Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯಾಧ್ಯಂತ ನಡೆಸಲಾಗುತ್ತಿದ್ದಂತ ಲಾರಿ ಮುಷ್ಕರವನ್ನು ವಾಪಾಸ್ ಪಡೆದಿರುವುದಾಗಿ ಅಧ್ಯಕ್ಷ ಷಣ್ಮುಗಪ್ಪ ಘೋಷಿಸಿದ್ದಾರೆ. ಈ ಮೂಲಕ ಸಚಿವ ರಾಮಲಿಂಗಾರೆಡ್ಡಿ ನಡೆಸಿದಂತ ಸಂಧಾನ ಸಭೆ ಸಕ್ಸಸ್ ಆಗಿದ್ದು, ಲಾರಿ ಮುಷ್ಕರ ವಾಪಾಸ್ ಪಡೆದಂತೆ ಆಗಿದೆ. ಇಂದು ವಿಧಾನಸೌಧದಲ್ಲಿನ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಕಚೇರಿಯಲ್ಲಿ ಲಾರಿ ಮಾಲೀಕರ ಸಂಘದೊಂದಿಗೆ ಮೂರನೇ ಬಾರಿ ಸಭೆ ನಡೆಸಲಾಯಿತು. ಈ ಹಿಂದೆ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ, ಆ ಬಳಿಕ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಎರಡನೇ ಸಭೆಯನ್ನು ನಿನ್ನೆ ನಡೆಸಲಾಗಿತ್ತು. ಇಂದಿನ ಸಭೆಯಲ್ಲಿ ಲಾರಿ ಮಾಲೀಕರ ಕೆಲ ಬೇಡಿಕೆಗಳನ್ನು ಈಡೇರಿಸೋದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂಬುದಾಗಿ ತಿಳಿದು ಬಂದಿದೆ. ಅದರಲ್ಲಿ ಟೋಲ್ ಗಳಲ್ಲಿ ಲಾರಿ, ಗೂಡ್ಸ್ ವಾಹನಗಳಿಗೆ ದರ ಫಿಕ್ಸ್ ಮಾಡಲು ಸಚಿವ ರಾಮಲಿಂಗಾರೆಡ್ಡಿ ಒಪ್ಪಿಗೆ ಸೂಚಿಸಿದ್ದಾರೆ. ಇನ್ನೂ ಕೆಲ ಬೇಡಿಕೆ ಈಡೇರಿಸೋದಕ್ಕೆ ಸರ್ಕಾರ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳೋ ಭರವಸೆಯನ್ನು ನೀಡಿದ್ದಾರೆ. ಹೀಗಾಗಿ ಲಾರಿ ಮಾಲೀಕರ ಜೊತೆಗಿನ ಸಂಧಾನ ಸಭೆ ಸಕ್ಸಸ್ ಆಗಿದ್ದು,…
ಬೆಂಗಳೂರು: ಲಾರಿ ಮಾಲೀಕರು ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಬೇಡಿಕೆ ಈಡೇರಿಸುವ ಸಂಬಂಧ ಇಂದು ಸಚಿವ ರಾಮಲಿಂಗಾರೆಡ್ಡಿ ನಡೆಸಿದಂತ ಸಂಧಾನ ಸಭೆ ಸಕ್ಸಸ್ ಆಗಿದೆ. ಹೀಗಾಗಿ ಲಾರಿ ಮುಷ್ಕರ ವಾಪಾಸ್ಸು ಪಡೆಯುವಂತ ನಿರ್ಧಾರವನ್ನು ಲಾರಿ ಮಾಲೀಕರ ಸಂಘ ತೆಗೆದುಕೊಂಡಿದೆ ಎನ್ನಲಾಗುತ್ತಿದೆ. ಇಂದು ವಿಧಾನಸೌಧದಲ್ಲಿನ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಕಚೇರಿಯಲ್ಲಿ ಲಾರಿ ಮಾಲೀಕರ ಸಂಘದೊಂದಿಗೆ ಮೂರನೇ ಬಾರಿ ಸಭೆ ನಡೆಸಲಾಯಿತು. ಈ ಹಿಂದೆ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ, ಆ ಬಳಿಕ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಎರಡನೇ ಸಭೆಯನ್ನು ನಿನ್ನೆ ನಡೆಸಲಾಗಿತ್ತು. ಇಂದಿನ ಸಭೆಯಲ್ಲಿ ಲಾರಿ ಮಾಲೀಕರ ಕೆಲ ಬೇಡಿಕೆಗಳನ್ನು ಈಡೇರಿಸೋದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂಬುದಾಗಿ ತಿಳಿದು ಬಂದಿದೆ. ಅದರಲ್ಲಿ ಟೋಲ್ ಗಳಲ್ಲಿ ಲಾರಿ, ಗೂಡ್ಸ್ ವಾಹನಗಳಿಗೆ ದರ ಫಿಕ್ಸ್ ಮಾಡಲು ಸಚಿವ ರಾಮಲಿಂಗಾರೆಡ್ಡಿ ಒಪ್ಪಿಗೆ ಸೂಚಿಸಿದ್ದಾರೆ. ಇನ್ನೂ ಕೆಲ ಬೇಡಿಕೆ ಈಡೇರಿಸೋದಕ್ಕೆ ಸರ್ಕಾರ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳೋ ಭರವಸೆಯನ್ನು ನೀಡಿದ್ದಾರೆ. ಹೀಗಾಗಿ ಲಾರಿ…
ಬೆಂಗಳೂರು: “ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ ಮೇಲೆ ಈ ಬೆಲೆ ಏರಿಕೆ ಹೊರೆ ತಗ್ಗಿಸಲು ನಾವು ಗ್ಯಾರಂಟಿ ಯೋಜನೆ ಕೊಟ್ಟಿದ್ದು, ರೈತರ ಬದುಕು ಕಾಪಾಡಲು ಹಾಲಿನ ಬೆಲೆ ಏರಿಸಿದ್ದೇವೆ. ಹೀಗಾಗಿ ಜನಾಕ್ರೋಶ ಏನಿದ್ದರೂ ಬಿಜೆಪಿ ಸರ್ಕಾರದ ವಿರುದ್ಧ ವ್ಯಕ್ತವಾಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದರು. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್ ಅವರು ಮಾತನಾಡಿದರು. “ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಹೀಗಾಗಿ ಬಿಜೆಪಿ ನಾಯಕರ ಆಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೋಕೇ ಹೊರತು, ಬಡವರ ಪರವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಕಾಂಗ್ರೆಸ್…
ನವದೆಹಲಿ: ಕಂಪನಿಯ ಗುರುಗ್ರಾಮ್ ಕಚೇರಿ ಸೇರಿದಂತೆ 50 ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ ನಡೆಸಿದ ನಂತರ ಈಸ್ ಮೈಟ್ರಿಪ್ ಮಹಾದೇವ್ ಅಪ್ಲಿಕೇಶನ್ ಅಥವಾ ಇತರ ಯಾವುದೇ ಬೆಟ್ಟಿಂಗ್ ಅಪ್ಲಿಕೇಶನ್ ನೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. “ಈಸ್ ಮೈಟ್ರಿಪ್ ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ ಅಥವಾ ಇತರ ಯಾವುದೇ ಬೆಟ್ಟಿಂಗ್ ಪ್ಲಾಟ್ ಫಾರ್ಮ್ ನೊಂದಿಗೆ ಯಾವುದೇ ನೇರ ಅಥವಾ ಪರೋಕ್ಷ ಸಂಬಂಧವನ್ನು ಹೊಂದಿಲ್ಲವಾದರೂ, ತನಿಖೆಯ ಉದ್ದಕ್ಕೂ ಅಧಿಕಾರಿಗಳೊಂದಿಗೆ ಸಹಕರಿಸಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ” ಎಂದು ಕಂಪನಿಯು ಏಪ್ರಿಲ್ 17 ರ ಗುರುವಾರ ವಿನಿಮಯ ಫೈಲಿಂಗ್ ನಲ್ಲಿ ತಿಳಿಸಿದೆ. ನಿಶಾಂತ್ ಪಿಟ್ಟಿ ನಿವಾಸದ ಮೇಲೆ ದೇಶಾದ್ಯಂತ ಶೋಧ ಈಸ್ ಮೈಟ್ರಿಪ್ ಸಂಸ್ಥಾಪಕ ನಿಶಾಂತ್ ಪಿಟ್ಟಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಬುಧವಾರ ದೇಶದ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ. ಮುಂಬೈ (ಮಹಾರಾಷ್ಟ್ರ), ದೆಹಲಿ, ಚಂಡೀಗಢ, ಅಹಮದಾಬಾದ್ (ಗುಜರಾತ್), ಇಂದೋರ್ (ಮಧ್ಯಪ್ರದೇಶ), ಜೈಪುರ (ರಾಜಸ್ಥಾನ), ಚೆನ್ನೈ (ತಮಿಳುನಾಡು) ಮತ್ತು ಒಡಿಶಾದ ಸಂಬಲ್ಪುರದಲ್ಲಿ…
