Author: kannadanewsnow09

ಬೆಂಗಳೂರು: ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು 12 ವಾರಗಳ ಕಾಲ ಮುಂದೂಡಿಕೆ ಮಾಡಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮತದಾರರಿಗೆ ಉಚಿತ ಗ್ಯಾರಂಟಿಯ ಮೂಲಕ ಆಮಿಷ ಒಡ್ಡಲಾಗಿದೆ. ಇವುಗಳನ್ನು ನಿರ್ಬಂಧಿಸುವಂತೆ ಹೈಕೋರ್ಟ್ ಗೆ ಬ್ರಿಗೆಡಿಯರ್ ರವಿ ಮುನಿಸ್ವಾಮಿ ಹಾಗೂ ಮತ್ತಿತರರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು. ಇದೇ ರೀತಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೂ ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಅದರ ವಿಚಾರಣೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಹೈಕೋರ್ಟ್ 12 ವಾರಗಳ ಕಾಲ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ. ಅಂದಹಾಗೇ ಹೈಕೋರ್ಟ್ ಗೆ ಸಲ್ಲಿಸಲಾಗಿರುವಂತ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಹಾಗೂ ಮತ್ತಿತರರ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯಲ್ಲಿ, ಅಧಿಕಾರ ಹಿಡಿಯಲು ರಾಜಕೀಯ ಪಕ್ಷಗಳಿಂದ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ. ಆಮಿಷ ಒಡ್ಡುವ ಅಭ್ಯರ್ಥಿ, ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿತ್ತು. ಇದಲ್ಲದೇ ಜನರ ತೆರಿಗೆ ಹಣ ಅಧಿಕಾರ ಲಾಲಸೆಗೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.…

Read More

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರನ್ನು ಸುಪ್ರೀಂ ಕೋರ್ಟ್ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಬೆಳವಣಿಗೆಯನ್ನು ತಿಳಿಸುವ ಅಧಿಸೂಚನೆಯನ್ನು ಕೇಂದ್ರ ನ್ಯಾಯಾಂಗ ಇಲಾಖೆ ಡಿಸೆಂಬರ್ 29, 2023 ರಂದು ಹೊರಡಿಸಿತು. ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ, 1987 ರ ಸೆಕ್ಷನ್ 3 ಎ ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನಿಯಮಗಳು, 1995 ರ ನಿಯಮ 10 ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು ನ್ಯಾಯಮೂರ್ತಿ ಗವಾಯಿ ಅವರನ್ನು ಕೇಂದ್ರ ಪ್ರಾಧಿಕಾರವು ಈ ಹುದ್ದೆಗೆ ನಾಮನಿರ್ದೇಶನ ಮಾಡಿದೆ. ಕಾನೂನು ಸೇವೆಗಳ ಪ್ರಾಧಿಕಾರಗಳು ಸಮಾಜದ ದುರ್ಬಲ ಮತ್ತು ಅಂಚಿನಲ್ಲಿರುವ ವರ್ಗಗಳಿಗೆ ಕಾನೂನು ನೆರವು ಮತ್ತು ಸಹಾಯವನ್ನು ಒದಗಿಸುವ ಕಾರ್ಯವನ್ನು ನಿರ್ವಹಿಸುತ್ತವೆ. ಈ ಹಿಂದೆ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಈ ಹುದ್ದೆಯನ್ನು ಅಲಂಕರಿಸಿದ್ದರು. ನ್ಯಾಯಮೂರ್ತಿ ಖನ್ನಾ ಅವರನ್ನು ಇತ್ತೀಚೆಗೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ನಲ್ಸಾ) ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ನೇಮಿಸಲಾಯಿತು. https://kannadanewsnow.com/kannada/they-are-plotting-to-kill-me-vidyadharanathasri/ https://kannadanewsnow.com/kannada/ram-janmabhoomi-activist-shrikant-poojary-arrested-15-cases-registered/

Read More

ಬೆಂಗಳೂರು : ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ದೊಡ್ಡ ಪ್ರಮಾಣದ ಒತ್ತುವರಿಯನ್ನು ಮೊದಲಿಗೆ ತೆರವುಗೊಳಿಸುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕಾಯಿದೆ ರಚಿಸಿದ್ದಾಗ್ಯೂ, ಸುಮಾರು 2 ಲಕ್ಷ ಎಕರೆ ಅರಣ್ಯಭೂಮಿ ಒತ್ತುವರಿ ಆಗಿರುವುದು ಆಘಾತಕಾರಿ ವಿಷಯ ಎಂದರು. ದೊಡ್ಡ ಒತ್ತುವರಿ ತೆರವಿಗೆ ಸೂಚನೆ ಯಾರೇ ಅರಣ್ಯ ಭೂಮಿ ಒತ್ತುವರಿ ಮಾಡಿದರೂ ಅದು ಅಪರಾಧ. ಬೆಂಗಳೂರು ನಗರದ ಸುತ್ತಮುತ್ತ ಮತ್ತು ಪಟ್ಟಣ, ನಗರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಬೆಲೆಬಾಳುವ ಅರಣ್ಯ ಭೂಮಿಯ ಒತ್ತುವರಿ ತೆರವಿಗೆ ಮೊದಲ ಆದ್ಯತೆ ನೀಡುವುದು ಅಗತ್ಯವಿದೆ ಎಂದು ಹೇಳಿದರು. ಈಗಾಗಲೇ ಕೊತ್ತನೂರಿನಲ್ಲಿ 400ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯನ್ನು…

