Author: kannadanewsnow09

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಪ್ರಕರಣ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಬಳಿಕ ಎಸ್ಐಟಿಯಿಂದ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಇಂದಿನವರೆಗೆ ತಮ್ಮ ವಶಕ್ಕೆ ಎಸ್ಐಟಿ ಅಧಿಕಾರಿಗಳು ಪಡೆದಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ನಾಳೆಗೆ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಹಾಸನ ಪೆನ್ ಡ್ರೈವ್ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂಬುದಾಗಿ ಅವರ ಪುತ್ರ ಹೊಳೇನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಕಿಡ್ನ್ಯಾಪ್ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದ್ರೇ ಈ ಅರ್ಜಿಯನ್ನು ವಜಾಗೊಳಿಸಿತ್ತು. ಮಧ್ಯಂತರ…

Read More

ನವದೆಹಲಿ: 8 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಲ್ಲಿ 5ನೇ ಹಂತದ ಲೋಕಸಭಾ ಚುನಾವಣೆ, ಚುನಾವಣಾ ಆಯೋಗ ಸಜ್ಜುಗೊಂಡಿದೆ. 5ನೇ ಹಂತದ ಲೋಕಸಭಾ ಚುನಾವಣಾ ಕ್ಷೇತ್ರಗಳಲ್ಲಿ 695 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, 2024 ರ ಲೋಕಸಭಾ ಚುನಾವಣೆಯ 5 ನೇ ಹಂತದಲ್ಲಿ 8 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಂದ 695 ಅಭ್ಯರ್ಥಿಗಳು ಚುನಾವಣಾ ಸ್ಪರ್ಧೆಯಲ್ಲಿದ್ದಾರೆ ಎಂದಿದೆ. 2024 ರ ಲೋಕಸಭಾ ಚುನಾವಣೆಗೆ 5 ನೇ ಹಂತದಲ್ಲಿ ಮತದಾನ ನಡೆಯಲಿರುವ 8 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ 49 ಪಿಸಿಗಳಿಗೆ ಒಟ್ಟು 1586 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಎಲ್ಲಾ 8 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ 5 ನೇ ಹಂತಕ್ಕೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮೇ 3, 2024 ಆಗಿತ್ತು. ಎಲ್ಲಾ ನಾಮಪತ್ರಗಳ ಪರಿಶೀಲನೆಯ ನಂತರ, 749 ನಾಮಪತ್ರಗಳು ಕಂಡುಬಂದಿವೆ, ಅವುಗಳು ಮಾನ್ಯವಾಗಿವೆ ಎಂದು ಮಾಹಿತಿ ನೀಡಿದೆ. 5ನೇ ಹಂತದಲ್ಲಿ ಮಹಾರಾಷ್ಟ್ರದ 13…

Read More

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳ ಪೆನ್ ಡ್ರೈವ್ ಹಂಚಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಜೆಡಿಎಸ್ ಮಹಿಳಾ ಘಟಕದಿಂದ ದೂರು ನೀಡಲಾಗಿದೆ. ಇಂದು ಜೆಡಿಎಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ ರಾಮೇಗೌಡ ನೇತೃತ್ವದಲ್ಲಿ ತೆರಳಿದಂತ ಮಹಿಳಾ ಜೆಡಿಎಸ್ ಕಾರ್ಯಕರ್ತರು, ರಾಜ್ಯ ಮಹಿಳಾ ಆಯೋಗದ ಕಚೇರಿಯಲ್ಲಿ ಹಾಸನ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಹಂಚಿಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಅಶ್ಲೀಲ ವೀಡಿಯೋಗಳು ದಿನದಿಂದ ದಿನಕ್ಕೇ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಇದರಿಂದ ಸಂತ್ರಸ್ತ ಮಹಿಳೆಯರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ವೀಡಿಯೋಗಳನ್ನು ಬೆಂಗಳೂರು, ಮಂಡ್ಯದಲ್ಲಿ ಪೆನ್ ಡ್ರೈವ್ ನಲ್ಲಿ ಹಂಚಲಾಗಿದೆ ಎಂಬುದಾಗಿ ಕೇಳಿ ಬರುತ್ತಿದೆ. ಹೀಗೆ ಹಂಚಿಕೆ ಮಾಡಿದಂತ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ. https://kannadanewsnow.com/kannada/congress-india-alliance-has-broken-down-after-third-phase-of-polling-pm-modi/ https://kannadanewsnow.com/kannada/sslc-results-to-be-declared-tomorrow-at-10-30-am-heres-how-to-check-the-result-sslc-exam-results-2024/

