Author: kannadanewsnow09

ಬೆಂಗಳೂರು: ಭಾರತ ಹವಾಮಾನ ಇಲಾಖೆ (IMD) ಯು ಈ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (Heat Wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಹೀಗಾಗಿ ಕೆಲ ಸಲಹೆಗಳನ್ನು ತಪ್ಪದೇ ಸಾರ್ವಜನಿಕರು ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆಯು ಏಪ್ರಿಲ್ 2024ರ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ…

Read More

ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ. 24 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂಕೆಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಏ.29: ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ಶಿವಮೊಗ್ಗ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಏ.29 ರಂದು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಾಯಿ ಎಕ್ಸ್‍ಪೋರ್ಟ್, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್, ದಾವಣಗೆರೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ. ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ…

Read More

ಬೆಂಗಳೂರು: ಇಬ್ಬರು ಮಹಿಳೆಯರಿಗೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಯ ನಂತ್ರ ತೀವ್ರ ರಕ್ತಸ್ತ್ರಾವದಿಂದಾಗಿ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಬಳ್ಳಾರಿಯ ಮೋಕಾ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞೆ ಡಾ.ಪರಿಮಳಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಆರೋಗ್ಯ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದಂತ ಡಿ.ರಂದೀಪ್ ಅವರು ಆದೇಶ ಹೊರಡಿಸಿದ್ದಾರೆ. ದಿನಾಂಕ 07-03-2024ರಂದು ಭಾಗ್ಯಮ್ಮ(23) ಎಂಬುವರು ಮೋಕಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಶಸ್ತ್ರಚಿಕಿತ್ಸೆ ನಡೆಸಿದ್ದರು ಎಂದಿದ್ದಾರೆ. ಶಸ್ತ್ರಚಿಕಿತ್ಸೆಯ ನಂತ್ರ ಭಾಗ್ಯಮ್ಮ ಅವರಿಗೆ ತೀವ್ರರಕ್ತ ಸ್ತ್ರಾವ ಉಂಟಾಗಿತ್ತು. ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯೋ ಮಾರ್ಗಮಧ್ಯೆದಲ್ಲಿ ಮೃತಪಟ್ಟಿದ್ದರು ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ. ದಿನಾಂಕ 06-03-2024ರಂದು ಸಿಂಧುವಾಳ ನಗರದ ರಾಜಮ್ಮ(23) ಎಂಬುವರಿಗೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಯನ್ನು ಡಾ.ಪರಿಮಳ ದೇಸಾಯಿ ನೆರವೇರಿಸಿದ್ದರು. ಅವರು ಕೂಡ ತೀವ್ರ…

Read More

ಬೆಂಗಳೂರು: ಏಪ್ರಿಲ್.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಕಾರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ನಾಳೆ ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. ನಾಳೆ ಸಂಜೆ 6 ಗಂಟೆಯಿಂದ ಏಪ್ರಿಲ್.26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಐದು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 13 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 11 ಸಿಆರ್ ಪಿಎಫ್, 14 ಕೆ ಎಸ್ ಆರ್ ಪಿ ಹಾಗೂ 40 ಸಿಎಆರ್ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನಗರ ಪೊಲೀಸ್…

Read More

ನವದೆಹಲಿ. 20 ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುವ ಕಂಪನಿ, ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ (ಇಪಿಎಫ್ಒ) ನೋಂದಾಯಿಸಿಕೊಳ್ಳುವುದು ಅವಶ್ಯಕ. ಸಂಘಟಿತ ವಲಯದಲ್ಲಿ ಕೆಲಸ ಮಾಡುವ ಹೆಚ್ಚಿನ ಜನರ ಪಿಎಫ್ ಖಾತೆಯನ್ನು ಕಡಿತಗೊಳಿಸಲು ಇದು ಕಾರಣವಾಗಿದೆ. ಒಬ್ಬ ವ್ಯಕ್ತಿಯು ಉದ್ಯೋಗವನ್ನು ಪ್ರಾರಂಭಿಸಿದಾಗ, ಇಪಿಎಫ್ಒನಿಂದ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್) ಅನ್ನು ಪಡೆಯಲಾಗುತ್ತದೆ. ನಿಮ್ಮ ಉದ್ಯೋಗದಾತರು ಈ ಯುಎಎನ್ ಅಡಿಯಲ್ಲಿ ಪಿಎಫ್ ಖಾತೆಯನ್ನು ತೆರೆಯುತ್ತಾರೆ. ನೀವು ಮತ್ತು ನಿಮ್ಮ ಕಂಪನಿ ಇಬ್ಬರೂ ಪ್ರತಿ ತಿಂಗಳು ಅದಕ್ಕೆ ಕೊಡುಗೆ ನೀಡುತ್ತೀರಿ. ಇಪಿಎಫ್ ಖಾತೆಯಿಂದ ಹಣವನ್ನು ಹಿಂಪಡೆಯಲು ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಅನೇಕ ಉದ್ಯೋಗಿಗಳು ನಂಬುತ್ತಾರೆ. ಆದರೆ, ಇದು ಸಂಪೂರ್ಣವಾಗಿ ನಿಜವಲ್ಲ. ಕೆಲವು ಸಂದರ್ಭಗಳಲ್ಲಿ, ಹಿಂಪಡೆಯುವಿಕೆಗೆ ನೀವು ತೆರಿಗೆ ಪಾವತಿಸಬೇಕಾಗಬಹುದು. ಐದು ವರ್ಷಗಳ ಕಾಲ ಇಪಿಎಫ್ಗೆ ಕೊಡುಗೆ ನೀಡಿದ ನಂತರ ನೀವು ಮೊತ್ತವನ್ನು ಹಿಂತೆಗೆದುಕೊಂಡರೆ, ಇಪಿಎಫ್ ಖಾತೆದಾರರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಈಗ ಈ 5 ವರ್ಷಗಳಲ್ಲಿ ನೀವು ಒಂದು ಕಂಪನಿಯಲ್ಲಿ ಅಥವಾ ಒಂದಕ್ಕಿಂತ…

