Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪಂಗಡ ಜನಾಂಗದವರು ಹೆಚ್ಚಾಗಿರುವ ಬಳ್ಳಾರಿ ಜಿಲ್ಲೆಯ 5 ವಲಯಗಳಿಂದ (ತಾಲ್ಲೂಕುಗಳಿಂದ) ಒಟ್ಟು 59 ಗ್ರಾಮಗಳನ್ನು ಆಯ್ಕೆಮಾಡಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಭಾರತ ಸರ್ಕಾರ ಬುಡಕಟ್ಟು ಮಂತ್ರಾಲಯ, ನವದೆಹಲಿ ಇವರ ಆದೇಶದಂತೆ, ಜಿಲ್ಲೆಯ ಒಟ್ಟು 59 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಲು ಕ್ರಮಕೈಗೊಳ್ಳಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರುವ 79,156 ಕೋಟಿ ರೂ.ಗಳಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63,000 ಗ್ರಾಮಗಳಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ. ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊತ್ತಿದೆ. ದೇಶದ ಸುಮಾರು 8 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ ಎಂದು ಡಿಸಿಯವರು ತಿಳಿಸಿದ್ದಾರೆ. 2024-25 ರಿಂದ 2028-29ನೇ ಸಾಲಿನವರೆಗೆ 5 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 2024-25 ರಿಂದ 2025-26ನೇ ಸಾಲಿಗೆ ಮೊದಲ…
ಬೆಂಗಳೂರು: ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮತ್ತೆ ಅಕ್ಟೋಬರ್.4ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಜಾಮೀನು ನಿರೀಕ್ಷೆಯಲ್ಲಿದ್ದಂತ ನಟ ದರ್ಶನ್ ಗೆ ಬಿಗ್ ಶಾಕ್ ನೀಡಲಾಗಿದೆ. ಇಂದು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಲಯವು ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆಯಲ್ಲಿ ನ್ಯಾಯಾಲಯಕ್ಕೆ ನಟ ದರ್ಶನ್ ಪರ ವಕೀಲರು ತಮ್ಮ ಕಕ್ಷಿದಾರರ ಪರವಾಗಿ ವಾದಿಸಲು ಹೆಚ್ಚಿನ ಕಾಲಾವಕಾಶ ಕೋರಿದರು. ಈ ಕಾರಣದಿಂದ ವಿಚಾರಣೆಯನ್ನು ಅಕ್ಟೋಬರ್.4ಕ್ಕೆ ಮುಂದೂಡಿತು. ನಟ ದರ್ಶನ್ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿದ್ದಾರೆ. ಈವರೆಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಒರ್ವ ಆರೋಪಿಗೆ ಮಾತ್ರವೇ ಜಾಮೀನು ದೊರೆತಿದೆ. ಇನ್ನುಳಿದ ಆರೋಪಿಗಳು ಜೈಲಲ್ಲೇ ಇದ್ದಾರೆ. ಯಾರಿಗೂ ಜಾಮೀನು ದೊರೆತಿಲ್ಲ. ಇಂದು ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಮತ್ತೆ ಮುಂದೂಡಿ, ಬಿಗ್ ಶಾಕ್ ನೀಡಿದೆ. https://kannadanewsnow.com/kannada/breaking-another-victim-of-killer-bmtc-in-bengaluru-bike-rider-dies-after-being-hit-by-bus-wheel/ https://kannadanewsnow.com/kannada/breaking-break-sc-adjourns-hearing-on-tirupati-laddu-dispute-to-october-3-tirupati-laddu-row/
