Subscribe to Updates
Get the latest creative news from FooBar about art, design and business.
Author: kannadanewsnow09
ಮಹಾರಾಷ್ಟ್ರ: ಪ್ರಧಾನಿ ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ. ಅವರ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ ಅಂತ ಸವಾಲು ಹಾಕಿದ್ದೀನಿ ಎಂಬುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮಹಾರಾಷ್ಟ್ರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ. ಶಕ್ತಿ ಯೋಜನೆ: ಇಲ್ಲಿಯವರೆಗೂ ಈ ಗ್ಯಾರಂಟಿಯಿಂದ 325 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ಗೃಹಜ್ಯೋತಿ : ಒಂದು ಕೋಟಿ 62 ಲಕ್ಷ ಕುಟುಂಬಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ. ಅನ್ನಭಾಗ್ಯ : ಒಂದು ಕೋಟಿ 20 ಲಕ್ಷ ಕುಟುಂಬಗಳು ಐದು ಕೆಜಿ ಉಚಿತ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಬಾಬ್ತು 170 ರೂಪಾಯಿಗಳನ್ನು ತಲಾ ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ: ಒಂದು ಕೋಟಿ 22 ಲಕ್ಷ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2,000 ರೂಪಾಯಿ ಗೃಹಲಕ್ಷ್ಮಿ ಹಣ…
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ನಡು ರಸ್ತೆಯಲ್ಲೇ ಕಾರೊಂದು ಬೆಂಕಿಗೆ ಆಹುತಿಯಾಗಿದೆ. ಈ ಕಾರಿನಲ್ಲಿದ್ದಂತ ವ್ಯಕ್ತಿಯೊಬ್ಬರು ಸಜೀವವಾಗಿ ದಹನವಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಮುದ್ದಿನಪಾಳ್ಯ ಬಳಿಯಲ್ಲಿನ ರಸ್ತೆಯೊಂದರಲ್ಲೇ ಕಾರೊಂದು ಹೊತ್ತಿ ಉರಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಕಾರಿನ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ನಂದಿದ ಬಳಿಕ ನೋಡಿದ್ರೇ ಕಾರಿನಲ್ಲಿ ವ್ಯಕ್ತಿಯೊಬ್ಬರು ಸಜೀವವಾಗಿ ದಹನವಾಗಿರುವುದು ತಿಳಿದು ಬಂದಿದೆ. ಕಾರಿನಲ್ಲಿ ಸಜೀವವಾಗಿ ದಹನವಾದಂತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲಿಸಿ ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. https://kannadanewsnow.com/kannada/another-good-news-for-the-people-of-the-state-all-old-cases-in-ac-court-to-be-disposed-of-by-february/
