Author: kannadanewsnow09

ಶಿವಮೊಗ್ಗ: ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬರಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ ಎರಡು ಸಾವಿರದಂತೆ 34 ಲಕ್ಷ ರೈತರಿಗೆ ಪರಿಹಾರ ನೀಡಲಾಯಿತು. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯಕ್ಕೆ 18172 ಕೋಟಿ ರೂ.ಗಳ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ರಾಜ್ಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ಕೇವಲ 3454 ಕೋಟಿ ರೂ.ಗಳನ್ನು ನೀಡಿ ಮತ್ತೆ ಮತ್ತೆ ದ್ರೋಹ ಮಾಡುತ್ತಲೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.‌ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, AICC ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್,AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್…

Read More

ನವದೆಹಲಿ: ಲೈಂಗಿಕ ಆರೋಪ ಕೇಳಿ ಬಂದ ನಂತ್ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಬ್ರಿಜ್ ಭೂಷಣ್ ಸಿಂಗ್ ಗೆ ಟಿಕೆಟ್ ನಿರಾಕರಿಸಲಾಗಿದೆ. ಆದ್ರೇ ಅವರ ಪುತ್ರನಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋದಕ್ಕೆ ಕೈಸರ್ಗಂಜ್ನಿಂದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಕೈಬಿಟ್ಟ ಬಿಜೆಪಿ, ಅವರ ಮಗನಿಗೆ ಟಿಕೆಟ್ ನೀಡಿದೆ. ಬಿಜೆಪಿ ಪಕ್ಷದಿಂದ 2 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಈ ಬಾರಿ ಕೈಸರ್ಗಂಜ್ ನಿಂದ ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಬ್ರಿಜ್ ಭೂಷಣ್ ಗೆ  ಟಿಕೆಟ್ ಕೈ ತಪ್ಪಿದೆ. ಬದಲಾಗಿ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹೌದು. ಸತತ ಮೂರು ಬಾರಿ ಪ್ರತಿನಿಧಿಸಿರುವ ಉತ್ತರ ಪ್ರದೇಶದ ಕೈಸರ್ಗಂಜ್ ನಿಂದ ಮಾಜಿ ರಾಷ್ಟ್ರೀಯ ಕುಸ್ತಿ ಬಾಸ್ಗೆ ಈ ಬಾರಿ ಟಿಕೆಟ್ ಸಿಕ್ಕಿಲ್ಲ.  ಪಕ್ಷದ ನಾಯಕತ್ವವು ಈ ಬಗ್ಗೆ ಬಿಜೆಪಿ ನಾಯಕರೊಂದಿಗೆ ಮಾತನಾಡಿದೆ ಮತ್ತು ಅವರ ಮಗ ಕರಣ್ ಭೂಷಣ್ ಸಿಂಗ್ ಅವರನ್ನು ಕೈಸರ್ಗಂಜ್ನಿಂದ ಕಣಕ್ಕಿಸಲು ಬಿಜೆಪಿಯಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.…

