Author: kannadanewsnow09

ಬೆಂಗಳೂರು/ಮಂಡ್ಯ: ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ ವಿಧಿಸಿದೆ. ಅಂದಮೇಲೆ ಜನರಿಗೆ ಇವರು ಕೊಟ್ಟಿದ್ದೇನು? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಚುನಾವಣೆಗೆ ಮುನ್ನ ಗ್ಯಾರಂಟಿಗಳ ಹಣ ಬಿಡುಗಡೆ ಮಾಡಿ ಜನರಿಗೆ ಆಮಿಷ ಒಡ್ಡುತ್ತಿದೆ. ಹಾಲು, ಮದ್ಯ, ಆಸ್ಪತ್ರೆ ಶುಲ್ಕ, ಬಸ್‌ ಟಿಕೆಟ್‌ ದರ, ಮಾರ್ಗಸೂಚಿ ದರ ಎಲ್ಲ ಸೇರಿದರೆ ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆಯನ್ನು ಹಾಕಲಾಗಿದೆ. ಗ್ಯಾರಂಟಿಗಳ 65 ಸಾವಿರ ಕೋಟಿ ರೂ. ಹೊಂದಿಸಲು ಹೀಗೆ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಹಾಗಾದರೆ ಇವರು ಜನರಿಗೆ ಏನು ಕೊಟ್ಟಿದ್ದಾರೆ? ಎಂದು ಪ್ರಶ್ನೆ ಮಾಡಿದರು. ಅಡುಗೆ ಅನಿಲಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅತಿ ಹೆಚ್ಚು ಸಹಾಯಧನ ನೀಡುತ್ತಿದೆ. ಅತಿ ಕನಿಷ್ಠ ಮಟ್ಟದಲ್ಲಿ ಕೇಂದ್ರ ಸರ್ಕಾರ ದರ ಏರಿಕೆ ಮಾಡಿದೆ. ಕಾಂಗ್ರೆಸ್‌ನವರು ಬೇಕಿದ್ದರೆ ದೆಹಲಿಯಲ್ಲಿ ಪ್ರತಿಭಟನೆ ಮಾಡಲಿ. ಇಡೀ ದೇಶದಲ್ಲಿ ಅಡುಗೆ…

Read More

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ. ದ್ವಿತೀಯ PUC ಪರೀಕ್ಷೆ ರಿಸಲ್ಟ್: ಪಾಸಾದವರಿಗೆ ವಿಶ್ ಮಾಡಿ, ಫೇಲಾದವರಿಗೆ ಧೈರ್ಯ ತುಂಬಿದ ಸಿಎಂ ಸಿದ್ಧರಾಮಯ್ಯ ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಸಿಎಂ ಸಿದ್ಧರಾಮಯ್ಯ ಹಾರೈಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸಿನ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಸಿಎಂ ಸಿದ್ಧರಾಮಯ್ಯ ಹಾರೈಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳು ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದು ಬೇಡ. ಬದುಕು ದೊಡ್ಡದು, ಮತ್ತೆ ಪರೀಕ್ಷೆ ಎದುರಿಸಿ ಹೆಚ್ಚಿನ ಅಂಕದ ಜೊತೆಗೆ ಪಾಸಾಗುವ ಅವಕಾಶ ಖಂಡಿತಾ ಸಿಗಲಿದೆ. ಹತಾಶೆಯ ಕೈಗೆ ಬುದ್ದಿ ಕೊಡದೆ ಸಂಯಮದಿಂದ ವರ್ತಿಸಿ ಎಂದು ತಿಳಿ ಹೇಳಿದ್ದಾರೆ. ವಿವಿಧ ವಿಭಾಗಗಳಲ್ಲಿ ರ‌್ಯಾಂಕ್ ಪಡೆದಿರುವ ಎಲ್.ಆರ್.ಸಂಜನಾ ಬಾಯಿ, ಅಮೂಲ್ಯ ಕಾಮತ್, ದೀಕ್ಷಾ.ಆರ್ ಹಾಗೂ ದೀಪಶ್ರೀ ಈ ನಾಲ್ವರು ಹೆಣ್ಣುಮಕ್ಕಳಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಸಾಧನೆ ಇತರರಿಗೆ ಸ್ಪೂರ್ತಿಯಾಗಲಿ ಅಂತ ತಿಳಿಸಿದ್ದಾರೆ. https://twitter.com/CMofKarnataka/status/1909536414032687221 https://kannadanewsnow.com/kannada/public-read-this-shocking-news-before-you-drink-bottled-water/ https://kannadanewsnow.com/kannada/the-health-department-has-released-shocking-information-about-the-quality-of-medicines-being-sold-in-the-state/