ಬೆಂಗಳೂರು : ಉಪ ವಿಭಾಗಾಧಿಕಾರಿ (ಎ.ಸಿ) ಕಂದಾಯ ನ್ಯಾಯಾಲಯದಲ್ಲಿ ಈ ಹಿಂದಿನ ಸರ್ಕಾರ ಉಳಿಸಿ ಹೋಗಿದ್ದ ಹಳೆಯ ತಕರಾರು ಅರ್ಜಿಗಳ ಪೈಕಿ ಶೇ.80ರಷ್ಟು ಪ್ರಕರಣಗಳನ್ನು ಕಳೆದ ಒಂದು ವರ್ಷದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ಕಾರ್ಯ ವೈಖರಿಗೆ ಮೆಚ್ಚುಗೆ ಸೂಚಿಸಿದರು. ಶನಿವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಿ ಮಾತನಾಡಿದ ಅವರು, “ಎಸಿ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡಲು ಸರ್ಕಾರ ನಿಗದಿಪಡಿಸಿರುವ ಕಾಲಮಿತಿ 6 ತಿಂಗಳು ಮಾತ್ರ. ಆದರೆ ಕಳೆದ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಕಂದಾಯ ನ್ಯಾಯಾಲಯಗಳ ಪ್ರಕರಣಗ ವಿಳಂಬದ ಬಗ್ಗೆ ತಲೆಯನ್ನೇ ಕೆಡಿಸಿಕೊಂಡಿರಲಿಲ್ಲ. ಪರಿಣಾಮ ರೈತರು ತೀವ್ರ ತೊಂದರೆ ಒಳಗಾಗಬೇಕಾದ ಸ್ಥಿತಿ ಎದುರಾಗಿತ್ತು” ಎಂದು ವಿಷಾದಿಸಿದರು. “ನಮ್ಮ ಸರ್ಕಾರ ಅಧಿಕಾರ ವಹಿಸಿಕೊಂಡಾಗ ಎಸಿ ನ್ಯಾಯಾಲಯದಲ್ಲಿ ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿಯ 59,339 ಪ್ರಕರಣಗಳು ವಿಲೇ ಆಗದೆ ಬಾಕಿ ಉಳಿದಿದ್ದವು. ಕಂದಾಯ ನ್ಯಾಯಾಲಯಗಳಲ್ಲಿ…
ಶಿವಮೊಗ್ಗ: ಇಂದು ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಪರಿಷತ್ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂತೋಷ್ ಕುಮಾರ್. ಎನ್ ಆಯ್ಕೆಯಾಗಿದ್ದಾರೆ. ಸಾಗರದ ತಾಳಗುಪ್ಪ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್. ಎನ್ ಹಾಗೂ ಸುರೇಶ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. 25 ಮತಗಳನ್ನು ಪಡೆಯುವ ಮೂಲಕ ಸಂತೋಷ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಇನ್ನೂ ಸಾಗರ ತಾಲ್ಲೂಕು ರಾಜ್ಯ ಪರಿಷತ್ ಸ್ಥಾನಕ್ಕೆ ನಡೆದಂತ ಚುನಾವಣೆಯಲ್ಲಿ ದೇವೇಂದ್ರಪ್ಪ 24 ಮತಗಳನ್ನು ಗಳಿಸಿ, ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ ಚುನಾವಣೆ ಮತಗಳ ವಿವರ ಸಂತೋಷ್ ಕುಮಾರ್. ಎನ್ – 25 ಮತಗಳು ಸುರೇಶ್.ಎಸ್.ಕೆ – 08 ಮತಗಳು. ರಾಜ್ಯ ಪರಿಷತ್ ಸ್ಥಾನದ ಚುನಾವಣೆ ಮತಗಳ ವಿವರ ದೇವೇಂದ್ರಪ್ಪ – 24 ಮತಗಳಿಂದ ಗೆಲುವು. ನಾಗರಾಜ.ಕೆ- 07 ಮತಗಳು. ಮಂಜುನಾಥ- 02 ಮತಗಳು. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಹುಬ್ಬಳ್ಳಿ: ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 27ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ನೂತನ ಬಸ್ಸುಗಳನ್ನು ಸಚಿವ ರಾಮಲಿಂಗಾರೆಡ್ಡಿ ಅವರು ಲೋಕಾರ್ಪಣೆಗೊಳಿಸಿದರು. ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ನೂತನ ಬಸ್ಸುಗಳ ಲೋಕಾರ್ಪಣೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅಪಘಾತ ರಹಿತ ಸೇವೆಗಾಗಿ 43 ಚಾಲಕರಿಗೆ “ಸುರಕ್ಷಾ ಚಾಲಕ” ಬೆಳ್ಳಿ ಪದಕ ಪ್ರದಾನ ಮಾಡಿದರು. ಅಲ್ಲದೇ ಸಂಸ್ಥೆಯ ನೂತನ ಯೋಜನೆಗಳಾದ ಸಾರಿಗೆ ಸಂಜೀವಿನಿ ಯೋಜನೆಯಡಿ ಕಾರವಾರ/ಬೆಳಗಾವಿ/ಗದಗ ಸರ್ಕಾರಿ ವಿಜ್ಞಾನ ಸಂಸ್ಥೆಗಳೊಂದಿಗೆ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಚಾಲನೆ ನೀಡಲಾಯಿತು. ವಾಯವ್ಯ ಸಾರಿಗೆ ಸಂಪದ ಡಿಜಿಟಲ್ ತ್ರೈಮಾಸಿಕ ಪತ್ರಿಕೆಯ ಬಿಡುಗಡೆಯನ್ನು ಮಾಡಿದರು. ಮೃತಪಟ್ಟ ಸಂಸ್ಥೆಯ ನೌಕರರ ಅವಲಂಬಿತರಿಗೆ ನೌಕರರ ಕುಟುಂಬ ಕಲ್ಯಾಣ ನಿಧಿ ಯೋಜನೆಯ ರೂ 5 ಲಕ್ಷ ಮೊತ್ತದ ಚೆಕ್ ವಿತರಣೆ ಮತ್ತು ಸಂಸ್ಥೆಯಲ್ಲಿ ಮೃತಪಟ್ಟ ನೌಕರರ ಅವಲಂಬಿತರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ರೂ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಪರಿಷತ್ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಅಂತಿಮ ಕಣದಲ್ಲಿ ಒಟ್ಟು ಐವರು ಅಭ್ಯರ್ಥಿಗಳಿದ್ದು, ಒಂದು ಸ್ಥಾನಕ್ಕೆ ಈಗಾಗಲೇ ಅವಿರೋಧ ಆಯ್ಕೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ರಾಜ್ಯ ಪರಿಷತ್ ಸ್ಥಾನಕ್ಕೆ ನಾಮಪತ್ರ ಹಿಂಪಡೆಯಲು ದಿನಾಂಕ: 11-11-2024 ಕೊನೆಯ ದಿನವಾಗಿತ್ತು. ಈ ಬಳಿಕ ಅಂತಿಮ ಕಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು, ರಾಜ್ಯ ಪರಿಷತ್ ಸ್ಥಾನಕ್ಕೆ ಮೂವರು ಕಣದಲ್ಲಿ ಇದ್ದಾರೆ. ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿ ಸುರೇಶ್.ಎಸ್.ಕೆ ಹಾಗೂ ಸಂತೋಷ್ ಕುಮಾರ್.ಎನ್ ಕಣದಲ್ಲಿ ಇದ್ದಾರೆ. ನಾಮಪತ್ರ ವಾಪಾಸ್ ಪಡೆದ ಬಳಿಕ ರಾಜ್ಯ ಪರಿಷತ್ ಸ್ಥಾನದ ಚುನಾವಣಾ ಕಣದಲ್ಲಿ ದೇವೇಂದ್ರಪ್ಪ.ಕೆ, ನಾಗರಾಜ.ಕೆ ಹಾಗೂ ಮಂಜುನಾಥ ಎಂ.ಎಸ್ ಹುರಿಯಾಳುಗಳಾಗಿದ್ದಾರೆ. ನಾಳೆ ಅಧ್ಯಕ್ಷರು ಹಾಗೂ ರಾಜ್ಯಪರಿಷತ್ ಸ್ಥಾನಕ್ಕೆ ಆಯ್ಕೆಗಾಗಿ ಸಾಗರದ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ…
ನವದೆಹಲಿ: ನವೆಂಬರ್ 24 ಮತ್ತು 25 ರಂದು ಜೆಡ್ಡಾದಲ್ಲಿ ನಡೆಯಲಿರುವ ಮೆಗಾ ಹರಾಜಿನಲ್ಲಿ 574 ಆಟಗಾರರ ಶಾರ್ಟ್ಲಿಸ್ಟ್ ಅನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಕಟಿಸಿದೆ. ಭಾರತದ ಕೆಲವು ದೊಡ್ಡ ಹೆಸರುಗಳು ಸೇರಿದಂತೆ ಒಟ್ಟು 81 ಆಟಗಾರರು ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ.ಗೆ ಉಳಿಸಿಕೊಂಡಿದ್ದಾರೆ. ಹರಾಜಿನ ಅಂತಿಮ ಪಟ್ಟಿಯಲ್ಲಿ ಒಟ್ಟು 366 ಭಾರತೀಯ ಆಟಗಾರರು ಮತ್ತು 208 ವಿದೇಶಿ ಆಟಗಾರರು ಇದ್ದಾರೆ. ಐಪಿಎಲ್ ಆಯೋಜಕರು 1574 ಆಟಗಾರರ ಲಾಂಗ್ ಲಿಸ್ಟ್ ಅನ್ನು ಕಡಿತಗೊಳಿಸಿ, 1000 ಆಟಗಾರರನ್ನು ಕಡಿತಗೊಳಿಸಿದ್ದಾರೆ. ಭಾನುವಾರ ಮತ್ತು ಸೋಮವಾರ ಕೇವಲ 204 ಸ್ಲಾಟ್ ಗಳು ಮಾತ್ರ ಲಭ್ಯವಿರುತ್ತವೆ. ಮೊದಲ ದಿನ ಮಧ್ಯಾಹ್ನ 3:30 ಕ್ಕೆ ಹರಾಜು ಪ್ರಾರಂಭವಾಗಲಿದೆ ಎಂದು ಐಪಿಎಲ್ ಸಂಘಟಕರು ಖಚಿತಪಡಿಸಿದ್ದಾರೆ, ಅಂದರೆ ಇದು ಪರ್ತ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ನ ಸಮಯದೊಂದಿಗೆ ಘರ್ಷಣೆಯಾಗುವುದಿಲ್ಲ. ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿ ನವೆಂಬರ್ 22 ರಿಂದ ಒಪ್ಟಸ್ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಎರಡು ದಿನಗಳ ಮೆಗಾ…
