Author: kannadanewsnow09

ಆಹಾರ ಸೇವನೆಯಲ್ಲೂ ಕೆಲವೊಂದು ನಿಯಮಗಳು ಇವೆ.ಈ 5 ಆಹಾರ ಪದ್ಧತಿಯನ್ನು ಪಾಲಿಸಿದರೆ ಮನೆಯಲ್ಲಿ ಬಡತನ ತಾಂಡವಾಡುತ್ತದೆ. ಭೀಷ್ಮರು ಅರ್ಜುನನಿಗೆ ಹೇಳಿದ ಆ 5 ಆಹಾರ ಗುಟ್ಟೇನು ಕೂದಲು ಬಿದ್ದ ಆಹಾರವನ್ನು ಸೇವಿಸಿದರೆ ಏನಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ…

Read More

ಬೆಂಗಳೂರು: ನಗರದಲ್ಲಿ ಕಾರೊಂದು ಡಿಕ್ಕಿಯಾಗಿ 3 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ಆನೇಕಲ್ ಬಳಿಯಲ್ಲಿ ನಡೆದಿದೆ.  ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಶನೈಶ್ವರ ದೇವಸ್ಥಾನದ ಬಳಿಯಲ್ಲಿ ಇಂದು ಕಡ್ಲೆಕಾಯಿ ಜಾತ್ರೆ ಆಯೋಜಿಸಲಾಗಿತ್ತು. ಈ ಜಾತ್ರೆಗೆ ತಾಯಿಯೊಂದಿಗೆ ಪುತ್ರ ಏಕಾಶ್ ಆಗಮಿಸಿದ್ದರು. ದೇವಸ್ಥಾನದಿಂದ ಹೊರ ಬಂದಿದ್ದಂತ ವೇಳೆಯಲ್ಲಿ ರಸ್ತೆಯಲ್ಲಿ ಕಾರೊಂದು 3 ವರ್ಷದ ಮಗ ಏಕಾಶ್ ಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ಕಾರಣ ಏಕಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆನೇಕಲ್ ತಾಲ್ಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-news-cancelled-bpl-cards-active-again-people-who-came-out-of-the-department-happily/ https://kannadanewsnow.com/kannada/bpl-card-of-eligible-beneficiaries-to-be-activated-across-the-state-again-distribution-of-ration-grains-as-per-previous-month/

Read More

ಶಿವಮೊಗ್ಗ: ರಾಜ್ಯದಲ್ಲಿ ಇನ್ನೂ ಜೀವಂತ ಎನ್ನುವಂತೆ ಜಿಲ್ಲೆಯಲ್ಲಿಲ ಬಹಿಷ್ಕಾರ ಪದ್ದತಿ ಮುಂದುವರೆದಿದೆ. ಈ ಕುಟುಂಬವನ್ನು ಮಾತನಾಡಿಸಿದ್ರೇ, ಅವರ ಮನೆಗೆ ಹೋದ್ರೆ, ಸಂಪರ್ಕ ಇಟ್ಟುಕೊಂಡ್ರೇ 5,000 ದಂಡವನ್ನು ವಿಧಿಸಲಾಗುತ್ತಂತೆ. ಹೀಗಾಗಿ ನಮಗೆ ದಯಾ ಮರಣ ಕಲ್ಪಿಸುವಂತೆ ಕುಟುಂಬ ತಾಲ್ಲೂಕು, ಜಿಲ್ಲಾಡಳಿತ, ಮುಖ್ಯಮಂತ್ರಿ, ಡಿಸಿಎಂ ಅವರಲ್ಲಿ ಮನವಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮಡಸೂರು ಗ್ರಾಮದಲ್ಲೇ ಇಂತಹ ಅನಿಷ್ಟ ಪದ್ದತಿಯೊಂದು ಜೀವಂತವಿದೆ. ಅದೇ ಪಡವಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಡಸೂರು ಗ್ರಾಮದಲ್ಲಿ. ಈ ಗ್ರಾಮದ ಎಂ.ಕೆ ಹುಚ್ಚಪ್ಪ, ಪತ್ನಿ ಹುಚ್ಚಮ್ಮ ಹಾಗೂ ಪುತ್ರ ಎಂ.ಹೆಚ್ ವೀರೇಂದ್ರ ಅವರಿಗೆ ಮಡಸೂರು ಗ್ರಾಮಸ್ಥರು ಬಹಿಷ್ಕಾರ ಹಾಕಿ, ತೊಂದರೆ ಕೊಡುತ್ತಿರೋ ಆರೋಪ ಕೇಳಿ ಬಂದಿದೆ. ಸರ್ಕಾರಿ ಭೂಮಿಯಲ್ಲಿ ಮನೆ ಕಟ್ಟಿಕೊಳ್ಳೋಕೆ ಅಂದು ಅವಕಾಶ, ಇಂದು ತೊಂದ್ರೆ ಮಂಡಸೂರು ಗ್ರಾಮದ ಸರ್ವೆ ನಂ.60ರಲ್ಲಿ ಸುಮಾರು 22 ಎಕರೆ 28 ಗುಂಟೆ ಸರ್ಕಾರಿ ಜಾಗವಿದೆ. ಈ ಜಾಗವನ್ನು 2018ರಲ್ಲೇ ಗ್ರಾಮ ಸಮಿತಿಯ ತೀರ್ಮಾನಿಸಿ ಗ್ರಾಮದ ಎಂಟತ್ತು ಕುಟುಂಬಗಳಿಗೆ ಹಂಚಿಕೆ ಕೂಡ…