Read More

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬರ ಪರಿಹಾರ ಬಿಡುಗಡೆ ಮಾಡದಂತ ಆಸ್ತ್ರವನ್ನ ಕಾಂಗ್ರೆಸ್ ನಾಯಕರು ಬಳಿಸಿಕೊಂಡು ಧರಣಿ, ಪ್ರತಿಭಟನೆ ಇಳಿದಿದ್ದಾರೆ. ಇಂದು ವಿಧಾನಸೌಧದ ಬಳಿ ಇರುವಂತ ಗಾಂಧಿ ಪ್ರತಿಮೆಯ ಬಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿಎಂ ಸಿದ್ಧರಾಮಯ್ಯ, ಸಚಿವರು, ಶಾಸಕರು, ಎಂಎಲ್ಸಿಗಳು ಸೇರಿ ಪ್ರತಿಭಟನೆ ಕೈಗೊಂಡಿದ್ದಾರೆ. ಬರ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಖಂಡಿಸಿ ಧರಣೆಯನ್ನು ಕಾಂಗ್ರೆಸ್ ನಾಯಕರಿಂದ ನಡೆಸಲಾಗುತ್ತಿದೆ. ಗೋ ಬ್ಯಾಕ್ ಅಮಿತ್ ಶಾ ಎಂಬುದಾಗಿಯೂ ಘೋಷಣೆ ಕೂಗಿ ಆಕ್ರೋಶವನ್ನು ಹೊರ ಹಾಕಲಾಗುತ್ತಿದೆ. ಇಂದು ಬೆಂಗಳೂರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಪ್ರಚಾರದಲ್ಲಿ ತೊಡಗೋದಕ್ಕೆ ರಾತ್ರಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗೋ ಬ್ಯಾಕ್ ಘೋಷಣೆ ಕೂಗಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಭಿತ್ತಿ ಪತ್ರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಕೂಡಲೇ ಬರ ಪರಿಹಾರವನ್ನು ಬಿಡುಗಡೆ ಮಾಡುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ.…

Read More

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಂಗಳೂರಲ್ಲಿ ಲೋಕಸಭಾ ಚನಾವಣೆ ಹಿನ್ನಲೆಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತಬೇಟೆಯಲ್ಲಿ ತೊಡಗಲಿದ್ದಾರೆ. ಬೆಂಗಳೂರಿಗೆ ರಾತ್ರಿ 7.35ಕ್ಕೆ ಹೆಚ್ಎಎಲ್ ಏರ್ ಪೋರ್ಟ್ ಗೆ ಆಗಮಿಸಲಿರುವಂತ ಅವರು, ರಸ್ತೆ ಮಾರ್ಗದ ಮೂಲಕ ರೋಡ್ ಶೋಗೆ ತೆರಳಲಿದ್ದಾರೆ. ರಾತ್ರಿ 7.50ಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬೊಮ್ಮನಹಳ್ಳಿ ಸರ್ಕಲ್ ಬಳಿ ವಿವೇಕಾನಂದ ವೃತ್ತದಿಂದ ಆರಂಭವಾಗಲಿರುವ ರೋಡ್ ಶೋ ರಾತ್ರಿ 8.45ಕ್ಕೆ ಸೆಂಟ್ ಫ್ರಾನ್ಸಿಸ್ ಸ್ಕೂಲ್ ಬಳಿಯಲ್ಲಿ ಅಂತ್ಯವಾಗಲಿದೆ. ಇಂದು ಬೆಂಗಳೂರಿನಲ್ಲಿನ ಲೋಕಸಭಾ ಚುನಾವಣಾ ಪ್ರಚಾರದ ರೋಡ್ ಶೋ ಮುಗಿದ ಬಳಿಕ, ಅಮಿತ್ ಶಾ ಅವರು ಕೇರಳದ ಕೊಚ್ಚಿನ್ ಗೆ ಪ್ರಯಾಣ ಬೆಳೆಸಲಿದ್ದಾರೆ. https://kannadanewsnow.com/kannada/bengaluru-karaga-mahotsava-today-traffic-restrictions-on-these-roads-heres-the-alternative-route/ https://kannadanewsnow.com/kannada/minor-girl-commits-suicide-by-hanging-herself-after-boyfriend-makes-obscene-video-viral/