Read More

ಬೆಂಗಳೂರು: ರಾಮಸೇವಕರನ್ನು ಬಂಧಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿಯೂ ಅಂತ್ಯ ಕಾಣುವುದೂ ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಮಮಂದಿರ ಉದ್ಘಾಟನೆಗೆ ಸಿದ್ದವಾಗಿರುವ ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ 30 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ಹುಬ್ಬಳ್ಳಿಯ ಹಿಂದೂ ಕರಸೇವಕರ ಬಂಧನ ಮಾಡಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ. ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಆಗುತ್ತಿರುವಂತ್ತಿರುವುದು ಕಾಂಗ್ರೆಸ್ ನವರಿಗೆ ಸಹಿಸಲು ಆಗುತ್ತಿಲ್ಲ. ಇಡೀ ದೇಶದ ಜನ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದರ ಹಿಂದಿನ ಉದ್ದೇಶ ಏನು ಪ್ರಶ್ನಿಸಿದ್ದಾರೆ. ಇಡೀ ದೇಶವೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ಕೊಡುತ್ತಿರುವ ಸಂದರ್ಭದಲ್ಲಿ ಈ ರೀತಿ ನಡೆಯುತ್ತಿದೆ. ರಾಜ್ಯದಲ್ಲಿ ಕಾನೂನು ಪಾಲನೆ ಮಾಡುವವರೇ ಕಾನೂನು ಉಲ್ಲಂಘನೆ ಮಾಡುತ್ತಿರುವುದಕ್ಕೆ ಇದು ಸ್ಪಷ್ಪ ನಿದರ್ಶನ. ಈಗಾಗಲೇ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿರುವುದಕ್ಕೆ ಕಾಂಗ್ರೆಸ್ ಗೆ ಸಂಸತ್ತಿನಲ್ಲಿ…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರವಾಗಿ ಆಕ್ಷೇಪಿಸಿದರು. ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು. ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ; ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು. ರಾಮನ…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶದ ಕೋಟ್ಯಂತರ ಜನರ ರಾಮಮಂದಿರ ನಿರ್ಮಾಣದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿಜೀ ಅವರು ಈಡೇರಿಸಿದ್ದಾರೆ. ಒಂದೆಡೆ ರಾಮಮಂದಿರ ಉದ್ಘಾಟನೆಗೆ ದಿನ ನಿಗದಿಯಾಗಿದೆ. ಇನ್ನೊಂದು ಕಡೆ ಕಾಂಗ್ರೆಸ್ ಸರಕಾರವು ಸುಮಾರು 31 ವರ್ಷಗಳಷ್ಟು ಹಳೆಯ ಕೇಸುಗಳನ್ನು ತೆಗೆದು ಹಿಂದೂಗಳನ್ನು ಬಂಧಿಸುತ್ತಿದೆ. ಇದು ಹಿಂದೂ ವಿರೋಧಿ ಸರಕಾರ ಎಂದು ಟೀಕಿಸಿದರು. ಶ್ರೀರಾಮಚಂದ್ರನೇ ಕಾಲ್ಪನಿಕ ಎನ್ನುವ ಕಾಂಗ್ರೆಸ್ಸಿಗರು ಅಯೋಧ್ಯೆಯಲ್ಲಿ ಮಹರ್ಷಿ ವಾಲ್ಮೀಕಿ ದೇವಾಲಯದ ಮಾತನಾಡುತ್ತಾರೆ. ಶ್ರೀರಾಮಚಂದ್ರನೇ ಕಾಲ್ಪನಿಕ ಎಂದಾದರೆ ಮಹರ್ಷಿ ವಾಲ್ಮೀಕಿ ಕುರಿತು ಮಾತನಾಡಲು ನಿಮಗೇನು ಹಕ್ಕಿದೆ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಮೋದಿಜೀ ಅವರು ಅಯೋಧ್ಯೆ ವಿಮಾನನಿಲ್ದಾಣವನ್ನು ಮಹರ್ಷಿ ವಾಲ್ಮೀಕಿ ವಿಮಾನನಿಲ್ದಾಣ ಎಂದು ನಾಮಕರಣ ಮಾಡಿದ್ದಾರೆ ಎಂದು ತಿಳಿಸಿದರು. ಶ್ರೀರಾಮಮಂದಿರ ನಿರ್ಮಾಣದ ಕುರಿತು ಸಂತಸ ಸೂಚಿಸಿ ದೇಶದ 125 ಕೋಟಿ…

Read More

ಬೆಂಗಳೂರು: ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ರಾಜ್ಯದ ಎಲ್ಲ ರಾಮ ಕರಸೇವಕರನ್ನು ಬಂಧನ ಮಾಡಿ ನೋಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್ ಕುಮಾರ್ ಅವರು ಸಿದ್ದರಾಮಯ್ಯನವರಿಗೆ ಸವಾಲು ಹಾಕಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇವಲ ಹುಬ್ಬಳ್ಳಿಯ ಕಾರ್ಯಕರ್ತರನ್ನು ಬಂಧಿಸುವುದಲ್ಲ. 92ರ ಕರಸೇವೆಯಲ್ಲಿ ನಾನೂ ಭಾಗವಹಿಸಿದ್ದೆ. ಕರಸೇವಕರನ್ನು ಬಂಧನ ಮಾಡುವ ಮೂಲಕ ಹಿಂದುತ್ವ ವಿಚಾರವನ್ನು ಹತ್ತಿಕ್ಕಬಹುದೆಂಬ ಯೋಚನೆಯನ್ನು ಬಿಟ್ಟು ಬಿಡಿ. ರಾಜ್ಯದ ಎಲ್ಲ ಕರಸೇವಕರ ಪಟ್ಟಿಯನ್ನು ಕೊಡುವೆ. ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ಎಲ್ಲ ರಾಮಕರಸೇವಕರನ್ನು ಬಂಧನ ಮಾಡಿ ನೋಡಿ ಎಂದು ಆಗ್ರಹಿಸಿದರು. ಇನ್ನೂ ಕಾಲ ಮಿಂಚಿಲ್ಲ; ಆಹ್ವಾನ ಕೊಟ್ಟಿಲ್ಲ; ನೋಡೋಣ ಬರೋಣ ಎಂಬ ಮಾತನ್ನು ಬಿಟ್ಟು ಬಿಡಿ. ಯಾವುದೋ ಸ್ನೇಹಿತರ, ಕುಟುಂಬಸ್ಥರ ಮದುವೆಗೆ ಆಹ್ವಾನ ಕೊಟ್ಟಿಲ್ಲ ಎಂದಾಗ ಪಿಳ್ಳೆನೆವವನ್ನು ಕೆಲವರು ಮುಂದಿಡುತ್ತಾರೆ. ರಾಷ್ಟ್ರಮಟ್ಟದ ಈ ಕಾರ್ಯಕ್ರಮಕ್ಕೆ ಯಾವ ಆಹ್ವಾನವೂ…

Read More

ಬೆಂಗಳೂರು: ರಾಜ್ಯದ ರೈತರಿಗೆ ಕಾಂಗ್ರೆಸ್ ಸರ್ಕಾರದಿಂದಲೇ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆಗೂ ಮುನ್ನವೇ 2,000 ಬರ ಪರಿಹಾರವನ್ನು ನೀಡಲಾಗುತ್ತಿದೆ. ಈ ಹಣ ಪಡೆಯೋದಕ್ಕೆ ರೈತರು ಬಹುಮುಖ್ಯವಾಗಿ ಕೆಲಸವೊಂದನ್ನು ಮಾಡಬೇಕಿದೆ. ಒಂದು ವೇಳೆ ಆ ಕೆಲಸ ಮಾಡದೇ ಇದ್ರೆ ನಿಮ್ಮ ಖಾತೆಗೆ ಬರ ಪರಿಹಾರದ ಹಣ ಜಮಾ ಆಗೋದಿಲ್ಲ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಎಂಬುದಾಗಿ ತಿಳಿಸಿದ್ದಾರೆ. ಮತ್ತೊಂದೆಡೆ ಕರ್ನಾಟಕ ಕಾಂಗ್ರೆಸ್ ಪತ್ರ ಬರೆದದ್ದಾಯ್ತು, ಪ್ರಧಾನಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾಯ್ತು, ಕೇಂದ್ರ ಬರ ಅಧ್ಯಯನ ತಂಡ ಬಂದು ಹೋಗಿದ್ದಾಯ್ತು, 18 ಗಂಟೆ ಕೆಲಸ ಮಾಡುವ ಮೋದಿಯವರಿಗೆ ಕರ್ನಾಟಕದ ಬರ ಪರಿಸ್ಥಿತಿಯ ಬಗ್ಗೆ ಗಮನಿಸಿ…

