Author: kannadanewsnow09

ಬೆಂಗಳೂರು: ಇಂದು ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದಂತ ವಾಹನ ಸವಾರರಿಗೆ ಟ್ರಾಫಿಕ್ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿ ಬರೋಬ್ಬರಿ 525 ಸವಾರರ ವಿರುದ್ಧ ಕೇಸ್ ಹಾಕಿದ್ದಾರೆ. ಅಲ್ಲದೇ 2.64 ಲಕ್ಷ ದಂಡವನ್ನು ವಸೂಲಿ ಮಾಡಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಗರದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಹಾಗೂ ಏಕಮುಖ ರಸ್ತೆಯಲ್ಲಿ ವಾಹನ ಚಲಾಯಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯನ್ನುಂಟು ಮಾಡುತ್ತಿರುವವರ ವಿರುದ್ಧ ವಿಶೇಷ ಕಾರ್ಯಾಚರಣೆಯನ್ನು ಇಂದು ನಡೆಸಲಾಯಿತು ಎಂದಿದೆ. ಇಂದು ಸಂಜೆ 6 ಗಂಟೆಯಿಂದ 7.30ರವರೆಗೆ ಹಮ್ಮಿಕೊಳ್ಳಲಾಗಿದ್ದಂತ ಏಕಮುಖ ರಸ್ತೆಯ ಚಾಲನೆಯ ವಿರುದ್ಧದ ವಿಶೇಷ ಕಾರ್ಯಾಚರಣೆಯಲ್ಲಿ ವಾಹನಗಳ ಮಾದರಿ ಆಧಾರದ ಮೇಲೆ 525 ಕೇಸ್ ದಾಖಲಿಸಲಾಗಿದೆ. 2,64,000 ದಂಡವನ್ನು ಸಂಗ್ರಹಿಸಲಾಗಿದೆ ಅಂತ ತಿಳಿಸಿದೆ. ಅಂದಹಾಗೇ ಸ್ಕೂಟರ್ ವಾಹನ ಸವಾರರ ವಿರುದ್ಧ ಬರೋಬ್ಬರಿ 227 ಕೇಸ್ ದಾಖಲಿಸಿ 1,13,500 ದಂಡ ಸಂಗ್ರಹಿಸಿದ್ರೇ, ಮೋಟರ್ ಸೈಕಲ್ 196, ಎಲ್…

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ರಾಮ ಮಂದಿರ ಉದ್ಘಾಟನೆಗಾಗಿ ಹಾಕಿದ್ದಂತ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಅವರನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ಡಬ್ಬನಹಳ್ಳಿಯಲ್ಲಿ ಇಂದು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಸಲುವಾಗಿ ಹಾಕಲಾಗಿದ್ದಂತ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಬ್ಯಾನರ್ ಹರಿದಂತ ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಕೇಸರಿ ಭಾವುಟಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಪ್ರತಿಭಟನೆ ನಡೆಸುತ್ತಿರುವಂತ ಗ್ರಾಮಸ್ಥರನ್ನು ಮನವೊಲೀಸೋದಕ್ಕೆ ಸೂಲಿಬೆಲೆ ಠಾಣೆಯ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. https://kannadanewsnow.com/kannada/the-disproportionate-assets-case-against-jayalalithaa-case-court-orders-attachment-of-disproportionate-assets-recovery-of-penalty/ https://kannadanewsnow.com/kannada/trying-to-incite-indian-muslims-pakistan-condemns-ram-temple-construction-says-india/