Read More

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ನಿನ್ನೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಸನ ಪೆನ್ ಡ್ರೈವ್ ಸೂತ್ರಧಾರನೇ ಡಿಸಿಎಂ ಡಿಕೆ ಶಿವಕುಮಾರ್ ಎಂಬುದಾಗಿ ಗಂಭೀರ ಆರೋಪ ಮಾಡಿದ್ದರು. ಇಂದು ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವಂತ 12 ಮಹಿಳೆಯರನ್ನು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿಯೇ ಇಡಲಾಗಿದೆ ಎಂಬುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 12 ಸಂತ್ರಸ್ತೆಯರನ್ನು ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿಯೇ ಇಡಲಾಗಿದೆ. ಮೂರು ದಿನಗಳ ಹಿಂದೆ ಅವರನ್ನು ಕರೆದುಕೊಂಡು ಬಂದಿದ್ದಾರೆ. ಇದೀಗ ಇವರಿಗೆ ರಕ್ಷಣ ಕೊಡುವ ಬಗ್ಗೆ ಅನುಕಂಪದ ಮಾತನಾಡುತ್ತಿದ್ದಾರೆ ಎಂಬುದಾಗಿ ಕಿಡಿಕಾರಿದರು. ಇದೇ ಸಂದರ್ಭದಲ್ಲಿ ರೇವಣ್ಣ, ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆಗಾಗಿ ಎಸ್‌ಐಟಿ ರಚನೆ ಆಗಿದೆ. ಗೃಹ ಸಚಿವರಿಗೆ ಪ್ರಶ್ನೆ ಮಾಡ್ತೀನಿ. ನಿಮ್ಮ ತನಿಖೆ ರೇವಣ್ಣ, ಪ್ರಜ್ವಲ್ ಮೇಲೆ ಯಾಕೆ ಟಾರ್ಗೆಟ್ ಆಗಿದೆ. ವೀಡಿಯೋ ಬಿಡುಗಡೆ ಮಾಡಿದವರನ್ನ ಯಾಕೆ ತನಿಖೆ ಮಾಡ್ತಾ ಇಲ್ಲ. ಮಹಿಳಾ ಆಯೋಗ…

Read More

ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಎಸ್.ಎಂ.ಕೃಷ್ಣ ಅವರದ್ದು ಶಿಸ್ತುಬದ್ಧ ಜೀವನ. ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿದ್ದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದೆ ಎಂದು ವೈದ್ಯರು ತಿಳಿಸಿದ್ದು ಶೀಘ್ರ ಗುಣಮುಖರಾಗಲಿದ್ದಾರೆ ಎಂದು ಹೇಳಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಎಸ್ ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ತಿಳಿಯಿತ್ತು. ಹೀಗಾಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದೇನೆ. ಆದಷ್ಟು ಬೇಗ ಗುಣಮುಖರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಕೆ.ಮುಳುಗುಂದ್, ಶಾಸಕರಾದ ದಿನೇಶ್ ಗೂಳಿಗೌಡ ಅವರು ಜೊತೆಯಲ್ಲಿದ್ದರು. https://kannadanewsnow.com/kannada/108-employees-call-off-strike-resume-work-as-usual/ https://kannadanewsnow.com/kannada/66-74-voter-turnout-recorded-in-second-phase-of-assembly-elections-in-karnataka-fate-of-227-candidates-sealed-in-evm/

