Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಕೇವಲ ಚರ್ಚೆಯಾದರೆ ಸಾಲದು, ಆ ಬಗ್ಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಅಧಿವೇಶನದ ತಯಾರಿ ಬಗ್ಗೆ ನಡೆದ ಸಭೆ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರಿಂದ ಆ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತದೆ. ಆದರೆ ಸರ್ಕಾರ ಕೇವಲ ಉತ್ತರ ನೀಡಿದರೆ ಸಾಲದು, ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಸಮಗ್ರವಾಗಿ ಚರ್ಚೆಯಾಗಿ, ಸಲಹೆ ಸೂಚನೆಗಳು ದೊರೆಯಬೇಕು ಎಂದರು. ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳು ದುರಸ್ತಿಯಾಗಿಲ್ಲ. ಶೂ ಸಾಕ್ಸ್ ವಿತರಣೆಯಾಗಿಲ್ಲ. ಈ ಬಗ್ಗೆ ಸ್ಪೀಕರ್ ಗೆ ಪತ್ರ ಬರೆಯಲಿದ್ದೇನೆ. ಈ ಕುರಿತು ಕೂಡ ಸುದೀರ್ಘವಾಗಿ ಚರ್ಚೆಯಾಗಬೇಕಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕರಿಗೆ ವಿಶೇಷ ಸವಲತ್ತು, ಶಿಕ್ಷಣ ಸಂಸ್ಥೆಗಳಲ್ಲಿ ಮಾದಕ ದ್ರವ್ಯಗಳ ಬಳಕೆ, ಬೆಂಗಳೂರಿನಲ್ಲಿ ರಸ್ತೆ ಗುಂಡಿ ಸಮಸ್ಯೆ, ಮಳೆ ಹಾನಿ ಪರಿಹಾರದ ಬಗ್ಗೆ, ಕಾನೂನು ಸುವ್ಯವಸ್ಥೆ ಹಾಳಾಗಿರುವುದರ ಬಗ್ಗೆ ಚರ್ಚಿಸಲಿದ್ದೇವೆ ಎಂದರು. ಜೆಡಿಎಸ್ ಜೊತೆ ಸಮನ್ವಯ ಸಭೆ ನಡೆಸಿ, ಹೋರಾಟದ ಬಗ್ಗೆ…
ಬೆಂಗಳೂರು: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 06 ಕೊನೆಯ ದಿನವಾಗಿದೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸತಕ್ಕದ್ದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98 ಸಾವಿರ ಹಾಗೂ ನಗರ ಪ್ರದೇಶದಲ್ಲಿ ರೂ.1.20…
ಮಂಡ್ಯ : ಮೂರ್ನಾಲ್ಕು ತಿಂಗಳಿಗೊಮ್ಮೆ ನಡೆಯುವ ಕೆಡಿಪಿ ಸಭೆಗೂ 10 ಕ್ಕೂ ಹೆಚ್ಚು ಇಲಾಖಾ ಅಧಿಕಾರಿಗಳು ಯಾವುದೇ ಕಾರಣ ನೀಡದೇ ಗೈರಾಗಿದ್ದಾರೆ. ಅಂತಹ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಿ ಎಂದು ತಾ.ಪಂ ಇಓ ರಾಮಲಿಂಗಯ್ಯ ಅವರಿಗೆ ಶಾಸಕ ಕೆ.ಎಂ.ಉದಯ್ ಸೂಚನೆ ನೀಡಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ನಾಲ್ಕೈದು ಬಾರಿ ಕೆಡಿಪಿ ಸಭೆ ನಡೆಸಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸಾಕಷ್ಟು ಸೂಚನೆ ನೀಡಿದ್ದರು ಸಹ ಅಧಿಕಾರಿಗಳು ತಮ್ಮ ಛಾಳಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಿರಿ. ಈ ಹಿಂದೆ ನಿಮ್ಮಿಷ್ಟದ ರೀತಿ ಕೆಲಸ ಮಾಡ್ತಿದ್ರಿ ಆದರೆ ಅದಕ್ಕೆಲ್ಲ ನಾನು ಆಸ್ಪದ ಕೊಡಲ್ಲ. ಇದೇ ರೀತಿ ನಿಮ್ಮ ನಡತೆ ಮುಂದುವರೆದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಚ್ಚರಿಕೆ ನೀಡಿದರು. ಮದ್ದೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದ್ದು, ಅಂತವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಿ…