Read More

ಬೆಂಗಳೂರು: ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದು ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ಎಕ್ಸ್ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿರುವ ಅವರು; ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಅವರ ಪೋಸ್ಟ್ ಹೀಗಿದೆ; ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ, ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ. ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ…

Read More

ಬೆಂಗಳೂರು: ಇಷ್ಟೆಲ್ಲಾ ದಾಖಲೆ ಸಮೇತ ಮಾಡಿರುವ ದಿನಪತ್ರಿಕೆಯಲ್ಲಿನ ವರದಿಯನ್ನು ನೋಡಿ ಹಾಗೂ ಬಿ.ಜೆ.ಪಿಯು ತಮ್ಮ ದ್ವಂದ್ವ, ದಾರಿ ತಪ್ಪಿಸುವ ಹೇಳಿಕೆಗಳಿಗೆ, ಧರಣಿ ಹೆಸರಲ್ಲಿ ನಡೆಸುವ ಮೆಲೊ ಡ್ರಾಮಾಗಳಿಗೆ ಜನರಲ್ಲಿ ಕ್ಷಮೆಯಾಚಿಸಬೇಡವೇ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿಯವರನ್ನು ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬಿಜೆಪಿಯಿಂದ ಹೆಚ್ಚು ನೋಟಿಸ್‌ ಎಂಬ ಪ್ತಜಾವಾಣಿಯಲ್ಲಿನ ಲೇಖನ‌‌ ನೋಡಿದರೆ ಬಿ.ಜೆ.ಪಿಯವರ ನೀಚತನ ಏನೆಂಬುದು ಜನರಿಗೆ ಇನ್ನೂ ಚೆನ್ನಾಗಿ ಅರ್ಥವಾಗಲಿದೆ. 2,865 ಎಕರೆ ವಿಸ್ತೀರ್ಣದ ಜಮೀನನ್ನು ‘ವಕ್ಫ್ ಆಸ್ತಿ’ ಎಂದು ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಅವುಗಳ ಒತ್ತುವರಿ ತೆರವಿಗೆ ನೋಟಿಸ್ ನೀಡಲಾಗಿತ್ತು. ಬಿಎಸ್ ಯಡಿಯೂರಪ್ಪ 2000ರಲ್ಲಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅಧಿಸೂಚನೆ ಮಾಡಲಾಗಿದ್ದ ‘ವಕ್ಫ್ ಆಸ್ತಿ’ಗಳಿಗೂ ಈ ಅವಧಿಯಲ್ಲಿ ನೋಟಿಸ್ ನೀಡಲಾಗಿತ್ತು ಎಂದಿದ್ದಾರೆ. ಬಿಜೆಪಿ  ಸರ್ಕಾರವು 1,735 ರೈತರು ಮತ್ತು ಭೂಮಾಲೀಕರಿಗೆ ನೋಟಿಸ್ ನೀಡಿತ್ತು. ಇದರ ವಿರುದ್ಧ ಕೆಲ ರೈತರು ನ್ಯಾಯಾಲಯದ ಮೊರೆಹೋಗಿ ತಡೆಯಾಜ್ಞೆ ತಂದಿದ್ದರು. ಉಳಿದ ಪ್ರಕರಣಗಳಲ್ಲಿ ಪಹಣಿಯಲ್ಲಿ ‘ವಕ್ಫ್…

