Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಬನಾರಸ್ ವಿಶೇಷ ಎಕ್ಸ್ಪ್ರೆಸ್ ಏಪ್ರಿಲ್ (5,12,19,26) ಮೇ (3,10) ರಂದು ಬೆಳಿಗ್ಗೆ 9:00 ಗಂಟೆಗೆ (ಶನಿವಾರ) ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಸೋಮವಾರ ಮಧ್ಯಾಹ್ನ 01:15 ಕ್ಕೆ ಉತ್ತರ ಪ್ರದೇಶದ ಬನಾರಸ್ ತಲುಪಲಿದೆ. ಪುನಃ ರೈಲು ಸಂಖ್ಯೆ 07324 ಬನಾರಸ್-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು ಏಪ್ರಿಲ್ (8,15,22,29) ಮೇ (6,13) ರಂದು ಬೆಳಿಗ್ಗೆ 9:00 ಗಂಟೆಗೆ ಬನಾರಸ್ ನಿಂದ ಹೊರಟು ಗುರುವಾರ ಬೆಳಿಗ್ಗೆ 10:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯನ್ನು ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಕಡೂರು, ಅರಸೀಕೆರೆ, ತುಮಕೂರು, ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರಸ್ತೆ, ರಾಯಚೂರು, ಕೃಷ್ಣ, ಬೇಗಂಪೇಟೆ, ಸಿಕಂದರಾಬಾದ್, ಕಾಜಿಪೇಟ್, ಜಮಿಕುಂಟಾ, ರಾಮಗುಂಡಂ, ಮಂಚಿರಿಯಾಲ್, ಬೆಲಂಪಲ್ಲಿ, ಬಲ್ಹಾರ್ಷಾ, ಚಂದ್ರಾಪುರ, ನಾಗ್ಪುರ, ಆಮ್ಲಾ, ಬೆತುಲ್, ಇಟಾರ್ಸಿ, ಜಬಲ್ಪುರ್, ಕಟ್ನಿ, ಮೈಹಾರ್, ಸತ್ನಾ, ಮಾಣಿಕ್ಪುರ್, ಪ್ರಯಾಗ್ರಾಜ್ ಚಿಯೋಕಿ ಮತ್ತು ಮಿರ್ಜಾಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.…
ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಬರೋಬ್ಬರಿ 30 ಕೋಟಿ ಹವಾಲಾ ಹಣವನ್ನು ದುಬೈಗೆ ರವಾನಿ, ಅದರಲ್ಲಿ 49.6 ಕೆಜಿ ಚಿನ್ನವನ್ನು ಖರೀದಿಸಿದ್ದಾಗೆ ಕೋರ್ಟ್ ಗೆ ಡಿಆರ್ ಐ ಅಧಿಕಾರಿಗಳು ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ನಟಿ ರನ್ಯಾ ರಾವ್ ಅವರು ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜೈಲುಪಾಲಾಗಿದ್ದಾರೆ. ಅವರ ವಿರುದ್ಧದ ಪ್ರಕರಣದ ತನಿಖೆ ನಡೆಸುತ್ತಿರುವಂತ ಡಿ ಆರ್ ಐ ತನ್ನ ವರದಿಯನ್ನು ಕೋರ್ಟ್ ಗೆ ಸಲ್ಲಿಸಿದೆ. ಡಿ ಆರ್ ಐ ಸಲ್ಲಿಸಿದಂತ ವರದಿಯಲ್ಲಿ ಶಾಕಿಂಗ್ ಮಾಹಿತಿಯನ್ನು