Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಅಕ್ಟೋಬರ್.1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಹಾಗಾದ್ರೇ ಸರ್ಕಾರ ಜಾರಿಗೊಳಿಸಿರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ(KASS) ಅನುಕೂಲಗಳು ಏನು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ಸರ್ಕಾರಿ ಮಹಿಳಾ ನೌಕರರ ತಂದೆ ತಾಯಿಗಳು ಕೆ ಎ ಎಸ್ ಎಸ್ ಸೌಲಭ್ಯ ಪಡೆಯಬಹುದು ಎಂಬುದಾಗಿ ತಿಳಿಸಿದೆ. ಸರ್ಕಾರಿ ನೌಕರರ ಕುಟುಂಬಸ್ಥರಿಗೆ ಆದಾಯ ಮಿತಿಯನ್ನು ರೂ.17,000ರಿಂದ 27,000ಕ್ಕೆ ಹೆಚ್ಚಿಸಲಾಗಿದೆ. ಸುಮಾರು 2000 ಖಾಯಿಲೆಗಳಿಗೆ ಈ ಯೋಜನೆಯಡಿ ಚಿಕಿತ್ಸೆ ಸೌಲಭ್ಯ ದೊರೆಯಲಿವೆ. ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರಿಗೆ ವೈದ್ಯಕೀಯ ಭತ್ಯೆಯನ್ನು ಮುಂದುವರೆಸಲಾಗುವುದು. ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಯಾರಾದರೂ ಒಬ್ಬರು ಮಾತ್ರ ಈ ಯೋಜನೆಗೆ ಮಾಸಿಕ ವಂತಿಕೆ ಪಾವತಿಸಬಹುದಾಗಿದೆ. https://kannadanewsnow.com/kannada/union-minister-pralhad-joshi-held-a-progress-review-meeting-of-railway-projects-at-the-south-western-railway-office-in-bengaluru/ https://kannadanewsnow.com/kannada/alert-smokers-beware-cigarettes-can-cause-these-serious-diseases/
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೈಋತ್ಯ ರೈಲ್ವೆಯ ಕೇಂದ್ರ ಕಚೇರಿ ರೈಲ್ ಸೌಧದಲ್ಲಿ ಇಂದು ಪ್ರಧಾನ ವ್ಯವಸ್ಥಾಪಕರೊಂದಿಗೆ ರೈಲ್ವೆ ಯೋಜನೆಗಳ ಪರಿಶೀಲನೆ ನಡೆಸಿದರು. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ ಅವರು ಇಂದು ಹಬ್ಬಳ್ಳಿಯ ರೈಲ್ ಸೌಧದಲ್ಲಿ ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರರೊಂದಿಗೆ ಚಾಲ್ತಿಯಲ್ಲಿರುವ ಹಾಗೂ ಪ್ರಸ್ತಾವಿತ ರೈಲ್ವೆ ಯೋಜನೆಗಳ ಪರಿಶೀಲನಾ ಸಭೆಯನ್ನು ನಡೆಸಿದರು. ಸಭೆಗೆ ಹಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಶಾಸಕರಾದ ಮಹೇಶ್ ತೆಂಗಿನಕಾಯಿ, ಹಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಾನ್ಯ ಮೇಯರ್ ಜ್ಯೋತಿ ಪಾಟೀಲ, ಆಯುಕ್ತರಾದ ರುದ್ರೇಶ್ ಗಾಳಿ, ಸಹಾಯಕ ಆಯುಕ್ತರಾದ ವಿಜಯ್ ಕುಮಾರ್, ಹಬ್ಬಳ್ಳಿ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಬೆಲಾ ಮೀನಾ, ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ ಹಿರಿಯ ಅಧಿಕಾರಿಗಳು ಹಾಗೂ ನೈಋತ್ಯ ರೈಲ್ವೆಯ ಮುಖ್ಯ ವಿಭಾಗಾಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ಸಚಿವರು ಕರ್ನಾಟಕದ ಪ್ರಮುಖ…
