Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದ್ದಲ್ಲದೆ ಬಿಜೆಪಿಯ ಯೋಜನೆಗಳನ್ನು ತಮ್ಮದೇ ಯೋಜನೆಯಾಗಿ ಬಿಂಬಿಸಿಕೊಂಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳುಗಳನ್ನು ಹೇಳಿಸಿದೆ. ಹಿಂದಿನ ಬಿಜೆಪಿ ಸರ್ಕಾರ ತಂದ ಯೋಜನೆಗಳನ್ನು, ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದೇ ಯೋಜನೆ ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ. ಐದು ಗ್ಯಾರಂಟಿ ತಂದಿದ್ದೇವೆ ಎಂದು ಹೇಳಿದ್ದರೂ ಯುವನಿಧಿ ಇನ್ನೂ ನಿರುದ್ಯೋಗಿಗಳ ಕೈ ಸೇರಿಲ್ಲ. ಬರ ಪರಿಹಾರ ಕೊಟ್ಟಿದ್ದೇವೆ ಎನ್ನುತ್ತಾರೆ. ಆದರೆ ಪರಿಹಾರವನ್ನು ಕಂತಾಗಿ ನೀಡಬಾರದು. ಹಿಂದಿನ ಬಿಜೆಪಿ ಸರ್ಕಾರ ಪರಿಹಾರವನ್ನು ಒಂದೇ ಸಲಕ್ಕೆ ರೈತರ ಖಾತೆಗೆ ಹಾಕಿತ್ತು. ಈ ಸರ್ಕಾರ ಕಂತು ಕಂತಾಗಿ ನೀಡುವುದು ತಪ್ಪು. ನಾವು 25 ಸಾವಿರ ರೂ. ಪರಿಹಾರ ಕೇಳಿದ್ದರೆ, ಆ ವಿಷಯವನ್ನು ಪ್ರಸ್ತಾಪಿಸಿಲ್ಲ. ಕೇವಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲಾಗಿದೆ ಎಂದು ದೂರಿದರು. ಮಕ್ಕಳಿಗೆ ಚಿಕ್ಕಿ ಮಿಠಾಯಿ ಕೊಟ್ಟು ಅವರ ಕೈಯಲ್ಲೇ ಶೌಚಾಲಯ ತೊಳೆಸಲಾಗುತ್ತಿದೆ.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಉಭಯ ದ್ವೀಪ ರಾಷ್ಟ್ರಗಳ ಉನ್ನತ ನಾಯಕರು ಭಾಗವಹಿಸಿದ್ದ ವರ್ಚುವಲ್ ಸಮಾರಂಭದಲ್ಲಿ ಭಾರತದ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಸೇವೆಗಳನ್ನು ಸೋಮವಾರ ಶ್ರೀಲಂಕಾ ಮತ್ತು ಮಾರಿಷಸ್ನಲ್ಲಿ ಬಿಡುಗಡೆ ಮಾಡಲಾಯಿತು. ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ವರ್ಚುವಲ್ ಸಮಾರಂಭದಲ್ಲಿ ಮೋದಿ ಅವರೊಂದಿಗೆ ಸೇರಿಕೊಂಡರು. ಫ್ರಾನ್ಸ್ನಲ್ಲಿ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಪ್ರಾರಂಭಿಸಿದ ಒಂದು ವಾರದ ನಂತರ, ಶ್ರೀಲಂಕಾ ಮತ್ತು ಮಾರಿಷಸ್ ಭಾರತೀಯ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದ ಇತ್ತೀಚಿನ ದೇಶಗಳಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರೊಂದಿಗೆ ವರ್ಚುವಲ್ ಮೂಲಕ ಉಡಾವಣಾ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಮಾರಿಷಸ್ ನಲ್ಲಿ ಇಂದು ರುಪೇ ಕಾರ್ಡ್ ಗಳನ್ನು ಸಹ ಪರಿಚಯಿಸಲಾಯಿತು. “ಶ್ರೀಲಂಕಾ ಮತ್ತು ಮಾರಿಷಸ್ನೊಂದಿಗೆ ಭಾರತದ ದೃಢವಾದ ಸಾಂಸ್ಕೃತಿಕ ಮತ್ತು ಜನರ ನಡುವಿನ ಸಂಪರ್ಕವನ್ನು ಗಮನಿಸಿದರೆ, ಈ ಸೇವೆ ಆರಂಭದಿಂದ…
ಶಿವಮೊಗ್ಗ: ಮಂಗನ ಕಾಯಿಲೆ ಬಾಧಿತ ಪ್ರದೇಶದ ಜನರು ಜ್ವರದಂತಹ ಪ್ರಕರಣಗಳನ್ನು ನಿರ್ಲಕ್ಷ್ಯ ಮಾಡದೇ, ಶೀಘ್ರವಾಗಿ ಚಿಕಿತ್ಸೆ ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಂಗನ ಕಾಯಿಲೆ (ಕೆಎಫ್‍ಡಿ) ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಗನ ಕಾಯಿಲೆ ಬಗ್ಗೆ ಗಾಬರಿಯಾಗುವುದು ಬೇಡ. ಆದರೆ ಜ್ವರ, ತಲೆನೋವು, ಸ್ನಾಯುಗಳ ನೋವು ಇತ್ಯಾದಿ ಲಕ್ಷಣ ಕಾಣಿಸಿಕೊಂಡಾಗ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಆರಂಭದಲ್ಲೇ ರೋಗ ಲಕ್ಷಣಗಳಿಗೆ ಚಿಕಿತ್ಸೆ ಪಡೆದಲ್ಲಿ ಸಂಪೂರ್ಣ ಗುಣಮುಖರಾಗಲು ಸಾಧ್ಯ ಎಂದರು. ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಮಂಗನ ಕಾಯಿಲೆ ವೈರಾಣು ಸೋಂಕಿನ ನಿಂಫ್ ಹಂತದಲ್ಲಿರುವ ಉಣ್ಣಿಗಳು ಕಚ್ಚುವುದರಿಂದ ಹರಡುತ್ತದೆ. ಮಂಗನ ಅಸ್ವಾಭಾವಿಕ ಸಾವು ಮಂಗನ ಕಾಯಿಲೆಯ ಕುರಿತಾದ ಎಚ್ಚರಿಕೆ ಗಂಟೆ. ನಂತರ ಮನುಷ್ಯರಿಗೆ ಬರುತ್ತದೆ. ಜ್ವರ, ತಲೆನೋವು ಇತರೆ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ…
ನವದೆಹಲಿ: ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಸಿಐಎಸ್ಎಫ್ನಂತಹ ಅರೆಸೈನಿಕ ಪಡೆಗಳಲ್ಲಿನ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಫೆಬ್ರವರಿ 20 ರಿಂದ ಮಾರ್ಚ್ 7 ರವರೆಗೆ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ಸಚಿವಾಲಯ (ಎಂಎಚ್ಎ) ಭಾನುವಾರ ತಿಳಿಸಿದೆ. ಈ ಮೂಲಕ ಕನ್ನಡಿಗರಿಗೆ ಗುಡ್ ನ್ಯೂಸ್ ನೀಡಲಾಗಿದೆ. ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಗೃಹ ಸಚಿವಾಲಯದ ಹೇಳಿಕೆ ತಿಳಿಸಿದೆ. ಇಂತಹ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್ ಮತ್ತು ಹಿಂದಿ ಹೊರತುಪಡಿಸಿ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ನಿರ್ಧಾರವನ್ನು ಕಳೆದ ವರ್ಷ ಏಪ್ರಿಲ್ ನಲ್ಲಿ ಪ್ರಕಟಿಸಲಾಗಿತ್ತು. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಗೃಹ ಸಚಿವ ಅಮಿತ್ ಶಾ ಅವರ ಉಪಕ್ರಮದ ಮೇರೆಗೆ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ, ಅಸ್ಸಾಮಿ,…
ಮಧ್ಯಪ್ರದೇಶ: ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳನ್ನು ದಾಟಲಿದೆ, ಎನ್ಡಿಎ 400 ಸ್ಥಾನಗಳನ್ನು ದಾಟಲಿದೆ. ಕಾಂಗ್ರೆಸ್ಗೆ ಹಳ್ಳಿಗಳು, ಬಡವರು ಮತ್ತು ರೈತರ ನೆನಪಾಗುವುದು ಚುನಾವಣೆಯ ಸಮಯದಲ್ಲಿ ಮಾತ್ರ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಜಬುವಾದಲ್ಲಿ ಭಾನುವಾರ ಜನ ಜಾತಿ ಮಹಾಸಭಾವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎನ್ಡಿಎ 400 ಸ್ಥಾನಗಳನ್ನು ದಾಟಲು ಸಾಧ್ಯವಾದರೆ, ಬಿಜೆಪಿ ಮಾತ್ರ 370 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಬೇಕು ಎಂದು ಹೇಳಿದರು. ಪ್ರಧಾನಿ ಮೋದಿ ಅವರು ತಮ್ಮ ಮಧ್ಯಪ್ರದೇಶ ಭೇಟಿ ಲೋಕಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಹೇಳಿದರು. https://twitter.com/ANI/status/1756598154009412068 ಮಧ್ಯಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶಗಳು ಈಗಾಗಲೇ ಇಲ್ಲಿನ ಜನರ ಮನಸ್ಥಿತಿಯನ್ನು ತೋರಿಸಿವೆ. ನಾನು ಝಬುವಾಗೆ ಬಂದಿರುವುದು ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಅಲ್ಲ, ನಿಮ್ಮ ಸೇವಕನಾಗಿ ಎಂದರು. ನಮಗೆ ಬುಡಕಟ್ಟು ಸಮುದಾಯವು ವೋಟ್ ಬ್ಯಾಂಕ್ ಅಲ್ಲ, ಬದಲಿಗೆ ನಮ್ಮ ರಾಷ್ಟ್ರದ ಹೆಮ್ಮೆ. ನಾವು ಕುಡಗೋಲು ಕೋಶ ರಕ್ತಹೀನತೆಯ ವಿರುದ್ಧ ಅಭಿಯಾನವನ್ನು ಪ್ರಾರಂಭಿಸಿದ್ದು ಮತಗಳಿಗಾಗಿ ಅಲ್ಲ, ಆದರೆ ಬುಡಕಟ್ಟು ಜನರ ಆರೋಗ್ಯಕ್ಕಾಗಿ”…
