Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷರು ಮತ್ತು ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ. ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ಶಾಮನೂರು ಶಿವಶಂಕರಪ್ಪ ಅವರು ಈ ಹಿಂದೆ ತೋಟಗಾರಿಕಾ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆಯನ್ನು ಬಲಪಡಿಸಲು ಶ್ರಮಿಸಿದ್ದರು, ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನು ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ನಮ್ಮ ತಂದೆ ಭೀಮಣ್ಣ ಖಂಡ್ರೆ ಹಾಗೂ ತಮಗೆ…
ಶಿವಮೊಗ್ಗ: ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಮಂಗಗಳ ಸರಣಿ ಸಾವುಗಳು ಸಂಭವಿಸಿರೋದಾಗಿ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಹೀಗಾಗಿ ತಾಲ್ಲೂಕಿನಲ್ಲಿ ಮತ್ತೆ ಮಂಗನ ಕಾಯಿಲೆಯ ಆಂತಕ ಹೆಚ್ಚಾಗಿದೆ. ಮಂಗನ ಕಾಯಿಲೆ ಭೀತಿ ಮತ್ತೆ ಸಾಗರ ತಾಲ್ಲೂಕಿನಲ್ಲಿ ಎದುರಾಗಿರುವ ಪರಿಣಾಮ ಜನರನ್ನು ಆತಂಕಕ್ಕೆ ದೂಡುವಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕಳೆದ ಕೆಲ ತಿಂಗಳಿನಿಂದ ಮಂಗಗಳು ನಿರಂತರವಾಗಿ ಸಾವನ್ನಪ್ಪುತ್ತಿರುವುದಾಗಿ ತಿಳಿದು ಬಂದಿದೆ. ಸಾಗರ ತಾಲ್ಲೂಕಿನ ಹೆಗ್ಗೂಡು ಸಮೀಪದ ಮಾವಿನ ಸರದಲ್ಲಿ ಎರಡು, ಆವಿನಹಳ್ಳಿ ವ್ಯಾಪ್ತಿಯಲ್ಲಿ ಐದು, ಹೆಡ್ಜಿಗಳೆ ಮನೆ, ಆಡೂರು, ಸುಳುಗೋಡು ಗ್ರಾಮದಲ್ಲಿ ತಲಾ ಒಂದೊಂದು ಮಂಗಗಳು ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಮಂಗಗಳ ಸಾವಿನ ಮಾಹಿತಿ ತಿಳಿದಂತ ಆರೋಗ್ಯ ಇಲಾಖೆ, ಅರಣ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತೆಯರು ಸ್ಥಳಕ್ಕೆ ತೆರಳಿ ಅವುಗಳ ಮಾದರಿಯನ್ನು ಸಂಗ್ರಹಿಸಿ ಮಂಗನ ಕಾಯಿಲೆಯ ಪತ್ತೆಗಾಗಿ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಆ ಬಳಿಕ ಸಾವನ್ನಪ್ಪಿದ್ದಂತ ಮಂಗಗಳ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಮಂಗಗಳು ಸಾವನ್ನಪ್ಪಿರುವುದರಿಂದ ಮುಂಜಾಗ್ರತಾ…