Read More

ನಮ್ಮ ಜೀವನದ ಪ್ರತಿ ದಿನವೂ ನಾವು ಸಂತೋಷವಾಗಿರುತ್ತೇವೆಯೇ ಅಥವಾ ದುಃಖಿಸುತ್ತೇವೆಯೇ ಎಂಬುದನ್ನು ನಿರ್ಧರಿಸುವುದು ಹಣ. ನಮ್ಮಲ್ಲಿ ಹೆಚ್ಚು ಹಣವಿದೆ, ನಮಗೆ ಹೆಚ್ಚು ಸಂತೋಷ ಮತ್ತು ಶಾಂತಿ ಇರುತ್ತದೆ. ಹಣವೊಂದಿದ್ದರೆ ಅಲ್ಲಿ ಸುಖ-ಶಾಂತಿ? ನಿಮ್ಮ ಬಳಿ ಹಣವಿಲ್ಲದಿದ್ದರೆ, ಅದು ಖಂಡಿತವಾಗಿಯೂ ಎರಡೂ ಅಲ್ಲ ಎಂದು ನೀವು ಒಪ್ಪಿಕೊಳ್ಳಬೇಕು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ…

Read More

ಪೆರಾಕ್ : ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಪೆರಾಕ್ ನ ಲುಮುಟ್ ನಲ್ಲಿ ಮಂಗಳವಾರ ನಡೆದಿದೆ. ಫ್ರೀ ಮಲೇಷ್ಯಾ ಟುಡೇ ವರದಿಯ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ ಮತ್ತು ವೈದ್ಯಕೀಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಅವರ ಸಾವುಗಳನ್ನು ದೃಢಪಡಿಸಿದ್ದಾರೆ ಎಂದು ಹೇಳಿದರು. ಆಕಾಶದ ಮಧ್ಯದಲ್ಲಿ ಮಿಲಿಟರಿ ಹೆಲಿಕಾಪ್ಟರ್ ಪತನ https://twitter.com/BNONews/status/1782616782601154680 ಹೆಲಿಕಾಪ್ಟರ್ ಗಳಿಂದ ಸಂತ್ರಸ್ತರ ಶವಗಳನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/bengaluru-karaga-mahotsava-today-traffic-restrictions-on-these-roads-heres-the-alternative-route/

Read More

ಪೆರಾಕ್: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ಪೆರಾಕ್ ನ ಲುಮುಟ್ ನಲ್ಲಿ ಮಂಗಳವಾರ ನಡೆದಿದೆ. ಫ್ರೀ ಮಲೇಷ್ಯಾ ಟುಡೇ ವರದಿಯ ಪ್ರಕಾರ, ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ ಮತ್ತು ವೈದ್ಯಕೀಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ಅವರ ಸಾವುಗಳನ್ನು ದೃಢಪಡಿಸಿದ್ದಾರೆ ಎಂದು ಹೇಳಿದರು. ಹೆಲಿಕಾಪ್ಟರ್ ಗಳಿಂದ ಸಂತ್ರಸ್ತರ ಶವಗಳನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/Megatron_ron/status/1782618136002347085 ಅಂದಹಾಗೆ ರಾಯಲ್ ಮಲೇಷ್ಯಾ ನೌಕಾಪಡೆಯ ಆಚರಣೆ ಕಾರ್ಯಕ್ರಮಕ್ಕಾಗಿ ಪೂರ್ವಾಭ್ಯಾಸ ನಡೆಸುತ್ತಿದ್ದಾಗ ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು, ಈ ದುರಂತ ನಡೆದಿದೆ. https://kannadanewsnow.com/kannada/three-pedestrians-killed-as-bolero-collides-with-vehicle-in-raichur/ https://kannadanewsnow.com/kannada/bengaluru-karaga-mahotsava-today-traffic-restrictions-on-these-roads-heres-the-alternative-route/

Read More