Read More

ಢಾಕಾ: ಬಾಂಗ್ಲಾದೇಶದ ಹಿಂದೂ ಧಾರ್ಮಿಕ ಮುಖಂಡ, ಇಸ್ಕಾನ್ ಅರ್ಚಕ ಕೃಷ್ಣ ದಾಸ್ ಪ್ರಭು ಅವರನ್ನು ಸೋಮವಾರ ಢಾಕಾ ವಿಮಾನ ನಿಲ್ದಾಣದಲ್ಲಿ ರಾಷ್ಟ್ರದ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಮತ್ತು ದೇಶವನ್ನು ತೊರೆಯದಂತೆ ನಿರ್ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ಹಿಂದೂ ಅಲ್ಪಸಂಖ್ಯಾತರ ಪರ ವಕೀಲ ಇಸ್ಕಾನ್ ಪಾದ್ರಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಂಧಿಸಲಾಗಿದೆ. ರಾಜಧಾನಿಯಲ್ಲಿ ನಡೆದ ಬೃಹತ್ ಹಿಂದೂ ರ್ಯಾಲಿಯ ನಂತರ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂಬ ವರದಿಗಳ ಮಧ್ಯೆ ಈ ಬಂಧನ ನಡೆದಿದೆ. https://twitter.com/RadharamnDas/status/1860996238230925673 ಈ ಬಗ್ಗೆ ಟ್ವೀಟ್ ಮಾಡಿರುವ ರಾಧಾರಾಮನ್ ದಾಸ್, “ಈ ಕಷ್ಟದ ಸಮಯದಲ್ಲಿ ಬಾಂಗ್ಲಾದೇಶದ ಅಲ್ಪಸಂಖ್ಯಾತರ ಮುಖ ಮತ್ತು ನಾಯಕ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಪೊಲೀಸರು ಬಂಧಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂಬ ಆಘಾತಕಾರಿ ಸುದ್ದಿ ನನಗೆ ಸಿಕ್ಕಿದೆ. ದಾಸ್ ಅವರನ್ನು ಢಾಕಾ ವಿಮಾನ ನಿಲ್ದಾಣದಿಂದ ಕರೆದೊಯ್ಯಲಾಗಿದೆ ಎಂದು ಢಾಕಾ…

