Author: kannadanewsnow09

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವರಿಷ್ಠರ ಮನವೊಲಿಕೆಗೂ ಬಗ್ಗದೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಣಕ್ಕೆ ಇಳಿದಿದ್ದರು. ಇದೀಗ ಅವರಿಗೆ ಬಿಜೆಪಿ ಶಾಕ್ ನೀಡಿದೆ. ಅದೇ ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಛಾಟನೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂಬುದಾಗಿ ಕೆ.ಎಸ್ ಈಶ್ವರಪ್ಪಗೆ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿದಂ ಉಚ್ಚಾಟಿಸಲಾಗಿದೆ ಎಂದಿದ್ದಾರೆ.

Read More

ಬೆಂಗಳೂರು: ಹುಬ್ಬಳ್ಳಿಯಲ್ಲಿ ಮುಸ್ಲೀಂ ಯುವಕನಿಂದ ನೇಹಾ ಹಿರೇಮಠ ಬರ್ಬರವಾಗಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದರು. ಅಲ್ಲದೇ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸೋದಾಗಿ ತಿಳಿಸಿದ್ದರು. ಅದರಂತೆ ರಾಜ್ಯ ಸರ್ಕಾರ ನೇಹಾ ಹತ್ಯೆ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ಆದೇಶಿಸಿದೆ. ಈ ಕುರಿತಂತೆ ಸಚಿವ ಹೆಚ್.ಕೆ ಪಾಟೀಲ್ ಅವರು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕುಮಾರಿ ನೇಹಾ ಹಿರೇಮಠ ಅವರ ಹೀನಾಯ ಹತ್ಯೆ ಪ್ರಕರಮದಲ್ಲಿ ಕರ್ನಾಟಕ ಸರ್ಕಾರವು ಪ್ರಕರಣದಲ್ಲಿ ದಾಖಲಾಗಿರುವ ಎಫ್ಐಆರ್ ವರದಿಯ ಆಧಾರದ ಮೇಲೆ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಚರ್ಚಿಸಿದ್ದೇನೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರ್ಕಾರವು ಉದ್ದೇಶಿಸಿದೆ. ಸರ್ವೋಚ್ಛ ನ್ಯಾಯಾಲಯವು ಮಹಿಳೆಯರ ವಿರುದ್ಧದ ಹೀನಾಯ ಅಪರಾಧ ಪ್ರಕರಣಗಳಲ್ಲಿ ನೀಡಿರುವ ಮಾರ್ಗದರ್ಶನಗಳನ್ನು ಕೂಲಕುಂಷವಾಗಿ…

Read More

ಕಲಬುರ್ಗಿ: ರಾಜ್ಯ ಸರ್ಕಾರ ಜನ ಪರ ಐದು ಗ್ಯಾರೆಂಟಿ ಯೋಜನೆಗಳು ಬಿಜೆಪಿಯವರಿಗೆ ಅಪಥ್ಯವಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಪಾದಿಸಿದರು. ಕಲಬುರಗಿ ನಗರದ ಸುಂದರ ನಗರದಲ್ಲಿ ನಡೆದ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡುತ್ತಿದ್ದರು. ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಬಿಜೆಪಿ ಓ ಯೋಜನೆಗಳನ್ನು ಬಿಟ್ಟಿ ಭಾಗ್ಯ ಎಂದು ಮೂದಲಿಸುತ್ತಿದೆ. ಅವರಿಗೆ ಜನರು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ದಿ ಹೊಂದುವುದು ಬೇಕಿಲ್ಲ. ಯಾವುದೇ ಅಭಿವೃದ್ದಿ ಮಾಡದ ಉಮೇಶ್ ಜಾಧವ್ ಅವರು ಈ ಸಲ ಚುನಾವಣೆ ನಿಂತಿದ್ದಾರೆ ಅವರ ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ನಿಂತಿದ್ದಾರೆ. ಕಲಬುರಗಿ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು. ರೈತರಿಗೆ ಬೆಂಬಲ ಬೆಲೆ, ಯುವಕರಿಗೆ ತರಬೇತಿ, ಕೇಂದ್ರದ ಮೂವತ್ತು ಲಕ್ಷ ಹುದ್ದೆ ಹಾಗೂ ರಾಜ್ಯದ ಎರಡುವರೆ ಲಕ್ಷ…