Read More

ಬೆಂಗಳೂರು: ನಾನು ತನಿಖೆಗೆ ಸಹಕರಿಸುತ್ತೇನೆ. ಎಲ್ಲಿಯೂ ಹೋಗಲ್ಲ ಎಂಬುದಾಗಿ ತಮ್ಮ ಪುತ್ರ ಪ್ರಜ್ವಲ್ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪ್ರತಿಕ್ರಿಯಿಸಿದ್ದರು. ಈಗ ಅವರು ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪುತ್ರನ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದಂತ ಅವರು ತಾವು ಎಸ್ಐಟಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿಯೂ ಹೇಳಿದ್ದರು. ಇದಷ್ಟೇ ಅಲ್ಲದೇ ನಾನು ಎಲ್ಲಿಗೂ ಓಡಿ ಹೋಗೋದಿಲ್ಲ. ತನಿಖೆ ನಡೆಯಲಿ ತನಿಖೆಗೆ ಸಂಪೂರ್ಣ ಬೆಂಬಲ ನೀಡೋದಾಗಿ ಮಾಧ್ಯಮಗಳ ಮೂಲಕ ಮಾತನಾಡಿ ತಿಳಿಸಿದ್ದರು. ಇಂದು ಅವರು ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ಪ್ರಕರಣ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದಾರೆ. https://kannadanewsnow.com/kannada/prajwal-revanna-flies-to-dubai-from-germany-strategy-to-derail-sit-probe/…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್ ಬೆಳಕಿಗೆ ಬರುತ್ತಿದ್ದಂತೆ, ಕರ್ನಾಟಕದಿಂದ ಜರ್ಮನಿಗೆ ಹಾರಿದ್ದರು. ಅಲ್ಲಿಂದ ನಾಳೆ ಬೆಂಗಳೂರಿಗೆ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗೋದಕ್ಕೆ ಬರಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಎಸ್ಐಟಿ ತನಿಖೆ ದಾರಿ ತಪ್ಪಿಸಲು, ದಿನ ದೂಡಲು ಜರ್ಮನಿಯಿಂದ ಈಗ ದುಬೈಗೆ ಹಾರಿದ್ದಾರೆ ಎನ್ನಲಾಗುತ್ತಿದೆ. ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಳಿಕ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದರು. ಅವರ ಅಶ್ಲೀಲ ವೀಡಿಯೋ ಕೇಸ್ ಬೆಳಕಿಗೆ ಬರುತ್ತಿದ್ದಂತೇ, ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿಸಿತ್ತು. ನಿನ್ನೆಯಷ್ಟೇ ಎಸ್ಐಟಿ ತನಿಖಾಧಿಕಾರಿಗಳಿಗೆ ವಕೀಲರ ಮೂಲಕ 7 ದಿನ ಕಾಲಾವಕಾಶ ನೀಡುವಂತೆ ಪ್ರಜ್ವಲ್ ರೇವಣ್ಣ ಕೋರಿದ್ದರು. ಈ ಬೆನ್ನಲ್ಲೇ ಜರ್ಮನಿಯಿಂದ ಪ್ರಜ್ವಲ್ ರೇವಣ್ಣ ಬುಧವಾರ ರಾತ್ರಿಯೇ ದುಬೈಗೆ ಹಾರಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ದುಬೈನಿಂದ ಬೆಂಗಳೂರಿಗೆ ಶೀಘ್ರವೇ ಪ್ರಜ್ವಲ್ ರೇವಣ್ಣ ಬರೋದು ಡೌಟ್, ಎಸ್ಐಟಿ ತನಿಖೆಯನ್ನು ವಿಳಂಬ ಮಾಡೋ ತಂತ್ರಗಾರಿಕೆ ಅನುಸರಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಮತ್ತೊಂದೆ ಸಿಎಂ ಸಿದ್ಧರಾಮಯ್ಯ ಅವರು ಪ್ರಧಾನಿ…

Read More

ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 18 ಸ್ಥಾನಗಳಿಗೆ 6ನೇ ತರಗತಿಗೆ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೇ- 09 ರಿಂದ ಮೇ- 21 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಜಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ತಾಲೂಕಿನ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಅಥವಾ ಮೊ.ಸಂ.: 9482762350 ನ್ನು ಸಂಪರ್ಕಿಸುವುದು. https://kannadanewsnow.com/kannada/elections-to-6-seats-of-legislative-council-to-be-held-on-june-3-results-to-be-declared-on-june-9/ https://kannadanewsnow.com/kannada/breaking-sc-orders-implementation-of-one-third-womens-quota-in-bar-associations/

Read More

ಹಾವೇರಿ: ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು ರಾಜ್ಯ ಸರ್ಕಾರದ ಖಜಾನೆಯಿಂದ ಎಷ್ಟು ರೂಪಾಯಿ ಬರ ಪರಿಹಾರ ಕೊಟ್ಟಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಅವರು ಇಂದು ಹಾವೇರಿ ತಾಲೂಕಿನ ಯಲಗಚ್ಚ, ಕೋಣನತಂಬಿಗಿ, ಹಂದಿಗನೂರು, ಹೊಸ ಕಿತ್ತೂರ, ಹಲಗಿ, ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಇಷ್ಟು ದೊಡ್ಡ ಪ್ರಮಾಣದ ಬರ ಬಿದ್ದಿದ್ದು ಈ ಸರ್ಕಾರ ರೈತರಿಗೆ ತನ್ನ ಖಜಾನೆಯಿಂದ ನಯಾಪೈಸೆ ನೀಡದೆ ಕೇಂದ್ರ ಸರ್ಕಾರದ ಕಡೆಗೆ ಬೆರಳು ಮಾಡಿ ತೋರಿಸುತ್ತಾರೆ. ಇದೊಂದು ಕೂಳು ನೀರಿಲ್ಲದ ದರಿದ್ರ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಕಳೆದ ಹತ್ತು ತಿಂಗಳಿಂದ ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ದಿ ಕೆಲಸ ನಡೆದಿಲ್ಲ. ಅಭಿವೃದ್ದಿ ಮಾಡುವ ಉದ್ದೇಶ ಇವರಿಗಿಲ್ಲ. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಗೆ ರಾಜ್ಯ ಸರ್ಕಾರದಿಂದ ಕೊಡುತ್ತಿದ್ದ 4 ಸಾವಿರ ರೂ ಸ್ಥಗಿತಗೊಳಿಸಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾನಿಧಿ ಮಾಡಿದೆ. ಅದನ್ನು‌…

