Author: kannadanewsnow09

ಬೆಂಗಳೂರು: “ಪೆನ್ ಡ್ರೈವ್ ವಿಚಾರ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದೇ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ. ಈ ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಇಂದು ಸದಾಶಿವನಗರ ನಿವಾಸದಲ್ಲಿ  ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಬಹಿರಂಗಗೊಳಿಸಿರುವುದು ಮಹಾನ್ ನಾಯಕ ಡಿ.ಕೆ. ಶಿವಕುಮಾರ್ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ ಅವರು, “ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶಿವಕುಮಾರ್ ಅವರನ್ನು ಸ್ಮರಿಸದಿದ್ದರೆ ತಿಂದ ಅನ್ನ ಜೀರ್ಣವಾಗುವುದಿಲ್ಲ. ನಿದ್ದೆ ಬರುವುದಿಲ್ಲ. ನಾವು ಪೆನ್ ಡ್ರೈವ್ ಬಿಡುಗಡೆ ಮಾಡುವುದಾಗಿದ್ದರೆ ಚುನಾವಣೆಗೆ ವಾರ ಅಥವಾ ಹತ್ತು ದಿನ ಮುಂಚಿತವಾಗಿಯೇ ಬಿಡುಗಡೆ ಮಾಡಬಹುದಾಗಿತ್ತಲ್ಲವೇ? ಈ ವಿಚಾರದಲ್ಲಿ ಎಲ್ಲರಿಗಿಂತ ಮುಂಚಿತವಾಗಿ ಗೊತ್ತಿದ್ದು ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ. ಅವರೀಗ ಕಾಂಗ್ರೆಸ್ ಮೇಲೆ ಆರೋಪ ಮಾಡಿ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ಇಲ್ಲಿ ಕುಮಾರಸ್ವಾಮಿ ಅವರ ಆರೋಪ ಮುಖ್ಯವೋ, ಆ ಭಾಗದ ಐನೂರಕ್ಕಿಂತ ಹೆಚ್ಚು…

Read More

ಹಾವೇರಿ: ಕಾಂಗ್ರೆಸ್ ನವರು ಲಂಬಾಣಿ ಸಮುದಾಯದ ಮೀಸಲಾತಿಯನ್ನು ಕಡಿಮೆ ಮಾಡಿದ್ದಾರೆ. ನಾನು ನಿಮ್ಮ ಸಹೋದರನಾಗಿ ಸಮುದಾಯಕ್ಕೆ ಸಿಗಬೇಕಾದ ನ್ಯಾಯಯುತ ಮೀಸಲಾತಿ ಕೊಡಿಸಲು ಬದ್ದನಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಬಂಜಾರ ಸಮುದಾಯದ ಕೃಷ್ಣಾಪುರ ಮಠದ ಆವರಣದಲ್ಲಿ ಲಂಬಾಣಿ ಸಮುದಾಯದ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಅತ್ಯಂತ ಕಟ್ಟಕಡೆಯ ಸಮಾಜದ ಧ್ವನಿ ಕೇಳಬೇಕು. ಅದು ಕೇಳಲು ಸಮಾಜ ಸಂಘಟನೆ ಆಗಬೇಕು. ಈ ಸಮಾಜ ದೇವರ ವರದಾನ ಇರುವ ಸಮಾಜ, ಸಂತ ಸೇವಾಲಾಲ್ ಅವರ ಅಶೀರ್ವಾದ ಇರುವ ಸಮಾಜ, ಅತ್ಯಂತ ಕಷ್ಟದಲ್ಲಿರುವ ಜನರು ನೀವು. ನೀವು ಬಹಳ ಕಷ್ಟಪಟ್ಟು ನಿಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿದ್ದೀರಿ, ಅವರಿಗೆ ಅವಕಾಶ ಕೊಟ್ಟರೆ ದೊಡ್ಡ ಸ್ಥಾನಗಳನ್ನು ಪಡೆಯುತ್ತಾರೆ. ಸರ್ಕಾರ ಕೈ ಹಿಡಿದರೆ ಈ ಸಮುದಾಯದ ಯುವಕರು ಉನ್ನತ ಸ್ಥಾನ ಪಡೆಯುತ್ತಾರೆ ಎಂದರು. ದೇಶದ ಎಲ್ಲ ಭಾಗಗಳಲ್ಲಿ ಇರುವ ಕೆಲವೇ ಕೆಲವು ಸಮುದಾಯಗಳಲ್ಲಿ ಬಂಜಾರ…

