Author: kannadanewsnow09

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭಗೊಂಡಿದೆ. ಇದರ ನಡುವೆ ಅರಮನೆಯ ಖಾಸಗಿ ದರ್ಬಾರ್ ಗೆ ಪಟ್ಟದ ಆನೆ, ನಿಶಾನೆ ಆಯ್ಕೆ ಫೈನಲ್ ಮಾಡಲಾಗಿದೆ. ಇಂದು ಮೈಸೂರಿನ ಅರಮನೆಯಲ್ಲಿ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಅವರು ಖಾಸಗಿ ದರ್ಬಾರ್ ಗೆ ಆಯ್ಕೆ ಮಾಡಿದ್ದಾರೆ. ಅರಮನೆಯ ಖಾಸಗಿ ದರ್ಬಾರ್ ಗೆ ಪಟ್ಟದ ಆನೆಯಾಗಿ ಕಂಜನ್, ನಿಶಾನೆ ಆನೆಯಾಗಿ ಭೀಮ ಆಯ್ಕೆ ಮಾಡಲಾಗಿದೆ ಎಂಬುದಾಗಿ ಮೈಸೂರಿನಲ್ಲಿ ಡಿಸಿಎಫ್ ಡಾ ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಖಾಸಗಿ ದರ್ಬಾರ್ ಗೆ ಇಂದು ಮಹಾರಾಣಿ ಪ್ರಮೋದ ದೇವಿ ಒಡೆಯರ್ ರವರು ಆನೆಗಳನ್ನ ವೀಕ್ಷಣೆ ಮಾಡಿದರು. ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈಗಾಗಿ ಅರಮನೆಯಲ್ಲಿನ ಖಾಸಗಿ ದರ್ಬಾರ್ ಗೆ ಎರಡು ಆನೆಗಳನ್ನ ಮಹಾರಾಣಿಯವರು ಆಯ್ಕೆ ಮಾಡಿದ್ದಾರೆ ಎಂದರು. ಕಂಜನ್ ಆನೆ ಪಟ್ಟದ ಆನೆಯಾಗಿದೆ. ಅರಮನೆಯ ಖಾಸಗಿ ದರ್ಬಾರ್ ಗೆ ನಿಶಾನೆ ಆನೆಯಾಗಿ ಭೀಮನನ್ನ ಆಯ್ಕೆ ಮಾಡಿದ್ದಾರೆ. ಶ್ರೀರಂಗಪಟ್ಟಣ ದಸರಾ ಆನೆ, ದಸರಾ ನಿಶಾನೆ ಆನೆ ಆಯ್ಕೆ…

Read More

ಹೊಸಪೇಟೆ: ಒಂದೇ ವಾರದಲ್ಲಿ ತುಂಗಭದ್ರ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎರಡನೇ ಬೆಳೆಗೂ ನೀರು ಸಿಗತ್ತದೆ ಎಂದು ರೈತ ಕುಲಕ್ಕೆ ಭರವಸೆ ನೀಡಿದರು. ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿ, ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಅತ್ಯಂತ ತುರ್ತಾಗಿ ಅಳವಡಿಸಿದ ಎಂಜಿನಿಯರ್ ಮತ್ತು ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಿ ಸನ್ಮಾನಿಸಿ ಮಾತನಾಡಿದರು. ಗೇಟ್ ಮುರಿದಾಗ ನನ್ನ ರೈತರು ಆತಂಕದಲ್ಲಿದ್ದರು. ಜಲ ಸಂಪನ್ಮೂಲ ಸಚಿವರು ಮತ್ತು ನಾನು ಚರ್ಚಿಸಿ ತುರ್ತಿನ ಕ್ರಮಕ್ಕೆ ಮುಂದಾದೆವು. ನಮ್ಮ ಸೂಚನೆಯಂತೆ ಒಂದೇ ವಾರದಲ್ಲಿ ಗೇಟ್ ಅಳವಡಿಸಿ 20 ಟಿಎಂಸಿ ನೀರನ್ನು ಉಳಿಸಿದ ತಜ್ಞ ಕನ್ನಯ್ಯ ನಾಯ್ಡು ಮತ್ತು ಎಂಜಿನಿಯರ್ ಸಿಬ್ಬಂದಿಗೆ ಸರ್ಕಾರ ಮತ್ತು ರೈತರ ಪರವಾಗಿ ಮುಖ್ಯಮಂತ್ರಿಗಳು ಧನ್ಯವಾದ ಅರ್ಪಿಸಿದರು. ಕರ್ನಾಟಕಕ್ಕೆ ಎಡ ಮತ್ತು ಬಲ ದಂಡೆ ಸೇರಿ 9,26,438 ಎಕರೆಗೆ, ಆಂದ್ರಪ್ರದೇಶದ 625097 ಎಕರೆ, ತೆಲಂಗಾಣದ 87,000 ಎಕರೆಗೆ ನೀರಾವರಿ…

