Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ವಿಶೇಷಚೇತನರ ರಿಯಾಯಿತಿ ಬಸ್‌ಪಾಸ್ ವಿತರಿಸುವ ಸಂಬಂಧ ಕೆ ಎಸ್ ಆರ್ ಟಿಸಿಯಿಂದ ಮಹತ್ವದ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ಹಂಚಿಕೊಂಡಿದ್ದು, 2025ನೇ ಸಾಲಿನ ವಿಶೇಷಚೇತನರ ರಿಯಾಯಿತಿ ಪಾಸುಗಳ ವಿತರಣೆ / ನವೀಕರಣವನ್ನು ದಿನಾಂಕ:30.12.2024ರಿಂದ ಪ್ರಾರಂಭಿಸಲಾಗುವುದು ಎಂದಿದೆ. ಇನ್ನೂ ಫಲಾನುಭವಿಗಳು ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಿರುತ್ತದೆ. 2024ನೇ ಸಾಲಿನಲ್ಲಿ ವಿತರಿಸಿರುವ ಬಸ್‌ಪಾಸ್ ಗಳನ್ನು ದಿನಾಂಕ: 28.02.2025 ರವರೆಗೆ ಮಾನ್ಯ ಮಾಡಲಾಗುವುದು ಎಂದು ತಿಳಿಸಿದೆ. https://kannadanewsnow.com/kannada/breaking-kalburgi-tragedy-woman-seriously-injured-after-coming-in-contact-with-electric-wire-while-boarding-bus/ https://kannadanewsnow.com/kannada/legal-battle-against-bjp-mlc-ct-ravi-minister-lakshmi-hebbalkar/
ಬೆಂಗಳೂರು : ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸೂಚಿಸಿದರು. ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ವರ್ಷ ಅಚ್ಚುಕಟ್ಟಾಗಿ ಬಂದೋಬಸ್ತ್ ವ್ಯವಸ್ಥೆ ಕೈಗೊಂಡು ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆಗೆ ಕ್ರಮ ವಹಿಸಲಾಗಿತ್ತು. ಬೆಂಗಳೂರು ವಿಶ್ವದ ಗಮನ ಸೆಳೆಯುವ ನಗರವಾಗಿರುವುದರಿಂದ ಯಾವುದನ್ನು ನಿರ್ಲಕ್ಷಿಸದೇ ,ಅತ್ಯಂತ ಜವಾಬ್ಧಾರಿಯುತವಾಗಿ ಬಂದೋಬಸ್ತ್ ಕೈಗೊಳ್ಳಬೇಕು ಎಂದರು. ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ ಗುಪ್ತದಳ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು ಎಂದು ಹೇಳಿದರು. ಅಗತ್ಯ ಬಂದೋಬಸ್ತ್ ಹಿನ್ನಲೆಯಲ್ಲಿ ನಗರದ…
ಬೆಂಗಳೂರು: ಡಿ.21ಕ್ಕೆ ಮುಕ್ತಾಯಗೊಂಡಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಳ್ಳಲು, ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮತ್ತೆ ಅವಧಿಯನ್ನು ವಿಸ್ತರಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, 2025 ನೇ ಸಾಲಿನ ಮಾರ್ಚ್ ಮಾಹೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ದಿನಾಂಕ:21-12-2024 ರಿಂದ 31-12-2024 ರವರೆಗೆ “ವಿಶೇಷ ದಂಡ ಶುಲ್ಕ” ವನ್ನು ಸಂಬಂಧಿಸಿದ ಕಾಲೇಜುಗಳಲ್ಲಿ ಪಾವತಿಸಲು ಅವಕಾಶವನ್ನು ಕಲ್ಪಿಸಿದೆ ಎಂದಿದ್ದಾರೆ. ಈಗಾಗಲೇ ಹಲವು ಬಾರಿ ವಿಸ್ತರಿಸಿರುವುದರಿಂದ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ಯಾವುದೇ ಕಾರಣಕ್ಕೂ ಪುನಃ ವಿಸ್ತರಿಸಲಾಗುವುದಿಲ್ಲ. ಇದು ಅಂತಿಮ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ಪ್ರಾಂಶುಪಾಲರು ಕ್ರಮ ವಹಿಸುವುದು. ಈ ಸಂಬಂಧ ವಿದ್ಯಾರ್ಥಿಗಳು ಮಂಡಲಿಯ ಜಾಲತಾಣ https://kseab.karnataka.gov.in ರಲ್ಲಿ ಅಪ್ಲೋಡ್ ಮಾಡಲಾಗಿರುವ “ಸುತ್ತೋಲೆ” ಯಲ್ಲಿ ಹೆಚ್ಚಿನ ವಿವರಗಳನ್ನು ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/siddaramaiah-led-panel-approves-projects-worth-rs-9823-crore-5605-jobs-created/ https://kannadanewsnow.com/kannada/breaking-kalburgi-tragedy-woman-seriously-injured-after-coming-in-contact-with-electric-wire-while-boarding-bus/
