Author: kannadanewsnow09

ಬೆಂಗಳೂರು: ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ 2017ರ ಪ್ರಕರಣದಲ್ಲಿ ಕೋರ್ಟ್ ಜಾಮೀನು ನೀಡಿತ್ತು. ಇನ್ನೇನು ಇಂದು ಸಂಜೆಯೊಳಗೆ ಬಿಡುಗಡೆಯಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಕೋರ್ಟ್ ಜಾಮೀನಿನ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ಧರು. ಈ ಪ್ರಕರಣದಲ್ಲೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ತಪ್ಪಿಲ್ಲ. 2017ರಲ್ಲಿ ನಡೆದಿದ್ದಂತ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ಅವರಿಗೆ ಇಂದು ಜಾಮೀನು ನೀಡಿತ್ತು. ಈ ಬಳಿಕ ಅವರು ಬಿಡುಗಡೆ ಆಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎನ್ ಡಿ ಎಂ ಎ ಕಾಯ್ದೆಯಡಿಯ ಪ್ರಕರಣದಲ್ಲಿ ಮತ್ತೆ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಲಾಗಿದೆ. ಇದೀಗ ಅವರನ್ನು ವಶಕ್ಕೆ ಪಡೆದಿರುವಂತ ಪೊಲೀಸರು ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸೋದಕ್ಕೆ ಕರೆದೊಯ್ದಿದ್ದರು. ಆ ಬಳಿಕ ಅವರನ್ನು ಸೆಂಟ್ ಮಾರ್ಥಾಸ್…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ನೈರುತ್ಯ ರೈಲ್ವೆ ಇಲಾಖೆಯಿಂದ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗವು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ. ವಿಶೇಷ ರೈಲಿನ ವಿವರಗಳು ಈ ಕೆಳಗಿನಂತಿವೆ ಎಂದಿದೆ. ರೈಲು ಸಂಖ್ಯೆ 06577/06578 ಎಸ್ಎಂವಿಟಿ ಬೆಂಗಳೂರು-ತಿರುಚ್ಚಿರಾಪಳ್ಳಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ (ಟಿಒಡಿ) ಒಂದು ಟ್ರಿಪ್ ಸಂಚರಿಸಲಿದೆ: ರೈಲು ಸಂಖ್ಯೆ 06577 ಎಸ್ಎಂವಿಟಿ ಬೆಂಗಳೂರು-ತಿರುಚಿರಾಪಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 12, 2024 ರಂದು ಮಧ್ಯಾಹ್ನ02:30 ಗಂಟೆಗೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು ಅದೇ ದಿನ ರಾತ್ರಿ 11.30 ಗಂಟೆಗೆ ತಿರುಚ್ಚಿರಾಪಳ್ಳಿ ನಿಲ್ದಾಣವನ್ನು ತಲುಪಲಿದೆ. ಈ ರೈಲು ಬಂಗಾರಪೇಟೆ (04:03/04:05pm), ಸೇಲಂ (06:50/06:55pm),…

Read More

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮಾರ್ಗ ನಕ್ಷೆ ಮತ್ತು ಕರಪತ್ರವನ್ನು ಬಿಡುಗಡೆ ಮಾಡಿದರು. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಇಬ್ಬರೂ ಹಿರಿಯ ನಾಯಕರು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಕರಪತ್ರಗಳನ್ನು ತೋರಿಸಿದರು, ಅಲ್ಲಿ ಮಾರ್ಗ ನಕ್ಷೆ ಮತ್ತು ಯಾತ್ರೆಯ ಉದ್ದೇಶಗಳನ್ನು ತೋರಿಸಿದರು. https://twitter.com/ANI/status/1744993395599393190 ಈಶಾನ್ಯ ರಾಜ್ಯದಿಂದ ಮೆರವಣಿಗೆಯನ್ನು ಪ್ರಾರಂಭಿಸಲು ಪಕ್ಷ ನಿರ್ಧರಿಸಿದೆ ಮತ್ತು ನಗರದ ಮತ್ತೊಂದು ಸ್ಥಳಕ್ಕೆ ಅನುಮತಿ ಕೋರಿದೆ ಎಂದು ಕಾಂಗ್ರೆಸ್ ಹೇಳಿದೆ. ಆದರೆ, ಇಂಫಾಲ್ ಪೂರ್ವ ಜಿಲ್ಲೆಯಿಂದ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪ್ರಾರಂಭಿಸಲು ಮಣಿಪುರ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೀಶಮ್ ಮೆಗಾಚಂದ್ರ ಹೇಳಿದ್ದಾರೆ. “ನಾವು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಭೇಟಿಯಾಗಿ ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬಂಗ್ನಲ್ಲಿ ‘ಭಾರತ್ ಜೋರೋ ನ್ಯಾಯ್ ಯಾತ್ರಾ’ ಸ್ಥಳಕ್ಕೆ ಅನುಮತಿ ಕೋರಿದ್ದೇವೆ.…

