Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಉಂಟಾಗಿದೆ. ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಕಾಣಿಸಿಕೊಂಡಿರುವಂತ ಬೆಂಕಿಯೊಂದರಿಂದಾಗಿ ಧಗ ಧಗಿಸಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿನ ಪ್ಲಾಸ್ಟಿಕ್ ತಯಾರಿಕಾ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಉಂಟಾಗಿದೆ. ಇದರಿಂದಾಗಿ ಪ್ಲಾಸ್ಟಿಕ್ ಕಾರ್ಖಾನೆ ಹೊತ್ತಿ ಉರಿಯುತ್ತಿದೆ. ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿಯ ಹೊಗೆ ಸುತ್ತಮುತ್ತಲ ವ್ಯಾಪ್ತಿಗೆ ಆವರಿಸಿದ್ದು, ಜನರು ಭಯಭೀತರಾಗಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. https://kannadanewsnow.com/kannada/bjp-state-president-by-vijayendra-takes-holy-dip-at-kumbh-mela-in-prayagraj/ https://kannadanewsnow.com/kannada/new-income-tax-bill-introduced-in-lok-sabha/
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳಕ್ಕೆ ತೆರಳಿರುವಂತ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ವಿವಿಧ ಗಣ್ಯರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದರು. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು. ಇನ್ನೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಇಂದು ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್ ರಾಜ್ ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದದ್ದು ಪುನೀತ ಭಾವ ಮೂಡಿಸಿತು ಎಂದಿದ್ದಾರೆ. ಜಾಗತಿಕ ಶಾಂತಿಗಾಗಿ, ದೇಶದ ಕಲ್ಯಾಣಕ್ಕಾಗಿ ಕರುನಾಡ ಜನರ ಒಳಿತಿಗಾಗಿ ಪ್ರಾರ್ಥಿಸಲಾಯಿತು.…
ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರಿ ನೌಕರರ ಆತ್ಮಹತ್ಯೆ ಪ್ರಕರಣ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರ್ವೇ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಗರದಲ್ಲಿ ಸರ್ವೇ ಅಧಿಕಾರಿ ಶಿವಕುಮಾರ್(45) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಡಿಗೆರೆಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಗುಬ್ಬಿ ಮೂಲದ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡಿಗೆರೆಯಲ್ಲಿ ಸರ್ವೆ ಅಧಿಕಾರಿಯಾಗಿ ಮೃತ ಶಿವಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕರಾಗಿದ್ದರು. ಸರ್ವೆ ಅಧಿಕಾರಿ ಶಿವಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. https://kannadanewsnow.com/kannada/namma-metro-fare-hike-reduced-to-70-per-cent-revised-fares-to-come-into-effect-from-tomorrow/ https://kannadanewsnow.com/kannada/new-income-tax-bill-introduced-in-lok-sabha/
ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ನಮ್ಮ ಮೆಟ್ರೋ ಪ್ರಯಾಣದ ದರದಲ್ಲಿ ಶೇ.100ರಷ್ಟು ಹೆಚ್ಚಳವಾಗಿದ್ದನ್ನು ಕಡಿಮೆ ಮಾಡಲು ಬಿ ಎ ಆರ್ ಸಿ ಎಲ್ ನಿರ್ಧರಿಸಿದೆ. ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ನಾಳೆಯಿಂದಲೇ ಪರಿಷ್ಕೃತ ಪ್ರಯಾಣದ ಇಳಿಕೆ ದರಗಳು ಜಾರಿಗೊಳ್ಳಲಿದ್ದಾವೆ. ಇಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮೆಟ್ರೋ ದರದ ಗರಿಷ್ಠ ಹೆಚ್ಚಳವನ್ನು ಶೇಕಡಾ 70 ಕ್ಕೆ ನಿಗದಿಪಡಿಸಲಾಗಿದೆ. ಈ ಬದಲಾವಣೆಗಳು ಫೆಬ್ರವರಿ 14ರ ನಾಳೆಯಿಂದಲೇ ಜಾರಿಗೆ ಬರಲಿವೆ ಎಂದು ಘೋಷಿಸಿದರು. ಇತ್ತೀಚೆಗೆ ಮೆಟ್ರೋ ಪ್ರಯಾಣ ದರ ಏರಿಕೆ ಮಿತಿಮೀರಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿದ್ದರು. ಮೆಟ್ರೋ ರೈಲು ದರದಲ್ಲಿನ ಅಸಂಗತತೆಗಳನ್ನು ಸರಿಪಡಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ ನಿರ್ದೇಶನ ನೀಡಿದ್ದೇನೆ ಎಂದು ಅವರು ಎಕ್ಸ್ ನಲ್ಲಿ ಹೇಳಿದರು. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ಬೆಂಗಳೂರು ಮೆಟ್ರೋ ಪ್ರಯಾಣ ದರ ಪರಿಷ್ಕರಣೆಯನ್ನು ಜಾರಿಗೆ…
ಬೆಂಗಳೂರು: ಶೆ.45ರಿಂದ 50ರಷ್ಟು ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಿರುವ ಕಡೆ ಇಳಿಕೆ ಮಾಡಲಾಗುತ್ತದೆ. ನಮ್ಮ ಮೆಟ್ರೋ ಪ್ರಯಾಣದ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡುವುದಾಗಿ BMRCL ಎಂ.ಡಿ ಮಹೇಶ್ವರ ರಾವ್ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಸಂಬಂಧ ಕಳೆದ ಮೂರು ದಿನಗಳ ಹಿಂದೆ ಬೋರ್ಡ್ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ದರ ಏರಿಕೆಯ ನಿರ್ಧಾರವನ್ನು ಮಾಡಲಾಗಿತ್ತು. ಆದರೇ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ದರ ಇಳಿಕೆ ಮಾಡಲು ಎಲ್ಲಿ ಸಾಧ್ಯವಿದೆಯೋ ಅಲ್ಲಿ ಮಾಡುತ್ತೇವೆ ಎಂದರು. ಮೆಟ್ರೋ ಪ್ರಯಾಣದ ದರ ಏರಿಕೆ ನಂತ್ರ ಮಾಧ್ಯಮಗಳು, ಜಾಲತಾಣಗಳಲ್ಲಿ, ಪತ್ರಿಕೆಗಳಲ್ಲಿ ಜನಾಭಿಪ್ರಾಯ ವ್ಯಕ್ತವಾಗಿದೆ. ಈ ಜನಾಭಿಪ್ರಾಯದ ಮೇಲೆ ಮೆಟ್ರೋ ದರ ಇಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದರು. ಮೆಟ್ರೋದಲ್ಲಿ ಸಾಕಷ್ಟು ಹೂಡಿಕೆ ಮಾಡಲಾಗಿದೆ. ನಮ್ಮ ಮೆಟ್ರೋ ಸಿಬ್ಬಂದಿಗಳಿಗೆ ವೇತನ ನೀಡಬೇಕಾಗಿದೆ. ಮೆಟ್ರೋ ದರದಲ್ಲಿ ಶೇ.45 ರಿಂದ 50ರಷ್ಟು ಹೆಚ್ಚಳವಾದ ಕಡೆಯಲ್ಲಿ ಇಳಿಕೆ ಮಾಡಲಾಗುತ್ತದೆ. ನಮ್ಮ…
ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಈ ಸುಗ್ರೀವಾಜ್ಞೆಯಲ್ಲಿ ಏನೆಲ್ಲಾ ಮುಖ್ಯಾಂಶಗಳಿದ್ದಾವೆ ಅಂತ ಮುಂದೆ ಓದಿ. ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:- 1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ. 