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ಅಕ್ಟೋಬರ್.4ಕ್ಕೆ ಮುಂದೂಡಿಕೆ ಮಾಡಿದೆ. ಇಂದು ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆ ಬಳಿಕ ಮತ್ತೆ ವಾದ ಮಂಡಿಸಲು ವಕೀಲರು ಕಾಲಾವಕಾಶ ಕೋರಿದ ಕಾರಣ ಅಕ್ಟೋಬರ್.4ಕ್ಕೆ ಮುಂದೂಡಿಕೆ ಮಾಡಿದೆ. ಅಂದಹಾಗೇ ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಅಲ್ಲಿ ರಾಜಾತಿಥ್ಯದ ಪೋಟೋ ವೈರಲ್ ಆಗುತ್ತಿದ್ದಂತೆ ಅಲ್ಲಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅಲ್ಲಿಂದಲೇ ನಟ ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೇ ಈ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅಕ್ಟೋಬರ್.4ಕ್ಕೆ ಮುಂದೂಡಿದೆ. https://kannadanewsnow.com/kannada/will-visit-ballari-on-october-3-navratri-day-former-minister-janardhana-reddy/ https://kannadanewsnow.com/kannada/breaking-another-victim-of-killer-bmtc-in-bengaluru-bike-rider-dies-after-being-hit-by-bus-wheel/
ಬೆಂಗಳೂರು: ನವರಾತ್ರಿ ಅಕ್ಟೋಬರ್ 3ರಂದು ಆರಂಭವಾಗಲಿದೆ. ಇದೇ ಗುರುವಾರ ಬೆಳಿಗ್ಗೆ ಬಳ್ಳಾರಿಗೆ ಭೇಟಿ ಕೊಡಲಿದ್ದೇನೆ ಎಂದು ಶಾಸಕ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 14 ವರ್ಷಗಳ ನಂತರ ಬಳ್ಳಾರಿಗೆ ತೆರಳಲು ಅನುಮತಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಬಂದಿದೆ. ಕೊನೆಯ ಉಸಿರು ಇರುವವರೆಗೂ ಬಳ್ಳಾರಿಯಲ್ಲಿ ಇರುತ್ತೇನೆ ಎಂದು ಭಾವುಕರಾಗಿ ನುಡಿದರು. ಬಳ್ಳಾರಿಯಲ್ಲಿ ವಿವಿಧ ಪ್ರಮುಖ ದೇವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವುದಾಗಿ ತಿಳಿಸಿದರು. ಜನ್ಮ ಸ್ಥಳ ಪ್ರತಿಯೊಬ್ಬನಿಗೂ ಮುಖ್ಯವಾಗುತ್ತದೆ. ಯಾವುದೇ ಊರಿಗಿಂತ ನಮ್ಮ ಹುಟ್ಟೂರು ನಮಗೆ ಮೇಲು ಎಂಬುದು ಹಿರಿಯರ ಮಾತು. ಮೊದಲು ಗಂಗಾವತಿಗೆ ತೆರಳಿ, ಹನುಮಂತನ ದರ್ಶನ ಪಡೆದು ರಾಜಕೀಯ ಪುನರ್ ಜನ್ಮ ನೀಡಿದ ಜನರ ಜೊತೆ ಮಾತನಾಡುವೆ ಎಂದು ತಿಳಿಸಿದರು. ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಮುಂದೆ ನಾನು ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸಲಿದೆ. ಅದರಂತೆ…
ಬೆಂಗಳೂರು : ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಪ್ರೌಢಶಾಲೆ ವಿಭಾಗ ಫಲಿತಾಂಶ ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್‌ಆರ್‌ಪಿ,ಮಚ್ಚೆ,ಬೆಳಗಾವಿ(ಪ್ರಥಮ),ಸಮರ್ಥ ನಾಗರಾಜ ಅರ್ಕಸಾಲಿ , ಸರ್ಕಾರಿ ಪ್ರೌಢಶಾಲೆ, ಹುನಗುಂದ, ತಾ.ಮುಂಡಗೋಡ, ಉತ್ತರ ಕನ್ನಡ ಜಿಲ್ಲೆ(ದ್ವಿತೀಯ), ಚೈತನ್ಯ ಕೆ.ಎಂ.ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ, ಕೊಡಗು ಜಿಲ್ಲೆ(ತೃತೀಯ) ಪದವಿಪೂರ್ವ ಕಾಲೇಜು ವಿಭಾಗ ಫಲಿತಾಂಶ ವಿಜಯಕುಮಾರ್ ಬ.ದೊಡ್ಡಮನಿ, ಸರ್ಕಾರಿ ಪ.ಪೂ.ಕಾಲೇಜು, ಮುಳಗುಂದ, ಗದಗ ಜಿಲ್ಲೆ (ಪ್ರಥಮ), ಪರೀಕ್ಷಾನಂದ್, ಮರಿಮಲ್ಲಪ್ಪ ಪ.ಪೂ.