ಹಾಸನ: ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಮಾಹಿತಿ ನೀಡುವಂತೆ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನ ಜಿಲ್ಲೆಯ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲ ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮ ಕುರಿತು ಜಾಗೃತಿ, ಸಂವಾದ, ಸಾರ್ವಜನಿಕರೊಂದಿಗೆ ಕಾಯ್ದೆಯ ಸದ್ಬಳಕೆ ಕುರಿತು ಚರ್ಚಿಸುವ ಸಂಬಂಧ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದು ಕಳೆದ ಅಕ್ಟೋಬರ್ 12 ಕ್ಕೆ 20 ವರ್ಷಗಳು ಪೂರ್ಣಗೊಂಡಿದ್ದು, ಅನೇಕ ಬದಲಾವಣೆಗಳು ಕೂಡ ಆಗಿದೆ. ಸಾರ್ವಜನಿಕರು ಹಾಗೂ ಸರ್ಕಾರದ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು. ಆಡಳಿತದಲ್ಲಿ ಪಾರದರ್ಶಕತೆ ತರಲು ಹಾಗೂ ಸಾರ್ವಜನಿಕರಿಗೆ ಮಾಹಿತಿ ಕಲ್ಪಿಸುವುದರ ಜತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಸಹಕಾರಿಯಾಗಿದೆ ಎಂದು ಹೇಳಿದರು. ಕಾರ್ಯಗಾರದ ಮೂಲ ಉದ್ದೇಶ ಬದಲಾವಣೆ, ಆಯೋಗ…
ಚಾಮರಾಜನಗರ : ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಆಯೋಗಕ್ಕೆ ರಾಜ್ಯದ ವಿವಿಧ ಕಡೆಗಳಿಂದ 35,009 ಹಾಗೂ ಚಾಮರಾಜನಗರ ಜಿಲ್ಲೆಯಿಂದ 614 ಮೇಲ್ಮನವಿಗಳು ಸಲ್ಲಿಕೆಯಾಗಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಕೆ. ಬದ್ರುದ್ದೀನ್ ಹಾಗೂ ಡಾ. ಹರೀಶ್ ಕುಮಾರ್ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಮಾಹಿತಿ ಆಯುಕ್ತರು ಚಾಮರಾಜನಗರ ಜಿಲ್ಲೆಯಿಂದ ಸಲ್ಲಿಕೆಯಾಗಿರುವ 614 ಮೇಲ್ಮನವಿಗಳಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯುತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 249, ಕಂದಾಯ ಇಲಾಖೆ 105, ಕೃಷಿ ಇಲಾಖೆ 46, ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ 37 ಇವೆ. ಇವುಗಳ ವಿಲೇವಾರಿಗೆ ಮಾಹಿತಿ ಆಯೋಗ ಕ್ರಮವಹಿಸಿದೆ ಎಂದರು. ನಾವು ಆಯೋಗದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಾಗ 55,400 ಮೇಲ್ಮನವಿಗಳು ನಮ್ಮ ಮುಂದಿದ್ದವು. ಅವುಗಳಲ್ಲಿ 20 ಸಾವಿರ ಮೇಲ್ಮನವಿಗಳನ್ನು ವಿಲೇವಾರಿ ಮಾಡಿದ್ದೇವೆ. ಉಳಿದ 35 ಸಾವಿರ ಮೇಲ್ಮನವಿಗಳ ವಿಲೇವಾರಿ ಮಾಡಲಾಗುತ್ತಿದೆ ಎಂದರು. ಮಾಹಿತಿ ಹಕ್ಕು ಕಾಯ್ದೆ ಕುರಿತು ಅಧಿಕಾರಿಗಳಿಗೆ ಮತ್ತಷ್ಟು ಅರಿವು ಮೂಡಿಸಲು ಆಯೋಗವು ರಾಜ್ಯಾದ್ಯಂತ…
