Author: kannadanewsnow09

ನವದೆಹಲಿ: ಟ್ರಾನ್ಸ್ಪರೆನ್ಸಿ ಇಂಟರ್ನ್ಯಾಷನಲ್ ಬಿಡುಗಡೆ ಮಾಡಿದ 2024 ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (ಸಿಪಿಐ) ಪ್ರಕಾರ ಭಾರತವು ವಿಶ್ವದ 100 ಅತ್ಯಂತ ಭ್ರಷ್ಟ ದೇಶಗಳಲ್ಲಿ ಒಂದಾಗಿದೆ. ಈ ವರ್ಷ, ಭಾರತವು 180 ದೇಶಗಳಲ್ಲಿ 96 ನೇ ಸ್ಥಾನದಲ್ಲಿದೆ, 2023 ರ ಶ್ರೇಯಾಂಕದಿಂದ ಮೂರು ಸ್ಥಾನಗಳನ್ನು ಕಳೆದುಕೊಂಡಿದೆ. ಭಾರತವು ತನ್ನ ಸ್ಥಾನವನ್ನು ಇತರ ಎರಡು ರಾಷ್ಟ್ರಗಳಾದ ಗಾಂಬಿಯಾ ಮತ್ತು ಮಾಲ್ಡೀವ್ಸ್ ನೊಂದಿಗೆ ಹಂಚಿಕೊಂಡಿದೆ. ಸಾರ್ವಜನಿಕ ವಲಯದ ಭ್ರಷ್ಟಾಚಾರದ ಜಾಗತಿಕ ಮಾಪಕವಾಗಿ ಕಾರ್ಯನಿರ್ವಹಿಸುವ ಸಿಪಿಐ, 0 (ಹೆಚ್ಚು ಭ್ರಷ್ಟ) ರಿಂದ 100 (ತುಂಬಾ ಸ್ವಚ್ಛ) ವರೆಗಿನ ಸ್ಕೇಲ್ನಲ್ಲಿ ಅಂಕಗಳನ್ನು ನಿಗದಿಪಡಿಸುತ್ತದೆ. 2024 ರಲ್ಲಿ, ಭಾರತವು ಒಟ್ಟಾರೆ 38 ಅಂಕಗಳನ್ನು ಪಡೆಯಿತು, ಇದು 2023 ರಲ್ಲಿ 39 ಮತ್ತು 2022 ರಲ್ಲಿ 40 ರಷ್ಟಿತ್ತು. ಭಾರತದ ನೆರೆಯ ರಾಷ್ಟ್ರಗಳ ಪೈಕಿ ಪಾಕಿಸ್ತಾನ 135, ಶ್ರೀಲಂಕಾ 121, ಬಾಂಗ್ಲಾದೇಶ 149 ಮತ್ತು ಚೀನಾ 76ನೇ ಸ್ಥಾನದಲ್ಲಿವೆ. ಡೆನ್ಮಾರ್ಕ್ (90) ಅತ್ಯಂತ ಕಡಿಮೆ ಭ್ರಷ್ಟ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ,…

Read More

ಬೆಂಗಳೂರು : ಇಲ್ಲಿ ನಡೆಯುತ್ತಿರುವ ಇನ್ವೆಸ್ಟ್‌ ಕರ್ನಾಟಕ 2025- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಆಕರ್ಷಿಸುವಲ್ಲಿ ವಿಜಯಪುರ ಜಿಲ್ಲೆಯು ಯಶಸ್ವಿಯಾಗಿದೆ. ʼನವೀಕರಿಸಬಹುದಾದ ಇಂಧನ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣೆ ವಲಯದಲ್ಲಿನ ಎರಡು ಪ್ರಮುಖ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಕಾರ್ಯಗತಗೊಳ್ಳಲಿವೆ. ಇದರಿಂದ ಈ ಪ್ರದೇಶದಲ್ಲಿ ಆರ್ಥಿಕ ಪ್ರಗತಿಗೆ ಹೊಸ ಮಾರ್ಗಗಳು ತೆರೆದುಕೊಳ್ಳಲಿದ್ದು, ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ವಿಜಯಪುರದಲ್ಲಿ 3000 ಮೆಗಾವಾಟ್‌ ಸಾಮರ್ಥ್ಯದ ಗಾಳಿ ವಿದ್ಯುತ್‌ ಉತ್ಪಾದನೆ ಅಭಿವೃದ್ಧಿಪಡಿಸಲು ಮತ್ತು ಅತ್ಯಾಧುನಿಕ ವಿಂಡ್‌ ಟರ್ಬೈನ್‌ ಬ್ಲೇಡ್‌ ತಯಾರಿಕಾ ಘಟಕ ಸ್ಥಾಪಿಸಲು ಸುಜ್ಲಾನ್‌ ಕಂಪನಿಯು ರಾಜ್ಯ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡಿದೆ. ಈ ಉಪಕ್ರಮವು, ಗಾಳಿ ವಿದ್ಯುತ್‌ ಉತ್ಪಾದನೆಯ ಜಾಗತಿಕ ಕೇಂದ್ರವಾಗಿ ಭಾರತವನ್ನು ಅಭಿವೃದ್ಧಿಪಡಿಸಲು, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ಮತ್ತು ಸುಸ್ಥಿರತೆ ಸಾಧಿಸಲು ನೆರವಾಗಲಿದೆ. ವಿಜಯಪುರ ಅಥವಾ ಕಲಬುರಗಿಯಲ್ಲಿ ಪ್ರತಿ ದಿನ 800 ಟನ್‌ ಸಾಮರ್ಥ್ಯದ…