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. 6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದರು. ಕಳೆದ 1 ತಿಂಗಳಿನಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ಇಂದು ಸಂಜೆ 6.45ಕ್ಕೆ ಚಿಕಿತ್ಸೆ ಫಲಿಸದೇ ನಿಧರಾಗಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. 6 ಬಾರಿ ಶಾಸಕರಾಗಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸುತ್ತಿದ್ದರು. ಕಳೆದ 1 ತಿಂಗಳಿನಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು, ಇಂದು ಸಂಜೆ 6.45ಕ್ಕೆ ಚಿಕಿತ್ಸೆ ಫಲಿಸದೇ ನಿಧರಾಗಿರುವುದಾಗಿ ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಶಾಮನೂರು ಶಿವಶಂಕರಪ್ಪ ಅವರು ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಜೂನ್.16, 1931ರಲ್ಲಿ ದಾವಣಗೆರೆಯಲ್ಲಿ ಜನಿಸಿದ್ದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ಇದೀಗ ಶಾಮನೂರು ಶಿವಶಂಕರಪ್ಪ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಭಾನುವಾರ ದುಬೈನಲ್ಲಿ ನಡೆದ ಮಳೆಯಿಂದಾಗಿ ಸೀಮಿತಗೊಂಡ U19 ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಸಮಗ್ರ ಜಯ ಸಾಧಿಸಿತು. 241 ರನ್‌ಗಳ ಗುರಿಯನ್ನು ರಕ್ಷಿಸಿಕೊಂಡ ಭಾರತ, ಪಾಕಿಸ್ತಾನವನ್ನು 150 ರನ್‌ಗಳಿಗೆ ಆಲೌಟ್ ಮಾಡಿ ಪಂದ್ಯವನ್ನು 90 ರನ್‌ಗಳಿಂದ ಗೆದ್ದುಕೊಂಡಿತು. ಭಾರತೀಯ ಬೌಲರ್‌ಗಳು ಪಾಕಿಸ್ತಾನ ಬ್ಯಾಟ್ಸ್‌ಮನ್‌ಗಳ ಮೇಲೆ ಮೇಲುಗೈ ಸಾಧಿಸಲು ಬಿಡಲಿಲ್ಲ ಮತ್ತು ನಿರಂತರವಾಗಿ ಆರ್ಥಿಕ ಬೌಲಿಂಗ್ ಮೂಲಕ ಒತ್ತಡ ಹೇರಿದರು. ಹುಜೈಫಾ ಅಹ್ಸಾನ್ 70 ರನ್‌ಗಳೊಂದಿಗೆ ಉತ್ತಮ ಪ್ರದರ್ಶನ ನೀಡಿದರು ಆದರೆ ಇನ್ನೊಂದು ತುದಿಯಿಂದ ಯಾವುದೇ ಬೆಂಬಲ ಸಿಗಲಿಲ್ಲ. ಕನಿಷ್ಕ್ ಚೌಹಾಣ್ ಮತ್ತು ದೀಪೇಶ್ ದೇವೇಂದ್ರನ್ ತಲಾ ಮೂರು ವಿಕೆಟ್ ಪಡೆದರು. ಇದಕ್ಕೂ ಮೊದಲು, ಪಾಕಿಸ್ತಾನ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ ನಂತರ ಭಾರತ 46.1 ಓವರ್‌ಗಳಲ್ಲಿ 240 ರನ್‌ಗಳಿಗೆ ಆಲೌಟ್ ಆಯಿತು. ಮೊಹಮ್ಮದ್ ಸಯ್ಯಮ್ ಮತ್ತು ಅಬ್ದುಲ್ ಸುಭಾನ್ ತಲಾ ಮೂರು ವಿಕೆಟ್‌ಗಳನ್ನು ಮತ್ತು ನಿಕಾಬ್ ಶಫೀಕ್ ಎರಡು ವಿಕೆಟ್‌ಗಳನ್ನು ಕಬಳಿಸಿದರು. ಭಾರತ ಪರ,…
ಹಾವೇರಿ: ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಓಟ್ ಚೋರಿ ಸುಳ್ಳನ್ನು ಸತ್ಯ ಮಾಡುವ ಅಭಿಯಾನ ಬಹಳಷ್ಟು ಕಾಂಗ್ರೆಸ್ ನಾಯಕರಿಗೆ ಅದರ ಬಗ್ಗೆ ನಂಬಿಕೆ ಇಲ್ಲ. ಅವರ ಪ್ರತಿಷ್ಠೆಗೆ ಅಲ್ಲಿಗೆ ಹೋಗುತ್ತಿದ್ದಾರೆ. ಸುಳ್ಳು ಸಾವಿರ ಬಾರಿ ಹೇಳಿ ಸತ್ಯ ಮಾಡಲು ಹೊರಟವರ ಮೇಲೆ ಕಾಂಗ್ರೆಸ್ ನವರಿಗೆ ನಂಬಿಕೆ ಇದೆ. ಅದರಿಂದ ಏನೂ ಆಗಲ್ಲ. ಬಿಹಾರ್ ನಲ್ಲಿ ಇದನ್ನೇ ಮುಂದಿಟ್ಟುಕೊಂಡು ಚುನಾವಣೆ ಮಾಡಿದರು. ಅಲ್ಲಿ ಕಾಂಗ್ರೆಸ್ ಅತ್ಯಂತ ಕಡಿಮೆ ಸ್ಥಾನ ಪಡೆಯಿತು. ಅದರಿಂದ ಇನ್ನೂ ಪಾಠ ಕಲಿತಿಲ್ಲ ಅಂದರೆ ಏನು ಮಾಡಲು ಆಗುವುದಿಲ್ಲ ಎಂದು ಹೇಳಿದರು. ಸತ್ಯ ಹೊರಬರುತ್ತದೆ ಆಳಂದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತಿದಾರ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಾರ್ಜ್ ಶೀಟ್ ಸಲ್ಲಿಸಿದ ತಕ್ಷಣ…
ಆಸ್ಟ್ರೇಲಿಯಾ: ಸಿಡ್ನಿ ಬೋಂಡಿ ಬೀಚ್ ಗುಂಡಿನ ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಇದೊಂದು ಭಯೋತ್ಪಾದಕರ ಕೃತ್ಯವೆಂದು NSW ಪೊಲೀಸ್ ಮುಖ್ಯಸ್ಥರು ಆರೋಪಿಸಿದ್ದಾರೆ. ‘ಇದು ಭಯೋತ್ಪಾದಕ ಘಟನೆ’ ಎಂದು NSW ಪೊಲೀಸ್ ಮುಖ್ಯಸ್ಥರು ಹೇಳುತ್ತಾರೆ. ಬೋಂಡಿ ಬೀಚ್ ಶೂಟೌಟ್‌ನ ಪತ್ರಿಕಾಗೋಷ್ಠಿಯಲ್ಲಿ, NSW ಪೊಲೀಸ್ ಮುಖ್ಯಸ್ಥ ಮಾಲ್ ಲ್ಯಾನ್ಯನ್ ಈ ದಾಳಿಯನ್ನು “ಭಯೋತ್ಪಾದಕ ಘಟನೆ” ಎಂದು ಕರೆದರು. “ಇದು ಭಯೋತ್ಪಾದಕ ಘಟನೆ” ಎಂದು ಲ್ಯಾನ್ಯನ್ ಹೇಳಿದರು, “ನಮ್ಮ ಭಯೋತ್ಪಾದನಾ ನಿಗ್ರಹ ಕಮಾಂಡ್ ರಾಜ್ಯ ಅಪರಾಧ ಕಮಾಂಡ್‌ನ ತನಿಖಾಧಿಕಾರಿಗಳೊಂದಿಗೆ ಈ ತನಿಖೆಯನ್ನು ಮುನ್ನಡೆಸುತ್ತದೆ. ಯಾವುದೇ ವ್ಯಕ್ತಿಗಳ್ನು ಬಿಡಲಾಗುವುದಿಲ್ಲ ಎಂದಿದ್ದಾರೆ. ಮೂರನೇ ಅಪರಾಧಿ ಇದ್ದಾರೆಯೇ ಎಂದು ಅಧಿಕಾರಿಗಳು ಪ್ರಸ್ತುತ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. “ನಮ್ಮಲ್ಲಿ ಇಬ್ಬರು ಖಚಿತ ಅಪರಾಧಿಗಳಿದ್ದಾರೆ ಎಂದು ನಮಗೆ ತಿಳಿದಿದೆ, ಆದರೆ ಸಮುದಾಯ ಸುರಕ್ಷಿತವಾಗಿದೆ ಎಂದು ನಾವು ಖಚಿತಪಡಿಸಿಕೊಳ್ಳಲು ಬಯಸುತ್ತೇವೆ” ಎಂದು ಅವರು ಹೇಳಿದರು. “ಇದು ಪ್ರತೀಕಾರದ ಸಮಯವಲ್ಲ. ಪೊಲೀಸರು ತಮ್ಮ ಕರ್ತವ್ಯವನ್ನು ಮಾಡಲು…
ನವದೆಹಲಿ: ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಘೋಷಿಸಿದ್ದು, ಈ ನಿರ್ಧಾರ ತಕ್ಷಣದಿಂದ ಜಾರಿಗೆ ಬಂದಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೊರಡಿಸಿದ ಅಧಿಕೃತ ಆದೇಶದಲ್ಲಿ, ಈ ನೇಮಕಾತಿಯನ್ನು ಪಕ್ಷದ ಸಂಸದೀಯ ಮಂಡಳಿ ಅನುಮೋದಿಸಿದೆ ಎಂದು ತಿಳಿಸಲಾಗಿದೆ. ನಿತಿನ್ ನವೀನ್ ಪ್ರಸ್ತುತ ಬಿಹಾರ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. “ಬಿಜೆಪಿ ಸಂಸದೀಯ ಮಂಡಳಿಯು ಬಿಹಾರ ಸರ್ಕಾರದ ಸಚಿವರಾದ ಶ್ರೀ ನಿತಿನ್ ನವೀನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ. https://twitter.com/ANI/status/2000168451705589772