Read More

ಬೆಂಗಳೂರು: ನಗರದ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದಂತ ದೆಹಲಿಯ ಶ್ರದ್ಧಾ ವಾಕರ್ ಮಾದರಿಯ ಮಹಾಲಕ್ಷ್ಮೀ ಮರ್ಡರ್ ಮಿಸ್ಟರಿ ಬೆಚ್ಚಿ ಬೀಳಿಸುವಂತಿದೆ. ಕೇವಲ ಸಿಂಗಲ್ ಡೋರ್ ಫ್ರಿಡ್ಜ್ ನಲ್ಲಿ ತುಂಡರಿಸಿದಂತ ದೇಹದ 50 ಪೀಸ್ ಗಳನ್ನು ಜೋಡಿಸಿಟ್ಟಿದ್ದನ್ನು ಕಂಡ ಪೊಲೀಸರು, ಕುಟುಂಬಸ್ಥರೇ ಶಾಕ್ ಆಗಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಮಹಾಲಕ್ಷ್ಮೀ ಎಂಬುವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ, ಆಕೆಯ ದೇಹವನ್ನು ಮೂರು ತುಂಡುಗಳನ್ನಾಗಿ ಮಾಡಿ, ಫ್ರಿಡ್ಜ್ ನಲ್ಲಿ ಅಡಗಿಸಿಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಕುಟುಂಬಸ್ಥರು ಭೇಟಿ ನೀಡಿದಾಗ ಫ್ರಿಡ್ಜ್ ನಲ್ಲಿದ್ದಂತ 50 ಪೀಸ್ ಪೀಸ್ ಮೃತ ದೇಹವನ್ನು ಕಂಡು ಶಾಕ್ ಆಗಿದ್ದಾರೆ. ಸಿಂಗಲ್ ಡೋರ್ ಫ್ರಿಡ್ಜ್ ನಲ್ಲಿ 50 ಪೀಸ್ ಹಡಗಿಸಿಟ್ಟಿದ್ದಂತ ಹಂತಕರು ಮಹಾಲಕ್ಷ್ಮಿ ಕೊಲೆ ಮಾಡಿರುವಂತ ಹಂತಕರು, ದೇಹವನ್ನು ಮೂರು ಭಾಗವಾಗಿ ಕತ್ತರಿಸಿ, 50 ಪೀಸ್ ಪೀಸ್ ಮಾಡಿ, ಸಿಂಗಲ್ ಡೋರ್ ಫ್ರಿಡ್ಜ್ ನಲ್ಲಿ…

Read More

ನವದೆಹಲಿ: ಎಐಸಿಸಿಯಿಂದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಪ್ರಸ್ತುತ ಭಾರತೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಮತ್ತು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಉದಯ್ ಭಾನು ಚಿಬ್ ಅವರನ್ನು ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದಿದ್ದಾರೆ. ಇನ್ನೂ ನಿರ್ಗಮಿತ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರ ಕೊಡುಗೆಗಳನ್ನು ಪಕ್ಷ ಶ್ಲಾಘಿಸುತ್ತದೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/pil-in-supreme-court-seeks-sit-probe-into-tirupati-laddu-row/ https://kannadanewsnow.com/kannada/iran-coal-mine-blast-kills-30-says-state-media/

Read More

ನವದೆಹಲಿ: ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ ( Special Investigation Team -SIT) ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (Public Interest Litigation -PIL) ಸಲ್ಲಿಸಲಾಗಿದೆ. ತಿರುಮಲ ತಿರುಪತಿ ದೇವಸ್ಥಾನಂ (Tirumala Tirupati Devasthanams – TTD) ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿ ತಯಾರಿಸಿದ “ಲಡ್ಡು ಪ್ರಸಾದ” ನೀಡುವ ಮೂಲಕ ಹಿಂದೂ ಧರ್ಮವನ್ನು ಅಪಹಾಸ್ಯ ಮಾಡಿದೆ ಮತ್ತು ಹಿಂದೂಗಳ ಭಾವನೆಗಳನ್ನು ಕೆರಳಿಸಿದೆ ಎಂದು ರೈತ ಮತ್ತು ಹಿಂದೂ ಸೇನೆಯ ಅಧ್ಯಕ್ಷ ಸುರ್ಜಿತ್ ಸಿಂಗ್ ಯಾದವ್ ಅರ್ಜಿ ಸಲ್ಲಿಸಿದ್ದಾರೆ. ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ “ಲಡ್ಡು ಪ್ರಸಾದ” ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪವು ಹಿಂದೂ ಸಮುದಾಯದ ಆತ್ಮಸಾಕ್ಷಿಯನ್ನು ಅಲುಗಾಡಿಸಿದೆ ಮತ್ತು ಅದರ ಸದಸ್ಯರ ಧಾರ್ಮಿಕ ಭಾವನೆಗಳು ಮತ್ತು ಭಾವನೆಗಳನ್ನು ಕೆರಳಿಸಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಟಿಟಿಡಿ…

Read More

ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಅವ್ಯವಹಾರದ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ಅಥವಾ ಸ್ವತಂತ್ರ ತನಿಖಾ ಸಂಸ್ಥೆಯಿಂದ ನಡೆಸಬೇಕೆಂದು ಆಗ್ರಹಿಸಿದರು. ಮುಖ್ಯಮಂತ್ರಿಗಳು ಕೂಡಲೇ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು ಎಂದು ತಿಳಿಸಿದರು. ಇದೇ 24ರಂದು ಇದರ ಕುರಿತು ನಾವು ಲೋಕಾಯುಕ್ತರಿಗೆ ದೂರು ಕೊಡಲಿದ್ದೇವೆ. ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿ ಮಾನ್ಯ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಹಗರಣ ನಡೆದಿದೆ. ರೋಗಿಗಳಿಗೆ ಆರೋಗ್ಯ ಸೇವೆಗೆ ರಾಜ್ಯದ ಹಾವೇರಿ, ಗುಲ್ಬರ್ಗ, ಕೊಪ್ಪಳ, ಯಾದಗಿರಿ, ಬೆಂಗಳೂರು, ಮೈಸೂರು ಮೊದಲಾದ 18 ವೈದ್ಯಕೀಯ ಕಾಲೇಜುಗಳಿಗೆ 114…

Read More

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹಬ್ಬದ ಋತುವಿನಲ್ಲಿ ಹೆಚ್ಚಿದ ದಟ್ಟಣೆಯನ್ನು ಸರಿದೂಗಿಸಲು, ದಕ್ಷಿಣ ರೈಲ್ವೆ ಎರ್ನಾಕುಲಂ ಮತ್ತು ಯಲಹಂಕ ನಿಲ್ದಾಣಗಳ ನಡುವೆ ವಿಶೇಷ ರೈಲು ಸೇವೆಯನ್ನು ನಾಲ್ಕು ಹೆಚ್ಚುವರಿ ಟ್ರಿಪ್ಗಳಿಗೆ ವಿಸ್ತರಿಸಲು ಅಧಿಸೂಚನೆ ಹೊರಡಿಸಿದೆ. ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 06101 ಎರ್ನಾಕುಲಂ-ಯಲಹಂಕ ತ್ರಿವಳಿ ಎಕ್ಸ್ಪ್ರೆಸ್ ವಿಶೇಷ ರೈಲನ್ನು ಈ ಹಿಂದೆ ಸೆಪ್ಟೆಂಬರ್ 18, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು, ಈಗ ಅದನ್ನು ನಾಲ್ಕು ಹೆಚ್ಚುವರಿ ಟ್ರಿಪ್ಗಳೊಂದಿಗೆ ಸೆಪ್ಟೆಂಬರ್ 22 ರಿಂದ 29, 2024 ರವರೆಗೆ ವಿಸ್ತರಿಸಲಾಗಿದೆ. 2. ರೈಲು ಸಂಖ್ಯೆ 06102 ಯಲಹಂಕ-ಎರ್ನಾಕುಲಂ ವಾರಕ್ಕೊಮ್ಮೆ ಸಂಚರಿಸುವ ಎಕ್ಸ್ಪ್ರೆಸ್ ರೈಲನ್ನು ಈ ಹಿಂದೆ ಸೆಪ್ಟೆಂಬರ್ 19, 2024 ರವರೆಗೆ ಓಡಿಸಲು ನಿರ್ಧರಿಸಲಾಗಿತ್ತು, ಈಗ ನಾಲ್ಕು ಹೆಚ್ಚುವರಿ ಟ್ರಿಪ್ಗಳಿಗಾಗಿ ಸೆಪ್ಟೆಂಬರ್ 23 ರಿಂದ 30, 2024 ರವರೆಗೆ ವಿಸ್ತರಿಸಲಾಗಿದೆ. ಈ ರೈಲುಗಳು ಅಸ್ತಿತ್ವದಲ್ಲಿರುವ ಸಮಯ ಮತ್ತು ನಿಲುಗಡೆಗಳ ಪ್ರಕಾರ ಚಲಿಸುವುದನ್ನು ಮುಂದುವರಿಸುತ್ತವೆ ಎಂಬುದಾಗಿ ನೈರುತ್ಯ ರೈಲ್ವೆ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ…

Read More

ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಯ ಕೊಬ್ಬಿನ ಅಂಶ ಪತ್ತೆಯ ಬೆನ್ನಲ್ಲೇ, ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ರಾಜ್ಯದ ತುಪ್ಪ ಉದ್ಪಾದನೆಯ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸುವಂತೆ ಸೂಚಿಸಲಾಗಿದೆ. ನಂದಿನಿ ತುಪ್ಪ ಹೊರತಿಪಡಿಸಿ ಉಳಿದ ತುಪ್ಪಗಳ ಸ್ಯಾಂಪಲ್ ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲು ನಿರ್ಧರಿಸಲಾಗಿದೆ ಎಂದರು. ರಾಜ್ಯದಲ್ಲಿ ತುಪ್ಪದ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಈ ಕರಮ ವಹಿಸಲಾಗಿದೆ. ಪ್ರಸಾದ ಪರಿಶೀಲನೆಗಿಂತ ನೇರವಾಗಿ ತುಪ್ಪದ ಪರಿಶೀಲನೆಗೆ ಆರೋಗ್ಯ ಇಲಾಖೆ ಮುಂದಾಗಿರುವುದಾಗಿ ತಿಳಿಸಿದರು. ಈಗಾಗಲೇ ಆರೋಗ್ಯ ಇಲಾಖೆಯಿಂದ ತುಪ್ಪದ ಸ್ಯಾಂಪಲ್ ಸಂಗ್ರಹವನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಂಗ್ರಹಿಸುವುದಕ್ಕೆ ಪ್ರಾರಂಭಿಸಿದ್ದಾರೆ. ಪ್ರಾಣಿಗಳ ಕೊಬ್ಬಿನ ಅಂಶ ಬೆರೆಕೆಯಾಗಿದ್ಯಾ ಎನ್ನುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು. https://kannadanewsnow.com/kannada/cm-siddaramaiah-dedicates-to-tungabhadra-dam/ https://kannadanewsnow.com/kannada/iran-coal-mine-blast-kills-30-says-state-media/

