Author: kannadanewsnow09

ಕನಕಪುರ: ಈಗಿನ ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಪಡೆಯುವುದಕ್ಕಿಂತ ಚೆನ್ನಾಗಿ ಓದಿ ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಇಟ್ಟುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು. ಕನಕಪುರದಲ್ಲಿ ಭಾನುವಾರ ದ ರೂರಲ್ ಎಜುಕೇಷನ್ ಸೊಸೈಟಿ ಸ್ಥಾಪಕ ಅಧ್ಯಕ್ಷ, ಮಾಜಿ ಶಾಸಕ ಎಸ್ ಕರಿಯಪ್ಪ ಅವರ 125 ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಪೂಜ್ಯ ಕರಿಯಪ್ಪನವರ 125ನೇ ಜಯಂತಿ ಕಾರ್ಯಕ್ರಮ ಆಚರಿಸುತ್ತುದ್ದೇವೆ. ಇಂದು ಶ್ರೀರಾಮನವಮಿ. ಸಮಾಜ ಸೇವೆ ಮಾಡುವವರನ್ನು ಗುರುತಿಸುತ್ತದೆ. ಹೀಗಾಗಿ ನಮ್ಮಲ್ಲಿ ರಾಮನ ತಂದೆ ದಶರಥನಿಗಿಂತ ರಾಮನ ಭಂಟ ಹನುಮನಿಗೆ ಹೆಚ್ಚು ದೇವಾಲಯಗಳಿವೆ. ಕರಿಯಪ್ಪನವರು ಸಮಾಜದಲ್ಲಿ ಮಾಡಿರುವ ಸೇವೆ, ಕನಕಪುರಕ್ಕೆ ಅವರು ಕೊಟ್ಟಿರುವ ಶಕ್ತಿ ಅಪಾರ” ಎಂದು ತಿಳಿಸಿದರು. “ಕರಿಯಪ್ಪನವರು ನಮ್ಮ ತಾಲೂಕಿನಲ್ಲಿ ಜ್ಞಾನದ ಸುಗಂಧವನ್ನು ಹರಡಿದ್ದಾರೆ. ಹೀಗಾಗಿ ನಾವು ಅವರನ್ನು ಸ್ಮರಿಸುತ್ತಿದ್ದೇವೆ. ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ದೇವರ ನೆನಪು ಭಕ್ತಿಯ ಮೂಲ, ಈ ಮೂರರ…

Read More

ದಾವಣಗೆರೆ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಅಪ್ರಾಪ್ತ ಬಾಲಕನ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರ ಹಿಂಸೆ ನೀಡಿದಂತ ಘಟನೆ ಚನ್ನಗಿರಿಯ ಅಸ್ಯಾಪನಹಳ್ಳಿಯಲ್ಲಿ ನಡೆದಿತ್ತು. ಈ ಘಟನೆ ಸಂಬಂಧ ಹತ್ತು ಆರೋಪಿಗಳಲ್ಲಿ ಮೂವರನ್ನು ಬಂದಿಸಿದ್ದಾರೆ. ಏಪ್ರಿಲ್.4ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಅಸ್ತಾಪನಹಳ್ಳಿಯಲ್ಲಿ ಬಾಲಕನನ್ನು ಕಳ್ಳತನ ಮತ್ತು ಮಹಿಳೆಯರ ಜೊತೆಗೆ ಅಸಭ್ಯ ವರ್ತನೆ ಸಂಬಂಧಿಸಿದಂತೆ ಹಿಡಿದು ಅಡಿಕೆ ಗಿಡಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಲಾಗಿತ್ತು. ಅಲ್ಲದೇ ಬಾಲಕನ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ಮಾಡಲಾಗಿತ್ತು. ಈ ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಬಗ್ಗೆ ಚನ್ನಗಿರಿ ಪೊಲೀಸರಿಗೆ ಬಾಲಕನ ತಾತ ದೂರು ನೀಡಿದ್ದರು. ಈ ದೂರು ಆಧರಿಸಿ ಸುಭಾಷ್ (23), ಲಕ್ಕಿ(21) ದರ್ಶನ್ (22), ಪರಶು (25) ಶಿವದರ್ಶನ್ (23) ಹರೀಶ್ (25), ಪಟ್ಟಿ ರಾಜು(20), ಭೂಣಿ (18) ಸುಧನ್ ಅಲಿಯಾಸ್ ಮಧುಸೂಧನ್ (30) ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇವರಲ್ಲಿ ಮೂವರನ್ನು ಬಂದಿಸಿದ್ದಾರೆ.…