Read More

ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜೆಜೆಎಂ ಯೋಜನೆಯನ್ನು ತ್ವರಿತ ಗತಿಯಲ್ಲಿ ಪೂರೈಸಬೇಕು. ಇಲ್ಲಿಯವರೆಗೆ ಶೇ.60 ರಿಂದ 70 ಭಾಗ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ಸೇರಿಂದತೆ ಇತರೆ ವಿಷಯಗಳನ್ನು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಸರಿಪಡಿಸಿಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಈ ಕುರಿತು ನಾನು ಸರ್ಕಾರದ ಕಾರ್ಯದರ್ಶಿಯವರೊಂದಿಗೆ ಮಾತನಾಡುತ್ತೇನೆ. ಮಾರ್ಚ್ ಅಂತ್ಯದೊಳಗೆ ಶೇ.95 ರಷ್ಟು ಕೆಲಸ ಆಗಬೇಕು ಎಂದು ಸೂಚಿಸಿದರು. ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯಪಾಲಕ ಅಭಿಯಂತರ ರೂಪ್ಲಾನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಜೆಜೆಎಂ ಯೋಜನೆಯಡಿ ಶೇ.…

Read More

ಮೈಸೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆಯ ನಂತ್ರ, ಹುಣಸೂರು ನಗರದಲ್ಲಿರುವಂತ ಪ್ರತಿಷ್ಠಿತ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಜೆಟ್ ವಿಶ್ಲೇಷಣೆ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಕಳೆದ ಸೋಮವಾರದಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿರುವಂತ ಸಂತ ಜೋಸೆಫರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಜೆಟ್ ವಿಶ್ಲೇಷಣೆ ಕಾರ್ಯಗಾರವನ್ನ ಕಲಾ ವಿಭಾಗದ ವತಿಯಿಂದ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ಉಪನ್ಯಾಸಕರಾದ ಜಗದೀಶ್ ಬಿ.ಆರ್ ಅವರು ಬಜೆಟ್ ವಿಶ್ಲೇಷಣೆಯ ಕುರಿತು ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಭಗಿನಿ ಆರೋಕ್ಯ ಮೇರಿ ಅವರು ಮಾತನಾಡಿ ಪದವಿ ಕಾಲೇಜುಗಳು ಕೇವಲ ಉಪನ್ಯಾಸಕ್ಕೆ ಮಾತ್ರ ಸೀಮಿತವಾಗಿರದೇ ಪಠ್ಯೇತರ ಚಟುವಟಿಕೆಗಳನ್ನು ಪದವಿ ಮಟ್ಟದಲ್ಲಿ ಆಯೋಜನೆಯನ್ನು ಮಾಡಬೇಕು. ವಿದ್ಯಾರ್ಥಿಗಳಿಗೆ ಪುಸ್ತಕವನ್ನು ಒಳಗೊಂಡಂತೆ ಸಾಮಾನ್ಯ ಜ್ಞಾನದ ವಿಚಾರಗಳನ್ನ ಅವರಲ್ಲಿ ತುಂಬಬೇಕು ಎಂದರು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಲಾ ವಿಭಾಗದ ಮುಖ್ಯಸ್ಥರಾದಂತಹ ಲೋಕೇಶ್.ಬಿ ಮಾತನಾಡಿ ಬಜೆಟ್ ಒಂದು ದೇಶದ ಆರ್ಥಿಕತೆ ಮತ್ತು ಅಭಿವೃದ್ಧಿಗೆ ಸಹಾಯಕವಾಗುವಂತಹ ಸಾಧನವಾಗಿದೆ. ಜನರಿಂದ…