Read More

ಬೆಂಗಳೂರು: ರಾಜ್ಯಾಧ್ಯಂತ ರದ್ದುಗೊಂಡಿದ್ದಂತ ಅರ್ಹರ ಬಿಪಿಎಲ್ ರೇಷನ್ ಕಾರ್ಡ್ ಸಮಸ್ಯೆ ಸರಿಪಡಿಸಲಾಗಿದೆ. ಇನ್ನೂ ಕೆಲವರದ್ದು ಸರಿ ಪಡಿಸಲಾಗುತ್ತಿದೆ. ಇದೀಗ ರಾಜ್ಯಾಧ್ಯಂತ ಮತ್ತೆ ಅರ್ಹರ ಬಿಪಿಎಲ್ ಕಾರ್ಡ್ ಆ್ಯಕ್ಟೀವ್ ಮಾಡಲಾಗಿದೆ. ಹೀಗಾಗಿ ಹಿಂದಿನ ತಿಂಗಳಂತೆಯೇ ಪರಿಡತ ಧಾನ್ಯ ವಿತರಣೆಯಾಗಲಿದೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಕೂಲಿ ಮಾಡುವವರು, ಬಡವರಿಗೆ ತೊಂದರೆ ಆಗಬಾರದು ಅಂತ ಅರ್ಹರ ಬಿಪಿಎಲ್ ಕಾರ್ಡ್ ಮತ್ತೆ ಆ್ಯಕ್ಟೀವ್ ಮಾಡಲಾಗಿದೆ. ಯಾರಿಗೂ ತೊಂದರೆ ಆಗೋದಿಲ್ಲ ಅಂತ ತಿಳಿಸಿದರು. ಅರ್ಹರ ಬಿಪಿಎಲ್ ಕಾರ್ಡ್ ಆ್ಯಕ್ಟೀವ್ ಆಗಿದ್ದು, ಹಿಂದಿನ ತಿಂಗಳು ಹೇಗೆ ಅಕ್ಕಿ ಸಿಗುತ್ತಿತ್ತೋ ಅದೇ ರೀತಿ ಈ ತಿಂಗಳು ಸಿಗಲಿದೆ ಎಂದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಅವರನ್ನು ಭೇಟಿ ಮಾಡುತ್ತೇನೆ. ಅಕ್ಕಿ ವಿತರಣೆ ಬಗ್ಗೆ ಚರ್ಚಿಸುವುದಾಗಿ ಹೇಳಿದರು. ಅಂದಹಾಗೇ ರಾಜ್ಯಾಧ್ಯಂತ ಅರ್ಹರ ಬಿಪಿಎಲ್ ರೇಷನ್ ಕಾರ್ಡ್ ಸರಿ ಪಡಿಸುವಂತ ಪ್ರಕ್ರಿಯೆಯನ್ನು ಆಹಾರ ಇಲಾಖೆ ಚಾಲು ಮಾಡಿದೆ. ಸರ್ಕಾರದ ಸೂಚನೆಯಂತೆ ಅರ್ಹರ ಬಿಪಿಎಲ್…

Read More

ಮೈಸೂರು: ರಾಜ್ಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದಂತ ಜಾನಪದ ಶ್ರೀ ಪ್ರಶಸ್ತಿಯನ್ನು ಪಡೆದಿದ್ದಂತ ಕಂಸಾಳೆ ಮೂಲಕ ತಮ್ಮ ಕಲಾ ನೈಪುಣ್ಯತೆಯನ್ನು ಪ್ರದರ್ಶಿಸಿ, ಗುರ್ತಿಸಿಕೊಂಡಿದ್ದಂತ ಮೈಸೂರಿನ ಕುಮಾರಸ್ವಾಮಿ ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಇನ್ನಿಲ್ಲವಾಗಿದ್ದಾರೆ. ಮೈಸೂರಿನ ಕಂಸಾಳೆ ಮಹಾದೇವಯ್ಯ ಅವರ ಪುತ್ರರಾಗಿ, ಅಪ್ಪನಂತೆ ಮಗನೂ ಕಂಸಾಳೆ ಕಲೆಗಾರಿಕೆಯಲ್ಲಿ ಗುರ್ತಿಸಿಕೊಂಡಿದ್ದವರು ಕಂಸಾಳೆ ಕಲಾವಿದ ಕುಮಾರಸ್ವಾಮಿ ಅವರು. ಬಾಲ್ಯದಿಂದಲೂ ತಂದೆಯ ಜೊತೆಗೆ ಜಾನಪದ ಕಲೆಯಾಗಿದ್ದಂತ ಕಂಸಾಳೆಯನ್ನು ತಾನು ಕಲಿತು, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ತಂಡ ಕಟ್ಟಿ ಪ್ರದರ್ಶನ ನೀಡಿದದ್ರು. 1951ರಲ್ಲಿ ಮೈಸೂರಿನ ಬಂಡಿಕೇರಿಯಲ್ಲಿ ಜನಿಸಿದ್ದಂತ ಕುಮಾರಸ್ವಾಮಿ ಅವರು, ನಟ ಶಿವರಾಜ್ ಕುಮಾರ್ ಅಭಿನಯದ ಜನುಮದ ಜೋಡಿ ಚಿತ್ರದ ಕೋಲು ಮಂಡೆ ಹಾಡಿನಲ್ಲಿ ಕಂಸಾಳೆ ಸಂಗೀತದ ನೃತ್ಯ ಸಂಯೋಜನೆ ಮಾಡಿದ್ದರು. ಈ ಕಾರಣಕ್ಕೆ ಡಾ.ರಾಜ್ ಕುಮಾರ್ ಹಾಗೂ ಶಇವರಾಜ್ ಕುಮಾರ್ ಅವರಿಂದ ಸೈ ಎನಿಸಿಕೊಂಡಿದ್ದರು. ರಾಜ್ಯದ ಪ್ರತಿಷ್ಠಿತ ಜಾನಪದ ಶ್ರೀ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಯನ್ನು ಪುರಸ್ಕೃತರಾಗಿದ್ದಂತ ಕುಮಾರಸ್ವಾಮಿ ಅವರು, ಇಂದು ವಿಧಿವಶರಾಗಿದ್ದಾರೆ. ಈ ಮೂಲಕ…