Read More

ಹುಬ್ಬಳ್ಳಿ: ಶಾಸಕ ಬಸನಗೌಡ ಪಾಲೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಾನು ಅಲ್ಲ, ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೊಸ ಪಕ್ಷ ಕಟ್ಟುವುದು ಅಷ್ಟು ಸುಲಭವಲ್ಲ. ಅದಕ್ಕಿಂತ ಹಿಂದೂಗಳ ಮತ ವಿಭಜನೆ ಆಗಬಾರದು ಎಂಬುದು ನನ್ನ ಉದ್ದೇಶವಾಗಿದೆ ಎಂದರು. ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು. ನಾನು ಅಲ್ಲ ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗೋದಿಲ್ಲ  ಎಂಬುದಾಗಿ ತಿಳಿಸಿದರು.

Read More

ಹಾವೇರಿ: ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದರೆ ಬಿಜೆಪಿ ಕಾರ್ಯಕರ್ತರ ಮೇಲೆ ಒತ್ತಡ ಹಾಕಿ. ಕೇಸ್ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪಭುತ್ವ ಇಲ್ಲ. ಅಘೋಷಿತ ತುರ್ತುಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ನಮ್ಮ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಹಾವೇರಿಯಲ್ಲಿ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 1975 ರಲ್ಲಿ ರಾಷ್ಟ್ರದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದರಿಂದ ಯಾರಿಗೂ ಸ್ವಾತಂತ್ರ್ಯ ಇರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಂದ ಶುರುವಾದ ಹೋರಾಟ ಸಂಪೂರ್ಣ ಕ್ರಾಂತಿಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಅಡ್ವಾಣಿಯವರು ಎಲ್ಲರೂ ನುಗ್ಗಿದರು. 1947 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದಾಗ 1952ರ ವರೆಗೂ ರಾಷ್ಟ್ರೀಯ ಸರ್ಕಾರ ಇತ್ತು. ಯಾವುದೇ ಪಕ್ಷದ ಸರ್ಕಾರ ಇರಲಿಲ್ಲ. ಆ ಸರ್ಕಾರದಲ್ಲಿ ಶಾಮ ಪ್ರಸಾದ್ ಮುಖರ್ಜಿ ಅವರೂ ಇದ್ದರೂ, ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಶ್ಮೀರ…

Read More

ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು ಎಂದು ಮಾಜಿ ಮುಖ್ಯಮಂತಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಈಗಾಗಲೇ ಡಿಪಿಆರ್‌ಗೆ ಒಪ್ಪಿಗೆ ಕೊಟ್ಟಿದೆ. ಪರಿಸರ ಇಲಾಖೆಯ ಅನುಮತಿ ಅತಿ ಶೀಘ್ರವೇ ಸಿಗಲಿದೆ. ಎತ್ತಿನ ಹೊಳೆ ಯೋಜನೆಗೆ ಕೇಂದ್ರದ ಯಾವುದೇ ಅನುಮತಿ ಅಗತ್ಯವಿಲ್ಲ. ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಆಗ ನಾವು ಈ ಪ್ರಕರಣ ಅಂತಾರಾಜ್ಯ ವಿವಾದದಲ್ಲಿ ಕೋರ್ಟ್‌ನಲ್ಲಿದೆ ಅಂತ ಹೇಳಿದಾಗ ಕಾಂಗ್ರೆಸ್ ನಾಯಕರು ತಾವು ಅನುಮತಿ ತರುತ್ತೇವೆ ಎಂದಿದ್ದರು. ಈಗ ಅವರ ಮಿತ್ರ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ…

Read More

ಬೆಂಗಳೂರು: ನಾಳೆಯಿಂದ ಬಿಜೆಪಿ ನಾಯಕರು ಬೀದಿಗೆ ಇಳಿಯಲಿದ್ದಾರೆ. ಬೆಲೆ ಏರಿಕೆ, ಮುಸ್ಲೀಂ ಓಲೈಕೆ, ದಲಿತರ ಹಣ ಲೂಟಿ, ರೈತರನ್ನು ಕಡೆಗಣಿಸಿದ್ದನ್ನು ಖಂಡಿಸಲಿದ್ದಾರೆ. ನಾಳೆಯಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಯನ್ನು ಬಿಜೆಪಿ ಕೈಗೊಳ್ಳಲಿದೆ. ಏಪ್ರಿಲ್.7ರ ನಾಳೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆ ಆರಂಭಗೊಳ್ಳಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಆರಂಭವಾಗಲಿದೆ‌. ಸಂಜೆ 4 ಗಂಟೆಗೆ ಜನಾಕ್ರೋಶ ಯಾತ್ರೆಗೆ ಚಾಲನೆ ದೊರೆಯಲಿದ್ದು, ಮೈಸೂರಿನ ಸೆಂಟ್ರಲ್ ಪೋಸ್ಟ್ ಆಫೀಸ್ ವೃತ್ತದಿಂದ ಅಶೋಕ ರಸ್ತೆ ಮಾರ್ಗವಾಗಿ ಗಾಂಧಿ ಚೌಕದವರೆಗೆ ಸುಮಾರು 1.5 ಕಿಲೋಮೀಟರ್ ಸಾಗಲಿದೆ. ಮೊದಲ ಹಂತದಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು, ಮಂಗಳೂರು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿದೆ. ಒಟ್ಟು ನಾಲ್ಕು ಹಂತದಲ್ಲಿ ಜನಾಕ್ರೋಶ ಯಾತ್ರೆಯನ್ನು ರಾಜ್ಯಾದ್ಯಂತ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿದೆ. ಆ ಮೂಲಕ ರಾಜ್ಯ ಸರ್ಕಾರದ ಬೆಲೆ ಏರಿಕೆಯನ್ನು ಖಂಡಿಸಲಿದ್ದಾರೆ.

Read More

ನವದೆಹಲಿ: ಪಾರ್ಶ್ವವಾಯುವಿಗೆ ತುತ್ತಾಗಿ, ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ಕಿಮ್ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕಳೆದ ಕೆಲ ದಿನಗಳಿಂದ ನಟಿ ಜಾಕ್ವೆಲಿನ್ ಅವರ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮಾರ್ಚ್.24ರಂದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರಿಗೆ ಪಾರ್ಶ್ವವಾಯುವಿಗೂ ತುತ್ತಾಗಿದ್ದರು. ಐಸಿಯುನಲ್ಲಿಯೇ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ತಾಯಿ ಕಿಮ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಕಿಮ್ ವಿಧಿವಶರಾಗಿದ್ದಾರೆ. ಈ ಮೂಲಕ ಇನ್ನಿಲ್ಲವಾಗಿದ್ದಾರೆ. ಕಿಮ್ ನಿಧನಕ್ಕೆ ಬಾಲಿವುಡ್ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. https://kannadanewsnow.com/kannada/many-great-personalities-behind-bjps-formation-were-hard-work-sacrifices-sacrifices-by-vijayendra/ https://kannadanewsnow.com/kannada/breaking-microfinance-harassment-in-the-state-live-fruit-vendor-attempts-suicide-by-consuming-poison/

Read More

ಬೆಂಗಳೂರು: ಬಿಜೆಪಿ ಸ್ಥಾಪನೆ ಹಿಂದೆ ಅನೇಕ ಮಹನೀಯರ ಪರಿಶ್ರಮ, ತ್ಯಾಗ, ಬಲಿದಾನವಿದೆ. ಅಂಥ ಮಹನೀಯರನ್ನು ಸ್ಮರಿಸುವ ಕಾರ್ಯ ಇಂದು ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ಸ್ಥಾಪನಾ ದಿವಸದ ಅಂಗವಾಗಿ ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಧ್ವಜಾರೋಹಣ ಮಾಡಿ, ಪ್ರದರ್ಶಿನಿ ಉದ್ಘಾಟನೆ ನೆರವೇರಿಸಿದ ಅವರು ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶಕ್ಕಾಗಿ ತಮ್ಮ ಪ್ರಾಣದ ಬಲಿದಾನ ಮಾಡಿದ ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿಷ್ಠ ನಾಯಕತ್ವದ ಪಕ್ಷ ನಮ್ಮದು. ದೀನದಯಾಳ್ ಉಪಾಧ್ಯಾಯರು, ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ ಜೋಷಿ, ಅವರ ಬಲಿಷ್ಠ ನಾಯಕತ್ವ ಇದ್ದ ಪಕ್ಷ ನಮ್ಮದು ಎಂದು ವಿವರಿಸಿದರು. ಅನೇಕ ಹಿರಿಯರ ತಪಸ್ಸು, ಪರಿಶ್ರಮದಿಂದ ಪಕ್ಷ ಬೆಳೆದಿದೆ. ಕರ್ನಾಟಕದಲ್ಲಿ ಯಡಿಯೂರಪ್ಪ, ಅನಂತಕುಮಾರ್, ಶಂಕರಮೂರ್ತಿ, ವಿ.ಎಸ್.ಆಚಾರ್ಯ ಸೇರಿ ಅನೇಕ ಹಿರಿಯರು ಬಿಜೆಪಿ ಸಂಘಟನೆ ಕೆಲಸನ್ನು ಯಶಸ್ವಿಯಾಗಿ ಮಾಡಿದ್ದಾರೆ. ಸ್ವಾತಂತ್ರ್ಯದ ಬಳಿಕ ಪ್ರಧಾನಿ ನರೇಂದ್ರ…

Read More

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯುಜಿಸಿಇಟಿ-2025ರ ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಡೌನ್ ಲೋಡ್ ಮಾಡಿಕೊಳ್ಳೋದು ಹೇಗೆ ಅಂತ ಮುಂದೆ ಓದಿ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, UGCET-25 ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಈ ಕೆಳಕಂಡ ಲಿಂಕ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ OMR ಶೀಟು ನೀಡಲಾಗುವುದು. ಏ.15, 16 & 17ರಂದು ಪರೀಕ್ಷೆ ನಡೆಯಲಿದೆ ಎಂದಿದೆ. ಈ ರೀತಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಿ ಯುಜಿ ಸಿಇಟಿ-2025ರ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳು https://cetonline.karnataka.gov.in/ugcet_admit_card_2025/forms/login.aspx ಲಿಂಕ್ ಕ್ಲಿಕ್ ಮಾಡುವ ಮೂಲಕ, ಅಲ್ಲಿ ಕೇಳುವಂತ ಮಾಹಿತಿ ನೀಡಿ, ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. https://twitter.com/KEA_karnataka/status/1908776462280180060 https://kannadanewsnow.com/kannada/pm-modi-unveils-countrys-first-vertical-railway-bridge-whats-special/ https://kannadanewsnow.com/kannada/breaking-microfinance-harassment-in-the-state-live-fruit-vendor-attempts-suicide-by-consuming-poison/

Read More

ತಮಿಳುನಾಡು: ಆ ಪ್ರದೇಶಕ್ಕೆ ರೈಲು ಸಂಪರ್ಕ ಕಲ್ಪಿಸದೇ ಇದ್ದರೇ ಭಾರತದೊಂದಿಗೆ ಸಂಪರ್ಕವೇ ಇರುತ್ತಿರಲಿಲ್ಲ. ರೈಲು ಮಾರ್ಗದೊಂದಿಗೆ ಸಂಪರ್ಕ ಪಡೆದಂತ ಭಾರತದ ಭೂ ಭಾಗವೇ ರಾಮೇಶ್ವರಂ. ಈ ನಗರಕ್ಕೆ ಸಂಪರ್ಕ ಕಲ್ಪಿಸಿದ್ದೇ ಪಂಬನ್ ಸೇತುವೆ. ಕೆಲ ವರ್ಷಗಳಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರಕ್ಕೆ ನೂತನ ಸಮುದ್ರ ರೈಲು ಸೇತುವೆ ಸಿದ್ಧಗೊಂಡಿದೆ. ಇಂತಹ ದೇಶದ ಮೊದಲ ಲಿಫ್ಟ್ ಸೇತುವೆ ರಾಮೇಶ್ವರಂನ ಪಂಬನ್ ಪ್ರಿಡ್ಜ್ ಅನ್ನು ಪ್ರಧಾನಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಅದರ ವಿಶೇಷತೆ ಏನು ಅಂತ ಮುಂದಿದೆ ಓದಿ. ರಾಮೇಶ್ವರಂ ದ್ವೀಪಕ್ಕೆ ಭಾರತೀಯ ರೈಲ್ವೆಯಿಂದ ಸಂಪರ್ಕ ಒಂದು ಕಾಲದಲ್ಲಿ ಆ ಭೂ ಭಾಗ ಸುತ್ತಲೂ ಸಮುದ್ರದಿಂದ ಆವೃತ್ತವಾಗಿ ದ್ವೀಪವಾಗಿತ್ತು. ಆ ದ್ವೀಪಕ್ಕೆ ಸಂಪರ್ಕ ಕಲ್ಪಿಸಿದ್ದು ರೈಲ್ವೆ ಸಾರಿಗೆ ಸಂಚಾರದ ಮೂಲಕ. ಈಗ ರಸ್ತೆ, ರೈಲು ಮಾರ್ಗದ ಮೂಲಕ ಜೊತೆಗೆ ಬೆಸೆದುಕೊಂಡಿರೋದೇ ರಾಮೇಶ್ವರಂ. ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ಪಟ್ಟಣಕ್ಕೆ ರೈಲು ಸಾರಿಗೆ ಮೂಲಕ ಮತ್ತೊಮ್ಮೆ ಸಂಪರ್ಕ ಕಲ್ಪಿಸಲು ನೈರುತ್ಯ ರೈಲ್ವೆ ಸಿದ್ಧವಾಗಿದೆ. ಇದಕ್ಕಾಗಿ ಭಾರತದ ಮೊದಲ…

Read More