ಬೆಂಗಳೂರು: 2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಸರ್ಕಾರ ಪ್ರಕಟಿಸಿದೆ. ಈ ಬಾರಿ ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿಗೆ ಬಾಜನರಾಗಿದ್ದರೇ, ಅರ್ಚನಾ ಜೋಯ್ಸ್ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ. ರಾಜ್ಯ ಸರ್ಕಾರವು ಇಂದು ಪ್ರಶಸ್ತಿಯನ್ನು ಪ್ರಕಟಿಸಿದ್ದು, 2021ನೇ ಸಾಲಿನ ರಾಜ್ಯ ಅತ್ಯುತ್ತಮ ನಟ ಪ್ರಶಸ್ತಿಗೆ ರಕ್ಷಿತ್ ಶೆಟ್ಟಿ, ನಟಿ ಪ್ರಶಸ್ತಿಗೆ ಅರ್ಚನಾ ಜೋಯ್ಸ್ ಬಾಜನರಾಗಿದ್ದಾರೆ. ಇನ್ನೂ ದೊಡ್ಡಹಟ್ಟಿ ಬೋರೇಗೌಡ ಮೊದಲನೇ ಅತ್ಯುತ್ತಮ ಚಿತ್ರವಾಗಿದ್ದರೇ, 777 ಚಾರ್ಲಿಗೆ ಎರಡನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಬಂದಿದೆ. ಬಿಸಿಲು ಕುದುರೆಗೆ 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ, ಯುವರತ್ನ ಚಿತ್ರಕ್ಕೆ ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ ಪ್ರಶಸ್ತಿ ಸಂದಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ಯುವರತ್ನ ಚಿತ್ರ ಇದಾಗಿದೆ. ಭಾರತದ ಪ್ರಜೆಗಳಾದ ನಾವು ಚಿತ್ರಕ್ಕೆ ವಿಶೇಷ ಕಾಳಜಿಯ ಚಿತ್ರ ಪ್ರಶಸ್ತಿ ಸಂದಿದೆ.
ಮಹಾರಾಷ್ಟ್ರ: ಬೆಳಗಾವಿ ಜಿಲ್ಲೆಯ ಒಂದೇ ಕುಟುಂದ ಮೂವರು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಸರಾ ರಜೆಯ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದಿಂದ 8 ಜನರು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರತೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. ಬೆಳಗಾವಿ ಜಿಲ್ಲೆಯ ಆಳ್ನಾವರದಿಂದ ತೆರಳಿದ್ದಂತ 8 ಜನರಲ್ಲಿ ಮೂವರು ಸಮುದ್ರಪಾಲಾಗಿದ್ದಾರೆ. ಅವರ ಶವ ಪತ್ತೆಯಾಗಿದ್ದು, ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಸಮುದ್ರದಲ್ಲಿ ಕಣ್ಮರೆಯಾಗಿರುವಂತ ಉಳಿದ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ಫರೀನ್ ಇರ್ಫಾನ್ ಕಿತ್ತೂರ(34), ಇಬಾದ್ ಕಿತ್ತೂರ(13) ಹಾಗೂ ಆಳ್ನಾವರದ ನಮೀರಾ ಅಕ್ತರಾ(16) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಲೋಂಡಾ ಗ್ರಾಮದ ನಿವಾಸಿಗಳಾಗಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸ್ನಾತಕೋತ್ತರ ವೈದ್ಯಕೀಯ ಪದವಿ / ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅ.4ರಿಂದ (ಬೆ. 11) ಅ.9 (ಬೆಳಿಗ್ಗೆ 11) ರೊಳಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ. ನೀಟ್-ಪಿಜಿ 2025ರಲ್ಲಿ ಅರ್ಹತೆ ಪಡೆದಿರುವ ಹಾಗೂ ಅರ್ಹತಾ ಮಾನದಂಡಗಳನ್ನು ಪೂರೈಸುವ ಕರ್ನಾಟಕ ಸೇವಾನಿರತ ಅರ್ಹ ಅಭ್ಯರ್ಥಿಗಳಿಂದ 2025-26ನೇ ಸಾಲಿಗೆ ಕರ್ನಾಟಕ ರಾಜ್ಯದಲ್ಲಿನ ಸ್ನಾತಕೋತ್ತರ ಡಿ ಎನ್ ಬಿ ಹಾಗೂ ಡಿಪ್ಲೊಮಾ ವೈದ್ಯಕೀಯ ಕೋರ್ಸುಗಳಿಗೂ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಶುಕ್ರವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳು, ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿ ಲಭ್ಯವಾಗುವ ಸರ್ಕಾರಿ ಕೋಟಾ ಸೀಟುಗಳು ಮತ್ತು ಖಾಸಗಿ ಮತ್ತು ಅಲ್ಪಸಂಖ್ಯಾತ ವೈದ್ಯಕೀಯ ಕಾಲೇಜುಗಳಲ್ಲಿನ ಖಾಸಗಿ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ನೋಂದಣಿ ಶುಲ್ಕ, ದಾಖಲಾತಿ ಪರಿಶೀಲನೆಯ ವಿವರಗಳು, ದಾಖಲಾತಿ…