Read More

ಬೆಂಗಳೂರು: ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆಗೆ 2ನೇ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಿತು. ಇಂದಿನ ಲೋಕಸಭಾ ಚುನಾವಣೆಯ 2ನೇ ಹಂತದಲ್ಲಿ ಶೇ.69.30ರಷ್ಟು ಮತದಾನವಾಗಿದೆ ಎಂಬುದಾಗಿ ಚುನಾವಣಾ ಆಯೋಗ ಅಧಿಕೃತ ಮಾಹಿತಿ ನೀಡಿದೆ. ಈ ಕುರಿತಂತೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿರುವಂತ ಚುನಾವಣಾ ಆಯೋಗವು, ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಿತು. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆದಂತ ಮತದಾನ ಪ್ರಕ್ರಿಯೆಯಲ್ಲಿ ಶೇ.69.37ರಷ್ಟು ಮತದಾನವಾಗಿದೆ ಎಂದು ತಿಳಿಸಿದೆ. ಹೀಗಿದೆ ಜಿಲ್ಲಾವಾರು ಮತದಾನದ ಶೇಕಡಾವಾರು ವಿವರ ಬಾಗಲಕೋಟೆ – ಶೇ.70.43 ಬೆಳಗಾವಿ- ಶೇ.70.84 ಬಳ್ಳಾರಿ – ಶೇ.69.74 ಬೀದರ್- ಶೇ.63.65 ವಿಜಯಪುರ- ಶೇ.64.71 ಚಿಕ್ಕೋಡಿ- ಶೇ.74.39 ದಾವಣಗೆರೆ – ಶೇ.76.23 ಧಾರವಾಡ – ಶೇ.71.29 ಗುಲ್ಬರ್ಗಾ- ಶೇ.61.73 ಹಾವೇರಿ- ಶೇ.72.59 ಕೊಪ್ಪಳ- ಶೇ.69.87 ರಾಯಚೂರು- ಶೇ.60.72 ಶಿವಮೊಗ್ಗ- ಶೇ.76.05 ಉತ್ತರ ಕನ್ನಡ- ಶೇ.73.52 https://kannadanewsnow.com/kannada/108-employees-call-off-strike-resume-work-as-usual/

Read More

ಬೆಂಗಳೂರು: ಹಾಸನ ಜಿಲ್ಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿದ ಪಿತೂರಿ ಆರೋಪಕ್ಕೆ ಗುರಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಒತ್ತಾಯ ಮಾಡಿದ್ದಾರೆ. ಜೆಡಿಎಸ್ ಕಚೇರಿ ಜೆಪಿ ಭವನದ ಬಳಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ನೇತೃತ್ವ ವಹಿಸಿ ಮಾತನಾಡಿದ ಅವರು; ಅಶ್ಲೀಲ ವಿಡಿಯೋಗಳನ್ನು ಯಾರು ಸೋರಿಕೆ ಮಾಡಿದರು ಎನ್ನುವ ಅಂಶವನ್ನು ಬಿಜೆಪಿ ನಾಯಕ, ವಕೀಲ ದೇವರಾಜ್ ಗೌಡ ಅವರು ಬಹಿರಂಗ ಮಾಡಿದ್ದಾರೆ. ಅವರು ನೇರವಾಗಿಯೇ ಸಾಕ್ಷಿ ಸಮೇತ ಡಿಕೆಶಿ ಹೆಸರು ಹಾಗೂ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಅವರ ಹೆಸರನ್ನು ಹೇಳಿದ್ದಾರೆ ಎಂದರು. ಇಷ್ಟು ಸೂಕ್ಷ್ಮ ಪ್ರಕರಣದ ಬಗ್ಗೆ ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕಿದ್ದ ಉಪ ಮುಖ್ಯಮಂತ್ರಿ, ರಾಜಕೀಯ ಸ್ವಾರ್ಥಕ್ಕಾಗಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು, ಅದಕ್ಕಾಗಿ ಜೆಡಿಎಸ್ ಬಿಜೆಪಿ ಮೈತ್ರಿಗೆ ಧಕ್ಕೆ ಉಂಟು ಮಾಡುವ ಏಕೈಕ ಉದ್ದೇಶದಿಂದ ಈ ಸಂಚು ನಡೆಸಿದ್ದಾರೆ. ಹೀಗಾಗಿ ಅವರನ್ನು…