ಬಿಚ್ಚಿಡಲಾಗಿದೆ. ಕಳೆದ ಮೂರು ತಿಂಗಳಿನಿಂದ ದುಬೈನಿಂದ ನಟಿ ರನ್ಯಾ ರಾವ್ ಅವರು 49.6 ಕೆಜಿ ಚಿನ್ನವನ್ನು ಖರೀದಿಸಿದ್ದಾರೆ. ಅದು 30 ಕೋಟಿ ಹವಾಲ ಹಣದ ಮೂಲಕವಾಗಿದೆ. ದುಬೈಗೆ ಹವಾಲಾ ಹಣ ಕಳುಹಿಸಿರುವಂತ ನಟಿ ರನ್ಯಾ ರಾವ್ ಅವರು, ಅದರಿಂದಲೇ 49.6 ಕೆಜಿ ಚಿನ್ನ ಖರೀದಿಸಿದ್ದಾಗಿ ವರದಿಯನ್ನು ಸಲ್ಲಿಸಿದೆ. ಭಾರತ ಸೇರಿದಂತೆ ವಿವಿಡೆ ಅಕ್ರಮವಾಗಿ ದುಬೈನಿಂದ ತಂದಿದ್ದಂತ ಚಿನ್ನವನ್ನು…
ಉತ್ತರ ಪ್ರದೇಶ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಎನ್ಆರ್ಇಜಿಎ) ಯಲ್ಲಿ ನಡೆದಿದೆ ಎನ್ನಲಾದ ವಂಚನೆಯ ಬಗ್ಗೆ ಜಿಲ್ಲಾ ಮಟ್ಟದ ತನಿಖೆಯು ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರ ಸಂಬಂಧಿಕರು ಸೇರಿದಂತೆ ಹಲವಾರು ವ್ಯಕ್ತಿಗಳನ್ನು ಸಿಲುಕಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಎಂಎನ್ಆರ್ಇಜಿಎ ವೇತನ ವಿತರಣೆಯಲ್ಲಿ ಮೋಸದ ಆರೋಪಗಳು ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ನಿಧಿ ಗುಪ್ತಾ ವತ್ಸ್ ಬುಧವಾರ ಸಂಜೆ ಘೋಷಿಸಿದರು. ಇದರ ಪರಿಣಾಮವಾಗಿ, ಎಂಎನ್ಆರ್ಇಜಿಎ ಕಾರ್ಮಿಕರೆಂದು ಪಟ್ಟಿ ಮಾಡಲಾದ ಕಾರ್ಮಿಕರನ್ನು ಅಮಾನತುಗೊಳಿಸಲು, ಔಪಚಾರಿಕ ಪೊಲೀಸ್ ವರದಿಯನ್ನು ದಾಖಲಿಸಲು ಮತ್ತು ಪಂಚಾಯತ್ ರಾಜ್ ಕಾಯ್ದೆಯಡಿ ಇಲಾಖಾ ಕ್ರಮವನ್ನು ಪ್ರಾರಂಭಿಸಲು ಆದೇಶಗಳನ್ನು ಹೊರಡಿಸಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಧಿ ಗುಪ್ತಾ ವತ್ಸ್ ಹೇಳಿಕೆ “ಸ್ಥಳೀಯ ಅಧಿಕಾರಿಗಳ ತನಿಖೆಯಲ್ಲಿ 18 ವ್ಯಕ್ತಿಗಳು ಯಾವುದೇ ಕೆಲಸ ಮಾಡದೆ MNREGA ವೇತನವನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಮೊಹಮ್ಮದ್ ಶಮಿ ಅವರ ಸಹೋದರಿ ಶಬಿನಾ, ಶಬಿನಾ ಅವರ ಪತಿ ಘಜ್ನವಿ,…
ಬೆಂಗಳೂರು: ರಾಜ್ಯದ ಭಂಡ ಸರಕಾರ, ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಧ್ಯಾಹ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಹೋರಾಟ ನಿನ್ನೆಯಿಂದ ಆರಂಭವಾಗಿದೆ. ಇವತ್ತು ಮುಕ್ತಾಯವಾಗಿಲ್ಲ; ಇದು ಪ್ರಾರಂಭ ಅಷ್ಟೇ ಎಂದು ತಿಳಿಸಿದರು. ನಾಡಿನ ಜನರ ಪರವಾಗಿ ವಿಪಕ್ಷವಾದ ನಾವು ಹೋರಾಟ ಮಾಡುವುದು ಅನಿವಾರ್ಯ ಎಂದು ನುಡಿದರು. ಮೊದಲೇ ಜನರು ಪರದಾಡುತ್ತಿದ್ದಾರೆ. ಇದರ ನಡುವೆ ಡೀಸೆಲ್ಗೆ ಮೊನ್ನೆ ರಾತ್ರಿ 2 ರೂ. ಹೆಚ್ಚಿಸಿದ ದುಷ್ಟರಿವರು ಎಂದು ಖಂಡಿಸಿದರು. ಇದು ಅಧಿಕಾರದ ಮದ ಎಂದು ಟೀಕಿಸಿದರು. ಅಹೋರಾತ್ರಿ ಧರಣಿಯು ಎಲ್ಲ ಬಿಜೆಪಿ ಕಾರ್ಯಕರ್ತರಿಗೆ ಉತ್ಸಾಹ ತಂದು ಕೊಟ್ಟಿದೆ. ರೈತ ನಾಯಕ, ಹೋರಾಟಗಾರ ಯಡಿಯೂರಪ್ಪ ಅವರು ಸಹ ಹೋರಾಟದ ನೇತೃತ್ವ ವಹಿಸಿ ಅವರೂ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂಧನಕ್ಕೆ ಒಳಪಟ್ಟಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮಹಿಳೆಯರು, ತಾಯಂದಿರೂ ಪಾಲ್ಗೊಂಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಮೂಲಕ…
ಬೆಂಗಳೂರು: ಸರಕಾರದ ತಪ್ಪು ನೀತಿಗಳ ವಿರುದ್ಧ ಹೋರಾಟ ಮಾಡುವುದು ನಮ್ಮ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಇಂದು ಬಿಜೆಪಿಯ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಅಲ್ಲದೇ ಪ್ರಶ್ನೆಗಳಿಗೆ ಉತ್ತರ ಕೊಟ್ಟರು. ಮುಖ್ಯಮಂತ್ರಿಗಳ ಮನೆಯ ಬಳಿ ಹೋದಾಗ ನಮ್ಮನ್ನು ಬಂಧಿಸಬೇಕಿತ್ತು. ಮುಂಚೆಯೇ ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದು ಸರಿಯಲ್ಲ ಎಂದರು. ನಾನು ಮುಖ್ಯಮಂತ್ರಿ ಆಗಿದ್ದಾಗಲೂ ಮುಖ್ಯಮಂತ್ರಿಗಳ ಮನೆಯ ಹತ್ತಿರ ಬಂದಾಗ ಅರೆಸ್ಟ್ ಮಾಡುತ್ತಿದ್ದೆವು. ಇವತ್ತು ಮುಂಜಾಗ್ರತಾ ಕ್ರಮವೆಂದು ಮುಂಚಿತವಾಗಿಯೇ ಬಂಧಿಸಿದ್ದು, ಇದು ಸರಿಯಲ್ಲ ಎಂದು ತಿಳಿಸಿದರು. ರಾಜ್ಯದ ಉದ್ದಗಲಕ್ಕೆ ನಮ್ಮ ಹೋರಾಟ ಮುಂದುವರೆಸಲಿದ್ದೇವೆ; ಜನವಿರೋಧಿ ಕಾರ್ಯಕ್ರಮಗಳನ್ನು ಹಿಂದಕ್ಕೆ ಪಡೆಯುವವರೆಗೆ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಹೇಳಿದರು. https://kannadanewsnow.com/kannada/in-yet-another-fatal-accident-in-the-state-four-killed-as-car-collides-with-ksrtc-bus/ https://kannadanewsnow.com/kannada/breaking-important-waqf-amendment-bill-passed-in-rajya-sabha-waqf-amendment-bill-2025/