Read More

ಬೆಂಗಳೂರು: ದಿವಂಗದ ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಅಕ್ರಮ ಆಸ್ತಿ ಜಪ್ತಿ, ದಂಡ ವಸೂಲಿಗೆ ವಿಶೇಷ ಕೋರ್ಟ್ ಆದೇಶಿಸಿದೆ. ಅಲ್ಲದೇ ಕರ್ನಾಟಕಕ್ಕೆ ವ್ಯಾಜ್ಯ ಶುಲ್ಕವಾಗಿ 5 ಕೋಟಿ ಪಾವಿಸುವಂತೆಯೂ ಆದೇಶಿಸಲಾಗಿದೆ. ಈ ಕುರಿತಂತೆ ಇಂದು ವಿಶೇಷ ಕೋರ್ಟ್ ವಿಚಾರಣೆ ನಡೆಸಿ ಸೂಚನೆ ನೀಡಿದೆ. ದಿವಂಗದ ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಅಕ್ರಮ ಆಸ್ತಿ ಜಪ್ತಿ ಹಾಗೂ ದಂಡ ವಸೂಲಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಜಪಾತಿಯಾದ ಆಸ್ತಿ ವಿವರವನ್ನು ಕೋರ್ಟ್ ಗೆ ಎಸ್ ಪಿಪಿ ಕಿರಣ್ ಎಸ್ ಜವಳಿ ಸಲ್ಲಿಸಿದರು. ವ್ಯಾಜ್ಯ ಶುಲ್ಕವಾಗಿ ಕರ್ನಾಟಕಕ್ಕೆ 5 ಕೋಟಿ ಪಾವತಿಸುವಂತೆ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೇ ಡಿಡಿ ರೂಪದಲ್ಲಿ ಕರ್ನಾಟಕಕ್ಕೆ ನೀಡಲು ಸೂಚಿಸಿದೆ. ಇನ್ನೂ ಜಯಲಲಿತಾ ಒಡವೆಗಳು ಬೆಂಗಳೂರಿನ ಕೋರ್ಟ್ ವಶದಲ್ಲಿರುವ ಹಿನ್ನಲೆಯಲ್ಲಿ ಒಡವೆ ಹರಾಜು ಬದಲು, ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಿರ್ಧಾರ ಕೈಗೊಳ್ಳುವಂತೆ ಹೇಳಿದೆ. ಗೃಹ ಕಾರ್ಯದರ್ಶಿ, ಪೊಲೀಸರೊಂದಿಗೆ ಹಾಜರಾಗಬೇಕು. ಒಡವೆಗಳನ್ನು ಗುರುತಿಸಿ,…

Read More

ನವದೆಹಲಿ: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರು ನಟಿ ಸನಾ ಜಾವೇದ್ ಅವರನ್ನು ಅಚ್ಚರಿಯ ಸಮಾರಂಭದಲ್ಲಿ ವಿವಾಹವಾದರು. ಸಾನಿಯಾ ಮಿರ್ಜಾ ವಿಚ್ಛೇದನ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದರು ಮತ್ತು ಇತ್ತೀಚಿನ ಮದುವೆಗೆ ಹಲವಾರು ತಿಂಗಳುಗಳ ಮೊದಲು ಶೋಯೆಬ್ ಮಲಿಕ್ ಅವರಿಂದ ‘ಖುಲಾ’ ಪಡೆದಿದ್ದರು ಎಂಬುದು ನಂತರ ಬೆಳಕಿಗೆ ಬಂದಿತು. ಮಿರ್ಜಾ ಕುಟುಂಬವು ಮಲಿಕ್ ಅವರ ಹೊಸ ಪ್ರಯಾಣಕ್ಕೆ ಶುಭ ಹಾರೈಸಿತು. ಮಾಜಿ ದಂಪತಿಗಳಾದ ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ಮದುವೆಯಾಗಿ ಸುಮಾರು ಒಂದು ದಶಕವನ್ನು ಹಂಚಿಕೊಂಡಿದ್ದರು ಮತ್ತು ಇಜಾನ್ ಎಂಬ ಐದು ವರ್ಷದ ಮಗನ ಪೋಷಕರಾಗಿದ್ದಾರೆ. ಮಲಿಕ್ ಅವರೊಂದಿಗಿನ ಸಂಬಂಧಕ್ಕೆ ಮೊದಲು, ಸನಾ ಜಾವೇದ್ ಈ ಹಿಂದೆ ಗಾಯಕ ಮತ್ತು ಗೀತರಚನೆಕಾರ ಉಮೈರ್ ಜಸ್ವಾಲ್ ಅವರನ್ನು ವಿವಾಹವಾಗಿದ್ದರು. ಆದರೆ ಅವರ ಮೂರು ವರ್ಷಗಳ ವೈವಾಹಿಕ ಜೀವನವು 2023 ರಲ್ಲಿ ಕೊನೆಗೊಂಡಿತು. ಸಮಾ ಟಿವಿಯ ಇತ್ತೀಚಿನ ಪಾಡ್ಕಾಸ್ಟ್ನಲ್ಲಿ, ಅನುಭವಿ ಪಾಕಿಸ್ತಾನಿ ಪತ್ರಕರ್ತ ನಯೀಮ್ ಹನೀಫ್ ಶೋಯೆಬ್ ಮಲಿಕ್ ಮತ್ತು ಸನಾ ಜಾವೇದ್ ನಡುವಿನ…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿದೆ. ದೇಶದ ಪ್ರತಿಯೊಂದು ರಾಜ್ಯವನ್ನು ಪ್ರಗತಿಪಥದಲ್ಲಿ ಒಯ್ಯುವ ಹಾಗೂ 2047ನೇ ಇಸವಿಗೆ ಅಭಿವೃದ್ಧಿ ಹೊಂದಿದ ‘ವಿಕಸಿತ ಭಾರತ’ದ ನಿರ್ಮಾಣಕ್ಕೆ ಅವರು ಸಂಕಲ್ಪ ತೊಟ್ಟಿದ್ದಾರೆ. ಅದು ನನಸಾಗಲಿದೆ ಎಂದರು. ಮೋದಿಜೀ ಅವರ ಕರೆಗೆ ಓಗೊಟ್ಟು ಅಯೋಧ್ಯೆ ರಾಮಲಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮನೆಮನೆಯಲ್ಲೂ ದೀಪ ಹಚ್ಚಿದ ಹಿಂದೂಗಳಿಗೆ ಮತ್ತು ಕಾರ್ಯಕರ್ತರಿಗೆ ಅವರು ಕೃತಜ್ಞತೆ ಸಲ್ಲಿಸಿದರು. ಜನರ ನಿರೀಕ್ಷೆ, ಕೋಟಿ ಕೋಟಿ ರಾಮಭಕ್ತರ ಅಪೇಕ್ಷೆಯಂತೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಕಾರ್ಯ ನೆರವೇರಿದೆ. ದೇಶದ ಮೂಲೆಮೂಲೆಯಿಂದ…