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64ನೇ ಸಭೆಯು ಒಟ್ಟು ₹9,823.31 ಕೋಟಿ ಬಂಡವಾಳ ಹೂಡಿಕೆಯ ಒಂಬತ್ತು ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಿದೆ. ಇದರಿಂದ 5,605 ಉದ್ಯೋಗಗಳು ಸೃಷ್ಟಿಯಾಗಲಿವೆ. ಸೋಮವಾರ ಕೃಷ್ಣಾ ದಲ್ಲಿ ನಡೆದ ಸಭೆಯಲ್ಲಿ ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಚೆಲುವರಾಯಸ್ವಾಮಿ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ ಮುಂತಾದವರು ಭಾಗವಹಿಸಿದ್ದರು. ಅನುಮೋದನೆ ಪಡೆದವುಗಳಲ್ಲಿ ಡಿ.ಎನ್.ಸೊಲ್ಯೂಷನ್ಸ್ ನ ₹998 ಕೋಟಿ (ಐಟಿಐಆರ್ , ದೇವನಹಳ್ಳಿ), ಸೈಲೆಕ್ಟ್ರಿಕ್ ಸೆಮಿಕಂಡಕ್ಟರ್ಸ್ ಮ್ಯಾನುಫ್ಯಾಕ್ಚರಿಂಗ್ ನ ₹3,425. 60 ಕೋಟಿ (ಕೋಚನಹಳ್ಳಿ ಕೈಗಾರಿಕಾ ಪ್ರದೇಶ, ಮೈಸೂರು) ಮತ್ತು ಸನ್ಸೆರಾ ಇಂಜಿನಿಯರಿಂಗ್ ಸಂಸ್ಥೆಯ ₹2150 ಕೋಟಿ (ಹಾರೋಹಳ್ಳಿ)…
ಮಂಡ್ಯ: ಜಿಲ್ಲೆಯಲ್ಲಿ ಮನಕಲಕುವ ಘಟನೆ ಎನ್ನುವಂತೆ ಮಗ ಸಾವನ್ನಪ್ಪಿರುವಂತ ಸುದ್ದಿಯನ್ನು ಕೇಳಿದಂತ ತಾಯಿ ಕೂಡ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮಂಡ್ಯದ ಮೆಟ್ಕಲ್ ಗ್ರಾಮದ ಕೃಷ್ಣಮೂರ್ತಿ(20) ಎಂಬಾತ ಅಪಘಾತದಲ್ಲಿ ಸಾವನ್ನಪ್ಪಿದ್ದನು. ಈ ವಿಷಯ ತಿಳಿದಂತ ಆತನ ತಾಯಿ ಮಹದೇವಮ್ಮ ಕುಸಿದು ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಡಿ.21ರಂದು ಈ ಘಟನೆ ನಡೆದಿದೆ. ಎರಡು ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದಂತ ಕೃಷ್ಣಮೂರ್ತಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದನು. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದನು. ಈ ವಿಷಯನ್ನು ಗ್ರಾಮಸ್ಥರು ಆತನ ತಾಯಿ ಮಹದೇವಮ್ಮಗೆ ತಿಳಿಸಿದ್ದರು. ಈ ವಿಷಯ ತಿಳಿದು ಆಘಾತಗೊಂಡ ಅವರು ಸಾವನ್ನಪ್ಪಿದ್ದಾರೆ. https://kannadanewsnow.com/kannada/e-khata-to-be-disposed-of-in-bbmp-limits-in-a-time-bound-manner-tushar-giri-nath-khadak/ https://kannadanewsnow.com/kannada/breaking-kalburgi-tragedy-woman-seriously-injured-after-coming-in-contact-with-electric-wire-while-boarding-bus/
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಇ-ಖಾತಾ ಪಡೆಯುವ ಸಲುವಾಗಿ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಾಲಿಕೆಯಿಂದ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಂದ ಅರ್ಜಿಗಳನ್ನು ಕಾಲಮಿತಿಯೊಳಗಾಗಿ ವಿಲೇವಾರಿ ಮಾಡಲು ಸೂಚನೆ ನೀಡಿದರು. ಕಂದಯಾ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ರವರು