2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ನೀಡುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲಗಾರರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ಕ್ರಮಗಳಿಂದ ಆಗುವ ಕಿರುಕುಳಗಳನ್ನು ನಿಯಂತ್ರಿಸಲು ಉದ್ದೇಶಿಸಿದೆ. 3. ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳಗಳನ್ನು ತಪ್ಪಿಸಲು ಸಹಾಯಕವಾಗಿರುತ್ತದೆ. 4. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶಿಸಲಾಗಿದೆ. 5. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿದರದ…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಏಕಾಏಕಿ ಶೇ.47ರಷ್ಟು ಹೆಚ್ಚಳ ಮಾಡಿದ್ದರಿಂದ ಪ್ರಯಾಣಿಕರು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದರು. ಈ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರವನ್ನು ಎಲ್ಲಿ ಇಳಿಸಲು ಸಾಧ್ಯವಿದೆಯೋ ಅಲ್ಲಿ ಇಳಿಸುವುದಾಗಿ ಬಿ ಎಂ ಆರ್ ಸಿ ಎಲ್ ಎಂಡಿ ಮಹೇಶ್ವರ ರಾವ್ ಅವರು ತಿಳಿಸಿದ್ದಾರೆ. ಈ ಮೂಲಕ ಪ್ರಯಾಣಿಕರ ಒತ್ತಡಕ್ಕೆ ಮಣಿದು ಶೀಘ್ರವೇ ನಮ್ಮ ಮೆಟ್ರೋ ಪ್ರಯಾಣದ ದರವನ್ನು ಇಳಿಕೆ ಮಾಡುವಂತ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ದರ ಏರಿಕೆ ಸಂಬಂಧ ಕಳೆದ ಮೂರು ದಿನಗಳ ಹಿಂದೆ ಬೋರ್ಡ್ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ದರ ಏರಿಕೆಯ ನಿರ್ಧಾರವನ್ನು ಮಾಡಲಾಗಿತ್ತು. ಆದರೇ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ದರ ಇಳಿಕೆ ಮಾಡಲು ಎಲ್ಲಿ ಸಾಧ್ಯವಿದೆಯೋ ಅಲ್ಲಿ ಮಾಡುತ್ತೇವೆ ಎಂದರು. ಮೆಟ್ರೋ ಪ್ರಯಾಣದ ದರ ಏರಿಕೆ ನಂತ್ರ ಮಾಧ್ಯಮಗಳು, ಜಾಲತಾಣಗಳಲ್ಲಿ, ಪತ್ರಿಕೆಗಳಲ್ಲಿ ಜನಾಭಿಪ್ರಾಯ ವ್ಯಕ್ತವಾಗಿದೆ. ಈ ಜನಾಭಿಪ್ರಾಯದ ಮೇಲೆ ಮೆಟ್ರೋ ದರ ಇಳಿಸಲು ಕ್ರಮ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡಿಸಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೊಸ ಆದಾಯ ತೆರಿಗೆ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಹೊಸ ಆದಾಯ ತೆರಿಗೆ ಮಸೂದೆಯು ಆರು ದಶಕಗಳಷ್ಟು ಹಳೆಯದಾದ ಆದಾಯ ತೆರಿಗೆ ಕಾಯ್ದೆಯನ್ನು ಬದಲಾಯಿಸುತ್ತದೆ ಮತ್ತು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿದೆ. ಹೊಸ ಮಸೂದೆಯಲ್ಲಿ ಯಾವುದೇ ಪ್ರಮುಖ ರಚನಾತ್ಮಕ ಬದಲಾವಣೆಗಳಿಲ್ಲದ ಕಾರಣ, ತಜ್ಞರು ಇದು ಮುಖ್ಯವಾಗಿ ಸರಳೀಕರಣ ಪ್ರಕ್ರಿಯೆಯಾಗಿದೆ ಮತ್ತು ಅದರ ಪ್ರಮುಖ ಲಕ್ಷಣಗಳೆಂದರೆ – ಗರಿಗರಿ ಭಾಷೆ, ಹೆಚ್ಚುವರಿ ನಿಬಂಧನೆಗಳು ಮತ್ತು ವಿವರಣೆಗಳನ್ನು ತೆಗೆದುಹಾಕುವುದು ಮತ್ತು ಆದಾಯದ ವಿಸ್ತೃತ ವ್ಯಾಖ್ಯಾನ. ಹೊಸ ಐಟಿ ಮಸೂದೆಯಲ್ಲಿ, ವರ್ಚುವಲ್ ಡಿಜಿಟಲ್ ಸ್ವತ್ತುಗಳನ್ನು ಮೌಲ್ಯಮಾಪಕರ ಬಂಡವಾಳ ಆಸ್ತಿ ಎಂದು ಪರಿಗಣಿಸಬೇಕಾದ ಆಸ್ತಿಯ ವ್ಯಾಖ್ಯಾನದಲ್ಲಿ ಸೇರಿಸಲಾಗಿದೆ. ಮೂಲದಲ್ಲಿ ತೆರಿಗೆ ಕಡಿತ (ಟಿಡಿಎಸ್) ನಿಬಂಧನೆಗಳು, ಊಹೆಯ ತೆರಿಗೆ ದರಗಳು, ಮೌಲ್ಯಮಾಪನ ಸಮಯ ಮಿತಿಗಳಂತಹ ಹಲವಾರು ನಿಬಂಧನೆಗಳನ್ನು ಕೋಷ್ಟಕ ರೂಪದಲ್ಲಿ ಒದಗಿಸಲಾಗಿದೆ.
ಆ ಸಮಸ್ಯೆಯ ಬಗ್ಗೆ ಹೊರಗೆ ಯಾರಿಗೂ ಹೇಳಲೂ ಆಗದ ಹಾಗೆ ಸಿಕ್ಕಿಹಾಕಿಕೊಳ್ಳುತ್ತೇವೆ. ದೇವರನ್ನು ಬಿಟ್ಟು ಬೇರೆ ಯಾರೂ ಇದನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬ ಹಂತಕ್ಕೆ ನಾವು ತಲುಪುತ್ತೇವೆ. ಆ ಹಂತವನ್ನು ತಲುಪಿದ ನಂತರ, ವಾರಾಹಿ ಅಮ್ಮನ ಬಗ್ಗೆ ಯೋಚಿಸಿ ಮತ್ತು ಮೂರು ದಿನಗಳವರೆಗೆ ಪ್ರತಿದಿನ ಈ ಒಂದು ವಿಷಯವನ್ನು ಬರೆಯಿರಿ, ವಾರಾಹಿ ಅಮ್ಮನವರು ನಿಮ್ಮ ಪರಿಹರಿಸಲಾಗದ ಸಮಸ್ಯೆಗಳನ್ನು ಪರಿಹರಿಸುವ ಮಾರ್ಗಗಳನ್ನು ನೀಡುತ್ತಾರೆ. ಅಂತಹ ಆರಾಧನೆಯ ಬಗ್ಗೆ ನಾವು ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನೋಡಲಿದ್ದೇವೆ. ವಾರಾಹಿ ದೇವಿಯನ್ನು ಪೂಜಿಸಿದರೆ ನಮಗೆ ಹಲವಾರು ಲಾಭಗಳು ಸಿಗುತ್ತವೆ. ಜೀವನದಲ್ಲಿ ಶತ್ರುಗಳ ಕಾಟ, ಸಾಲದ ಬಾಧೆಯಿಂದ ನರಳುತ್ತಿರುವವರು ವಾರಾಹಿ ಅಮ್ಮನವರಿಗೆ ಮನಃಪೂರ್ವಕವಾಗಿ ಅರ್ಪಿಸಿದರೆ ಕ್ರಮೇಣ ಕಷ್ಟಗಳೆಲ್ಲ ಮಾಯವಾದಂತೆ ಅನಿಸುತ್ತದೆ. ಅಂತಹ ವಾರಾಹಿ ಅಮ್ಮನವರನ್ನು ಆಲೋಚಿಸಿ ಮಾಡಬಹುದಾದ ಸರಳ ಪರಿಹಾರವನ್ನು ನೋಡೋಣ. ಈ ಪರಿಹಾರವನ್ನು ಯಾವುದೇ ದಿನದಲ್ಲಿ ಮಾಡಬಹುದು. ನೀವು ಯಾವಾಗ ಬೇಕಾದರೂ ಮಾಡಬಹುದು. ನಮಗೆ ಬೇಕಾಗಿರುವುದು ಪೆನ್ನು ಮತ್ತು ಕಾಗದ. ಬೇರೇನೂ ಬೇಕಾಗಿಲ್ಲ. ಪೂಜೆ ಮಾಡುವ ಕೋಣೆಯಲ್ಲಿ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಸಿದ್ದು ನಾವಲ್ಲ. ಅದಕ್ಕಾಗಿಯೇ ಇರುವಂತ ಸಮಿತಿಯಾಗಿದೆ. ಬಿಜೆಪಿಯರು ಸುಖಾ ಸುಮ್ಮನೇ ನಮ್ಮ ಕಡೆಗೆ ಬೆಟ್ಟು ಮಾಡಿ ತೋರಿಸುತ್ತಿದ್ದಾರೆ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಇಂದು ಮೆಟ್ರೋ ಟಿಕೆಟ್ ದರ ಏರಿಕೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡಿದೆ ಎನ್ನುವ ಬಿಜೆಪಿಯವರ ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿಯವರಿಗೆ ರಾಜಕೀಯ ಹೊರತಾಗಿ ಬೇರೇನೂ ಗೊತ್ತಿಲ್ಲ. ಯಾರು ಬೇಕಾದರೂ ಸಂಸತ್ತಿನಲ್ಲಿ ಮಾತನಾಡಲಿ, ಇಲ್ಲಿ ಪ್ರತಿಭಟನೆ ಮಾಡಲಿ, ಗಲಾಟೆ ಮಾಡಲಿ. ಆದರೆ ಮೆಟ್ರೋ ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಶೇ 50:50 ಅನುಪಾತದಲ್ಲಿ ಮಾಡಲಾಗಿರುತ್ತದೆ. ದರ ಏರಿಕೆಗೆ ಒಂದು ಸಮಿತಿ ಮಾಡಲಾಗಿದೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಸಮಿತಿ ಮಾಡಿರುತ್ತಾರೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೂ ಬರುವುದಿಲ್ಲ. ದರ ಏರಿಕೆ ತೀರ್ಮಾನ ಅವರು ಮಾಡುತ್ತಾರೆ” ಎಂದರು. “ಡಬಲ್ ಡೆಕ್ಕರ್ ಸೇರಿದಂತೆ ಬೆಂಗಳೂರಿನ ಮೆಟ್ರೋವನ್ನು ಇನ್ನೂ ಹೆಚ್ಚಿನ ಭಾಗಕ್ಕೆ ವಿಸ್ತರಣೆ ಮಾಡಬೇಕಿದೆ. ಮೆಟ್ರೋ ಜೊತೆಗೆ ಮೇಲ್ಸೆತುವೆ ನಿರ್ಮಾಣಕ್ಕೆ…