Read More

ಬೆಳಗಾವಿ: ದಿನೇ ದಿನೇ ಕೋಮುಸೌಹಾರ್ದತೆಯನ್ನು ಕೆಡಿಸುವಂತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರನ್ನು ಮುಸ್ಲೀಂ ಮತಾಂತರಕ್ಕೆ ಯತ್ನಿಸಿದಂತ ಘಟನೆ ನಡೆದಿದೆ. ಅಲ್ಲದೇ ಈ ಸಂಬಂಧ ದೂರು ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಮುಸ್ಲೀಂ ಮತಾಂತರಕ್ಕೆ ಮಹಿಳೆಯೊಬ್ಬರನ್ನು ಯತ್ನಿಸಿದಂತ ಘಟನೆ ನಡೆದಿದೆ. ವಿಷಯ ತಿಳಿದು ಮಹಿಳೆಯ ನಿವಾಸಕ್ಕೆ ಬಿಜೆಪಿ ಮುಖಂಡರು ಭೇಟಿ ನೀಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್, ಮಾಜಿ ಶಾಸಕ ಸಂಜಯ್ ಪಾಟೀಲ್, ವಿರೂಪಾಕ್ಷ ಮಾಮನಿ ಸೇರಿದಂತೆ ಸ್ಛಳೀಯ ನಾಯಕರು ಭೇಟಿ ನೀಡಿ, ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳೆಯ ಕುಟುಂಬಸ್ಥರು ತಮಗೆ ಜೀವ ಭಯವಿದೆ. ರಕ್ಷಣೆ ಕೊಡಿಸುವಂತೆ ಕೋರಿ ಕೊಂಡಿದೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. https://kannadanewsnow.com/kannada/muslim-population-is-decreasing-in-islamic-countries-and-increasing-rapidly-in-india-bommai/ https://kannadanewsnow.com/kannada/lok-sabha-elections-how-to-download-voter-slip-on-mobile-heres-the-information/

Read More

ಹಾವೇರಿ: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿ ಕಾಲೇಜು ಯುವತಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಾವೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಿಂದ ಮುಸ್ಲಿಮರನ್ನು ಓಡಿಸಲು ಹುನ್ನಾರ ನಡೆದಿದೆ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇಡೀ ಜಗತ್ತಿನಲ್ಲಿ ಎಲ್ಲಾದರೂ ಮುಸ್ಲಿಂಮರು ಸುರಕ್ಷತೆಯಿಂದ ಇದ್ದರೆ ಅದು ಭಾರತದಲ್ಲಿ ಮಾತ್ರ. ಇದನ್ನು ಮೊದಲು ಡಿ.ಕೆ. ಶಿವಕುಮಾರ್ ಅರ್ಥ ಮಾಡಿಕೊಳ್ಳಲಿ‌. ಅವರ ಜನಸಂಖ್ಯೆ ಅತಿ ವೇಗವಾಗಿ ಬೆಳೆಯುತ್ತಿರುವುದು ಭಾರತ ದೇಶದಲ್ಲಿ ಮಾತ್ರ. ಇಸ್ಲಾಂ ದೇಶದಲ್ಲಿ ಇವರ ಜನಸಂಖ್ಯೆ ಕಡಿಮೆ ಆಗುತ್ತಿದೆ. ಡಿ.ಕೆ. ಶಿವಕುಮಾರ್ ಅವರು ಓಟಿನ ರಾಜಕಾರಣಕ್ಕಾಗಿ ತುಷ್ಟಿಕರಣಕ್ಕಾಗಿ ಹಾಗೆ ಮಾತನಾಡುತ್ತಿದ್ದಾರೆ ಎಂದು ಹೇಳಿದರು. ಇನ್ನು ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಮಾಡ್ತಿದೆ ಎಂಬ ವಿಧಾನ ಪರಿಷತ್ ಸದಸ್ಯ ಬಿ…

Read More

ಬೆಂಗಳೂರು: ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ. ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಹಿರಿಯ ಮುಖಂಡ ಆರ್.ಪ್ರಕಾಶ್ ಅವರಿದ್ದ ನಾಯಕರ ನಿಯೋಗ ಕೇಂದ್ರೀಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ವಿರುದ್ಧ ದೂರು ನೀಡಿದೆ. ಪಾರದರ್ಶಕವಾಗಿ, ನಿರ್ಭೀತಿ, ಭ್ರಷ್ಟಾಚಾರ ರಹಿತವಾಗಿ ನಡೆಯಬೇಕಿದ್ದ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಮೂಲಕ ಕಲುಷಿತಗೊಳಿಸಿ ಅಕ್ರಮ ನಡೆಸುತ್ತಿದೆ. ನ್ಯಾಯ ಪತ್ರ ಹೆಸರಿನಲ್ಲಿ ಐದು ಗ್ಯಾರಂಟಿ ಕಾರ್ಡುಗಳ ಮೇಲೆ ಸಹಿ ಮಾಡಿ ಮತದಾರರಿಗೆ ಹಂಚಿಕೆ ಮಾಡುತ್ತಿರುವುದು ಚುನಾವಣಾ ನೀತಿ…