ಚಾಮರಾಜನಗರ : ಉನ್ನತ ಅಧಿಕಾರಸ್ಥರಿಂದ ಹಿಡಿದು ಗ್ರಾಮ ಪಂಚಾಯಿತಿ ವರೆಗಿನ ಎಲ್ಲ ಸಾರ್ವಜನಿಕ ಪ್ರಾಧಿಕಾರಗಳು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಬರಲಿವೆ. ಹೀಗಾಗಿ ಮಾಹಿತಿ ಹಕ್ಕಿನಡಿ ಕೇಳಲಾಗುವ ಯಾವುದೇ ಅರ್ಜಿಯನ್ನು ನಿರ್ಲಕ್ಷ್ಯ ಮಾಡದೆ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಮಾಹಿತಿ ಆಯುಕ್ತರಾದ ಡಾ. ಹರೀಶ್ ಕುಮಾರ್ ಹಾಗೂ ಕೆ. ಬದ್ರುದ್ದೀನ್ ಅವರು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತು ಕಾರ್ಯಾಗಾರ ಹಾಗೂ ಸಂವಾದವನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ತನ್ನದೇ ಆದ ಕರ್ತವ್ಯಗಳನ್ನು ನಿರ್ವಹಿಸಲಿದೆ. ಕಾರ್ಯಕ್ರಮಗಳು, ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಶಾಶ್ವತ ಕಾರ್ಯಾಂಗವೆಂದರೆ ನೌಕರ ಶಾಹಿಗಳು. ಅಧಿಕಾರಿ ನೌಕರರಿಗೆ ಗುರುತರ ಜವಾಬ್ದಾರಿಯಿದೆ. ಜನರು ಮಾಹಿತಿ ಹಕ್ಕಿನಡಿ ಕೇಳುವ ಮಾಹಿತಿಯನ್ನು ಉದಾಸೀನ ಮಾಡದೇ ನೀಡಬೇಕು ಎಂದರು. ಆಡಳಿತದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಉದ್ದೇಶದೊಂದಿಗೆ ಮಾಹಿತಿ ಹಕ್ಕು…
ಬೆಂಗಳೂರು: ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ಪ್ಲಾಸ್ಟಿಕ್ ಸುಡುತ್ತಿದ್ದ ವ್ಯಕ್ತಿಗೆ 10 ಸಾವಿರ ರೂ. ದಂಡ ವಿಧಿಸಲಾಗಿದೆ ಎಂದು ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ರವರು ತಿಳಿಸಿದ್ದಾರೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ನವೆಂಬರ್ 11 ರಂದು ರಾತ್ರಿ ಪರಿಶೀಲನೆ ನಡೆಸುವ ವೇಳೆ, ಥಣಿಸಂದ್ರ ಮುಖ್ಯ ರಸ್ತೆ ಅಶ್ವತ್ಥನಗರದಲ್ಲಿ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಸುಡುತ್ತಿರುವುದನ್ನು ಗಮನಿಸಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಪ್ಲಾಸ್ಟಿಕ್ ಗೆ ಬೆಂಕಿ ಹಚ್ಚಿ ಸುಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದಾಗ, ಅವರು ಪ್ಲಾಸ್ಟಿಕ್/ತ್ಯಾಜ್ಯವನ್ನು ಸುಡುತ್ತಿರುವುದನ್ನು ಒಪ್ಪಿಕೊಂಡು ನೀರು ಹಾಕಿ ನಂದಿಸಿದರು. ಈ ರೀತಿಯಾಗಿ ತ್ಯಾಜ್ಯ ಸುಡುವುದು ಕಾನೂನುಬಾಹಿರವಾಗಿರುವುದರಿಂದ, ಪ್ಲಾಸ್ಟಿಕ್ ಸುಟ್ಟ ವ್ಯಕ್ತಿಗೆ ದಂಡ ವಿಧಿಸಲು ಉತ್ತರ ನಗರ ಪಾಲಿಕೆ ಜಂಟಿ ಆಯುಕ್ತರಿಗೆ ಮುಖ್ಯ ಆಯುಕ್ತರು ನಿರ್ದೇಶನ ನೀಡಿದರು. ಅದನ್ವಯವಾಗಿ, ಥಣಿಸಂದ್ರ ವಾರ್ಡ್‌ನ ಕಿರಿಯ ಆರೋಗ್ಯ ಪರಿವೀಕ್ಷಕ ಹಾಗೂ ಮಾರ್ಷಲ್‌ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ, ಎಳನೀರು ಮಾರಾಟ ಮಾಡುವ…