Read More

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 161 ಮಂದಿಗೆ ಕೊರೋನಾ ಪಾಸಿಟಿವ್ ( Corona Positve ) ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ ಓರ್ವ ಸಾವನ್ನಪ್ಪಿದ್ದಾನೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ( Karnataka Health Department ) ಮಾಹಿತಿ ಬಿಡುಗಡೆ ಮಾಡಿದ್ದು ಕಳೆದ 24 ಗಂಟೆಯಲ್ಲಿ RTPCR ಮೂಲಕ 4022, RAT ಮೂಲಕ 945 ಸೇರಿದಂತೆ 4967 ಮಂದಿಯನ್ನು ಕೊರೋನಾ ಸೋಂಕು ( Coronavirus ) ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದಿದೆ. ಇಂದು ನಡೆಸಿದಂತ ಕೊರೋನಾ ಸೋಂಕು ಪತ್ತೆ ಪರೀಕ್ಷೆಯಲ್ಲಿ ಬಳ್ಳಾರಿಯಲ್ಲಿ 06, ಬೆಳಗಾವಿ 01,  ಬೆಂಗಳೂರು ಗ್ರಾಮಾಂತರ 07, ಬೆಂಗಳೂರು ನಗರ 79, ಚಾಮರಾಜನಗರ 01, ಚಿಕ್ಕಬಳ್ಳಾಪುರ 02, ಚಿಕ್ಕಮಗಳೂರು 15, ದಕ್ಷಿಣ ಕನ್ನಡ 03, ದಾವಣಗೆರೆ 01, ಧಾರವಾಡ 08, ಹಾಸನ 03, ಕೋಲಾರ 02, ಕೊಪ್ಪಳ 05, ಮೈಸೂರು 08, ರಾಯಚೂರು 03, ಶಿವಮೊಗ್ಗ 02, ತುಮಕೂರು 03, ಉಡುಪಿ 01, ಉತ್ತರ ಕನ್ನಡ…

