Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ : ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಅಕ್ಟೋಬರ್ 7 ಮತ್ತು 9ರಂದು ಎರಡು ಕಂತಿನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಇಂದು ಮೂಡಲಗಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಹಾಕುವುದು ವಿಳಂಬವಾಗಿತ್ತು ಎಂದರು. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಮತ್ತೆ 1,755 ಅತಿಥಿ ಶಿಕ್ಷಕರ ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, 2024-25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ಆದೇಶ ಸಂಖ್ಯೆ ಇಪಿ 166 ಎಸ್ಇ.ಎಸ್.2023 ದಿನಾಂಕ 01.06.2023 ಆದೇಶದಲ್ಲಿ ಅನುಮತಿ ನೀಡಲಾಗಿದೆ ಎಂದಿದೆ. ಅದರಂತೆ, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5 ನೇ ತರಗತಿ) ಹಾಗೂ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ವೃಂದದ…
ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಆನ್ಲೈನ್ ಸೇವೆಗಳು ಅಕ್ಟೋಬರ್ 5 ನಾಳೆ, ಅಕ್ಟೋಬರ್.6ರ ನಾಡಿದ್ದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಐಟಿ ಅಪ್ಲಿಕೇಶನ್ಗಳ ಉನ್ನತೀಕರಣಕ್ಕೆ ಸಮಯ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಅಪ್ಲಿಕೇಶನ್ ಸೇವೆಗಳು ಅಕ್ಟೋಬರ್ 5, 6 ರಂದು ಲಭ್ಯ ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಐಪಿಡಿಎಸ್ ಐಟಿ ಹಂತ-2ರ ಯೋಜನೆಯ ಭಾಗವಾಗಿ ಆರ್ಎಪಿಡಿಆರ್ಪಿ ಅಪ್ಲಿಕೇಷನ್ ಸೇವೆ ಲಭ್ಯ ಇರುವುದಿಲ್ಲ. ಸಿಸ್ಟಂ ಡೌನ್ಟೈಮ್ ಅಕ್ಟೋಬರ್ 4ರ ರಾತ್ರಿ 9ರಿಂದ ಆರಂಭವಾಗಿ 7ರ ಬೆಳಗ್ಗೆ 6ಕ್ಕೆ ಕೊನೆಗೊಳ್ಳುತ್ತದೆ. ಐಟಿ ಮೂಲಸೌಕರ್ಯ ವರ್ಧನೆ ಮತ್ತು ಕಾರ್ಯಾಚರಣೆ ಪ್ರದೇಶಗಳಲ್ಲಿ ಸೇವೆಯ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಸ್ಕಾಂ ಈ ಕಾರ್ಯ ಕೈಗೊಂಡಿದೆ. 2024ರ ಮಾರ್ಚ್ 20 ರಂದು ಬಿಐಪಿ ಮತ್ತು ಡಬ್ಲ್ಯುಎಸ್ಎಸ್ಗೆ ನವೀಕರಣಗಳೊಂದಿಗೆ ಒರಾಕಲ್ ಸಿಸಿಬಿಯನ್ನು ಆವೃತ್ತಿ 2.3 ರಿಂದ 2.8 ಕ್ಕೆ ಯಶಸ್ವಿಯಾಗಿ ಅಪ್ಗ್ರೇಡ್ ಮಾಡುವುದರೊಂದಿಗೆ ಹಂತ-1…
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಆನ್ಲೈನ್ ಸೇವೆಗಳು ಅಕ್ಟೋಬರ್4ರ ಇಂದಿನಿಂದ 7ರವರೆಗೆ ಲಭ್ಯ ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಅ.04ರ ಇಂದಿನಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯವನ್ನು ಕೈಗೊಂಡಿದ್ದು, ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ಲೈನ್ ಸೇವೆಗಳಾದ ವಿದ್ಯುತ್ ಬಿಲ್ಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಹಾಗೂ ಮೊಬೈಲ್ ಆಪ್ ಇತ್ಯಾದಿ ಸೇವೆಯು ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು RAPDRP ನಗರ ಪ್ರದೇಶಗಳ ಗ್ರಾಹಕರಿಗೆ ಲಭ್ಯವಿರುವುದಿಲ್ಲ. ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದ್ದು, ಈ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಕರ್ನಾಟಕದ ಕೇಂದ್ರ ಸರ್ಕಾರಿ ನೌಕರರು ಮುಂಬಡ್ತಿ ಸೇರಿದಂತೆ ವಿವಿಧ ಬಡ್ತಿಗೆ ಇಲಾಖಾ ಪರೀಕ್ಷೆ ಬರೆಯಬೇಕು. ಈ ಪರೀಕ್ಷೆಯನ್ನು ಈ ಮೊದಲು ಹಿಂದಿ, ಇಂಗ್ಲೀಷ್ ನಲ್ಲಿ ಬರೆಯಬೇಕಿತ್ತು. ಈ ಬಳಿಕ ಪಾಸ್ ಆದ್ರೇ ಮುಂಬಡ್ತಿ ಸಿಗುತ್ತಿತ್ತು. ಈಗ ಕರ್ನಾಟಕದ ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ ಇನ್ಮುಂದೆ ಕನ್ನಡದಲ್ಲೂ ಮುಂಬಡ್ತಿಗೆ ಇಲಾಖಾ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಕೇಂದ್ರ ರೈಲ್ವೆ ಹಾಗು ಜಲ ಶಕ್ತಿ ಖಾತೆ ರಾಜ್ಯ ಸಚಿವ ಸೋಮಣ್ಣ ರವರ ಸೂಚನೆಯ ಮೇರೆಗೆ, ನೈಋತ್ಯ ರೈಲ್ವೆ ಇಲಾಖೆಯು LDCE ಹಾಗೂ GDCE (Limited Departmental Competitive Exam & General Departmental Competitive Exam) / ಮುಂಬಡ್ತಿ ಗೆ ಸಂಬಂಧಿಸಿದ ಇಲಾಖೆಯ ಪರೀಕ್ಷೆಗಳನ್ನು ಕನ್ನಡದಲ್ಲಿ ಸಹ ನಡೆಸಲು ಅಧಿಸೂಚನೆ ಹೊರಡಿಸಿದೆ ಎಂದಿದ್ದಾರೆ. ಈ ಮೊದಲು ಇಂಗ್ಲಿಷ್ & ಹಿಂದಿ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇತ್ತು. ಇದೀಗ ಇವುಗಳ ಜೊತೆಗೆ, ಕನ್ನಡದಲ್ಲಿ ಸಹ ಪರೀಕ್ಷೆ ನಡೆಸಲಾಗುವುದು. ಇದರಿಂದ ಕನ್ನಡಿಗ ಸಿಬ್ಬಂದಿಗಳಿಗೆ…
ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ( gruhalakshmi scheme ) ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಹಾಕುವುದು ವಿಳಂಬವಾಗಿತ್ತು ಎಂದರು. ಈ ಲಕ್ಷ್ಮೀ ಹೆಬ್ಬಾಳಕರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ ಮಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ…
ಬೆಂಗಳೂರು: ದಲಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಾಕಾರಣ ತೇಜೋವದೆ ಮಾಡಿ ದುರ್ಬಲಗೊಳಿಸಲು ನಡೆಯುತ್ತಿರುವ ಷಡ್ಯಂತರಗಳನ್ನು ನಾಡಿನ ವಕೀಲ ಸಮುದಾಯ ಖಂಡಿಸಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದಂತ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಈ ಸಂಬಂಧ ಮಹತ್ವದ ನಿರ್ಣಯವನ್ನು ವಕೀಲರು ಕೈಗೊಂಡಿದ್ದಾರೆ. ನಿರ್ಣಯಗಳು: 1. ದಲಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿನಾಕಾರಣ ತೇಜೋವದೆ ಮಾಡಿ ದುರ್ಬಲಗೊಳಿಸಲು ನಡೆಯುತ್ತಿರುವ ಷಡ್ಯಂತರಗಳನ್ನು ನಾಡಿನ ವಕೀಲ ಸಮುದಾಯ ಖಂಡಿಸುತ್ತದೆ. ಕರ್ನಾಟಕ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ನಡೆಯುತ್ತಿರುವ ಪಿತೂರಿಗಳಿಗೆ ಪೂರಕವಾಗಿ ಮಾನ್ಯ ರಾಜ್ಯಪಾಲ ಥಾವರ್ ಚೆಂದ್ ಗೆಹಲೋಟ್ ಅವರು ಕೂಡ ವರ್ತಿಸುತ್ತಿದ್ದಾರೆ. ಜನತಂತ್ರದ ಮೂಲಕ ಸಂಪೂರ್ಣ ಬಹುಮತದಿಂದ ಚುನಾಯಿತ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆಯುತ್ತಿರುವ ಎಲ್ಲಾ ರೀತಿಯ ಪಿತೂರಿಗಳನ್ನು ಸಮಾವೇಶ ಖಂಡಿಸುತ್ತದೆ. ಭಾರತದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ರಾಜ್ಯಪಾಲರನ್ನು ತಕ್ಷಣ ವಾಪಸು ಕರೆಸಿಕೊಳ್ಳಬೇಕೆಂದು ಮಾನ್ಯ ರಾಷ್ಟ್ರಪತಿಗಳನ್ನು ಒತ್ತಾಯಿಸುತ್ತೇವೆ. 2. ಮುಡಾ ಪ್ರಕರಣದಲ್ಲಿ ಅರ್ಜಿದಾರರು…