Read More

ನವದೆಹಲಿ: 2024 ರ ಟಿ 20 ವಿಶ್ವಕಪ್ ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡವನ್ನು ಪ್ರಕಟಿಸಿದ್ದು, ಅಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ. ಅನುಭವಿ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಮಾರ್ಕ್ಯೂ ಈವೆಂಟ್ ನಲ್ಲಿ ನಿರೂಪಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈಗ, ಇಬ್ಬರೂ ಬ್ಯಾಟ್ಸ್ಮನ್ಗಳಿಗೆ ಇದು ಕೊನೆಯ ಟಿ 20 ಪಂದ್ಯವಾಗಲಿದೆ ಎಂಬ ವರದಿಗಳಿವೆ. ಬಿಸಿಸಿಐ ಮೂಲಗಳ ಪ್ರಕಾರ, ಇದು ಟಿ 20 ಐ ಸ್ವರೂಪದಲ್ಲಿ ಕೊಹ್ಲಿ ಮತ್ತು ರೋಹಿತ್ ಅವರ ಕೊನೆಯ ನೇಮಕವಾಗಿದೆ. ಕೊಹ್ಲಿ ಮತ್ತು ರೋಹಿತ್ ಇಬ್ಬರೂ 151 ಮತ್ತು 117 ಟಿ 20 ಪಂದ್ಯಗಳನ್ನು ಆಡಿದ್ದಾರೆ, ಅಲ್ಲಿ ಅವರು ಕ್ರಮವಾಗಿ 3974 ಮತ್ತು 4037 ರನ್ ಗಳಿಸಿದ್ದಾರೆ. 2022 ರ ಟಿ 20 ವಿಶ್ವಕಪ್ನಲ್ಲಿ ಭಾರತ ಸೋತ ನಂತರ ಇಬ್ಬರೂ ಕೇವಲ ಒಂದು ಟಿ 20 ಐ ಸರಣಿಯನ್ನು ಆಡಿದ್ದಾರೆ.

Read More

ನವದೆಹಲಿ: ರಾಜ್ಯದಲ್ಲಿ ಭೀಕರ ಬರಗಾಲದಿಂದ ಜನರು ತತ್ತರಿಸಿ ಹೋಗಿದ್ದಾರೆ. ನೀರಿಗಾಗಿ ಆಹಾಕಾರವೆದ್ದಿದೆ. ಇದರ ನಡುವೆ ಕಾವೇರಿ ನದಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕುಡಿಯೋದಕ್ಕೆ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಕ್ಯಾತೆ ತೆಗೆದಿದೆ. ಇಂದು ದೆಹಲಿಯ ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯ ವೇಳೆಯಲ್ಲಿ ಕರ್ನಾಟಕದಲ್ಲಿ ಭೀಕರ ಬರಗಾಲವಿದ್ದರೂ, ತಮಿಳುನಾಡು ಮಾತ್ರ ಕುಡಿಯೋದಕ್ಕಾಗಿ ನೀರು ಬಿಡುಗಡೆ ಮಾಡುವಂತೆ ತಮ್ಮ ವಾದವನ್ನು ಮಂಡಿಸಿತು. ತಮಿಳುನಾಡಿನಿಂದ ಮತ್ತೆ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕ್ಯಾತೆ ತೆಗೆದಿದ್ದು, ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಆಗ್ರಹಿಸಿತು. ಕುಡಿಯಲು 0.5 ಟಿಎಂಸಿ ನೀರು ಸಾಕು. ಕುಡಿಯೋ ನೀರಿನ ನೆಪದಲ್ಲಿ ನೀರು ಬಿಡುಗಡೆಗಾಗಿ ನಿರಾಕರಸಿಬಾರದು ಎಂಬುದಾಗಿ ವಾದಿಸಿತು. ಅಲ್ಲದೇ ತಮ್ಮ ತಿಂಗಳ ನೀರಿನ ಪಾಲಾಗಿರುವಂತ 2.5 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿತು. ಇಂದು ನಡೆದಂತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಒತ್ತಾಯಿಸಿತು.…