Read More

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವಂತ ನೀರಿನ ಬಾಟಲ್ ಬಗ್ಗೆ ಶಾಕಿಂಗ್ ವರದಿಯನ್ನು ಆಹಾರ ಸುರಕ್ಷತಾ ಇಲಾಖೆ ನೀಡಿದೆ. ಕರ್ನಾಟಕದಲ್ಲಿ ಜನರು ಬಾಟಲ್ ನೀರು ಅಂತ ಕುಡಿಯೋಕೂ ಮುನ್ನಾ ಶಾಕಿಂಗ್ ರಿಪೋರ್ಟ್ ಏನಿದೆ ಅಂತ ಮುಂದೆ ಓದಿ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಫೆಬ್ರವರಿ ಮತ್ತು ಮಾರ್ಚ್‌ 2025ರ ಮಾಹೆಗಳಲ್ಲಿ ಈ ಕೆಳಕಂಡ ಕ್ರಮಗಳನ್ನು ವಹಿಸಲಾಗಿರುತ್ತದೆ. ಫೆಬ್ರವರಿ 2025: ಫೆಬ್ರವರಿ 2025ರ ಮಾಹೆಯಲ್ಲಿ ಒಟ್ಟಾರೆ 3698 ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿರುತ್ತದೆ. ವಿಶೇಷ ಅಭಿಯಾನದ ಮೂಲಕ ಕುಡಿಯುವ ನೀರಿನ ಬಾಟಲ್‌ಗಳಲ್ಲಿನ ನೀರಿನ 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಂಡಿದ್ದು, 72 ಮಾದರಿಗಳು ಸುರಕ್ಷಿತ ಎಂದು, 95 ಮಾದರಿಗಳು ಅಸುರಕ್ಷಿತ ಎಂದು ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿರುತ್ತವೆ. ಉಳಿದ ಮಾದರಿಗಳ ವಿಶ್ಲೇಷಣಾ ಕಾರ್ಯವು ಪ್ರಗತಿಯಲ್ಲಿರುತ್ತದೆ. ಕರಿದ ಹಸಿರು ಬಟಾಣಿಗಳಲ್ಲಿ ಕೃತಕ ಬಣ್ಣಗಳ ಬಳಕೆಯ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರನೊಬ್ಬ 48 ಗಂಟೆಗಳಿಗೂ ಹೆಚ್ಚು ಕಾಲ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯಿದೆಯ ಅಡಿಯಲ್ಲಿ ಬಂಧನದಲ್ಲಿದ್ದು, ನಂತ್ರ ಜಾಮೀನಿನ ಮೇಲೆ ಬಿಡುಗಡೆಯಾದರೇ ಆತನನ್ನು ಸೇವೆಯಿಂದ ತಂತಾನೇ ಅಮಾನತುಗೊಂಡಿರುತ್ತಾನೆ. ಈ ಹಿನ್ನಲೆಯ್ಲಿ ಸಕ್ಷಮ ಪ್ರಾಧಿಕಾರ ಅಮಾನತು ರದ್ದುಗೊಳಿಸಿ ಮುಂದಿನ ಔಪಚಾರಿಕ ಆದೇಶ ಹೊರಡಿಸುವ ತನಕ ಆತನ ಅಮಾನತು ಮುಂದುವರೆಯುತ್ತದೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಆಡಳಿತ ನ್ಯಾಯಾಧಿಕರಣ(ಕಎಟಿ) ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯ್ತಿ ಪಿಡಿಓ ಡಿ.ಎಂ ಪದ್ಮನಾಭ ಎಂಬುವರು ಹೈಕೋರ್ಟ್ ಗೆ ಅರ್ಜಿಯಲ್ಲಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ಸಿಎಂ ಜೋಶಿ ಅವರ ವಿಭಾಗೀಯ ಪೀಠವು ಇಂತಹ ಅರ್ಜಿಯನ್ನು ವಜಾಗೊಳಿಸಿದೆ. ಸರ್ಕಾರಿ ನೌಕರ ಬಂಧನಕ್ಕೆ ಒಳಗಾಗಿದ್ದ ನಂತ್ರ, ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗೆ ಬಂದ ಮೇಲೆ ನೇರ ಕಚೇರಿಗೆ ಹೋಗಬಹುದೇ ಇಲ್ಲವೇ ಎಂಬುದನ್ನು 2015ರ ಸರ್ಕಾರಿ…