ಶಿವಮೊಗ್ಗ: ಇಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಮಹತ್ವದ ಜನಸ್ಪಂದನ ಸಭೆ ನಡೆಸಿದರು. ಇಂದಿನ ಜನಸ್ಪಂದನ ಸಭೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದ್ದು, 15ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲವುಗಳನ್ನು ಕಾಲಮಿತಿಯಲ್ಲಿ ಸಮಸ್ಯೆ ಪರಿಹರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ “ರಂಗನಾಥ ಕಲ್ಯಾಣ ಮಂಟಪ”ದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಜನಸ್ಪಂದನ ಸಭೆ” ಯಲ್ಲಿ ಪಾಲ್ಗೊಂಡು, ಜನರಿಂದ ನೇರವಾಗಿ ಅಹವಾಲು ಸ್ವೀಕರಿಸಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಯಿತು. ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಲವಾರು ದೂರುಗಳನ್ನು ಪರಿಶೀಲಿಸಿ, ಸ್ಥಳದಲ್ಲೇ ಅನೇಕರಿಗೆ ಪರಿಹಾರ ಒದಗಿಸಲಾಯಿತು. ಬಳಿಕ 94.C ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಯಿತು. ಹಾಗೂ ಸಾಮಾಜಿಕ ಭದ್ರತಾ ಯೋಜನೆಯಡಿ ಹಲವು ಅರ್ಜಿದಾರರಿಗೆ ಸಂದ್ಯಾಸುರಕ್ಷಾ ಪಿಂಚಣಿ ಪತ್ರ, ಅಂಗವಿಕಲ ಪೋಷಣಾ ವೇತನ ಪತ್ರವನ್ನು ವಿತರಿಸಲಾಯಿತು. ಸುಮಾರು 150 ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಕಾಲ…
ನವದೆಹಲಿ: ಐದು ಭಾರತೀಯ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ‘ಅವುಗಳ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು’ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ. ಇಂದು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿ ಎಂಬ 5 ಭಾಷೆಗಳನ್ನು ಶಾಸ್ತ್ರೀಯ ಭಾಷೆಗಳಾಗಿ ಅನುಮೋದಿಸಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. “ಇದು ಐತಿಹಾಸಿಕ ನಿರ್ಧಾರವಾಗಿದೆ ಮತ್ತು ಈ ನಿರ್ಧಾರವು ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್ಡಿಎ ಸರ್ಕಾರದ ನಮ್ಮ ಸಂಸ್ಕೃತಿಯಲ್ಲಿ ಸವಾರಿ ಮಾಡುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡುವ ಮತ್ತು ಎಲ್ಲಾ ಭಾರತೀಯ ಭಾಷೆಗಳು ಮತ್ತು ನಮ್ಮಲ್ಲಿರುವ ಶ್ರೀಮಂತ ಪರಂಪರೆಯ ಬಗ್ಗೆ ಹೆಮ್ಮೆ ಪಡುತ್ತದೆ” ಎಂದು ಅವರು ಹೇಳಿದರು. “ಈ ಹೊತ್ತಿಗೆ, ನಾವು ತಮಿಳು, ಸಂಸ್ಕೃತ, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾವನ್ನು ಅಧಿಸೂಚಿತ ಶಾಸ್ತ್ರೀಯ ಭಾಷೆಗಳಾಗಿ ಹೊಂದಿದ್ದೇವೆ… ಶಾಸ್ತ್ರೀಯ ಭಾಷೆಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಮತ್ತು ಈ ಭಾಷೆಗಳ ಶ್ರೀಮಂತ ಪರಂಪರೆಯನ್ನು…
ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2024-25 ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ. ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ [ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ] ಹಾಗು ಸ್ನಾತಕೋತ್ತರ ಪಿ.ಜಿ. ಕೋಸ್ರ್ಗಳಾದ [ಎಂ.ಎ, ಎಂ.ಎ-ಪತ್ರಿಕೋದ್ಯಮ, ಎಂ.ಕಾಂ, ಎಂ.ಬಿ.ಎ, ಎಂ.ಲಿಬ್ಐ.ಎಸ್ಸಿ, ಎಂ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲೂ] [ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್] ಕೋಸ್ರ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಪ್ರವೇಶಾತಿಗೆ ಅಗತ್ಯ ದಾಖಲೆಗಳು ಕಡ್ಡಾಯವಾಗಿದೆ. ಎಸ್ಎಸ್ಲ್ಸಿ ಅಂಕಪಟ್ಟಿ ಜೆರಾಕ್ಸ್ ಪಿಯುಸಿ ಅಥವಾ ತತ್ಸಮಾನ ಅಂಕಪಟ್ಟಿ…