ಬೆಂಗಳೂರು: ರಾಜ್ಯದ ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಆರ್ಭಡಿಸುತ್ತಿದೆ. ಇದೇ ಕಾರಣಕ್ಕಾಗಿ ಸರ್ಕಾರ ಹೊಸ ವ್ಯಾಕ್ಸಿನ್ ಕಂಡು ಹಿಡಿಯೋದಕ್ಕೆ ಐಸಿಎಂಆರ್ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಇದರ ನಡುವೆ ಮಂಗನ ಕಾಯಿಲೆ ಪೀಡಿತರಿಗೆ ಗುಡ್ ನ್ಯೂಸ್ ಎನ್ನುವಂತೆ ಆಯುಷ್ಮಾನ್ ಕಾರ್ಡ್ ಅಡಿಯಲ್ಲಿ ಉಚಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಂಗನ ಕಾಯಿಲೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/announce-stoppage-of-guarantee-schemes-in-bjp-ruled-states-tagaru-challenges-chanakya/ https://kannadanewsnow.com/kannada/crpf-bsf-cisf-exams-to-be-conducted-in-13-regional-languages-for-the-first-time/
ನವದೆಹಲಿ: ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಸಿಐಎಸ್ಎಫ್ನಂತಹ ಅರೆಸೈನಿಕ ಪಡೆಗಳಲ್ಲಿನ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಫೆಬ್ರವರಿ 20 ರಿಂದ ಮಾರ್ಚ್ 7 ರವರೆಗೆ ಮೊದಲ ಬಾರಿಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಗೃಹ ಸಚಿವಾಲಯ (ಎಂಎಚ್ಎ) ಭಾನುವಾರ ತಿಳಿಸಿದೆ. ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಕಾನ್ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಪರೀಕ್ಷೆಗೆ ಹಾಜರಾಗುತ್ತಿದ್ದಾರೆ ಎಂದು ಗೃಹ ಸಚಿವಾಲಯದ ಹೇಳಿಕೆ ತಿಳಿಸಿದೆ. ಈ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್ ಮತ್ತು ಹಿಂದಿ ಹೊರತುಪಡಿಸಿ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ನಿರ್ಧಾರವನ್ನು ಕಳೆದ ವರ್ಷ ಏಪ್ರಿಲ್ ನಲ್ಲಿ ಪ್ರಕಟಿಸಲಾಗಿತ್ತು. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಗೃಹ ಸಚಿವ ಅಮಿತ್ ಶಾ ಅವರ ಉಪಕ್ರಮದ ಮೇರೆಗೆ ಈ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು,…
