Subscribe to Updates
Get the latest creative news from FooBar about art, design and business.
Author: kannadanewsnow09
ಹಾವೇರಿ: ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ‘ಡಿಕೆಶಿ, ಡಿಕೆಶಿ ‘ ಎಂದು ಘೋಷಣೆ ಕೂಗಿದರೆ, ಕಾರ್ಯಕರ್ತರೊಬ್ಬರು ಅವರ ಭುಜದ ಮೇಲೆ ಕೈ ಇಟ್ಟಾಗ ಶಿವಕುಮಾರ್ ಕೋಪಗೊಂಡು ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿ.ಕೆ.ಶಿವಕುಮಾರ್ ಅವರು ಶನಿವಾರ ಸಂಜೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಪ್ರಚಾರ ನಡೆಸಿದರು. ಡಿ.ಕೆ.ಶಿವಕುಮಾರ್ ಪ್ರಚಾರಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ‘ಡಿ.ಕೆ.ಶಿವಕುಮಾರ್’ ಎಂದು ಘೋಷಣೆ ಕೂಗುತ್ತಿದ್ದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆ, ಕಾರ್ಯಕರ್ತರೊಬ್ಬರು ಡಿ.ಕೆ.ಶಿವಕುಮಾರ್ ಅವರ ಭುಜದ ಮೇಲೆ ಕೈ ಹಾಕಿದರು. ಹಠಾತ್ ಅನುಚಿತ ವರ್ತನೆಯಿಂದ ಕೋಪಗೊಂಡ ಶಿವಕುಮಾರ್ ಕಾರ್ಮಿಕನಿಗೆ ಕಪಾಳಮೋಕ್ಷ ಮಾಡಿದ್ದಾನೆ. ಕಪಾಳಮೋಕ್ಷಕ್ಕೆ ಒಳಗಾದವರನ್ನು ಪುರಸಭೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್ ಎಂದು ಗುರುತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ,…
ಬೆಂಗಳೂರು: ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆರೋಪಿಸಿದರು. ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇವರನ್ನು ನೋಡುವಾಗÀ ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿತ್ತು ಎಂಬ ಕಥೆ ನೆನಪಾಗುತ್ತದೆ. ತಾನು ಮಾಡಿದ ಅಪಚಾರವನ್ನೆಲ್ಲ ಬಿಜೆಪಿಯ ತಲೆಗೆ ಕಟ್ಟುವ ವಿಫಲ ಯತ್ನ ಕಾಂಗ್ರೆಸ್ಸಿನದು ಎಂದು ತಿಳಿಸಿದರು. ದೇಶವನ್ನು ಆರ್ಥಿಕ ದುಸ್ಥಿತಿಯಿಂದ ಸುಸ್ಥಿತಿಗೆ ತಂದು ರಾಷ್ಟ್ರವನ್ನು ಸಂಕಷ್ಟದಿಂದ ಪಾರು ಮಾಡಿದ ನಾಯಕ, ಪ್ರಧಾನಿ ನರೇಂದ್ರ ಮೋದಿಯವರು ಎಂದು ಅವರು ಹೇಳಿದರು. ಕೋವಿಡ್ ಸಂಕಷ್ಟ, ರಷ್ಯಾ- ಉಕ್ರೇನ್ ಯುದ್ಧದ ಸಂಕಷ್ಟ, ಈ ಎಲ್ಲ ಸಂಕಷ್ಟಗಳಿಂದ ಪಾರು ಮಾಡಿ ಭಾರತಕ್ಕೆ ಜಾಗತಿಕ ಗೌರವ ತಂದುಕೊಟ್ಟಿದ್ದಾರೆ. ಭಾರತದ ಒಳಗೆ ಸಾಂಸ್ಕøತಿಕ ಪುನರುತ್ಥಾನಕ್ಕೆ ಮನ್ನಣೆ ಸಿಗುವಂತೆ ಮಾಡಿದ್ದಾರೆ ಎಂದು ತಿಳಿಸಿದರು. ಮೋದಿ ಗ್ಯಾರಂಟಿ ಬದುಕನ್ನು ಬದಲಾಯಿಸಿದೆ. ಬೇಡುವ ಸ್ಥಿತಿಯಿಂದ ನೀಡುವ ಸ್ಥಿತಿಗೆ ಒಯ್ಯುವುದೇ ಮೋದಿ ಗ್ಯಾರಂಟಿ. ನಾವು ಸುಧಾರಣೆ, ಸಂರಕ್ಷಣೆ, ಸಮೃದ್ಧಿ…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ವೀಡಿಯೋ ಪೋಸ್ಟ್ ಮಾಡಿದ ಕಾರಣ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕುರಿತಂತೆ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥರಾದಂತ ರಮೇಶ್ ಬಾಬು ಅವರು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿಯಾದಂತ ವೀಡಿಯೋವನ್ನು ಕರ್ನಾಟಕ ಬಿಜೆಪಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ವೀಡಿಯೋದಲ್ಲಿ ಬಿಜೆಪಿ ಸಿದ್ಧರಾಮಯ್ಯ ಅವರು ವಿವಿಧ ಅನುದಾನವನ್ನು ಮುಸ್ಲೀಂ ಸಮುದಾಯದವರಿಗೆ ಹಂಚುತ್ತಿದ್ದಾರೆ ಎಂಬುದಾಗಿ ಬಿಂಬಿಸಲಾಗಿದೆ. ಇದು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದಂತೆ ಆಗಿದೆ ಎಂದಿದ್ದರು. ಈ ದೂರಿನ ಹಿನ್ನಲೆಯಲ್ಲಿ ಎ.1 ಆರೋಪಿಯಾಗಿ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಎ.2 ಆರೋಪಿಯಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ…
ಬೆಳಗಾವಿ : “ನಾವು ಕೊಟ್ಟ ಭರವಸೆ ಈಡೇರಿಸಿದ್ದೇವೆ. ಬಿಜೆಪಿ 10 ವರ್ಷಗಳಿಂದ ಕೇವಲ ಬುರುಡೆ ಬಿಟ್ಟಿದೆ. ಹೀಗಾಗಿ ಈ ಚುನಾವಣೆ ಕಾಂಗ್ರೆಸ್ ಭರವಸೆ ಮತ್ತು ಬಿಜೆಪಿ ಬುರುಡೆ ನಡುವಣ ಹೋರಾಟ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯಲ್ಲಿ ಶುಕ್ರವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಕಳೆದ 10 ವರ್ಷಗಳಲ್ಲಿ ಬಿಜೆಪಿ ತಾನು ಕೊಟ್ಟ ಯಾವ ಮಾತನ್ನು ಈಡೇರಿಸಿದೆ? ಬಿಜೆಪಿ ಭಾವನೆ ಮೇಲೆ ಮಾತನಾಡುತ್ತಿದ್ದಾರೆ ಹೊರತು ಜನರ ಬದುಕಿನ ಬಗ್ಗೆ ಮಾತಾಡುತ್ತಿಲ್ಲ. ನಮ್ಮ ಗ್ಯಾರಂಟಿಗಳನ್ನು ಟೀಕೆ ಮಾಡಿದವರು ಇಂದು ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ. ಬಿಜೆಪಿ ಹೆಸರೂ ಹಾಕದೇ, ಕೇವಲ ಮೋದಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಅಲೆ ಇದೆ. ನಮ್ಮದು 1 ಮತಕ್ಕೆ 10 ಗ್ಯಾರಂಟಿ. ಈ ದೇಶದ ಜನರ ಬದುಕಿನಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಇಂತಹ ಐತಿಹಾಸಿಕ ತೀರ್ಮಾನ ಮಾಡಿದೆ. ನಾನು ಸಿದ್ದರಾಮಯ್ಯ ಅವರು ಗ್ಯಾರಂಟಿಗೆ ಸಹಿ ಹಾಕಿದಂತೆ ನಮ್ಮ ನಾಯಕರಾದ ಮಲ್ಲಿಕಾರ್ಜುನ…