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಆನ್ ಲೈನ್ ಸೀಟು ಹಂಚಿಕೆಗೆ ಚಾಲನೆ ನೀಡಿದ್ದು ನ.18ರಿಂದ 20ರವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಇದು ಸೇವಾ ನಿರತರಲ್ಲದ ಅರ್ಹರಿಗೆ ಅನ್ವಯವಾಗಲಿದೆ. ನ.21ರಂದು ಸಂಜೆ 4ಗಂಟೆಗೆ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ನ.24ರಂದು ಬೆಳಿಗ್ಗೆ 10ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ನ.25ರಂದು ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಹಾಗೂ ನ.26ರಂದು ಬೆಳಿಗ್ಗೆ 11 ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶುಲ್ಕ ಪಾವತಿ, ಕಾಲೇಜಿಗೆ ವರದಿ ಮಾಡಿಕೊಳ್ಳುವ ವೇಳಾಪಟ್ಟಿಯನ್ನು ನಂತರದ ದಿನಗಳಲ್ಲಿ ಪ್ರಕಟಿಸಲಾಗುತ್ತದೆ. ವೆರಿಫಿಕೇಷನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ನ.17ರವರೆಗೆ ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ. ಮೊದಲ ಸುತ್ತಿನಲ್ಲಿ ದಾಖಲಿಸುವ ಇಚ್ಛೆ/ಆಯ್ಕೆಗಳು ಎರಡನೇ ಸುತ್ತಿನವರೆಗೂ ಅವೇ ಇರುತ್ತವೆ. ಹೀಗಾಗಿ ಎಚ್ಚರವಹಿಸಿ, ದಾಖಲಿಸಲು ಅವರು ಮನವಿ ಮಾಡಿದ್ದಾರೆ.…
ಸ್ವಂತ ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಜೀವನದ ಕನಸು ಆಗಿರುತ್ತದೆ. ಅನೇಕ ಜನರು ಅನೇಕ ರೀತಿಯಲ್ಲಿ ಪ್ರಯತ್ನಗಳನ್ನು ಮಾಡಿದರೂ ಸಹ ಮನೆ ಕಟ್ಟಿಸುವ ಕನಸು ಮಾತ್ರ ಕನಸಾಗಿಯೇ ಇರುತ್ತದೆ. ಕೆಲವರ ಬಳಿ ಎಷ್ಟೇ ಹಣ ಇದ್ದರೂ ಕೂಡಾ ಅವರು ತಮಗೆ ಇಷ್ಟ ಬಂದ ಹಾಗೇ ಒಂದು ಸ್ವಂತ ಮನೆಯನ್ನು ಕಟ್ಟಿಕೊಳ್ಳಲು ಆಗದೇ ಒದ್ದಾಡುತ್ತಾ ಇರುತ್ತಾರೆ. ಈ ಸಮಸ್ಯೆಯ ಪರಿಹಾರಕ್ಕಾಗಿಯೇ ಇಲ್ಲಿ ಇಂದು ದೇವಾಲಯವಿದೇ. ಇಲ್ಲಿ ನೆಲೆಸಿರುವ ದೇವರು ಸ್ವಂತ ಮನೆ ಕಟ್ಟಿಸುವ ಕನಸನ್ನು ನನಸು ಮಾಡುವರು ಎನ್ನುವುದು ಕೆಲವರ ಅಚಲ ನಂಬಿಕೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂದಿನ ಆವೃತ್ತಿಯು ಸದ್ಯಕ್ಕೆ ಸಾಕಷ್ಟು ದೂರದಲ್ಲಿದೆ, ಆದರೆ ಆಟಗಾರರನ್ನು ಉಳಿಸಿಕೊಳ್ಳುವ ಘೋಷಣೆಗಳು ಮತ್ತು ಹರಾಜಿನ ಮೂಲಕ ಅದು ಈಗಾಗಲೇ ಸುದ್ದಿಗಳನ್ನು ಸೃಷ್ಟಿಸುತ್ತಿದೆ. ಎಲ್ಲಾ 10 ಸ್ಪರ್ಧಾತ್ಮಕ ಫ್ರಾಂಚೈಸಿಗಳು ಐಪಿಎಲ್ 2026 ರಲ್ಲಿ ಮುಂದುವರಿಯಲು ನಿರ್ಧರಿಸಿದ ಆಟಗಾರರ ಗುಂಪನ್ನು ಹೆಸರಿಸಿವೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಎಂಎಸ್ ಧೋನಿಯಂತಹ ದೊಡ್ಡ ಹೆಸರುಗಳು ತಮ್ಮ ಅಸ್ತಿತ್ವದಲ್ಲಿರುವ ಫ್ರಾಂಚೈಸಿಗಳೊಂದಿಗೆ ಮುಂದುವರಿಯುತ್ತವೆ, ಆದರೆ ಕೆಲವು ಆಶ್ಚರ್ಯಕರ ನಿರ್ಗಮನಗಳು ಸಹ ನಡೆದಿವೆ. IPL 2026 ಧಾರಣಗಳು: ನೀವು ತಿಳಿದುಕೊಳ್ಳಬೇಕಾದದ್ದು ಪ್ರತಿ ಐಪಿಎಲ್ ಫ್ರಾಂಚೈಸಿಯಿಂದ ಉಳಿಸಿಕೊಂಡಿರುವ ಮತ್ತು ಬಿಡುಗಡೆಯಾದ ಎಲ್ಲಾ ಆಟಗಾರರ ನೋಟ ಇಲ್ಲಿದೆ: 1) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಉಳಿಸಿಕೊಂಡಿರುವ ಆಟಗಾರರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್, ಭುವನೇಶ್ವರ್ ಕುಮಾರ್,…














