Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರು ಅಶ್ಲೀಲ ಪದ ಬಳಕೆಯ ವೀಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ. ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಬಳಸಿದ ಅಶ್ಲೀಲ ಪದ ಬಳಕೆಯ ವಿಡಿಯೋವನ್ನು ಸಚಿವರು ಮಾಧ್ಯಮಗಳ ಎದುರು ಬಿಡುಗಡೆ ಮಾಡಿದರು. ಎರಡು ಪ್ರತ್ಯೇಕ ವಿಡಿಯೋಗಳನ್ನು ಸಚಿವರು ರಿಲೀಸ್ ಮಾಡಿದರು. ಒಂದು ವಿಡಿಯೋದಲ್ಲಿ ಸಿ.ಟಿ. ರವಿ ಸಚಿವರಿಗೆ ಆಕ್ಷೇಪಾರ್ಹ ಪದ ಬಳಸಿದ್ದರೆ, ಮತ್ತೊಂದು ವಿಡಿಯೋದಲ್ಲಿ ರಾಹುಲ್ ಗಾಂಧಿಗೆ ಡ್ರಗ್ ಅಡಿಟ್ ಅಂದಿದ್ದ ವಿಡಿಯೋವನ್ನು ಸಚಿವರು ಬಿಡುಗಡೆ ಮಾಡಿದರು. ಸಿಎಂ, ಡಿಸಿಎಂ ಸೇರಿದಂತೆ ಪಕ್ಷದ ನಾಯಕರಿಂದ ಧೈರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು…
ನವದೆಹಲಿ: ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ಹೈಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾ ಪ್ರಯೋಜನಗಳನ್ನು ತಪ್ಪಾಗಿ ಪಡೆದ ಆರೋಪದ ಮೇಲೆ ತನ್ನ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣದಲ್ಲಿ ಜಾಮೀನು ಕೋರಿ ಅವರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಮೀಸಲಾತಿ ಪ್ರಯೋಜನಗಳನ್ನು ಪಡೆಯಲು 2022 ರ ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಗೆ ಸಲ್ಲಿಸಿದ ಅರ್ಜಿಯಲ್ಲಿ ಖೇಡ್ಕರ್ ಮಾಹಿತಿಯನ್ನು ತಪ್ಪಾಗಿ ನಿರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರು ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. https://kannadanewsnow.com/kannada/legal-battle-against-bjp-mlc-ct-ravi-minister-lakshmi-hebbalkar/ https://kannadanewsnow.com/kannada/breaking-kalburgi-tragedy-woman-seriously-injured-after-coming-in-contact-with-electric-wire-while-boarding-bus/
ಬೆಳಗಾವಿ : ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ನನಗೆ ಬಹಳಷ್ಟು ನೋವಾಗಿತ್ತು. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು. ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಪರಾಧಿ ಭಾವನೆ ಕಾಡುತ್ತಿದೆ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ. ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು. ಇಂಥ ಸಂದರ್ಭದಲ್ಲೂ ಬಿಜೆಪಿಯವರು ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಸಚಿವರು ಕಿಡಿ ಕಾರಿದರು. ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳೆಲ್ಲಾ ಸಸ್ಪೆಂಡ್ ಆಗುತ್ತಾರೆ ಎಂದರು. ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ರಾಜ್ಯಸಭೆಯಲ್ಲಿನ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಇವರು ವಿಧಾನಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಇದು ರಾಜ್ಯಸಭೆಯಲ್ಲಿ ಪ್ರಾರಂಭವಾದದ್ದು. ಈ ವಿಷಯ ಆ ಸದನಕ್ಕೆ ಸಂಬಂಧಪಟ್ಟ ವಿಷಯ. ಅಮಿತ್ ಶಾ ಅವರು ವಿಧಾನ ಪರಿಷತ್ ಸದಸ್ಯರಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು. ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆಗೆ ವಿಶೇಷವಾದ ಅವಕಾಶ ಕೊಡುತ್ತೇವೆ ಎಂದು ಡಂಗೂರ ಹೊಡೆದರು. ನಿನ್ನೆಯೂ ಒಬ್ಬ ಹೆಣ್ಣುಮಗಳು ಬಳ್ಳಾರಿಯಲ್ಲಿ ಮಗುವಿಗೆ ಜನ್ಮ ಕೊಡುವಾಗ ತೀರಿಕೊಂಡಿದ್ದಾಳೆ. ಪ್ರತಿನಿತ್ಯ ಈ ಸಾವುಗಳು ಸಂಭವಿಸುತ್ತಿವೆ. ಇದ್ಯಾವುದರ ಬಗ್ಗೆ ರಾಜ್ಯ ಸರಕಾರಕ್ಕೆ ಕಿಂಚಿತ್ತೂ ಚಿಂತೆ ಇಲ್ಲ ಎಂದು ಕೇಂದ್ರ ಸಚಿವರು…
ಹಾಸನ: ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ *lಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ. ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ ಗೊತ್ತಿದೆ. ಸಿಡಿ ಬಿಟ್ರಲ್ಲಾ, ಅದೇ ತಾನೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ನವರ ಕೊಡುಗೆ? ಅದು ಬಿಟ್ಟು ಹಾಸನ ಜಿಲ್ಲೆಗೆ ಅವರು ಏನು ಕೊಟ್ಟಿದ್ದಾರೆ? ಇವತ್ತು ಹಾಸನ ಜಿಲ್ಲೆ ಅಭಿವೃದ್ಧಿ ಕಂಡಿದ್ದರೆ ದೇವೇಗೌಡರು, ರೇವಣ್ಣ ಹಾಗೂ ನಾನು ಮುಖ್ಯಮಂತ್ರಿ ಇದ್ದಾಗ ಆಗಿದ್ದು. ನಾನು ನನ್ನದೇ ಆದಂತಹ ಜವಾಬ್ದಾರಿ ನಿರ್ವಹಣೆ ಮಾಡಿದ್ದೇನೆ. ಇವರೇನು ಕೊಟ್ಟಿದ್ದಾರೆ, ಹಾಸನದ ಫ್ಲೈ ಓವರ್ ರೆಡಿ ಮಾಡಲು ಆಗಲಿಲ್ಲ ಇವರ ಯೋಗ್ಯತೆಗೆ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ನಾವೇನಾದರೂ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡಿ ಸಾಕ್ಷಿಗುಡ್ಡೆಗಳನ್ನು ನಿರ್ಮಾಣ ಮಾಡಿದರೆ ತೋರಿಸಬಹುದಿತ್ತು. ಅವರು ಸಾರ್ವಜನಿಕರ ಆಸ್ತಿ, ಸರ್ಕಾರದ…
ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 12 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕ: 21-12-2024 ರಂದು ಧಾರವಾಡ ಜಿಲ್ಲಾ ವೆಬ್ ಸೈಟ್ http://dharwad.nic.in ನಲ್ಲಿ ಪ್ರಕಟಿಸಲಾಗುವುದು. ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ ದಿನಾಂಕ: 07-01-2025 ರಂದು ಬೆಳಿಗ್ಗೆ 10:30 ಗಂಟೆಗೆ “ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ, ನೂತನ ಸಭಾ ಭವನ” ಇಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾಧಿಕಾರಿಯವರ ಕಛೇರಿಯ ದೂರವಾಣಿ ಸಂಖ್ಯೆ: 0836-2233880, 2233840 ನೇದ್ದಕ್ಕೆ ಕರೆ ಮಾಡಿ ಸಿಬ್ಬಂದಿ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರು…
ಕೋಲಾರ: ಬಿಪಿಎಲ್ ಕಾರ್ಡ್ ದಾರರು ಪಡಿತರ ಪಡೆಯೋದಕ್ಕೆ ಕುಟುಂಬದ ಎಲ್ಲರ ವೇತನ ಪ್ರಮಾಣ ಪತ್ರ ನೀಡುವುದು ಕಡ್ಡಾಯವೆಂದೇ ಹೇಳಲಾಗುತ್ತಿತ್ತು. ಆದರೇ ಎಲ್ಲರ ವೇತನ ಪ್ರಮಾಣಪತ್ರ ಕಡ್ಡಾಯವಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿದಂತ ಅವರು ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಇಲಾಖೆಯಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರಿ ನೌಕರರು ಕಾರ್ಡ್ ಪಡೆದಿದ್ದರೇ ಅಂತವರ ರೇಷನ್ ಕಾರ್ಡ್ ರದ್ದುಗೊಳಿಸಲಾಗುವುದಾಗಿ ತಿಳಿಸಿದರು. ಅಕ್ರಮ ಪಡಿತರ ಚೀಟಿ ಪರಿಶೀಲನೆಯಿಂದಾಗಿ ರೇಷನ್ ವಿತರಣೆ ಸೇರಿದಂತೆ ವಿವಿಧ ಕೆಲಸಗಳಲ್ಲಿ ಸ್ವಲ್ಪ ಏರುಪೇರಾಗಿತ್ತು. ಈಗ ಒಂದು ಹಂತಕ್ಕೆ ಬಂದಿದೆ. ಇನ್ಮುಂದೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬುದಾಗಿ ಹೇಳಿದರು. ಬಿಪಿಎಲ್ ಕಾರ್ಡ್ ಹೊಂದಿರೋರು ಸರ್ಕಾರಿ ನೌಕರರು ಆಗಿರಬಾರದು. ವಾರ್ಷಿಕ ಆದಾಯ ಮಿತಿ 1.20 ಲಕ್ಷ ಮೀರಬಾರದು. ಇಂತವರ ಯಾವುದೇ ರೇಷನ್ ಕಾರ್ಡ್ ರದ್ದುಗೊಳಿಸುವುದಿಲ್ಲ ಎಂಬುದಾಗಿ ತಿಳಿಸಿದರು.
ಬೆಂಗಳೂರು: ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇಂದ್ರದ ಸಚಿವರಾಗಿದ್ದರು. ನೀವು ಕೊಟ್ಟ ಯಾವ ತೊಂದರೆಯಿಂದ ಬಾಬಾಸಾಹೇಬರಿಗೆ ನೋವಾಯಿತು? ಯಾವ ಕಾರಣಕ್ಕೆ ಅವರು ನೆಹರೂ ಅವರನ್ನು ವಿರೋಧಿಸಿ ರಾಜೀನಾಮೆ ಕೊಟ್ಟು ಹೊರಕ್ಕೆ ಬಂದರು ಎಂಬ ವಿಷಯದ ಕುರಿತು ಕಾಂಗ್ರೆಸ್ಸಿಗರು ಉತ್ತರ ಕೊಡಬೇಕು. ಯಾತ್ರೆ ಮಾಡಿ ಜನರಿಗೆ ಉತ್ತರಿಸಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಬಾಸಾಹೇಬರ ಜೊತೆ ಪಿಎ ಆಗಿ ಸೇವೆ ಮಾಡಿಕೊಂಡಿದ್ದ ಕಾರಜೋಳಕರ್ ಎಂಬವರನ್ನು ಅವರಿಂದ ಕಸಿದುಕೊಂಡು ಹೋಗಿ ಅವರ ವಿರುದ್ಧವೇ ಎತ್ತಿ ಕಟ್ಟಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿದಿರಲ್ಲವೇ? ಜನಪ್ರಿಯತೆ ಬಾಬಾಸಾಹೇಬರಿಗೆ ಇತ್ತೇ ಅಥವಾ ಕಾರಜೋಳಕರ್ ಅವರಿಗಿತ್ತೇ? ಅಂದಮೇಲೆ ಮನೆ ಒಡೆಯುವ ಕೆಲಸವನ್ನು ನೀವು ಬಹಳ ಚೆನ್ನಾಗಿ ಮಾಡುತ್ತೀರಿ ಎಂದು ಆಕ್ಷೇಪಿಸಿದರು. ಇದು ಅಂಬೇಡ್ಕರರಿಗೆ ಮಾಡಿದ ದ್ರೋಹ; ಇದನ್ನೂ ಜನರಿಗೆ ತಿಳಿಸಿ ಎಂದು ಒತ್ತಾಯಿಸಿದರು. ನೆಹರೂ, ಇಂದಿರಾಜೀ, ರಾಜೀವ್ ಗಾಂಧಿಯವರಿಗೆ ಕಾಂಗ್ರೆಸ್ಸಿಗರು ಭಾರತರತ್ನ…
ಭೋಪಾಲ್: ಮೃತ ವ್ಯಕ್ತಿಯೊಂದಿಗಿನ ಲೈಂಗಿಕ ಸಂಭೋಗವನ್ನು ಕಾನೂನಿನ ಅಡಿಯಲ್ಲಿ ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ ಎಂದು ಛತ್ತೀಸ್ ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣದ ತೀರ್ಪು ನೀಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಬಿಭು ದತ್ತಾ ಗುರು ಅವರನ್ನೊಳಗೊಂಡ ವಿಭಾಗೀಯ ಪೀಠವು, ಸಂತ್ರಸ್ತೆ ಜೀವಂತವಾಗಿದ್ದಾಗ ಮಾತ್ರ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಜಾರಿಗೆ ಬರುತ್ತದೆ ಮತ್ತು ಆದ್ದರಿಂದ ಮೃತ ವ್ಯಕ್ತಿಯೊಂದಿಗಿನ ಲೈಂಗಿಕ ಸಂಭೋಗವನ್ನು ಕಾನೂನಿನ ಅಡಿಯಲ್ಲಿ ಅತ್ಯಾಚಾರವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದಾಗ್ಯೂ, ಆರೋಪಿಯು ಮಾಡಿದ ಮೃತ ದೇಹದ ಮೇಲೆ ಅತ್ಯಾಚಾರ ಎಸಗಿದ ಅಪರಾಧ (ನೆಕ್ರೋಫಿಲಿಯಾ) ಒಬ್ಬರು ಯೋಚಿಸಬಹುದಾದ ಅತ್ಯಂತ ಭಯಾನಕ ಅಪರಾಧಗಳಲ್ಲಿ ಒಂದಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ವಾಸ್ತವ ಸಂಗತಿಯೆಂದರೆ, ಅತ್ಯಾಚಾರದ ಅಪರಾಧವನ್ನು ಮೃತ ದೇಹದೊಂದಿಗೆ ಮಾಡಿರುವುದರಿಂದ ಈ ಆರೋಪಿಯನ್ನು ಶಿಕ್ಷೆಗೆ ಗುರಿಪಡಿಸಲಾಗುವುದಿಲ್ಲ ಎಂದು ಅವರು…
ಚಿತ್ರದುರ್ಗ: 2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿವೇತನ ಅಭಿಯಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. 2024-25ನೇ ಸಾಲಿನಿಂದ ಕೇಂದ್ರ ಪುರಸ್ಕøತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಕಡ್ಡಾಯವಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗಿದ್ದು, ಎಲ್ಲಾ ಅರ್ಹ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಎಲ್ಲಾ ಅರ್ಹ ಫಲಾನುಭವಿಗಳು ಸಕಾಲದಲ್ಲಿ ಇ-ಕೆವೈಸಿ ನೊಂದಣಿ ಮಾಡಿಸಲು ಕೋರಿದೆ. ಚಿತ್ರದುರ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ವಿದ್ಯಾರ್ಥಿಗಳಿಂದ ಅರ್ಜಿ ಪಡೆಯಲು ಹಾಗೂ ಇ-ಕೆವೈಸಿ ಮಾಡಲು ಫೆಸಿಲಿಟೇಷನ್ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ…