Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಧರ್ಮಸ್ಥಳದ ಪೊಲೀಸ್ ಠಾಣೆ ಪಿಎಸ್ಐ ಕಿಶೋರ್ ಎಂಬುವರು ತಮ್ಮ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾಗಿ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪತ್ನಿ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ಮಂಗಳೂರಿನ ಉಜಿರೆ ಬಳಿಯ ಧರ್ಮಸ್ಥಳದ ಪೊಲೀಸ್ ಠಾಣೆ ಪಿಎಸ್ಐ ಕಿಶೋರ್ ವಿರುದ್ಧ ಅವರ ಪತ್ನಿ ವರ್ಷಾ ಎಂಬುವರು ವರದಕ್ಷಿಣೆ ಕಿರುಕುಳ, ಹಲ್ಲೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಧರ್ಮಸ್ಥಳ ಪೊಲೀಸ್ ಠಾಣೆ ಪಿಎಸ್ಐ ಕಿಶೋರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ವೇಳೆ ಮಾತನಾಡಿದಂತ ಅವರು ನನ್ನ ಪತಿ, ಅತ್ತೆ, ಮಾವ ಪದೇ ಪದೇ ಹಣಕ್ಕೆ ಬೇಡಿಕೆ ಇಟ್ಟಿದ್ದರು. ನಾನು ಒಬ್ಬಳೇ ಮಗಳೆಂದು ನನ್ನ ಅಪ್ಪ, ಅಮ್ಮ ಸಾಕಷ್ಟು ಹಣ ನೀಡಿದ್ದರು. ಆದರೂ ಮತ್ತೆ ಮತ್ತೆ ನನ್ನನ್ನು ಹಣಕ್ಕೆ ಪತಿ ಕಿಶೋರ್, ಅತ್ತೆ, ಮಾವ ಪೀಡಿಸಿ ಕಿರುಕುಳ ನೀಡಿದ್ದಾಗಿ ಹೇಳಿದ್ದಾರೆ. ಅಪ್ಪ-ಅಮ್ಮ ಮರ್ಯಾದೆಗೆ ಹೆದರಿ ಒಂದು…
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡಿರುವುದು ಅಧಿಕೃತಗೊಂಡಿತ್ತು. ಆ ಬೆನ್ನಲ್ಲೇ ನಂದಿನಿ ಮೊಸರಿನ ದರವನ್ನು ಪರಿಷ್ಕರಿಸಲಾಗಿದೆ. ಪ್ರತಿ ಲೀಟರ್ ಮೊಸರಿನ ದರವನ್ನು 4 ರೂ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ಹಾಲು ಮಹಾಮಂಡಲ(KMF) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಹಾಲು ಮಹಾಮಂಡಳ (ಕೆ.ಎಂ.ಎಫ್) ಕಳೆದ ಐದು ದಶಕಗಳಿಂದ ರಾಜ್ಯದ ಹಾಲು ಉತ್ಪಾದಕರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರ ಆರ್ಥಿಕ ಸದೃಡತೆಗಾಗಿ ಕೆಲಸ ಮಾಡುತ್ತಿದೆ. ಕೆ.ಎಂ.ಎಫ್ನ ಸದಸ್ಯ ಒಕ್ಕೂಟಗಳು ಹಾಲು ಉತ್ಪಾದಕರಿಂದ ಹಾಲು ಖರೀದಿಸಿ, ಸಂಸ್ಕರಿಸಿ, ನಂದಿನಿ ಬ್ರಾಂಡ್ ಅಡಿಯಲ್ಲಿ ವಿವಿಧ ಬಗೆಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಒದಗಿಸುತ್ತಿದೆ ಎಂದಿದೆ. ಪ್ರಸ್ತುತ, ರಾಜ್ಯದ 26.84 ಲಕ್ಷ ಹೈನುಗಾರ ರೈತರ ಪೈಕಿ ಸರಾಸರಿ 8.90 ಲಕ್ಷ ರೈತರು – ಪ್ರತಿ ದಿನ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಸುತ್ತಿದ್ದಾರೆ. ದೇಶದ ಎರಡನೇ ಅತಿದೊಡ್ಡ ಸಹಕಾರ…
ಬೆಂಗಳೂರು: ರಾಜ್ಯದ ಜನರಿಗೆ ನಂದಿನಿ ಹಾಲಿನ ದರದ ಏರಿಕೆಯ ನಂತ್ರ, ಸರ್ಕಾರ ಕರೆಂಟ್ ಶಾಕ್ ನೀಡಿದೆ. ಪ್ರತಿ ಯೂನಿಟ್ ವಿದ್ಯುತ್ ದರವನ್ನು 36 ಪೈಸೆ ಹೆಚ್ಚಿಸಿ ಕೆಇಆರ್ ಸಿ ಆದೇಶಿಸಿದೆ. ಇಂದು ಇಂಧನ ಸಚಿವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ಸಂಬಂಧ ಮಹತ್ವದ ಸಭೆ ನಡೆಯಿತು. ಮೂರು ವರ್ಷಗಳ ಬಳಿಕ ವಿದ್ಯುತ್ ದರ ಏರಿಕೆ ಮಾಡುವಂತ ಸರ್ಕಾರಕ್ಕೆ ಎಸ್ಕಾಂಗಳು ಸಲ್ಲಿಸಿದ್ದಂತ ಪ್ರಸ್ತಾವನೆ ಕುರಿತು ಚರ್ಚಿಸಲಾಯಿತು. ಇಂದಿನ ಸಭೆಯಲ್ಲಿ ಕರ್ನಾಟಕದಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರವನ್ನು 36 ಪೈಸೆ ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ವಿದ್ಯುತ್ ದರವನ್ನು 36 ಪೈಸೆ ಹೆಚ್ಚಳ ಮಾಡಿ ಕೆ ಇ ಆರ್ ಸಿ ಆದೇಶಿಸಿದೆ. ಈ ಮೂಲಕ ರಾಜ್ಯದ ಜನತೆಗೆ ನಂದಿನಿ ಹಾಲಿನ ದರದ ಬೆನ್ನಲ್ಲೇ ವಿದ್ಯುತ್ ದರ ಏರಿಕೆಯ ಶಾಕ್ ನೀಡಲಾಗಿದೆ. https://kannadanewsnow.com/kannada/good-news-farmers-milk-arrears-to-be-released-soon-minister-k-n-rajanna/ https://kannadanewsnow.com/kannada/mains-exam-for-recruitment-of-384-kas-posts-to-be-held-on-april-2-kpsc/
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಬೆನ್ನಲ್ಲೇ ಮತ್ತೊಂದು ಶಾಕ್ ಎನ್ನುವಂತೆ ವಿದ್ಯುತ್ ದರ ಏರಿಕೆಯ ಶಾಕ್ ಅನ್ನು ನೀಡಲಾಗಿದೆ. ಈ ಸಂಬಂಧ ಇಂದು ಕೆಇಆರ್ ಸಿ ಮಾಹಿತಿ ನೀಡಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಂತ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿರುವುದಾಗಿ ತಿಳಿಸಿದೆ. ಈ ಮೂಲಕ ಹಾಲಿನ ದರ ಏರಿಕೆ ಬೆನ್ನಲ್ಲೇ ವಿದ್ಯುತ್ ದರೆ ಏರಿಕೆ ಶಾಕ್ ನೀಡಲಾಗಿದೆ. ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ರಾಜ್ಯದಲ್ಲಿ ಹೈನೋದ್ಯಮಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಪ್ರತಿ ಲೀಟರ್/ಕೆಜಿಗೆ ರೂ.4/- ರಂತೆ ಹೆಚ್ಚಿಸಲು ಸಮ್ಮತಿಸಲಾಯಿತು. ದರ ಪರಿಷ್ಕರಣೆಯ ಮೊತ್ತವು ರಾಜ್ಯದ ಹಾಲು ಉತ್ಪಾದಕರಿಗೆ ನೇರವಾಗಿ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಈ ಹಿಂದೆ ದಿನಾಂಕ:26.06.2024…
BREAKING NEWS: ಏಪ್ರಿಲ್.2ರಂದು 384 KAS ಹುದ್ದೆಗಳ ನೇಮಕಾತಿಗೆ ‘ಮುಖ್ಯ ಪರೀಕ್ಷೆ’: KPSC ಮಾಹಿತಿ | KAS Main Exam
ಬೆಂಗಳೂರು: ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದಂತ 384 ಕೆಎಎಸ್ ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆಯನ್ನು ಏಪ್ರಿಲ್ 2ರಂದು ನಡೆಸುವುದಾಗಿ ಕೆಪಿಎಸ್ಸಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಲೋಕಸೇವಾ ಆಯೋಗವು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಿಗೆ ಅಧಿಸೂಚನೆಗಳನ್ನು ಕ್ರಮವಾಗಿ ದಿನಾಂಕ: 26-02-2024 ಮತ್ತು. ದಿನಾಂಕ:13-02-2025ರಂದು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದೆ. ದಿನಾಂಕ:13-02-2025ರ ಅಧಿಸೂಚನೆಯಲ್ಲಿ ಮುಖ್ಯ ಪರೀಕ್ಷೆಯನ್ನು ದಿನಾಂಕ:28-03-2025, 29-03-2025, 01-04-2025 ಮತ್ತು 02-04-2025ರಂದು ನಡೆಸಲು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಮುಖ್ಯ ಪರೀಕ್ಷೆಯನ್ನು ಮುಂದೂಡಿ, ಪ್ರಕಟಣೆ ಹೊರಡಿಸಲಾಗಿತ್ತು ಎಂದು ಹೇಳಿದೆ. ಪ್ರಸ್ತುತ ಸದರಿ ಮುಖ್ಯ ಪರೀಕ್ಷೆಯನ್ನು ದಿನಾಂಕ:03-05-2025, 05-05-2025, 07-05-2025 ಮತ್ತು 09-05-2025 ರಂದು ನಡೆಸಲು ಮರುನಿಗದಿಪಡಿಸಲಾಗಿರುತ್ತದೆ. ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಆಯೋಗದ ಅಂತರ್ಜಾಲ http://kpsc.kar.nic.in ನಲ್ಲಿ, ಅಭ್ಯರ್ಥಿಗಳ ಮಾಹಿತಿಗಾಗಿ ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ. https://kannadanewsnow.com/kannada/sensex-surges-318-points-nifty-falls-below-23600/ https://kannadanewsnow.com/kannada/breaking-mp-priyanka-gandhi-visits-sitadevi-love-kush-temple-in-kerala-watch-video/
ನವದೆಹಲಿ: ಗುರುವಾರದ ವಹಿವಾಟಿನ ಆರಂಭವು ಸಕಾರಾತ್ಮಕವಾಗಿ ಕೊನೆಗೊಂಡಿದ್ದು, ಬೆಂಚ್ಮಾರ್ಕ್ ಷೇರು ಮಾರುಕಟ್ಟೆ ಸೂಚ್ಯಂಕಗಳು ಅಲುಗಾಡುವ ಆರಂಭದ ನಂತರ ಬಲವಾದ ಚೇತರಿಕೆಯನ್ನು ದಾಖಲಿಸಿವೆ. ಎಸ್ & ಪಿ ಬಿಎಸ್ಇ ಸೆನ್ಸೆಕ್ಸ್ 317.93 ಪಾಯಿಂಟ್ಗಳ ಏರಿಕೆಯಾಗಿ 77,606.43 ಕ್ಕೆ ಮುಕ್ತಾಯಗೊಂಡರೆ, ಎನ್ಎಸ್ಇ ನಿಫ್ಟಿ 50 105.10 ಪಾಯಿಂಟ್ಗಳ ಏರಿಕೆಯಾಗಿ 23,591.95 ಕ್ಕೆ ಮುಕ್ತಾಯವಾಯಿತು. ಪ್ರಗತಿಶೀಲ ಷೇರುಗಳ ನಿರ್ದೇಶಕ ಆದಿತ್ಯ ಗಗ್ಗರ್, “ಮಾಸಿಕ ಮುಕ್ತಾಯ ವಹಿವಾಟಿನ ನಿಧಾನಗತಿಯ ಆರಂಭದ ನಂತರ, ಮಾರುಕಟ್ಟೆಯು ಕೆಳ ಮಟ್ಟದಿಂದ ಬಲವಾದ ಚೇತರಿಕೆ ಕಂಡಿತು, ಆದಾಗ್ಯೂ ಸೂಚ್ಯಂಕವು ನಂತರ ಕಿರಿದಾದ ವ್ಯಾಪ್ತಿಯಲ್ಲಿ ಆಂದೋಲನಗೊಂಡು ಅಂತಿಮವಾಗಿ 105.10 ಪಾಯಿಂಟ್ಗಳ ಲಾಭದೊಂದಿಗೆ 23,591.95 ಕ್ಕೆ ಮುಕ್ತಾಯವಾಯಿತು” ಎಂದು ಹೇಳಿದರು. ಹೆಚ್ಚಿನ ವಿಶಾಲ ಮಾರುಕಟ್ಟೆ ಸೂಚ್ಯಂಕಗಳು ಸಹ ಅಧಿವೇಶನದಲ್ಲಿ ಏರಿತು, ಆದರೆ ಹೂಡಿಕೆದಾರರಿಗೆ ಅತಿದೊಡ್ಡ ಸಕಾರಾತ್ಮಕ ಅಂಶವೆಂದರೆ ಏಪ್ರಿಲ್ 2 ರ ಯುಎಸ್ ಪರಸ್ಪರ ಸುಂಕಗಳ ಗಡುವಿನ ಹೊರತಾಗಿಯೂ ಚಂಚಲತೆಯ ಕುಸಿತ. ಎರಡೂ ಕಡೆಯ ಸುಂಕಗಳ ಪರಿಣಾಮವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಭಾರತ ಮತ್ತು…
ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂ.ಗಳಷ್ಟು ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ. ಏಪ್ರಿಲ್ 1ರಿಂದ ನೂತನ ದರ ಜಾರಿಗೊಳ್ಳಲಿದೆ. ಈ ನೂತನ ದರಪಟ್ಟಿಯಂತೆ ಯಾವ ಪ್ಯಾಕೇಟ್ ಹಾಲು ಎಷ್ಟು ರೂಪಾಯಿ ಹೆಚ್ಚಳವಾಗಲಿದೆ ಅಂತ ಮಾಹಿತಿ ಮುಂದಿದೆ ಓದಿ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳ ಮಾಡುವುದಕ್ಕೆ ಅನುಮೋದಿಸಿದೆ. ಏಪ್ರಿಲ್ 1ರಿಂದ ರಾಜ್ಯದಲ್ಲಿ 4 ರೂಪಾಯಿ ನಂದಿನಿ ಹಾಲಿನ ದರ ಹೆಚ್ಚಳವಾಗಲಿದೆ. ಹಾಗಾದ್ರೇ ಯಾವ ಮಾದರಿಯ ಹಾಲಿಗೆ ಎಷ್ಟು ಬೆಲೆ ಹೆಚ್ಚಳ ಅಂತ ಈ ಕೆಳಗಿದೆ ನೂತನ ಪರಿಷ್ಕೃತ ದರಪಟ್ಟಿ. ಹೀಗಿದೆ ನೂತನ ಪರಿಷ್ಕೃತ ದರಪಟ್ಟಿ ನೀಲಿ ಪ್ಯಾಕೇಟ್ ಹಾಲಿನ ದರ 44 ರೂಪಾಯಿಯಿಂದ 48 ರೂಪಾಯಿಗೆ ಏರಿಕೆ. ಆರೇಂಜ್ ಪ್ಯಾಕೇಟ್ ನಂದಿನಿ ಹಾಲಿನ ದರ ರೂ.54 ರಿಂದ 58 ರೂಗೆ ಏರಿಕೆ. ಸಮೃದ್ಧಿ ಪ್ಯಾಕೇಟ್ ನಂದಿನಿ…
ಬೆಂಗಳೂರು : ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ. ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಸಂಸ್ಥೆಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ ಸಚಿವರು, ಹಲವಾರು ಖಾಸಗಿ ಕಾಲೇಜುಗಳಲ್ಲಿನ ನ್ಯೂನತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅಸಮರ್ಪಕ ಸೌಲಭ್ಯಗಳೊಂದಿಗೆ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜುಗಳಿವೆ. ಒಂದು ಸಂಸ್ಥೆಯು ನೂರಾರು ವಿದ್ಯಾರ್ಥಿಗಳಿಗೆ ಒಂದೇ ಸೂಕ್ಷ್ಮದರ್ಶಕವನ್ನು ನೀಡುತ್ತಿದೆ ಹಾಗೂ ಇನ್ನೊಂದು ಸರಿಯಾದ ಬೆಳಕಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ವರದಿ ನೀಡಿದ್ದಾರೆ. ಭಾರಿ ಶುಲ್ಕ ಪಡೆದರೂ ಕಳಪೆ ಬೋಧನೆ ಖಾಸಗಿ ಸಂಸ್ಥೆಗಳು ಅನುಮೋದನೆ ಪಡೆಯುವಾಗ ದಾರಿತಪ್ಪಿಸುವ ಮಾಹಿತಿ ನೀಡುತ್ತಿವೆ. ಭಾರಿ…