ಕಾಲೇಜು, ಮೈಸೂರು (ದ್ವಿತೀಯ), ಗೋರಮ್ಮ, ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜು, ಕೋಲಾರ(ತೃತೀಯ) ಪದವಿ/ಸ್ನಾತಕೋತ್ತರ ವಿಭಾಗ ಫಲಿತಾಂಶ ಪ್ರವೀಣ್ ನಿಂಗಪ್ಪ ಕಿತ್ನೂರ,ಕನ್ನಡ ವಿ.ವಿ.ಹಂಪಿ, ವಿಜಯನಗರ ಜಿಲ್ಲೆ (ಪ್ರಥಮ), ಶರಣಪ್ಪ, ತುಮಕೂರು ವಿ.ವಿ.ತುಮಕೂರು(ದ್ವಿತೀಯ), ನಸೀಮಾ ಇ.ಚಪ್ಪರಬಂದ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರ (ತೃತೀಯ) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ…
ಗದಗ: ಪ್ರೊ.ಕೆ. ಎಸ್ ಭಗವಾನ್ ತಾಯಿ ಚಾಮುಂಡೇಶ್ವರಿ ವಿಚಾರದಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಮಾತಿಗೆ ಯಾರೂ ಮಹತ್ವ ಕೊಟ್ಟಿಲ್ಲ, ಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರೊ. ಭಗವಾನ್ ಅವರು ಹೆಸರಿಗೆ ತಕ್ಕಂಗೆ ಭಗವಂತನ ಮೇಲೆ ನಂಬಿಕೆ ಇಟ್ಟಿದ್ದಾರೆ ಇಲ್ಲಾ ನೋಡಿ, ಭಗವಂತನ ಮೇಲೆ ನಂಬಿಕೆ ಇಲ್ಲಾ ಅಂದರೆ, ಭಗವಾನ್ ಅಂತ ಹೆಸರು ಇಟ್ಟಿಕೊಂಡಿದ್ದೆ ಅಪಾರ್ಥವಾಗಿದೆ ಎಂದು ಹೇಳಿದರು. ಒಂದು ಧರ್ಮದ ವಿರುದ್ಧ ಮಾತನಾಡುವುದು ಯಾವುದೇ ಮಾನವೀಯ ಧರ್ಮವಿಲ್ಲ ಚಾಮುಂಡೇಶ್ವರಿ ಕಾಲ್ಪನಿಕ ಅಂತ ಹೇಳುತ್ತಾರೆ. ಚಾಮುಂಡೇಶ್ವರಿ ಕಾಲ್ಪನಿಕ ಅಂದರೆ, ಮಹಿಷಾಸುರನು ಕಾಲ್ಪನಿಕನಾ? ಮಹಿಷಾಸುರನ ಆರಾಧನೆ ಮಾಡುತ್ತಾರೆ. ಇತರಹ ದ್ವಂದ್ವ ವಿಪರ್ಯಾಸದಿಂದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಇದಕ್ಕೆ ಯಾರೂ ಮಹತ್ವ ಕೊಟ್ಟಿಲ್ಲ. ಯಾರೂ ಕೊಡಬಾರದು. ವಾಸ್ತವ ಅಂಶ ಗೊತ್ತಿದ್ದರೂ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಶ್ರೀರಾಮನ ಬಗ್ಗೆ ಹಿಂದೇ ಏನು ಮಾತಾಡಿದ್ದರು,…
ಮೈಸೂರು : ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಇಡಿಯಲ್ಲಿ ದೂರು ದಾಖಲಾಗಿದ್ದರೆ, ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದರು. ಅಧಿಕಾರಿಗಳ ವಿರುದ್ಧ ಟೀಕೆ ಸರಿಯಲ್ಲ ಕುಮಾರಸ್ವಾಮಿಯವರು ಲೋಕಾಯುಕ್ತ ಎಡಿಜಿಪಿ ಮೇಲೆಯೂ ಟೀಕೆ ಮಾಡುತ್ತಿರುವ ಬಗ್ಗೆ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರು ತಪ್ಪೆಸೆಗಿಸಿದ್ದು, ಅಧಿಕಾರಗಳ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳ ಮೇಲೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ರೇವ್ ಪಾರ್ಟಿ ವಿರುದ್ದ ಪೊಲೀಸರ ಕ್ರಮ ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರೇವ್ ಪಾರ್ಟಿ ನಡೆದಿರುವ ಬಗ್ಗೆ ಮಾಹಿತಿ ಬಂದಿದ್ದು,ಈ ಬಗ್ಗೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದರು. ಅಕ್ಟೋಬರ್ 2 ರಂದು ದಸರಾ ಸಿದ್ದತೆ…
ಬೆಂಗಳೂರು: ADGP ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದರು. ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಸಂದರ್ಭದಲ್ಲಿ ಇದಕ್ಕೆ ಉತ್ತರ ಕೊಡುತ್ತೇನೆ ಎಂದು ಅವರು ಹೇಳಿದರು. ಅಧಿಕಾರಿ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರದ ಬಗ್ಗೆ ಭಾನುವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು. ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಸಚಿವರು ಕಿಡಿಕಾರಿದರು. ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ,…
ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣದ ಕುರಿತು ವಿಚಾರಣೆಯನ್ನು ನಾಳೆ ಸುಪ್ರೀಂ ಕೋರ್ಟ್ ನಡೆಸಲಿದೆ. ತಿರುಪತಿ ಲಡ್ಡು ವಿವಾದಕ್ಕೆ ಸಂಬಂದಿಸಿದಂತೆ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಗಳನ್ನು ನಾಳೆ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ರಾಜ್ಯ ಸಭಾ ಸಂಸದ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅವರು ಸಲ್ಲಿಸಿದ್ದಂತ ಅರ್ಜಿಗಳ ವಿಚಾರಣೆಯನ್ನು ನಡೆಸಲಿದೆ. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ವೈಎಸ್ ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ದೇವಸ್ಥಾನದಿಂದ ಲಡ್ಡುಗಳನ್ನು ಪ್ರಸಾದವಾಗಿ ನೀಡಿದ್ದಾಗ ಅದರಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇಂತಹ ಲಡ್ಡು ವಿವಾದದ ಬಗ್ಗೆ ಸಲ್ಲಿಸಿದ್ದಂತ ಅರ್ಜಿಗಳನ್ನು ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. https://kannadanewsnow.com/kannada/govt-should-conduct-proper-probe-into-irregularities-committed-by-ips-officer-m-chandrasekhar-jds/ https://kannadanewsnow.com/kannada/rape-case-sit-raids-11-locations-belonging-to-munirathna-seizes-crucial-documents/
ಬೆಂಗಳೂರು: ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರ ಅಕ್ರಮಗಳ ಬಗ್ಗೆಯೂ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಐಪಿಎಸ್ ಅಸೋಷಿಯೇಷನ್ ಮತ್ತು ಕೇಂದ್ರ ಗೃಹ ಇಲಾಖೆಯು ಈ IPS ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಕರ್ನಾಟಕ ಜೆಡಿಎಸ್ ಆಗ್ರಹಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, “ಕಳ್ಳನ ಮನಸ್ಸು ಹುಳ್ಳಳ್ಳಗೆ”.., ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರೇ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ, ಕಾನೂನಿನಡಿಯಲ್ಲಿ ಉತ್ತರ ನೀಡಬಹುದಿತ್ತು… ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ವಿರುದ್ಧ ಹತಾಶೆ, ಸಿಟ್ಟು, ಆಕ್ರೋಶದಿಂದ ಕೀಳು ಮಟ್ಟದ, ಅವಹೇಳನಕಾರಿ ಪದಗಳನ್ನು ಬಳಸಿ ಉತ್ತರಿಸಿದ್ದೀರಿ ಎಂದಿದೆ. ನಿಮ್ಮ ಅಕ್ರಮ, ಭ್ರಷ್ಟಾಚಾರಗಳನ್ಮು ದಾಖಲೆಗಳ ಸಮೇತ ಮಾಧ್ಯಮಗಳ ಮುಂದೆ ಬಯಲು ಮಾಡಿದ್ದು ಅಪರಾಧವೇ ..? ಅದಕ್ಕೆ ಕೇಂದ್ರ ಸಚಿವರ ಕುರಿತು ನೀವು ಕೀಳು ಮಟ್ಟದ ಪದ ಬಳಸಿರುವುದು ಅಕ್ಷಮ್ಯ.. ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ. ಭೂ ವ್ಯವಹಾರವೊಂದರಲ್ಲಿ 20…