Read More

ಬೆಂಗಳೂರು: ನಗರದಲ್ಲಿ ಇಂದು ರೌಡಿ ಶೀಟರ್ ಒಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ರೌಡಿ ಶೀಟರ್ ಕಾರ್ತಿಕೇಯನ್ ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ನಂತ್ರ, ದುಷ್ಕರ್ಮಿಗಳು ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದಂತ ಬಾಣಸವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. https://kannadanewsnow.com/kannada/former-minister-hd-revanna-hospitalised-after-health-deteriorates/ https://kannadanewsnow.com/kannada/108-employees-call-off-strike-resume-work-as-usual/

Read More

ಬಳ್ಳಾರಿ: ಜಿಲ್ಲೆಯಲ್ಲಿ ಗೌಪ್ಯ ಮತದಾನದ ನಿಯಮ ಉಲ್ಲಂಘಿ ಬಿಜೆಪಿಗೆ ಮತದಾನ ಮಾಡಿದಂತ ಪೋಟೋ ಹಂಚಿಕೊಂಡಂತ ಪಾಲಿಕೆ ಸದಸ್ಯನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಳ್ಳಾರಿ ಮಹಾನಗರ ಪಾಲಿಕೆಯ 10ನೇ ವಾರ್ಡ್ ನ ಬಿಜೆಪಿ ಸದಸ್ಯ ಕೋನಂಕಿ ತಿಲಕ್ ಅವರು ಮತ ಚಲಾಯಿಸುವಾಗ ಇವಿಎಂ ಮಿಷಿನ್ ಮೇಲೆ ಕಮಲದ ಚಿನ್ನೆ ಒತ್ತಿದಂತ ಪೋಟೋ ಕ್ಲಿಕ್ಕಿಸಿಕೊಂಡಿದ್ದರು. ಈ ಪೋಟೋವನ್ನು ವಾಟ್ಸ್ ಆಪ್ ಸ್ಟೇಟಸ್ ಹಾಕಿದ್ದರು. ಪಾಲಿಕೆ ಸದಸ್ಯ ಲೋಕಸಭಾ ಚುನಾವಣೆಯ ಗೌಪ್ಯ ಮತದಾನದ ನಿಯ ಉಲ್ಲಂಘಿಸಿ ಪೋಟೋ ಕ್ಲಿಕ್ ಮಾಡಿದ್ದರ ಬಗ್ಗೆ ಚುನಾವಣಾ ಆಯೋಗದಿಂದ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/former-minister-hd-revanna-hospitalised-after-health-deteriorates/ https://kannadanewsnow.com/kannada/yogesh-gowda-murder-case-hc-allows-mla-vinay-kulkarni-to-cast-his-vote/

Read More

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ, ಅವರ ವಶದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ತಿಳಿದು ಬಂದಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಕೋರ್ಟ್ ಗೆ ಹಾಜರುಪಡಿಸಿ ಮೇ.8ರವರೆಗೆ ತಮ್ಮ ವಶಕ್ಕೆ ಪಡೆದಿದ್ದಾರೆ. ಇಂದು ಅವರು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಕೂಡ ಮಾಡಿಸಲಾಗಿತ್ತು. ಈ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಹೊಟ್ಟೆ ಉರಿ ಕೂಡ ಹೆಚ್ಚಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರು ಹೆಚ್.ಡಿ ರೇವಣ್ಣ ಅವರಿಗೆ ಚಿಕಿತ್ಸೆ ನೀಡುತ್ತಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/yogesh-gowda-murder-case-hc-allows-mla-vinay-kulkarni-to-cast-his-vote/ https://kannadanewsnow.com/kannada/tushar-girinath-asks-officials-to-ensure-that-bengaluru-is-not-affected-by-rain/

Read More