Author: kannadanewsnow09

ಉತ್ತರ ಪ್ರದೇಶ: ಜನವರಿ.22, 2024ರ ಇಂದು ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಆಗಲಿದೆ. ಅಲ್ಲದೇ ದೇವಾಲಯದಲ್ಲಿ ಶ್ರೀ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಹಾಗಾದ್ರೇ ಅದರ ಮುಹೂರ್ತದ ವಿವರ ಹೇಗಿದೆ ಅಂತ ಮುಂದೆ ಓದಿ. ಇಂದು ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡುಗಳು ಮತ್ತು 12 ಗಂಟೆ 30 ನಿಮಿ| 32 ಸೆಕೆಂಡುಗಳ ನಡುವಿನ ಅವಧಿಯಲ್ಲಿ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ. ವಿಶೇಷಗಳಲ್ಲಿ ವಿಶೇಷ ಎನ್ನುವಂತೆ ಅತ್ಯಂತ ನಿರ್ಣಾಯಕವಾದ ಪ್ರಾಣ ಪ್ರತಿಷ್ಠಾಪನೆ ಮತ್ತು ನೇತ್ರೋನ್ಮಿಲನ 84 ಸೆಕೆಂಡುಗಳ ಅಲ್ಪಾವಧಿಯಲ್ಲಿ ನಡೆಯಲಿದೆ. ಈ ನಿರ್ಣಾಯಕ 84 ಸೆಕೆಂಡುಗಳು ಮೇಷ ಲಗ್ನದಲ್ಲಿ ಅಭಿಜಿತ್ ಮುಹೂರ್ತವಾಗಿರುತ್ತದೆ. ಹೀಗೆ ಪ್ರಾಣ ಪ್ರತಿಷ್ಠಾಪನೆ ಹಾಗೂ ನೇತ್ರೋನ್ಮಿಲನದ ಕಾರ್ಯಕ್ರಮದ ಶುಭ ಮುಹೂರ್ತವನ್ನು ಸಂಜೀವಿನಿ ಮುಹೂರ್ತ ಅಂತ ಕರೆಯಲಾಗುತ್ತದೆ. ಈ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೇವಲ 84 ಸೆಕೆಂಡುಗಳಲ್ಲಿ ಪ್ರಾಣ ಪ್ರತಿಷ್ಠಾಪನೆ ಮತ್ತು ನೇತ್ರೋನ್ಮಿಲನದಲ್ಲಿ ಪಾಲ್ಗೊಳ್ಳಲಿದ್ದಾರೆ.

Read More

ಉತ್ತರ ಪ್ರದೇಶ: ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕಾಗಿ ಭಾರತ ಮತ್ತು ವಿಶ್ವದಾದ್ಯಂತದ ಹಿಂದೂಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಜನವರಿ 18 ರಂದು 51 ಇಂಚಿನ ಕಪ್ಪು ಕಲ್ಲಿನ ವಿಗ್ರಹವನ್ನು ಗರ್ಭಗುಡಿಯಲ್ಲಿ ಬಟ್ಟೆಯಿಂದ ಮುಚ್ಚಲಾಗಿತ್ತು. ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ಈ ವಿಗ್ರಹದ ಕಣ್ಣುಗಳು ಜನವರಿ 22 ರಂದು ಮಧ್ಯಾಹ್ನ 12.30 ಕ್ಕೆ ಪ್ರತಿಷ್ಠಾಪನೆಯ ಮುಹೂರ್ತದಲ್ಲಿ ಅನಾವರಣಗೊಳ್ಳಲಿವೆ. ಈ ಸಮಾರಂಭದಲ್ಲಿ ಭಾಗವಹಿಸಲು ನಿಮಗೆ ಸಾಧ್ಯವಾಗದಿದ್ದರೆ, ಜ್ಯೋತಿಷ್ಯ ತಜ್ಞ ಪಂಡಿತ್ ಜಗನ್ನಾಥ್ ಗುರೂಜಿ ಕೆಲವು ಸರಳ ಹಂತಗಳನ್ನು ಹಂಚಿಕೊಳ್ಳುತ್ತಾರೆ, ನೀವು ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನದ ಸಮಯದಲ್ಲಿ ನಿಮ್ಮ ಮನೆಯಲ್ಲಿ ರಾಮ್ ಪೂಜೆಯನ್ನು ಮಾಡಬಹುದು. ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಯದಲ್ಲಿ ಮನೆಯಲ್ಲಿ ಪೂಜೆ ಮಾಡುವುದು ಹೇಗೆ? “ಓಂ ರಾಮ್ ರಾಮಾಯ ನಮಃ’ ಎಂದರೆ ‘ಭಗವಾನ್ ರಾಮನಿಗೆ ಜಯ’ ಎಂದರ್ಥ ಮತ್ತು ಇದನ್ನು ಜನವರಿ 22, 2024 ರಂದು ಮಧ್ಯಾಹ್ನ 12:20 ರಿಂದ 12:45 ರವರೆಗೆ ನಡೆಯಲಿರುವ ರಾಮ್ ಲಲ್ಲಾ…