Read More

ಉತ್ತರಪ್ರದೇಶ: ಅಯೋಧ್ಯೆಯಲ್ಲಿ ನಡೆದ ರಾಮ ಮಂದಿರ ಪ್ರಾಣ ಪ್ರತಿಷ್ಠಾನ ಸಮಾರಂಭದಲ್ಲಿ ಬಾಲಿವುಡ್ ಐಕಾನ್ ಅಮಿತಾಬ್ ಬಚ್ಚನ್, ಅವರ ಪುತ್ರ ಅಭಿಷೇಕ್ ಬಚ್ಚನ್ ಭಾಗವಹಿಸಿದ್ದರು. ಅಮಿತಾಭ್ ಬಚ್ಚನ್ ಅವರು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಣ್ಣ ವಿನಿಮಯ ಮಾಡಿಕೊಂಡರು. ಅಷ್ಟೇ ಅಲ್ಲ, ಅವರ ಮಗ ಅಭಿಷೇಕ್ ಪ್ರಧಾನಿ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಂಕ್ಷಿಪ್ತ ಚಾಟ್ ನಡೆಸಿದರು. ರಾಮ ಮಂದಿರ ಪ್ರತಿಷ್ಠಾಪನಾ ಸಮಾರಂಭದಲ್ಲಿ ಅಮಿತಾಭ್ ಬಚ್ಚನ್ ಗೆ ಶುಭ ಕೋರಿದ ಪ್ರಧಾನಿ ಮೋದಿ ತಮ್ಮ ಭಾಷಣದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅಮಿತಾಬ್ ಬಚ್ಚನ್ ಅವರನ್ನು ಸ್ವಾಗತಿಸಿದರು. ಇದಲ್ಲದೆ, ಅವರ ಪುತ್ರ ಅಭಿಷೇಕ್ ಅವರು ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಣ್ಣ ವಿನಿಮಯದಲ್ಲಿ ತೊಡಗಿದ್ದರು. https://twitter.com/ANI/status/1749362752978854352 ಅಯೋಧ್ಯೆಯಲ್ಲಿ ನಿವೇಶನ ಖರೀದಿಸಿದ ಬಿಗ್ ಬಿ?…

Read More

ಬೆಂಗಳೂರು: ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ನಾವು ಮಹತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀ ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಳಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತೇವೆ ಮಹಾತ್ಮಾಗಾಂಧಿಜಿ ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎಂದರು. ಅನೇಕ ರಾಜ್ಯಗಳು ರಜೆ ಘೋಷಿಸಿಲ್ಲ ಕರ್ನಾಟಕದಲ್ಲಿ ಕಾರ್ಯಕ್ರಮದ ಅಂಗವಾಗಿ ರಜೆ ಗೋಷಣೆ ಮಾಡಿಲ್ಲ ಎಂಬಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೇಂದ್ರ ಸರ್ಕಾರ ಅರ್ಧ ದಿನ ರಜೆ ಕೊಟ್ಟಿದ್ದಾರೆ. ದೆಹಲಿ, ಪಂಜಾಬ್, ತೆಲಂಗಾಣ, ಪಶ್ಚಿಮ ಬಂಗಾಲ,…

Read More

ಬೆಂಗಳೂರು: ರಾಮಮಂದಿರವನ್ನು ರಾಜಕೀಯಗೊಳಿಸಬಾರದು. ಶ್ರೀರಾಮಚಂದ್ರ ಎಲ್ಲರ ದೇವರು. ಕೇವಲ ಬಿಜೆಪಿಯವರ ದೇವರಲ್ಲ. ಎಲ್ಲಾ ಹಿಂದೂಗಳ ದೇವರು. ನಾವೂ ಶ್ರೀರಾಮಚಂದ್ರನ ಭಕ್ತರೇ. ಶ್ರೀರಾಮಚಂದ್ರನಿಗೆ ವಿರುದ್ಧವಾಗಿದ್ದೇವೆ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಈ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು. ಇಂದು ಅವರು ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀ ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಳಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ದೇವಸ್ಥಾನ ಉದ್ಘಾಟನೆ: ರಾಜಕೀಯ ಇಲ್ಲ ಇಂದು ಶ್ರೀ ರಾಮ ಟೆಂಪಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಶ್ರೀರಾಮ ದೇವಸ್ಥಾನವನ್ನು ಇದರೊಂದಿಗೆ ಆಂಜನೇಯ ವಿಗ್ರಹವನ್ನೂ ಉದ್ಘಾಟಿಸಿದ್ದೇನೆ. ಇದನ್ನು ನಾವು ರಾಜಕಾರಣಕ್ಕಾಗಿ ಮಾಡಿರುವುದಲ್ಲ. ಕರ್ನಾಟಕ ರಾಜ್ಯದಲ್ಲಿ ಶ್ರೀರಾಮಚಂದ್ರನ ಬಹಳಷ್ಟು ದೇವಸ್ಥಾನಗಳಿವೆ. ನಮ್ಮೂರಿನಲ್ಲಿಯೂ ನಾನೇ ಶ್ರೀರಾಮಚಂದ್ರನ ದೇವಸ್ಥಾನವನ್ನು ಕಟ್ಟಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ. ಸಮಯ ದೊರೆತಾಗ ಅಯೋಧ್ಯೆಗೆ ನಾನು ಹೋಗುತ್ತೇನೆ. ಶ್ರೀರಾಮಚಂದ್ರನ ಮೂರ್ತಿ ಎಲ್ಲೆಡೆ ಒಂದೇ. ಅಯೋಧ್ಯೆಯಲ್ಲಿ ಮಾಡಿದರೂ ಒಂದೇ, ನಮ್ಮೂರಿನಲ್ಲಿ ಪೂಜೆ…