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಬೆನ್ನಲ್ಲೇ ಕರ್ನಾಟಕ 6 ವಿಧಾನಪರಿಷತ್ತಿನ ಸ್ಥಾನಗಳ ಭರ್ತಿಗೆ ಚುನಾವಣೆ ಘೋಷಣೆಯಾಗಿದೆ. ಜೂನ್.3ರಂದು ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆದ್ರೆ, ಜೂನ್.6ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಮೇ.16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ರೇ, ಮೇ.20 ನಾಮಪತ್ರವನ್ನು ಹಿಂಪಡೆಯಲು ಕೊನೆಯ ದಿನವಾಗಿದೆ ಎಂದಿದೆ. ದಿನಾಂಕ 21-06-2024ರಂದು ಕರ್ನಾಟಕ ನಾರ್ಥ್ ಈಸ್ಟ್ ಪದವೀಧರರ ಕ್ಷೇತ್ರದ ಡಾ.ಚಂದ್ರಶೇಖರ ಬಿ ಪಾಟೀಲ್, ಸೌಥ್ ವೆಸ್ಟ್ ಪದವೀಧರರ ಕ್ಷೇತ್ರ ಆಯನೂರು ಮಂಜುನಾಥ್ ಹಾಗೂ ಬೆಂಗಳೂರು ಪದವೀಧರರ ಕ್ಷೇತ್ರದ ಎ ದೇವೇಗೌಡ ಅಭ್ಯರ್ಥಿಗಳ ಸ್ಥಾನಗಳು ಖಾಲಿಯಾಗಲಿವೆ. ಅಲ್ಲದೇ ಕರ್ನಾಟಕ ಸೌಥ್ ಈಸ್ಟ್ ಶಿಕ್ಷಕರ ಕ್ಷೇತ್ರದ ಡಾ.ವೈಎ ನಾರಾಯಣಸ್ವಾಮಿ, ಕರ್ನಾಟಕ ಸೌತ್ ವೆಸ್ಟ್ ಶಿಕ್ಷಕರ ಕ್ಷೇತ್ರದ ಎಸ್ ಎಲ್ ಬೋಜೇಗೌಡ ಹಾಗೂ ಸೌಥ್ ಶಿಕ್ಷಕರ ಕ್ಷೇತ್ರ ಮರಿತಿಬ್ಬೇಗೌಡ ಅವರು ನಿವೃತ್ತರಾಗಲಿದ್ದಾರೆ. ಈ 6 ವಿಧಾನಪರಿಷತ್ತಿನ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಮೇ.9ರಂದು…

Read More

ಶಿವಮೊಗ್ಗ: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಪ್ರಕರಣ ಕೇವಲ ಲೈಂಗಿಕ ಹಗರಣವಲ್ಲ, ಸಾಮೂಹಿಕ ಅತ್ಯಾಚಾರ ಪ್ರಕರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸಾಮೂಹಿಕ ಅತ್ಯಾಚಾರಿಯೊಬ್ಬರಿಗೆ ಮತ ಕೇಳುತ್ತಿದ್ದಾರೆ ಎಂದು ಟೀಕಿಸಿದರು. “ಪ್ರಧಾನಿ ನರೇಂದ್ರ ಮೋದಿ ಅವರು ಸಾಮೂಹಿಕ ಅತ್ಯಾಚಾರಿಗಳಿಗೆ ಮತ ಕೇಳುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಅವರ ಅಶ್ಲೀಲ ವೀಡಿಯೊಗಳನ್ನು ಮಾಡಿದ್ದಾರೆ” ಎಂದು ರಾಹುಲ್ ಗಾಂಧಿ ಕರ್ನಾಟಕದ ಶಿವಮೊಗ್ಗದಲ್ಲಿ ಚುನಾವಣಾ ರ್ಯಾಲಿಯಲ್ಲಿ ಹೇಳಿದರು. https://twitter.com/INCIndia/status/1785953198806589491 ನರೇಂದ್ರ ಮೋದಿ, ಕಿಕ್ಕಿರಿದ ವೇದಿಕೆಯಿಂದ, ಆ ಅತ್ಯಾಚಾರಿಯನ್ನು ಬೆಂಬಲಿಸುತ್ತಾರೆ ಮತ್ತು ‘ನೀವು ಈ ಅತ್ಯಾಚಾರಿಗೆ ಮತ ಹಾಕಿದರೆ, ಅದು ನನಗೆ ಸಹಾಯ ಮಾಡುತ್ತದೆ’ ಎಂದು ಹೇಳುತ್ತಾರೆ ಎಂದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ರೇವಣ್ಣ ಭಾರತದಿಂದ ಪಲಾಯನ ಮಾಡಲು ಪ್ರಧಾನಿ ಮೋದಿ ಸಹಾಯ ಮಾಡಿದ್ದಾರೆ…