ಹುಬ್ಬಳ್ಳಿ: ಕೇಂದ್ರದಲ್ಲಿ ಕರ್ನಾಟಕದ ಪರ ಕೆಲಸ ಮಾಡುವಂತಹ ಸಂಸದರು ನಮ್ಮ ರಾಜ್ಯಕ್ಕೆ ಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ರಾಜ್ಯದಿಂದ ಆಯ್ಕೆಯಾಗಿದ್ದ ಬಹುತೇಕ ಬಿಜೆಪಿ ಸಂಸದರು ಕರ್ನಾಟಕವನ್ನ ಮರೆತಿದ್ದಾರೆ. ಅದರಲ್ಲೂ ಪ್ರಲ್ಹಾದ್ ಜೋಶಿಯವರು ಕೇಂದ್ರದಲ್ಲಿ ಸಚಿವರಾದ ಮೇಲೆ ಸಂಪೂರ್ಣವಾಗಿ ಕರ್ನಾಟಕವನ್ನ ಮರೆತಿದ್ದಾರೆ. ರಾಜ್ಯದ ಪರ ಕೇಂದ್ರ ಸರ್ಕಾರದಲ್ಲಿ ಧ್ವನಿ ಎತ್ತಿ ಕರ್ನಾಟಕಕ್ಕೆ ನ್ಯಾಯ ಕೊಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು. ಇವರಿಗೆ ರಾಜಕೀಯ ಅಧಿಕಾರಕ್ಕೆ ಮಾತ್ರ ಕರ್ನಾಟಕ ಬೇಕು. ಗೆದ್ದಮೇಲೆ ಕೇಂದ್ರದಲ್ಲಿ ಮನಬಂದಂತೆ ವರ್ತಿಸುವ ಅಹಂ ನಲ್ಲಿ ಪ್ರಲ್ಹಾದ್ ಜೋಶಿಯವರಿದ್ದಾರೆ. ಕರ್ನಾಟಕಕ್ಕೆ ಜೋಶಿಯವರ ಕೊಡುಗೆ ಏನು. ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ಒಂದು ಬಾರಿಯಾದರು ಕೇಂದ್ರ ಸರ್ಕಾರದಲ್ಲಿ ಧ್ವನಿ ಎತ್ತಿದ್ದಾರೆಯೇ ಎಂದು ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು. ಕೇಂದ್ರಕ್ಕೆ ಹೋದಮೇಲೆ ಅಹಂಕಾರದಲ್ಲಿ ಮೇರೆಯುವ ಬಿಜೆಪಿ ಸಂಸದರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನ ತಕ್ಕ ಪಾಠ ಕಲಿಸಲು ನಿಶ್ಚಯಿಸಿದ್ದಾರೆ…
ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಅವರು ಇಂದು ಬೆಳಗಾವಿಯಲ್ಲಿ ಆಯೋಜಿಸಿರುವ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಂಬೇಡ್ಕರ್ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಮಸಮಾಜ ನೀಡುತ್ತದೆ. ಇದಕ್ಕೆ ವಿರುದ್ದವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು. 8 ತಿಂಗಳಲ್ಲಿ 5 ಗ್ಯಾರಂಟಿಳನ್ನು ಜಾರಿ ಮಾಡಿದ ಕಾಂಗ್ರೆಸ್ ನ ಮೇಲೆ ಜನರಿಗೆ ವಿಶ್ವಾಸವಿದೆ ರಾಜ್ಯದ ಬಡ ಜನರ ತುತ್ತಿನ ಚೀಲ ತುಂಬಿಸುವ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಪೂರೈಸಲು…
ಬೆಂಗಳೂರು: ಬರಗಾಲದ ಪರಿಹಾರದ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ಇನ್ನೂ ಕುಂಭಕರ್ಣ ನಿದ್ರೆಯಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಬಂದು ಕ್ಷಣದಲ್ಲಿ ರೈತರಿಗೆ ನೀಡುವುದಾಗಿ ಹೇಳಿದ್ದರು. ಕ್ಷಣಗಳು ಹೋಗಿ ಗಂಟೆಗಳಾಗಿ, ಈಗ ದಿನಗಳೇ ಕಳೆದಿವೆ. ರೈತರು