Read More

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿಯವರು ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಿದ ನಂತ್ರ, ದೇಶಾದ್ಯಂತ ದೀಪೋತ್ಸವ ಆಚರಿಸುವಂತೆ ಕರೆ ನೀಡಿದ್ದರು. ಅದರ ಸಲುವಾಗಿ ಅಯೋಧ್ಯೆಯಲ್ಲಿ ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಉತ್ತರ ಪ್ರದೇಶ ಸರ್ಕಾರವು ಅಯೋಧ್ಯೆಯಲ್ಲಿ ದೀಪೋತ್ಸವವನ್ನು ಆಯೋಜಿಸಿದ್ದು, ಅಯೋಧ್ಯೆಯ ದೇಗುಲಗಳು, ಸಾರ್ವಜನಿಕ ಸ್ಥಳಗಳಲ್ಲಿ ದೀಪೋತ್ಸವವನ್ನು ಆಚರಿಸಲಾಗುತ್ತಿದೆ. ಈ ಮೂಲಕ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಅಯೋಧ್ಯೆಯ ರಾಮಲಲ್ಲಾ, ಕನಕ ಭವನ, ಹನುಮಾನ್ ಗುಡಿ, ಗುಪ್ತರಘಾಟ್, ಲತಾ ಮಂಗೇಶ್ವರ್ ವೃತ್ತ, ಸರಯು ನದಿ ತೀರ ಪ್ರದೇಶ, ಮಣಿರಾಮ್ ದಾಸ್ ಕಂಟೋನ್ಮೆಂಟಲ್ ಸೇರಿದಂತೆ 100ಕ್ಕೂ ಹೆಚ್ಚು ಪ್ರದೇಶಗಳಲ್ಲಿ ದೀಪೋತ್ಸವನ್ನು ಆಚರಿಸಲಾಗುತ್ತಿದೆ. ಈ ಮೂಲಕ ಅಯೋಧ್ಯೆಯಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ. https://twitter.com/ANI/status/1749411022094676417 ದೀರ್ಘ ಕಾಯುವಿಕೆಯ ನಂತರ, ಈಗ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ದಿನ ಬಂದಿದೆ. ಇಂದು, ಅಯೋಧ್ಯೆಯ ರಾಮ ದೇವಾಲಯದ ಗರ್ಭಗುಡಿಯಲ್ಲಿ ರಾಮ್ಲಾಲಾವನ್ನು ಪ್ರತಿಷ್ಠಾಪಿಸಲಾಗಿದೆ. ಇಡೀ ದೇಶ ರಾಮ ಭಕ್ತಿಯಲ್ಲಿ ಮುಳುಗಿದೆ. ದೇಶದ ಪ್ರತಿಯೊಂದು ಪ್ರದೇಶದಲ್ಲೂ ಜೈ ಶ್ರೀ ರಾಮ್ ಘೋಷಣೆಗಳು ಮೊಳಗುತ್ತಿವೆ. ಏತನ್ಮಧ್ಯೆ,…

Read More