Read More

ಬೆಂಗಳೂರು: ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕವನ್ನ ಕಡೆಗಣಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗವಾಗಿದೆ ಎಂದು ಸರ್ಕಾರದ ಮುಖ್ಯ ವಕ್ತಾರರಾಗಿರುವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ತಿಯಿಸಿದ ಅವರು, ಇದು ಕರ್ನಾಟಕದ ನ್ಯಾಯಯುತ ಹೋರಾಟಕ್ಕೆ ಸಂದಿರುವ ಜಯ ಎಂದರು. ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ. ಆದರೆ ಕೇಂದ್ರ ತಮಗಿಷ್ಟಬಂದಂತೆ ಬೇಕಾಬಿಟ್ಟಿಯಾಗಿ ನಡೆದುಕೊಳ್ತು. ಮೂರು ಬಾರಿ ರಾಜ್ಯದ ಬರ ಪರಿಸ್ಥಿತಿ ಕುರಿತು ವರದಿ ನೀಡಿದ್ವಿ. ಆದರೆ ಕೇಂದ್ರ ಸರ್ಕಾರ ಸ್ಪಂದಿಸಲಿಲ್ಲ. ಅನಿವಾರ್ಯವಾಗಿ ಕರ್ನಾಟಕ ಸರ್ಕಾರದ ಕಾನೂನು ಹೋರಾಟಕ್ಕೆ ಇಳಿಯಬೇಕಾಯಿತು. ಕೇಂದ್ರ ಸರ್ಕಾರದ ವಿರುದ್ಧ ಸಂಘರ್ಷಕ್ಕಿಳಿಯುವ ಉದ್ದೇಶದಿಂದ ನಾವು ಕೋರ್ಟ್ ಮೊರೆ ಹೋಗಿರಲಿಲ್ಲ. ಕರ್ನಾಟಕದ ರೈತರು ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಸಿಗಬೇಕಾದ ಪರಿಹಾರಕ್ಕಾಗಿ ನಾವು ಕೋರ್ಟ್ ಗೆ ಹೋಗಿದ್ವಿ. ರಾಜ್ಯ…

Read More

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಂತ ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಮಾಜಿ ಪರಿಷತ್ ಸದಸ್ಯ ಅಶ್ವತ್ಥನಾರಾಯಣ ಅವರ ನೇತೃತ್ವದ ನಿಯೋಗವು ರಾಜ್ಯ ಚುನಾವಣಾ ಅಧಿಕಾರಿ ಕಚೇರಿಗೆ ತೆರಳಿ, ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ ಅವರ ವಿರುದ್ಧ ದೂರು ನೀಡಿದೆ. ‘ಬಿಜೆಪಿ’ ಅಧಿಕಾರಕ್ಕೆ ಬಂದ್ರೆ ತಾಯಂದಿರು ‘ಗಂಡ-ಮಕ್ಕಳ’ನ್ನ ಕಳೆದುಕೊಳ್ತಾರೆ: ಯತೀಂದ್ರ ವಿವಾದ್ಮಕ ಹೇಳಿಕೆ ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಧರ್ಮದ ತಾಯಂದಿರು ಗಂಡ-ಮಕ್ಕಳನ್ನು ಕಳೆದುಕೊಳ್ತಾರೆ ಎಂಬುದಾಗಿ ಡಾ.ಯತೀಂದ್ರ ಸಿದ್ಧರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಪ್ರಧಾನಿ ಮೋದಿ ಅವರನ್ನು ಟೀಕಿಸೋ ಭರದಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ, ಜನರ ಟೀಕೆಗೆ ಗುರಿಯಾಗಿದ್ದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆಸಿದ್ದಾವೆ. ಯಾವಾಗ್ಲೂ ಹಿಂದೂಗಳಿಗೆ…