Read More

ಬೆಂಗಳೂರು: ನಿನ್ನೆ ರಾತ್ರಿ ಸಂಭವಿಸಿದಂತ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಪಡೆಯುತ್ತಿದ್ದಂತ ಕರ್ನಾಟಕದ ಖ್ಯಾತ ಪುಟ್ ಬಾಲ್ ಆಟಗಾರ ಮೊನೀಶ್.ಕೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ ಎಂದು ತಿಳಿಸಿದ್ದಾರೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. https://twitter.com/CMofKarnataka/status/1749096921720148418 https://kannadanewsnow.com/kannada/jai-shri-ram-on-ambani-house-jai-shri-ram-written-on-ambani-house/ https://kannadanewsnow.com/kannada/covid-19-89-people-recover-from-covid-19-74-recoveries-in-the-state-today/

Read More

ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡೋದಿಲ್ಲ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಈ ನಡುವೆಯೂ ಕಾಂಗ್ರೆಸ್ ಸರ್ಕಾರವಿರೋ ಹಿಮಾಚಲ ಪ್ರದೇಶದಲ್ಲೇ ರಜೆ ಕೊಟ್ಟಿದ್ದಾರೆ. ನೀವ್ಯಾಕೆ ಕೊಡ್ತಾ ಇಲ್ಲ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಿಎಂ ಸಿದ್ಧರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ, ಹಿಮಾಚಲ ಪ್ರದೇಶದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ರಾಮಶ್ರದ್ಧೆಯ ಹೃದಯಗಳ ನಿರೀಕ್ಷೆಗೆ ಅಲ್ಲಿನ ಮುಖ್ಯಮಂತ್ರಿಗಳು ತಮ್ಮ ವಿವೇಚನೆಯ ಬಾಗಿಲು ತೆರೆದು ಸಾರ್ವತ್ರಿಕ ರಜೆ ಘೋಷಿಸಿ ರಾಷ್ಟ್ರೀಯತೆ ಗೌರವಿಸಿದ್ದಾರೆ ಎಂದಿದ್ದಾರೆ. ನಿಮ್ಮ ಸರ್ಕಾರದ ರಾಮ ವಿರೋಧಿ ಮನಸ್ಸುಗಳ ವರ್ತನೆ ಹಾಗೂ ನಿಂದನೆಗಳ ಪರಿಣಾಮ ಈಗಾಗಲೇ ಕಳಂಕದ ಭಾರ ನಿಮ್ಮ ಹೆಗಲೇರಿದೆ. ಈಗಲೂ ಕಾಲಮಿಂಚಿಲ್ಲ ನಿಮ್ಮ ಮೈಸೂರಿನಿಂದಲೇ ಬಾಲ ರಾಮ ಅಯೋಧ್ಯೆಗೆ ತೆರಳಿದ್ದಾನೆ ಶತಕೋಟಿ ಜನರ ಹೃದಯಗಳ ನಾಳೆ ಆವರಿಸಿಕೊಳ್ಳಲಿದ್ದಾನೆ ಎಂದು ತಿಳಿಸಿದ್ದಾರೆ. ಈ ಪವಿತ್ರ ಕ್ಷಣಗಳನ್ನು ಕಣ್ತುಂಬಿಕೊಂಡು ದಿನವಿಡೀ ರಾಮ ಸ್ಮರಣೆ…

Read More

ಬೆಂಗಳೂರು: ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ ರಾಜ್ಯದ 125 ಗ್ರಾಮಗಳ ಸುಮಾರು 3,27,192 ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ಸಂಪರ್ಕ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ, ಆರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ 392 ಕೋಟಿ ರೂ.ಗಳಿಗೂ ಅಧಿಕ ಹಣವನ್ನು ಮಂಜೂರು ಮಾಡಲಾಗಿದೆ, ಈ ಕಾರ್ಯಕ್ರಮದಿಂದ ರಾಜ್ಯದ 171 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಸಂಪೂರ್ಣ ವಿವರ ಈ ಕೆಳಗಿನಂತಿದೆ : • ಬಂಟ್ವಾಳ ಮತ್ತು ಉಳ್ಳಾಲ, ದ.ಕನ್ನಡ ಜಿಲ್ಲೆ ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಗ್ರಾಮಗಳ ಸಂಖ್ಯೆ : 26 ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಜನಸಂಖ್ಯೆ : 1,60,820 ಒಟ್ಟು ಅನುದಾನ : ₹245.00 ಕೋಟಿ • ಅಂತರಸಂತೆ, ಹೆಚ್.ಡಿ ಕೋಟೆ ತಾಲೂಕು, ಮೈಸೂರು ಜಿಲ್ಲೆ ಕುಡಿಯುವ ನೀರಿನ…