Read More

ನವದೆಹಲಿ: ಕಳೆದ ವಾರ ಏಪ್ರಿಲ್ 15 ರಂದು ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಮಸೂದೆ, 2025 ರ ವಿರುದ್ಧ ಸಲ್ಲಿಸಲಾದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದಲ್ಲಿ ಸಂಸತ್ತಿನ ಎರಡೂ ಸದನಗಳು ವಿವಾದಾತ್ಮಕ ಮಸೂದೆಯನ್ನು ಅಂಗೀಕರಿಸಿದವು. ನಂತರ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ ಹಲವಾರು ಪಕ್ಷಗಳ ನಾಯಕರು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಶಾಸನದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಇಲ್ಲಿಯವರೆಗೆ ಸುಪ್ರೀಂ ಕೋರ್ಟ್‌ನಲ್ಲಿ 10 ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಇತರ ಹಲವಾರು ಶಾಸನಗಳಿಗೆ ಮಾಡಿದಂತೆ ಈ ಕಾಯ್ದೆಯ ಸಿಂಧುತ್ವವನ್ನು ಪಕ್ಷವು ಪ್ರಶ್ನಿಸಲಿದೆ ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಶುಕ್ರವಾರ ಘೋಷಿಸಿದರು. ತರುವಾಯ, ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸ್ಸಾವುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಕೂಡ ಸುಪ್ರೀಂ ಕೋರ್ಟ್‌ನಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವಂತ ಔಷಧಿಗಳ ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಶಾಕಿಂಗ್ ಮಾಹಿತಿಯನ್ನು ಬಹಿರಂಗಪಡಿಸಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಮಾಹಿತಿ ನೀಡಿದ್ದು,  ಔಷಧ ಆಡಳಿತವು ರಾಜ್ಯದಲ್ಲಿ ತಯಾರಾಗುವ ಮತ್ತು ಮಾರಾಟಕ್ಕಾಗಿ ಸರಬರಾಜಾಗುತ್ತಿರುವ ಔಷಧಗಳ ಮತ್ತು ಕಾಂತಿವರ್ಧಕಗಳ ಮೇಲೆ ನಿಯಮಾನುಸಾರ ನಿಯಂತ್ರಣ  ಕ್ರಮಗಳನ್ನು ಕೈಗೊಳ್ಳುವುದು ಮತ್ತು ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಪರಿಣಾಮಕಾರಿ ಔಷಧಗಳನ್ನು ಸರ್ಕಾರ ನಿಗದಿ ಪಡಿಸಿದ ಬೆಲೆಗಳಲ್ಲಿ ಗ್ರಾಹಕರಿಗೆ ದೊರಕುವಂತೆ ಮಾಡುವುದೇ ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ.  ಅಂತೆಯೇ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ. ಔಷಧ ಆಡಳಿತ: ಔಷಧ ಆಡಳಿತ ವಿಭಾಗದ ಅಮಲು ಜಾರಿ ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ದೃಷ್ಠಿಯಿಂದ ಮಾರ್ಚ್‌ 2025ರ ಮಾಹೆಯಲ್ಲಿ ಒಟ್ಟು 1,891 ಔಷಧ ಮಾದರಿಗಳನ್ನು…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಇದರ ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಹಾಗೂ ಪರೀಕ್ಷೆ-3ಕ್ಕೆ ದಿನಾಂಕವನ್ನು ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ದಿನಾಂಕ 01-03-2025ರಿಂದ 20-03-2025ರವರೆಗೆ ಒಟ್ಟು 1.171 