Read More

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಯನ್ನು ತಪ್ಪಿಸುವುದಾಗಿ ಕಾಂಗ್ರೆಸ್ ಪಕ್ಷ ಬುಧವಾರ ಹೇಳಿದೆ. “ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರು ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ತರಲಾಗಿದೆ” ಎಂದು ಪಕ್ಷ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. 2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿರುವಾಗ ಮತ್ತು ಭಗವಾನ್ ರಾಮನನ್ನು ಪೂಜಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವಾಗ,  ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಸ್ಪಷ್ಟವಾಗಿ ಆರ್ಎಸ್ಎಸ್ / ಬಿಜೆಪಿ ಕಾರ್ಯಕ್ರಮಕ್ಕೆ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ. ಪ್ರತಿಷ್ಠಾಪನಾ ಸಮಾರಂಭಕ್ಕೆ ಹಲವಾರು ಉನ್ನತ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿತ್ತು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್ ಮತ್ತು ಸೀತಾರಾಮ್ ಯೆಚೂರಿ ಸೇರಿದಂತೆ…

Read More

ಹಾವೇರಿ: ಜಿಲ್ಲೆಯಲ್ಲೂ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿರೋದು ತಡವಾಗಿ ಬೆಳಕಿಗೆ ಬಂದಿದೆ. ಹೋಟೆಲ್ ರೂಂನಲ್ಲಿದ್ದಂತ ಹಿಂದೂ ವ್ಯಕ್ತಿ ಹಾಗೂ ಮುಸ್ಲೀಂ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿದೆ. ಹಾವೇರಿಯಲ್ಲಿ ಜನವರಿ.8ರಂದು ಲಾಡ್ಜ್ ಒಂದಕ್ಕೆ ನುಗ್ಗಿರುವಂತ ಗುಂಪೊಂದು, ಹಿಂದೂ ವ್ಯಕ್ತಿ ಹಾಗೂ ಮುಸ್ಲೀಂ ಮಹಿಳೆಯ ಮೇಲೆ ಹಲ್ಲೆ ನಡೆಸಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಈ ಬಳಿಕ ಮಹಿಳೆ ಹಾನಗಲ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಪೊಲೀಸರು ಓರ್ವ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆ ನೀಡಿದಂತ ದೂರಿನಲ್ಲಿ ನನ್ನ ಖಾಸಗಿ ಅಂಗಾಗ ಮುಟ್ಟಿ ಹಲ್ಲೆ ನಡೆಸಲಾಗಿದೆ. ಮನಸೋ ಇಚ್ಛೆ ಹೋಟೆಲ್ ನಲ್ಲಿ ಥಳಿಸಿದ್ದಾರೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅಂದಾಹೇ ಹಾವೇರಿ ಜಿಲ್ಲೆಯಲ್ಲಿ ನಡೆದಂತ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಹೋಟೆಲ್ ರೂನಲ್ಲಿ ತಂಗಿದ್ದಂತ ಹಿಂದೂ-ಮುಸ್ಲೀಂ ಜೋಡಿಯ ಮೇಲೆ ಹಲ್ಲೆ ನಡೆಸಲಾಗಿದೆ.…

Read More

ಬೆಂಗಳೂರು: ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ 2017ರ ಪ್ರಕರಣದಲ್ಲಿ ಕೋರ್ಟ್ ಜಾಮೀನು ನೀಡಿತ್ತು. ಇನ್ನೇನು ಇಂದು ಸಂಜೆಯೊಳಗೆ ಬಿಡುಗಡೆಯಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಕೋರ್ಟ್ ಜಾಮೀನಿನ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ತಪ್ಪಿಲ್ಲ. 2017ರಲ್ಲಿ ನಡೆದಿದ್ದಂತ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ಅವರಿಗೆ ಇಂದು ಜಾಮೀನು ನೀಡಿತ್ತು. ಈ ಬಳಿಕ ಅವರು ಬಿಡುಗಡೆ ಆಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎನ್ ಡಿ ಎಂ ಎ ಕಾಯ್ದೆಯಡಿಯ ಪ್ರಕರಣದಲ್ಲಿ ಮತ್ತೆ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಲಾಗಿದೆ. ಇದೀಗ ಅವರನ್ನು ವಶಕ್ಕೆ ಪಡೆದಿರುವಂತ ಪೊಲೀಸರು ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸೋದಕ್ಕೆ ಕರೆದೊಯ್ಯುತ್ತಿದ್ದಾರೆ. https://kannadanewsnow.com/kannada/karve-state-president-ta-narayana-gowda-granted-bail-2/

Read More

ಬೆಂಗಳೂರು : ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರ ಸಭೆಯಲ್ಲಿ ಅವರು ಮಾತನಾಡಿ, ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರುಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿಗಳನ್ನು ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು , ಹಿಂದುಳಿದವರು , ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು. ನಮ್ಮವರೇ ಅಪಪ್ರಚಾರ ಮಾಡುವುದನ್ನು ಬಿಡಬೇಕು ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಿ. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೆ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದ ಸಿಎಂ, ನಮ್ಮವರೇ ಬಿಜೆಪಿಯವರ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು.…