Read More

ತುಮಕೂರು : ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿ, ಒಟ್ಟು ನಮ್ಮ ಸರ್ಕಾರದಿಂದ ಕ್ವಿಂಟಾಲಿಗೆ 1500 ರೂ.ಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದರು. ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರ್ಕಾರ ಕೊಬ್ಬರಿ ಬೆಳೆಗಾರರಿಗೆ 1500 ಹೆಚ್ಚಾಗಿ ನೀಡಲಿದೆ ಎಂದರು. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ರಜೆ ಇಲ್ಲ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಚಾರ ಮಾಡಲಾಗುವುದು ಹಿಂದಿನ ಸರ್ಕಾರ ಜನವರಿ 21 ನ್ನು ದಾಸೋಹ ದಿನ ಎಂದು ಆಚರಿಸಲು ಘೋಷಣೆ ಮಾಡಿದ್ದರ ಕುರಿತು ಮಾತನಾಡಿದ…

Read More

ಬೆಂಗಳೂರು: ಎರಡೂ ಪಕ್ಷಗಳ ಮೈತ್ರಿ, ವಿಧಾನ ಪರಿಷತ್‌ʼನ 6 ಸ್ಥಾನಗಳ ಚುನಾವಣೆ, ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಸೇರಿ ಹಲವಾರು ವಿಷಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಜೆಡಿಎಸ್ ನಾಯಕರ ತಂಡವು ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ ಚರ್ಚೆ ನಡೆಸಿತು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಜಾತ್ಯತೀತ ಜನತಾದಳದ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ, ವಿಧಾನ ಪರಿಷತ್ ಸದಸ್ಯರಾದ ಭೋಜೆಗೌಡರು, ಕೆ.ಎ.ತಿಪ್ಪೇಸ್ವಾಮಿ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು. ಹಾಗೆಯೇ ಬಿಜೆಪಿ ವತಿಯಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರು, ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್.ಅಶೋಕ, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರುಗಳು ಭಾಗವಹಿಸಿದ್ದರು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು; ಯಡಿಯೂರಪ್ಪ ಅವರ ಮನೆಯಲ್ಲಿ ಎರಡೂ…

Read More

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಇಂದು ಹೊಸದಾಗಿ 89 ಜನರಿಗೆ ಕೊರೋನಾ ಸೋಂಕು ತಗುಲಿದ್ದರೇ, ಸೋಂಕಿತರಾದಂತ 74 ಮಂದಿ ಗುಣಮುಖರಾಗಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕಲಬುರ್ಗಿ, ಮಂಡ್ಯ, ರಾಯಚೂರು, ರಾಮನಗರ, ಉತ್ತರ ಕನ್ನಡ ಹಾಗೂ ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ ಅಂತ ಹೇಳಿದೆ. ವಿಜಯನಗರದಲ್ಲಿ 05, ತುಮಕೂರು 08, ಶಿವಮೊಗ್ಗ 03, ಮೈಸೂರು 14, ಕೊಪ್ಪಳ 02, ಕೊಡಗು 04, ಹಾಸನ 05, ಗದಗ ಮತ್ತು ಧಾರವಾಡ 02, ಬೆಂಗಳೂರು ನಗರ 16 ಹಾಗೂ ಬೆಂಗಳೂರು ಗ್ರಾಮಾಂತರ 04 ಸೇರಿದಂತೆ 89 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಅಂತ ಹೇಳಿದೆ. ಕಳೆದ 24 ಗಂಟೆಯಲ್ಲಿ 74 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಈಗ 497 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದೆ. ಅಲ್ಲದೇ ಇಂದು ಸೋಂಕಿನಿಂದ ದಕ್ಷಿಣ ಕನ್ನಡ…