ಶಿವಮೊಗ್ಗ: ಸಾಗರದ ನಗರದಲ್ಲಿ ಈಗಾಗಲೇ ಹಲವೆಡೆ ನಂದಿನಿ ಪಾರ್ಲರ್ ಗಳಿದ್ದಾವೆ. ಹಾಲು, ಮೊಸರು ಸೇರಿದಂತೆ ಇತರೆ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ. ಈಗ ಹೊಸದಾಗಿ ಬಿಹೆಚ್ ರಸ್ತೆಯಲ್ಲಿ ನೂತನ ನಂದಿನಿ ಐಸ್ ಕ್ರೀಮ್ ಪಾರ್ಲರ್ ಕೂಡ ಓಪನ್ ಮಾಡಲಾಗಿದೆ. ಇಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಾಗರ ನಗರದ ಬಿಹೆಚ್ ರಸ್ತೆಯ ನ್ಯೂ ಗಂಧರ್ವ ಹೋಟೆಲ್ ಬಳಿಯಲ್ಲಿ ನೂತನವಾಗಿ ನಿರ್ಮಿಸಿರುವಂತ ನಂದಿನಿ ಐಸ್ ಕ್ರೀಮ್ ಪಾರ್ಲರ್ ಅನ್ನು ಉದ್ಘಾಟಿಸಿದರು. ಈ ಬಳಿಕ ಮಾತನಾಡಿದಂತ ಅವರು ನಗರದಲ್ಲಿ ಜನರಿಗೆ ಉತ್ತಮ ಗುಣಮಟ್ಟದ ಸಿಹಿ ತಿನಿಸಿನ ಸವಿ ಉಣಬಡಿಸಲು ನಂದಿನಿ ಐಸ್ ಕ್ರೀಮ್ ಪಾರ್ಲರ್ ತೆರೆಯಲಾಗಿದೆ. ಈ ಮಳಿಗೆ ತೆರೆದಂತ ಶಿಮೂಲ್ ಗೆ ಧನ್ಯವಾದಗಳನ್ನು ತಿಳಿಸಿದರು. ಸಾಗರ ನಗರದ ಆಸ್ಪತ್ರೆ, ಕಾಲೇಜುಗಳ ಬಳಿಯಲ್ಲೂ ನಂದಿನಿ ಬೂತ್ ತೆರೆಯಲು ಯೋಜಿಸಲಾಗಿದೆ. ಈಗಾಗಲೇ ಈ ಸಂಬಂಧ ಶಿಮೂಲ್ ಅಧ್ಯಕ್ಷರಾಗಿರುವಂತ ಮಂಜುನಾಥ್ ಗೌಡ ಬಳಿಯಲ್ಲೂ ಮಾತನಾಡಲಾಗಿದೆ. ಶೀಘ್ರವೇ ಸ್ಥಳ ನಿಗದಿ ಪಡಿಸಿ, ನಂದಿನಿ ಬೂತ್ ಓಪನ್ ಮಾಡಲಾಗುತ್ತದೆ ಎಂದರು.…
ನಮ್ಮ ನಿಮ್ಮೆಲ್ಲರ ಮನೆಗಳಲ್ಲಿ ಈಗಲೂ ಆರೋಗ್ಯವಂತ ವ್ಯಕ್ತಿ ಅನಾರೋಗ್ಯಕ್ಕೆ ಒಳಗಾದರೆ, ಹಣವಂತ ವ್ಯಕ್ತಿ ಹಣ ಕಳೆದುಕೊಂಡರೆ ಅಥವಾ ಇನ್ನೇನಾದರೂ ಸಂಭವಿಸಿದರೆ ಆತನಿಗೆ ದೃಷ್ಟಿಯಾಗಿರಬಹುದು ಎಂದು ಹೇಳುವ ಪರಿಪಾಠವಿದೆ. ಹೌದು, ಈಗಲೂ ಕೆಲವೊಂದು ನಂಬಿಕೆಗಳು ಬಲವಾಗಿ ಬೇರೂರಿವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ,…
ಬೆಂಗಳೂರು: ಶ್ರೀ ಸಂತ ಕನಕದಾಸ ಜಯಂತಿ ಪ್ರಯುಕ್ತ ನೀಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ ಗೆ ಬಳ್ಳಾರಿಯ ಶ್ರೀ ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಸೋಮವಾರ ನವೆಂಬರ್ 18ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕನಕದಾಸ ಜಯಂತಿ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳು ಪ್ರದಾನ ಮಾಡಲಿದ್ದಾರೆ ಎಂದು ಅವರು ಹೇಳಿದರು. ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು , ಕನಕದಾಸರ ಪುತ್ಥಳಿ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. https://kannadanewsnow.com/kannada/ipl-announces-player-list-for-mega-auctions/ https://kannadanewsnow.com/kannada/breaking-good-news-for-state-aided-primary-female-teachers-employees-govt-orders-to-grant-parental-leave/