ಮೈಸೂರು: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕೆ ಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಸಿಗೂರಿಗೆ ಸೋದರ ಮಾವ ಸಾವನ್ನಪ್ಪಿದ ಕಾರಣ ಕಾರಿನಲ್ಲಿ ಬೆಂಗಳೂರಿನ ಜೆಪಿ ನಗರದ ಸತ್ಯಾನಂದ ರಾಜೇ ಅರಸ್, ಪತ್ನಿ ನಿಶ್ಚಿತ ಹಾಗೂ ಚಂದ್ರರಾಜೇ ಅರಸ್, ಪತ್ನಿ ಸುವೇದಿನಿ ರಾಣಿ ತೆರಳುತ್ತಿದ್ದರು. ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಯಲ್ಲಿ ಎಕ್ಸಿಟ್ ಆಗೋದಕ್ಕೆ ಗೊಂದಲ ಸೃಷ್ಠಿಯಾಗಿದೆ. ಟಾಟಾ ಪೂಂಚ್ ಕಾರು ಕೆಎಸ್ ಆರ್ ಟಿಸಿ ಬಸ್ಸಿಗೆ ಡಿಕ್ಕಿಯಾದ ಪರಿಣಾಮ ಸತ್ಯಾನಂದ ರಾಜೇ ಅರಸ್ ಹಾಗೂ ಪತ್ನಿ ನಿಶ್ಚಿತ ಮತ್ತು ಚಂದ್ರರಾಜೇ ಅರಸ್ ಹಾಗೂ ಪತ್ನಿ ಸುವೇದಿನಿ ರಾಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಲೆಕ್ಟ್ರಿಕ್ ಕಾಂಟ್ರಾಕ್ಟರ್ ಆಗಿದ್ದಂತ ಸತ್ಯಾನಂದ ರಾಜೇ ಅರಸ್, ನಿವೃತ್ತ ಜೆಇ ಆಗಿ ಚಂದ್ರರಾಜೇ ಅರಸ್ ಕಾರ್ಯ ನಿರ್ವಹಿಸಿದ್ದರು. ನಾಲ್ವರ ಶವವನ್ನು ಮಂಡ್ಯ ಮೆಡಿಕಲ್ ಕಾಲೇಜಿಲ್ಲಿ ಇರಿಸಲಾಗಿದೆ. ಈ ಸಂಬಂಧ ಮಂಡ್ಯ…
ಬೆಂಗಳೂರು : ಸಾಹಿತಿ, ವಿಮರ್ಶಕ, ನಿವೃತ್ತ ಪ್ರಾಧ್ಯಾಪಕರು, ಬಿಎಂಶ್ರೀ ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಡಾ.ಪಿ.ವಿ.ನಾರಾಯಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ವಚನ ಸಾಹಿತ್ಯದ ಅಧ್ಯಯನ ಸೇರಿದಂತೆ ವಿಮರ್ಶೆ, ಸಂಶೋದನಾ ಕೃತಿಗಳು, ಹಲವಾರು ಕಾದಂಬರಿಗಳ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅಪೂರ್ವ ವ್ಯಕ್ತಿ ಹಾಗೂ ಶಕ್ತಿ ಪಿ.ವಿ.ನಾಋಾಯಣ ಅವರು. ಕನ್ನಡದ ಸ್ಥಾನಮಾನಗಳಿಗಾಗಿ ನಡೆಯುತ್ತಿದ್ದ ಹೋರಾಟಗಳಲ್ಲಿ ಇವರು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಚಿಂತನೆಗಳನ್ನು ತಿಳಿಸುತ್ತಿದ್ದರು ಎಂದು ಇವರನ್ನು ಬಲ್ಲವರಿಂದ ಕೇಳಿ ತಿಳಿದಿದ್ದೇನೆ. ಗೋಕಾಕ್ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದು ಹಲವರಿಗೆ ಮಾರ್ಗದರ್ಶನ ಮಾಡಿದವರು. 