Read More

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ದೃಶ್ಯಾವಳಿಗಳು ವೈರಲ್ ಆಗಿವೆ. ಈ ಸಂಬಂಧ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಪುತ್ರ ಕೆ.ಇ ಕಾಂತೇಶ್ ಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ. ಹೀಗಾಗಿ ಅವರು ನಿರ್ಬಂಧಕಾಜ್ಞೆಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್ ಅವರಿಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ. ತಮ್ಮ ಅಶ್ಲೀಲ ಸಿಡಿ ಭೀತಿಯಿಂದಾಗಿ ಯಾವುದೇ ಮಾನಹಾನಿ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಮಧ್ಯಂತರ ಆದೇಶ ಪಡೆದಿದ್ದಾರೆ. ಲೋಕಸಭಾ ಚುನಾವಣೆಯ ವೇಳೆಯಲ್ಲಿ ತಮ್ಮ ಹೆಸರಿಗೆ ಮಸಿ ಬಳಿಯೋ ಸಾಧ್ಯತೆಯಿಂದ ಕೋರ್ಟ್ ನಿಂದ ಅಶ್ಲೀಲ ಸಿಡಿ ಬಿಡುಗಡೆ ಮಾಡದಂತೆ ನಿರ್ಬಂಧಕಾಜ್ಞೆಯನ್ನು ತಂದಿದ್ದಾರೆ.

Read More

ಕೊಪ್ಪಳ : ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ನುಡಿದರು. ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಬೃಹತ್ ಜನ ಸಾಗರವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಿಕೆಗಳಲ್ಲಿ ಬಿಜೆಪಿ ಇಂದು ಸುಳ್ಳು ಜಾಹಿರಾತು ನೀಡಿದೆ. ಬಿಜೆಪಿ ಅಧಿಕಾರಿದಲ್ಲಿರುವ ಯಾವ ರಾಜ್ಯದಲ್ಲೂ ನಮ್ಮ ಹಾಗೆ ದಲಿತರಿಗೆ ಆರ್ಥಿಕ ಶಕ್ತಿ ನೀಡುವ SCP/TSP ಕಾಯ್ದೆ ಜಾರಿ ಮಾಡದ ಬಿಜೆಪಿ, ಕೇವಲ ಪತ್ರಿಕಾ ಜಾಹಿರಾತು ಮೂಲಕ ಹಾದಿ ತಪ್ಪಿಸುತ್ತಿದೆ. ಈ ಸುಳ್ಳು ಜಾಹಿರಾತು ನಂಬಿ ಮೋಸ ಹೋಗಬೇಡಿ ಎಂದರು. ಗಂಗಾವತಿ ನನಗೆ ಮನೆ ಇದ್ದಂತೆ ನನಗೆ ಗಂಗಾವತಿ ಮನೆ ಇದ್ದಂಗೆ. ನಾನು ಲೋಕಸಭೆಗೆ ನಿಂತಿದ್ದಾಗ ಗಂಗಾವತಿಯಲ್ಲಿ ಬಹುಮತ ಸಿಕ್ಕಿತ್ತು. ಈ ಋಣ ನಾನು ಯಾವತ್ತೂ ಮರೆಯಲ್ಲ. ಈ ಬಾರಿಯೂ ಗಂಗಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಅತ್ಯಂತ ಹೆಚ್ಚು ಮತಗಳನ್ನು ಕಾಂಗ್ರೆಸ್ ಗೆ ಕೊಡಿಸಿ ಅಭೂತಪೂರ್ವವಾಗಿ…

