Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿರುವಂತ ಮಣಿಪಾಲ್ ಆಸ್ಪತ್ರೆಗೆ ಮಾಜಿ ಸಿಎಂ ಎಸ್ಎಂ ಕೃಷ್ಣಾ ಅವರನ್ನು ಆರೋಗ್ಯದಲ್ಲಿ ಏರುಪೇರಾದ ಪರಿಣಾಮ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ಆಸ್ಪತ್ರೆಯ ವೈದ್ಯರು ಬುಲೆಟಿನ್ ಮೂಲಕ ತಿಳಿಸಿದ್ದಾರೆ. ಏಪ್ರಿಲ್.21ರಂದು ಎಸ್ ಎಂ ಕೃಷ್ಣ ಅವರಿಗೆ ಜ್ವರ, ಕೆಮ್ಮ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆಯ ನಂತ್ರ ಅವರು ಡಿಸ್ಚಾರ್ಜ್ ಆಗಿದ್ದರು. ಆದ್ರೇ ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಪರಿಣಾಮ, ಮತ್ತೆ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. https://kannadanewsnow.com/kannada/pm-modis-next-target-is-zero-electricity-bill-installation-of-solar-panel-in-every-household/ https://kannadanewsnow.com/kannada/pocso-case-muruga-sri-surrenders-before-court/
ಬೆಂಗಳೂರು: ಹಾಸನ ಪ್ರಕರಣದ ವಿರುದ್ಧ ಪ್ರತಿಭಟನೆ ನಡೆಸುವ ಭರದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಗೌರವಕ್ಕೆ ಧಕ್ಕೆ ಉಂಟು ಮಾಡಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಪಕ್ಷವು ಪೋಲೀಸ್ ಆಯುಕ್ತರಿಗೆ ದೂರು ನೀಡಿದೆ. ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ಅವರ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದೆ. ಹಾಸನ ಜಿಲ್ಲೆಯಲ್ಲಿ ನಡೆದಿರುವ ಪ್ರಕರಣಕ್ಕೆ ಸಂಬಂಧಪಟ್ಟು ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲ ಪುರುಷ, ಮಹಿಳೆಯರು ಬೆಂಗಳೂರಿನಲ್ಲಿ ಭಾನುವಾರ (28-4-2024) ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆ ನಡೆಸಿರುವುದು ಸರಿಯಷ್ಟೇ. ಈ ಪ್ರಕರಣದ ಬಗ್ಗೆ ಅವರು ಪ್ರತಿಭಟನೆ ಮಾಡುವ ವಿಚಾರದ ಬಗ್ಗೆ ನಮ್ಮ ಪಕ್ಷಕ್ಕೆ ಯಾವುದೇ ತಕರಾರು, ಆಕ್ಷೇಪ ಇರುವುದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪುರುಷರು, ಮಹಿಳೆಯರು…
ಬೆಂಗಳೂರು: ನಗರದಲ್ಲಿನ ಪೊಲೀಸ್ ಠಾಣೆಯೊಂದರಲ್ಲಿ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ನಿವಾಸದ ಗೋಡೆಯ ಮೇಲೆಯೇ ದೇಶ ವಿರೋಧಿ ಬರಹ ಬರೆದಿರೋದಾಗಿ ತಿಳಿದು ಬಂದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬಂಡಾಪುರದಲ್ಲಿ ಪೊಲೀಸ್ ಪೇದೆ ಮುನಿರಾಜು ಎಂಬುವರ ಮನೆಯ ಗೋಡೆಯ ಮೇಲೆ ದೇಶ ವಿರೋಧಿ ಬರಹವನ್ನು ಬರೆದಿರೋದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವಂತ ಮುನಿರಾಜು ಮನೆಯ ಗೋಡೆಯ ಮೇಲೆಯೇ ದೇಶ ವಿರೋಧಿ ಬರಹ ಬರೆದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/prajwal-revanna-pornography-video-case-victims-relatives-allege-she-is-not-well/ https://kannadanewsnow.com/kannada/ii-puc-exam-2-25790-students-appear-4609-absent-on-day-1/
ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡಿರುವಂತ ಸಂತ್ರಸ್ತ ಮಹಿಳೆ ಸರಿಯಿಲ್ಲ. ದೇವೇಗೌಡರ ಕುಟುಂಬಕ್ಕೆ ಕಪ್ಪುಚುಕ್ಕೆ ತರೋದಕ್ಕಾಗಿ ದೂರು ನೀಡಿದ್ದಾರೆ ಎಂಬುದಾಗಿ ಸಂತ್ರಸ್ತ ಮಹಿಳೆಯ ಸಂಬಂಧಿಕರೇ ಗಂಭೀರ ಆರೋಪ ಮಾಡಿದ್ದಾರೆ. ಇಂದು ಹಾಸನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿದಂತ ಸಂತ್ರಸ್ತ ದೂರುದಾರ ಮಹಿಳೆಯ ಸಂಬಂಧಿಕರ ಕುಟುಂಬಸ್ಥರು, ಪ್ರಜ್ವಲ್ ರೇವಣ್ಣ, ಹೆಚ್.ಡಿ ರೇವಣ್ಣ ಅವರ ವಿರುದ್ಧ ದೂರು ನೀಡಿರುವಂತ ಮಹಿಳೆ ಸರಿಯಿಲ್ಲ. ತುಂಬಾ ಸಾಲ ಮಾಡಿಕೊಂಡಿದ್ದಾರೆ. ಜಮೀನು ಸಹ ಮಾರಾಟ ಮಾಡಿದ್ರು ಎಂದರು. ದೇವೇಗೌಡ ಅವರ ಕುಟುಂಬಕ್ಕೆ ಕಪ್ಪುಚುಕ್ಕೆ ತರೋದಕ್ಕಾಗಿಯೇ ದೂರು ನೀಡಿದ್ದಾರೆ. 5 ವರ್ಷಗಳ ಹಿಂದೆ ಸುಮ್ಮನೇ ಇದ್ದು, ಚುನಾವಣೆ ವೇಳೆ ದೂರು ನೀಡಿದ್ದಾರೆ. ಸಂತ್ರಸ್ತೆಯನ್ನು ಹೆದರಿಸಿ ಕರೆದುಕೊಂಡು ಹೋಗಿ ದೂರು ಕೊಡಿಸಿದ್ದಾರೆ. ರೇವಣ್ಣ ಕುಟುಂಬ ನಮಗೆ ಸಂಬಂಧಿಕರು. ಸುಳ್ಳು ದೂರು ನೀಡಿದ್ದಾರೆ ಎಂಬುದಾಗಿ ಹೇಳಿದರು. ಅಂದಹಾಗೇ ಹಾಸನ ಜಿಲ್ಲೆ ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ದೂರು ನೀಡಿರುವ ಮಹಿಳೆ…
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಮೊದಲ ದಿನದ ಪರೀಕ್ಷೆ ನಡೆಯಿತು. ಇಂದು ಕನ್ನಡ ಹಾಗೂ ಅರೇಬಿಕ್ ಪರೀಕ್ಷೆಗಳು ನಡೆದವು. ಮೊದಲ ದಿನದ ಪರೀಕ್ಷೆಗೆ 25,790 ವಿದ್ಯಾರ್ಥಿಗಳು ಹಾಜರಾದ್ರೇ, 4609 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಪರೀಕ್ಷೆಗಳ ವಿಭಾಗದಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 29-04-2024ರಂದು ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಿತು. ಕನ್ನಡ ಮತ್ತು ಅರೇಬಿಕ್ ಪರೀಕ್ಷೆಯನ್ನು ನಡೆಸಲಾಯಿತು ಎಂದಿದೆ. ಬೆಂಗಳೂರು ನಾರ್ಥ್ ನಲ್ಲಿ ನೋಂದಾಯಿಸಿಕೊಂಡ 2183 ವಿದ್ಯಾರ್ಥಿಗಳಲ್ಲಿ 1772 ಮಂದಿ ಹಾಜರಾದ್ರೇ, 411 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಬೆಂಗಳೂರು ಸೌಥ್ ನಲ್ಲಿ 2392 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ 249 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ತಿಳಿಸಿದೆ. ಇಂದಿನ ಕನ್ನಡ ಮತ್ತು ಅರೇಬಿಕ್ ವಿಷಯಗಳ ಪರೀಕ್ಷೆಗೆ 30399 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 25790 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಆದ್ರೇ ವಿವಿಧ ಕಾರಣಗಳಿಗಾಗಿ 4609 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.84.84 ರಷ್ಟು ವಿದ್ಯಾರ್ಥಿಗಳ ಹಾಜರಾತಿ ದೃಢೀಕರಣವಾಗಿದೆ ಎಂದು ತಿಳಿಸಿದೆ. https://kannadanewsnow.com/kannada/pocso-case-muruga-sri-surrenders-before-court/ https://kannadanewsnow.com/kannada/pm-modis-next-target-is-zero-electricity-bill-installation-of-solar-panel-in-every-household/
ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ದಾಖಲಾದಂತ ಪ್ರಕರಣ ಸಂಬಂಧ ಆರೋಪಿಯಾಗಿರುವಂತ ಮುರುಘಾ ಮಠದ ಶಿವಮೂರ್ತಿ ಶರಣರು, ಇಂದು ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಏಪ್ರಿಲ್.22ರಂದು ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದಂತ ಪ್ರಕರಣ ಸಂಬಂಧ ಮುರುಘಾ ಶ್ರೀಗಳಿಗೆ ಹೈಕೋರ್ಟ್ ನೀಡಿದ್ದಂತ ಷರತ್ತು ಬದ್ದ ಜಾಮೀನಿಗೆ ನಾಲ್ಕು ತಿಂಗಳು ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಅಲ್ಲದೇ ವಾರದೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು. ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ 2.20ಕ್ಕೆ ಚಿತ್ರದುರ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾದರು. ಅಲ್ಲದೇ ಜಿಲ್ಲಾ ನ್ಯಾಯಾಲಯಕ್ಕೆ ಮುರುಘಾ ಮಠದ ಶಿವಮೂರ್ತಿ ಶರಣರು ಶರಣಾದರು. https://kannadanewsnow.com/kannada/sslc-exam-result-to-be-declared-on-may-8-heres-the-viral-photo-real-truth/ https://kannadanewsnow.com/kannada/big-news-sc-seeks-information-from-centre-on-uniform-rates-in-private-hospitals/
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆ ನೀಡಿದ್ದರ ಬಗ್ಗೆ ಬಿಗ್ ಅಪ್ ಡೇಟ್ ನಿಮ್ಮ ಕನ್ನಡ ನ್ಯೂಸ್ ನೌ ನೀಡಲಾಗಿತ್ತು. ಈಗ ಸೋಷಿಯಲ್ ಮೀಡಿಯಾದಲ್ಲಿ ಮೇ.8ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ ಎನ್ನೋ ವೈರಲ್ ಪೋಟೋ ಬಗ್ಗೆ ಸತ್ಯಾಸತ್ಯತೆ ನಿಮಗೆ ತಿಳಿಸಲಿದೆ ಆ ಬಗ್ಗೆ ಮುಂದೆ ಓದಿ. ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಎಸ್ ಎಸ್ ಎಲ್ ಸಿ ಪರೀಕ್ಷೆ ಯಾವಾಗ ಪ್ರಕಟವಾಗಲಿದೆ ಎಂಬುದಾಗಿ ನಿಮ್ಮ ಕನ್ನಡ ನ್ಯೂಸ್ ನೌ ಎಡಿಟರ್ ವಸಂತ ಬಿ ಈಶ್ವರಗೆರೆ ಮಾಹಿತಿ ಕೋರಿದ್ದರು. ಆಗ ನಿರ್ದೇಶಕರು ಕೆಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಅವುಗಳು ಮುಗಿದ ನಂತ್ರ ಶೀಘ್ರವೇ ಎಸ್ ಎಸ್ ಎಲ್ ಸಿ ಪರೀಕ್ಷೆ ಘೋಷಣೆ ದಿನಾಂಕ ಪ್ರಕಟಿಸೋದಾಗಿ ಸ್ಪಷ್ಟ ಪಡಿಸಿದ್ದರು. ಅಂದೇ BIG NEWS: ‘SSLC ಪರೀಕ್ಷೆ…
BIG NEWS: ಪ್ರಜ್ವಲ್ ರೇವಣ್ಣ ‘2800 ಯುವತಿ, ಮಹಿಳೆ’ಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ: ‘ನಲವಾಡ್’ ಗಂಭೀರ ಆರೋಪ
ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಒಂದಲ್ಲ, ಎರಡಲ್ಲ ಬರೋಬ್ಬರಿ 2800 ಯುವತಿಯರು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದಾಗಿ ಕಾಂಗ್ರೆಸ್ ಯುವ ನಾಯಕ ನಲಪಾಡ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಯುವಕ ಕಾಂಗ್ರೆಸ್ ಘಟಕದಿಂದ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಪ್ರತಿಭಟನೆ ನಡೆಸಲಾಯಿತು. ಅವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆಯೂ ಒತ್ತಾಯಿಸಲಾಯಿತು. ಈ ಪ್ರತಿಭಟನೆಯ ವೇಳೆ ಮಾತನಾಡಿದಂತ ಮೊಹಮ್ಮದ್ ನಲಪಾಡ್ ಅವರು, ಸಂಸದ ಪ್ರಜ್ವಲ್ ರೇವಣ್ಣ ಅವರು 2800 ಕಾಮಕಾಂಡ ದೌರ್ಜನ್ಯ ನಡೆಸಿದ್ದಾನೆ ಎಂಬುದಾಗಿ ಗಂಭೀರ ಆರೋಪ ಮಾಡಿದರು. ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವೀಡಿಯೋ ನೋಡಿ ನಾನು 2 ದಿನ ನಿದ್ದೆ ಮಾಡಿಲ್ಲ. ಮನೆ ಕೆಲಸ ಮಾಡೋ ಮಹಿಳೆ ನೋಡಿ ಕಣ್ಣಲ್ಲಿ ನೀರು ಬಂತು ಎಂದರು. ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ಇದ್ದರೂ ಬಿಡಲ್ಲ. ಕಾಂಗ್ರೆಸ್ ಸರ್ಕಾರ ಅವನ ವಿರುದ್ಧ ಕಾನೂನು ಕ್ರಮ ಜರುಗಿಸಲಿದೆ. ಪ್ರಜ್ವಲ್ ರೇವಣ್ಣ ಹಿಡಿದು ಜೈಲಿಗೆ…
ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಮತದಾರರು ಮತಗಟ್ಟೆಗಳಿಗೆ ಬಂದು ಮತ ಚಲಾವಣೆ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗುವಂತೆ ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮನವಿ ಮಾಡಿದರು. ಶಿವಮೊಗ್ಗ ನಗರದ ಶಿವಪ್ಪನಾಯಕ ಮಾರುಕಟ್ಟೆಯ ಸಿಟಿ ಸೆಂಟರ್ ಮಾಲ್‍ನಲ್ಲಿ ಏ.28 ರ ಸಂಜೆ ಜಿಲ್ಲಾ ಸ್ವೀಪ್ ಸಮಿತಿ ಮತ್ತು ಶಿವಮೊಗ್ಗ ಮತದಾನ ಜಾಗೃತಿ ವೇದಿಕೆ ವತಿಯಿಂದ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಮಾಲ್‍ನಲ್ಲಿ ಸ್ಥಾಪಿಸಲಾಗಿರುವ ಚುನಾವಣಾ ಮಾಡೆಲ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿವಮೊಗ್ಗ ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆ ಇದೆ. ಮತದಾನ ಪ್ರಮಾಣ ಹೆಚ್ಚಬೇಕು. ಬೆಂಗಳೂರಿನಲ್ಲಿ ಶೇಕಡ 50 ಕ್ಕಿಂತ ಕಡಿಮೆ ಮತದಾನ ನಡೆದಿದ್ದು ಆ ರೀತಿ ನಮ್ಮ ಶಿವಮೊಗ್ಗದಲ್ಲಿ ಆಗಬಾರದು. ಮತ ಚಲಾಯಿಸುವ ಮುಖಾಂತರ ದೇಶದ ಅಭಿವೃದ್ಧಿಯಲ್ಲಿ ನಾವೆಲ್ಲ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಬಾರಿ ಲೋಕಸಭಾ…
ಬಹಳಷ್ಟು ಜನರಿಗೆ ಹಣ ಗಳಿಸುವ ಆಸೆ ಇರುತ್ತದೆ. ಮನಸ್ಸಿನಲ್ಲಿ ಯೋಚಿಸೋಣ. ಇಂದೇ ಈ ಕೆಲಸ ಮಾಡಿ ಈ ಹಣವನ್ನು ಸಂಪಾದಿಸಿ. ಆದರೆ, ಅದು ಆಗುವುದಿಲ್ಲ. ಮುಂದಿನ ತಿಂಗಳಲ್ಲಿ ಈ ಕಾಮಗಾರಿ ಆರಂಭಿಸಬೇಕು. ಈ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸೋಣ. ಆದರೆ ಅದು ಕೂಡ ಆಗುವುದಿಲ್ಲ. ಆದಾಯ ಅರಸಿ ನಾಯಿಯಂತೆ ಅಲೆದಾಡಿದರೂ ಆದಾಯ ಕೈಗೆ ಬರುವುದಿಲ್ಲ. ಪ್ರಯತ್ನಗಳು ವಿಫಲವಾಗಿವೆ. ಉಳಿದಿರುವುದು ಕಷ್ಟ ಮಾತ್ರ. ಸುಮ್ಮನೆ ಸುಸ್ತಾಗಿದೆ. ಮನಸ್ಸಿನಲ್ಲಿ ಹಣ ಗಳಿಸುವ ಆಸೆ ತುಂಬಾ ಇರುತ್ತದೆ. ಆದರೆ ಅದೆಲ್ಲವನ್ನೂ ಪೂರೈಸಲು ಸರಿಯಾದ ಸಮಯ ಮತ್ತು ಅವಧಿ ಬರುವುದಿಲ್ಲ ಎಂದು ದುಃಖಿಸುವವರು ಈ ಪರಿಹಾರವನ್ನು ಪ್ರಯತ್ನಿಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ…