Author: kannadanewsnow09

ಬೆಂಗಳೂರು: “ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೊಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳ ಜತೆ ಶಿವಕುಮಾರ್ ಅವರು ಮಾತುಕತೆ ನಡೆಸಿದರು. ಈ ವೇಳೆ ಪಿತ್ರಾರ್ಜಿತ ಆಸ್ತಿಯಲ್ಲಿ 50% ಸರ್ಕಾರ ಪಡೆಯಬೇಕು ಎಂಬ ಪಿತ್ರೊಡಾ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇದು ಭಾರತ. ಈ ಬಗ್ಗೆ ಜೈರಾಮ್ ರಮೇಶ್ ಅವರು ನಮ್ಮ ಪಕ್ಷದ ಪರವಾಗಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಡೆತ್ ಟ್ಯಾಕ್ಸ್, ಬರ್ತ್ ಟ್ಯಾಕ್ಸ್ ಇಲ್ಲ. ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ. ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ. ಅದು ಸುಳ್ಳು, ಅದಕ್ಕೆ ನಾವು ಅವಕಾಶ ನೀಡುವುದಿಲ್ಲ. ನಮ್ಮ ದೇಶದಲ್ಲಿ ರಾಜಕಾರಣದಲ್ಲಿ ತಂದೆ ಹಾಗು ಪೂರ್ವಜರ ಹೆಸರಿನಲ್ಲಿ ಚುನಾವಣೆ ಮಾಡುತ್ತಿರುವಾಗ ಅವರ ಆಸ್ತಿ ವರ್ಗಾವಣೆಗೆ ಅವಕಾಶ ನೀಡುತ್ತಾರಾ? ದೇಶದ ಸಂಪತ್ತನ್ನು ನಗದೀಕರಣ ಮಾಡಲು…

Read More

ಪಾಟ್ನಾ: ಪಾಟ್ನಾ ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಪಾಟ್ನಾದ ಕೊಟ್ವಾಲಿ ಪೊಲೀಸ್ ಠಾಣೆ ಪ್ರದೇಶದ ಗೋಲಾಂಬರ್ ಬಳಿಯ ಹೋಟೆಲ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಅಧಿಕಾರಿಗಳು ಬೆಂಕಿಯನ್ನು ನಂದಿಸಿದ್ದಾರೆ ಮತ್ತು ಗಾಯಗೊಂಡ ಎಲ್ಲರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಗ್ನಿಶಾಮಕ ಪಾಟ್ನಾದ ಡಿಐಜಿ ಮೃತ್ಯುಂಜಯ್ ಕುಮಾರ್ ತಿಳಿಸಿದ್ದಾರೆ. ಅಗ್ನಿಶಾಮಕ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಹೋಟೆಲ್ ನಿಂದ ಹಲವಾರು ಜನರನ್ನು ರಕ್ಷಿಸಿದ್ದಾರೆ. ಈವರೆಗೆ ಹಲವಾರು ಜನರನ್ನು ರಕ್ಷಿಸಿ ಪಿಎಂಸಿಎಚ್ ಗೆ ಕಳುಹಿಸಲಾಗಿದೆ. https://twitter.com/ANI/status/1783384344549294357 ಹೋಟೆಲ್ ಕಟ್ಟಡದಿಂದ 45 ಜನರನ್ನು ರಕ್ಷಿಸಲಾಗಿದೆ ಎಂದು ಅಗ್ನಿಶಾಮಕ ಮಹಾನಿರ್ದೇಶಕ ಶೋಭಾ ಅಹೋಕರ್ ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಸಂಭವಿಸಿದೆ ಮತ್ತು ಹೋಟೆಲ್ನಲ್ಲಿ ಸುರಕ್ಷತಾ ಮಾನದಂಡಗಳನ್ನು ಅನುಸರಿಸಲಾಗಿಲ್ಲ. ಹೋಟೆಲ್ ಬಳಿಯ ಎಲ್ಲಾ ಕಟ್ಟಡಗಳ ಅಗ್ನಿಶಾಮಕ ಲೆಕ್ಕಪರಿಶೋಧನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.…

Read More

ಬೆಂಗಳೂರು: 2024ರ ಲೋಕಸಭಾ ಚುನಾವಣೆಯ ಕರ್ತವ್ಯಗಳಿಗೆ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಚುನಾವಣಾ ಭತ್ಯೆಯನ್ನು ಪಾವತಿಸುವಂತೆ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. ಈ ಕುರಿತಂತೆ ಸಹಾಯಕ ಆರಕ್ಷಕ ಮಹಾ ನಿರೀಕ್ಷಕರು ಅವರು ಆದೇಶ ಮಾಡಿದ್ದು, 2024ರ ಲೋಕಸಭಾ ಚುನಾವಣೆಗೆ ನೇಮಿಸಲ್ಪಟ್ಟ ವಿವಿಧ ಹುದ್ದೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಚುನಾವಣಾ ಭತ್ಯೆಯನ್ನು ಪಾವತಿಸಲು ಉಲ್ಲೇಖ(3)ರ ಸರ್ಕಾರದ ಸುತ್ತೋಲೆಯಂತೆ ಎ.ಸಿ ಬಿಲ್ಲಿನ ಮೇಲೆ ಚುನಾವಣ ಸಂಬಂಧಿತ ವೆಚ್ಚಗಳಿಗೆ ಸೆಳೆದು ಪಾವತಿಸಲು ಯಾವುದೇ ಮಿತಿಯಿಲ್ಲದಿರುವುದರಿಂದ ಸದರಿ ಸುತ್ತೋಲೆಯನ್ವಯ ಕೂಡಲೇ ಕ್ರಮವನ್ನು ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. 2024ರ ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ನೇಮಿಸಲ್ಪಟ್ಟ ವಿವಿಧ ಹುದ್ದೆಯ ಅಧಿಕಾರಿ/ಸಿಬ್ಬಂದಿಯವರುಗಳಿಗೆ ಈ ಕೆಳಕಂಡಂತೆ ಸಂಭಾವನೆ/ಚುನಾವಣಾ ಭತ್ಯೆಯನ್ನು ನೀಡಲು ಕ್ರಮವನ್ನು ಕೈಗೊಳ್ಳಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ. 1 Deputy Superintendent of Police and above (All Units/wings of police Department) (lump sum) – ರೂ.7000 2 Police Inspectors (All Units/wings of police Department)…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಟೀಕೆಯಲ್ಲಿ ನಿರತರಾಗಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಪಕ್ಷದಿಂದ ದೂರು ನೀಡಲಾಗಿದೆ. ಇಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಕಚೇರಿಗೆ ತೆರಳಿದಂತ ಕಾಂಗ್ರೆಸ್ ಪಕ್ಷದ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು, ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ವಿಪಕ್ಷದ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ನೀಡಿರುವಂತ ದೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನೀಡಿರುವಂತ ದೂರಿನಲ್ಲಿ ಕೋರಲಾಗಿದೆ. https://kannadanewsnow.com/kannada/big-update-from-school-education-department-on-sslc-exam-result/ https://kannadanewsnow.com/kannada/three-youths-killed-after-being-hit-by-train-in-bengaluru/

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿರುವಂತ ವಿದ್ಯಾರ್ಥಿಗಳು ಫಲಿತಾಂಶ ಯಾವಾಗ ಅನ್ನೋ ತೀವ್ರ ಕುತೂಹಲದಲ್ಲಿ ಇದ್ದೀರಿ. ಪರೀಕ್ಷೆ ಮುಗಿದ ಬೆನ್ನಲ್ಲೇ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಕೂಡ ನಡೆಸಲಾಗುತ್ತಿದೆ. ಇನ್ನೇನು ಫಲಿತಾಂಶ ಪ್ರಕಟಿಸೋದು ಮಾತ್ರವೇ ಬಾಕಿ ಉಳಿದಿದೆ. ಹಾಗಾದ್ರೆ ಯಾವಾಗ ಫಲಿತಾಂಶ ಪ್ರಕಟವಾಗಲಿದೆ ಅನ್ನೋ ಬಗ್ಗೆ ಬಿಗ್ ಅಪ್ ಡೇಟ್ ಮುಂದೆ ಓದಿ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ ಹಂಚಿಕೊಳ್ಳಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ಬಳಿಕ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಇನ್ನೂ ಕೆಲವೇ ಕೆಲವು ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಬಾಕಿ ಉಳಿದಿದೆ ಎಂದು ತಿಳಿಸಿದೆ. ಬಾಕಿ ಇರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕೆಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಇವುಗಳ ಮೌಲ್ಯ ಮಾಪನ ಕಾರ್ಯವು ಮುಗಿದ ಬಳಿಕ ಶೀಘ್ರದಲ್ಲೇ…

Read More

ಬೆಂಗಳೂರು: ನಗರದಲ್ಲಿ ಚಲಿಸುತ್ತಿದ್ದಂತ ರೈಲಿಗೆ ಸಿಲುಕಿದಂತ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿಯ ಬಳಿಯಲ್ಲಿ ರೈಲುಗೆ ಸಿಲುಕಿ ಮೂವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಸಾವನ್ನಪ್ಪಿದಂತ ಮೂವರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ಶಂಕಿಸಲಾಗಿದೆ. ಮೃತರೆಲ್ಲರೂ 25 ವರ್ಷ ವಯಸ್ಸಿನ ಯುವಕರು ಎಂಬುದಾಗಿ ಹೇಳಲಾಗುತ್ತಿದೆ.  ರೈಲುಗೆ ಸಿಲುಕಿ ಮೂವರು ದುರ್ಮರಣ ಹೊಂದಿರುವಂತ ವಿಷಯ ತಿಳಿದಂತ ಬೈಯ್ಯಪ್ಪನಹಳ್ಳಿ ಠಾಮೆಯ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/good-news-for-students-appearing-for-ii-puc-exam-2-ksrtc-bmtc-allow-free-travel/ https://kannadanewsnow.com/kannada/ii-puc-exam-2-to-begin-from-april-29-students-to-follow-this-rule/

Read More

ಬೆಂಗಳೂರು: ಏಪ್ರಿಲ್.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ಹಾಜರಾಗೋ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ತನ್ನ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿವೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 29.04.2024 ರಿಂದ ಕರ್ನಾಟಕದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ರವರು ಕೋರಿರುತ್ತಾರೆ ಎಂದು ಹೇಳಿದೆ. ಅದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 29.04.2024 ರಿಂದ 16.05.2024 ರವರೆಗೆ, ಪರೀಕ್ಷೆಗೆ…

Read More

ಬೆಂಗಳೂರು: ಶ್ರೀ ಗುರುರಾಘವೇಂದ್ರ ಸಹಕಾರಿ ಬ್ಯಾಂಕ್, ಗುರು ಸಾರ್ವಭೌಮ ಬ್ಯಾಂಕ್, ವಸಿಷ್ಠ ಸಹಕಾರಿ ಬ್ಯಾಂಕುಗಳ ಠೇವಣಿದಾರರು, ಕಾಂಗ್ರೆಸ್ ಮುಖಂಡರಾದ ಡಾ.ಶಂಕರ್‌ ಗುಹಾ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ರವರ ನೇತೃತ್ವದಲ್ಲಿ ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಿ ತಮಗಾಗಿರುವ ಅನ್ಯಾಯದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಧ್ವನಿ ಎತ್ತುವಂತೆ ಮನವಿ‌ ಮಾಡಿದರು. ಈ‌ ಪ್ರಕರಣವನ್ನು 6 ತಿಂಗಳುಗಳ ಹಿಂದೆಯೇ ಸಿಬಿಐ ತನಿಖೆಗೆ ವಹಿಸಲಾಗಿದ್ದರೂ ಸಹ, ಬಿಜೆಪಿಯ ಸಂಸದ ಹಾಗೂ ಶಾಸಕರು ತನಿಖಾಧಿಕಾರಿಯನ್ನೇ ನೇಮಿಸದಂತೆ ತಮ್ಮ‌ಪ್ರಭಾವ ಬಳಸಿ ತಡೆ‌ಹಿಡಿದ್ದಿದ್ದಾರೆ‌. ಈ ಪ್ರಕರಣಕ್ಕೆ ವಿಶೇಷ ತನಿಖಾ ದಳ ನೇಮಿಸಿ ನಮಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು. ಈ ಬ್ಯಾಂಕ್ ಗಳ ಹಗರಣದಿಂದ ಠೇವಣಿದಾರರು ಲಕ್ಷಾಂತರ ರೂ.ಕಳೆದುಕೊಂಡಿದ್ದಾರೆ. ಬಿಜೆಪಿಯವರೇ ಕೆಲ ಜನಪ್ರತಿನಿಧಿಗಳೇ ಈ ಹಗರಣದಲ್ಲಿ ಶಾಮೀಲಾಗಿದ್ದು, ಅವರ ವಿರುದ್ಧ ಕ್ರಮಕೈಗೊಂಡು ಠೇವಣಿದಾರರ ಹಣ ಮರಳಿಸುವಂತಾಗಬೇಕು ಎಂದು ಕೋರಿದರು‌. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಿಯಾಂಕ ಗಾಂಧಿಯವರು , ಚುನಾವಣೆ ಸಮಯದಲ್ಲಿ ಸಂತ್ರಸ್ತರು…

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಒಂದು ದಿನ ಬಾಕಿ ಇದೆ. ಏಪ್ರಿಲ್.26ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಇದೇ ವೇಳೆಯಲ್ಲಿ ರಾಜ್ಯ ಒಕ್ಕಲಿಗರ ಸಮುದಾಯದಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಣೆ ಮಾಡಲಾಗಿದೆ. ರಾಜ್ಯ ಒಕ್ಕಲಿಗರ ಸಮುದಾಯಗಳ ಒಕ್ಕೂಟದಿಂದ ನೆನ್ನೆ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ಅವರು ಒಕ್ಕಲಿಗ ಸಮುದಾಯದ ಸಂಘಕ್ಕೆ ಜಮೀನು ಕೊಟ್ಟಿದ್ದು, ಆದಿಚುಂಚನಗಿರಿ ವೈದ್ಯಕೀ, ಎಂಜಿನಿಯರಿಂಗ್ ಕಾಲೇಜು ‌ಮಂಜೂರು ಮಾಡಿದ್ದು ಕಾಂಗ್ರೆಸ್ ಸರ್ಕಾರ, ಈಗಲೂ ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ 10 ಎಕರೆ ಜಮೀನು ಮಂಜೂರು ಮಾಡಿಸಿಕೊಟ್ಟಿದ್ದಾರೆ. ಸಮುದಾಯ ಮಠ, ಶಿಕ್ಷಣ ಸಂಸ್ಥೆಗಳಿಗೆ ಹಲವು ಕೊಡುಗೆ ನೀಡಿ ಸಮುದಾಯದ ಹಿತಕ್ಕಾಗಿ ಕಾಂಗ್ರೆಸ್‌ ಪಕ್ಷ ಶ್ರಮಿಸಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಕರೆ‌ ನೀಡಿದರು. ದೇವೆಗೌಡರಿಂದ‌ಒಕ್ಕಲಿಗ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಅಪ್ಪ ಮಕ್ಕಳು ಮೋಸ ಮಾಡುತ್ತಕೇ ಇದ್ದಾರೆ, ಸಮುದಾಯಕ್ಕೆ‌ ಮತ್ತೊಂದು ಮಠ ಸ್ಥಾಪಿಸಿದರು. ಎಚ್.ಎನ್…

Read More

ನವದೆಹಲಿ: ದೇಶದಲ್ಲಿ ಮುಂದಿನ ಐದು ದಿನಗಳವರೆಗೆ ಪೂರ್ವ ಮತ್ತು ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ದೀರ್ಘಕಾಲದ ಶಾಖದ ಅಲೆಯನ್ನು ನಿರೀಕ್ಷಿಸಲಾಗಿದೆ. ಮುಂದಿನ ಐದು ದಿನಗಳವರೆಗೆ ಒಡಿಶಾದ ಕರಾವಳಿ, ಗಂಗಾ ಪಶ್ಚಿಮ ಬಂಗಾಳ ಮತ್ತು ಉಪ ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಪ್ರದೇಶಗಳು ಮತ್ತು ಕರ್ನಾಟಕದ ಒಳನಾಡಿನಲ್ಲಿ ತೀವ್ರ ಶಾಖದ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಹಾರ, ಜಾರ್ಖಂಡ್, ಕರಾವಳಿ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ ಮತ್ತು ಕರ್ನಾಟಕದ ಕರಾವಳಿಯ ಪ್ರತ್ಯೇಕ ಪ್ರದೇಶಗಳು ಈ ಅವಧಿಯಲ್ಲಿ ಬಿಸಿಗಾಳಿ ಪರಿಸ್ಥಿತಿಗಳಿಗೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಮುಂದಿನ 5 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಕರಾವಳಿ ಆಂಧ್ರಪ್ರದೇಶ ಮತ್ತು ಯಾಣಂ, ತೆಲಂಗಾಣ, ರಾಯಲಸೀಮಾದ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖ ತರಂಗ ಪರಿಸ್ಥಿತಿಗಳು; 24 ಮತ್ತು 26 ರಂದು ಕರಾವಳಿ ಕರ್ನಾಟಕ, 24 ಮತ್ತು 25 ರಂದು ತಮಿಳುನಾಡು; 25-28 ನೇ ಅವಧಿಯಲ್ಲಿ ಪೂರ್ವ ಉತ್ತರ ಪ್ರದೇಶ ಮತ್ತು 26-28 ನೇ ಅವಧಿಯಲ್ಲಿ ಪಶ್ಚಿಮ ಉತ್ತರ ಪ್ರದೇಶ;…

Read More