ಮಾತನಾಡಿ, ಇ-ಖಾತಾ ನೀಡುವ ವಿಚಾರವಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಂತಿಮ ಇ-ಖಾತಾ ಪಡೆಯಲು ಸುಮಾರು 67 ಸಾವಿರ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 61 ಸಾವಿರಕ್ಕೂ ಹೆಚ್ಚು ಇ-ಖಾತಾಗಳನ್ನು ವಿತರಿಸಲಾಗಿದೆ. ಪ್ರತಿನಿತ್ಯ ಬರುವ ಅರ್ಜಿಗಳನ್ನು ನಿಗದಿತ ಸಮಯದೊಳಗಾಗಿ ವಿಲೇವಾರಿ ಮಾಡಿ ನಾಗರೀಕರಿಗೆ ಇ-ಖಾತ ಸಿಗುವಂತೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಆಸ್ತಿ ತೆರಿಗೆ ಸಂಗ್ರಹಿಸಲು ಸೂಕ್ತ ಕ್ರಮವಹಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು…
ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆಯ ವೀಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರಿಂದ ಧೈರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು…
ನವದೆಹಲಿ: ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾ ಪ್ರಯೋಜನಗಳನ್ನು ತಪ್ಪಾಗಿ ಪಡೆದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಮೀಸಲಾತಿ ಪ್ರಯೋಜನಗಳನ್ನು ಪಡೆಯಲು 2022 ರ ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಗೆ ಸಲ್ಲಿಸಿದ ಅರ್ಜಿಯಲ್ಲಿ ಖೇಡ್ಕರ್ ಮಾಹಿತಿಯನ್ನು ತಪ್ಪಾಗಿ ನಿರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. https://kannadanewsnow.com/kannada/legal-battle-against-bjp-mlc-ct-ravi-minister-lakshmi-hebbalkar/ https://kannadanewsnow.com/kannada/breaking-kalburgi-tragedy-woman-seriously-injured-after-coming-in-contact-with-electric-wire-while-boarding-bus/
ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು. ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ. ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು. ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವರು ಕಿಡಿ ಕಾರಿದರು. ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ರಾಜ್ಯಸಭೆಯಲ್ಲಿನ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಇವರು ವಿಧಾನಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಇದು ರಾಜ್ಯಸಭೆಯಲ್ಲಿ ಪ್ರಾರಂಭವಾದದ್ದು. ಈ ವಿಷಯ ಆ ಸದನಕ್ಕೆ ಸಂಬಂಧಪಟ್ಟ ವಿಷಯ. ಅಮಿತ್ ಶಾ ಅವರು ವಿಧಾನ ಪರಿಷತ್ ಸದಸ್ಯರಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು. ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆಗೆ ವಿಶೇಷವಾದ ಅವಕಾಶ ಕೊಡುತ್ತೇವೆ ಎಂದು ಡಂಗೂರ ಹೊಡೆದರು. ನಿನ್ನೆಯೂ ಒಬ್ಬ ಹೆಣ್ಣುಮಗಳು ಬಳ್ಳಾರಿಯಲ್ಲಿ ಮಗುವಿಗೆ ಜನ್ಮ ಕೊಡುವಾಗ ತೀರಿಕೊಂಡಿದ್ದಾಳೆ. ಪ್ರತಿನಿತ್ಯ ಈ ಸಾವುಗಳು ಸಂಭವಿಸುತ್ತಿವೆ. ಇದ್ಯಾವುದರ ಬಗ್ಗೆ ರಾಜ್ಯ ಸರಕಾರಕ್ಕೆ ಕಿಂಚಿತ್ತೂ ಚಿಂತೆ ಇಲ್ಲ ಎಂದು ಕೇಂದ್ರ ಸಚಿವರು…