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾಧ್ಯಂತ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವನ್ನು 76 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 21-03-2025ರಿಂದ 02-04-2025ರವರೆಗೆ 28,092 ಮೌಲ್ಯ ಮಾಪಕರಿಂದ ನಡೆಸಲಾಯಿತು. ಇಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಇಂದ ಮಧ್ಯಾಹ್ನ 1.30 ಗಂಟೆಗಳ ನಂತ್ರ ಪ್ರಕಟಿಸಲಾಗುತ್ತದೆ. ಹೀಗಿದೆ ಜಿಲ್ಲಾವಾರು ಶೇಕಡವಾರು ಉತ್ತೀರ್ಣ ಫಲಿತಾಂಶ ಉಡುಪಿ – ಶೇ.93.90 ದಕ್ಷಿಣ ಕನ್ನಡ – ಶೇ.93.57 ಬೆಂಗಳೂರು ದಕ್ಷಿಣ – ಶೇ.85.36 ಕೊಡಗು – ಶೇ.83.84 ಬೆಂಗಳೂರು ಉತ್ತರ – ಶೇ.83.31 ಉತ್ತರ ಕನ್ನಡ –…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಹಾಗಾದ್ರೇ ಜಿಲ್ಲಾವಾರು ಫಲಿತಾಂಶದ ಮಾಹಿತಿ ಮುಂದಿದೆ ಓದಿ. ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ದಿನಾಂಕ 01-03-2025ರಿಂದ 20-03-2025ರವರೆಗೆ ಒಟ್ಟು 1.171 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾಧ್ಯಂತ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವನ್ನು 76 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 21-03-2025ರಿಂದ 02-04-2025ರವರೆಗೆ 28,092 ಮೌಲ್ಯ ಮಾಪಕರಿಂದ ನಡೆಸಲಾಯಿತು. ಇಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಇಂದ ಮಧ್ಯಾಹ್ನ 1.30 ಗಂಟೆಗಳ ನಂತ್ರ ಪ್ರಕಟಿಸಲಾಗುತ್ತದೆ. ಹೀಗಿದೆ ಜಿಲ್ಲಾವಾರು ಶೇಕಡವಾರು ಉತ್ತೀರ್ಣ ಫಲಿತಾಂಶ ಉಡುಪಿ – ಶೇ.93.90 ದಕ್ಷಿಣ ಕನ್ನಡ – ಶೇ.93.57 ಬೆಂಗಳೂರು ದಕ್ಷಿಣ – ಶೇ.85.36 ಕೊಡಗು – ಶೇ.83.84 ಬೆಂಗಳೂರು ಉತ್ತರ – ಶೇ.83.31 ಉತ್ತರ ಕನ್ನಡ – ಶೇ.82.93 ಶಿವಮೊಗ್ಗ – ಶೇ.79.91 ಬೆಂಗಳೂರು…

Read More

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು ಅಕ್ರಮ ನಡೆಸಿದ ಪ್ರಕರಣ ಸಂಬಂಧ ಬ್ಯಾಂಕ್ ನ ಅಧ್ಯಕ್ಷ ಆರ್.ಎಂ ಮಂಜುನಆಥ ಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನ ಅತಿಥಿ ಗೃಹದಲ್ಲಿದ್ದಂತ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ ಗೌಡ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣ ಸಂಬಂಧ ಮತ್ತೊಬ್ಬ ಸಿಬ್ಬಂದಿಯನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಅಂದಹಾಗೇ 2014 ರಿಂದ 15ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 62.77 ಕೋಟಿ ಸಾಲ ಪಡೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಸೇರಿದಂತೆ ಐದು ಕಡೆಯಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕಣದಲ್ಲಿ ಅಕ್ರಮ ನಡೆದಾಗ ಬ್ಯಾಂಕ್ ನ…

Read More