ಬಾಗಲಕೋಟೆ: ಮಾನ್ಯ ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಬಡವರ, ದಲಿತರ, ರೈತರ ಕಣ್ಣೀರು ಒರೆಸಿದ್ದೀರಾ? ಅಭಿವೃದ್ಧಿ ಕೆಲಸ ಮಾಡಿದ್ದೀರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಅವರು ಪ್ರಶ್ನಿಸಿದ್ದಾರೆ. ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಸಂದರ್ಭದಲ್ಲಿ ಸರಕಾರದ ವಿರುದ್ಧ ಬಾರುಕೋಲು ಪ್ರದರ್ಶಿಸಿದ ಅವರು ಬಳಿಕ ಸಸಿಗೆ ನೀರೆರೆದರು. ನಂತರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ ಎಂದು ಹೇಳಿದರು. ಮಾನ್ಯ ಸಿದ್ದರಾಮಯ್ಯನವರೇ, ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಜನರು ನಿಮ್ಮನ್ನು ನೆನಪಿಸಿಕೊಳ್ಳಬೇಕೇ ಎಂದು ಕೇಳಿದರು. ಹಿಂದೆ ಯಡಿಯೂರಪ್ಪನವರ ಬಿಜೆಪಿ ಸರಕಾರ ಇದ್ದಾಗ ರೈತರು ತಮ್ಮ ಹೊಲಕ್ಕೆ ಟ್ರಾನ್ಸ್‍ಫಾರ್ಮರ್ ಹಾಕಿಸಲು 25 ಸಾವಿರ ಕಟ್ಟಿದ್ದರೆ ಸಾಕಾಗಿತ್ತು. ಆದರೆ, ರೈತಪರ ಮೊಸಳೆ ಕಣ್ಣೀರು ಹಾಕುವ ಸಿದ್ದರಾಮಯ್ಯನವರ ಸರಕಾರದಲ್ಲಿ ಎರಡೂವರೆಯಿಂದ 3 ಲಕ್ಷ ರೂ.…
ಬೆಂಗಳೂರು: 50 ಕೋಟಿ ರೂಪಾಯಿಗೆ ವಿಶ್ವದ ಅತೀ ದುಬಾರಿ ನಾಯಿ ಖರೀದಿಸಿದ್ದೇನೆ ಎಂಬುದಾಗಿ ಹೇಳಿಕೊಂಡಿದ್ದಂತ ಸತೀಶ್ ಎಂಬುವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶಾಕ್ ನೀಡಿದ್ದಾರೆ. ಬೆಂಗಳೂರಿನ ಶ್ವಾನಪ್ರೇಮಿ ಸತೀಶ್ ಎಂಬುವರು 50 ಕೋಟಿ ರೂಪಾಯಿ ಕೊಟ್ಟು ವಿಶ್ವದಲ್ಲೇ ದುಬಾರಿಯಾಗಿರುವಂತ ನಾಯಿಯನ್ನು ಖರೀದಿಸಿದ್ದಾಗಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಮಾಹಿತಿ ಆಧರಿಸಿ ಇಂದು ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸತೀಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಂತ ಇಡಿ ಅಧಿಕಾರಿಗಳು, ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ವೇಳೆಯಲ್ಲಿ ಸತೀಶ್ ಖರೀದಿಸಿದಂತ ನಾಯಿ 50 ಕೋಟಿ ಹಣದ್ದಲ್ಲ ಎಂಬ ಸತ್ಯ ಬಯಲಾಗಿದೆ. ಅಂದಹಾಗೆ ಸತೀಶ್ ಕಾಡು ತೋಳ ಮತ್ತು ಕಕೇಶಿಯನ್ ಶೆಫರ್ಡ್ ತಳಿಯ ಮಿಶ್ರಣವಾಗಿರುವಂತ ತೋಳನಾಯಿ ಎಂಬುದಾಗಿ ಕರೆಯುವಂತ ನಾಯಿಯನ್ನು ಖರೀದಿಸಿದ್ದಾಗಿ ಹೇಳಿಕೊಂಡಿದ್ದರು. ಇದು ವಿಶ್ವದಲ್ಲೇ ಅತೀ ದುಬಾರಿಯಾದಂತ ನಾಯಿಯಾಗಿದೆ. ಇದರ ಬೆಲೆ 50 ಕೋಟಿ ಅಂತ ತಿಳಿಸಿದ್ದರು. ಆದರೇ ಅಷ್ಟು…
ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.18 ರಂದು ಬೆಳಗ್ಗೆ 09-00 ರಿಂದ ಸಂಜೆ 06.00ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಕೆ.ಹೆಚ್.ಬಿ. ಕಾಲೋನಿ, ಚಾಲುಕ್ಯನಗರ, ಆನಂದಗಿರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.18 ರಂದು ಬೆಳಗ್ಗೆ 09-00 ರಿಂದ ಸಂಜೆ 05.00ರವರೆಗೆ ಇಂದಿರಾಗಾAಧಿ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಜಯದೇವ ಬಡಾವಣೆ, ಕಾಶಿಪುರ, ಲಕ್ಕಪ್ಪ ಲೇಔಟ್, ಕಲ್ಲಳ್ಳಿ ಎ ಯಿಂದ ಎಫ್ ಬ್ಲಾಕ್‌ಗಳು, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ. ಕಾಂಪೌAಡ್, ಸೂಡಾ ಕಚೇರಿ,…
ಶಿವಮೊಗ್ಗ: ಜಿಲ್ಲೆಯ ಸಾಗರ ಅರಣ್ಯಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಕಾಡು ಹಂದಿ ಮಾಂಸ ಹಂಚಿಕೆ ಮಾಡಿದಂತ ಆರೋಪದಡಿ ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬಾಳೆಗುಂಡಿ ಗ್ರಾಮದ ಕೆರೆದಂಡೆಯ ಮೇಲೆ ಕಾಡುಹಂದಿ ಮಾಂಸ ಹಂಚಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೊರೆತಿತ್ತು. ಈ ಮಾಹಿತಿ ಆಧರಿಸಿ ದಾಳಿ ಮಾಡಿದ್ದಾರೆ. ಈ ವೇಳೆ ಕಾಡುಹಂದಿ ಮಾಂಸ ಹಂಚಿಕೆ ಮಾಡುತ್ತಿದ್ದಂತ ಮೂವರು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದಂತ ನಾಲ್ಕೂವರೆ ಕೆಜಿ ಕಾಡುಹಂದಿ ಮಾಂಸವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಭಾಕರ್, ಗಣಪತಿ ಮತ್ತು ಅಣ್ಣಪ್ಪ ಎಂಬುವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಂದಹಾಗೇ ಈ ಕಾರ್ಯಾಚರಣೆಯನ್ನು ಸಾಗರ-ಸೊರಬ ತಾಲ್ಲೂಕು ಡಿಎಫ್ಓ ಮೋಹನ್ ಕುಮಾರ್ ಹಾಗೂ ಎಸಿಎಫ್ ಮಾರ್ಗದಲ್ಲಿ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಅಣ್ಣಪ್ಪ, ಉಪ ವಲಯ ಅರಣ್ಯಾಧಿಕಾರಿ ಕಿರಣ್, ಸಿಬ್ಬಂದಿಗಳಾದಂತ ಸುರೇಶ್, ಬಸವರಾಜ್, ಸುನೀತಾ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ವರದಿ:…