Read More

ಬೆಂಗಳೂರು: “ಬೆಲೆ ಏರಿಕೆ, ಜಿಎಸ್ಟಿ ಹೊರೆ, ನಿರುದ್ಯೋಗ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಜವಾದ ಗ್ಯಾರಂಟಿ” ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಬೆಂಗಳೂರು ದಕ್ಷಿಣದ ವಿವಿಧೆಡೆ ಭಾನುವಾರ ಪ್ರಚಾರ ನಡೆಸಿದ ಸುರೇಶ್ ಅವರು, “ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಿಮ್ಮೆಲ್ಲರ ಆಶೀರ್ವಾದ ಕೇಳಲು ನಾನು ಬಂದಿದ್ದೇನೆ. ಈ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷವಾಗಿದೆ. ರಾಜ್ಯದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು 10 ತಿಂಗಳಾಗಿವೆ. ಕಾಂಗ್ರೆಸ್ ಸರ್ಕಾರದ ಈ ಹತ್ತು ತಿಂಗಳ ಸಾಧನೆ ಏನು, ಕೇಂದ್ರ ಬಿಜೆಪಿ ಸರ್ಕಾರ 10 ವರ್ಷಗಳ ಸಾಧನೆ ಏನು ಎಂಬುದನ್ನು ಈ ಚುನಾವಣೆಯಲ್ಲಿ ಚರ್ಚೆ ಮಾಡಬೇಕು ಎಂದರು. ನೀವೆಲ್ಲರೂ ಟಿವಿಗಳಲ್ಲಿ ಕಾಂಗ್ರೆಸ್ ನ ಐದು ಗ್ಯಾರಂಟಿ ಹಾಗೂ ಮೋದಿ ಗ್ಯಾರಂಟಿ ಬಗ್ಗೆ ಜಾಹೀರಾತು ನೋಡುತ್ತಿದ್ದೀರಿ. ಇಲ್ಲಿರುವ ಜನರ ಪೈಕಿ ಮೋದಿ ಗ್ಯಾರಂಟಿ ಎಷ್ಟು…

Read More

ಬೆಂಗಳೂರು: ಹಾಪ್‌ಕಾಮ್ಸ್ ರೈತರು ಹಾಗೂ ನೌಕರರ ಸಂಘ, ಕರ್ನಾಟಕ ರಾಜ್ಯ ನೇಕಾರರ ಸಮುದಾಯಗಳ ಸಮ್ಮಿಲನ ವೇದಿಕೆ ಹಾಗೂ ರಾಜ್ಯ ಆರ್ಯ ವೈಶ್ಯ ಸಮುದಾಯದವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಬೆಂಬಲ ಘೋಷಿಸಿದ್ದಾರೆ. ಇಂದು ಹಾಪ್‌ಕಾಮ್ಸ್ ರೈತರು ಹಾಗೂ ನೌಕರರ ಸಂಘ ಸಭೆಯನ್ನು ನಡೆಸಿ, ಕಳೆದ 30 ವರ್ಷಗಳಿಂದಲೂ ಹಾಪ್‌ಕಾಮ್ಸ್ ಹಾಗೂ ನೌಕರರ ಬಗ್ಗೆ ವಿಶೇಷ ಕಾಳಜಿ ಮತ್ತು ಪ್ರೀತಿ ತೋರಿ, ಹಾಫ್ ಕಾಮ್ಸ್ ಅಭಿವೃದ್ಧಿಗೆ ನಿರಂತರ ಸಹಕಾರ ನೀಡಿರುವ ಏಕೈಕ ರಾಜಕಾರಣಿ ಅಂದರೆ ಅದು ರಾಮಲಿಂಗಾರೆಡ್ಡಿರವರು, ಅವರ ಕಾರ್ಯವನ್ನು ಸ್ಮರಿಸಿ ಅಖಂಡ ಹಾಪ್ ಕಾಮ್ಸ್ ನೌಕರರು ರಾಮಲಿಂಗಾರೆಡ್ಡಿ ರವರ ಮಗಳಾದ ಸೌಮ್ಯ ರೆಡ್ಡಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಘೋಷಿಸಿದರು. ಅದರಂತೆ ರಾಜ್ಯ ನೇಕಾರರ ಸಮುದಾಯದ ಒಕ್ಕೂಟದ ಅಧ್ಯಕ್ಷರಾದ ಲಕ್ಷ್ಮಿ ನಾರಾಯಣಪ್ಪ ರವರು ಮಾತನಾಡಿ ರಾಜ್ಯ ಸರ್ಕಾರವು ನೇಕಾರರಿಗೆ ಉಚಿತ ವಿದ್ಯುತ್, ರೂ.2 ಲಕ್ಷದವರೆಗೆ ಶೇ.1 ರೂ ಬಡ್ಡಿ ದರದಲ್ಲಿ ಸಾಲ, ರೂ. 2…

Read More