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (Union Public Service Commission -UPSC) ತನ್ನ ವೆಬ್ಸೈಟ್ನಲ್ಲಿ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ( Combined Defence Services -CDS) 1 2025 ಪ್ರವೇಶ ಪತ್ರವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ / ರೋಲ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅದನ್ನು ಡೌನ್ಲೋಡ್ ಮಾಡಬಹುದು. ಸಿಡಿಎಸ್ 1 ಪರೀಕ್ಷೆಯನ್ನು ಏಪ್ರಿಲ್ 13, 2025 ರಂದು ನಡೆಸಲಾಗುವುದು ಮತ್ತು ಪ್ರವೇಶಕ್ಕೆ ಪ್ರವೇಶ ಪತ್ರ ಕಡ್ಡಾಯ ದಾಖಲೆಯಾಗಿದೆ. ಪ್ರವೇಶ ಪತ್ರದಲ್ಲಿ ಅಭ್ಯರ್ಥಿಯ ಹೆಸರು, ರೋಲ್ ಸಂಖ್ಯೆ, ಪರೀಕ್ಷಾ ಕೇಂದ್ರ, ವರದಿ ಮಾಡುವ ಸಮಯ ಮತ್ತು ಪರೀಕ್ಷಾ ಸೂಚನೆಗಳಂತಹ ನಿರ್ಣಾಯಕ ವಿವರಗಳಿವೆ. ಯುಪಿಎಸ್ಸಿ ಅಭ್ಯರ್ಥಿಗಳಿಗೆ ಎಲ್ಲಾ ವಿವರಗಳನ್ನು ಪರಿಶೀಲಿಸಲು ಮತ್ತು ವ್ಯತ್ಯಾಸಗಳನ್ನು ತಕ್ಷಣ ವರದಿ ಮಾಡಲು ಸಲಹೆ ನೀಡುತ್ತದೆ. ಮುದ್ರಿತ ಪ್ರತಿಯನ್ನು ಮಾನ್ಯ ಫೋಟೋ ಐಡಿ ಪ್ರೂಫ್ ನೊಂದಿಗೆ ಪರೀಕ್ಷಾ ಕೊಠಡಿಗೆ ಕೊಂಡೊಯ್ಯಬೇಕು. ಯುಪಿಎಸ್ಸಿ ಸಿಡಿಎಸ್ 1 ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾದ ವಿವರಗಳು…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.4 ಹೆಚ್ಚಳಕ್ಕೆ ಅನುಮೋದನೆ ನೀಡಲಾಯಿತು. ಇದಲ್ಲದೇ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಅನುಮೋದಿಸಿದೆ. ಆ ಎಲ್ಲಾ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಸಿಎಂ ಸಿದ್ಧರಾಮಯ್ಯ ನೇೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಣಯಗಳನ್ನು ಮಾದ್ಯಮಗೋಷ್ಠಿಯಲ್ಲಿ ಸಚಿವ ಹೆಚ್.ಕೆ ಪಾಟೀಲ್ ವಿವರಿಸಿದರು. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 34 ವಿಷಯಗಳ ಬಗ್ಗೆ ಚರ್ಚೆಯಾಗಿದೆ. ನ್ಯಾ.ನಾಗಮೋಹನ್ ದಾಸ್ ಆಯೋಗ ರಚನೆ ಬಗ್ಗೆಯೂ ಚರ್ಚಿಸಲಾಗಿದೆ. ಒಳಮೀಸಲಾತಿ ಬಗ್ಗೆ ಆಯೋಗ ರಚಿಸಿತ್ತು. ಅವರು ಮಧ್ಯಂತರ ವರದಿಯನ್ನ ಕೊಟ್ಟಿದ್ದಾರೆ. ಅದರಲ್ಲಿ 4 ಪ್ರಮುಖ ಶಿಫಾರಸು ಮಾಡಿದ್ದಾರೆ. ಉಪಜಾತಿಗಳ ವೈಜ್ಙಾನಿಕವರದಿಗೆ ಸಮೀಕ್ಷೆ ಮಾಡಬೇಕು. ದತ್ತಾಂಶವನ್ನ ಮಾಡಬೇಕು. 30 ರಿಂದ 40 ದಿನದೊಳಗೆ ಹೊಸದಾಗಿ ಸಮೀಕ್ಷೆ ಮಾಡಬಹುದು ಎಂದಿದ್ದಾರೆ ಎಂದರು. ಹೊಸ ಸಮೀಕ್ಷೆ ನಡೆಸಲು ಪ್ರಶ್ನೆಗಳ ಸಿದ್ಧತೆ, ಸಂಸ್ಥೆ, ಸಂಪನ್ಮೂಲ ಬೇಕಿದೆ. ಹೊಸ ಸಮೀಕ್ಷೆಯಿಂದ…