Read More

ವಿಜಯನಗರ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು. ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಣೆಕಟ್ಟೆಗೆ ಆಗಮಿಸಿದ್ದರು. ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ‌ ಅರ್ಪಿಸುತ್ತೇನೆ ಎಂದು ಆಗಸ್ಟ್ 13 ರಂದು ಹೇಳಿದ್ದರು. ಮುಖ್ಯಮಂತ್ರಿಗಳ ಮಾತು ಮತ್ತು ಆಶಯ ಈಡೇರಿದ ಸಂಭ್ರಮದ ಕ್ಷಣಕ್ಕೆ ಇಡೀ ರಾಜ್ಯ ಇಂದು ಸಾಕ್ಷಿಯಾಯಿತು. ಜಲ ಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರುಗಳಾದ ಬೋಸ್ ರಾಜ್, ಶರಣಪ್ರಕಾಶ್ ಪಾಟೀಲ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. https://kannadanewsnow.com/kannada/eagles-eye-on-administrative-machinery-state-govt-plans-to-issue-gate-passes-to-unnecessary-staff/ https://kannadanewsnow.com/kannada/iran-coal-mine-blast-kills-30-says-state-media/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರದ ಮೇಲೆ ಹದ್ದಿನ ಕಣ್ಣು ನೆಡಲಾಗಿದೆ. ವಿವಿಧ ಇಲಾಖೆಯಲ್ಲಿನ ಅನಗತ್ಯ ಸಿಬ್ಬಂದಿಗೆ ಗೇಟ್ ಪಾಸ್ ಕೊಡೋದಕ್ಕೆ ಪ್ಲ್ಯಾನ್ ನಡೆಯುತ್ತಿದೆ ಎನ್ನಲಾಗಿದೆ. ಅದರಲ್ಲೂ ಸರ್ಕಾರದ ಮಾಹಿತಿ ಸೋರಿಕೆ, ಕಡತ ಸೋರಿಕೆ ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮಕ್ಕೂ ಮುಂದಾಗಿದೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಮುಖ್ಯಮಂತ್ರಿ, ಸಚಿವರ ಕಚೇರಿಯಲ್ಲಿ ಬೇಕಾಬಿಟ್ಟಿ ಸಿಬ್ಬಂದಿ ಇದ್ದರೇ ಅವರನ್ನ ಮನೆಗೆ ಕಳುಹಿಸಲು ನಿರ್ಧಾರ ಕೈಗೊಳ್ಳಲು ಪ್ಲಾನ್ ಮಾಡಿದೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ಸಿಬ್ಬಂದಿಗಳ ವರದಿ ನೀಡಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸರ್ಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಇನ್ನೂ ರಾಜ್ಯ ಸರ್ಕಾರದ ಕಡತಗಳ ಸೋರಿಕೆಗಳಿಗೂ ಬ್ರೇಕ್ ಹಾಕುವ ತಂತ್ರಗಾರಿಕೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿ ಎಂದು ಹೇಳಲಾಗುತ್ತಿದೆ. ಆಡಳಿತ ಯಂತ್ರವನ್ನು ಬಿಗಿಗೊಳಿಸಲು ಅನಗತ್ಯವಾಗಿರೋರಿಗೆ ಗೇಟ್ ಪಾಸ್ ಕೊಡಬೇಕು ಎಂಬಂತ ಕಟ್ಟು ನಿಟ್ಟಿನ ತೀರ್ಮಾನಕ್ಕೂ ಸರ್ಕಾರ ಬಂದಿದೆ ಎನ್ನಲಾಗುತ್ತಿದೆ. ಈ ಕಾರಣದಿಂದಲೇ ಸಿಎಂ, ಸಚಿವರ ಕಚೇರಿಯಲ್ಲಿ ಅನಗತ್ಯವಾಗಿ ಇರುವಂತ…

Read More