಅಮೂಲ್ಯ ಜೀವವೈವಿಧ್ಯದಿಂದ ಕೂಡಿದ ಪಶ್ಚಿಮಘಟ್ಟಕ್ಕೆ ಪ್ರತಿವಾರವೂ ಆಗಮಿಸಿದರೆ ಪರಿಸರಕ್ಕೂ ಹಾನಿಯಾಗುತ್ತದೆ ಮತ್ತು ಜಲ ಮೂಲಗಳೂ ಕಲುಷಿತಗೊಳ್ಳುತ್ತವೆ ಹೀಗಾಗಿ ಇಂತಹ ಚಾರಣ ಪಥಕ್ಕೆ ಕಡಿವಾಣ ಹಾಕಿ ಎಂದು ಸೂಚಿಸಿದ್ದಾರೆ. ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ, ರಾಜ್ಯದ ಯುವಜನರಲ್ಲಿ ಇತ್ತೀಚೆಗೆ ಅರಣ್ಯವ್ಯಾಪ್ತಿಯ ಗಿರಿ ಶಿಖಿರಗಳಲ್ಲಿ ಚಾರಣ ಮಾಡುವ ಹವ್ಯಾಸ ಹೆಚ್ಚಾಗುತ್ತಿದ್ದು, ಇದು ವಾರಾಂತ್ಯದಲ್ಲಿ ಜನದಟ್ಟಣೆಗೆ ಕಾರಣವಾಗಿದೆ. ಹೀಗೆ ಬರುವವರು ಅರಣ್ಯದ ಅಂಚಿನ ಗ್ರಾಮಗಳಲ್ಲಿ ಮತ್ತು ಪರಿಸರ ಸೂಕ್ಷ್ಮ…

Read More