Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಶ್ರಮಕ್ಕೆ ತಕ್ಕ ಫಲ, ದುಡಿಮೆಗೆ ತಕ್ಕ ಸಂಬಳ ಇಲ್ಲದ ಸಮಾಜದಲ್ಲಿ ಗ್ಯಾರಂಟಿಗಳು ದುಡಿಯುವ ವರ್ಗಗಳ ಪಾಲಿನ ಪ್ರಾಣವಾಯು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಪತ್ರಿಕಾ ಭವನದಲ್ಲಿ “ಬಡವರ ಭಾಗ್ಯವಿಧಾತ ಸಿದ್ದರಾಮಯ್ಯ” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕಾರ್ಪೋರೇಟ್ ಗಳಿಗೆ ಫ್ರೀಬಿ ಕೊಟ್ಟರೆ ಡೆವಲಪ್ಮೆಂಟು ಅಂತಲೂ, ಶ್ರಮಿಕರಿಗೆ ಕೊಟ್ಟರೆ ಆರ್ಥಿಕತೆಗೆ ನಷ್ಟವೆಂದು ಹೇಳುವವರಿಗೆ ಗ್ರಹಿಕೆ ಮತ್ತು ದೃಷ್ಟಿದೋಷ ಎಂದು ಟೀಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಜಾರಿ ಮಾಡಿದ ಗ್ಯಾರಂಟಿಗಳು ಕನ್ನಡ ನೆಲದ ಬಡವರು ಮತ್ತು ಮಧ್ಯಮ ವರ್ಗಗಳ ಪಾಲಿನ ಪ್ರಾಣವಾಯು ಆಗಿವೆ. ಹಲವಾರು ಆರ್ಥಿಕ ಸಮೀಕ್ಷೆಗಳು ಈ ಮಾತನ್ನು ಖಚಿತ ಪಡಿಸಿವೆ ಎಂದರು. ಸಾಮಾಜಿಕ ನ್ಯಾಯದ ಬದ್ಧತೆ, ಅಂಬೇಡ್ಕರ್ ಆಶಯ, ಬಸವಣ್ಣನವರ ನ ಮಾರ್ಗ ಮತ್ತು ರಾಜಕೀಯ ಹಿತಾಸಕ್ತಿಗಳು ಸಿದ್ದರಾಮಯ್ಯ ಅವರ ಭಾಗ್ಯಗಳ ಹಿಂದೆ ಕೆಲಸ ಮಾಡಿವೆ ಎಂದು ಕೆವಿಪಿ ವಿಶ್ಲೇಷಣೆ ಮಾಡಿದರು. ಗ್ಯಾರಂಟಿಗಳ ಮಹತ್ವ ಏನು ಎಂದು ಅರ್ಥವಾಗಬೇಕಾದರೆ, ಇವು ಜಾರಿಯಾದ…
ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ವಿರೋಧ…
ಕೊನೆಯಿಲ್ಲದ ಆರ್ಥಿಕ ಸಂಕಷ್ಟದಲ್ಲಿರುವವರು ಮಾಸದಲ್ಲಿ ಈ ಒಂದು ದಿನ ಕುಬೇರನನ್ನು ಸ್ಮರಿಸಿ ಪೂಜೆಯನ್ನು ಹೀಗೆ ಮಾಡಿ. ಎಲ್ಲಾ ಹಣಕಾಸಿನ ತೊಂದರೆಗಳು ಮತ್ತು ತೊಂದರೆಗಳನ್ನು ತೊಡೆದುಹಾಕುವ ಮೂಲಕ ನೀವು ಕುಬೇರ ಯೋಗದಿಂದ ಬದುಕಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ…
ಶಿವಮೊಗ್ಗ: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಂದಲೇ ಭೂ ಮಾಫಿಯಾ ದಂಧೆ. ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಠಿಸಿ ಅನಾಮಧೇಯ ವ್ಯಕ್ತಿಯ ಹೆಸರಿಗೆ ಮಾಡಲು ಪ್ರಯತ್ನ. ಈ ಘಟನೆ ಸಾಗರದಲ್ಲಿ ಬೆಳಕಿಗೆ ಬಂದಿದೆ. ಅದೂ ಸರ್ಕಾರಿ ಅಧಿಕಾರಿಯಿಂದಲೇ ಭೂಗಳ್ಳರ ಜೊತೆಗೆ ಸರ್ಕಾರಿ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ತಹಶೀಲ್ದಾರರಿಗೆ ಬರೆದಿರುವಂತ ಪತ್ರದಿಂದಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟದ ಸಮೀಪದ ಸರ್ವೆ ನಂ.12ರ ಸರ್ಕಾರಿ ಭೂಮಿಯನ್ನೇ ಭೂಗಳ್ಳರಿಗೆ ನಕಲಿ ದಾಖಲೆ ಸೃಷ್ಠಿಸಿ ಲಪಟಾಯಿಸೋದಕ್ಕೆ ಯತ್ನಿಸಿದಂತ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಸಾಗರದ ಹಿರಿಯ ಪತ್ರಕರ್ತ ಮಹೇಶ್ ಹೆಗಡೆ ಅವರು ಜನ ಹೋರಾಟ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ವರದಿಯನ್ನು ಮಾಡಿದ್ದರಿಂದ ಇಡೀ ಪ್ರಕರಣ ಬಟಾ ಬಯಲಾಗಿದೆ. ಸರ್ಕಾರಿ ಭೂಮಿ ಕಬಳಿಕೆಗೆ ನಕಲಿ ದಾಖಲೆ ಸೃಷ್ಟಿಯ ಬಹುದೊಂಡ ಹಗರಣ ಬೆಳಕಿಗೆ ಬಂದಿದೆ. ಏನಿದು ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಠಿಸೋ ಕೇಸ್? ಸಾಗರ ತಾಲ್ಲೂಕಿನಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವಂತ ಭೂಗಳ್ಳರು ಸರ್ಕಾರಿ ಜಾಗ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಖಾಸಗಿ ಅನುದಾನಿತ ಶಾಲೆಗಳಲ್ಲಿ ಖಾಲಿ ಇದ್ದಂತ ಶಿಕ್ಷಕರ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಈಗ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ 2015 ರಿಂದ 2020ರವರೆಗೆ ನಿವೃತ್ತಿಯಿಂದ ತೆರವಾಗಿರುವಂತ ಹುದ್ದೆ ತುಂಬಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಡಳಿತ ಮಂಡಳಿಗಳಿಗೆ ಅನುಮತಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಪತ್ರ ದಿನಾಂಕ:02.01.2025 ರ ಪುತಿಯನ್ನು ಇದರೊಂದಿಗೆ ಲಗತ್ತಿಸಿದೆ. ಸಿ.ಆ.ಸು.ಇ 388 ಸನನಿ 2024, ದಿನಾಂಕ:25-11-2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ ಎಂದಿದ್ದಾರೆ. ಇನ್ನೂ ಆಯ್ಕೆ ಪ್ರಾಧಿಕಾರಗಳು/ನೇಮಕಾತಿ ಪ್ರಾಧಿಕಾರಗಳು ಪರಿಶಿಷ್ಟ ಜಾತಿಯ ಒಳ…
ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿ ಇಂದಿನಿಂದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರಂಭಗೊಳ್ಳಲಿದೆ. ಈ ಪಂದ್ಯಾವಳಿ ನೋಡಲು ತೆರಳೋರಿಗೆ ನಮ್ಮ ಮೆಟ್ರೋ, ಬಿಎಂಟಿಸಿ ಬಸ್ ಸಂಚಾರ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಟಾಟಾ ಮಹಿಳಾ ಪ್ರೀಮಿಯರ್ ಲೀಗ್ (WPL) T-20 ಕ್ರಿಕೆಟ್ ಪಂದ್ಯಗಳು ಬೆಂಗಳೂರಿನಲ್ಲಿ ಫೆಬ್ರವರಿ 21, 22, 24, 25, 26, 27, 28 ಮತ್ತು ಮಾರ್ಚ್ 01, 2025 ರಂದು ನಡೆಯಲಿವೆ. ಕ್ರಿಕೆಟ್ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು ಹಿಂತಿರುಗಲು ಅನುಕೂಲವಾಗುವಂತೆ, ಬಿ.ಎಂ.ಆರ್.ಸಿ.ಎಲ್ ಈ ಮೇಲೆ ತಿಳಿಸಿದ ದಿನಗಳಲ್ಲಿ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಿದೆ ಎಂದಿದೆ. ನೇರಳೆ ಮತ್ತು ಹಸಿರು ಮಾರ್ಗಗಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಾದ ಚಲ್ಲಘಟ್ಟ, ವೈಟ್ಫೀಲ್ಡ್, ಮಾದಾವರ ಮತ್ತು ರೇಷ್ಮೆ ಸಂಸ್ಥೆಯಿಂದ ಕೊನೆಯ ರೈಲು ಸೇವೆ ರಾತ್ರಿ 11.20 ರವರೆಗೆ ಮತ್ತು ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ…
ಬೆಂಗಳೂರು: ಇಂದಿನಿಂದ ಮಾರ್ಚ್.1ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಮಹಿಳಾ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಸಂಚಾರದ ಮಾರ್ಗದ ಮಾಹಿತಿಯನ್ನು ನೀಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐ.ಪಿ.ಎಲ್ 2024 ಕ್ರಿಕೆಟ್ TATA WPL-03 – 2025 ಕ್ರಿಕೆಟ್ ಪಂದ್ಯಾವಳಿಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ದಿನಾಂಕ:21/02/2025 ರಿಂದ01.03.2025 ರವೆಗೆ ಸಂಜೆ 03.00 ಗಂಟೆಯಿಂದ ರಾತ್ರಿ 11.00 ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ. 1. ಕ್ಲೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. 2. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. 3. ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ 4. ರಾಜಭವನ…