Read More

ಮಧುರೈ ಕಲಾದೇವಿ ಅಮ್ಮನ ದೇವಸ್ಥಾನದ ಮಹತ್ವ ಮುಖ್ಯಾಂಶಗಳು ಏನು ಹೋಗುತ್ತದೆ ಮತ್ತು ಹಿಂತಿರುಗುವುದಿಲ್ಲ. ಇದು ನಮ್ಮ ಜೀವನ ಎಂದು ಹೇಳೋಣ. ಆದರೆ ಸಮಯ ಮತ್ತು ಸಮಯ ಕೂಡ ಹಿಂತಿರುಗುವುದಿಲ್ಲ. ಇಂದು ನಾವು ಆ ಕಾಲದ ಒಡೆಯ, 27 ನಕ್ಷತ್ರಗಳು ಮತ್ತು 12 ರಾಶಿಚಕ್ರದ ಚಿಹ್ನೆಗಳ ಒಡೆಯ ಮತ್ತು ಈ ಸಮಯದ ಒಡೆಯ ಕಾಳಿಕಾದೇವಿ ಅಮ್ಮನ ದೇವಾಲಯದ ಬಗ್ಗೆ ನೋಡಲಿದ್ದೇವೆ. ದೇವಿ ಕಲಾದೇವಿ ವಿಶೇಷ ಯಾವುದೇ ಸಮಯದಲ್ಲಿ ಮನುಷ್ಯರಿಗೆ ಏನಾಗುತ್ತದೆ ಎಂದು ಯಾರೂ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ವಿಜ್ಞಾನಿಗಳು ಸಹ ಸಮಯದ ರಹಸ್ಯವನ್ನು ಊಹಿಸಲು ಸಾಧ್ಯವಿಲ್ಲ ಮತ್ತು ಈ ಭೂಮಿಯ ಮೇಲೆ ಮುಂದೆ ಏನಾಗುತ್ತದೆ ಎಂಬ ಅಭಿಪ್ರಾಯವಿದೆ. ಆದರೆ ನಮ್ಮ ಕಾಲ ಮತ್ತು ನಮ್ಮ ಭವಿಷ್ಯದ ಕಾಲದ ಬಗ್ಗೆ ತಿಳಿದಿರುವ ದೇವತೆಯಿದ್ದರೆ ಅದು ಈ ಶ್ರೀ ಕಲಾದೇವಿ ದೇವಿಯೇ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್…

Read More

ಹುಬ್ಬಳ್ಳಿ: ಪೊಲೀಸರಿಂದ ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ. ಈ ಬಳಿಕ ಅವರ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬರೋಬ್ಬರಿ 15 ಪ್ರಕರಣಗಳನ್ನು ದಾಖಲಿಸಿರೋದಾಗಿ ತಿಳಇದು ಬಂದಿದೆ. ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನು ಬಿಜೆಪಿಯ ವಿವಿಧ ನಾಯಕರು ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ನಡೆಯೆಂಬುದಾಗಿ ಕಿಡಿಕಾರಿದ್ದಾರೆ. ಈ ಬೆನ್ನಲ್ಲೇ ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕೇಸ್ ಗಳನ್ನು ದಾಖಲಿಸಲಾಗಿದೆ. ಹಳೇ ಹುಬ್ಬಳ್ಳಿ ಮತ್ತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 11 ಕೇಸ್ ದಾಖಲಾಗಿದ್ದಾವೆ. ಇನ್ನೂ ಕಸಬಾ ಪೊಲೀಸ್ ಠಾಣೆಯಲ್ಲಿ ಶ್ರೀಕಾಂತ್ ಪೂಜಾರಿ ವಿರುದ್ಧ 3 ಕೇಸ್ ದಾಖಲಾಗಿದ್ರೇ, ಶಹರ ಪೊಲೀಸ್ ಠಾಣೆಯಲ್ಲಿ 1 ಕೇಸ್ ದಾಖಲಾಗಿದೆ. ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಠಾಣೆಯಲ್ಲಿ ದಾಖಲಾಗಿರುವಂತ 15 ಕೇಸ್ ಗಳಲ್ಲಿ 11 ಪ್ರಕರಣಗಳು ಅಕ್ರಮ ಸಾರಾಯಿ ಮಾರಾಟ ಕುರಿತು ದಾಖಲಾಗಿರುವಂತ ಪ್ರಕರಣಗಳಾಗಿದ್ದಾವೆ. https://kannadanewsnow.com/kannada/japan-airlines-plane-on-fire-after-possible-crash-with-coast-guard-aircraft-400-on-board-evacuated/ https://kannadanewsnow.com/kannada/they-are-plotting-to-kill-me-vidyadharanathasri/

Read More