30 ವರ್ಷಗಳಿಗೂ ಹೆಚ್ಚು ಕಾಲ ಪ್ರಾಧ್ಯಾಪಕರಾಗಿ ವಿದ್ಯಾರ್ಥಿಗಳ ಮನಸೂರೆಗೊಂಡ ಇವರ ನಿಧನದಿಂದ ಕನ್ನಡ ಸಾಹಿತ್ಯ, ವಿಮರ್ಶೆ, ಸಂಶೋದನಾ ಕ್ಷೇತ್ರಕ್ಕೆ ಹಿನ್ನಡೆಯಾದಂತಾಗಿದೆ. ಹಿರಿಯರಾದ ನಾರಾಯಣ ಅವರು ಸುಮಾರು 75ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ತಮ್ಮ ಅನುವಾದಗಳ ಮೂಲಕ ಕನ್ನಡ ಸಾಹಿತ್ಯ ಪರಂಪರೆಯನ್ನು ಶ್ರೀಮಂತಗೊಳಿಸಿದ್ದಾರೆ. ಕನ್ನಡದ ತೇರನ್ನು ಎಳೆಯಲು ಇಂತಹ ಹಿರಿಯರ ಮಾರ್ಗದರ್ಶನ ಅತ್ಯಗತ್ಯವಿದ್ದ ಕಾಲದಲ್ಲಿ ನಿಧನರಾಗಿದ್ದು…
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ದರಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ. ಶೇ.53ರಿಂದ 55ಕ್ಕೆ ತುಟ್ಟಿಭತ್ಯೆ ದರವನ್ನು ಹೆಚ್ಚಳ ಮಾಡಿ ಇಂದು ಅಧಿಕೃತ ಆದೇಶವನ್ನು ಮಾಡಲಾಗಿದೆ. ಈ ಸಂಬಂಧ ಕೇಂದ್ರ ಆರ್ಥಿಕ ಸಚಿವಾಲಯಿಂದ ಆದೇಶ ಹೊರಡಿಸಲಾಗಿದ್ದು, ಈ ಇಲಾಖೆಯ ಕಚೇರಿ ಜ್ಞಾಪಕ ಪತ್ರ ಸಂಖ್ಯೆ 1/5/2024- E.II(B) ದಿನಾಂಕ 21 ಅಕ್ಟೋಬರ್, 2024 ಅನ್ನು ಉಲ್ಲೇಖಿಸಲು ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ಪಾವತಿಸಬೇಕಾದ ತುಟ್ಟಿ ಭತ್ಯೆಯ ದರಗಳನ್ನು ಜನವರಿ 1, 2025 ರಿಂದ ಜಾರಿಗೆ ಬರುವಂತೆ ಮೂಲ ವೇತನದ 53% ರಿಂದ 55% ಕ್ಕೆ ಹೆಚ್ಚಿಸಬೇಕೆಂದು ಅಧ್ಯಕ್ಷರು ನಿರ್ಧರಿಸಲು ಸಂತೋಷಪಡುತ್ತಾರೆ ಎಂದು ಹೇಳಲು ಕೆಳಗೆ ಸಹಿ ಮಾಡಿದವರಿಗೆ ನಿರ್ದೇಶಿಸಲಾಗಿದೆ ಎಂದಿದ್ದಾರೆ. ಪರಿಷ್ಕೃತ ವೇತನ ರಚನೆಯಲ್ಲಿ ಮೂಲ ವೇತನ ಎಂಬ ಪದವು ಸರ್ಕಾರವು ಅಂಗೀಕರಿಸಿದ 7 ನೇ CPC ಶಿಫಾರಸುಗಳ ಪ್ರಕಾರ ಪೇ ಮ್ಯಾಟ್ರಿಕ್ಸ್ನಲ್ಲಿ ನಿಗದಿತ ಮಟ್ಟದಲ್ಲಿ ಪಡೆದ ವೇತನವನ್ನು ಅರ್ಥೈಸುತ್ತದೆ, ಆದರೆ ವಿಶೇಷ ವೇತನ ಇತ್ಯಾದಿಗಳಂತಹ ಯಾವುದೇ ರೀತಿಯ ವೇತನವನ್ನು ಒಳಗೊಂಡಿಲ್ಲ. ತುಟ್ಟಿ…