Read More

ಬೆಂಗಳೂರು : “ನಾನು ಮಾಜಿ ಪ್ರಧಾನಿಗಳ ಕುಟುಂಬವನ್ನು 420 ಎಂದು ಕರೆಯುವುದಿಲ್ಲ. ಏಕೆಂದರೆ ಅವರ ಅಭಿಮಾನಿಗಳಿಗೆ ಬೇಸರವಾಗುತ್ತದೆ. ಪೆನ್ ಡ್ರೈವ್ ಈ ಕುಟುಂಬದ ಆಸ್ತಿ, ತೆನೆಹೊತ್ತ ಮಹಿಳೆ ಈಗ ಪೆನ್ ಡ್ರೈವ್ ಹೊರುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಜನ ಹಾಡಿ, ಹೊಗಳುತ್ತಿದ್ದಾರೆ” ಎಂದು ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದರು. ಸದಾಶಿವನಗರದ ನಿವಾಸದಲ್ಲಿ ಗುರುವಾರ ಮಾಧ್ಯಮಗೋಷ್ಟಿ ನಡೆಸಿದ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಅವರ ಕುಟುಂಬವನ್ನ ಇಡೀ ಪ್ರಪಂಚ ಕೊಂಡಾಡುತ್ತಿದೆ, ಹೊಗಳುತ್ತಿದೆ. ಜನರು ಹೇಳಿದ ಮಾತನ್ನು ನಾನು ಹೇಳುತ್ತಿದ್ದೇನೆ. ಅವರ ಮನಸ್ಸಿಗೆ ಸಮಾಧಾನವಾಗುತ್ತದೆ ಎಂದರೆ ನಾಲ್ಕು ಮಾತು ನಮ್ಮನ್ನು ಬೈದುಕೊಳ್ಳಲಿ. ಆದರೆ ನನಗೆ ಈ ರಾಜ್ಯದ ಹೆಣ್ಣು ಮಕ್ಕಳ ಮಾನವನ್ನು ಕಾಪಾಡುವ ಕೆಲಸ ಮೊದಲು ಆಗಬೇಕಿದೆ ಎಂದರು. ಮಾಜಿ ಪ್ರಧಾನಿಗಳು ಸಣ್ಣ, ಸಣ್ಣ ವಿಚಾರಕ್ಕೂ ಮಾಧ್ಯಮಗೋಷ್ಠಿ ನಡೆಸಿ ಹೇಳಿಕೆ ನೀಡಿ, ಪಿಟಿಷನ್ ಬರೆಯುತ್ತಾರಲ್ಲವೇ? ಅದೇ ರೀತಿ ಈ ವಿಚಾರವಾಗಿಯೂ ಹೇಳಿಕೆ ನೀಡಲಿ ಹಾಗು ನೂಲಿನಂತೆ ಸೀರೆ ಎನ್ನುವ ಮಾತನ್ನು ಅರ್ಥೈಸಲಿ.” ಪೆನ್ ಡ್ರೈವ್…

Read More

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಸ್ಥಾನಗಳಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಪ್ರಜಾಧ್ವನಿ 2 ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದಂತ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಕರ್ನಾಟಕದ 28 ಸ್ಥಾನಗಳಲ್ಲಿ 20 ಕ್ಕೂ ಸ್ಥಾನಗಳನ್ನು ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎನ್ನುವ ವಿಶ್ವಾಸ ನನಗಿದೆ ಎಂದರು. ಶಿವಮೊಗ್ಗ ಕುವೆಂಪು ಅವರ ನಾಡು, ಬಂಗಾರಪ್ಪ ಅವರಿಗೆ ಆಶೀರ್ವಾದ ಮಾಡಿದ ನಾಡು. ಈ ಬಾರಿ ಶಿವಮೊಗ್ಗ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು. ಕುವೆಂಪು ಅವರು ಈ ನೆಲವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಈ ಕನಸನ್ನು ನನಸು ಮಾಡಬೇಕು ಎಂದು ಹೇಳಿದರು. ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ ಸಮಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಆತ್ಮೀಯತೆಯನ್ನು ಅತ್ಯಂತ ಹತ್ತಿರದಿಂದ ಕಂಡಿದ್ದೇನೆ. ನಾನು ಮತ್ತು ಸಿದ್ದರಾಮಯ್ಯ ಅವರು ಗ್ಯಾರಂಟಿಗಳನ್ನು ಕೊಟ್ಟಂತೆ…

Read More