Author: kannadanewsnow09

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ಆರಂಭಿಸುವುದಾಗಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್‌ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1904878768076054867

Read More

ಬೆಂಗಳೂರು: 2024-25ನೇ ಸಾಲಿನಲ್ಲಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಆರ್ಥಿಕವಾಗಿ ಹಿಂದುಳಿದ ಆರ್ಯ ವೈಶ್ಯ ಸಮುದಾಯದ 1893 ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿದ ಕಂದಾಯ ಸಚಿವರು ಹಾಗೂ ನಿಗಮದ ಅಧ್ಯಕ್ಷರು ಕೃಷ್ಣ ಬೈರೇಗೌಡ ಆದೇಶಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದಿರುವ ಬಡ ಆರ್ಯ ವೈಶ್ಯ 1893 ವಿದ್ಯಾರ್ಥಿಗಳಿಗೆ ರೂ.2.80 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಿ ನೇರ ನಗದು ವರ್ಗಾವಣೆ ಮೂಲಕ ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆಗೊಳಿಸಲಾಗಿದೆ ಎಂದು ಕಂದಾಯ ಸಚಿವರು ಹಾಗೂ ನಿಗಮದ ಅಧ್ಯಕ್ಷರು ಕೃಷ್ಣ ಬೈರೇಗೌಡ ರವರು ಬುಧವಾರ ವಿಕಾಸ ಸೌಧದ ಕಛೇರಿಯಲ್ಲಿ ತಿಳಿಸಿದರು. ಇಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಆರ್ಯ ವೈಶ್ಯ ಸಮುದಾಯದ 1893 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿಸಲಾಗಿದೆ. ಅವರಲ್ಲಿ ಪದವಿ ಪೂರ್ವ (ಪಿಯುಸಿ), ಸಾಮಾನ್ಯ ಪದವಿ ವ್ಯಾಸಂಗ ಮಾಡುತ್ತಿರುವ 1,006 ವಿದ್ಯಾರ್ಥಿಗಳಿಗೆ ರೂ. 57.98 ಲಕ್ಷಗಳು, ವೈದ್ಯಕೀಯ, ದಂತ ವೈದ್ಯಕೀಯ, ಅಭಿಯಂತರ ಮತ್ತು…

Read More

ಶಿವಮೊಗ್ಗ: ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.28 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಎಪಿಎಂಸಿ ಮಾರುಕಟ್ಟೆ, ಆರ್.ಎಂ.ಸಿ. ಸಾಗರ ರಸ್ತೆ, ಶುಭಮಂಗಳ ಕಲ್ಯಾಣ ಮಂದಿರ, ವಿನೋಬನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮಾಚೇನಹಳ್ಳಿ 110/11 ಕೆವಿ ವಿ.ವಿ.ಕೇಂದ್ರದ ಎಂಸಿ.ಎಫ್-18 ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 28 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/bangalore-meteorological-department-invites-applications-for-internship/ https://kannadanewsnow.com/kannada/good-news-for-brahmin-students-in-the-state-scholarships-to-be-paid/

Read More

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಾವತಿ ಮಾಡಿ ಸರ್ಕಾರ ಆದೇಶಿಸಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3,351 ವಿದ್ಯಾರ್ಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದ್ದಾರೆ. https://twitter.com/KarnatakaVarthe/status/1904801882767266055 https://kannadanewsnow.com/kannada/bangalore-meteorological-department-invites-applications-for-internship/ https://kannadanewsnow.com/kannada/minister-ramalinga-reddy-responded-to-bjp-mla-aravind-bellads-allegations-with-statistics/