Read More

ಹಾವೇರಿ: ಮಾಜಿ ಮುಖ್ಯಮಂತ್ರಿ ಬಸವರಾಜ ವಿರುದ್ಧ ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಘನೆ ಆರೋಪದಲ್ಲಿ ಎಫ್ ಐ ಆರ್ ದಾಖಲಾಗಿದೆ. ಅನುಮತಿ ಇಲ್ಲದೇ ನಗರದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿರುವ ಆರೋಪದ ಮೇರೆಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ವಿರುದ್ಧ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಏ.27ರಂದು ಬೊಮ್ಮಾಯಿ ಅವರು ನಗರದ ಆಯುರ್ವೇದ ಕಾಲೇಜಿನಲ್ಲಿ ಪ್ರಚಾರ ಸಭೆ ನಡೆಸಿದ್ದರು. ನೀತಿಸಂಹಿತೆ ಜಾರಿ ಇರುವ ಸಂದರ್ಭದಲ್ಲಿ ಪೂರ್ವಾನುಮತಿ ಇಲ್ಲದೇ ಹಾಗೂ ನೀತಿಸಂಹಿತೆ ಅನ್ವಯ ನಿಷೇಧಿತ ಪ್ರದೇಶವಾದ ವಿದ್ಯಾಸಂಸ್ಥೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ್ದಾರೆ. ಇದಲ್ಲದೇ ಫೇಸ್‌ಬುಕ್‌ನಲ್ಲಿ ಸಭೆಯ ಫೋಟೊ ಹಂಚಿಕೊಳ್ಳುವ ಮೂಲಕ ನೀತಿಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕ್ಷಿಪ್ರ ಕಾರ್ಯಪಡೆ ಮುಖ್ಯಸ್ಥ ರಾಮಕೃಷ್ಣ ದೂರು ದಾಖಲಿಸಿದ್ದಾರೆ. ಈ ಮೂಲಕ ಮಾಜಿ ಸಿಎಂ ಬೊಮ್ಮಾಯಿಗೆ ಶಾಕ್ ನೀಡಲಾಗಿದೆ.

Read More

ಹಾವೇರಿ: ಪ್ರಧಾನಿ ನರೇಂದ್ರ‌ಮೋದಿಯವರ ವಿಕಸಿತ ಭಾರತದ ಕನಸು ಸಾಕಾರಗೊಳಿಸಲು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರನ್ನು ಗೆಲ್ಲಿಸಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕರೆ ನೀಡಿದ್ದಾರೆ. ಅವರು ಇಂದು ಬ್ಯಾಡಗಿಯಲ್ಲಿ ಬಸವರಾಜ ಬೊಮ್ಮಾಯಿಯವರ ಪರವಾಗಿ ಬೃಹತ್ ರೋಡ್ ಶೋ‌ ನಡೆಸಿ ಮಾತನಾಡಿದರು. ನಿಮ್ಮ ಉತ್ಸಾಹ ನೋಡಿದರೆ ಬೊಮ್ಮಾಯಿಯವರನ್ನು ಸಂಸತ್ ಸದಸ್ಯರನ್ನಾಗಿ ಮಾಡುವ ತೀರ್ಮಾನ ಮಾಡಿದ್ದೀರಿ. ಇದು ಬೊಮ್ಮಾಯಿಯವರ ಚುನಾವಣೆಯಲ್ಲ. ಮೋದಿಯವರು ವಿಕಸಿತ ಭಾರತ ಮಾಡಲು ಚುನಾವಣೆ ನಡೆಯುತ್ತಿದೆ. ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಕಳುಹಿಸುವಂತೆ ಮನವಿ ಮಾಡಿದರು. ಮೋದಿಯವರು ನಿಮಗೆ ಕಿಸಾನ್ ಸಮ್ಮಾನ್ ನಿಡಿದ್ದಾರಲ್ವಾ, ಉಜ್ವಲ ಗ್ಯಾಸ್ ನೀಡಿದ್ದಾರಲ್ವಾ, ನೀರು ನೀಡಿದ್ದಾರಲ್ವಾ, ಮೋದಿ ಭಾರತವನ್ನು ಆರ್ಥಿಕತೆಯಲ್ಲಿ ವಿಶ್ವದ ಐದನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ. ಅವರನ್ನು ಮೂರನೆ ಬಾರಿ ಪ್ರಧಾನಿ ಮಾಡಿದರೆ ಭಾರತವನ್ನು ವಿಶ್ವದ ಮೂರನೆ ಆರ್ಥಿಕ ಶಕ್ತಿಯಾಗಿ ಮಾಡುತ್ತಾರೆ ಎಂದರು. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಇಂಡಿ ಒಕ್ಕೂಟ ಭ್ರಷ್ಟಾಚಾರಿಗಳ ಕೂಟವಾಗಿದೆ. ಕಾಂಗ್ರೆಸ್…