ಬೆಂಗಳೂರು: ಸುತ್ತೂರು ಮಠವು ನಿಸ್ವಾರ್ಥ ಸೇವೆ ಮೂಲಕ ಲಕ್ಷಾಂತರ ಜನರು ಪ್ರಕಾಶಮಾನರಾಗಲು ಕಾರಣವಾಗಿದೆ. ಇದು ನಿರಂತರವಾಗಿ ಪರೋಪಕಾರದ ಕೇಂದ್ರವಾಗಿ ಹೊರಹೊಮ್ಮಿದೆ. ಬಿಜೆಪಿ ಈ ಸೇವೆಯನ್ನು ಗುರುತಿಸಿ ವಂದಿಸಲು ಬಯಸುತ್ತದೆ ಎಂದು ಕೇಂದ್ರ ಗೃಹ ಸಚಿವ ಮಾನ್ಯ ಅಮಿತ್ ಶಾ ಅವರು ತಿಳಿಸಿದರು. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸೇರಿದ ಜನಸ್ತೋಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಠದ 24 ಮಠಾಧೀಶರು ಇಲ್ಲಿ ನಿಸ್ವಾರ್ಥ ಸೇವೆ ಮಾಡಿದ್ದಾರೆ ಎಂದರು. ಸುತ್ತೂರು ಮಠದ ಜಗದ್ಗುರುಗಳ ಆಶೀರ್ವಾದ ಕೋರಿ ಅವರು ಭಾಷಣ ಆರಂಭಿಸಿದರು. ಬಸವಣ್ಣ ಕೇವಲ ಒಂದು ವರ್ಗಕ್ಕೆ ಸೀಮಿತರಲ್ಲ; ದೇಶದ ಕೋಟ್ಯಂತರ ಜನರಿಗೆ ಪ್ರೇರಣೆ ತುಂಬಿದ ಮಹಾಪುರುಷರು ಎಂದು ವಿಶ್ಲೇಷಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ಇಲ್ಲಿನ ಶ್ರೀಗಳು ಯಡಿಯೂರಪ್ಪ ಅವರಿಗೆ ಮಾರ್ಗದರ್ಶನ ನೀಡಿದವರು ಎಂದು ಶ್ಲಾಘಿಸಿದರು. ಶ್ರೀಗಳ ಆಶೀರ್ವಾದದಿಂದ ಉತ್ತಮ ಮಳೆ, ಬೆಳೆ ಆಗಿ ರೈತರು ನೆಮ್ಮದಿಯಿಂದ ಬಾಳಿ ಬದುಕುವಂತಾಗಲಿ ಎಂದು ಹಾರೈಸಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ…
ಮೈಸೂರು: ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂಬುದಾಗಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಇಬ್ಬರು ಗೂಂಡಾಗಳು. ಇದು ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಸಿನೆಮಾ ಸ್ಟೈಲಿನಲ್ಲಿ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲೇ ಸೆಟಲ್ಮೆಂಟ್ ಆಗಿದೆ. ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್ಮೆಂಟ್ ಆಗ್ತಾರೆ. ನೋಡ್ತಾ ಇರಿ. ಇಷ್ಟರಲ್ಲೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರುತ್ತಾರೆ ಎಂದರು. ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆಯ ಬಗ್ಗೆ ಹೈಕಮಾಂಡ್ ಚರ್ಚೆ ಮಾಡುತ್ತಾರೆ. ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಇದರ ಬಗ್ಗೆ ಚರ್ಚೆಯಾಗಲಿದೆ. ಮುಂದಿನ ಅಭ್ಯರ್ಥಿಗಳು, ಮೈತ್ರಿ ಅಭ್ಯರ್ಥಿಯ ಬಗ್ಗೆ ಚರ್ಚೆಯಾಗೋ ಸಾಧ್ಯತೆ ಇದೆ ಎಂದರು. ನಾನು ರಾಷ್ಟ್ರದ್ರೋಹಿ ಹೇಳಿಕೆ ನೀಡೋರ ವಿರುದ್ಧ ಕ್ರಮ ಕೈಗೊಳ್ಳುವಂತ ಕಾನೂನು ಜಾರಿಯಾಗಬೇಕು ಅಂದ್ರೇ, ಅವರ ವಿರುದ್ಧ ಕ್ರಮ ಕೈಗೊಳ್ಳದೇ ನನಗೆ ನೋಟಿಸ್ ಕೊಡ್ತಾರೆ…
ಬೆಂಗಳೂರು: ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಗ್ಯಾರಂಟಿ ನಿಲ್ಲಿಸಿ. ಈ ಮೂಲಕ ನಿಮ್ಮ ಧಮ್ಮು, ತಾಕತ್ತು ತೋರಿಸಿ ಎಂಬುದಾಗಿ ಅಮಿತ್ ಶಾ ಅವರಿಗೆ ಮುಖ್ಮಮಂತ್ರಿ ಸಿದ್ಧರಾಮಯ್ಯ ಅವರು ಸವಾಲು ಹಾಕಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು, ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಖತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ? ಎಂದು ಪ್ರಶ್ನಿಸಿದ್ದಾರೆ. ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ‘’ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ. ಇದು ಅಮಿತ್ ಶಹಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ,…