Read More

ಬೆಂಗಳೂರು: ಬಿಬಿಎಂಪಿಯ ಬೆಂಗಳೂರು ಹವಾಮಾನ ಕ್ರಿಯಾ ಕೋಶದಿಂದ ಇಂಟರ್ನ್‌ಶಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಿದೆ. ಹವಾಮಾನ ಕ್ರಿಯಾಕೋಶ ವಾರ್ಡ್‌ ಮಟ್ಟದಲ್ಲಿ ವಿವಿಧ ಹವಾಮಾನ ಸಂಬಂಧಿತ ಯೋಜನೆಗಳಲ್ಲಿ ಕಾರ್ಯನಿರ್ವಹಿಸಬೇಕಾಗಿದ್ದು, ಸ್ನಾತಕೋತ್ತರ ಪದವಿ ಹಾಗೂ ಯುವ ವೃತ್ತಿಪರರಿಗೆ ಅವಕಾಶ ನೀಡಲಾಗಿದೆ. ಮೇ 2ರಿಂದ ಇಂಟರ್ನ್‌ಶಿಪ್‌ ಆರಂಭವಾಗಲಿದ್ದು, 2-6 ತಿಂಗಳ ಅವಧಿಗೆ 10 ಮಂದಿ ಇಂಟರ್ನ್‌ಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲಾಗುತ್ತಿದ್ದು, ಮಾಸಿಕ ರೂ. 20,000 ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್‌ 16 ಕೊನೆಯ ದಿನವಾಗಿದ್ದು, ಆಸಕ್ತರು https://apps.bbmpgov.in/bcap/ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ bbmpclimateactioncell@gmail.com ಸಂರ್ಕಿಸಬಹುದಾಗಿದೆ ಎಂದು ಹವಾಮಾನ ಕ್ರಿಯಾಕೋಶದ ಅಧ್ಯಕ್ಷರು ಪ್ರೀತಿ ಗೆಹ್ಲೋಟ್‌ ತಿಳಿಸಿದ್ದಾರೆ. https://twitter.com/KarnatakaVarthe/status/1904830935306219995 https://kannadanewsnow.com/kannada/bjp-mla-basanagouda-patil-yatnal-expelled-for-6-years/ https://kannadanewsnow.com/kannada/minister-ramalinga-reddy-responded-to-bjp-mla-aravind-bellads-allegations-with-statistics/

Read More

ಶಿವಮೊಗ್ಗ : 2024-25 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ(ತಾಂತ್ರಿಕ ನೈಪುಣ್ಯತೆ) ತರಬೇತಿಯನ್ನು ನೀಡಲು ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಬೆಂಗಳೂರು ಇವರ ಪ್ರಾದೇಶಿಕ ಕೆಜಿಟಿಟಿಐ ತರಬೇತಿ ಕೇಂದ್ರಗಳ ಸಹಯೋಗದೊಂದಿಗೆ ತರಬೇತಿ ನೀಡಲಾಗುವುದು. ಅರ್ಹ ವಿದ್ಯಾವಂತ ನಿರುದ್ಯೋಗ ಯುವಕ/ಯುವತಿಯರು ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ ಇಲ್ಲಿ ಮತ್ತು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮೂಲಕ ಆಫ್‌ಲೈನ್‌ನಲ್ಲಿ ಏ.5 ರೊಳಗೆ ಸಲ್ಲಿಸಬಹುದು. ಸೆಲ್ಫ್ ಎಂಪ್ಲಾಯ್ಡ್ ಟೈಲರಿಂಗ್ 2 ತಿಂಗಳ ಅವಧಿಯ ತರಬೇತಿ, ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್ 2 ತಿಂಗಳು, ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್ 2 ತಿಂಗಳು, ಫ್ಯಾಷನ್ ಡಿಸೈನರ್ 1 ತಿಂಗಳ ಅವಧಿಯ ತರಬೇತಿಯನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.…