ಬೆಂಗಳೂರು: ನಿನ್ನೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣದ ಬದಲಾಗಿ 5 ಕೆಜಿ ಅಕ್ಕಿ ವಿತರಣೆ, ಅಧಿಕ ಬಡ್ಡಿ ನಿಷೇಧ ತಿದ್ದುಪಡಿ ಕಾಯ್ದೆ ಸೇರಿದಂತೆ 5 ಮಹತ್ವದ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಮಗಾರಿಗಳ ಅಂದಾಜು ತಯಾರಿ ಸಮಿತಿ ರಚನೆ ಮಾಡಲಾಗಿತ್ತು. ಗುರುಪ್ರಸಾದ್ ಅನ್ನೋರ ನೇತೃತ್ವದಲ್ಲಿ ಈ ಸಮಿತಿ ರಚನೆ ಆಗಿತ್ತು. ಗುರುವಾರದ ಸಂಪುಟ ಸಭೆಯಲ್ಲಿ ಈ ವರದಿ ಪರಿಶೀಲಿಸಿ ಮುಂದುವರೆಯಲು ನಿರ್ಧರಿಸಲಾಗಿದೆ. ಡಿಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಚರ್ಚಿಸಿ ಮುಂದಿನ ಸಚಿವ ಸಂಪುಟಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು. ಹುನಗುಂದದಲ್ಲಿ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆ ನಿರ್ಮಿಸಲು ಸಂಪುಟದ ಒಪ್ಪಿಗೆ ನೀಡಲಾಗಿದೆ. ಮೈಸೂರು ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಯೋಜನೆ ಅಡಿ 70 ಕೋಟಿ ವೆಚ್ಚದ ಸೀಡ್ ಫಂಡ್ ಮೀಸಲಿಡಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ಮುಖ್ಯ ಬೇಡಿಕೆಯಾದಂತ ಓಪಿಎಸ್ ಯೋಜನೆಯನ್ನು ಜಾರಿಗೊಳಿಸಿಯೇ ತೀರುತ್ತೇವೆ. ನೀವು ಬಿಟ್ಟರೂ ನಾವು ಬಿಡಲ್ಲ. ಆದರೇ ಸ್ವಲ್ಪ ತಾಳ್ಮೆ ಇರಲಿ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಗುರುವಾರದಂದು ಬೆಂಗಳೂರು ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. ಓಲ್ಡ್ ಪೆನ್ಷನ್ ಸ್ಕೀಮ್ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಅಂಜುಮಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ನೀಡುವಂತ ವರದಿಯನ್ನು ಪರಿಶೀಲಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಓಪಿಎಸ್ ಜಾರಿ ಭರವಸೆ ನೀಡಲಾಗಿದೆ. ಒಪಿಎಸ್ ಸ್ಕೀಮ್ ಜಾರಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಎನ್ ಪಿ ಎಸ್ ರದ್ದುಗೊಳಿಸಿ ಒಪಿಎಸ್ ಜಾರಿಯ ವಿಚಾರವನ್ನು ನೀವು ಬಿಟ್ಟರೂ ನಾವು ಬಿಡೋದಿಲ್ಲ. ಆದರೇ ಸ್ವಲ್ಪ ತಾಣ್ಮೆ ಇರಲಿ ಎಂಬುದಾಗಿ ತಿಳಿಸಿದರು. ಓಪಿಎಸ್ ಜಾರಿ ವಿಚಾರವಾಗಿ ಡಿಸಿಎಂ ಭರವಸೆ ನೀಡಿದಾಗ ನೌಕರರು ಡಿಕೆ,…
ಬೆಂಗಳೂರು: ಮಾರ್ಚ್.1ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಮಾರ್ಚ್.21ರಿಂದ ಏಪ್ರಿಲ್.4ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ನಡೆಯಲಿದೆ. ಈ ಪರೀಕ್ಷೆಯ ಕುರಿತಂತೆ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಹತ್ವದ ಮಾಹಿತಿಯನ್ನು ನೀಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-1 ಅನ್ನು ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆಸಲಾಗುತ್ತಿದೆ ಎಂದಿದೆ. ಈಗಾಗಲೇ ಪರೀಕ್ಷಾ ವೇಳಾಪಟ್ಟಿಯನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ಸಂಬಂಧ ಪಟ್ಟಂತೆ ಅಂಕಿ ಅಂಶಗಳನ್ನು ಈ ಕೆಳಕಂಡಂತಿವೆ ಎಂದಿದೆ. 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,61,474 ವಿದ್ಯಾರ್ಥಿಗಳು ಹೊಸಬರು. 34,071 ಪುನರಾವರ್ತಿತ ವಿದ್ಯಾರ್ಥಿಗಳು. 18,317…