ನವದೆಹಲಿ: ಸುಪ್ರೀಂ ಕೋರ್ಟ್ ಗುರುವಾರ ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆಯಡಿ ಕೇಂದ್ರ ಸರ್ಕಾರ ನೇಮಕಾತಿಗಳನ್ನು ಮಾಡುವುದನ್ನು ಅಥವಾ ಮಂಡಳಿಗಳನ್ನು ರಚಿಸುವುದನ್ನು ಮುಂದಿನ ಆದೇಶದವರೆಗೆ ತಡೆಯುವ ಮಧ್ಯಂತರ ಆದೇಶವನ್ನು ಹೊರಡಿಸಿದೆ. ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸರ್ಕಾರವು ಒಂದು ವಾರದೊಳಗೆ ತನ್ನ ವಿವರವಾದ ಪ್ರತಿಕ್ರಿಯೆಯನ್ನು ಸಲ್ಲಿಸಲಿದೆ ಎಂದು ತಿಳಿಸಿದರು. ಈ ಅವಧಿಯಲ್ಲಿ ತಿದ್ದುಪಡಿ ಮಾಡಿದ ಕಾನೂನಿನಡಿಯಲ್ಲಿ ವಕ್ಫ್ ಕೌನ್ಸಿಲ್ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡಲಾಗುವುದಿಲ್ಲ ಎಂದು ಅವರು ಭರವಸೆ ನೀಡಿದರು. ಇದನ್ನು ದಾಖಲಿಸಿಕೊಂಡು, ನೋಂದಾಯಿತ ಅಥವಾ ಅಧಿಸೂಚನೆಯ ಮೂಲಕ ಘೋಷಿಸಲಾದ ಅಥವಾ “ಬಳಕೆದಾರರಿಂದ ವಕ್ಫ್” ಅಡಿಯಲ್ಲಿ ಯಾವುದೇ ವಕ್ಫ್‌ಗಳನ್ನು ಡಿನೋಟಿಫೈ ಮಾಡಬಾರದು ಅಥವಾ ಯಾವುದೇ ಸಂಗ್ರಾಹಕರ ಅಧಿಕಾರ ವ್ಯಾಪ್ತಿಯನ್ನು ಬದಲಾಯಿಸಬಾರದು ಎಂದು ನ್ಯಾಯಾಲಯ ನಿರ್ದೇಶಿಸಿದೆ. ಸಾಲಿಸಿಟರ್ ಜನರಲ್ ಮಧ್ಯಂತರ ಆದೇಶವನ್ನು ಅಂಗೀಕರಿಸುವ ಮೊದಲು ಅದರ…
ನವದೆಹಲಿ: ಮುಂದಿನ ವಿಚಾರಣೆಯವರೆಗೆ ‘ಬಳಕೆದಾರರಿಂದ ವಕ್ಫ್’ ಸೇರಿದಂತೆ ಅಸ್ತಿತ್ವದಲ್ಲಿರುವ ವಕ್ಫ್‌ಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು. ಕೇಂದ್ರವು ಏಳು ದಿನಗಳಲ್ಲಿ ಪ್ರತಿಕ್ರಿಯಿಸುತ್ತದೆ ಎಂಬ ಸಾಲಿಸಿಟರ್ ಜನರಲ್ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ದಾಖಲಿಸುತ್ತದೆ. ಸುಪ್ರೀಂ ಕೋರ್ಟ್ ಹೇಳುತ್ತದೆ, ಕೌನ್ಸಿಲ್ ಮತ್ತು ಮಂಡಳಿಗೆ ಯಾವುದೇ ನೇಮಕಾತಿಗಳನ್ನು ಮಾಡಲಾಗುವುದಿಲ್ಲ ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ ಭರವಸೆ ನೀಡಿದರು. ಮುಂದಿನ ವಿಚಾರಣೆಯ ದಿನಾಂಕದವರೆಗೆ, ಈಗಾಗಲೇ ನೋಂದಾಯಿಸಲಾದ ಅಥವಾ ಅಧಿಸೂಚನೆಯ ಮೂಲಕ ಘೋಷಿಸಲಾದ ವಕ್ಫ್-ಬೈ-ಯೂಸರ್ ಸೇರಿದಂತೆ ವಕ್ಫ್ ಅನ್ನು ಡಿನೋಟಿಫೈ ಮಾಡಲಾಗುವುದಿಲ್ಲ ಅಥವಾ ಕಲೆಕ್ಟರ್ ಬದಲಾಗುವುದಿಲ್ಲ ಎಂದು ಸಾಲಿಸಿಟರ್ ಜನರಲ್ ಭರವಸೆ ನೀಡುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳುತ್ತದೆ. ಏಳು ದಿನಗಳಲ್ಲಿ ಕೇಂದ್ರವು ಪ್ರತಿಕ್ರಿಯೆಯನ್ನು ಸಲ್ಲಿಸಲಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. https://twitter.com/ANI/status/1912791070632460570 ಅಂದಹಾಗೇ, 2025 ರ ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ…