Read More

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಉತ್ತರ ಕರ್ನಾಟಕದ ಬಗೆಗಿನ ಆರೋಪಗಳ ಕುರಿತಂತೆ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಈ ಕೆಳಕಂಡಂತೆ ದಾಖಲೆ ಸಹಿತ ಉತ್ತರ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅರವಿಂದ್ ಬೆಲ್ಲದ್ ಅವರೇ, ಉತ್ತರ ಕರ್ನಾಟಕದ ಬಗೆಗಿನ ತಮ್ಮ ಕಾಳಜಿಗೆ ಸ್ಪಂದಿಸುತ್ತಾ, ಈ ಕಾಳಜಿಯು ತಮ್ಮ‌ ಬಿ.ಜೆ.ಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ತೋರಿದ್ದರೆ, ಉತ್ತರ ಕರ್ನಾಟಕದ ಜನರಿಗೆ ಸಾಕಷ್ಟು ಸಾರಿಗೆ ಸೌಲಭ್ಯವನ್ನು ನೀಡಿ, ಸಮಗ್ರ ಅಭಿವೃದ್ಧಿ ಕಾರ್ಯವನ್ನು ಮಾಡಬಹುದಿತ್ತೇನೋ. ಸಾರಿಗೆ ಸಂಸ್ಥೆಗಳನ್ನು ಅಧೋಗತಿಗೆ ತಂದು ನಷ್ಟಕ್ಕೆ ಸಿಲುಕಿಸಿ ಹೋಗಿರುವ ತಮ್ಮ ಪಕ್ಷದ ಬಗ್ಗೆ ಕೆಲವೊಷ್ಟು ಸರಿಯಾದ ಮಾಹಿತಿ ಇಟ್ಟುಕೊಳ್ಳಿ, ಟ್ಟೀಟ್ ಮಾಡಲು ಇದು ಸಹಕಾರಿಯಾಗುತ್ತದೆ. ಇಲ್ಲವಾದರೆ ಕೈ ತೋರಿಸಿ ಅವಲಕ್ಷಣ ಮಾಡಿಸಿಕೊಂಡಂತೆ ಆಗುತ್ತದೆ ಎಂದಿದ್ದಾರೆ. ಯಡಿಯೂರಪ್ಪ , ಬೊಮ್ಮಾಯಿ ಆಡಳಿತದಲ್ಲಿ ಬಿಟ್ಟು ಹೋಗಿದ್ದ ರೂ.5900 ಕೋಟಿ‌ ನಷ್ಟ ಹಾಗೂ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ , ಖರೀದಿ ಸಾಮಾಗ್ರಿಗಳ…

Read More

ನವದೆಹಲಿ: ಕರ್ನಾಟಕದ ಸಚಿವರು ಮತ್ತು ಇತರ ರಾಜಕಾರಣಿಗಳನ್ನು ಒಳಗೊಂಡ “ಹನಿ-ಟ್ರ್ಯಾಪ್” ಪ್ರಯತ್ನದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ. ಸಾಮಾಜಿಕ ಕಾರ್ಯಕರ್ತ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂಜಯ್ ಕರೋಲ್ ಮತ್ತು ಸಂದೀಪ್ ಮೆಹ್ತಾ ಅವರ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್ ಅಥವಾ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ ಕೋರಲಾಗಿತ್ತು. ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಬರುಣ್ ಕುಮಾರ್ ಸಿನ್ಹಾ, ಮಾಧ್ಯಮಗಳಲ್ಲಿ ವರದಿಯಾದ ಆರೋಪಕ್ಕೆ ಅದರ ಹಿಂದಿನ ವ್ಯಕ್ತಿಗಳ ವಿರುದ್ಧ ಸಂಪೂರ್ಣ ತನಿಖೆ ಅಗತ್ಯವಿದೆ ಎಂದು ಹೇಳಿದರು. ಕೆಲವು ಸ್ಥಾಪಿತ ಹಿತಾಸಕ್ತಿಗಳಿಂದ ನ್ಯಾಯಾಧೀಶರ “ಹನಿ ಟ್ರ್ಯಾಪ್” ನ್ಯಾಯಾಂಗದ ಸ್ವಾತಂತ್ರ್ಯ ಮತ್ತು ಕಾನೂನಿನ ಆಡಳಿತಕ್ಕೆ ಗಂಭೀರ ಬೆದರಿಕೆಯಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಮಾರ್ಚ್ 21, 2025 ರಂದು ಕರ್ನಾಟಕ ರಾಜ್ಯ ವಿಧಾನಸಭೆಯಲ್ಲಿ, ಅಂದರೆ ವಿಧಾನಸೌಧದಲ್ಲಿ, ರಾಜ್ಯದ ಮುಖ್ಯಮಂತ್ರಿಯಾಗಲು…