Read More

ಬೆಂಗಳೂರು: ಸುಪ್ರೀಂ ಕೋರ್ಟ್ ಸೂಚನೆಯಂತೆ ಉತ್ತರಾಖಾಂಡದಲ್ಲಿ ಪತಂಜಲಿಯ ಕೆಲ ಉತ್ಪನ್ನಗಳಿಗೆ ನಿಷೇಧ ಹೇರಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲೂ ಪತಂಜಲಿ ಉತ್ಪನ್ನ ನಿಷೇಧದ ಭೀತಿ ಎದುರಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ಆದೇಶಿಸಿದ್ದಾರೆ. ಇಂದು ಈ ಬಗ್ಗೆ ಎಕ್ಸ್ ಮಾಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಉತ್ತರಕಾಂಡದ BJP ಸರ್ಕಾರ #Patanjali 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರೀಕ್ಷಿಸಲು ನಾನು ಆದೇಶಿಸಿದ್ದೆ. ಆಗ ತನ್ನ ಮನೆಗೇ ಬೆಂಕಿ ಬಿದ್ದಂತೆ ಚಡಪಡಿಸಿದ್ದ ವಿಪಕ್ಷ ನಾಯಕ ಆರ್.ಅಶೋಕ್ ಪತಂಜಲಿ ಸಂಸ್ಥೆ ‌ಮೇಲೆ ದ್ವೇಷ ಯಾಕೆ ಎಂದು ನನ್ನನ್ನು ಪ್ರಶ್ನಿಸಿದ್ದರು. ಈಗ ಅವರದ್ದೇ ಪಕ್ಷ ಅಧಿಕಾರದಲ್ಲಿರುವ ಉತ್ತರಕಾಂಡ ಸರ್ಕಾರ ಪತಂಜಲಿಯ 14 ಉತ್ಪನ್ನಗಳ ಪರವಾನಿಗೆಯನ್ನೇ ರದ್ದು ಮಾಡಿದೆ. ಈಗ ಅಶೋಕ್‌ರವರು ನನಗೆ ಕೇಳಿದ್ದ ಪ್ರಶ್ನೆಯನ್ನು ಉತ್ತರಕಾಂಡ ಸರ್ಕಾರಕ್ಕೂ ಕೇಳುತ್ತಾರಾ.? ಎಂದು ಪ್ರಶ್ನಿಸಿದ್ದಾರೆ. https://twitter.com/dineshgrao/status/1785158887081181322 ಸುಳ್ಳು ಜಾಹೀರಾತು ನೀಡಿ…

Read More

ದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ. ಸುದೀರ್ಘ ಪತ್ರ ಬರೆದಿರುವ ಅವರು, ನೀವು ಮುಖ್ಯಮಂತ್ರಿ ಯಾಗಿ, ನೀರಾವರಿ ಸಚಿವರಾಗಿ ಗೃಹ ಸಚಿವರಾಗಿ, ಕಾನೂನು ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದೀರಿ, ನೀವು ಶಿಗ್ಗಾವಿಯಲ್ಲಿ ಸುಮಾರು 30 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಮಾಡಿದ್ದೀರಿ, ಕ್ಷೇತ್ರದಲ್ಲಿ ಸಿಮೆಂಟ್ ರಸ್ತೆಗಳು, ಶಿಕ್ಷಣ ಸಂಸ್ಥೆಗಳನ್ನು ನಿರ್ಮಾಣ ಮಾಡಿದ್ದೀರಿ, ಕೊವಿಡ್ ಸಂದರ್ಭದಲ್ಲಿ ನಿಮ್ಮ ಸ್ವಂತ ಮನೆಯನ್ನು ಕೊವಿಡ್ ಕೇಂದ್ರವನ್ನಾಗಿ ಮಾಡಿ ಆಸ್ಪತ್ರೆಗಳ ಮೇಲಿನ ಭಾರ ಕಡಿಮೆ ಮಾಡಿದ್ದೀರಿ. ನೇಕಾರರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಿ, ಆಧುನಿಕ ತಂತ್ರಜ್ಞಾನ ಬಳಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಿದ್ದೀರಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮಾಡಿದ್ದೀರ, ನೀವು ಒಬ್ಬ ಕಾರ್ಯಕರ್ತರಾಗಿ ಪಡೆದ ಅನುಭವ ಜನ ಸೇವಕರಾಗಿ ಮಾಡಿದ…

Read More