Read More

ಬೆಂಗಳೂರು : ಬಜಾಜ್ ಫಿನ್‌ಸರ್ವ್‌ನ ಅಂಗ ಸಂಸ್ಥೆಯಾದ ಬಜಾಜ್ ಮಾರ್ಕೆಟ್ಸ್, ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ ನೊಂದಿಗಿನ ಪಾಲುದಾರಿಕೆಯಲ್ಲಿ ಬ್ಯಾಂಕ್‌ನ ಶೇ.8.25 ಬಡ್ಡಿದರವುಳ್ಳ ಸ್ಥಿರ ಠೇವಣಿಗಳನ್ನು ನೀಡುತ್ತದೆ ಮತ್ತು ಹಿರಿಯ ನಾಗರಿಕರಿಗೆ ಹೆಚ್ಚುವರಿ ಶೇ.0.50 ಬಡ್ಡಿ ದರದ ಲಾಭವಿರುತ್ತದೆ. ಬಜಾಜ್ ಮಾರ್ಕೆಟ್ಸ್ ಮೂಲಕ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಫಿಕ್ಸೆಡ್ ಡಿಪಾಸಿಟ್‌ಗಳಲ್ಲಿ ಹೂಡಿಕೆ ಮಾಡುವುದರಿಂದ ಹಲವಾರು ಆಕರ್ಷಕ ವೈಶಿಷ್ಟ್ಯಗಳು ಲಭಿಸುತ್ತವೆ: ವ್ಯಕ್ತಿಯೊಬ್ಬರು 1,000₹ ಗಳಷ್ಟು ಕಡಿಮೆ ಮೊತ್ತವನ್ನು ಹೂಡಬಹುದು. ಇದರಿಂದ, ಬಹಳಷ್ಟು ಜನರು ಹೂಡಿಕೆದಾರರಾಗಲು ಅನುವಾಗುತ್ತದೆ. ಇದಲ್ಲದೆ, ಇದರಲ್ಲಿ ಅನೇಕ ಗಮನಾರ್ಹ ಪ್ರಯೋಜನಗಳಿವೆ. ಉದಾ: ಮೆಚ್ಯೂರಿಟಿ ಅಥವಾ ತ್ರೈಮಾಸಿಕ ಆಧಾರದ ಮೇಲೆ ಪಾವತಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು; ಉಳಿತಾಯ ಖಾತೆಯನ್ನು ತೆರೆಯುವ ಅಗತ್ಯವಿಲ್ಲದೇ ಎಫ್‌ಡಿ ಗಳಲ್ಲಿ ಹೂಡಿಕೆ ಸಾಧ್ಯ; ವಿವಿಧ ಅವಧಿಗಳಿಗೆ ಹೂಡಿಕೆಗಳನ್ನು ಮಾಡಬಹುದು. ಹೀಗೆ, ಗ್ರಾಹಕರು ತಮ್ಮ ಹಣಕಾಸಿನ ಅಗತ್ಯಗಳಿಗೆ ಸೂಕ್ತವಾದಂತೆ ಹೂಡಿಕೆ ಮಾಡಬಹುದು. ಹಿರಿಯ ನಾಗರಿಕರಿಗೆ ಹೆಚ್ಚಿನ ಬಡ್ಡಿದರದ ಲಾಭ. ತೆರಿಗೆ-ಉಳಿಸಲು ಬಯಸುವ ಹೂಡಿಕೆದಾರರು ತೆರಿಗೆ ಉಳಿಸುವ ಫಿಕ್ಸೆಡ್ ಡೆಪಾಸಿಟ್‌ಗಳ…

Read More

ಇದು ದೇವತೆಗಳಿಗೆ ಸೇರಿದ ಧನುರ್ಮಾಸ. ಆ ದೇವರುಗಳು ಈ ಭೂಮಿಯನ್ನು ಸಂದರ್ಶಿಸುವ ಮಾಸವೇ ಈ ಮಾರ್ಗಜಿ ಮಾಸ. ಧನುರ್ಮಾಸ ಮಾಸವು ಭಗವಾನ್ ವಿಷ್ಣು ಮತ್ತು ಮಹಾಲಕ್ಷ್ಮಿ ನಮ್ಮನ್ನು ಆಶೀರ್ವದಿಸಬೇಕಾದ ತಿಂಗಳು. ಆ ಈಸನ ಅನುಗ್ರಹವನ್ನು ಪಡೆಯುವ ಮಾಸವೇ ಈ ಧನುರ್ಮಾಸ. ಇದೇ ತಿಂಗಳಲ್ಲಿ ಹನುಮ ಜಯಂತಿ ಬರಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ…

Read More

ಬೆಂಗಳೂರು : ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಇವರಿಗೆ ಗೌರವ…

Read More