Read More

ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ| ಈ ಜಪ ನಾಮ ಗೀತೆ ಹಾಡಿದರೆ ಮನಸ್ಸು ನೆಮ್ಮದಿಯ ಹಾದಿ ತಲುಪುತ್ತದೆ.. ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ|| ರಾಮ ರಾಮ ರಾಮ ರಾಮ ನಿನ್ನಿಷ್ಟದಂತೆನ್ನ ಇಟ್ಟಿರುವೆ ರಾಮ| ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ| ಕಷ್ಟಗಳ ಕೊಡಬೇಡ ಎನ್ನಲಾರೆ ರಾಮ| ಕಷ್ಟ ಸಹಿಸುವ ಸಹನೆ ಕೊಡು ನನಗೆ ರಾಮ| ಕಷ್ಟ ಸಹಿಸುವ ಸಹನೆ ಇನ್ನಷ್ಟು ರಾಮ| ಕಷ್ಟ ಸಹಿಸುವ ಸಹನೆ ನಿನ್ನಷ್ಟು ರಾಮ| ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ| ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ|| ಒಳತಿನೆಡೆ ಮುನ್ನೆಡೆವ ಮನವಕೊಡು ರಾಮ| ಸೆಳೆತಕ್ಕೆ ಸಿಗದಂತೆ ಸ್ಥಿರತೆ ಕೊಡು ರಾಮ| ನಿನ್ನೆಗಳ ಪಾಪಗಳ ಸೊನ್ನೆಯಾಗಿಸು ರಾಮ| ನಾಳೆಗಳು ಪುಣ್ಯಗಳ ಹಾದಿಯಾಗಲಿ ರಾಮ| ನನ್ನ ಬಾಳಿಗೆ ನಿನ್ನ ಹಸಿವ ಕೊಡು ರಾಮ| ನನ್ನ ತೋಳಿಗೆ ನಿನ್ನ ಕಸುವ ಕೊಡು ರಾಮ| ಕಣ್ಣು ಕಳೆದರು ನಿನ್ನ ಕನಸು ಕೊಡು ರಾಮ| ನನ್ನ ಹರಣಕೆ ನಿನ್ನ ಚರಣ ಕೊಂಡು ರಾಮ| ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|…

Read More

ಬೆಂಗಳೂರು: ರಾಜ್ಯದಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಅವಕಾಶ ಇಲ್ಲದಿದ್ದರೂ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ವಿಭಾಗದ ಮುಖ್ಯಸ್ಥ ಡಾ.ಎಚ್. ಎಲ್. ವಿಶ್ವನಾಥ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಬೋರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಡಾ.ಎಚ್.ಎಂ.ಶ್ರೀಕಾಂತ್, ವೈದ್ಯ ವೃತ್ತಿ ಬದಲು ‘ಡಿ’ದರ್ಜೆ ನೌಕರರಂತೆ ಕಡತ ನಿರ್ವಹಣೆಯಲ್ಲಿ ತೊಡಗಿರುವ ಕುರಿತು ಜನತಾ ಪಕ್ಷ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್‌ಗೆ ದೂರು ಕೊಟ್ಟಿತ್ತು. ದೂರಿನ್ವಯ ತನಿಖೆ ನಡೆಸಿ ವರದಿ ನೀಡುವಂತೆ ಡಾ.ವಿಶ್ವನಾಥ್ ನೇತೃತ್ವದಲ್ಲಿ ಸಮಿತಿ ರಚಿಸಿ ವೈದ್ಯಕೀಯ ಶಿಕ್ಷಣ ನಿರ್ದೇಶಾಲಯ ಆದೇಶಿಸಿತ್ತು. ಅದರಂತೆ, ಸಮಿತಿಯು ಶುಕ್ರವಾರ ದೂರುದಾರರನ್ನು ಕರೆದು ಅಗತ್ಯ ಮಾಹಿತಿ ಪಡೆದಿತ್ತು. ಶ್ರೀಕಾಂತ್ ವಿರುದ್ಧ ಕೇಳಿಬಂದಿರುವ ದೊಡ್ಡಮಟ್ಟದ ಅವ್ಯವಹಾರವನ್ನು ಮುಚ್ಚಿಹಾಕಲು ರಾಜಕೀಯ ಪ್ರಭಾವ ಬೀರಿ ವಿಶ್ವನಾಥ್ ಅವರನ್ನು ಉದ್ದೇಶಪೂರ್ವಕವಾಗಿ ವರ್ಗಾವಣೆ ಮಾಡಲಾಗಿದೆ. ದೂರಿನ ವಿವರ ಬೌರಿಂಗ್ ಸಂಸ್ಥೆ ಅಧೀನದ ಅಟಲ್ ಬಿಹಾರಿ ವಾಜಪೇಯಿ…

Read More