ಅಥಣಿ: ಶಿವಾಜಿ ಮಹಾರಾಜರು ಕೇವಲ ಒಬ್ಬ ವೀರ ಯೋಧ ಮಾತ್ರವಲ್ಲ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ನಾಯಕರಾಗಿದ್ದರು ಎಂಬುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಅಥಣಿಯಲ್ಲಿ ಇಂದು ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಅಶ್ವಾರೂಢ ಮೂರ್ತಿ ಲೋಕಾರ್ಪಣೆಗೊಳಿಸಿದ ನಂತರ ಜರುಗಿದ ಭವ್ಯವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶಿವಾಜಿ ಮಹಾರಾಜರ ನೈಜ ಇತಿಹಾಸ ಮತ್ತು ತತ್ವ ಸಿದ್ದಾಂತಗಳ ಕುರಿತು ಮಾತನಾಡಿದರು. ಶಿವಾಜಿ ಮಹಾರಾಜರು ಕೇವಲ ಒಬ್ಬ ವೀರ ಯೋಧ ಮಾತ್ರವಲ್ಲ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ನಾಯಕರಾಗಿದ್ದರು. ಅವರ ಸ್ವರಾಜ್ಯ ಎಂಬ ಚಿಂತನೆಯಡಿ ಸಮಾನತೆ, ಸಾಮಾಜಿಕ ನ್ಯಾಯ, ಧರ್ಮ ಸಹಿಷ್ಣುತೆ ಮತ್ತು ಜನಕಲ್ಯಾಣವೇ ಅವರ ಆಡಳಿತದ ಮೂಲ ಸಿದ್ಧಾಂತಗಳಾಗಿದ್ದವು. ಎಲ್ಲಾ ವರ್ಗಗಳನ್ನೂ ಒಗ್ಗೂಡಿಸಿ, ನ್ಯಾಯಯುತ ಮತ್ತು ಶಕ್ತಿಶಾಲಿ ರಾಜ್ಯವನ್ನು ನಿರ್ಮಿಸಿದ ಅವರ ದೃಷ್ಟಿ ಇಂದಿಗೂ ಪ್ರೇರಣೆಯಾಗಿಯೇ ಉಳಿದಿದೆ ಎಂದರು. ಈ ವೇಳೆ ಪರಮ ಪೂಜ್ಯ ಮರಾಠಾ ಸಮಾಜದ ಜಗದ್ಗುರು ಮಂಜುನಾಥ್ ಭಾರತಿ ಸ್ವಾಮಿಜಿ, ಶಿವಾಜಿ ಮಹಾರಾಜರ ವಂಶಸ್ಥರಾದ…
ಹಾವೇರಿ: ಹುಕ್ಕೇರಿ ಮಠದ ಶ್ರೀಗಳು ಸಮಾಜ ಶುದ್ದೀಕರಣ ಕ್ರಾಂತಿ ಮಾಡುತ್ತಿದ್ದಾರೆ. ಡಿ. 25 ರಿಂದ 30 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ. ಸೋಮಣ್ಣ, ಮೈಸೂರಿನ ಒಡೆಯರಾದ ಸಂಸದ ಯದುವೀರ್ ಒಡರಯರ್ ಭಾಗವಹಿಸುತ್ತಿದ್ದಾರೆ. ಇದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಕ್ಕೇರಿ ಮಠದ ಆಶ್ರಯದಲ್ಲಿ ನಡೆಯುತ್ತಿರುವ ಎಲ್ಲ ವಿದ್ಯಾಕೇಂದ್ರ, ಶಾಲೆಗಳ ಸುವರ್ಣ ಮಹೋತ್ಸವ. ನಾಡಿನ ಈ ಭಾಗದಲ್ಲಿ ಐವತ್ತು ವರ್ಷ ಸುದೀರ್ಘವಾಗಿ ಜಾತಿ ಭೇದ ಇಲ್ಲದೇ ಎಲ್ಲ ಸಮುದಾಯದ ಮಕ್ಕಳಿಗೆ ಶಿಕ್ಷಣ ಕೊಟ್ಟು ಸುಸಂಸ್ಕೃತ ವಾದ ವಿದ್ಯಾವಂತ ಸಮುದಾಯವನ್ನು ನಿರ್ಮಿಸಲು ಮಾಡಿರುವ ಸುದೀರ್ಘ ತಪಸ್ಸಿನ ಯಶಸ್ಸಿನ ಆಚರಣೆಯೇ ಸುವರ್ಣ ಮಹೋತ್ಸವ. ವಿದ್ಯಾರ್ಥಿ ನಿಲಯ ಉದ್ಘಾಟನೆ, ಭಕ್ತಿಯ ಗುರುವಂದನೆ, ಪರಮ ಪೂಜ್ಯರ ತುಲಾಭಾರ, ಇವೆಲ್ಲವನ್ನು ಭಕ್ತರು ಭಕ್ತಿ ಭಾವದ ಭಾವನೆ ಸಮರ್ಪಣೆಗೆ ಈ…