ಈ ಬಿಸಿಲಿನ ಬೇಗೆಯಿಂದ ಹಾಹಾಕಾರ ಪಡುತ್ತಿದ್ದಾರೆ. ರಾಜ್ಯ ಸರಕಾರವು ಬೇರೆ ರಾಜಕಾರಣ ಮಾಡುತ್ತಿದೆ. ರೈತರ ಕಷ್ಟಕ್ಕೆ ಸ್ಪಂದಿಸದ ಕಟುಕ- ಕರುಣೆ ಇಲ್ಲದ ರಾಜ್ಯ ಸರಕಾರ ಇದು ಎಂದು ಆರೋಪಿಸಿದರು. ಮೇವು ಇಲ್ಲದೆ ದನಕರುಗಳನ್ನು ಕಟುಕರಿಗೆ ಮಾರಾಟ ಮಾಡುವ ಸ್ಥಿತಿಗೆ ರೈತರು ಬರುತ್ತಿರುವುದು ಬೇಸರದ ಸಂಗತಿ. ಈ ಸರಕಾರ ಒಂಥರ ಬೂಟಾಟಿಕೆ ಮಾಡುತ್ತಿದೆ. ಜಾಹೀರಾತುಗಳನ್ನು ಕೊಡುತ್ತಿದೆ. ಆದರೆ, ರೈತರ ಸಂಕಷ್ಟಕ್ಕೆ ಸ್ಪಂದಿಸುವ ಗಂಭೀರತೆ ಎಲ್ಲೂ ಕಾಣಿಸುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಳೆದ ಮುಂಗಾರು, ಹಿಂಗಾರು ಮಳೆ ಕೈಕೊಟ್ಟಿತ್ತು. ಇಂಥ ಸಂದರ್ಭದಲ್ಲಿ ಉರಿಯುವ ಮನೆಯಲ್ಲಿ ಗಳ…
ನ್ಯೂಯಾರ್ಕ್: ಇಲ್ಲಿನ ಲಾಂಗ್ ಐಲ್ಯಾಂಡ್ನಲ್ಲಿ ಶುಕ್ರವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ ಎಂದು ನಸ್ಸಾವು ಕೌಂಟಿ ಪೊಲೀಸರು ತಿಳಿಸಿದ್ದಾರೆ. ಶಂಕಿತನ ಬಗ್ಗೆ ಅಧಿಕಾರಿಗಳು ಯಾವುದೇ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ. ವೆಸ್ಟ್ಬರಿಯಲ್ಲಿ ನಡೆದ ಸಭೆಯಲ್ಲಿ ಈ ಘಟನೆ ನಡೆದಿದ್ದು, ಅವರು 18 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಎಲ್ಲಾ ಬಲಿಪಶುಗಳಿಗೆ ಮಾರಣಾಂತಿಕವಲ್ಲದ ಗಾಯಗಳಾಗಿವೆ ಎಂದು ಫಾಕ್ಸ್ ನ್ಯೂಸ್ ಅಂಗಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. ಮಾಧ್ಯಮ ಸಂಸ್ಥೆಯ ಪ್ರಕಾರ, ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ ಇದು ಮನೆಯ ಪಾರ್ಟಿಯಂತೆ ಇರಲಿಲ್ಲ,… ಅದೊಂದು ಅಕ್ಷರಶಃ ಹುಟ್ಟುಹಬ್ಬದ ಪಾರ್ಟಿಯಾಗಿತ್ತು. ಬಂದೂಕು ಗುಂಡುಗಳ ಶಬ್ದ ಕೇಳಿದಾಗ ಪಾರ್ಟಿ ಬಹುತೇಕ ಮುಗಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದ್ದಕ್ಕಿದ್ದಂತೆ ನೀವು ಪಟಾಕಿ ಶಬ್ದವನ್ನು ಕೇಳಿದ್ದೀರಿ ಮತ್ತು ನಂತರ ಗುಂಡು ಹಾರಿಸುತ್ತೀರಿ ಮತ್ತು ಎಲ್ಲರೂ ಓಡಲು ಪ್ರಾರಂಭಿಸುತ್ತಾರೆ. ಎಲ್ಲರೂ ತಮ್ಮ ಸ್ನೇಹಿತರಿಗಾಗಿ ಕಿರುಚುತ್ತಿದ್ದರು.” ‘ಪಾರ್ಟಿಯ ಆಯೋಜಿಸಿದ್ದಂತ ವ್ಯಕ್ತಿ ಗಾಯಗೊಂಡಿದ್ದಾರೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/prajwal-revanna-arrives-in-bengaluru-from-dubai-likely-to-be-arrested-today/ https://kannadanewsnow.com/kannada/us-warns-uk-of-covid-19-leak-from-wuhan-lab/