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025 (ಕೆಸೆಟ್ 25)ಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ವಿವರಗಳನ್ನು ತಿದ್ದುಪಡಿ ಮಾಡಲು ಅ.6ರವರೆಗೆ (ಸಂಜೆ 5.30) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ. ಮೊಬೈಲ್ ದೂರವಾಣಿ ಸಂಖ್ಯೆ ಹೊರತುಪಡಿಸಿ, ಆನ್ ಲೈನ್ ಅರ್ಜಿಯಲ್ಲಿನ ಎಲ್ಲ ವಿವರಗಳ ತಿದ್ದುಪಡಿಗೂ ಅವಕಾಶ ನೀಡಲಾಗಿದೆ. ಒಂದು ವೇಳೆ ದೂರವಾಣಿ ಸಂಖ್ಯೆ ಬದಲಿಸಿಕೊಳ್ಳಬೇಕೆನ್ನುವವರು ಖುದ್ದು ಕೆಇಎಗೆ ಬಂದು ಅರ್ಜಿ ಕೊಡಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ಎಚ್.ಪ್ರಸನ್ನ ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಒಮ್ಮೆ ತಿದ್ದುಪಡಿ ಮಾಡಿದ ನಂತರ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಎಚ್ಚರ ವಹಿಸಲು ಅವರು ಸಲಹೆ ನೀಡಿದ್ದಾರೆ. ಪುನಃ ತಿದ್ದುಪಡಿ ಸಂಬಂಧ ಯಾವುದೇ ಮನವಿಯನ್ನು ಪುರಸ್ಕರಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. https://twitter.com/KEA_karnataka/status/1974136959070257572?t=mzQSLhK9xDNZdQiozrQG_Q&s=08 https://kannadanewsnow.com/kannada/kea-announces-provisional-results-for-mba-mca/ https://kannadanewsnow.com/kannada/breaking-i-am-getting-married-soon-dimple-queen-rachita-ram-gave-good-news-to-fans/
ಬೆಂಗಳೂರು: ಎಂಬಿಎ, ಎಂಸಿಎ, ಎಂಟೆಕ್, ಎಂಇ, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಸಂಜೆ ಪ್ರಕಟಿಸಿದೆ. ಫಲಿತಾಂಶಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಅ.4ರಂದು ಮಧ್ಯಾಹ್ನ 1ಗಂಟೆ ಒಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬಹುದು. ಬಳಿಕ ಪರಿಶೀಲಿಸಿ, ಅದೇ ದಿನ ಸಂಜೆ ವೇಳೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಬೆಂಗಳೂರು: ಇಂದು ಖ್ಯಾತ ಪತ್ರಕರ್ತ ಟಿ.ಜೆ.ಎಸ್ ಜಾರ್ಜ್ ಅವರು ವಿಧವಶರಾಗಿದ್ದರು. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂತಾಪ ಸೂಚಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ (97)ಅವರು ನಿಧನಕ್ಕೆ KUWJ ಸಂತಾಪ ವ್ಯಕ್ತಪಡಿಸಿದೆ. ಕೆಯುಡಬ್ಲ್ಯೂಜೆ ಮನೆಯಂಗಳದ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಿದ್ದು ಮರೆಯಲಾಗದ ಕ್ಷಣ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸ್ಮರಿಸಿದ್ದು, ಅನುಭವಿ ಪತ್ರಕರ್ತರೊಬ್ಬರನ್ನು ಸುದ್ದಿಮನೆ ಕಳೆದುಕೊಂಡಿದೆ ಎಂದು ಶೋಕಿಸಿದ್ದಾರೆ. https://twitter.com/kuwj_r/status/1974121371409293586?s=46&t=K__Bb-oISWk0C8ZNc8qCGw https://kannadanewsnow.com/kannada/good-news-for-enumerators-who-performed-duties-in-the-scheduled-caste-survey-in-the-state-honorarium-released/ https://kannadanewsnow.com/kannada/alert-smokers-beware-cigarettes-can-cause-these-serious-diseases/
2010 ರಲ್ಲಿ, ಭಾರತೀಯ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರನ್ನು ವಿವಾಹವಾದರು. 8 ವರ್ಷಗಳ ನಂತರ, ದಂಪತಿಗಳು ತಮ್ಮ ಮೊದಲ ಮಗುವನ್ನು ಜಗತ್ತಿಗೆ ಸ್ವಾಗತಿಸಿದರು, ಅವರಿಗೆ ಅವರು ಇಜಾನ್ ಮಿರ್ಜಾ ಮಲಿಕ್ ಎಂದು ಹೆಸರಿಸಿದರು. ಇದೀಗ ತನ್ನ ಮೂರನೇ ಪತ್ನಿ ಸನಾ ಜಾವೇದ್ ನಿಂದ ವಿಚ್ಛೇದನ ಪಡೆಯಲು ಶೋಯೆಬ್ ಮಲ್ಲಿಕ್ ಮುಂದಾಗಿರುವುದಾಗಿ ವರದಿಯಾಗಿದೆ. 2024 ರ ಜನವರಿಯಲ್ಲಿ ಕರಾಚಿಯಲ್ಲಿರುವ ಅವರ ಮನೆಯಲ್ಲಿ ನಡೆದ ಖಾಸಗಿ ನಿಕಾಹ್ ಸಮಾರಂಭದಲ್ಲಿ ಶೋಯೆಬ್ ಪಾಕಿಸ್ತಾನಿ ಟಿವಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾದಾಗ, ನೆಟಿಜನ್‌ಗಳು ಆಘಾತಕ್ಕೊಳಗಾದರು. ಟೆನಿಸ್ ಆಟಗಾರ್ತಿ ತಮ್ಮ ಮೂರನೇ ಮದುವೆಗೆ ತಿಂಗಳುಗಳ ಮೊದಲು ಕ್ರಿಕೆಟಿಗರಿಂದ ‘ಖುಲಾ’ ಮೂಲಕ ವಿಚ್ಛೇದನ ಪಡೆದಿದ್ದಾರೆ ಎಂದು ಸಾನಿಯಾ ಅವರ ಕುಟುಂಬ ನಂತರ ದೃಢಪಡಿಸಿತು. ಸರಿ, ಶೋಯೆಬ್ ತಮ್ಮ ಮೂರನೇ ವಿಚ್ಛೇದನದತ್ತ ಸಾಗುತ್ತಿದ್ದಾರೆ ಎಂದು ಈಗ ಬಝ್ ಸೂಚಿಸುತ್ತದೆ. ಶೋಯೆಬ್ ಮತ್ತು ಸನಾ ಅವರ ಈ ವೀಡಿಯೊದ ಜೊತೆಗೆ “ಮತ್ತೊಂದು ಬ್ರೇಕ್-ಅಪ್ ದಾರಿಯಲ್ಲಿದೆಯೇ?”…
ಬೆಂಗಳೂರು: ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಾಳೆಯಿಂದ ಆರಂಭವಾಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025 ಕ್ಕೆ ನಾಗರಿಕರು ಸಹಕರಿಸುವಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ ಮನವಿ ಮಾಡಿದ್ದಾರೆ. ಸಮೀಕ್ಷೆದಾರರಿಗೆ 29-09-2025 ಮತ್ತು 03-10-2025ರಂದು ಎರಡು ಹಂತಗಳಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆ ಸುಗಮವಾಗಿ ನಡೆಯಲು ಒಟ್ಟು 9 ಮಂದಿ ಕೆ.ಎ.ಎಸ್. ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ 2 ವಲಯಗಳಲ್ಲಿನ ವಿಧಾನಸಭಾ ಕ್ಷೇತ್ರಗಳ 64 ವಾರ್ಡ್‌ಗಳ ಒಟ್ಟು 14.65 ಲಕ್ಷ ಮನೆಗಳು ಈ ಸಮೀಕ್ಷೆಗೆ ಒಳಪಡಲಿವೆ ಎಂದಿದ್ದಾರೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಗೆ ವಿಧಾನಸಭಾ ಕ್ಷೇತ್ರಗಳಾದ ಮಲ್ಲೇಶ್ವರಂ, ರಾಜಾಜಿನಗರ, ಮಹಾಲಕ್ಷ್ಮೀ ಲೇಔಟ್, ಗೋವಿಂದರಾಜನಗರ, ವಿಜಯನಗರ, ಬಸವನಗುಡಿ, ಪದ್ಮನಾಭನಗರ (ಭಾಗಶಃ), ರಾಜರಾಜೇಶ್ವರಿ ನಗರ, ಯಶವಂತಪುರ ಹಾಗೂ ದಾಸರಹಳ್ಳಿ (ಭಾಗಶಃ) ಸೇರಿವೆ. ಹಿಂದುಳಿದ ವರ್ಗಗಳ ಆಯೋಗ ಮತ್ತು ಸರ್ಕಾರದ ನಿರ್ದೇಶನದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ–2025 ನಡೆಸಲು ಎಲ್ಲಾ ಪೂರ್ವ ತಯಾರಿಗಳನ್ನು…