Read More

ಬೆಂಗಳೂರು: ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ಸೇರಿದಂತೆ ವಿವಿಧ ವಿಚಾರಗಳನ್ನು ಚರ್ಚಿಸಲು ನವೆಂಬರ್.28ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ: 28.11.2024 ರಂದು ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 24ನೇ ಸಭೆಯು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನ.28ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ, ಹಣಕಾಸು ಮಂಜೂರು ಸೇರಿದಂತೆ ವಿವಿಧ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದವರಿಗೆ ಬೆಂಗಳೂರು ಪೊಲೀಸರ ಶಾಕ್: 177 ಕೇಸ್ ದಾಖಲು – Kannada News | India News | Breaking news | Live news | Kannada | Kannada News | Karnataka News | Karnataka News ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಬೆಂಬಲದಿಂದ ಬಿಜೆಪಿ…

Read More

ಬೆಂಗಳೂರು: ನಗರದಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ಕಾರ್ಯಾಚರಣೆಯ ವೇಳೆಯಲ್ಲಿ ಕುಡಿದು ವಾಹನ ಚಾಲನೆ ಮಾಡಿದಂತ 177 ಮಂದಿ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ಪೂರ್ವ ವಿಭಾಗದ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದಿನಾಂಕ 21-11-2024ರಿಂದ 24-11-2024ರವರೆಗೆ ಸಂಚಾರ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಮದ್ಯಪಾನ ಮಾಡಿ ವಾಹನಗಳನ್ನು ಚಾಲನೆ ಮಾಡುವ ಚಾಲಕ, ಸವಾರರುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಯಿತು ಎಂದಿದ್ದಾರೆ. ಸುಮಾರು 19,400 ವಾಹನಗಳನ್ನು ತಪಾಸಣೆ ಮಾಡಿ 177 ಪ್ರಕರಣಗಳನ್ನು ದಾಖಲು ಮಾಡವ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಜಪ್ತಿ ಪಡಿಸಿಕೊಂಡು, ಸಂಬಂಧ ಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗೆ ಅಮಾನತ್ತು ಪಡಿಸಲು ಕಳುಹಿಸಿಕೊಡಲಾಗಿರುತ್ತದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ವಾಹನ ಸವಾವರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಹಾಗೂ ಸಂಚಾರ ನಿಯಮಗಳ ಮಹತ್ವ ತಿಳಿಯುವಂತೆ ಮನವಿ ಮಾಡಲಾಗಿದೆ. ಇನ್ನೂ ಸಂಚಾರ ನಿಯಮ ಮೀರುವವರ ವಿರುದ್ಧ…

Read More