ದಾವಣಗೆರೆ : ಹತ್ತತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು. ದಾವಣಗೆರೆ ಲೋಕಸಭಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ನಡೆದ ಪ್ರಜಾಧ್ವನಿ-2 ಜನಸಮಾವೇಶ ಉದ್ಘಾಟಿಸಿ ಮಾತನಾಡಿದರು. ಎರಡು ಬಾರಿ ಮುಖ್ಯಮಂತ್ರಿಯಾಗಿ ತಾವು ರಾಜ್ಯದಲ್ಲಿ ಜಾರಿಮಾಡಿದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು, ಭಾಗ್ಯಗಳ ಪಟ್ಟಿ ಮಾಡಿದ ಸಿ.ಎಂ ಸಿದ್ದರಾಮಯ್ಯ ಅವರು ನೀವು ಪ್ರಧಾನಿಯಾಗಿ ಮಾಡಿದ ಸಾಧನೆಗಳನ್ನು ತಾಕತ್ತಿದ್ದರೆ ಭಾರತೀಯರ ಮುಂದೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು. ಮೋದಿಯವರ ಸಾಧನೆಗಳ ಪಟ್ಟಿ ಹಾಕಬೇಕು ಎಂದರೆ ಅವರು ಹೇಳಿದ ಸುಳ್ಳುಗಳ ಪಟ್ಟಿ ಮಾಡಬಹುದು, ಭಾರತೀಯರಿಗೆ ಹಾಕಿದ ಮೂರು ನಾಮಗಳ ಪಟ್ಟಿ ಮಾಡಬಹುದು, ಕನ್ನಡಿಗರ ಕೈಗೆ ಕೊಟ್ಟ ಚೊಂಬಿನ ಪಟ್ಟಿ ಮಾಡಬಹುದು ಎಂದು ವ್ಯಂಗ್ಯವಾಡಿದರು. ಶೋಕಿ ಮಾಡೋಕೆ, ಟಿಎ-ಡಿಎ ತಗೊಳೋಕೆ ಸಿದ್ದೇಶ್ವರ್ ಅವರನ್ನು ಪಾರ್ಲಿಮೆಂಟಿಗೆ ಕಳಿಸಿದ್ರಾ: ಸಿ.ಎಂ ಪ್ರಶ್ನೆ ರಾಜ್ಯದ ಪರವಾಗಿ, ದಾವಣಗೆರೆ ಜಿಲ್ಲೆಯ ಪರವಾಗಿ,…
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗುತ್ತಿದ್ದಂತೆ ಕರ್ನಾಟಕದಿಂದ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದರು. ನಿನ್ನೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಬೆನ್ನಲ್ಲೇ, ಇಂದು ದುಬೈನಿಂದ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದೇ ಎಸ್ಐಟಿ ಅಧಿಕಾರಿಗಳಿಂದ ಬಂಧಿಸೋ ಸಾಧ್ಯತೆ ಇದೆ. ನಿನ್ನೆಯಷ್ಟೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಯಲವು ನಿರೀಕ್ಷಣಾ ಜಾಮೀನನ್ನು ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ನೀಡೋದಕ್ಕೆ ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮನೆಯಲ್ಲಿದ್ದಂತ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಲೈಂಗಿಕ ದೌರ್ಜನ್ಯ, ಅಪಹರಣ, ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಜಾಮೀನು ಸಿಗೋದು ಡೌಟ್ ಎನ್ನಲಾಗುತ್ತಿದೆ. ಹೀಗಾಗಿ ಕುಟುಂಬದವರು ಜಾಮೀನು ಸಿಗೋದು ಇರಲಿ, ಬಿಡಲಿ, ಮೊದಲು ಎಸ್ಐಟಿ ಅಧಿಕಾರಿಗಳ…