Read More

ಬೆಂಗಳೂರು: ಕುಂಭಮೇಳದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರಿನಿಂದ ಲಕ್ನೋಗೆ ಏಕಮಾರ್ಗ ವಿಶೇಷ ಎಕ್ಸ್ ಪ್ರೆಸ್ ರೈಲು (06221) ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಮೈಸೂರು-ಲಕ್ನೋ ಏಕಮಾರ್ಗ ವಿಶೇಷ ರೈಲು (06221) ಶುಕ್ರವಾರ (ಫೆ.14, 2025) ಬೆಳಿಗ್ಗೆ 7:30 ಗಂಟೆಗೆ ಮೈಸೂರಿನಿಂದ ಹೊರಟು, ಭಾನುವಾರದಂದು ( ಫೆ.16, 2025) ಸಂಜೆ 4:00 ಗಂಟೆಗೆ ಲಕ್ನೋ ನಿಲ್ದಾಣವನ್ನು ತಲುಪಲಿದೆ. ಈ ರೈಲಿನಲ್ಲಿ 1 ಎಸಿ ತ್ರಿ ಟೈರ್, 8 ಸ್ಲೀಪರ್ ಕ್ಲಾಸ್, 10 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ. ಈ ರೈಲು ಮಂಡ್ಯ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಹಾವೇರಿ, ಹುಬ್ಬಳ್ಳಿ, ಧಾರವಾಡ, ಲೋಂಡಾ, ಖಾನಾಪುರ, ಬೆಳಗಾವಿ, ಗೋಕಾಕ್ ರೋಡ್, ಘಟಪ್ರಭಾ, ರಾಯಬಾಗ, ಕುಡಚಿ, ಮೀರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಕಾರ್ಡ್ ಲೈನ್, ಮನ್ಮಾಡ್, ಭೂಸಾವಲ್, ಇಟಾರ್ಸಿ, ಕಟ್ನಿ, ಸತ್ನಾ, ಮಾಣಿಕ್ಪುರ್, ಪ್ರಯಾಗರಾಜ್ ಚಿಯೋಕಿ…

Read More

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿತ್ತು. ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಗೊಂಡತೆ ಆಗಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿತ್ತು. ಈ ಸ್ಪಷ್ಟೀಕರಣದೊಂದಿಗೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ…

Read More

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿತ್ತು. ಈ ಸುಗ್ರೀವಾಜ್ಞೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಸೂಚಿಸಿದ್ದಾರೆ. ಹೀಗಾಗಿ ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿಗೊಂಡತೆ ಆಗಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಅದರಂತೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ರಾಜ್ಯಪಾಲರು ಮಸೂದೆಯನ್ನು ವಾಪಾಸ್ ಕಳುಹಿಸಿದ್ದರು. ಈ ಮಸೂದೆಯ ಅಂಶಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಪಷ್ಟನೆಯ ಜೊತೆಗೆ ರಾಜ್ಯಪಾಲರಿಗೆ ಅಂಕಿತಕ್ಕೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಕಾಯ್ದೆಯನ್ನು ಮರು ರವಾನೆ ಮಾಡಲಾಗಿತ್ತು. ರಾಜ್ಯ ಸರ್ಕಾರದಿಂದ ರಾಜ್ಯಪಾಲರು ವಾಪಾಸ್ಸು ಕಳುಹಿಸಿದ್ದಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಗೆ ಎಲ್ಲಾ ಆಕ್ಷೇಪಣೆಗಳಿಗೆ ಕಾನೂನು ಇಲಾಖೆಯಿಂದ ಸೂಕ್ತ ಸ್ಪಷ್ಟೀಕರಣ ಸಿದ್ಧಪಡಿಸಲಾಗಿತ್ತು. ಈ ಸ್ಪಷ್ಟೀಕರಣದೊಂದಿಗೆ ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡನ್ನು ಸಿಎಂ ಕಚೇರಿಯಿಂದ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಎಎಸ್ ಪ್ರಿಲಿಮ್ಸ್ ಪಾಸ್ ಮಾಡಿದಂತ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮೆಯನ್ಸ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದಿಂದ ಅಧಿಸೂಚನೆ ಹೊರಡಿಸಲಾಗಿದೆ.  ತಮ್ಮ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಕೆ ಎ ಎಸ್ ಮೆಯನ್ಸ್ ಪರೀಕ್ಷೆಗೆ ತರಬೇತಿ ನೀಡಲಾಗುವುದು ಅಂತ ತಿಳಿಸಿದೆ. 2024-25ರ ಕೆ ಎ ಎಸ್ ಪ್ರಿಲಿಮ್ಸ್ ಉತ್ತೀರ್ಣರಾದಂತ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದು ಕೆ ಎ ಎಸ್ ಮೆಯನ್ಸ್ ಪರೀಕ್ಷೆ ತರಬೇತಿಯಾಗಿದೆ. ತರಬೇತಿ ಬಯಸುವ ಅಭ್ಯರ್ಥಿಗಳ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.5 ಲಕ್ಷ ಮೀರಿರಬಾರದು ಅಂತ ಹೇಳಿದೆ. ಕೆಎಎಸ್ ಮೆಯನ್ಸ್ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸ ಬಯಸುವಂತ ಎಸ್ಸಿ, ಎಸ್ಟಿ ಅಭ್ಯರ್ಥಿಗಳು ಕೆಎಎಸ್ ಪ್ರಿಲಿಮ್ಸ್ ಪ್ರವೇಶ ಪತ್ರ, ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದೊಂದಿಗೆ…

Read More

ಬೆಂಗಳೂರು: ನಗರದಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಇನ್ನೆರಡು ದಿನಗಳಲ್ಲೇ ಸ್ಥಳ ಘೋಷಣೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಬೆಂಗಳೂರು ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಮುಂದಿನ ಎರಡು ದಿನಗಳಲ್ಲಿ ಸ್ಥಳವನ್ನು ಘೋಷಿಸುತ್ತೇವೆ. ವಿಮಾನ ನಿಲ್ದಾಣ ಸ್ಥಾಪನೆಗೆ ಹಲವು ಪ್ರದೇಶಗಳ ಪ್ರಸ್ತಾವ ಬಂದಿತ್ತು. ಅವುಗಳನ್ನು ಕೂಲಂಕಶವಾಗಿ ಪರಿಶೀಲಿಸಲಾಗಿದೆ. ಮುಂದಿನ ದಶಕಗಳಲ್ಲಿ ಆಗುವ ಬೆಳವಣಿಗೆ, ಸಂಚಾರ ಮತ್ತು ವಿಮಾನ ಹಾರಾಟ ದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಸ್ಥಳ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1889587305201148192 https://kannadanewsnow.com/kannada/20-lakh-jobs-to-be-created-in-karnataka-siddaramaiah/ https://kannadanewsnow.com/kannada/breaking-muda-scam-lokayukta-sp-submits-final-probe-report-to-igp/

Read More

ಬೆಂಗಳೂರು: 2025-30ನೇ ಸಾಲಿನ ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಲಾಗಿದೆ. ಈ ನೀತಿಯಂತೆ ಕರ್ನಾಟಕದಲ್ಲಿ ಬರೋಬ್ಬರಿ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಆ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಅನ್ನು ಸರ್ಕಾರ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 2025-30 ನೇ ಸಾಲಿನ ನೂತನ ಕೈಗಾರಿಕಾ ನೀತಿಯಡಿ ರಾಜ್ಯಾದ್ಯಂತ ₹7.5 ಲಕ್ಷ ಕೋಟಿ ಹೂಡಿಕೆಯನ್ನು ನಿರೀಕ್ಷೆ ಮಾಡಲಾಗಿದೆ. ಇದರಿಂದ 20 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಬೆಂಗಳೂರು ಮತ್ತು ಬೆಂಗಳೂರಿನಾಚೆಗೂ ಕೈಗಾರಿಕೆಗಳ ಸ್ಥಾಪನೆಗೆ ನೂತನ ನೀತಿ ಒತ್ತು ನೀಡಲಿದೆ. ಸುಸ್ಥಿರ ಅಭಿವೃದ್ಧಿಯ ಮಾದರಿಗಳನ್ನು ಅನುಸರಿಸಲಿದೆ. ಎಲ್ಲ ಕ್ಷೇತ್ರ ಮತ್ತು ವಲಯಗಳಲ್ಲೂ ಹೂಡಿಕೆಗೆ ಉತ್ತೇಜನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1889608258001969237 https://kannadanewsnow.com/kannada/disney-hotstar-back-online-audio-and-video-quality-issues-fixed/ https://kannadanewsnow.com/kannada/breaking-muda-scam-lokayukta-sp-submits-final-probe-report-to-igp/ https://kannadanewsnow.com/kannada/sslc-students-in-the-state-should-note-change-in-timings-of-preparatory-test/

Read More