ಬೆಂಗಳೂರು : ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ‘ ಸರ್ವರಿಗೂ ಸೂರು’ ಯೋಜನೆಯಡಿ ನಿರ್ಮಿಸಲಾಗುತ್ತಿರುವ 1.82 ಲಕ್ಷ ಮನೆಗಳ ಪೈಕಿ ಎರಡನೇ ಹಂತದಲ್ಲಿ 42345 ಮನೆಗಳನ್ನು ಇದೇ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕೊಳಗೇರಿ ಅಭಿವೃದ್ಧಿ ಮಂಡಳಿ ಸಭಾಂಗಣ ದಲ್ಲಿ ಈ ಸಂಬಂಧ ಪೂರ್ವಬಾವಿ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಮೊದಲ ಹಂತದಲ್ಲಿ ಕಳೆದ ವರ್ಷ ಫೆಬ್ರವರಿ ಯಲ್ಲಿ 36,789 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಏಪ್ರಿಲ್ 27 ರಂದು ಹುಬ್ಬಳ್ಳಿ ಯಲ್ಲಿ ನಡೆಯಲಿರುವ ಕಾರ್ಯಕ್ರಮ ದಲ್ಲಿ 42,345 ಮನೆ ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮ ದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿ ಯವರು ಹಂಚಿಕೆ ಮಾಡಲಿರುವ ಮನೆಗಳನ್ನು ಮೂಲಭೂತ…
ಜಪಾನ್: ಮ್ಯಾನ್ಮಾರ್ ಬಳಿಕ ಜಪಾನ್ ನಲ್ಲಿ ಭೂಕಂಪನ ಉಂಟಾಗಿದೆ. ಜಪಾನಿನ ಕ್ಯೂಶುವಿನಲ್ಲಿ 6 ರಷ್ಟು ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಹೀಗಾಗಿ ಜಾಪಾನಿನ ಜನರು ಬೆಚ್ಚಿ ಬೀಳುವಂತೆ ಮಾಡಿದೆ. ಜಪಾನ್ನ ಕ್ಯೂಶು ಪ್ರದೇಶದಲ್ಲಿ ಬುಧವಾರ ಸಂಜೆ ಪ್ರಬಲ ಭೂಕಂಪನ ಸಂಭವಿಸಿದೆ. ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರದ ಪ್ರಕಾರ, ಬುಧವಾರ (ಏಪ್ರಿಲ್ 2, 2025) ಕ್ಯೂಶುನಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನವು ಜನರಲ್ಲಿ ಭೀತಿಯನ್ನು ಉಂಟುಮಾಡಿತು, ಇದರಿಂದಾಗಿ ಅವರು ತಮ್ಮ ಮನೆಗಳು ಮತ್ತು ಕಟ್ಟಡಗಳಿಂದ ಹೊರಗೆ ಓಡಿದರು. ಆದಾಗ್ಯೂ, ಇಲ್ಲಿಯವರೆಗೆ ಗಮನಾರ್ಹ ಹಾನಿಯ ಬಗ್ಗೆ ಯಾವುದೇ ವರದಿಗಳಿಲ್ಲ. https://kannadanewsnow.com/kannada/environment-ministry-gives-green-signal-to-raichur-greenfield-airport-minister-ns-boseraju/ https://kannadanewsnow.com/kannada/shocking-news-for-ice-cream-lovers-use-of-detergent-banned-colour-detected-in-karnataka/