Read More

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಬಿಗ್ ಬಾಸ್ ಸ್ಪರ್ಧಿಗಳನ್ನು ಕೋರ್ಟ್ ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದೆ. ಈ ಸಂಬಂಧ ಇಂದು ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಲಾಯಿತು. ಪೊಲೀಸರು ವಿಚಾರಣೆಗೆ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪರಸ್ಕರಿಸಿರುವಂತ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್, ಬಿಗ್ ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ ಹಾಗೂ ರಜತ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

Read More

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ATM ಇಂಟರ್‌ಚೇಂಜ್ ಶುಲ್ಕವನ್ನು ಹೆಚ್ಚಿಸಲು ಅನುಮೋದನೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಈ ಮೂಲಕ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ವರದಿಗಳ ಪ್ರಕಾರ, ಕೇಂದ್ರ ಬ್ಯಾಂಕ್ ಹಣಕಾಸು ವಹಿವಾಟುಗಳಿಗೆ 2 ರೂ ಮತ್ತು ಹಣಕಾಸೇತರ ವಹಿವಾಟುಗಳಿಗೆ 1 ರೂ ಶುಲ್ಕವನ್ನು ಹೆಚ್ಚಿಸಲು ಒಪ್ಪಿಕೊಂಡಿದೆ. ಹೊಸ ಶುಲ್ಕಗಳು ಮೇ 1 ರಿಂದ ಜಾರಿಗೆ ಬರಲಿವೆ. ATM ಇಂಟರ್‌ಚೇಂಜ್ ಶುಲ್ಕ ಎಂದರೇನು? ಹಣಕಾಸು ಸೇವಾ ಉದ್ಯಮದಲ್ಲಿ ಉಚಿತವಾಗಿ ಏನೂ ಇಲ್ಲ. ಪ್ರತಿ ಬಾರಿಯೂ ಒಂದು ನಿರ್ದಿಷ್ಟ ಬ್ಯಾಂಕಿನ ಗ್ರಾಹಕರು ಯಾವುದೇ ವಹಿವಾಟಿಗೆ ಮತ್ತೊಂದು ಬ್ಯಾಂಕಿನ ATM ಅನ್ನು ಬಳಸಿದಾಗ – ಅದು ಹಣಕಾಸು ಅಥವಾ ಹಣಕಾಸೇತರವಾಗಿರಲಿ. ಹಿಂದಿನ ಬ್ಯಾಂಕ್ ಇತರ ಬ್ಯಾಂಕ್‌ಗೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ಶುಲ್ಕವನ್ನು, ಸಾಮಾನ್ಯವಾಗಿ ಪ್ರತಿ ವಹಿವಾಟಿಗೆ ನಿಗದಿತ ಮೊತ್ತವನ್ನು ATM ಇಂಟರ್‌ಚೇಂಜ್ ಶುಲ್ಕ ಎಂದು ಕರೆಯಲಾಗುತ್ತದೆ. ಹೊಸ ಶುಲ್ಕ ಏನಾಗಿರುತ್ತದೆ? ಈ ಹೆಚ್ಚಳದ ನಂತರದ ಹೊಸ ಶುಲ್ಕ ಹೀಗಿರುತ್ತದೆ:…

Read More